Site icon Vistara News

Vistara Top 10 News : ಮನೆ ಮನೆಯಲ್ಲಿ ರಾಮ ಜ್ಯೋತಿ, ಕಾರ್ಯಕರ್ತರಿಗೆ ಡಿಕೆಶಿ ಬಿಗ್‌ ನ್ಯೂಸ್‌

Vistara Top 10 3012

1.ಜ.22ರಂದು ಪ್ರತಿ ಮನೆಯಲ್ಲಿ ರಾಮ ಜ್ಯೋತಿ ಬೆಳಗಿಸಲು ಮೋದಿ ಕರೆ
2024ರ ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ (Ram Mandir) ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪನೆ ಬಳಿಕ, ಪೂಜಾ ವಿಧಿವಿಧಾನಗಳು ಪೂರ್ಣಗೊಂಡ ಮೇಲೆ ದೇಶದ ಪ್ರತಿಯೊಂದು ಮನೆಯಲ್ಲಿ ರಾಮಜ್ಯೋತಿ ಬೆಳಗಲಿ ಎಂದು ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಕರೆ ನೀಡಿದರು. ಅಯೋಧ್ಯೆ ವಿಮಾನ ನಿಲ್ದಾಣ ಲೋಕಾರ್ಪಣೆ ಬಳಿಕ ಮಾತನಾಡಿದ ಅವರು, ಜನವರಿ 22ರಂದು ದೇಶಕ್ಕೆ ದೇಶವೇ ರಾಮಮಯವಾಗಲಿ, ರಾಮ ಜಪ ಜಗಮಗಿಸಲಿ ಎಂದು ಕರೆ ನೀಡಿದರು. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

2. ಲೋಕಾರ್ಪಣೆ ಆಯಿತು ಅಯೋಧ್ಯೆಯ ವಿಮಾನ ನಿಲ್ದಾಣ; ರಾಮ ಇನ್ನೂ ಹತ್ತಿರ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ವಿಮಾನ ನಿಲ್ದಾಣಕ್ಕೆ (Ayodhya Airport) ಪ್ರಧಾನಿ ನರೇಂದ್ರ ಮೋದಿ (Narendra Modi) ಚಾಲನೆ ನೀಡಿದ್ದಾರೆ. ರಾಮಮಂದಿರದ (Ram Mandir) ಕಲ್ಪನೆಯಲ್ಲಿಯೇ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗಿದ್ದು, ಒಳಗಡೆ ರಾಮನ ಚಿತ್ರಗಳು ರಾರಾಜಿಸುತ್ತಿವೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಈ ಸುದ್ದಿಯನ್ನೂ ಓದಿ: ಇನ್ಮುಂದೆ ಬೆಂಗಳೂರಿನಿಂದ ಅಯೋಧ್ಯೆಗೆ ನೇರವಾಗಿ ವಿಮಾನದಲ್ಲೇ ಹೋಗಬಹುದು!
ಈ ಸುದ್ದಿಯನ್ನೂ ಓದಿ: ಅಯೋಧ್ಯಾ ಧಾಮ್‌ ರೈಲು ನಿಲ್ದಾಣ ಉದ್ಘಾಟನೆ, ಅಮೃತ್‌ ಭಾರತ್‌ ರೈಲಿಗೆ ಚಾಲನೆ
ಈ ಸುದ್ದಿಯನ್ನೂ ಓದಿ: ಅಯೋಧ್ಯೆಯಲ್ಲಿ ಮಹಿಳೆಯೊಬ್ಬರ ಮನೆಗೆ ತೆರಳಿ ಟೀ ಕುಡಿದ ಮೋದಿ; ಯಾರಿವರು ಮೀರಾ ಮಾಂಝಿ?
ಈ ಸುದ್ದಿಯನ್ನೂ ಓದಿ: ಬಾಬರಿ ಮಸೀದಿ ಪರ ಹೋರಾಟಗಾರ ಈಗ ರೋಡ್‌ಶೋನಲ್ಲಿ ಮೋದಿಗೆ ಹೂ ಚೆಲ್ಲಿದ!

3. ನಿಗಮ ಮಂಡಳಿಗಳಲ್ಲಿ ಶಾಸಕರಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ: ಡಿಕೆಶಿ
 ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನದ ವ್ಯವಸ್ಥೆ ಮಾಡಲಾಗುವುದು. ಅದಕ್ಕಾಗಿ ಎಲ್ಲಾ ನಾಯಕರು ಕೂತು ಚರ್ಚೆ ಮಾಡುತ್ತೇವೆ. ನಿಗಮ ಮಂಡಳಿಗಳಲ್ಲಿ ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾ ಗುವು ದು ಎಂದು ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

4. BY Vijayendra : ಮರಳಿ ಅಧಿಕಾರಕ್ಕೆ ಬರುವವರೆಗೆ ನಿಮ್ಮ ವಿಜಯಣ್ಣ ವಿರಮಿಸಲ್ಲ: ವಿಜಯೇಂದ್ರ ಪ್ರತಿಜ್ಞೆ
ಮುಂದಿನ ಲೋಕಸಭಾ ಚುನಾವಣೆಯಲ್ಲಿ (Parliament Elections 2024) ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಒಂದು ಕಡೆ ಇದ್ದೇ ಇದೆ. ಅದರ ಜತೆಗೆ ರಾಜ್ಯದಲ್ಲಿ ಈ ಅಲ್ಪಾಯುಷಿ ಕಾಂಗ್ರೆಸ್‌ ಸರ್ಕಾರ (Congress Government) ಪತನಗೊಂಡು ಭರ್ಜರಿ ಬಹುಮತದೊಂದಿಗೆ ಬಿಜೆಪಿ ಸರ್ಕಾರ (BJP Government) ಅಧಿಕಾರಕ್ಕೆ ಬರುವ ವರೆಗೆ ನಿಮ್ಮ ವಿಜಯಣ್ಣ ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಪ್ರತಿಜ್ಞೆ ಮಾಡಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಈ ಸುದ್ದಿ ಯನ್ನೂ ಓದಿ: ಕಾಂಗ್ರೆಸ್‌ಗೆ ಮುಸ್ಲಿಮರು ಮಾತ್ರ ಕಾಣಿಸೋದು; ವಿಜಯಪುರದಲ್ಲಿ ವಿಜಯೇಂದ್ರ ಹವಾ

5. ಇನ್ಮುಂದೆ ಶಾಲೆಗಳಲ್ಲಿ ಮಕ್ಕಳನ್ನು ಟಾಯ್ಲೆಟ್‌ ಕ್ಲೀನಿಂಗ್‌ಗೆ ಬಳಸುವಂತಿಲ್ಲ; ಮಹತ್ವದ ಆದೇಶ
ರಾಜ್ಯದ ಶಾಲೆಗಳಲ್ಲಿ ಅನುದಾನದ ಕೊರತೆಯಿಂದ ಶೌಚಾಲಯಗಳನ್ನು ಮಕ್ಕಳಿಂದಲೇ ಸ್ವಚ್ಛಗೊಳಿಸುತ್ತಿರುವ (Toilet Cleaning) ಪ್ರಕರಣಗಳು ಒಂದೊಂದೇ ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮವನ್ನು ತೆಗೆದುಕೊಂಡಿದೆ. ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತೆ ನಿರ್ವಹಿಸಲು ವಿದ್ಯಾರ್ಥಿಗಳನ್ನು ಬಳಸುವಂತೆ ಇಲ್ಲ ಎಂದು ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

6. ತಾಲೂಕು ಉಸ್ತುವಾರಿ ಅಧಿಕಾರಿಗಳ ನೇಮಕ; ಇವರ ಜವಾಬ್ದಾರಿಗಳೇನು?
ರಾಜ್ಯದ ಸಾಮಾಜಿಕ, ಆರ್ಥಿಕ ಮತ್ತು ಭೌತಿಕ ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರತಿ ತಾಲೂಕಿಗೆ ಒಬ್ಬರಂತೆ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯನ್ನು ತಾಲೂಕು ಉಸ್ತುವಾರಿ ಅಧಿಕಾರಿಗಳನ್ನಾಗಿ (Taluk In charge Officer) ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

7. ಮದ್ಯ ಪ್ರಿಯರಿಗೆ ಹೊಸ ವರ್ಷದ ಮೊದಲ ದಿನವೇ ಏಟು; ಏರಲಿದೆ ಎಣ್ಣೆ ರೇಟು!
ಯಾವುದೇ ಮುನ್ಸೂಚನೆ ಇಲ್ಲದೆ, ಪ್ರತಿಭಟನೆಯ ಸಣ್ಣ ಸಂಚಲನವೂ ಇಲ್ಲದೆ ರೇಟು ಜಾಸ್ತಿ ಆಗೋದು ಅಂದ್ರೆ ಮದ್ಯದ್ದು (Liquor Rate) ಇರಬೇಕು ಅನಿಸುತ್ತದೆ. ಕೆಲವು ದಿನಗಳ ಹಿಂದೆ ಮದ್ಯದ ದರ ಏರಿಕೆ ಸದ್ಯಕ್ಕಿಲ್ಲ ಎಂಬ ಸುದ್ದಿ ಬಂದಿತ್ತು. ಈಗ ನೋಡಿದರೆ 2024ರ ಜನವರಿ 1ರಿಂದ (Rate hike from January 1, 2024) ಅನ್ವಯವಾಗುವಂತೆ ಮದ್ಯದ ದರ ಏರಿಕೆಯಾಗಲಿದೆ ಎಂಬ ಮಾಹಿತಿ ಬರುತ್ತಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

8. ಕೆನಡಾ ವಾಸಿ ಲಖ್ಬೀರ್‌ ಸಿಂಗ್‌ ಲಾಂಡಾ ಭಯೋತ್ಪಾದಕ: ಭಾರತ ಘೋಷಣೆ
ಕೆನಡಾ ಮೂಲದ ದರೋಡೆಕೋರ ಮತ್ತು ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ (Babbar Khalsa internationl – BKI) ನಾಯಕ ಲಖ್ಬೀರ್ ಸಿಂಗ್ ಲಾಂಡಾನನ್ನು (Lakhbir Singh Landa) ಭಾರತ ಸರ್ಕಾರ ʼಭಯೋತ್ಪಾದಕʼ (Khalistan Terrorist) ಎಂದು ಘೋಷಿಸಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

9. ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಬಿಗ್‌ ಶಾಕ್;‌ ಚುನಾವಣೆ ಸ್ಪರ್ಧೆಗೆ ಆಯೋಗ ನಕಾರ
ತೋಷಾಖಾನಾ (ಖಜಾನೆ) ಭ್ರಷ್ಟಾಚಾರ (Toshakhana Case) ಪ್ರಕರಣದಲ್ಲಿ ಸಿಲುಕಿ ಜೈಲುಪಾಲಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ (Imran Khan) ಅವರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಇಮ್ರಾನ್‌ ಖಾನ್‌ ಅವರು 2024ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸವಂತಿಲ್ಲ ಎಂದು ಪಾಕಿಸ್ತಾನ ಚುನಾವಣೆ ಆಯೋಗ (Election Commission of Pakistan) ಹೇಳಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

10. ಬಾಕ್ಸ್‌ ಆಫೀಸ್‌ನಲ್ಲಿ ಬಿರುಗಾಳಿ ಎಬ್ಬಿಸಿದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌
ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳ ಪೈಕಿ ಒಂದಾದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Darshan) ಅಭಿನಯದ ಕಾಟೇರ (Kaatera Movie) ಬಿಡುಗಡೆಯಾಗಿದೆ. ಅಭಿಮಾನಿಗಳು ಎರಡೂ ಕೈ ಚಾಚಿ ಈ ಸಿನಿಮಾವನ್ನು ಸ್ವಾಗತಿಸಿದ್ದಾರೆ. ಮಾಸ್‌ ಅಂಶಗಳ ಜತೆಗೆ ಕಥೆಗೂ ಪ್ರಾಮುಖ್ಯತೆ ನೀಡಲಾಗಿದೆ ಎಂದು ಚಿತ್ರ ನೋಡಿದ ಹಲವರು ಅಭಿಪ್ರಾಯಪಟ್ಟಿದ್ದಾರೆ. ಸತ್ಯ ಘಟನೆ ಆಧಾರಿತ ಈ ಸಿನಿಮಾ ನೋಡಿ ಹಲವರು ಕಣ್ಣೀರು ಸುರಿಸಿದ್ದಾರೆ. ಇದೀಗ ಸಿನಿಮಾ ಮೊದಲ ಗಳಿಕೆ ಕಂಡದೆಷ್ಟು ಎಂಬ ಕುತೂಹಲ ವೀಕ್ಷಕರಿಗೆ. ಡಿಸೆಂಬರ್ 28ರ ಮಧ್ಯರಾತ್ರಿಯಿಂದಲೇ ಶೋಗಳು ಪ್ರದರ್ಶನ ಕಂಡಿವೆ. ಡಿಸೆಂಬರ್ 29ರ ಬಹುತೇಕ ಶೋಗಳು ಹೌಸ್​ಫುಲ್ ಆಗಿವೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version