ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election Results 2023) ಮೇ 10ರಂದು ನಡೆದಿದೆ. ಈ ಚುನಾವಣೆಯ ಫಲಿತಾಂಶದ (Karnataka Election Results) ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಕಾಂಗ್ರೆಸ್ ಸ್ಪಷ್ಟ ಬಹುಮತಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ತುದಿಗಾಲಲ್ಲಿ ನಿಂತಿದೆ. ಬಿಜೆಪಿ ಪ್ರತಿಪಕ್ಷವಾಗಿದೆ. ಜೆಡಿಎಸ್ ಈ ಸಲ ಕಿಂಗ್ ಮೇಕರ್ ಆಗುವ ಭಾಗ್ಯವನ್ನು ಕಳೆದುಕೊಂಡಿದೆ. ಈ ಸಲದ ಚುನಾವಣೆಯಲ್ಲಿ ಸ್ಪಷ್ಟವಾಗಿ ಆಡಳಿತ ವಿರೋಧಿ ಅಲೆ ಕಾಣಿಸುತ್ತಿದೆ. ಇಂದು ಬೆಳಗ್ಗೆಯಿಂದ ನಡೆದ ಮತ ಎಣಿಕೆಯ ಸಮಗ್ರ ಮಾಹಿತಿ ಇಲ್ಲಿದೆ.
ಬಾಗಲಕೋಟೆಯ ಜಮಖಂಡಿಯಲ್ಲಿ ಬಿಜೆಪಿ ಭರ್ಜರಿ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಜಗದೀಶ್ ಗುಡಗುಂಟಿ ಅವರು 81,063 ಮತಗಳನ್ನು ಪಡೆದು ಗೆದ್ದಿದ್ದಾರೆ. ಮಧುಗಿರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್. ರಾಜಣ್ಣ ಗೆದ್ದಿದ್ದಾರೆ. ಬೆಂಗಳೂರು ದಕ್ಷಿಣ ಎಂ.ಕೃಷ್ಣಪ್ಪ ಗೆಲುವು.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ಗೆಲುವು
ಚನ್ನಪಟ್ಟಣದಲ್ಲಿ ಗೆಲುವು ಸಾಧಿಸಿದ ಎಚ್‌ಡಿಕೆ
ಬಿಜೆಪಿಯ ಸಿ.ಪಿ.ಯೋಗೇಶ್ವರ್ ವಿರುದ್ಧ 15 ಸಾವಿರ ಅಂತರದಿಂದ ಜಯ
ಗೆಲುವಿನ ಕುರಿತು ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ
ನಾಡಿನ ಜನತೆ ಕಾಂಗ್ರೆಸ್‌ಗೆ ಆಶೀರ್ವಾದ ಮಾಡಿದ್ದಾರೆ
ರಾಜ್ಯದ ಜನತೆಗೆ ನಾವು ಧನ್ಯವಾದ ತಿಳಿಸುತ್ತೇವೆ
ರಾಜ್ಯದಲ್ಲಿ ಮೋದಿ ಅಲೆ ಸೇರಿ ಬಿಜೆಪಿಯ ಯಾವುದೇ ತಂತ್ರ ಫಲ ಕೊಟ್ಟಿಲ್ಲ
ನಾವು ಜನರ ತೀರ್ಪಿಗೆ ನಮಿಸುತ್ತೇವೆ ಎಂದ ಸಿದ್ದರಾಮಯ್ಯ
ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಗೆ 1000 ಮತಗಳ ಅಂತರದಿಂದ ಗೆಲುವು. ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಎರಡನೇ ಸ್ಥಾನದಲ್ಲಿ.
ಗದಗದ ನರಗುಂದ ಕ್ಷೇತ್ರದಲ್ಲಿ ಬಿಜೆಪಿಯ ಸಿಸಿ ಪಾಟೀಲ್, ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಗೆಲುವು ಸಾಧಿಸಿದ್ದಾರೆ.