ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election Results 2023) ಮೇ 10ರಂದು ನಡೆದಿದೆ. ಈ ಚುನಾವಣೆಯ ಫಲಿತಾಂಶದ (Karnataka Election Results) ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಕಾಂಗ್ರೆಸ್ ಸ್ಪಷ್ಟ ಬಹುಮತಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ತುದಿಗಾಲಲ್ಲಿ ನಿಂತಿದೆ. ಬಿಜೆಪಿ ಪ್ರತಿಪಕ್ಷವಾಗಿದೆ. ಜೆಡಿಎಸ್ ಈ ಸಲ ಕಿಂಗ್ ಮೇಕರ್ ಆಗುವ ಭಾಗ್ಯವನ್ನು ಕಳೆದುಕೊಂಡಿದೆ. ಈ ಸಲದ ಚುನಾವಣೆಯಲ್ಲಿ ಸ್ಪಷ್ಟವಾಗಿ ಆಡಳಿತ ವಿರೋಧಿ ಅಲೆ ಕಾಣಿಸುತ್ತಿದೆ. ಇಂದು ಬೆಳಗ್ಗೆಯಿಂದ ನಡೆದ ಮತ ಎಣಿಕೆಯ ಸಮಗ್ರ ಮಾಹಿತಿ ಇಲ್ಲಿದೆ.
ಸಿದ್ದರಾಮಯ್ಯಗೆ ಎಂ.ಕೆ.ಸ್ಟಾಲಿನ್ ಅಭಿನಂದನೆ
ಕರ್ನಾಟಕದಲ್ಲಿ ಸ್ಪಷ್ಟ ಬಹುಮತದ ಕಾಂಗ್ರೆಸ್ ದಾಪುಗಾಲು ಹಿನ್ನೆಲೆ
ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ ತಮಿಳುನಾಡು ಸಿಎಂ
ಕುಮಟಾದಲ್ಲಿ ಜೆಡಿಎಸ್‌ನ ಸೂರಜ್ ನಾಯ್ಕ್‌ಗೆ ಭರ್ಜರಿ ಜಯ
ಕೋಲಾರದ ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಸೋಲು
ಡಿ.ಕೆ.ಶಿವಕುಮಾರ್ ಮೊದಲ ಪ್ರತಿಕ್ರಿಯೆ, ಭಾವುಕರಾಗಿ ಕಣ್ಣೀರು
ಕರ್ನಾಟಕದ ಮಹಾ ಜನತೆಗೆ ನಮನಗಳು
ಈಗ ನಾನು ಏನೂ ಮಾತನಾಡುವುದಿಲ್ಲ
ಜನರ ಪಾದಗಳಿಗೆ ನಾನು ನಮಸ್ಕಾರ ಮಾಡುತ್ತೇನೆ
ನನ್ನ ಪ್ರಮಾಣಪತ್ರ ತೆಗೆದುಕೊಂಡು ಬರುತ್ತೇನೆ
ಹೀಗೆ ಹೇಳುತ್ತಲೇ ಭಾವುಕರಾದ ಡಿ.ಕೆ.ಶಿವಕುಮಾರ್
ತುಮಕೂರಿನ ಕೊರಟಗೆರೆ ಕ್ಷೇತ್ರದಲ್ಲಿ ಮಾಜಿ ಡಿಸಿಎಂ, ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ.ಪರಮೇಶ್ವರ್ ಅವರು ಗೆದ್ದಿದ್ದಾರೆ. ಬಾದಾಮಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮಸೇನ ಚಿಮ್ಮನಕಟ್ಟಿ ಗೆಲುವು ಸಾಧಿಸಿದ್ದಾರೆ.
ಗೆಲುವು ಸಾಧಿಸಿದ ಶಾಸಕರಿಗೆ ಬುಲಾವ್
ಹಿಲ್ಟನ್ ಹೋಟೆಲ್‌ಗೆ ಕಾಂಗ್ರೆಸ್ ಶಾಸಕರು ಶಿಫ್ಟ್
ಬೆಂಗಳೂರಿನ ದೊಮ್ಮಲೂರಿನಲ್ಲಿರುವ ಹೋಟೆಲ್
ಇಂದು ಸಂಜೆಯೇ ಸಿಎಲ್‌ಪಿ ಸಭೆ