ಹುಬ್ಬಳ್ಳಿ: ಯುವತಿಯನ್ನು ಮಾತನಾಡಿಸಿದ ಎಂಬ ಕಾರಣಕ್ಕೆ ತಂಡವೊಂದು ವಿದ್ಯಾರ್ಥಿಯನ್ನು ಅಪಹರಿಸಿ ಹಲ್ಲೆ ಮಾಡಿದೆ. ಹುಬ್ಬಳ್ಳಿಯ ಗೋಕುಲ ರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿ ಮಂಜುನಾಥನನ್ನು ನಾಲ್ವರು ಯುವಕರು ಅಪಹರಿಸಿ ಹಲ್ಲೆ ನಡೆಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶಾಪುರದ ಮಹಮ್ಮದ್ ಗೌಸ್ ಮತ್ತು ಸೊಹೇಲ್ ಎಂಬವರನ್ನು ಬಂಧಿಸಲಾಗಿದೆ. ಇನ್ನೂ ಇಬ್ಬರು ಪರಾರಿಯಾಗಿದ್ದಾರೆ. ಈ ನಾಲ್ವರು ಮಂಜುನಾಥನನ್ನು ಕುಸುಗಲ್ ರಸ್ತೆಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ಮಾಡಿದ್ದರು. ಗಾಯಾಳು ವಿದ್ಯಾರ್ಥಿ ಮಂಜುನಾಥ್ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ | Youth attacked| ಶೌಚಾಲಯಕ್ಕೆ ಹೋಗುವ ಮಹಿಳೆಯರ ವಿಡಿಯೊ ಮಾಡಿದ ಕಾಮುಕನಿಗೆ ಧರ್ಮದೇಟು