Site icon Vistara News

Karnataka Election Results Live Updates: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ; ಡಬಲ್​ ಎಂಜಿನ್​​ನ ಕೊಂಡಿ ಕಳಚಿದ ‘ಕೈ’

election result live

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election Results 2023) ಮೇ 10ರಂದು ನಡೆದಿದೆ. ಈ ಚುನಾವಣೆಯ ಫಲಿತಾಂಶದ (Karnataka Election Results) ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಕಾಂಗ್ರೆಸ್​ ಸ್ಪಷ್ಟ ಬಹುಮತಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ತುದಿಗಾಲಲ್ಲಿ ನಿಂತಿದೆ. ಬಿಜೆಪಿ ಪ್ರತಿಪಕ್ಷವಾಗಿದೆ. ಜೆಡಿಎಸ್​ ಈ ಸಲ ಕಿಂಗ್​ ಮೇಕರ್ ಆಗುವ ಭಾಗ್ಯವನ್ನು ಕಳೆದುಕೊಂಡಿದೆ. ಈ ಸಲದ ಚುನಾವಣೆಯಲ್ಲಿ ಸ್ಪಷ್ಟವಾಗಿ ಆಡಳಿತ ವಿರೋಧಿ ಅಲೆ ಕಾಣಿಸುತ್ತಿದೆ. ಇಂದು ಬೆಳಗ್ಗೆಯಿಂದ ನಡೆದ ಮತ ಎಣಿಕೆಯ ಸಮಗ್ರ ಮಾಹಿತಿ ಇಲ್ಲಿದೆ.

B Somashekhar

ಹಳಿಯಾಳದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಆರ್‌.ವಿ.ದೇಶಪಾಂಡೆ ಅವರಿಗೆ ಭರ್ಜರಿ ಗೆಲುವು

Lakshmi Hegde

ಗದಗ ನರಗುಂದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿಸಿ ಪಾಟೀಲ್ ಅವರು, ಕಾಂಗ್ರೆಸ್ ಅಭ್ಯರ್ಥಿ ಬಿ.ಆರ್.ಯಾವಗಲ್ ಅವರ ವಿರುದ್ಧ ಗೆದ್ದಿದ್ದಾರೆ.

B Somashekhar

ಹಾಸನದ ಅರಸೀಕೆರೆಯಲ್ಲಿ ಕಾಂಗ್ರೆಸ್‌ನ ಶಿವಲಿಂಗೇಗೌಡ ಅವರಿಗೆ 10 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವಾಗಿದೆ.

Lakshmi Hegde

ಮಾಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್​.ಸಿ ಬಾಲಕೃಷ್ಣ ಅವರಿಗೆ ಗೆಲುವು. ತುಮಕೂರು ಗ್ರಾಮಾಂತರದಲ್ಲಿ ಬಿಜೆಪಿಯ ಸುರೇಶ್ ಗೌಡ ಅವರು ಜೆಡಿಎಸ್ ನ ಗೌರಿಶಂಕರ್ ವಿರುದ್ಧ ಜಯ ಸಾಧಿಸಿದ್ದಾರೆ.

Lakshmi Hegde

ಬೆಳಗಾವಿ ಜಿಲ್ಲೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಲಕ್ಷ್ಮಣ್​ ಸವದಿ ಅವರು ಗೆಲುವು ಸಾಧಿಸಿದ್ದಾರೆ.

Exit mobile version