Site icon Vistara News

Accident | ಆಯಿಲ್ ಟ್ಯಾಂಕರ್‌ಗೆ ಖಾಸಗಿ ಬಸ್ ಡಿಕ್ಕಿ : ಚಾಲಕ ಸಾವು

Accident

ಚಿತ್ರದುರ್ಗ: ಜಿ.ಆರ್‌.ಹಳ್ಳಿ ಬಳಿ ಆಯಿಲ್ ಟ್ಯಾಂಕರ್‌ಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ (Accident) ಹೊಡೆದ ಪರಿಣಾಮ ಟ್ಯಾಂಕರ್‌ ಚಾಲಕ ಮೃತಪಟ್ಟಿದ್ದಾರೆ.

ಚಿತ್ರದುರ್ಗ ತಾಲೂಕಿನ ಜಿ.ಆರ್.ಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಅಪಘಾತ ಸಂಭವಿಸಿದೆ. ಟ್ಯಾಂಕರ್‌ ಚಾಲಕ ಮಹ್ಮದ್ ಇಸ್ಮಾಯಿಲ್ (40) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಕಾರಣ ಹೈವೇಯಿಂದ ಹಳ್ಳಕ್ಕೆ ಆಯಿಲ್ ಟ್ಯಾಂಕರ್ ಉರುಳಿ ಬಿದ್ದಿದೆ ಎನ್ನಲಾಗಿದೆ.

ಅದೃಷ್ಟವಶಾತ್ ಖಾಸಗಿ ಬಸ್‌ನಲ್ಲಿದವರು ಅಪಾಯದಿಂದ ಪಾರಾಗಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.

ಇದನ್ನೂ ಓದಿ | Accident | ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ; ಇಬ್ಬರು ಸವಾರರ ಸಾವು

Exit mobile version