ಬೆಂಗಳೂರಿಗೆ ʼಆರನೇ ಗ್ಯಾರಂಟಿʼ - ʼನನ್ನ ಖಾತೆ ನನ್ನ ಹಕ್ಕುʼ - Vistara News

ಅವಿಭಾಗೀಕೃತ

ಬೆಂಗಳೂರಿಗೆ ʼಆರನೇ ಗ್ಯಾರಂಟಿʼ – ʼನನ್ನ ಖಾತೆ ನನ್ನ ಹಕ್ಕುʼ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು ನಗರದಲ್ಲಿ ಆಸ್ತಿ ದಾಖಲೆಗಳನ್ನು ಪಾರದರ್ಶಕ ಹಾಗೂ ಸುರಕ್ಷಿತಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ “ನನ್ನ ಖಾತೆ ನನ್ನ ಹಕ್ಕು” ಅಭಿಯಾನ ಆರಂಭಿಸಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಈ ಯೋಜನೆಯನ್ನು “ಬೆಂಗಳೂರು ನಗರದ ಆರನೇ ಗ್ಯಾರಂಟಿ – ಭೂ ಗ್ಯಾರಂಟಿ” ಎಂದು ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನನ್ನ ಖಾತೆ ನನ್ನ ಹಕ್ಕು ಅಭಿಯಾನದ ಘೋಷಣೆ ಮಾಡಿದರು. ಈ ಸುದ್ದಿಗೋಷ್ಠಿಯಲ್ಲಿ ಡಿಕೆಶಿ ಅವರ ಜೊತೆಗೆ ಸಚಿವರಾದ ಕೆ.ಜೆ.ಜಾರ್ಜ್‌, ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎನ್‌.ಎ. ಹ್ಯಾರಿಸ್‌, ನಗರಾಭಿವೃದ್ಧಿ ಇಲಾಖೆ ಮುಖ್ಯ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌, ಜಿಬಿಎ ಆಯುಕ್ತ ಮಹೇಶ್ವರ ರಾವ್‌ ಭಾಗವಹಿಸಿದ್ರು.

ʼಬಿʼ ಖಾತೆಯನ್ನು ʼಎʼ ಖಾತೆಗೆ ಪರಿವರ್ತಿಸಲು ಅವಕಾಶ
ಬೆಂಗಳೂರು ನಗರದ ಇತಿಹಾಸದಲ್ಲೇ ಮೊದಲ ಬಾರಿಗೆ 23 ಲಕ್ಷಕ್ಕೂ ಹೆಚ್ಚು ಮನೆಗಳು ಹಾಗೂ ಆಸ್ತಿಗಳ ದಾಖಲೆಗಳನ್ನು ಸರ್ಕಾರ ಅಧಿಕೃತವಾಗಿ ಡಿಜಿಟಲ್‌ ರೂಪದಲ್ಲಿ ಸಂಗ್ರಹಿಸಿದೆ. ಈ ಹಿಂದೆ ಅನೇಕ ಆಸ್ತಿಗಳಿಗೆ ಸ್ಪಷ್ಟ ದಾಖಲೆಗಳಿರಲಿಲ್ಲ. ಈಗ ಆಧಾರ್‌ ಕಾರ್ಡ್‌, ಮೊಬೈಲ್‌ ಸಂಖ್ಯೆ ಹಾಗೂ ಗೂಗಲ್‌ ಲೊಕೇಶನ್‌ ಆಧಾರಿತ ಮ್ಯಾಪಿಂಗ್‌ ಮೂಲಕ ಆಸ್ತಿ ವಿವರಗಳನ್ನು ಸರಿಪಡಿಸಲಾಗಿದೆ. ಇದರಿಂದ ಆಸ್ತಿ ದುರುಪಯೋಗ ತಡೆಯಲು ಸಹಾಯವಾಗಲಿದೆ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದರು. ಬೆಂಗಳೂರಿನಲ್ಲಿ ಸುಮಾರು 16 ಲಕ್ಷ A ಖಾತಾ ಆಸ್ತಿಗಳಿದ್ದು, ಸುಮಾರು 7 ಲಕ್ಷ B ಖಾತಾ ಆಸ್ತಿಗಳಿವೆ. B ಖಾತಾ ಆಸ್ತಿಗಳನ್ನು ಸುಲಭವಾಗಿ A ಖಾತಾಗೆ ಪರಿವರ್ತಿಸಲು ಸರ್ಕಾರ ವಿಶೇಷ ಅವಕಾಶ ನೀಡಿದೆ ಎಂದು ಮಾಹಿತಿ ನೀಡಿದರು.

ʼನನ್ನ ಖಾತೆ ನನ್ನ ಹಕ್ಕುʼ ಅಭಿಯಾನ:
ರಾಜ್ಯ ಸರ್ಕಾರ ನನ್ನ ಖಾತೆ ನನ್ನ ಹಕ್ಕು ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಮೇ.16 ರಿಂದ 3 ತಿಂಗಳ ಕಾಲ ಈ ಅಭಿಯಾನ ನಡೆಯಲಿದೆ. ಪ್ರತಿ ಶನಿವಾರ ವಿಶೇಷ ಶಿಬಿರಗಳು ನಡೆಯಲಿವೆ. ಪ್ರತಿಯೊಂದು ಪಾಲಿಕೆ ವ್ಯಾಪ್ತಿಯ 10 ಸ್ಥಳಗಳಲ್ಲಿ ಈ ಸೇವೆ ಲಭ್ಯವಾಗಲಿದೆ. ನಾಗರಿಕರು ತಮ್ಮ ಆಸ್ತಿ ದಾಖಲೆಗಳನ್ನು ಸರಿಪಡಿಸಿಕೊಳ್ಳಲು ಈ ಅವಕಾಶವನ್ನು ಬಳಸಿಕೊಳ್ಳಬಹುದು.

100 ದಿನಗಳ ಕಾಲ ಗೈಡ್ಲೈನ್ಸ್‌ ವ್ಯಾಲ್ಯೂ ನಲ್ಲಿ ಡಿಸ್ಕೌಂಟ್‌:
ಸಾಮಾನ್ಯವಾಗಿ B ಖಾತಾದಿಂದ A ಖಾತಾ ಪರಿವರ್ತನೆಗೆ ಗೈಡನ್ಸ್ ವ್ಯಾಲ್ಯೂನ 5% ಶುಲ್ಕ ವಿಧಿಸಲಾಗುತ್ತಿತ್ತು. ಆದರೆ ಮುಂದಿನ 100 ದಿನಗಳೊಳಗೆ ಅರ್ಜಿ ಸಲ್ಲಿಸಿದರೆ ಕೇವಲ 2% ಶುಲ್ಕದಲ್ಲಿ ಪರಿವರ್ತನೆ ಸಾಧ್ಯವಾಗಲಿದೆ. 100 ದಿನಗಳ ಬಳಿಕ ಮತ್ತೆ 5% ಶುಲ್ಕವೇ ಅನ್ವಯವಾಗಲಿದೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.
ಯಾವುದೇ ಮಧ್ಯವರ್ತಿಗಳ ಅವಶ್ಯಕತೆ ಇಲ್ಲದೆ, ಒಂದು ರೂಪಾಯಿ ಲಂಚ ನೀಡದೇ ಆಸ್ತಿದಾರರು ತಮ್ಮ B ಖಾತಾವನ್ನು A ಖಾತಾಗೆ ಬದಲಿಸಿಕೊಳ್ಳಬಹುದಾಗಿದೆ. ಸರ್ಕಾರ ಮನೆಬಾಗಿಲಿಗೇ ಈ ಸೇವೆಯನ್ನು ತಲುಪಿಸುವುದಾಗಿ ತಿಳಿಸಿದರು.

ಕಟ್ಟಡ ಉಲ್ಲಂಘನೆಗೆ ರಿಯಾಯಿತಿ
ನಗರದ ಜನತೆಗೆ ಮತ್ತೊಂದು ಮಹತ್ವದ ರಿಲೀಫ್ ನೀಡಿರುವ ಸರ್ಕಾರ, ಕಟ್ಟಡ ಉಲ್ಲಂಘನೆ ಮಿತಿಯನ್ನು 5%ರಿಂದ 15%ಕ್ಕೆ ಹೆಚ್ಚಿಸಿದೆ. 20×30, 30×40 ಹಾಗೂ 40×60 ನಿವೇಶನಗಳ ಮನೆಗಳಿಗೆ ಇದರಿಂದ ಹೆಚ್ಚಿನ ಅನುಕೂಲ ಸಿಗಲಿದೆ. ಇದರ ಮೂಲಕ ವಿದ್ಯುತ್‌, ನೀರು ಸೇರಿದಂತೆ ಮೂಲಭೂತ ಸೌಲಭ್ಯ ಪಡೆಯಲು ಸಹಾಯವಾಗಲಿದೆ.

ಒನ್ ಟೈಮ್ ಸೆಟ್ಲಮೆಂಟ್ (OTS)
ಅಕ್ರಮ-ಸಕ್ರಮ ಸಮಸ್ಯೆ ಪರಿಹರಿಸಲು ಸರ್ಕಾರ ಮತ್ತೆ OTS ಯೋಜನೆ ಆರಂಭಿಸುತ್ತಿದೆ. ಜೂನ್ 15ರಿಂದ ಹೊಸ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಅರ್ಜಿ ಸಲ್ಲಿಕೆಗೆ 3 ತಿಂಗಳ ಅವಧಿ ನಿಗದಿಪಡಿಸಲಾಗಿದೆ. ನಂತರದ 3 ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತದೆ. ಹಣ ಪಾವತಿಗೆ ಮತ್ತಷ್ಟು 3 ತಿಂಗಳ ಕಾಲಾವಕಾಶ ನೀಡಲಾಗಿದೆ. ಈ ಬಾರಿ ಮಾರ್ಗಸೂಚಿ ದರದ ಕೇವಲ 5% ಪಾವತಿಸಿ ಅಕ್ರಮ ಆಸ್ತಿಗಳನ್ನು ಸಕ್ರಮಗೊಳಿಸಿಕೊಳ್ಳಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

VISTARANEWS.COM


on

ಇಂದು ಬಿಜಿಎಸ್‌ ಹೆಲ್ತ್‌ ಮತ್ತು ಎಜುಕೇಶನ್‌ ಸಿಟಿಯಲ್ಲಿ ನಡೆದ ಎಸ್‌ಜೆಬಿ ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಕಾಲೇಜಿನ ವಿದ್ಯಾರ್ಥಿಗಳು ಆಯೋಜಿಸಿದ್ದ ವರ್ಚಸ್ವ ಫ್ಲ್ಯಾಶ್‌ ಮಾಬ್‌ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು.

ಬಿಜಿಎಸ್‌ ಮತ್ತು ಎಸ್‌ಜೆಬಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ, ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಬಿಜಿಎಸ್‌ ಮತ್ತು ಎಸ್‌ಜೆಬಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಅವರಿಗೆ ಗೌರವ ಸೂಚಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು ಸೇರಿದಂತೆ ಬಿಜಿಎಸ್‌ ಮತ್ತು ಎಸ್‌ಜೆಬಿ ಸಮೂಹ ಸಂಸ್ಥೆಗಳ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಫ್ಲ್ಯಾಶ್‌ ಮಾಬ್‌ ಪ್ರದರ್ಶಿಸಿದರು.

ವರ್ಚಸ್ವ ಫ್ಲ್ಯಾಶ್‌ ಮಾಬ್‌ ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರತಿಭೆ, ಉತ್ಸಾಹ ಮತ್ತು ಸಾಂಸ್ಕೃತಿಕ ಸೌಹಾರ್ದತೆಯ ಪ್ರತಿಬಿಂಬವಾಗಿದ್ದು, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

Continue Reading

ಅವಿಭಾಗೀಕೃತ

ಪಂಚರಾಜ್ಯ ವಿಧಾನಸಭಾ ಚುನಾವಣೆ , ಕರ್ನಾಟಕ ಉಪಚುನಾವಣೆ ಫಲಿತಾಂಶದ ಕ್ಷಣಕ್ಷಣದ ಅಪ್‌ಡೇಟ್‌

VISTARANEWS.COM


on

Rakshit Shetty Richard Anthony Produce By Hombale

Continue Reading

ಅವಿಭಾಗೀಕೃತ

ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

VISTARANEWS.COM


on

Rakshit Shetty Richard Anthony Produce By Hombale

ಬೆಂಗಳೂರು: ರಾಜ್ಯದೆಲ್ಲೆಡೆ ಬಿಸಿಲ ಬೇಗ ತಾರಕಕ್ಕೇರಿದೆ. ಮಳೆ ಸಿಂಚನಕ್ಕಾಗಿ ಕಾದು ಕುಳಿತ ಜನತೆಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಶನಿವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರೊಂದಿಗೆ 4 ಜಿಲ್ಲೆಗಳಿಗೆ ಇಲಾಖೆ ಆರೆಂಜ್ ಅಲರ್ಟ್​ ಘೋಷಿಸಿದೆ.

ಇದರ ಬೆನ್ನಲ್ಲೇ ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಅಲೆ (ಹೀಟ್​ವೇವ್) ಅಲರ್ಟ್​ ಘೋಷಿಸಿದೆ. ಅದರ ಜೊತೆಗೆ ಗುಡುಗು ಸಹಿತ ಗಾಳಿ-ಮಳೆಯಾಗುವ ಸಂಭವವೂ ಇದೆ ಎಂದು ಇಲಾಖೆ ತಿಳಿಸಿದೆ.


ಮುಂದಿನ 5 ದಿನದವರೆಗೂ ಕರಾವಳಿಯಲ್ಲಿ ಇದೇ ರೀತಿಯ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಮುಂಬರುವ ದಿನಗಳಲ್ಲಿ ರಾಜ್ಯದ ಹಲವೆಡೆ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ ಮುಟ್ಟುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಬಿಸಿಲಲ್ಲಿ ಓಡಾಡಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.



Continue Reading

ಅವಿಭಾಗೀಕೃತ

ವಿಭಿನ್ನ ಕಾರ್ಯಯೋಜನೆಯೊಂದಿಗೆ ಸಮಾಜದ ಪ್ರತಿನಿಧಿ ರೂಪದಲ್ಲಿ ಸಿದ್ಧಗೊಳ್ಳುತ್ತಿದೆ ವಿಸ್ತಾರ ನ್ಯೂಸ್-ಸದಾ ನಿಮ್ಮ ಪರ:

VISTARANEWS.COM


on

Rakshit Shetty Richard Anthony Produce By Hombale


ಜೈ ಶ್ರೀ ಗುರುದೇವ್‌,
ನಾಡಿನ ಎಲ್ಲಾ ಕನ್ನಡದ ಸೃಜನಶೀಲ ಮನಸುಗಳಿಗೆ ನಮಸ್ಕಾರ.

ಭಾಷೆ ನಮ್ಮ ಬದುಕು, ಭಾಷೆಯೊಂದಿಗೆ ಅನುಸಂಧಾನ ಮಾಡಿಕೊಂಡು ಕೆಲಸ ಮಾಡುವ ಮಾಧ್ಯಮವೇ ಪತ್ರಿಕೋದ್ಯಮ. ಪತ್ರಿಕಾ ಮಾಧ್ಯಮದಲ್ಲಿ ಸೇವೆ ಸಲ್ಲಿಸಬೇಕು ಎನ್ನುವುದು ನನ್ನ ಹಲವು ಕಾಲದ ಅಭಿಲಾಷೆಯಾಗಿತ್ತು. ಪರಮಾತ್ಮನ ದಯೆಯಿಂದ ಹಾಗೂ ಗುರುಗಳ ಕೃಪೆಯಿಂದ ಆ ಸದವಕಾಶ ಈಗ ಒದಗಿ ಬಂದಿದೆ. ಕನ್ನಡಿಗರ ಧ್ವನಿಯಾಗಿ ಮುಖ್ಯವಾಹಿನಿ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಲು ನಾವು ʻವಿಸ್ತಾರʼ ಸುದ್ದಿವಾಹಿನಿಯನ್ನು ಪುನರಾರಂಭಿಸುತ್ತಿದ್ದೇವೆ. ʼವಿಸ್ತಾರʼ ನ್ಯೂಸ್‌ ಕನ್ನಡ ಟಿವಿ ಮಾಧ್ಯಮ ಕ್ಷೇತ್ರದಲ್ಲಿ ಈಗಾಗಲೆ ತನ್ನದೇ ಆದ ಒಂದು ಬ್ರಾಂಡ್‌ ಸೃಷ್ಟಿಸಿಕೊಂಡಿದ್ದ ಸುದ್ದಿ ವಾಹಿನಿ, ಕಾರಣಾಂತರಗಳಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿತ್ತು. ಒಂದು ವಿಶೇಷ ಹಾಗೂ ವಿಭಿನ್ನ ಕಾರ್ಯಯೋಜನೆಯೊಂದಿಗೆ ನಾವು ಮರಳಿ ಬರುತ್ತಿದ್ದೇವೆ. ಕನ್ನಡ ನಾಡಿನ ಬಂಧುಗಳ ಕಷ್ಟ-ನಷ್ಟಗಳ ಕುರಿತು ವಸ್ತುನಿಷ್ಟ ವರದಿ ಮಾಡಲು, ಕನ್ನಡ ನಾಡಿನ ಸಂಸ್ಕೃತಿ ಸಾರಗಳನ್ನು ಜಗತ್ತಿನಾದ್ಯಂತ ಪಸರಿಸಲು, ಕನ್ನಡದ ನುಡಿಸಿರಿಯ ವೈವಿಧ್ಯತೆಯನ್ನು ವರ್ಣಿಸಲು ಸರ್ವಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಸುದ್ದಿ ಜಗತ್ತಿನ ನಿಖರ ವರ್ತಮಾನಗಳನ್ನು ನಿರ್ಭೀತಿಯಿಂದ ನಿಮ್ಮ ಮುಂದಿಡಲು ನಾವು ಸಿದ್ಧರಾಗಿದ್ದೇವೆ. ಜನಸಾಮಾನ್ಯರ ಪ್ರತಿನಿಧಿಯಾಗಿ ಆಳುವ ಪ್ರಭುತ್ವವನ್ನು ಧೈರ್ಯದಿಂದ ಪ್ರಶ್ನಿಸಲು ನಾವು ಸಿದ್ಧರಾಗಿದ್ದೇವೆ. ಕರ್ನಾಟಕದ ನಾಡು-ನುಡಿ, ನೆಲ, ಜಲ, ಸಂಸ್ಕೃತಿಗಳ ಹಿತರಕ್ಷಣೆಗಾಗಿ ಸಂಕಲ್ಪಿಸಿಕೊಂಡಿದ್ದೇವೆ. ನಾವು ಕೇವಲ ಸುದ್ದಿಗಳನ್ನು ಪ್ರಾಮಾಣಿಕವಾಗಿ ವರದಿ ಮಾಡುತ್ತೇವೆ. ಮಾಹಿತಿಯೊಂದಿಗೆ ಮನೋರಂಜನೆ ಎಂಬ ವಿಶೇಷ ಆಯಾಮವನ್ನು ನಮ್ಮ ಮಾಧ್ಯಮದಲ್ಲಿ ಪ್ರಸ್ತುತ ಪಡಿಸಲಿದ್ದೇವೆ.

ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ವರ್ಷಗಳ ಅನುಭವ ಹೊಂದಿರುವ ಹಿರಿಯ, ಅನುಭವಿ, ಪ್ರಾವೀಣ್ಯತೆ ಹೊಂದಿರುವ ತಂಡ ನಮ್ಮೊಂದಿಗೆ ಕೆಲಸ ಮಾಡುತ್ತಿದೆ. ಪ್ರಸ್ತುತ ವಿದ್ಯಮಾನ, ರಾಜಕೀಯ, ಸಿನಿಮಾ-ಕಲೆ, ಕ್ರೀಡೆ, ಸಂಸ್ಕೃತಿ-ಸಂಪ್ರದಾಯ, ಆಚಾರ-ವಿಚಾರ, ಜೀವನಶೈಲಿ, ಇತಿಹಾಸ-ಪುರಾಣ, ಪದ್ಧತಿ-ಪರಂಪರೆ, ಭಾಷೆಯ ಸೊಗಡು ಮತ್ತು ಆಹಾರ ಕ್ರಮಗಳು, ನದಿ- ಪರಿಸರ ಅರಣ್ಯ- ಜೀವವೈವಿಧ್ಯ ಸೇರಿದಂತೆ ಹತ್ತಾರು ವಿಷಯಗಳ ಬಗ್ಗೆ ನಾವು ನಮ್ಮ ವಾಹಿನಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ನಿಮ್ಮ ಮುಂದೆ ತರಲಿದ್ದೇವೆ. ನಮ್ಮ ನಾಡಿನ ಕ್ರಿಯಾಶೀಲ, ಸೃಜನಶೀಲ ಮನಸುಗಳಿಗೆ ಅತ್ಯಂತ ಆಹ್ಲಾದಕಾರಿ ಸುದ್ದಿ ಸಂಗತಿಗಳನ್ನು ಉಣಬಡಿಸಬೇಕು ಅನ್ನುವುದಷ್ಟೆ ನಮ್ಮ ಕಳಕಳಿ. ಈ ನಿಟ್ಟಿನಲ್ಲಿ ನಮ್ಮ ʻವಿಸ್ತಾರʼ ನ್ಯೂಸ್‌ ತಂಡ ಕಳೆದ ಕೆಲವು ತಿಂಗಳಿನಿಂದ ಕಠಿಣ ಪರಿಶ್ರಮ ನಡೆಸುತ್ತಿದೆ. ಎಲ್ಲಾ ವಯೋಮಾನದವರ, ಎಲ್ಲಾ ವರ್ಗದವರ ಮತ್ತು ಎಲ್ಲಾ ರೀತಿಯ ಮನಸ್ಥಿತಿಯ ಜನಸಮುದಾಯವನ್ನು ತಲುಪಬೇಕು ಅನ್ನುವುದು ನಮ್ಮ ಹಿರಿಯಾಸೆ. ಕನ್ನಡಿಗರ ಆದ್ಯತೆಯ ವಿಷಯಗಳನ್ನು ಆಯ್ದು ನಮ್ಮ ಮಾಧ್ಯಮದಲ್ಲಿ ಪ್ರಸಾರ ಮಾಡಲು ಕಾರ್ಯಯೋಜನೆ ರೂಪಿಸಿಕೊಂಡಿದ್ದೇವೆ. ಈಗ ಬೇಕಿರುವುದು ನಿಮ್ಮ ಶುಭ ಹಾರೈಕೆ ಮಾತ್ರ. ನೀವು ನಮ್ಮೊಂದಿಗಿರಿ ಸಾಕು, ನಾವು ನಿಮಗಾಗಿ ದಿನದ ೨೪ ಗಂಟೆ, ವಾರದ ೭ ದಿನ, ವರ್ಷದ ೩೬೫ ದಿನಗಳು ಸೇವೆ ಸಲ್ಲಿಸಲು ಶತಸಿದ್ಧ.

ಕರುನಾಡಿನ ಸಮಸ್ತ ಕನ್ನಡಿಗರಿಗೆ ನನ್ನ ಧನ್ಯವಾದಗಳು

ಸದಾ ನಿಮ್ಮ ಸೇವೆಯಲ್ಲಿ.
-ಹೆಚ್.ಜಿ ಪವಿತ್ರ ಗೌಡ, ‌ಸಿಇಒ, ವಿಸ್ತಾರ ನ್ಯೂಸ್

Continue Reading
Advertisement
Latest28 minutes ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

ಅವಿಭಾಗೀಕೃತ3 hours ago

ಬೆಂಗಳೂರಿಗೆ ʼಆರನೇ ಗ್ಯಾರಂಟಿʼ – ʼನನ್ನ ಖಾತೆ ನನ್ನ ಹಕ್ಕುʼ

ಪ್ರಮುಖ ಸುದ್ದಿ6 hours ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ6 hours ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

Latest1 day ago

ನೀಟ್‌ ಪರೀಕ್ಷೆ ರದ್ದು: ಕೇಂದ್ರ ಸರ್ಕಾರವೇ ಹೊಣೆ- ಡಾ.ಎಂ.ಸಿ.ಸುಧಾಕರ್‌

Latest1 day ago

ಪ್ರಶ್ನೆ ಪತ್ರಿಕೆ ಸೋರಿಕೆ : ನೀಟ್‌ ಪರೀಕ್ಷೆ ರದ್ದು, ಮರುಪರೀಕ್ಷೆಗೆ ಆದೇಶ

Latest1 day ago

ಅಸ್ಸಾಂ ಸಿಎಂ ಆಗಿ ಹಿಮಂತ್‌ ಬಿಸ್ವಾ ಪದಗ್ರಹಣ

Latest2 days ago

ಸಿಎಂ ಆದ ಮರುದಿನವೇ ಮಾಜಿ ಸಿಎಂ ಸ್ಟಾಲಿನ್‌ ಭೇಟಿಯಾದ ವಿಜಯ್‌

Latest3 days ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ3 days ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌