ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election Results 2023) ಮೇ 10ರಂದು ನಡೆದಿದೆ. ಈ ಚುನಾವಣೆಯ ಫಲಿತಾಂಶದ (Karnataka Election Results) ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಕಾಂಗ್ರೆಸ್ ಸ್ಪಷ್ಟ ಬಹುಮತಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ತುದಿಗಾಲಲ್ಲಿ ನಿಂತಿದೆ. ಬಿಜೆಪಿ ಪ್ರತಿಪಕ್ಷವಾಗಿದೆ. ಜೆಡಿಎಸ್ ಈ ಸಲ ಕಿಂಗ್ ಮೇಕರ್ ಆಗುವ ಭಾಗ್ಯವನ್ನು ಕಳೆದುಕೊಂಡಿದೆ. ಈ ಸಲದ ಚುನಾವಣೆಯಲ್ಲಿ ಸ್ಪಷ್ಟವಾಗಿ ಆಡಳಿತ ವಿರೋಧಿ ಅಲೆ ಕಾಣಿಸುತ್ತಿದೆ. ಇಂದು ಬೆಳಗ್ಗೆಯಿಂದ ನಡೆದ ಮತ ಎಣಿಕೆಯ ಸಮಗ್ರ ಮಾಹಿತಿ ಇಲ್ಲಿದೆ.
ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಉದಯ್ ಗರುಡಾಚಾರ್ಗೆ ಭರ್ಜರಿ ಗೆಲುವು. ನರಸಿಂಹರಾಜ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ತನ್ವೀರ್ ಸೇಠ್ಗೆ ಜಯ.
ಮಂಗಳೂರಿನಲ್ಲಿ ಕಾಂಗ್ರೆಸ್‌ನ ಯು.ಟಿ. ಖಾದರ್ ಅವರು ಗೆಲುವು ಸಾಧಿಸಿದ್ದಾರೆ.
ಒಂದೇ ರೀತಿಯ ಸೀರೆಯುಟ್ಟು ಬಂದವರನ್ನು ವಾಪಸ್ ಕಳಿಸಿದ ಪೊಲೀಸ್
ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮಲಿಂಗಾರೆಡ್ಡಿ ಅವರು ಭರ್ಜರಿ ಮುನ್ನಡೆ ಸಾಧಿಸಿರುವ ಹಿನ್ನೆಲೆಯಲ್ಲಿ ಅಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯರು ಸಂಭ್ರಮದಲ್ಲಿದ್ದಾರೆ. ಒಂದೇ ರೀತಿಯ ಸೀರೆಯುಟ್ಟು ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದರು. ಆದರೆ ಸೆಕ್ಷನ್ 144 ಜಾರಿ ಇರುವ ಕಾರಣ ಅವರನ್ನೆಲ್ಲ ಪೊಲೀಸರು ವಾಪಸ್ ಕಳಿಸಿದ್ದಾರೆ.
ಬಸವರಾಜ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ
ನಾವು ಜನರ ಆದೇಶವನ್ನು ಸ್ವಾಗತಿಸುತ್ತೇವೆ
ಲೋಕಸಭೆ ಚುನಾವಣೆಗೆ ತಯಾರಾಗುತ್ತೇವೆ
ಸೋಲೊಪ್ಪಿಕೊಂಡ ಬಸವರಾಜ ಬೊಮ್ಮಾಯಿ
ವಿಜಯಪುರ ನಗರದಲ್ಲಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ಪ್ರತಿಸ್ಪರ್ಧಿ ಪಕ್ಷದ ಅಭ್ಯರ್ಥಿಗಿಂತ 21,878 ಲೀಡ್ಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.