NIA Raid | ದೇಶಾದ್ಯಂತ ಎನ್‌ಐಎ ದಾಳಿಗೆ ಕಾರಣವಾಗಿದ್ದು ಪಿಎಫ್‌ಐ ಸದಸ್ಯರ ಕರಾಟೆ ಕ್ಲಾಸ್! - Vistara News

ಪಿಎಫ್ಐ ನಿಷೇಧ

NIA Raid | ದೇಶಾದ್ಯಂತ ಎನ್‌ಐಎ ದಾಳಿಗೆ ಕಾರಣವಾಗಿದ್ದು ಪಿಎಫ್‌ಐ ಸದಸ್ಯರ ಕರಾಟೆ ಕ್ಲಾಸ್!

ತೆಲಂಗಾಣದಲ್ಲಿ ಪಿಎಫ್‌ಐ ಸದಸ್ಯರಿಗೆ ಭಯೋತ್ಪಾದನಾ ಕೃತ್ಯಗಳನ್ನು ಎಸಗಲು ನೀಡುತ್ತಿದ್ದ ತರಬೇತಿಯ ಬಗ್ಗೆ ತನಿಖೆ ನಡೆಸಿದ ಎನ್‌ಐಎ, ದೇಶಾದ್ಯಂತ ಪಿಎಫ್‌ಐ ಜಾಲದ (NIA Raid) ಮೇಲೆ ದಾಳಿ ನಡೆಸಲು ನಿರ್ಧರಿಸಿತು.

VISTARANEWS.COM


on

Terrorist Arrested
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರಾಟೆ ಕ್ಲಾಸ್ ನೆಪದಲ್ಲಿ ಪಿಎಫ್ಐ ಸದಸ್ಯರಿಗೆ ಭಯೋತ್ಪಾದನೆಯ ಕೃತ್ಯಗಳಿಗೆ ತರಬೇತಿ ನೀಡುತ್ತಿದ್ದ ಆಘಾತಕಾರಿ ಅಂಶ ಬಯಲಾಗಿದೆ. ಇದರ ಸುಳಿವನ್ನು ಆಧರಿಸಿ ತನಿಖೆ ನಡೆಸಿದ ಎನ್‌ಐಎ, ದೇಶಾದ್ಯಂತ ನಾನಾ ಕಡೆಗಳಲ್ಲಿ ಪಿಎಫ್‌ಐ ಜಾಲದ ಮೇಲೆ ದಾಳಿ (NIA Raid) ನಡೆಸಿತ್ತು.

ತೆಲಂಗಾಣದ ಆಟೋನಗರ್‌ನಲ್ಲಿ ಅಬ್ದುಲ್ ಖಾದರ್ ಎಂಬಾತ ವಿವಾದಾತ್ಮಕ ಕರಾಟೆ ಕ್ಲಾಸ್‌ಗಳನ್ನು ನಡೆಸುತ್ತಿದ್ದ. ಇಲ್ಲಿ ಪಿಎಫ್‌ಐ ಸದಸ್ಯರಿಗೆ ವಿಧ್ವಂಸಕ ಚಟುವಟಿಕೆಗಳನ್ನು ನಡೆಸಲು ತರಬೇತಿ ನೀಡಲಾಗುತ್ತಿತ್ತು. ಈ ಬಗ್ಗೆ ಹೈದರಾಬಾದ್ ಎನ್‌ಐಎನಲ್ಲಿ (National Investigation Agency) ಪ್ರಕರಣ ಹಾಗೂ, ಅಬ್ದುಲ್ ಖಾದರ್ ಸೇರಿ 27 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಇವರಲ್ಲಿ ಹಲವರನ್ನು ಎನ್ ಐ ಎ ಅಧಿಕಾರಿಗಳು ಬಂಧಿಸಿದ್ದರು.

ಕರಾಟೆ ಕ್ಲಾಸ್ ನಲ್ಲಿದ್ದವರ ವಿಚಾರಣೆ ವೇಳೆ ಆಘಾತಕಾರಿ ಅಂಶಗಳು ಬಯಲಾಗಿತ್ತು. ದೇಶಾದ್ಯಂತ ಇದೇ ರೀತಿಯ ಸಂಚನ್ನು ಮಾಡುತ್ತಿರುವ ಬಗ್ಗೆ ಆರೋಪಿಗಳು ತಿಳಿಸಿದ್ದರು. ಹೀಗಾಗಿಯೇ ಒಂದು ತಿಂಗಳಿನಿಂದ ಸಂಪೂರ್ಣ ಮಾಹಿತಿಯನ್ನು ಎನ್ಐಎ ಕಲೆ ಹಾಕಿತ್ತು. ಬಳಿಕ ಏಕಕಾಲಕ್ಕೆ ದೇಶದ 11 ರಾಜ್ಯಗಳಲ್ಲಿ 93 ಕಡೆಗಳಲ್ಲಿ ದಾಳಿ ನಡೆಸಲಾಗಿತ್ತು.

ಕೆಜಿ ಹಳ್ಳಿ ಪೊಲೀಸರ ತನಿಖೆ ವೇಳೆ ಸ್ಫೋಟಕ ಮಾಹಿತಿ : ಕೆಜಿ ಹಳ್ಳಿ ಪೊಲೀಸರ ತನಿಖೆ ವೇಳೆ ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಆರೋಪಿಗಳ ಡೈರಿಯಲ್ಲಿ ಹಲವು ಮಹತ್ವದ ವಿವರಗಳು ಲಭಿಸಿವೆ ಎನ್ನಲಾಗಿದೆ. ಇಡೀ ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಆರೋಪಿಗಳು ಫ್ಲ್ಯಾನ್ ನಡೆಸಿರುವುದು ಡೈರಿಯಲ್ಲಿ ಪತ್ತೆಯಾಗಿದೆ. ಡೈರಿಯಲ್ಲಿ Training to be organized ಅಂತ ಬರೆಯಲಾಗಿದೆ. ಆದರೆ ಸ್ಥಳ ಹಾಗೂ ದಿನಾಂಕ ಬರೆದಿಲ್ಲ. ಹೀಗಾಗಿ ಎಲ್ಲಿ ಟ್ರೈನಿಂಗ್ ಫ್ಲ್ಯಾನ್ ಮಾಡಿದ್ರು..? ಯಾರೆಲ್ಲ ಭಾಗವಹಿಸಲಿದ್ದರು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಮುಖ ಆರೋಪಿಗಳಾದ ನಾಸಿರ್ ಪಾಷ ಹಾಗೂ ಮೊಹಮದ್ ಅಶ್ರಪ್ ನ ತೀವ್ರ ವಿಚಾರಣೆ ನಡೆಯುತ್ತಿದೆ. ದಾಳಿಯ ಹಿಂದಿನ ದಿನವೂ ಉಗ್ರ ಚಟುವಟಿಕೆಗಳಿಗೆ ಹಣಕಾಸು ನೆರವು ಆಗಿರುವ ಮಾಹಿತಿ ಲಭಿಸಿದೆ. ಕಳೆದ ಒಂದು ತಿಂಗಳಲ್ಲಿ ಲಕ್ಷಾಂತರ ರೂಪಾಯಿ ವರ್ಗಾವಣೆಯಾಗಿರುವುದು ಗೊತ್ತಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಕರ್ನಾಟಕ

Rudresh Murder : ರುದ್ರೇಶ್‌ ಕೊಲೆ ಆರೋಪಿ ಮಹಮ್ಮದ್‌ ಗೌಸ್‌ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿದ ಎನ್‌ಐಎ

NIA searching: ರುದ್ರೇಶ್‌ ಕೊಲೆ ಸಂಬಂಧ ಬೇಕಾಗಿರುವ ಮೊಹಮ್ಮದ್‌ ಗೌಸ್‌ ಎಂಬಾತನ ಹುಡುಕಾಟಕ್ಕೆ ಇಳಿದಿರುವ ಎನ್‌ಐಎ ಇದೀಗ ಆತನ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಪ್ರಕಟಿಸಿದೆ.

VISTARANEWS.COM


on

NIA Rudresh Murder mohammad ghouse
Koo

ಬೆಂಗಳೂರು: 2016ರ ಅಕ್ಟೋಬರ್‌ 16ರಂದು ನಗರದ ಶಿವಾಜಿ ನಗರದ ಕಾಮರಾಜ ರಸ್ತೆಯಲ್ಲಿ ನಡೆದ ಆರ್‌ಎಸ್‌ಎಸ್‌ ಮುಖಂಡ ರುದ್ರೇಶ್‌ ಹತ್ಯೆ (Rudresh Murder) ಪ್ರಕರಣದಲ್ಲಿ ಆರೋಪಿಯಾಗಿದ್ದು ಇನ್ನೂ ತಲೆ ಮರೆಸಿಕೊಂಡಿರುವ ಆರೋಪಿಯೊಬ್ಬನ ಸುಳಿವು ನೀಡಿದರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ರಾಷ್ಟ್ರೀಯ ಭದ್ರತಾ ದಳ (NIA search) ಘೋಷಿಸಿದೆ.

ಬೆಂಗಳೂರಿನ ಆರ್‌ಟಿ ನಗರ ಎರಡನೇ ಬ್ಲಾಕ್‌ ನಿವಾಸಿಯಾಗಿರುವ ನಯಾಜ್‌ ಅಹಮದ್‌ ಅವರ ಪುತ್ರ 41 ವರ್ಷದ ಮೊಹಮ್ಮದ್‌ ಗೌಸ್‌ ನಯಾಜಿ ಅಲಿಯಾಸ್‌ ಗೌಸ್‌ ಭಾಯ್‌ ರುದ್ರೇಶ್‌ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಆತನ ಸುಳಿವು ನೀಡಿದವರಿಗೆ 5 ಲಕ್ಷ ರೂ. ನೀಡುವುದಾಗಿ ಎನ್‌ಐಎ ಹೇಳಿದೆ. ಈತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾದ ಸಕ್ರಿಯ ಕಾರ್ಯಕರ್ತನೂ ಆಗಿದ್ದ ಎಂದು ಎನ್‌ಐಎ ಹೇಳಿದೆ.

2016ರ ಅ. 16ರಂದು ಬೆಳಗ್ಗೆ 9 ಗಂಟೆಯ ಹೊತ್ತಿಗೆ ರುದ್ರೇಶ್‌ ಅವರು ಶಿವಾಜಿ ನಗರದ ಕಾಮರಾಜ ರಸ್ತೆಯಲ್ಲಿರುವ ಶ್ರೀನಿವಾಸ ಮೆಡಿಕಲ್ಸ್‌ ಎದುರು ಗೆಳೆಯರೊಂದಿಗೆ ನಿಂತಿದ್ದಾಗ ಬೈಕ್‌ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಚೂರಿಯಿಂದ ಇರಿದು ಕೊಲೆ ಮಾಡಿದ್ದರು. ರಾಜ್ಯಾದ್ಯಂತ ದೊಡ್ಡ ಮಟ್ಟದ ಸುದ್ದಿಯಾಗಿ ಆಕ್ರೋಶ ವ್ಯಕ್ತವಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಕೆಲವೇ ದಿನಗಳಲ್ಲಿ ಆಸಿಮ್‌ ಷರೀಫ್‌, ಇರ್ಫಾನ್‌ ಪಾಷಾ, ವಸೀಂ ಅಹಮದ್‌, ಮಹಮ್ಮದ್‌ ಸಾದಿಕ್‌, ಮಹಮ್ಮದ್‌ ಮುಜೀಬುಲ್ಲಾನನ್ನು ಬಂಧಿಸಲಾಗಿತ್ತು. ಅಂದು ಆರೋಪಿಗಳು ಕೊಲೆ ಮಾಡಿ ಕಮರ್ಷಿಯಲ್ ಸ್ಟ್ರೀಟ್ ಮೂಲಕ ಪರಾರಿಯಾಗಿದ್ದರು. ಎರಡು ದಿನಗಳ ನಂತರ ಇಬ್ಬರು ಪ್ರತ್ಯೇಕವಾಗಿ ಬೈಕ್ ಪಾರ್ಕಿಂಗ್ ಮಾಡಿ ಕೊಲೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಹೇಗಿದೆ ಎಂದು ನೋಡಲು ಬಂದಿದ್ದರು. ಇದಾದ ನಂತರ ಮುಜಿಬುಲ್ಲಾ ಎಂದಿನಂತೆ ತನ್ನ ನಿತ್ಯ ಕೆಲಸದಲ್ಲಿ ತೊಡಗಿಕೊಂಡಿದ್ದ.

ಈ ನಡುವೆ, ಪೊಲೀಸರು ಸ್ಥಳೀಯರು ನೀಡಿದ ಮಾಹಿತಿ ಹಾಗೂ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳ ಸ್ಕೆಚ್ ಬಿಡುಗಡೆ ಮಾಡಿದ್ದರು. ಆರೋಪಿ ಶಂಕಿತ ರೇಖಾ ಚಿತ್ರದ ಆಧಾರದ ಮೇಲೆ, ಪೊಲೀಸರು ಮುಜಿಬುಲ್ಲಾ ನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದರು. ನಂತರ ಆತನನ್ನು ಬಂಧಿಸಿದ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದಾಗ ಸತ್ಯವನ್ನು ಬಹಿರಂಗಪಡಿಸಿದ್ದ. ಜತೆಗೆ ಉಳಿದ ಜತೆಗಾರರ ವಿವರವನ್ನೂ ನೀಡಿದ ಹಿನ್ನೆಲೆಯಲ್ಲಿ ಒಟ್ಟಾಗಿ ಐವರನ್ನು ಬಂಧಿಸಲಾಗಿತ್ತು.

ಕೊಲೆಗೆ ಮೂಲ ಕಾರಣ ಏನು?

ರುದ್ರೇಶ್‌ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡನಾಗಿದ್ದದ್ದು ಪರಿಸರದ ಕೆಲವರ ಕಣ್ಣುಕುಕ್ಕಿತ್ತು. ಅದರಲ್ಲೂ ಮುಖ್ಯವಾಗಿ ಆರೋಪಿಗಳಲ್ಲಿ ಒಬ್ಬನಾದ ಮಜರ್‌ ಜತೆಗೆ ರುದ್ರೇಶ್‌ಗೆ ಸಣ್ಣ ಪುಟ್ಟ ಜಗಳಗಳು ಆಗಿದ್ದವು. ಮಜರ್‌ ರುದ್ರೇಶ್‌ನ ಮನೆಯ ಪಕ್ಕ ಮೆಕ್ಯಾನಿಕ್‌ ಶಾಪ್‌ ಇಟ್ಟುಕೊಂಡಿದ್ದ. ಕೆಲವು ವರ್ಷದ ಹಿಂದೆ ರುದ್ರೇಶ್‌ ಮಜರ್‌ ಮೇಲೆ ಹಲ್ಲೆ ನಡೆಸಿದ್ದು, ಗೋಕಳ್ಳ ಸಾಗಣೆ ಮಾಡುವವರನ್ನು ಹಿಡಿದುಕೊಟ್ಟಿದ್ದು ಎಲ್ಲವೂ ಕೊಲೆಗೆ ಕಾರಣವಾಗಿದೆ ಎಂದು ಪೊಲೀಸರು ಕಂಡುಕೊಂಡಿದ್ದರು.

ಈಗ ಕೊಲೆಗಾರರೆಲ್ಲರೂ ಜೈಲಿನಲ್ಲಿದ್ದಾರೆ. ಮೊಹಮ್ಮದ್‌ ಗೌಸ್‌ ಇನ್ನೂ ತಲೆಮರೆಸಿಕೊಂಡಿದ್ದಾನೆ. ಪಿಎಫ್‌ಐ ಜತೆ ಗುರುತಿಸಿಕೊಂಡಿದ್ದ ಆತ ಇನ್ನಷ್ಟು ಅಪಾಯಕಾರಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಸಂಶಯವಿದೆ ಎನ್ನುವ ನೆಲೆಯಲ್ಲಿ ಆತನನ್ನು ಹಿಡಿಯಲು ಎನ್‌ಐಎ ಪ್ರಯತ್ನಗಳನ್ನು ನಡೆಸುತ್ತಿದೆ.

ಇದನ್ನೂ ಓದಿ : PFI In Karnataka: ನಿಷೇಧದ ಬಳಿಕವೂ ಕರ್ನಾಟಕದಲ್ಲಿ ಪಿಎಫ್‌ಐ ಹಾವಳಿ; ಎಸ್‌ಡಿಪಿಐ ಮೂಲಕ ವಿವಿಧ ಚಟುವಟಿಕೆ

Continue Reading

ಕರ್ನಾಟಕ

Karnataka Election : ಪುತ್ತೂರಿನಿಂದ SDPI ಅಭ್ಯರ್ಥಿ ಘೋಷಣೆ; ಪ್ರವೀಣ್‌ ನೆಟ್ಟಾರ್‌ ಕೊಲೆ ಆರೋಪಿ ಶಾಫಿ ಬೆಳ್ಳಾರೆ ಜೈಲಿನಿಂದಲೇ ಸ್ಪರ್ಧೆ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿರುವ ಶಾಫಿ ಬೆಳ್ಳಾರೆ ಅವರನ್ನು ಪುತ್ತೂರು ಕ್ಷೇತ್ರದಿಂದ (Karnataka Election) ಕಣಕ್ಕಿಳಿಸಲು ಎಸ್‌ಡಿಪಿಐ ನಿರ್ಧರಿಸಿದೆ.

VISTARANEWS.COM


on

Shafi bellare
Koo

ಮಂಗಳೂರು: ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ)ವನ್ನು ಕೇಂದ್ರ ಸರ್ಕಾರ ನಿಷೇಧಿಸಿದ ಬಳಿಕ ಅದರ ರಾಜಕೀಯ ಮುಖವಾಗಿರುವ ಎಸ್‌ಡಿಪಿಐಯ ಭವಿಷ್ಯದ ಬಗ್ಗೆ ಚರ್ಚೆ ನಡೆದಿತ್ತು. ಇದೀಗ ಎಸ್‌ಡಿಪಿಐ ವಿಧಾನಸಭಾ ಚುನಾವಣೆಯ(Karnataka Election) ಬಗ್ಗೆ ಸಮಗ್ರ ಚರ್ಚೆ ನಡೆಸಿ ಪುತ್ತೂರಿನಿಂದ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿರುವ, ಪ್ರಸಕ್ತ ಜೈಲಿನಲ್ಲಿರುವ ಶಾಫಿ ಬೆಳ್ಳಾರೆ ಅವರನ್ನು ಕಣಕ್ಕಿಳಿಸುವುದಾಗಿ ಘೋಷಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಅವರು ಕಣಕ್ಕಿಳಿಯಲಿದ್ದಾರೆ ಎಂದು ಪುತ್ತೂರಿನಲ್ಲಿ ನಡೆದ ಎಸ್‌ಡಿಪಿಐ ಕಾರ್ಯಕರ್ತರ ಸಮಾವೇಶದಲ್ಲಿ ಘೋಷಣೆ ಮಾಡಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್‌ ಖಾನ್‌ ಅವರು ಈ ಘೋಷಣೆ ಮಾಡಿದ್ದಾರೆ.

ಜೈಲಿನಿಂದಲೇ ಸ್ಪರ್ಧಿಸಲಿದ್ದಾರೆ ಶಾಫಿ ಬೆಳ್ಳಾರೆ
ನಿಜವೆಂದರೆ ಶಾಫಿ ಬೆಳ್ಳಾರೆ ಅವರು ೨೦೨೨ರ ಜುಲೈ ೨೬ರಂದು ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿದ್ದಾರೆ. ಈ ಕೊಲೆಯಲ್ಲಿರುವ ಶಾಮೀಲಾತಿಯ ಮಾಹಿತಿ ಪಡೆದ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅವರನ್ನು ಬಂಧಿಸಿತ್ತು. ಈಗ ಶಾಫಿ ಜೈಲಿನಲ್ಲಿದ್ದಾರೆ.

ಅವರನ್ನು ಪುತ್ತೂರು ಕ್ಷೇತ್ರದ ಅಭ್ಯರ್ಥಿ ಎಂದು ಘೋಷಣೆ ಮಾಡಿರುವುದರಿಂದ ಅವರೀಗ ಜೈಲಿನಿಂದಲೇ ಕಣಕ್ಕೆ ಇಳಿಯಬೇಕಾಗಿದೆ. ಪ್ರವೀಣ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಶಾಫಿ ಬೆಳ್ಳಾರೆ ಮೇಲೆ ನೇರವಾದ ಆರೋಪಗಳಿವೆ ಎಂದು ಎನ್‌ಐಎ ಹೇಳಿತ್ತು.

ಪಿಎಫ್‌ಐ ಬ್ಯಾನ್‌, ಪ್ರವೀಣ್‌ ನೆಟ್ಟಾರ್‌ ಕೊಲೆ ಮತ್ತು ಬೆಂಗಳೂರಿನ ಕೆಜಿ ಹಳ್ಳಿ, ಡಿಜಿ ಹಳ್ಳಿ ಘಟನೆಗಳಿಗೆ ಸಂಬಂಧಿಸಿ ಎಸ್‌ಡಿಪಿಐನ ಹಲವು ಕಚೇರಿಗಳ ಮೇಲೆ ಪೊಲೀಸ್‌ ಹಾಗೂ ಎನ್‌ಐಎ ದಾಳಿ ನಡೆದಿತ್ತು. ಹಲವು ಕಚೇರಿಗಳನ್ನು ಮುಚ್ಚಲಾಗಿತ್ತು, ದಾಖಲೆಗಳನ್ನು ವಶಕ್ಕೆ ಪಡೆಯಲಾಗಿತ್ತು. ಹಲವಾರು ನಾಯಕರನ್ನ ಬಂಧಿಸಲಾಗಿತ್ತು.

ಇದನ್ನೂ ಓದಿ : SDPI office raid : ಎಸ್‌ಡಿಪಿಐ ಕಚೇರಿ ದಾಳಿಗೆ ಕೇಂದ್ರ ಸರ್ಕಾರದ ನಿರ್ದೇಶನವಿತ್ತೇ?: ಸರ್ಕಾರಕ್ಕೆ ಹೈಕೋರ್ಟ್‌ ಪ್ರಶ್ನೆ

Continue Reading

ಕರ್ನಾಟಕ

PFI Banned | ಪಿಎಫ್‌ಐ ನಿಷೇಧ: ಕೇಂದ್ರ ಸರಕಾರದ ಆದೇಶ ಎತ್ತಿ ಹಿಡಿದ ರಾಜ್ಯ ಹೈಕೋರ್ಟ್‌

ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಆರೋಪದಲ್ಲಿ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಿದ ಕೇಂದ್ರ ಸರಕಾರದ ಕ್ರಮವನ್ನು ರಾಜ್ಯ ಹೈಕೋರ್ಟ್‌ ಎತ್ತಿ ಹಿಡಿದಿದೆ.

VISTARANEWS.COM


on

PFI Members Arrested
Koo

ಬೆಂಗಳೂರು: ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ, ಯುವಜನತೆಗೆ ಉಗ್ರ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿರುವ ಆರೋಪದೊಂದಿಗೆ ಪಾಪ್ಯುಲರ್‌ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿ (PFI Banned) ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ಎತ್ತಿ ಹಿಡಿದಿದೆ.

ಕೇಂದ್ರ ಸರಕಾರದ ಆದೇಶವನ್ನು ಪ್ರಶ್ನಿಸಿ ಪಿಎಫ್‌ಐ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ನಾಸಿರ್‌ ಅಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ವಜಾ ಮಾಡಿದೆ.

ಅರ್ಜಿದಾರರ ವಾದವೇನಾಗಿತ್ತು?
ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ (ಯುಎಪಿಎ) 1967ರ ಸೆಕ್ಷನ್‌ 3, ಉಪ ನಿಯಮ 3ರ ಅಡಿ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಿರುವುದು ಕಾನೂನು ಬಾಹಿರ. ಪಿಎಫ್‌ಐ ಸಂಘಟನೆಯನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿರುವುದು ಸಂವಿಧಾನ ವಿರೋಧಿ ಕ್ರಮ. ಕಾನೂನುಬಾಹಿರ ಸಂಘಟನೆ ಎಂದು ಘೋಷಿಸುವುದಕ್ಕೆ ಮತ್ತು ಆ ನಿಷೇಧ ತಕ್ಷಣದಿಂದಲೇ ಅನ್ವಯಿಸಿರುವುದಕ್ಕೆ ಪ್ರತ್ಯೇಕ ಕಾರಣ ಆದೇಶದಲ್ಲಿ ತಿಳಿಸಿಲ್ಲ ಎಂದು ಅರ್ಜಿದಾರರ ಪರ ವಕೀಲ ಜಯಕುಮಾರ್ ಪಾಟೀಲ್ ವಾದಿಸಿದ್ದರು.

ಪಿಎಫ್‌ಐಗೆ ತನ್ನ ಅಭಿಪ್ರಾಯವನ್ನು ಹೇಳಲು ಅವಕಾಶ ನೀಡದೆ ಏಕಾಏಕಿ ನಿಷೇಧ ಆದೇಶ ಮಾಡಲಾಗಿದೆ. ಹೀಗೆ ಯುಎಪಿಎ ಕಾಯಿದೆಗೆ ವಿರುದ್ಧವಾಗಿ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಬೇಕು ವಕೀಲರು ಕೋರಿದ್ದರು.

ಕೇಂದ್ರ ಸರಕಾರದ ಸಮರ್ಥನೆ ಏನಿತ್ತು?
ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, “ಪಿಎಫ್‌ಐ ಸಂಘಟನೆ ದೇಶ ವಿರೋಧಿ ಕೃತ್ಯಗಳನ್ನು ನಡೆಸುತ್ತಿತ್ತು. ಅದು ಭಯೋತ್ಪಾದಕ ಸಂಘಟನೆಗಳ ಕೈ ಜೋಡಿಸಿ ದೇಶದಲ್ಲಿ ಹಿಂಸಾತ್ಮಕ ಚಟುವಟಿಕೆಗಳನ್ನು ನಡೆಸುತ್ತಿತ್ತು. ಜೊತೆಗೆ ಸಂಘಟನೆಯ ಸದಸ್ಯರು ರಾಷ್ಟ್ರದಲ್ಲಿ ಭೀತಿಯ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ” ಎಂದು ಹೇಳುವ ಮೂಲಕ ಕೇಂದ್ರ ಸರಕಾರ ನಿಷೇಧ ಮಾಡಿದ್ದು ಸರಿಯೇ ಇದೆ ಎಂದು ಹೇಳಿದ್ದರು.

ಇದನ್ನೂ ಓದಿ ವಿಸ್ತಾರ Explainer : ಏನಿದು ಪಿಎಫ್‌ಐ? ಕೇಂದ್ರ ಸರ್ಕಾರ 5 ವರ್ಷಗಳ ಅವಧಿಗೆ ನಿಷೇಧಿಸಿದ್ದೇಕೆ?

Continue Reading

ಕರ್ನಾಟಕ

PFI BAN | ನಿಷೇಧಿಸಿದ್ದು ಪಿಎಫ್‌ಐಯನ್ನು, ನೀವ್ಯಾಕೆ SDPIಗೆ ಸೇರಿದ ಕಚೇರಿ ಜಪ್ತಿ ಮಾಡಿದಿರಿ: ದ.ಕ. ಜಿಲ್ಲಾಡಳಿತಕ್ಕೆ ನೋಟಿಸ್‌

ಸರಕಾರ ಆದೇಶ ಮಾಡದೆ ಇದ್ದರೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಸ್ವತಂತ್ರ ಪಕ್ಷವಾಗಿರುವ ಎಸ್‌ಡಿಪಿಐನ ಕಚೇರಿಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಆಪಾದಿಸಿ ಸಲ್ಲಿಸಿದ ಮನವಿಗೆ ಸಂಬಂಧಿಸಿ ಹೈಕೋರ್ಟ್‌ ಜಿಲ್ಲಾಡಳಿತಕ್ಕೆ ನೋಟಿಸ್‌ ನೀಡಿದೆ.

VISTARANEWS.COM


on

SDPI
Koo

ಬೆಂಗಳೂರು: ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾದ ನಿಷೇಧದ ಬೆನ್ನಲ್ಲೇ ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾಗೆ (ಎಸ್‌ಡಿಪಿಐ) ಸೇರಿದ ಸ್ಥಳಗಳಲ್ಲಿ ದಾಳಿ ನಡೆಸಿ, ಪಕ್ಷಕ್ಕೆ ಸೇರಿದ ಆಸ್ತಿಗಳನ್ನು ಜಪ್ತಿ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ ದಾವೆಗೆ ಸಂಬಂಧಿಸಿ ಹೈಕೋರ್ಟ್‌ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ನೋಟಿಸ್‌ ನೀಡಿದೆ. ವಶಪಡಿಸಿಕೊಂಡ ಕಚೇರಿಗಳನ್ನು ಮರಳಿ ಒಪ್ಪಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ನಿರ್ದೇಶಿಸಲು ಕೋರಿ ಸಲ್ಲಿಸಿರುವ ಅರ್ಜಿ ಇದಾಗಿದೆ.

ಎಸ್‌ಡಿಪಿಐನ ದಕ್ಷಿಣ ಕನ್ನಡ ಪ್ರಧಾನ ಕಾರ್ಯದರ್ಶಿ ಅನ್ವರ್‌ ಸಾದತ್‌ ಅವರು ಈ ಅರ್ಜಿ ಸಲ್ಲಿಸಿದ್ದು, ಅದನ್ನು ವಿಚಾರಣೆಗೆ ಸ್ವೀಕರಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ, ಪೊಲೀಸ್‌ ಆಯುಕ್ತರು ಮತ್ತು ಪೊಲೀಸ್‌ ವರಿಷ್ಠಾಧಿಕಾರಿಗೆ ನೋಟಿಸ್‌ ಜಾರಿ ಮಾಡಿದರು. ವಿಚಾರಣೆಯನ್ನು ಡಿಸೆಂಬರ್‌ 6ಕ್ಕೆ ಮುಂದೂಡಲಾಗಿದೆ.

ಪ್ರಜಾಪ್ರತಿನಿಧಿ ಕಾಯಿದೆ 1951ರ ಅಡಿ ಎಸ್‌ಡಿಪಿಐ ನೋಂದಾಯಿತ ರಾಜಕೀಯ ಪಕ್ಷವಾಗಿದ್ದು, ತುಳಿತಕ್ಕೊಳಗಾದ ಸಮುದಾಯಗಳ ಪರವಾಗಿ ಕೆಲಸ ಮಾಡುತ್ತಿರುವುದರಿಂದ ವಿಭಜನಕಾರಿ ಶಕ್ತಿಗಳ ಕೆಂಗಣ್ಣಿಗೆ ಗುರಿಯಾಗಿದ್ದೇವೆ. ಇದರಿಂದ ಅರ್ಜಿದಾರರ ವಿರುದ್ಧ ಕೆಟ್ಟ ಅಭಿಪ್ರಾಯ ಮೂಡಿಸಲು ಸರ್ಕಾರಿ ಸಂಸ್ಥೆಗಳ ಮೇಲೆ ಒತ್ತಡ ಹಾಕಲಾಗುತ್ತಿದ್ದು, ನಮ್ಮ ಕೆಲಸಕ್ಕೆ ಅಡ್ಡಿಪಡಿಸುವ ಉದ್ದೇಶ ಹೊಂದಲಾಗಿದೆ ಎಂದು ಎಸ್‌ಡಿಪಿಐ ಮನವಿಯಲ್ಲಿ ಆಕ್ಷೇಪಿಸಲಾಗಿತ್ತು. ಎಸ್‌ಡಿಪಿಐ ಒಂದು ಸ್ವತಂತ್ರ ಪಕ್ಷ. ಪಿಎಫ್‌ಐಗೂ ಅದಕ್ಕೂ ಸಂಬಂಧವಿಲ್ಲ. ಪಿಎಫ್‌ಐ ಮತ್ತು ಅದರ ಸಂಸ್ಥೆಗಳನ್ನು ನಿಷೇಧಿಸುವ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವಾಲಯವು ಎಸ್‌ಡಿಪಿಐ ಹೆಸರು ಸೇರಿಸಿಲ್ಲ. ಅದಾಗ್ಯೂ, ಸರ್ಕಾರಿ ಅಧಿಕಾರಿಗಳು/ಪ್ರತಿವಾದಿಗಳು, ಎಸ್‌ಡಿಪಿಐಗೆ ಸೇರಿದ ಸ್ಥಳಗಳಲ್ಲಿ ಅಕ್ರಮವಾಗಿ ದಾಳಿ ನಡೆಸಿದ್ದಾರೆ. ಈ ಬಗ್ಗೆ ಸಂಬಂಧಿತ ಎಲ್ಲರಿಗೂ ಎಸ್‌ಡಿಪಿಐ 2022ರ ಅಕ್ಟೋಬರ್‌ 29ರಂದು ಮನವಿ ಸಲ್ಲಿಸಿದೆ ಎಂದು ವಿವರಿಸಲಾಗಿದೆ.

ಅರ್ಜಿದಾರ ಪಕ್ಷದ ಜಪ್ತಿ ಮಾಡಲಾಗಿರುವ, ಮುಚ್ಚಲ್ಪಟ್ಟಿರುವ ಕಚೇರಿಗಳು ಬಾಡಿಗೆ ಸ್ಥಳಗಳಾಗಿದ್ದು, ದುರುದ್ದೇಶದಿಂದ ಎಸ್‌ಡಿಪಿಐ ಹೆಸರಿಗೆ ಚ್ಯುತಿ ಉಂಟು ಮಾಡಲು ಜಪ್ತಿ ಮಾಡಲಾಗಿದೆ. ಮಂಗಳೂರಿನಲ್ಲಿರುವ ಎಸ್‌ಡಿಪಿಐ ಮಾಹಿತಿ ಮತ್ತು ಸೇವಾ ಕೇಂದ್ರ, ಬಂಟ್ವಾಳ, ಅದ್ದೂರ್‌, ಕುದ್ರೋಳಿ, ಪಾವೂರು, ಸುರತ್ಕಲ್‌ನ ಚೊಕ್ಕಬೆಟ್ಟು, ಫರಂಗಿಪೇಟೆ, ಕಾಟಿಪಳ್ಳ, ಬಂಟ್ವಾಳದ ಮಂಚಿ, ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಕಚೇರಿ, ತಾಳಪಾಡಿಯ ಕೆ ಸಿ ರಸ್ತೆ, ಮಂಗಳೂರಿನ ಉಲ್ಲಾಳದಲ್ಲಿನ ಕಚೇರಿಗಳ ಮೇಲೆ ಅಕ್ರಮವಾಗಿ ದಾಳಿ ನಡೆಸಿ, ಜಪ್ತಿ ಮಾಡಿ, ಅವುಗಳನ್ನು ಮುಚ್ಚಲಾಗಿತ್ತು.

ಯಾವುದೇ ಮಾಹಿತಿ ನೀಡದೇ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆ ಇರುವ ಎಸ್‌ಡಿಪಿಐ ಕಚೇರಿಗಳು, ಚುನಾಯಿತ ಕಾರ್ಪೊರೇಟರ್‌ಗಳ ಕಚೇರಿಯನ್ನು ಮುಚ್ಚಲಾಗಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಎಸ್‌ಡಿಪಿಐ ಪಕ್ಷದ ಅಡಿ ಹಲವು ಮಂದಿ ಚುನಾಯಿತರಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ 200ಕ್ಕೂ ಅಧಿಕ ಚುನಾಯಿತ ಪ್ರತಿನಿಧಿಗಳಿದ್ದು, ರಾಜಕೀಯ ಚಟುವಟಿಕೆ ನಡೆಸಲು ಅವರಿಗೆ ಕಚೇರಿಯ ಅಗತ್ಯವಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಏನಿದು ಕಚೇರಿ ಜಪ್ತಿ ಪ್ರಕರಣ?
2022ರ ಸೆಪ್ಟೆಂಬರ್‌ 28ರಂದು ಕೇಂದ್ರ ಗೃಹ ಇಲಾಖೆಯು ಐದು ವರ್ಷಗಳ ಅವಧಿಗೆ ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳನ್ನು ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ (ಯುಎಪಿಎ) ಅಡಿ ನಿಷೇಧಿಸಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್‌ಗಳು, ಜಿಲ್ಲಾಧಿಕಾರಿ ಮತ್ತು ಇತರೆ ಅಧಿಕಾರಿಗಳು ಪೊಲೀಸರ ಜೊತೆಗೂಡಿ ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳು ಹಾಗೂ ದಕ್ಷಿಣ ಕನ್ನಡದ ಎಸ್‌ಡಿಪಿಐ ಕಚೇರಿಗಳ ಮೇಲೆ ದಾಳಿ ನಡೆಸಿ, ಜಫ್ತಿ ಮಾಡಿದ್ದರು. ಜಪ್ತಿ ಮಾಡಿದ್ದರು. ಇದರ ಬಗ್ಗೆ ಮಾಡಿದ ಮನವಿಗಳಿಗೆ ಸ್ಪಂದಿಸದೆ ಇದ್ದಾಗ ಎಸ್‌ಡಿಪಿಐ ಕೋರ್ಟ್‌ ಮೆಟ್ಟಿಲೇರಿದೆ.

ಇದನ್ನೂ ಓದಿ | SDPIಗೆ BJP ಫಂಡಿಂಗ್‌: ಸತ್ಯಜಿತ್‌ ಸುರತ್ಕಲ್‌ ವಿಡಿಯೋ ಬಿಡುಗಡೆ ಮಾಡಿದ ಪ್ರಿಯಾಂಕ್‌ ಖರ್ಗೆ

Continue Reading
Advertisement
Kodava Family Hockey Tournament Website Launched
ಕೊಡಗು1 ತಿಂಗಳು ago

Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ

Bengaluru News
ಬೆಂಗಳೂರು1 ತಿಂಗಳು ago

Bengaluru News : ಮಾಡಲಿಂಗ್‌ನಲ್ಲಿ ಗಿನ್ನಿಸ್‌ ರೆಕಾರ್ಡ್‌ ಮಾಡಲು ಹೊರಟ ಹಳ್ಳಿಹೈದ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ

Gadag News Father commits suicide by throwing three children into river
ಗದಗ1 ತಿಂಗಳು ago

Gadag News : ಮೂವರು ಮಕ್ಕಳನ್ನು ನದಿಗೆ ಎಸೆದು, ಆತ್ಮಹತ್ಯೆ ಮಾಡಿಕೊಂಡ ತಂದೆ!

Dina Bhavishya
ಭವಿಷ್ಯ1 ತಿಂಗಳು ago

Dina Bhavishya: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ, ಯಶಸ್ಸು ಖಂಡಿತ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ

Bengaluru airport
ಬೆಂಗಳೂರು1 ತಿಂಗಳು ago

Bengaluru Airport : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೈಗರ್‌ ವಿಂಗ್ಸ್‌; 2ನಲ್ಲಿ ಅತಿದೊಡ್ಡ ವರ್ಟಿಕಲ್‌ ಗಾರ್ಡನ್‌ ಅನಾವರಣ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಈ ರಾಶಿಯವರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಸದಾ ಕಲ್ಪನೆಯಲ್ಲಿ ಕನಸುಗಳನ್ನು ಕಾಣುತ್ತಾ ಕಾಲಹರಣ ಮಾಡ್ಬೇಡಿ

dina bhavishya read your daily horoscope predictions for november 4 2024
ಭವಿಷ್ಯ2 ತಿಂಗಳುಗಳು ago

Dina Bhavishya : ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಶುಭ ಸುದ್ದಿ

galipata neetu
ಕಿರುತೆರೆ1 ವರ್ಷ ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ1 ವರ್ಷ ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ1 ವರ್ಷ ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ತಿಂಗಳುಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್4 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ4 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ5 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌