Sugar Vs Salt: ಸಕ್ಕರೆ ಮತ್ತು ಉಪ್ಪು: ಕಿಡ್ನಿಗೆ ಯಾವುದು ಹಿತಕರ? - Vistara News

ಆರೋಗ್ಯ

Sugar Vs Salt: ಸಕ್ಕರೆ ಮತ್ತು ಉಪ್ಪು: ಕಿಡ್ನಿಗೆ ಯಾವುದು ಹಿತಕರ?

ಜೀವಮಾನವಿಡೀ ಸಪ್ಪೆ ಆಹಾರವನ್ನು ತಿನ್ನಲು ಸಾಧ್ಯವಿಲ್ಲ ಮತ್ತು ಹಾಗೆ ತಿನ್ನುವ ಅಗತ್ಯವೂ ಇಲ್ಲ. ಮಿತಿಯಲ್ಲಿ ತಿನ್ನುವುದನ್ನು ಅಳವಡಿಸಿಕೊಳ್ಳುವುದು ಅಗತ್ಯ. ಉಪ್ಪು-ಸಕ್ಕರೆಯೂ (Sugar Vs Salt) ಉಳಿದೆಲ್ಲಾ ಆಹಾರದಂತೆ ಸಮತೋಲನದಲ್ಲಿ ಇರಬೇಕು.

VISTARANEWS.COM


on

Sugar Vs Salt
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೇಹದ ಸುಸ್ಥಿತಿಯಲ್ಲಿ ಇರುವುದಕ್ಕೆ ಎಲ್ಲಾ ಅಂಗಗಳು ಸಮರ್ಪಕವಾಗಿ ಕೆಲಸ ಮಾಡುತ್ತಿರಬೇಕು ಎಂಬುದು ಗೊತ್ತಿರುವುದೇ. ಹೊಟ್ಟೆಗೆ ಹೋದ ಆಹಾರವನ್ನು ಜೀರ್ಣಾಂಗಗಳು ಸರಿಯಾಗಿ ಚೂರ್ಣಿಸುವುದರಿಂದ ತೊಡಗಿ, ಬೇಡದ್ದನ್ನು ಮೂತ್ರಪಿಂಡಗಳು ಹೊರಹಾಕುವವರೆಗೆ ಎಲ್ಲಿಯೂ ಕೊಂಡಿ ತಪ್ಪಬಾರದು. ಹಾಗಾದರೆ ತಿನ್ನುವಾಗಲೂ ಬೇಕಾದ್ದೇನು ಮತ್ತು ಬೇಡದ್ದೇನು ಎಂಬ ಎಚ್ಚರ ಬೇಕಲ್ಲವೇ? ಆಗ ಮಾತ್ರ ಕರುಳು ಮತ್ತು ಮೂತ್ರಪಿಂಡಗಳ ಮೇಲಿನ ಹೆಚ್ಚುವರಿ ಒತ್ತಡವನ್ನು ಕಡಿಮೆ ಮಾಡಬಹುದು. ಈ ನಿಟ್ಟಿನಲ್ಲಿ ಸಕ್ಕರೆ ಮತ್ತು ಉಪ್ಪು- ಇವುಗಳಲ್ಲಿ ಕಿಡ್ನಿಗೆ ಯಾವುದು ಹಿತ? ಈ ಎರಡು ಪ್ರಮುಖ ಅಂಶಗಳು (Sugar Vs Salt) ನಮ್ಮ ಆಹಾರದಲ್ಲಿ ಹೇಗಿರಬೇಕು, ಎಷ್ಟಿರಬೇಕು ಎಂಬ ಮಾಹಿತಿ ಇಲ್ಲಿದೆ.

Sugar and kidney relationship

ಸಕ್ಕರೆ ಮತ್ತು ಕಿಡ್ನಿಯ ಸಂಬಂಧ

ಮೂತ್ರಪಿಂಡಗಳು ಮತ್ತು ಸಕ್ಕರೆ ನಡುವಿನ ನೇರ ಸಂಬಂಧ ಸ್ವಲ್ಪ ಕಡಿಮೆಯೇ ಎನ್ನಬಹುದು. ಆದರೆ ಸಕ್ಕರೆಯ ಸೇವನೆ ಅತಿಯಾದರೆ ಮಧುಮೇಹ, ಬೊಜ್ಜು, ಹೃದಯದ ತೊಂದರೆಗಳು ಅಮರಿಕೊಳ್ಳಲು ಕಾಯುತ್ತಿರುತ್ತವೆ. ಮಧುಮೇಹದಂಥ ಸಮಸ್ಯೆ ಕ್ರಮೇಣ ಕಿಡ್ನಿಯನ್ನು ಅಪಾಯಕ್ಕೆ ದೂಡುತ್ತದೆ. ನಿಯಂತ್ರಣಕ್ಕೆ ಬಾರದಂತೆ ಸಕ್ಕರೆ ಕಾಯಿಲೆ ಹೆಚ್ಚಾದರೆ ಅದು ನೇರವಾಗಿ ಡಯಾಬಿಟಿಕ್‌ ನೆಫ್ರೊಪಥಿಗೆ ಕಾರಣವಾಗುತ್ತದೆ. ಅಂದರೆ ರಕ್ತದಲ್ಲಿರುವ ಕಶ್ಮಲಗಳನ್ನು ಬೇರ್ಪಡಿಸಿ ಹೊರಹಾಕುವ ಕಿಡ್ನಿಗಳ ಸಾಮರ್ಥ್ಯ ಕುಸಿದು ನಂತರ, ಕಿಡ್ನಿ ವೈಫಲ್ಯಕ್ಕೆ ದಾರಿ ಮಾಡಿಕೊಡುತ್ತದೆ. ಮಾತ್ರವಲ್ಲ, ಹೃದಯ ತೊಂದರೆಗಳಿಗೂ ರಕ್ತದ ಏರೊತ್ತಡಕ್ಕೂ ನೇರ ನಂಟು. ಇದು ಮೂತ್ರಪಿಂಡಗಳ ಸಮಸ್ಯೆಗೆ ರಹದಾರಿ ಕಲ್ಪಿಸುತ್ತದೆ. ಹಾಗಾಗಿ ಸಕ್ಕರೆ ಸೇವನೆ ತಕ್ಷಣಕ್ಕೆ ಕಿಡ್ನಿಗಳ ಮೇಲೆ ಒತ್ತಡ ಹಾಕದಿದ್ದರೂ, ಪರೋಕ್ಷವಾಗಿ ಮೂತ್ರಪಿಂಡದ ಸಮಸ್ಯೆಗಳಿಗೆ ತಳುಕು ಹಾಕಿಕೊಳ್ಳುತ್ತದೆ

Link to salt and kidney health

ಉಪ್ಪು ಮತ್ತು ಕಿಡ್ನಿ ಅರೋಗ್ಯಕ್ಕಿರುವ ನಂಟು

ಉಪ್ಪಿಗಿಂತ ರುಚಿಯಿಲ್ಲ ಎಂಬುದನ್ನು ಮೊದಲಿಗೇ ಒಪ್ಪಿಕೊಂಡವರು ನಾವು. ಹಾಗಾಗಿ ಉಪ್ಪು ಅಥವಾ ಸೋಡಿಯಂ ಕ್ಲೋರೈಡ್‌ ನಮ್ಮ ಆಹಾರದ ಅವಿಭಾಜ್ಯ ಅಂಗ. ಸಮರ್ಪಕ ಕಾರ್ಯ ನಿರ್ವಹಣೇಗೆ ನಮ್ಮ ಶರೀರಕ್ಕೆ ಸಣ್ಣ ಪ್ರಮಾಣದಲ್ಲಿ ಸೋಡಿಯಂ ಬೇಕು. ಅದು ದೊರೆಯದಿದ್ದರೆ ಒಂದಿಷ್ಟು ಸಮಸ್ಯೆಗಳು ಗಂಟಿಕ್ಕಿಕೊಳ್ಳುತ್ತವೆ. ಹಾಗೆಂದು ಸೋಡಿಯಂ ದೇಹಕ್ಕೆ ಹೆಚ್ಚಾದರೆ, ಆ ಒತ್ತಡದ ನೇರ ಫಲಾನುಭವಿ ನಮ್ಮ ಮೂತ್ರಪಿಂಡಗಳು. ಉಪ್ಪಿನಂಶ ದೇಹಕ್ಕೆ ಹೆಚ್ಚಾದರೆ ರಕ್ತದೊತ್ತಡಕ್ಕೆ ನಾಂದಿ ಹಾಡುತ್ತದೆ. ಇದೂ ಸಹ ಕಿಡ್ನಿಗಳ ಮೇಲೆ ದುಷ್ಪರಿಣಾಮ ಬೀರುತ್ತವೆ. ಈ ಎಲ್ಲವುಗಳ ಪರಿಣಾಮವಾಗಿ ಕಿಡ್ನಿಗಳ ಆರೋಗ್ಯ ಕೈಕೊಟ್ಟು, ರೋಗಗಳು ದಾಳಿಯಿಡುತ್ತವೆ. ಅಂತಿಮವಾಗಿ ಕಿಡ್ನಿ ವೈಫಲ್ಯವನ್ನು ಎದುರಿಸಬೇಕಾಗುತ್ತದೆ. ಮಾತ್ರವಲ್ಲ, ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು ಎಂಬ ಮಾತಿನಂತೆ, ಅತಿಯಾಗಿ ನೀರನ್ನೂ ದೇಹ ಹಿಡಿದಿರಿಸಿಕೊಳ್ಳುತ್ತದೆ

ಏನು ಮಾಡಬೇಕು?

ಸಕ್ಕರೆ, ಉಪ್ಪುಗಳನ್ನು (Sugar Vs Salt) ಹೆಚ್ಚು ತಿಂದರೆ ಕಿಡ್ನಿಯ ಮೇಲೆ ದುಷ್ಪರಿಣಾಮ ಬೀರುತ್ತದೆ ಮತ್ತು ಇನ್ನಿತರ ರೋಗಗಳನ್ನೂ ತರುತ್ತದೆ ಎಂಬ ಕಾರಣಕ್ಕೆ ಜೀವಮಾನವಿಡೀ ಸಪ್ಪೆ ಆಹಾರವನ್ನು ತಿನ್ನಲು ಸಾಧ್ಯವಿಲ್ಲ ಮತ್ತು ಹಾಗೆ ತಿನ್ನುವ ಅಗತ್ಯವೂ ಇಲ್ಲ. ಮಿತಿಯಲ್ಲಿ ತಿನ್ನುವುದನ್ನು ಅಳವಡಿಸಿಕೊಳ್ಳುವುದು ಅಗತ್ಯ. ಉಪ್ಪು-ಸಕ್ಕರೆಯೂ ಉಳಿದೆಲ್ಲಾ ಆಹಾರದಂತೆ ಸಮತೋಲನದಲ್ಲಿ ಇರಬೇಕು. ಒಂದು ಹಿತ, ಇನ್ನೊಂದು ಅಹಿತ ಎನ್ನುವಂತಿಲ್ಲ- ಅತ್ತ ದರಿ, ಇತ್ತ ಪುಲಿ! ಹಾಗಾಗಿ, ಕಿಡ್ನಿ-ಸ್ನೇಹಿ ಡಯಟ್‌ನ ಬಗೆಗೆ ಹೇಳುವುದಾದರೆ, ‌

ಹೆಚ್ಚುವರಿ ಸಕ್ಕರೆಭರಿತ ಆಹಾರಗಳನ್ನು ಹತ್ತಿರ ಸೇರಿಸಬೇಡಿ

ಸೋಡಾ, ಕೃತಕ ಬಣ್ಣ-ಸಕ್ಕರೆ ಭರಿತ ಪಾನೀಯಗಳು, ಸಂಸ್ಕರಿತ ಆಹಾರಗಳಲ್ಲಿ ಸಕ್ಕರೆ ಅಂಶ ಹೆಚ್ಚಿರುತ್ತದೆ. ಇವುಗಳನ್ನು ದೂರ ಮಾಡಿ. ಹಬ್ಬಕ್ಕೋ ಹುಣ್ಣಿಮೆಗೋ ತಿನ್ನುವ ಪಾಯಸ-ಲಾಡುಗಳಿಗಿಂತ ಈ ಕೃತಕ ಮತ್ತು ಸಂಸ್ಕರಿತ ಆಹಾರಗಳೇ ಹೆಚ್ಚಿನ ತೊಂದರೆ ನೀಡುತ್ತವೆ.

Avoid adding extra sugary foods

ಸಂರಕ್ಷಿಸಿಟ್ಟ ಆಹಾರಗಳಿಗಿಂತ ತಾಜಾ ಆಹಾರಗಳು ನಿಮ್ಮ ಆಯ್ಕೆಯಾಗಿರಲಿ

ಸಂರಕ್ಷಿತ ಆಹಾರಗಳಲ್ಲಿ ಉಪ್ಪಿನಂಶ ಹೆಚ್ಚಿರುತ್ತದೆ. ಪ್ಯಾಕೆಟ್‌ ಕುರುಕಲುಗಳಂತೆಯೇ ತೊಕ್ಕು, ಉಪ್ಪಿನಕಾಯಿಗಳ ಅತಿಯಾದ ಬಳಕೆಯೂ ಸಮಸ್ಯೆಗೆ ಮೂಲವಾಗುತ್ತದೆ. ಒಂದೊಮ್ಮೆ ರೆಡಿ ಆಹಾರಗಳನ್ನು ಖರೀದಿಸಬೇಕಾಗಿ ಬಂದರೆ, ಅದರ ಮೇಲೆ ಪೋಷಕಾಂಶಗಳ ಮಾಹಿತಿಯಿದ್ದರೆ ಸೋಡಿಯಂ ಅಂಶದ ಮೇಲೆ ಗಮನಹರಿಸಿ.

ಆಹಾರದಲ್ಲಿ ಸಾಕಷ್ಟು ಹಣ್ಣು-ತರಕಾರಿಗಳನ್ನು ಸೇರಿಸಿಕೊಳ್ಳಿ

ನೀರು ಯಥೇಚ್ಛವಾಗಿ ಕುಡಿಯಿರಿ, ಇದರಿಂದ ಕಿಡ್ನಿಯ ಕೆಲಸ ಹಗುರವಾಗುತ್ತದೆ.

ಇದನ್ನೂ ಓದಿ: Health tips for Monsoon : ಮಳೆಗಾಲದ ಖುಷಿ ಅನುಭವಿಸಿ, ಆದರೆ ರೋಗಗಳನ್ನು ದೂರ ಇರಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

ಐದು ವರ್ಷದಿಂದ ಹೊಟ್ಟೆಯಲ್ಲೇ ಇದ್ದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಯಶಸ್ವಿಯಾಗಿ ಹೊರತೆಗೆದ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ

VISTARANEWS.COM


on

By

Doctors at Fortis Hospital remove fish bone from man's stomach for 5 years
Koo

ಬೆಂಗಳೂರು: ಕಳೆದ ಐದು ವರ್ಷದಿಂದ ಒಂದಿಲ್ಲೊಂದು ರೀತಿಯ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 61 ವರ್ಷದ ವ್ಯಕ್ತಿಯ ಹೊಟ್ಟೆಯಿಂದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಬೆಂಗಳೂರಿನ (Bengaluru News) ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಹೊರತೆಗೆದಿದೆ.

ಈ ಕುರಿತು ಮಾತನಾಡಿದ ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯ ಜೀರ್ಣಾಂಗವ್ಯೂಹದ ಶಸ್ತ್ರಚಿಕಿತ್ಸಾ ಸಮಾಲೋಚಕ ಡಾ. ಪ್ರಣವ್ ಹೊನ್ನಾವರ ಶ್ರೀನಿವಾಸನ್, 61 ವರ್ಷದ ರೋಗಿ ರಾಜೇಶ್ (ಹೆಸರು ಬದಲಾಯಿಸಲಾಗಿದೆ) ಎಂಬುವವರು ಐದು ವರ್ಷದ ಹಿಂದೆ ಮೀನು ಸೇವಿಸಿದ್ದರು. ಆಗ ಗಂಟಲಿನಲ್ಲಿ ಮೀನಿನ ಮೂಳೆ ಸಿಲುಕಿ, ಅದು ಹೊಟ್ಟೆ ಸೇರಿತ್ತು. ಬಳಿಕ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಎಂಡೋಸ್ಕೋಪಿಕ್‌ ಕಾರ್ಯವಿಧಾನಕ್ಕೆ ಒಳಗಾಗುವ ಮೂಲಕ ಒಂದು ಮೂಳೆ ತೆಗೆಸಿಕೊಂಡಿದ್ದರು. ಮತ್ತೊಂದು ಮೂಳೆ ಇರುವುದು ಅವರಿಗೆ ತಿಳಿದಿರಲಿಲ್ಲ.

ಸಂಪೂರ್ಣ ಮೂಳೆ ತೆಗೆಯದ ಕಾರಣ, 2 ಸೆಂ.ಮೀ ಉದ್ದದ ಮೀನಿನ ಮೂಳೆ ಹೊಟ್ಟೆಯಲ್ಲೇ ಉಳಿದಿತ್ತು. ಇದು ಅವರ ಗಮನಕ್ಕೂ ಬಂದಿಲ್ಲ. ಇದಾಗಿ ಐದು ವರ್ಷ ಕಳೆದಿದೆ. ಐದು ವರ್ಷಗಳಿಂದಲೂ ಒಂದಲ್ಲ ಒಂದು ರೀತಿಯ ಹೊಟ್ಟೆನೋವು, ವಿವಿಧ ರೀತಿಯ ಅಸ್ವಸ್ಥತೆ ಅನುಭವಿಸುತ್ತಿದ್ದರು. ಆಸ್ಪತ್ರೆಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಿದ್ದರೂ ಈ ಮೂಳೆ ಕಾಣಿಸಿಕೊಂಡಿಲ್ಲ. ಈ ಮೂಳೆಯಿಂದ ಅವರ ಆರೋಗ್ಯ ಕ್ಷೀಣಿಸುತ್ತಾ ಹೊಟ್ಟೆ ನೋವು ಹೆಚ್ಚುತ್ತಲೇ ಹೋಗಿದೆ.

Doctors at Fortis Hospital remove fish bone from man's stomach for 5 years

ನಂತರ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಅವರ ಸಂಪೂರ್ಣ ತಪಾಸಣೆಯ ಬಳಿಕ ಓಮೆಂಟಮ್‌ನಲ್ಲಿ (ಕಿಬ್ಬೊಟ್ಟೆಯ ಅಂಗಗಳ ಸುತ್ತಲಿನ ಅಂಗಾಂಶದ ಪದರ) ಈ ಮೂಳೆ ಇರುವುದು ಕಂಡು ಬಂದಿತು. ಐದು ವರ್ಷಗಳ ಹಿಂದಿನಿಂದಲೂ ಈ ಮೂಳೆ ಒಂದಿಲ್ಲೊಂದು ರೀತಿಯಲ್ಲಿ ನೋವು ನೀಡುತ್ತಿರುವುದು ರೋಗಿಗೂ ಆಗಲೇ ತಿಳಿದಿದ್ದು. ಅವರಿಗೆ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ವಿಧಾನದ ಮೂಲಕ ಮೂಳೆಯನ್ನು ತೆಗೆದು ಹಾಕಲಾಗಿದ್ದು, ರೋಗಿಯು ಚೇತರಿಸಿಕೊಳ್ಳುತ್ತಿದ್ದಾರೆ ಎಂದರು. ಈ ಶಸ್ತ್ರಚಿಕಿತ್ಸೆ ವೇಳೆ ಅವರಿಗೆ ಪಿತ್ತಕೋಶದ ಕಾಯಿಲೆ ಹಾಗೂ ಹೊಕ್ಕುಳಿನ ಅಂಡವಾಯು ಸಮಸ್ಯೆ ಇರುವುದು ತಿಳಿದು ಬಂತು. ಈ ಸಮಸ್ಯೆಗಳಿಗೂ ಚಿಕಿತ್ಸೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Continue Reading

ಬೆಂಗಳೂರು

Breast cancer: ಬೈಕಥಾನ್‌ ಮೂಲಕ ಗಲ್ಲಿ ಗಲ್ಲಿಯಲ್ಲೂ ಸ್ತನ ಕ್ಯಾನ್ಸರ್‌ ಜಾಗೃತಿ ಮೂಡಿಸಿದ ಬೈಕರ್ಸ್‌ಗಳು

Breast cancer : ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಬೈಕಥಾನ್‌ ಆಯೋಜನೆ ಮಾಡಲಾಗಿತ್ತು.

VISTARANEWS.COM


on

By

Breast Cancer Awareness Month celebrated through bikethon
Koo

ಬೆಂಗಳೂರು: ಸ್ತನಕ್ಯಾನ್ಸರ್‌ (Breast cancer) ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರು ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಪಿಂಕ್‌ ವುಮೆನ್ಸ್‌ ಶೀರ್ಷಿಕೆಯಡಿ ಬೈಕಥಾನ್‌ ಆಯೋಜಿಸಿತ್ತು. ಸ್ತನಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ನಡೆದ ಈ ಬೈಕಥಾನ್‌ ಕೆ.ಆರ್‌. ರಸ್ತೆಯ ಎಚ್‌ಸಿಜಿ ಕ್ಯಾನ್ಸರ್ ಕೇಂದ್ರದಿಂದ ಸೋಮವಾರ ಬೆಳಗ್ಗೆ 7 ಗಂಟೆಗೆ ಪ್ರಾರಂಭಗೊಂಡು, ಎಂ.ಜಿ. ರಸ್ತೆ, ಟ್ರಿನಿಟಿ ಸರ್ಕಲ್‌, ವಿಧಾನಸೌಧದ ಮುಂಭಾಗದಿಂದ ಹಾದು 10 ಕಿಲೋಮೀಟರ್ ದೂರದವರೆಗೆ ಸಾಗಿತು.

Breast Cancer Awareness Month celebrated through bikethon

180ಕ್ಕೂ ಹೆಚ್ಚು ಮಹಿಳಾ ಬೈಕರ್ಸ್‌ಗಳು ಈ ಬೈಕಥಾನ್‌ನಲ್ಲಿ ಪಾಲ್ಗೊಂಡು, ಸ್ತನಕ್ಯಾನ್ಸರ್‌ನ ಬಗ್ಗೆ ಹಾಗೂ ಆರಂಭಿಕ ತಪಾಸಣೆಗೆ ಆದ್ಯತೆ ನೀಡುವ ಕುರಿತು ಜಾಗೃತಿ ಮೂಡಿಸಿದರು. ಇದಷ್ಟೇ ಅಲ್ಲದೆ, ಬೈಕಥಾನ್‌ಗೂ ಮುನ್ನ, ಜುಂಬಾ ಸೆಷನ್‌, ಮೈಕಲ್‌ ಜಾಕ್ಸನ್‌ ಅವರ “ಡೇಂಜರಸ್‌” ಪ್ರೇರಿತಗೊಂಡ ಸ್ಟೆಪ್ಸ್‌ ಹಾಕುವ ಮೂಲಕ ಸ್ತನ ಕ್ಯಾನ್ಸರ್‌ ಆರಂಭಿಕ ಪತ್ತೆಯ ಬಗ್ಗೆ “ಬೀಟ್ ಇಟ್” ಶೀರ್ಷಿಕೆಯ ಫಲಕಗಳನ್ನು ಹಿಡಿದು ವಿಭಿನ್ನವಾಗಿ ಜಾಗೃತಿ ಮೂಡಿಸಿದರು.

ಎಚ್‌ಸಿಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೀಶಾ ಕುಮಾರ್, ಮೆಡಿಕಲ್‌ ಆಂಕೊಲಾಜಿಸ್ಟ್ ಡಾ. ರೋಶನಿ ದಾಸ್‌ಗುಪ್ತ, ಸರ್ಜಿಕಲ್ ಆಂಕೊಲಾಜಿಸ್ಟ್ ಡಾ ಮಹೇಶ್ ಬಂಡೇಮೆಗಲ್ ಈ ಬೈಕಥಾನ್‌ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಮನೀಶಾ ಕುಮಾರ್, ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಹೆಚ್ಚಾಗಿ ಸ್ತನಕ್ಯಾನ್ಸರ್‌ ಕಾಡುತ್ತಿರುವುದು ಆತಂಕಕಾರಿ ಬೆಳವಣಿಗೆ. ಆರಂಭದಲ್ಲಿಯೇ ಈ ಕ್ಯಾನ್ಸರ್‌ನನ್ನು ಪತ್ತೆ ಹಚ್ಚಿದರೆ ಸುಲಭವಾಗಿ ಚಿಕಿತ್ಸೆ ಮೂಲಕ ಗುಣಪಡಿಸಬಹುದು. ನಾವಷ್ಟೇ ಜಾಗೃತರಾದೆ ಸಾಲದು, ನಮ್ಮ ಸುತ್ತಮುತ್ತ ಹಾಗೂ ಗ್ರಾಮೀಣ ಭಾಗದ ಮಹಿಳೆಯರಿಗೂ ಕೂಡ ಈ ಬಗ್ಗೆ ಅರಿವು ಮೂಡಿಸಬೇಕು. ಆಗಷ್ಟೇ ಎಲ್ಲರಿಗೂ ಸ್ತನಕ್ಯಾನ್ಸರ್‌ನ ಬಗ್ಗೆ ಜಾಗೃತಿ ಮೂಡಲಿದೆ. ಮಹಿಳಾ ಬೈಕರ್ಸ್‌ಗಳು ವಿಶೇಷವಾಗಿ ಬೈಕ್‌ ಸವಾರಿ ಮೂಲಕ ಈ ಬಗ್ಗೆ ಜಾಗೃತಿ ಮೂಡಿಸಿದ್ದು ಪ್ರಶಂಸನೀಯ ಎಂದರು.

ಮೆಡಿಕಲ್‌ ಆಂಕೊಲಾಜಿಸ್ಟ್ ಡಾ ರೋಶನಿ ದಾಸ್‌ಗುಪ್ತ ಮಾತನಾಡಿ, ಸ್ತನಕ್ಯಾನ್ಸರ್‌ ಬಗ್ಗೆ ಜಾಗೃತಿ ಮೂಡಿಸಿದಷ್ಟೂ ಈ ಬಗ್ಗೆ ಭಯಗೊಳ್ಳುವವರ ಸಂಖ್ಯೆಯೂ ಕಡಿಮೆಯಾಗಲಿದೆ. ಜನರು ಈ ಕ್ಯಾನ್ಸರ್‌ನ ಪ್ರಾರಂಭದಲ್ಲಿಯೇ ಪತ್ತೆ ಹಚ್ಚಿ, ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಈ ರೋಗದಿಂದ ಮುಕ್ತಿಗೊಂಡು ಎಂದಿನಂತೆ ಜೀವನ ನಡೆಸಬಹುದು, ಹೀಗಾಗಿ ಜನರು ಈ ಬಗ್ಗೆ ಹೆಚ್ಚು ಜಾಗೃತರಾಗುವುದು ಒಳಿತು ಎಂದು ಸಲಹೆ ನೀಡಿದರು.

ಸರ್ಜಿಕಲ್ ಆಂಕೊಲಾಜಿಸ್ಟ್ ಡಾ. ಮಹೇಶ್ ಬಂಡೇಮೆಗಲ್ ಮಾತನಾಡಿ, “ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳಂದು ಪಿಂಕ್ ಮಹಿಳಾ ಬೈಕ್‌ಥಾನ್ 2024 ನಂತಹ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುವ ಅವಶ್ಯಕತೆ ಹೆಚ್ಚಿದೆ. ಇದರಿಂದಲಾದರೂ ಮಹಿಳೆಯರು ಎಚ್ಚೆತ್ತುಕೊಳ್ಳುತ್ತಾರೆ ಎಂದು ಹೇಳಿದರು.

Continue Reading

ಬೆಂಗಳೂರು

Aplastic anemia : ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ ಆಫ್ರಿಕಾ ಮೂಲದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Aplastic anemia : ಆಫ್ರಿಕಾ ಮೂಲದ ಬಾಲಕ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ. ಆತನಿಗೆ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನೀಡಿದೆ.

VISTARANEWS.COM


on

By

African boy successfully undergoes surgery for rare aplastic anemia
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾಗಿದ್ದ ಕಾರಣ ಅತಿ ವಿರಳ ಕಾಯಿಲೆಯಾದ ಅಪ್ಲ್ಯಾಸ್ಟಿಕ್ ರಕ್ತ ಹೀನತೆಯಿಂದ ಬಳಲುತ್ತಿದ್ದ 16 ವರ್ಷದ ಬಾಲಕನಿಗೆ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ (Aplastic anemia) ನೀಡಲಾಗಿದೆ.

ಫೋರ್ಟಿಸ್ ಆಸ್ಪತ್ರೆಯ ಮೆಡಿಕಲ್‌ ಮತ್ತು ಹೆಮಟೋ ಆಂಕೊಲಾಜಿಯ ಹಿರಿಯ ನಿರ್ದೇಶಕಿ ಡಾ. ನೀತಿ ರೈಜಾದಾ, ಹೆಮಟೋ ಆಂಕೊಲಾಜಿ ಸಮಾಲೋಚಕ ಡಾ ನಿಶಿತ್ ಓಜ್ಹಾ, ಪೀಡಿಯಾಟ್ರಿಕ್ ಹೆಮಟೋ ಆಂಕೊಲಾಜಿಯ ಸಲಹೆಗಾರರಾದ ಡಾ ತನುಶ್ರೀ ಪಾಲ್ ಅವರ ವೈದ್ಯ ತಂಡ ಈ ಬಾಲಕನಿಗೆ ಸಮಯೋಚಿತವಾಗಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಬಾಲಕನ ಜೀವ ಉಳಿಸಲಾಗಿದೆ.

ಈ ಕುರಿತು ಮಾತನಾಡಿದ ಡಾ. ನೀತಿ ರೈಜಾದಾ, ಆಫ್ರೀಕಾ ಮೂಲದ 16 ವರ್ಷದ ಮೈಕೆಲ್ ಎಂಬಾತನಿಗೆ ಕಳೆದ ಎರಡು ತಿಂಗಳಿನಿಂದ ತೀವ್ರವಾದ ಜ್ವರ, ಆಯಾಸ, ದೌರ್ಬಲ್ಯಗಳಿಂದ ಬಳಲುತ್ತಿದ್ದರು. ಅಷ್ಟೇ ಅಲ್ಲದೆ, ಆತನ ಬಲ ಕಿವಿಯಿಂದ ರಕ್ತಸ್ತ್ರಾವವಾಗಲು ಪ್ರಾರಂಭಗೊಂಡಿತ್ತು. ಇದರಿಂದ ಭಯಭೀತಗೊಂಡ ಅವರ ಕುಟುಂಬ ಆಫ್ರಿಕಾದಲ್ಲಿರುವ ಎಲ್ಲಾ ಆಸ್ಪತ್ರೆಗಳಿಗೆ ತೋರಿಸಿದರೂ, ಬಾಲಕನ ಆರೋಗ್ಯ ಸಮಸ್ಯೆ ಏನೆಂದು ತಿಳಿಯಲಿಲ್ಲ. ಹೀಗಾಗಿ ಅವರು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು.

African boy successfully undergoes surgery for rare aplastic anemia

ಬಾಲಕನ ಸಂಪೂರ್ಣ ತಪಾಸಣೆ ಬಳಿಕ, ಆ ಬಾಲಕನಿಗೆ ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆ ಆಗಿರುವುದು ತಿಳಿದುಬಂತು. ಇದು ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾದ ಕಾರಣ ಆ ಬಾಲಕ ರಕ್ತ ಹೀನತೆಗೆ ಒಳಗಾಗಿದ್ದ. ಹೀಗಾಗಿ ಆತನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿ ಮಾಡುವ ಅವಶ್ಯಕತೆ ಅನಿವಾರ್ಯವಾಗಿತ್ತು. ಆದರೆ, ಬಾಲಕನ ರಕ್ತದ ಗುಂಪಿಗೆ ಹೊಂದುವಂತೆ ಸ್ಟೆಮ್‌ಸೆಲ್‌ ಸಿಗದೇ ಸಮಸ್ಯೆ ಎದುರಾಗಿತ್ತು.

ಈ ಮಧ್ಯೆ ಬಾಲಕನ ಹಿರಿಯ ಸಹೋದರಿಯೇ ತನ್ನ ತಮ್ಮನಿಗೆ ಹ್ಯಾಪ್ಲೊಂಡೆಂಟಿಕಲ್‌ ದಾನ ಮಾಡಲು ಮುಂದಾದರು. ಆದರೆ, ಬಾಲಕನಿಗೆ ಬಲಕಿವಿ ಸೋಂಕಿನಿಂದ ಸೋರುತ್ತಿದ್ದ ಕಾರಣ, ಮೊದಲು ಕಿವಿ ಶಸ್ತ್ರಚಿಕಿತ್ಸೆ ಮುಂದಾಗಬೇಕಾಯಿತು. ಬಾಲಕನ ಬಲ ಕಾರ್ಟಿಕಲ್‌ ಮಾಸ್ಟೊಡೆಕ್ಟಮಿ (ಕಿವಿ ಸುತ್ತ ಇರುವ ಸೋಂಕಿನ ಅಂಗಾಂಶ) ತೆಗೆದು ಹಾಕಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ಇದಾದ ಬಳಿಕ ಬಾಲಕನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿಯನ್ನು ಯಶಸ್ವಿಯಾಗಿ ನಡೆಸಲಾಯಿತು. ಇದೀಗ ಬಾಲಕ ಗುಣಮುಖರಾಗುತ್ತಿದ್ದಾನೆ ಎಂದು ವಿವರಿಸಿದರು.

Continue Reading

ಬೆಂಗಳೂರು

Breast cancer : ಸ್ತನದಲ್ಲಿ ಗಂಟಿನ ರೀತಿ ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡಲೇಬೇಡಿ!

ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಫೋರ್ಟಿಸ್‌ ಆಸ್ಪತ್ರೆ ವತಿಯಿಂದ ಪಿಂಕ್‌ ಸ್ಟ್ರಾಂಗ್‌ ವಾಕಥಾನ್‌ ನಡೆಸಲಾಯಿತು. ಮಹಿಳೆಯರು ಸ್ತನಕ್ಯಾನ್ಸರ್‌ನ ಬಗ್ಗೆ ಜಾಗೃತಿ ಹೊಂದುವುದು ಅವಶ್ಯಕ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

By

Pink Strong walkathon to raise awareness among people about breast cancer
Koo

ಬೆಂಗಳೂರು: ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆ ವತಿಯಿಂದ ಸ್ತನ ಕ್ಯಾನ್ಸರ್‌ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು “ಪಿಂಕ್‌ ಸ್ಟ್ರಾಂಗ್‌” ವಾಕಥಾನ್‌ನನ್ನು ಆಯೋಜಿಸಿತ್ತು. ಬನ್ನೇರುಘಟ್ಟ ರಸ್ತೆ ಫೋರ್ಟಿಸ್‌ ಆಸ್ಪತ್ರೆಯಿಂದ ಪ್ರಾರಂಭಗೊಂಡ ವಾಕಥಾನ್‌ ಗೋಪಾಲನ್‌ ಮಾಲ್‌ವರೆಗೆ ಮುಕ್ತಾಯಗೊಂಡಿತು. ಸುಮಾರು 5 ಕಿ.ಮೀ ದೂರದ ಈ ವಾಕಥಾನ್‌ನಲ್ಲಿ ಸ್ತನಕ್ಯಾನ್ಸರ್‌ನಿಂದ ಗುಣಮುಖರಾದ ರೋಗಿಗಳು ಹಾಗೂ ಅವರ ಕುಟುಂಬಸ್ಥರು, ಸಾರ್ವಜನರಿಕರು ಫೋರ್ಟಿಸ್‌ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಸೇರಿದಂತೆ ಒಟ್ಟು 450 ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.

Pink Strong walkathon to raise awareness among people about breast cancer

ವಾಕಥಾನ್‌ನಲ್ಲಿ ಭಾಗವಹಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, ಇತ್ತೀಚೆಗೆ ಸಾಕಷ್ಟು ಮಹಿಳೆಯರನ್ನು ಬಾಧಿಸುತ್ತಿರುವ ಕಾಯಿಲೆಗಳ ಪೈಕಿ ಸ್ತನಕ್ಯಾನ್ಸರ್‌ ಕೂಡ ಒಂದು. ಹೆಣ್ಣು ಮಕ್ಕಳು, ಮಹಿಳೆಯರು ಸ್ತನಕ್ಯಾನ್ಸರ್‌ ರೋಗ ಲಕ್ಷಣದ ಬಗ್ಗೆ ಮೊದಲೇ ತಿಳಿದಿದ್ದಾಗ ಮಾತ್ರ ಇದರ ನಿರ್ಮೂಲನೆ ಸಾಧ್ಯ. ಆದರೆ ಸಾಕಷ್ಟು ಮಹಿಳೆಯರಿಗೆ ಇದರ ಬಗ್ಗೆ ಜಾಗೃತಿಯ ಕೊರತೆ ಇದೆ. ಮೊದಲು ಸ್ತನ ಕ್ಯಾನ್ಸರ್‌ ರೋಗದ ಬಗ್ಗೆ ಜಾಗೃತಿ ಹೊಂದಿರಬೇಕು, ಫೋರ್ಟಿಸ್‌ ಆಸ್ಪತ್ರೆಯು ಸ್ತನ ಕ್ಯಾನ್ಸರ್‌ ಮಾಸದ ಭಾಗವಾಗಿ ಈ ವಾಕಥಾನ್‌ ನಡೆಸುವ ಮೂಲಕ ಮಹಿಳೆಯರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.

Pink Strong walkathon to raise awareness among people about breast cancer

ಫೋರ್ಟಿಸ್ ಆಸ್ಪತ್ರೆಯ ಸರ್ಜಿಕಲ್ ಆಂಕೊಲಾಜಿಯ ಹಿರಿಯ ಸಲಹೆಗಾರರಾದ ಡಾ, ಮೋನಿಕಾ ಪನ್ಸಾರಿ ಮಾತನಾಡಿ, ಸ್ತನಕ್ಯಾನ್ಸರ್‌ ಹೆಚ್ಚಾಗಿ ಕಡಿಮೆ ವಯಸ್ಸಿನ ಮಹಿಳೆಯರಲ್ಲೇ ಕಾಣಿಸುತ್ತಿದೆ, ಅಧ್ಯಯನಗಳ ಪ್ರಕಾರ ಸುಮಾರು ಶೇ.48 ರಷ್ಟು ರೋಗಿಗಳಲ್ಲಿ 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರೇ ಇರುವುದು ಆಘಾತಕಾರಿ. ಹೀಗಾಗಿ ಹೆಣ್ಣುಮಕ್ಕಳಿಂದಲೇ ಸ್ತನ ಕ್ಯಾನ್ಸರ್‌ನ ಬಗ್ಗೆ ಜಾಗೃತಿ ಮೂಡಿಸುತ್ತಾ ಹೋದರೆ, ಭವಿಷ್ಯದಲ್ಲಿ ಆಗುವ ಅಪಾಯವನ್ನು ತಡೆಗಟ್ಟಬಹುದು. ಸ್ತನ ಕ್ಯಾನ್ಸರ್‌ ಇರುವ ಬಗ್ಗೆ ಮಹಿಳೆಯರೇ ಸ್ವಯಂ ಪರೀಕ್ಷೆ ಮಾಡಿಕೊಳ್ಳಬಹುದು. ಒಂದು ವೇಳೆ ತಮ್ಮ ಸ್ತನದಲ್ಲಿ ಗಂಟಿನ ರೀತಿ ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಿ ತಪಾಸಣೆಗೆ ಒಳಗಾಗುವುದು ಒಳ್ಳೆಯದು. ಇನ್ನು, ಮಹಿಳೆಯರು ಆರೋಗ್ಯಕರ ಜೀವನ ಶೈಲಿ ರೂಡಿಸಿಕೊಳ್ಳುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು.

Continue Reading
Advertisement
Kodava Family Hockey Tournament Website Launched
ಕೊಡಗು1 ತಿಂಗಳು ago

Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ

Bengaluru News
ಬೆಂಗಳೂರು1 ತಿಂಗಳು ago

Bengaluru News : ಮಾಡಲಿಂಗ್‌ನಲ್ಲಿ ಗಿನ್ನಿಸ್‌ ರೆಕಾರ್ಡ್‌ ಮಾಡಲು ಹೊರಟ ಹಳ್ಳಿಹೈದ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ

Gadag News Father commits suicide by throwing three children into river
ಗದಗ1 ತಿಂಗಳು ago

Gadag News : ಮೂವರು ಮಕ್ಕಳನ್ನು ನದಿಗೆ ಎಸೆದು, ಆತ್ಮಹತ್ಯೆ ಮಾಡಿಕೊಂಡ ತಂದೆ!

Dina Bhavishya
ಭವಿಷ್ಯ1 ತಿಂಗಳು ago

Dina Bhavishya: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ, ಯಶಸ್ಸು ಖಂಡಿತ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ

Bengaluru airport
ಬೆಂಗಳೂರು1 ತಿಂಗಳು ago

Bengaluru Airport : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೈಗರ್‌ ವಿಂಗ್ಸ್‌; 2ನಲ್ಲಿ ಅತಿದೊಡ್ಡ ವರ್ಟಿಕಲ್‌ ಗಾರ್ಡನ್‌ ಅನಾವರಣ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಈ ರಾಶಿಯವರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ

Dina Bhavishya
ಭವಿಷ್ಯ1 ತಿಂಗಳು ago

Dina Bhavishya : ಸದಾ ಕಲ್ಪನೆಯಲ್ಲಿ ಕನಸುಗಳನ್ನು ಕಾಣುತ್ತಾ ಕಾಲಹರಣ ಮಾಡ್ಬೇಡಿ

dina bhavishya read your daily horoscope predictions for november 4 2024
ಭವಿಷ್ಯ2 ತಿಂಗಳುಗಳು ago

Dina Bhavishya : ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಶುಭ ಸುದ್ದಿ

galipata neetu
ಕಿರುತೆರೆ1 ವರ್ಷ ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ1 ವರ್ಷ ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ1 ವರ್ಷ ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ತಿಂಗಳುಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್4 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ4 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ4 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌