ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election Results 2023) ಮೇ 10ರಂದು ನಡೆದಿದೆ. ಈ ಚುನಾವಣೆಯ ಫಲಿತಾಂಶದ (Karnataka Election Results) ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಕಾಂಗ್ರೆಸ್ ಸ್ಪಷ್ಟ ಬಹುಮತಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ತುದಿಗಾಲಲ್ಲಿ ನಿಂತಿದೆ. ಬಿಜೆಪಿ ಪ್ರತಿಪಕ್ಷವಾಗಿದೆ. ಜೆಡಿಎಸ್ ಈ ಸಲ ಕಿಂಗ್ ಮೇಕರ್ ಆಗುವ ಭಾಗ್ಯವನ್ನು ಕಳೆದುಕೊಂಡಿದೆ. ಈ ಸಲದ ಚುನಾವಣೆಯಲ್ಲಿ ಸ್ಪಷ್ಟವಾಗಿ ಆಡಳಿತ ವಿರೋಧಿ ಅಲೆ ಕಾಣಿಸುತ್ತಿದೆ. ಇಂದು ಬೆಳಗ್ಗೆಯಿಂದ ನಡೆದ ಮತ ಎಣಿಕೆಯ ಸಮಗ್ರ ಮಾಹಿತಿ ಇಲ್ಲಿದೆ.
ಖಾಸಗಿ ಹೋಟೆಲ್‌ನಲ್ಲಿ ಎಐಸಿಸಿ ನಾಯಕರ ಸಂಭ್ರಮಾಚರಣೆ
ಕುಣಿಗಲ್‌ನಲ್ಲಿ ಕಾಂಗ್ರೆಸ್‌ನ ಡಾ.ರಂಗನಾಥ್ ಅವರಿಗೆ ಜಯ
20 ಸಾವಿರ ಮತಗಳ ಅಂತರದಿಂದ ಗೆದ್ದ ರಂಗನಾಥ್
ಸೇಡಂ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ
ಶರಣಪ್ರಕಾಶ್ ಪಾಟೀಲ್‌ಗೆ ಗೆಲುವು
ಬಿಜೆಪಿಯ ರಾಜಕುಮಾರ್ ಪಾಟೀಲ್‌ಗೆ ಸೋಲು
ಹೊಸಕೋಟೆಯಲ್ಲಿ ಬಿಜೆಪಿಯ ಎಂಟಿಬಿ ನಾಗರಾಜ್‌ಗೆ ಮುಖಭಂಗ
ಕಾಂಗ್ರೆಸ್‌ನ ಶರತ್ ಬಚ್ಚೇಗೌಡ ಅವರಿಗೆ ಭರ್ಜರಿ ಗೆಲುವು
ಚಿಕ್ಕನಾಯಕನಹಳ್ಳಿಯಲ್ಲಿ ಬಿಜೆಪಿಯ ಮಾಧುಸ್ವಾಮಿಗೆ ಮುಖಭಂಗ
ಉಡುಪಿಯಲ್ಲಿ ಎಲ್ಲ ಐದು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು
ಬಳ್ಳಾರಿಯ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಜಯ