ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ - Vistara News

ಅವಿಭಾಗೀಕೃತ

ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

VISTARANEWS.COM


on

Rakshit Shetty Richard Anthony Produce By Hombale
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ರಾಜ್ಯದೆಲ್ಲೆಡೆ ಬಿಸಿಲ ಬೇಗ ತಾರಕಕ್ಕೇರಿದೆ. ಮಳೆ ಸಿಂಚನಕ್ಕಾಗಿ ಕಾದು ಕುಳಿತ ಜನತೆಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಶನಿವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರೊಂದಿಗೆ 4 ಜಿಲ್ಲೆಗಳಿಗೆ ಇಲಾಖೆ ಆರೆಂಜ್ ಅಲರ್ಟ್​ ಘೋಷಿಸಿದೆ.

ಇದರ ಬೆನ್ನಲ್ಲೇ ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಅಲೆ (ಹೀಟ್​ವೇವ್) ಅಲರ್ಟ್​ ಘೋಷಿಸಿದೆ. ಅದರ ಜೊತೆಗೆ ಗುಡುಗು ಸಹಿತ ಗಾಳಿ-ಮಳೆಯಾಗುವ ಸಂಭವವೂ ಇದೆ ಎಂದು ಇಲಾಖೆ ತಿಳಿಸಿದೆ.


ಮುಂದಿನ 5 ದಿನದವರೆಗೂ ಕರಾವಳಿಯಲ್ಲಿ ಇದೇ ರೀತಿಯ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಮುಂಬರುವ ದಿನಗಳಲ್ಲಿ ರಾಜ್ಯದ ಹಲವೆಡೆ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ ಮುಟ್ಟುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಬಿಸಿಲಲ್ಲಿ ಓಡಾಡಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.



ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಅವಿಭಾಗೀಕೃತ

ರಾಮಲಿಂಗಾರೆಡ್ಡಿ ರಾಜೀನಾಮೆ ಕಗ್ಗಂಟಿಗೆ ತೆರೆ? ಸುರ್ಜೇವಾಲಾ ಮಾತುಕತೆ ಯಶಸ್ವಿ?

VISTARANEWS.COM


on

ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಕಗ್ಗಂಟ್ಟಿಗೆ ತೆರೆ ಎಳೆಯುವಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಸಕಸ್ಸ್‌ ಆದಂತೆ ಕಾಣಿಸುತ್ತಿದೆ. ನಿನ್ನೆ ರಾತ್ರಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ರಾಮಲಿಂಗಾರೆಡ್ಡಿ ಅವರ ಜೊತೆ ಮಾತುಕತೆ ನಡೆಸಿದ್ದರು. ಇಂದು ಬೆಳಗ್ಗೆ ನಗರದ ತಾಜ್‌ ಹೋಟೆಲ್‌ನಲ್ಲಿ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣ್‌ದೀಪ್‌ ಸಿಂಗ್‌ ಸುರ್ಜೇವಾಲಾ ಅವರು ರಾಮಲಿಂಗಾರೆಡ್ಡಿ ಜೊತೆ ಚರ್ಚೆ ನಡೆಸಿದರು.

ಈ ವೇಳೆ ರಾಮಲಿಂಗಾರೆಡ್ಡಿ ಸಲ್ಲಿಸಿರುವ ರಾಜೀನಾಮೆಯನ್ನು ಅಂಗೀಕರಿಸುವ ಪ್ರಶ್ನೆಯೇ ಇಲ್ಲ ಎಂದು ಸುರ್ಜೇವಾಲಾ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಅವರು ಸಚಿವ ಸಂಪುಟದಲ್ಲೇ ಮುಂದುವರಿಯಬೇಕು ಎಂಬ ಸಂದೇಶವನ್ನೂ ನೀಡಿದ್ದಾರೆ ಎನ್ನಲಾಗಿದೆ.

ಇದರಿಂದ ರಾಮಲಿಂಗಾರೆಡ್ಡಿ ಸಚಿವ ಸಂಪುಟದಲ್ಲಿ ಮುಂದುವರಿಯುವುದು ಬಹುತೇಕ ಖಚಿತ ಎಂಬ ಮಾತು ಕೇಳಿಬರುತ್ತಿದೆ.

ಸಿದ್ದರಾಮಯ್ಯ ಸರ್ಕಾರದಲ್ಲಿ ಸಾರಿಗೆ ಮತ್ತು ಮುಜರಾಯಿ ಖಾತೆ ಸಚಿವರಾಗಿದ್ದ ರಾಮಲಿಂಗಾರೆಡ್ಡಿ ಅವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಕ್ಯಾಬಿನೆಟ್‌ನಲ್ಲಿ ಜಲಸಂಪನ್ಮೂಲ ಖಾತೆ ನೀಡಲಾಗಿತ್ತು. ಬೆಂಗಳೂರು ಅಭಿವೃದ್ಧಿ ಖಾತೆಗೆ ಪಟ್ಟು ಹಿಡಿದಿದ್ದ ರಾಮಲಿಂಗಾರೆಡ್ಡಿ, ಆ ಖಾತೆ ಸಿಗದಿದ್ದಕ್ಕೆ ಬೇಸರಗೊಂಡು ಶುಕ್ರವಾರ (ಜೂ.5) ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Continue Reading

Latest

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

VISTARANEWS.COM


on

ಇಂದು ಬಿಜಿಎಸ್‌ ಹೆಲ್ತ್‌ ಮತ್ತು ಎಜುಕೇಶನ್‌ ಸಿಟಿಯಲ್ಲಿ ನಡೆದ ಎಸ್‌ಜೆಬಿ ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಕಾಲೇಜಿನ ವಿದ್ಯಾರ್ಥಿಗಳು ಆಯೋಜಿಸಿದ್ದ ವರ್ಚಸ್ವ ಫ್ಲ್ಯಾಶ್‌ ಮಾಬ್‌ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು.

ಬಿಜಿಎಸ್‌ ಮತ್ತು ಎಸ್‌ಜೆಬಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ, ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಬಿಜಿಎಸ್‌ ಮತ್ತು ಎಸ್‌ಜೆಬಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಅವರಿಗೆ ಗೌರವ ಸೂಚಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು ಸೇರಿದಂತೆ ಬಿಜಿಎಸ್‌ ಮತ್ತು ಎಸ್‌ಜೆಬಿ ಸಮೂಹ ಸಂಸ್ಥೆಗಳ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಫ್ಲ್ಯಾಶ್‌ ಮಾಬ್‌ ಪ್ರದರ್ಶಿಸಿದರು.

ವರ್ಚಸ್ವ ಫ್ಲ್ಯಾಶ್‌ ಮಾಬ್‌ ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರತಿಭೆ, ಉತ್ಸಾಹ ಮತ್ತು ಸಾಂಸ್ಕೃತಿಕ ಸೌಹಾರ್ದತೆಯ ಪ್ರತಿಬಿಂಬವಾಗಿದ್ದು, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

Continue Reading

ಅವಿಭಾಗೀಕೃತ

ಬೆಂಗಳೂರಿಗೆ ʼಆರನೇ ಗ್ಯಾರಂಟಿʼ – ʼನನ್ನ ಖಾತೆ ನನ್ನ ಹಕ್ಕುʼ

VISTARANEWS.COM


on

ಬೆಂಗಳೂರು ನಗರದಲ್ಲಿ ಆಸ್ತಿ ದಾಖಲೆಗಳನ್ನು ಪಾರದರ್ಶಕ ಹಾಗೂ ಸುರಕ್ಷಿತಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ “ನನ್ನ ಖಾತೆ ನನ್ನ ಹಕ್ಕು” ಅಭಿಯಾನ ಆರಂಭಿಸಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಈ ಯೋಜನೆಯನ್ನು “ಬೆಂಗಳೂರು ನಗರದ ಆರನೇ ಗ್ಯಾರಂಟಿ – ಭೂ ಗ್ಯಾರಂಟಿ” ಎಂದು ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನನ್ನ ಖಾತೆ ನನ್ನ ಹಕ್ಕು ಅಭಿಯಾನದ ಘೋಷಣೆ ಮಾಡಿದರು. ಈ ಸುದ್ದಿಗೋಷ್ಠಿಯಲ್ಲಿ ಡಿಕೆಶಿ ಅವರ ಜೊತೆಗೆ ಸಚಿವರಾದ ಕೆ.ಜೆ.ಜಾರ್ಜ್‌, ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎನ್‌.ಎ. ಹ್ಯಾರಿಸ್‌, ನಗರಾಭಿವೃದ್ಧಿ ಇಲಾಖೆ ಮುಖ್ಯ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌, ಜಿಬಿಎ ಆಯುಕ್ತ ಮಹೇಶ್ವರ ರಾವ್‌ ಭಾಗವಹಿಸಿದ್ರು.

ʼಬಿʼ ಖಾತೆಯನ್ನು ʼಎʼ ಖಾತೆಗೆ ಪರಿವರ್ತಿಸಲು ಅವಕಾಶ
ಬೆಂಗಳೂರು ನಗರದ ಇತಿಹಾಸದಲ್ಲೇ ಮೊದಲ ಬಾರಿಗೆ 23 ಲಕ್ಷಕ್ಕೂ ಹೆಚ್ಚು ಮನೆಗಳು ಹಾಗೂ ಆಸ್ತಿಗಳ ದಾಖಲೆಗಳನ್ನು ಸರ್ಕಾರ ಅಧಿಕೃತವಾಗಿ ಡಿಜಿಟಲ್‌ ರೂಪದಲ್ಲಿ ಸಂಗ್ರಹಿಸಿದೆ. ಈ ಹಿಂದೆ ಅನೇಕ ಆಸ್ತಿಗಳಿಗೆ ಸ್ಪಷ್ಟ ದಾಖಲೆಗಳಿರಲಿಲ್ಲ. ಈಗ ಆಧಾರ್‌ ಕಾರ್ಡ್‌, ಮೊಬೈಲ್‌ ಸಂಖ್ಯೆ ಹಾಗೂ ಗೂಗಲ್‌ ಲೊಕೇಶನ್‌ ಆಧಾರಿತ ಮ್ಯಾಪಿಂಗ್‌ ಮೂಲಕ ಆಸ್ತಿ ವಿವರಗಳನ್ನು ಸರಿಪಡಿಸಲಾಗಿದೆ. ಇದರಿಂದ ಆಸ್ತಿ ದುರುಪಯೋಗ ತಡೆಯಲು ಸಹಾಯವಾಗಲಿದೆ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದರು. ಬೆಂಗಳೂರಿನಲ್ಲಿ ಸುಮಾರು 16 ಲಕ್ಷ A ಖಾತಾ ಆಸ್ತಿಗಳಿದ್ದು, ಸುಮಾರು 7 ಲಕ್ಷ B ಖಾತಾ ಆಸ್ತಿಗಳಿವೆ. B ಖಾತಾ ಆಸ್ತಿಗಳನ್ನು ಸುಲಭವಾಗಿ A ಖಾತಾಗೆ ಪರಿವರ್ತಿಸಲು ಸರ್ಕಾರ ವಿಶೇಷ ಅವಕಾಶ ನೀಡಿದೆ ಎಂದು ಮಾಹಿತಿ ನೀಡಿದರು.

ʼನನ್ನ ಖಾತೆ ನನ್ನ ಹಕ್ಕುʼ ಅಭಿಯಾನ:
ರಾಜ್ಯ ಸರ್ಕಾರ ನನ್ನ ಖಾತೆ ನನ್ನ ಹಕ್ಕು ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಮೇ.16 ರಿಂದ 3 ತಿಂಗಳ ಕಾಲ ಈ ಅಭಿಯಾನ ನಡೆಯಲಿದೆ. ಪ್ರತಿ ಶನಿವಾರ ವಿಶೇಷ ಶಿಬಿರಗಳು ನಡೆಯಲಿವೆ. ಪ್ರತಿಯೊಂದು ಪಾಲಿಕೆ ವ್ಯಾಪ್ತಿಯ 10 ಸ್ಥಳಗಳಲ್ಲಿ ಈ ಸೇವೆ ಲಭ್ಯವಾಗಲಿದೆ. ನಾಗರಿಕರು ತಮ್ಮ ಆಸ್ತಿ ದಾಖಲೆಗಳನ್ನು ಸರಿಪಡಿಸಿಕೊಳ್ಳಲು ಈ ಅವಕಾಶವನ್ನು ಬಳಸಿಕೊಳ್ಳಬಹುದು.

100 ದಿನಗಳ ಕಾಲ ಗೈಡ್ಲೈನ್ಸ್‌ ವ್ಯಾಲ್ಯೂ ನಲ್ಲಿ ಡಿಸ್ಕೌಂಟ್‌:
ಸಾಮಾನ್ಯವಾಗಿ B ಖಾತಾದಿಂದ A ಖಾತಾ ಪರಿವರ್ತನೆಗೆ ಗೈಡನ್ಸ್ ವ್ಯಾಲ್ಯೂನ 5% ಶುಲ್ಕ ವಿಧಿಸಲಾಗುತ್ತಿತ್ತು. ಆದರೆ ಮುಂದಿನ 100 ದಿನಗಳೊಳಗೆ ಅರ್ಜಿ ಸಲ್ಲಿಸಿದರೆ ಕೇವಲ 2% ಶುಲ್ಕದಲ್ಲಿ ಪರಿವರ್ತನೆ ಸಾಧ್ಯವಾಗಲಿದೆ. 100 ದಿನಗಳ ಬಳಿಕ ಮತ್ತೆ 5% ಶುಲ್ಕವೇ ಅನ್ವಯವಾಗಲಿದೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.
ಯಾವುದೇ ಮಧ್ಯವರ್ತಿಗಳ ಅವಶ್ಯಕತೆ ಇಲ್ಲದೆ, ಒಂದು ರೂಪಾಯಿ ಲಂಚ ನೀಡದೇ ಆಸ್ತಿದಾರರು ತಮ್ಮ B ಖಾತಾವನ್ನು A ಖಾತಾಗೆ ಬದಲಿಸಿಕೊಳ್ಳಬಹುದಾಗಿದೆ. ಸರ್ಕಾರ ಮನೆಬಾಗಿಲಿಗೇ ಈ ಸೇವೆಯನ್ನು ತಲುಪಿಸುವುದಾಗಿ ತಿಳಿಸಿದರು.

ಕಟ್ಟಡ ಉಲ್ಲಂಘನೆಗೆ ರಿಯಾಯಿತಿ
ನಗರದ ಜನತೆಗೆ ಮತ್ತೊಂದು ಮಹತ್ವದ ರಿಲೀಫ್ ನೀಡಿರುವ ಸರ್ಕಾರ, ಕಟ್ಟಡ ಉಲ್ಲಂಘನೆ ಮಿತಿಯನ್ನು 5%ರಿಂದ 15%ಕ್ಕೆ ಹೆಚ್ಚಿಸಿದೆ. 20×30, 30×40 ಹಾಗೂ 40×60 ನಿವೇಶನಗಳ ಮನೆಗಳಿಗೆ ಇದರಿಂದ ಹೆಚ್ಚಿನ ಅನುಕೂಲ ಸಿಗಲಿದೆ. ಇದರ ಮೂಲಕ ವಿದ್ಯುತ್‌, ನೀರು ಸೇರಿದಂತೆ ಮೂಲಭೂತ ಸೌಲಭ್ಯ ಪಡೆಯಲು ಸಹಾಯವಾಗಲಿದೆ.

ಒನ್ ಟೈಮ್ ಸೆಟ್ಲಮೆಂಟ್ (OTS)
ಅಕ್ರಮ-ಸಕ್ರಮ ಸಮಸ್ಯೆ ಪರಿಹರಿಸಲು ಸರ್ಕಾರ ಮತ್ತೆ OTS ಯೋಜನೆ ಆರಂಭಿಸುತ್ತಿದೆ. ಜೂನ್ 15ರಿಂದ ಹೊಸ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಅರ್ಜಿ ಸಲ್ಲಿಕೆಗೆ 3 ತಿಂಗಳ ಅವಧಿ ನಿಗದಿಪಡಿಸಲಾಗಿದೆ. ನಂತರದ 3 ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತದೆ. ಹಣ ಪಾವತಿಗೆ ಮತ್ತಷ್ಟು 3 ತಿಂಗಳ ಕಾಲಾವಕಾಶ ನೀಡಲಾಗಿದೆ. ಈ ಬಾರಿ ಮಾರ್ಗಸೂಚಿ ದರದ ಕೇವಲ 5% ಪಾವತಿಸಿ ಅಕ್ರಮ ಆಸ್ತಿಗಳನ್ನು ಸಕ್ರಮಗೊಳಿಸಿಕೊಳ್ಳಬಹುದು.

Continue Reading

ಅವಿಭಾಗೀಕೃತ

ಪಂಚರಾಜ್ಯ ವಿಧಾನಸಭಾ ಚುನಾವಣೆ , ಕರ್ನಾಟಕ ಉಪಚುನಾವಣೆ ಫಲಿತಾಂಶದ ಕ್ಷಣಕ್ಷಣದ ಅಪ್‌ಡೇಟ್‌

VISTARANEWS.COM


on

Rakshit Shetty Richard Anthony Produce By Hombale

Continue Reading
Advertisement
Latest6 hours ago

ಟೀಮ್‌ ಇಂಡಿಯಾಗೆ ವೈಭವ್‌ ಸೂರ್ಯವಂಶಿ ಎಂಟ್ರಿ

Latest8 hours ago

ಸಿಇಟಿ ಫಲಿತಾಂಶ ಪ್ರಕಟ

ಅವಿಭಾಗೀಕೃತ9 hours ago

ರಾಮಲಿಂಗಾರೆಡ್ಡಿ ರಾಜೀನಾಮೆ ಕಗ್ಗಂಟಿಗೆ ತೆರೆ? ಸುರ್ಜೇವಾಲಾ ಮಾತುಕತೆ ಯಶಸ್ವಿ?

Latest1 day ago

ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ – ಡಿಕೆಶಿ

Latest1 day ago

ಬಿಜೆಪಿಗೆ ರಾಜೀನಾಮೆ ಬಳಿಕ ಹೊಸ ರಾಜಕೀಯ ಚಳವಳಿ ಘೋಷಿಸಿದ ಅಣ್ಣಾಮಲೈ; ತಮಿಳುನಾಡಿನಲ್ಲಿ ಏಕಾಂಗಿ ಹೋರಾಟದ ನಿರ್ಧಾರ

Latest1 day ago

ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

Latest1 day ago

ಖಾತೆ ಹಂಚಿಕೆ ಬಗ್ಗೆ ಮುನಿಯಪ್ಪ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಜೀನಾಮೆ ಚಿಂತನೆ?

Latest1 day ago

ರಾಮಲಿಂಗಾ ರೆಡ್ಡಿ ರಾಜೀನಾಮೆ ಕಾಂಗ್ರೆಸ್ ಒಳಜಗಳದ ಪರಿಣಾಮ: ವಿಜಯೇಂದ್ರ ವಾಗ್ದಾಳಿ

Latest1 day ago

ಅಣ್ಣಾಮಲೈ ರಾಜೀನಾಮೆ ಸ್ವೀಕಾರ : ಹೊಸ ಪಕ್ಷ ಘೋಷಣೆ ಕುರಿತು ಇಂದು ಮಹತ್ವದ ಸುದ್ದಿಗೋಷ್ಠಿ

Latest1 day ago

ರಾಜ್ಯಸಭಾ ಚುನಾವಣೆಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲಿರುವ ಮಲ್ಲಿಕಾರ್ಜುನ ಖರ್ಗೆ

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌