ಕ್ರೀಡೆ
IPL 2024: ಚೆನ್ನೈಗೆ ಆಘಾತ; ತಂಡ ತೊರೆದು ತವರಿಗೆ ಪ್ರಯಾಣಿಸಿದ ಸ್ಟಾರ್ ವೇಗಿ
IPL 2024: ಪ್ರಸಕ್ತ ಐಪಿಎಲ್(IPL 2024) ಟೂರ್ನಿಯಲ್ಲಿ ಮುಸ್ತಫಿಜುರ್ ಒಟ್ಟು ಆಡಿದ ಮೂರು ಪಂದ್ಯಗಳ ಪೈಕಿ 7 ವಿಕೆಟ್ ಕಬಳಿಸಿ ಅತ್ಯಧಿಕ ವಿಕೆಟ್ ಟೇಕರ್ ಬೌಲರ್ಗಳ ಪಟ್ಟಿಯಲ್ಲಿ ಸದ್ಯ ಅಗ್ರಸ್ಥಾನ ಪಡೆದಿದ್ದಾರೆ. ಚೆನ್ನೈ ಆಡಿದ ಮೂರು ಪಂದ್ಯಗಳಲ್ಲಿ 2 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ 4 ಅಂಕದೊಂದಿಗೆ ಮೂರನೇ ಸ್ಥಾನಿಯಾಗಿದೆ.
ಚೆನ್ನೈ: ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್(CSK) ತಂಡಕ್ಕೆ ಶುಕ್ರವಾರ ನಡೆಯುವ ಸನ್ರೈಸರ್ಸ್ ಹೈದರಾಬಾದ್(SRH) ವಿರುದ್ಧದ ಪಂದ್ಯಕ್ಕೂ ಮುನ್ನ ಆಘಾತವೊಂದು ಎದುರಾಗಿದೆ. ತಂಡದ ಸ್ಟಾರ್ ವೇಗಿ ಆಗಿರುವ ಬಾಂಗ್ಲಾದೇಶದ ಮುಸ್ತಫಿಜುರ್ ರೆಹಮಾನ್(Mustafizur Rahman) ದಿಢೀರ್ ತಂಡ ತೊರೆದು ತವರಿಗೆ ಮರಳಿದ್ದಾರೆ. ಹೀಗಾಗಿ ಅವರು ಈ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆ ಇದೆ.
ಇದೇ ಜೂನ್ 1ರಿಂದ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ಗಾಗಿ(T20 World Cup 2024) ವೀಸಾ ಪಡೆಯುವ ಸಂಬಂಧಿಸಿದ ಕೆಲಸಕ್ಕಾಗಿ ರೆಹಮಾನ್ ತಮ್ಮ ತವರು ಬಾಂಗ್ಲಾದೇಶಕ್ಕೆ ಮರಳಿದ್ದಾರೆ. ವೀಸಾ ಪಡೆದ ಬಳಿಕ ಮತ್ತೆ ಚೆನ್ನೈ ತಂಡ ಸೇರಲಿದ್ದಾರೆ. ಆದರೆ ಅವರ ಆಗಮನದ ಸ್ಪಷ್ಟ ದಿನಾಂಕ ಇನ್ನಷ್ಟೇ ತಿಳಿಯಬೇಕಿದೆ. ಮೂಲಗಳ ಪ್ರಕಾರ ಏಪ್ರಿಲ್ 14 ರೊಳಗೆ ಹಿಂತಿರುಗಲಿದ್ದಾರೆ ಎನ್ನಲಾಗಿದೆ.
ಈ ಬಾರಿಯ ಐಪಿಎಲ್(IPL 2024) ಟೂರ್ನಿಯಲ್ಲಿ ಮುಸ್ತಫಿಜುರ್ ಒಟ್ಟು ಆಡಿದ ಮೂರು ಪಂದ್ಯಗಳ ಪೈಕಿ 7 ವಿಕೆಟ್ ಕಬಳಿಸಿ ಅತ್ಯಧಿಕ ವಿಕೆಟ್ ಟೇಕರ್ ಬೌಲರ್ಗಳ ಪಟ್ಟಿಯಲ್ಲಿ ಸದ್ಯ ಅಗ್ರಸ್ಥಾನ ಪಡೆದಿದ್ದಾರೆ. ಮುಂದಿನ ಕೆಲ ಪಂದ್ಯಕ್ಕೆ ಅಲಭ್ಯರಾಗಿರುವ ಕಾರಣ ಅವರ ವಿಕೆಟ್ ಬೇಟೆಗೆ ಹಿನ್ನಡೆಯಾಗಿ ಪರಿಣಮಿಸಲಿದೆ. ಸದ್ಯ ಚೆನ್ನೈ ಆಡಿದ ಮೂರು ಪಂದ್ಯಗಳಲ್ಲಿ 2 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ 4 ಅಂಕದೊಂದಿಗೆ ಮೂರನೇ ಸ್ಥಾನಿಯಾಗಿದೆ. ಕಳೆದ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಸೋಲು ಕಂಡಿತ್ತು.
ಇದನ್ನೂ ಓದಿ IPL 2024: ಮಯಾಂಕ್ ಬೆಂಕಿ ಎಸೆತಕ್ಕೆ ಚಿಲ್ಲಿಯಾದ ‘ಗ್ರೀನ್’; ವಿಡಿಯೊ ವೈರಲ್
Mustafizur Rahman unavailable for the match against SRH. He has flown back to Bangladesh for the USA Visa process. (Cricbuzz). pic.twitter.com/rXyyo2F4a3
— Mufaddal Vohra (@mufaddal_vohra) April 3, 2024
ಟಿ20 ವಿಶ್ವಕಪ್ ಟೂರ್ನಿ ಯಾವಾಗ ಆರಂಭ?
ಟಿ20 ವಿಶ್ವಕಪ್ ಟೂರ್ನಿ ಜೂನ್ 1ರಿಂದ ಆರಂಭಗೊಂಡು 29ರ ತನಕ ನಡೆಯಲಿದೆ. ಒಟ್ಟು 55 ಪಂದ್ಯಗಳು ಇರಲಿದ್ದು 20 ತಂಡಗಳು ಕಣಕ್ಕಿಳಿಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ವಿಶ್ವಕಪ್ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ.
ಭಾರತದ ಪಂದ್ಯಗಳು
ದಿನಾಂಕ | ಎದುರಾಳಿ | ಸ್ಥಳ |
ಜೂನ್ 5 | ಐರ್ಲೆಂಡ್ | ನ್ಯೂಯಾರ್ಕ್ |
ಜೂನ್ 9 | ಪಾಕಿಸ್ತಾನ | ನ್ಯೂಯಾರ್ಕ್ |
ಜೂನ್ 12 | ಅಮೆರಿಕ | ನ್ಯೂಯಾರ್ಕ್ |
ಜೂನ್ 15 | ಕೆನಡಾ | ಫ್ಲೋರಿಡಾ |
ಮೊದಲ ಸುತ್ತಿನ ಇತರ ಪಂದ್ಯಗಳು
ದಿನಾಂಕ | ಪಂದ್ಯ | ಸ್ಥಳ |
ಜೂನ್ 3 | ಶ್ರೀಲಂಕಾ-ದಕ್ಷಿಣ ಆಫ್ರಿಕಾ | ನ್ಯೂಯಾರ್ಕ್ |
ಜೂನ್ 7 | ನ್ಯೂಜಿಲ್ಯಾಂಡ್-ಅಫಘಾನಿಸ್ತಾನ | ಗಯಾನ |
ಜೂನ್ 7 | ಶ್ರೀಲಂಕಾ-ಬಾಂಗ್ಲಾದೇಶ | ಡಲ್ಲಾಸ್ |
ಜೂನ್ 8 | ಆಸ್ಟ್ರೇಲಿಯಾ-ಇಂಗ್ಲೆಂಡ್ | ಬಾರ್ಬಡೋಸ್ |
ಜೂನ್ 10 | ದಕ್ಷಿಣ ಆಫ್ರಿಕಾ-ಬಾಂಗ್ಲಾದೇಶ | ನ್ಯೂಯಾರ್ಕ್ |
ಜೂನ್ 12 | ವೆಸ್ಟ್ ಇಂಡೀಸ್-ನ್ಯೂಜಿಲ್ಯಾಂಡ್ | ನ್ಯೂಯಾರ್ಕ್ |
ಜೂನ್ 15 | ಆಸ್ಟ್ರೇಲಿಯಾ-ಸ್ಕಾಟ್ಲೆಂಡ್ | ಸೇಂಟ್ ಲೂಸಿಯಾ |
ಜೂನ್ 17 | ವೆಸ್ಟ್ ಇಂಡೀಸ್-ಅಫಘಾನಿಸ್ತಾನ | ಸೇಂಟ್ ಲೂಸಿಯಾ |
ನಾಕೌಟ್ ಪಂದ್ಯಗಳ ವೇಳಾಪಟ್ಟಿ
ದಿನಾಂಕ | ಪಂದ್ಯ | ಸ್ಥಳ |
ಜೂನ್ 26 | ಮೊದಲ ಸೆಮಿಫೈನಲ್ | ಗಯಾನ |
ಜೂನ್ 27 | ದ್ವಿತೀಯ ಸೆಮಿಫೈನಲ್ | ಟ್ರಿನಿಡಾಡ್ |
ಜೂನ್ 29 | ಫೈನಲ್ | ಬಾರ್ಬಡೋಸ್ |
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ಕೊಡಗು
Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ
Kodagu News : ಈ ಬಾರಿ ಮುದ್ದಂಡ ಕುಟುಂಬಕ್ಕೆ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಜವಬ್ದಾರಿ ಹೆಗಲೇರಿದ್ದು ಪಂದ್ಯಾವಳಿಯಲ್ಲಿ ಅಚ್ಚುಕಟ್ಟಾಗಿ ಆಯೋಜಿಸುವ ಗುರಿ ಹೊಂದಿದ್ದು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ 25ನೇ ವರ್ಷದ ಪಂದ್ಯಾವಳಿ ಅಯೋಜಿಸಲಾಗಿದೆ.
ಕೊಡಗು: 25ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೆಬ್ ಸೈಟ್ ಲೋಕಾರ್ಪಣೆ ಕಾರ್ಯಕ್ರಮ ಮಡಿಕೇರಿ ಹೊರ ವಲಯದ ಖಾಸಗಿ ರೆಸಾರ್ಟ್ ನಲ್ಲಿ (Kodagu News ) ನಡೆಯಿತು. ಪ್ರತಿ ವರ್ಷ ಕೂಡ ಒಂದೊಂದು ಕುಟುಂಬಗಳು ಪಂದ್ಯಾಟ ಆಯೋಜಿಸುವ ಜವಬ್ದಾರಿ ಹೊತ್ತುಕೊಳ್ಳುತ್ತೆ. ಈ ಬಾರಿ ಮುದ್ದಂಡ ಕುಟುಂಬಕ್ಕೆ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಜವಬ್ದಾರಿ ಹೆಗಲೇರಿದ್ದು ಪಂದ್ಯಾವಳಿಯಲ್ಲಿ ಅಚ್ಚುಕಟ್ಟಾಗಿ ಆಯೋಜಿಸುವ ಗುರಿ ಹೊಂದಿದ್ದು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ 25ನೇ ವರ್ಷದ ಪಂದ್ಯಾವಳಿ ಅಯೋಜಿಸಲಾಗಿದೆ.
ಮೊದಲಿಗೆ ದೀಪ ಬೆಳಗುವ ಮೂಲಕ ಗಣ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ 2025 ನೇ ಮುದಂಡ ಕ್ರಿಕೇಟ್ ಪಂದ್ಯಾವಳಿಯ ವೆಬ್ ಸೈಟ್ ಲಾಂಚ್ ಮಾಡಿದ್ದು ಎಲ್ಲಾ ರೀತಿಯ ಮಾಹಿತಿಯನ್ನ ವೆಬ್ ಸೈಟ್ ನಲ್ಲಿ ಪಡೆದುಕೊಳ್ಳಬಹುದಾಗಿದೆ.
ಹಾಕಿ ಪಂದ್ಯಾವಳಿಯ ಗೌರವ ಅಧ್ಯಕ್ಷರಾದ ಎಂಬಿ ದೇವಯ್ಯ ಮಾತನಾಡಿ ಮುದ್ದಂಡ ಕುಟುಂಬದ ಹಿರಿಯರು ಹಾಕಿ ಅಕಾಡೆಮಿ ಸಹಕಾರದಲ್ಲಿ ಈ ಬಾರಿ ಹಾಕಿ ಉತ್ಸವವನ್ನು ಯಶಸ್ವಿಯಾಗಿ ನಡೆಸಲು ನಿರ್ಧರಿಸಿದ್ದೇವೆ. ಈಗಾಗಲೇ ಸಮಿತಿಯನ್ನು ರಚನೆ ಮಾಡಿದ್ದೇವೆ. ಕೆಲಸಗಳನ್ನು ಆರಂಭಿಸಿದ್ದು, ಎಲ್ಲರು ಸಹಕಾರ ನೀಡುವಂತೆ ಮನವಿ ಮಾಡಿದರು. 25ನೇ ವರ್ಷದ ಕಾರ್ಯಕ್ರಮ ಆಯೋಜನೆಗೆ ನಮಗೆ ಸಿಕ್ಕಿರೋದು ಬಹಳ ಸಂತೋಷವಿದ್ದು ಎಲ್ಲವನ್ನು ಅಚ್ಚುಕಟ್ಟಾಗಿ ಮಾಡುವ ಗುರಿ ಹೊಂದಿದೆ.
ಕಾರ್ಯಕ್ರಮದಲ್ಲಿ ಕೊಡಗು ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಬೋಪಣ್ಣ, ಸ್ಥಳೀಯ ದಿನಪತ್ರಿಕೆ ಪ್ರಧಾನ ಸಂಪಾದಕರಾದ ಜಿ. ರಾಜೇಂದ್ರ,ಉಳ್ಳಿಯಡ ಪೂವಯ್ಯ, ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ,ಮುದ್ದಂಡ ಸ್ಪೋರ್ಟ್ಸ್ ಅ್ಯಂಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುದ್ದಂಡ ರಶಿತ್ ಸುಬ್ಬಯ್ಯ,
ಅತಿಥಿಗಳಾಗಿ ಕುಟುಂಬದ ಪಟ್ಟೆದಾರ ಡಾಲಿ ತಿಮ್ಮಯ್ಯ, ಡೀನ್ ಬೋಪಣ್ಣ, ಉಪಾಧ್ಯಕ್ಷ ಅಶೋಕ್, ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ,ಆದ್ಯ ಪೊನ್ನಣ್ಣ ,ರಂಜಿತ್ ಪೊನ್ನಪ್ಪ, ಚಂಗಪ್ಪ, ದಿವ್ಯ ಪ್ರಮುಖರು ಇದ್ದರು
ಬೆಂಗಳೂರು
KVS Sports Meet : 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟ; ಫೈನಲ್ ಮ್ಯಾಚ್ ಗೆದ್ದ ಕೊಲ್ಕತ್ತಾ ರೀಜನ್ ಶಾಲೆ ಮಕ್ಕಳು
ಬೆಂಗಳೂರಿನ ಯಲಹಂಕದ ಕೇಂದ್ರೀಯ ವಿದ್ಯಾಲಯ ಆರ್‌ಡಬ್ಲ್ಯೂ ಎಫ್‌ನಲ್ಲಿ 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟ 2024-25ರ (KVS Sports Meet) ಮುಕ್ತಾಯಗೊಂಡಿದೆ. ಬಾಲಕರ ರೋಚಕ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೊಲ್ಕತ್ತಾ ರೀಜನ್ ಶಾಲೆ ಮಕ್ಕಳು ಮೊದಲ ಸ್ಥಾನ ಗಳಿಸಿದ್ದಾರೆ.
ಬೆಂಗಳೂರು: ಬೆಂಗಳೂರಿನ ಯಲಹಂಕ ಕೇಂದ್ರೀಯ ವಿದ್ಯಾಲಯದಲ್ಲಿ ಸೆ. 30 ರಿಂದ ಅ. 6 ರವರೆಗೆ 53ನೇ ರಾಷ್ಟ್ರೀಯ ಕ್ರೀಡಾಕೂಟ ನಡೆಸಲಾಯಿತು. ಕ್ರೀಡೆಯಲ್ಲಿ ಹಲವಾರು ಆಟಗಳಿವೆ. ಅದರಲ್ಲಿ ಕ್ರಿಕೆಟ್ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ದೇಶದ ನಾನಾ ರಾಜ್ಯಗಳಿಂದ ಅಂದರೆ ಒಟ್ಟು 18 ರಾಜ್ಯಗಳಿಂದ ಮಕ್ಕಳು ಕ್ರಿಕೆಟ್ ಆಡಲು ಕೆ .ವಿ .ಆರ್ ಡಬ್ಲ್ಯೂ ಎಫ್‌ಗೆ ಬಂದಿದ್ದರು. ಒಟ್ಟು 269 ಶಾಲೆಯ ಮಕ್ಕಳು ನಾಲ್ಕು ವಿವಿಧ ಆಟದ ಮೈದಾನದಲ್ಲಿ ತಮ್ಮ ಉತ್ತಮ ಪ್ರದರ್ಶನವನ್ನು ಪ್ರದರ್ಶಿಸಿದರು. ಅ.6 ರಂದು ಫೈನಲ್ ಮ್ಯಾಚ್ ನಡೆಸಲಾಯಿತು.
ಪ್ರಥಮ ಸ್ಥಾನವನ್ನು ಕೊಲ್ಕತ್ತಾ ರೀಜನ್ ಶಾಲೆ ಮಕ್ಕಳು ಮತ್ತು ದ್ವಿತೀಯ ಸ್ಥಾನವನ್ನು ಜಬಲ್ ಪುರ್ ರೀಜನ್ ಶಾಲೆ ಮಕ್ಕಳು ಗಳಿಸಿಕೊಂಡರು. ನಂತರ ಶಾಲೆ ಆವರಣದಲ್ಲಿ ಮಧ್ಯಾಹ್ನ 12 ಗಂಟೆಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಾ ಪಿ. ದೇವಕುಮಾರ್(ಜಂಟಿ ಆಯುಕ್ತ ಕೆ ವಿ ಎಸ್ ಪ್ರಧಾನ ಕಛೇರಿ) ಹಾಗೂ ವಿಶೇಷ ಅತಿಥಿಗಳಾಗಿ ಧರ್ಮೇಂದ್ರ ಪಟ್ಲೆ. (ಉಪ ಆಯುಕ್ತ ಕೆ ವಿ ಎಸ್ ಬೆಂಗಳೂರು), ಆರ್ ಪ್ರಮೋದ್.(ಸಹಾಯಕ ಆಯುಕ್ತ ಕೆ ವಿ ಎಸ್ ಬೆಂಗಳೂರು), ಹೇಮಾ ಕೆ( ಸಹಾಯಕ ಆಯುಕ್ತ ) ಆಗಮಿಸಿದ್ದರು.
ಅತಿಥಿಗಳಿಗೆ ಶಾಲೆಯ ವರ್ಣ ರಂಜಿತಾ NCC ಬ್ಯಾಂಡ್ ತಂಡದ ಮಕ್ಕಳು ಸ್ವಾಗತ ಕೋರಿದರು. ಗಾಯನ ತಂಡದಿಂದ ಸ್ವಾಗತ ಗಾಯನವನ್ನು ಹಾಡಿದರು ನಂತರ ಸ್ವಾಗತ ಭಾಷಣವನ್ನು ಧರ್ಮೇಂದ್ರ ಪಟ್ಲೆ ಮಾಡಿದರು. ನೃತ್ಯ ತಂಡದಿಂದ ಮಕ್ಕಳು ಸ್ವಾಗತ ನೃತ್ಯವನ್ನು ಮಾಡಿದರು.
ಬೆಂಗಳೂರು
KVS Sports Meet : 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ; ಮೈದಾನದಲ್ಲಿ ಬಾಲಕರ ರೋಚಕ ಕ್ರಿಕೆಟ್
KVS Sports Meet : 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗಿದ್ದು, ಮೊದಲ ದಿನವೇ ಮೈದಾನದಲ್ಲಿ ಬಾಲಕರ ಕ್ರಿಕೆಟ್ ರೋಚಕವಾಗಿತ್ತು.
ಬೆಂಗಳೂರು: 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟ 2024-25ಕ್ಕೆ (KVS Sports Meet) ಸೋಮವಾರ ಬೆಂಗಳೂರಿನ ಯಲಹಂಕದ ಕೇಂದ್ರೀಯ ವಿದ್ಯಾಲಯ ಆರ್‌ಡಬ್ಲ್ಯೂ ಎಫ್‌ನಲ್ಲಿ ಚಾಲನೆ ನೀಡಲಾಯಿತು. 14 ವರ್ಷದೊಳಗಿನ ಬಾಲಕರ ವಿಭಾಗದ ಕ್ರಿಕೆಟ್ ರೋಚಕವಾಗಿತ್ತು. ಮುಖ್ಯ ಅತಿಥಿಯಾಗಿ ಕೆವಿಎಸ್ ಉಪ ಆಯುಕ್ತರು ಡಾ.ಧರ್ಮೇಂದ್ರ ಪಟ್ಲೆ, ಸಹಾಯಕ ಆಯುಕ್ತ ಆರ್ ಪ್ರಮೋದ್ ಸೇರಿ ಇತರರು ಭಾಗಿಯಾಗಿದ್ದರು.
ಇದೇ ವೇಳೆ ಕೆ.ವಿ.ಎಸ್ ಧ್ವಜಾರೋಹಣವನ್ನು ಮುಖ್ಯ ಅತಿಥಿಗಳು ನೆರವೇರಿಸಿದರು. ಪಾತ್ರ ಮತ್ತು ನಾಯಕತ್ವ ಎರಡನ್ನೂ ಅಭಿವೃದ್ಧಿಪಡಿಸುವಲ್ಲಿ ಕ್ರೀಡೆಯ ಮಹತ್ವವನ್ನು ಎತ್ತಿ ತೋರಿಸಿದರು. ಆಟಗಾರರನ್ನು ಹುಮ್ಮಸ್ಸಿನಿಂದ ಸ್ಪರ್ಧಿಸಲು ಪ್ರೋತ್ಸಾಹಿಸಿದರು. ಮುಂಬರುವ ದಿನಗಳಲ್ಲಿ ರೋಚಕ ಕ್ರಿಕೆಟ್ ಪಂದ್ಯಗಳನ್ನು ನೋಡುವ ನಿರೀಕ್ಷೆಯಿದೆ, ಏಕೆಂದರೆ ಭಾಗವಹಿಸುವವರು ತಮ್ಮ ಅತ್ಯುತ್ತಮ ಪ್ರದರ್ಶನವನ್ನು ಮೈದಾನಕ್ಕೆ ತರುತ್ತಾರೆ ಎಂದು ಅಭಿಪ್ರಾಯಪಟ್ಟರು.
ವೈರಲ್ ನ್ಯೂಸ್
Deepfake Video: ಶುಬ್ ಮನ್ ಗಿಲ್ ಅನ್ನು ದೂಷಿಸಿದ ವಿರಾಟ್; ಡೀಪ್ ಫೇಕ್ ವಿಡಿಯೋ ವೈರಲ್
ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿರಾಟ್ ಕೊಹ್ಲಿಯ ಡೀಪ್ ಫೇಕ್ ವಿಡಿಯೋದಲ್ಲಿ (Deepfake Video) ಶುಬ್‌ಮನ್ ಗಿಲ್ ಅವರನ್ನು ದೂಷಿಸುತ್ತಿದ್ದಾರೆ. ಶುಬ್ ಮನ್ ಗಿಲ್‌ಗೆ ಏನು ಕೊರತೆಯಿದೆ ಮತ್ತು ಅವರು ಇನ್ನು ಎಷ್ಟು ದೂರ ಹೋಗಬೇಕಾಗಿದೆ ಎಂಬುದರ ಕುರಿತು ಹೇಳಿದ್ದಾರೆ.
ಭಾರತೀಯ ಕ್ರಿಕೆಟ್ ತಂಡದ ಬ್ಯಾಟ್ಸ್ ಮ್ಯಾನ್ (Indian cricket team batsman) ಶುಬ್ ಮನ್ ಗಿಲ್ (Shubman Gill) ಅವರನ್ನು ವಿರಾಟ್ ಕೊಹ್ಲಿ (Virat Kohli) ದೂಷಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (social food) ಭಾರಿ ವೈರಲ್ ಆಗಿದೆ. ಆದರೆ ಇದು ಡೀಪ್ ಫೇಕ್ ವಿಡಿಯೋ (Deepfake Video) ಎನ್ನಲಾಗಿದ್ದರೂ ಇದು ಸಾಕಷ್ಟು ನೆಟ್ಟಿಗರ ಗಮನ ಸೆಳೆದಿದೆ.
ವಿರಾಟ್ ಕೊಹ್ಲಿಯು ಈ ಡೀಪ್ ಫೇಕ್ ವಿಡಿಯೋದಲ್ಲಿ ಶುಬ್‌ಮನ್ ಗಿಲ್ ಅವರನ್ನು ದೂಷಿಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿಯು ಮಾತನಾಡುತ್ತಾ, ಶುಬ್ ಮನ್ ಗಿಲ್‌ಗೆ ಏನು ಕೊರತೆಯಿದೆ ಮತ್ತು ಅವರು ಇನ್ನು ಎಷ್ಟು ದೂರ ಹೋಗಬೇಕಾಗಿದೆ ಎಂಬುದರ ಕುರಿತು ಹೇಳಿದ್ದಾರೆ.
ವೈರಲ್ ಆಗಿರುವ ಈ ವಿಡಿಯೋ ಕೃತಕ ಬುದ್ಧಿಮತ್ತೆಯ ತಪ್ಪು ಬಳಕೆ ಮತ್ತು ಅದು ಹೇಗೆ ಅಪಾಯಕಾರಿ ಎಂಬುದರ ಕುರಿತು ಕಳವಳ ವ್ಯಕ್ತಪಡಿಸಿದೆ.
ಸಾಮಾಜಿಕ ಮಾಧ್ಯಮದಲ್ಲಿ ಗಮನಾರ್ಹ ಗಮನ ಸೆಳೆದಿರುವ ಎಡಿಟ್ ಮಾಡಿದ ವಿಡಿಯೋದಲ್ಲಿ ಕೊಹ್ಲಿಯು, ನಾನು ಗಿಲ್ ಅವರನ್ನು ಹತ್ತಿರದಿಂದ ನೋಡುತ್ತಿದ್ದೇನೆ. ಅವರು ನಿಸ್ಸಂದೇಹವಾಗಿ ಪ್ರತಿಭಾವಂತರು. ಆದರೆ ಭರವಸೆಯನ್ನು ತೋರಿಸುವುದು ಮತ್ತು ದಂತಕಥೆಯಾಗುವುದರ ನಡುವೆ ದೊಡ್ಡ ಅಂತರವಿದೆ ಎಂದು ಹೇಳಿದ್ದಾರೆ.
AI is Dangerous pic.twitter.com/njUvwiwc4t
— Cricketopia (@CricketopiaCom) August 27, 2024
ಇದಲ್ಲದೆ, ಎಡಿಟ್ ಮಾಡಿರುವ ವಿಡಿಯೋದಲ್ಲಿ ನಾಯಕ ಗಿಲ್ ಅವರ ತಂತ್ರದ ಬಗ್ಗೆ ಕೊಹ್ಲಿ ಮಾತನಾಡುವುದನ್ನು ಕಾಣಬಹುದು. ಗಿಲ್ ಅವರ ತಂತ್ರವು ಘನವಾಗಿದೆ. ಆದರೆ ನಾವೇ ಮುಂದೆ ಹೋಗಬಾರದು. ಜನರು ಮುಂದಿನ ವಿರಾಟ್ ಕೊಹ್ಲಿ ಬಗ್ಗೆ ಮಾತನಾಡುತ್ತಾರೆ. ಆದರೆ ನಾನು ಸ್ಪಷ್ಟವಾಗಿ ಹೇಳುತ್ತೇನೆ.. ಒಬ್ಬನೇ ವಿರಾಟ್ ಕೊಹ್ಲಿ.
ಈ ವಿಡಿಯೋವನ್ನು ಆಗಸ್ಟ್ 27 ರಂದು ಹಂಚಿಕೊಳ್ಳಲಾಗಿದೆ. ಪೋಸ್ಟ್ ಮಾಡಿದ ಅನಂತರ ಇದು ಮೂರು ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಸುಮಾರು 4,000 ಹೆಚ್ಚು ಲೈಕ್‌ಗಳನ್ನು ಹೊಂದಿದೆ. ಅನೇಕ ಜನರು ಪೋಸ್ಟ್‌ನ ಕಾಮೆಂಟ್‌ಗಳ ವಿಭಾಗದಲ್ಲಿ ತಮ್ಮ ಪ್ರತಿಕ್ರಿಯೆಯನ್ನೂ ನೀಡಿದ್ದಾರೆ.
ಇದನ್ನೂ ಓದಿ: Duleep Trophy: ದುಲೀಪ್ ಟ್ರೋಫಿಯಿಂದ ಹೊರಬಿದ್ದ ಮೊಹಮ್ಮದ್ ಸಿರಾಜ್
ಒಬ್ಬ ಬಳಕೆದಾರ, ಜನರು ಎಷ್ಟೇ ಸೊಕ್ಕಿನವರಾಗಿರಬಹುದು ಆದರೆ ಅವರು ಇದನ್ನು ಎಂದಿಗೂ ಹೇಳುವುದಿಲ್ಲ ಎಂದಿದ್ದಾರೆ. ಇನ್ನೊಬ್ಬರು , ನೀವು ಎಐ ಎಂದು ಹೇಳದಿದ್ದರೆ, ನಾನು ಶೇ. 95ರಷ್ಟು ನಂಬುತ್ತಿದ್ದೆ ಎಂದಿದ್ದಾರೆ.
ನಾನು ಅರೆ ನಿದ್ದೆಯಲ್ಲಿದ್ದೇನೆ ಮತ್ತು ವಿರಾಟ್ ಈ ರೀತಿ ಮಾತನಾಡುವುದಿಲ್ಲ ಮತ್ತು ಇದು ಅವರ ಧ್ವನಿಯೂ ಅಲ್ಲ ಎಂದು ನನಗೆ ಇನ್ನೂ ತಿಳಿದಿದೆ ಎಂದು ಇನ್ನೊಬ್ಬರು ಕಾಮೆಂಟ್ ಮಾಡಿದ್ದಾರೆ.