ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election Results 2023) ಮೇ 10ರಂದು ನಡೆದಿದೆ. ಈ ಚುನಾವಣೆಯ ಫಲಿತಾಂಶದ (Karnataka Election Results) ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಕಾಂಗ್ರೆಸ್ ಸ್ಪಷ್ಟ ಬಹುಮತಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ತುದಿಗಾಲಲ್ಲಿ ನಿಂತಿದೆ. ಬಿಜೆಪಿ ಪ್ರತಿಪಕ್ಷವಾಗಿದೆ. ಜೆಡಿಎಸ್ ಈ ಸಲ ಕಿಂಗ್ ಮೇಕರ್ ಆಗುವ ಭಾಗ್ಯವನ್ನು ಕಳೆದುಕೊಂಡಿದೆ. ಈ ಸಲದ ಚುನಾವಣೆಯಲ್ಲಿ ಸ್ಪಷ್ಟವಾಗಿ ಆಡಳಿತ ವಿರೋಧಿ ಅಲೆ ಕಾಣಿಸುತ್ತಿದೆ. ಇಂದು ಬೆಳಗ್ಗೆಯಿಂದ ನಡೆದ ಮತ ಎಣಿಕೆಯ ಸಮಗ್ರ ಮಾಹಿತಿ ಇಲ್ಲಿದೆ.
ಭಟ್ಕಳದಲ್ಲಿ ಕಾಂಗ್ರೆಸ್ ಬಹುತೇಕ ಖಚಿತ
ಭಟ್ಕಳದಲ್ಲಿ ಕೂಡ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಇಲ್ಲಿನ ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ್ಗಿಂತಲೂ ಕಾಂಗ್ರೆಸ್‌ನ ಮಂಕಾಳು ವೈದ್ಯ 16 ಸಾವಿರ ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.ಇನ್ನೂ ಆರು ಸುತ್ತಿನ ಮತ ಎಣಿಕೆ ಬಾಕಿಯಿದೆ.
ಮಂಡ್ಯದ ಮದ್ದೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಉದಯ್ ಗೌಡ ಅವರು ಗೆಲುವು ಸಾಧಿಸಿದ್ದಾರೆ.
ಕೊಡಗಿನ ವಿರಾಜಪೇಟೆಯಲ್ಲಿ ಕೆ.ಜಿ.ಬೋಪಯ್ಯ ಅವರಿಗೆ ಮುಖಭಂಗ
20 ವರ್ಷಗಳ ಬಳಿಕ ವಿರಾಜಪೇಟೆಯಲ್ಲಿ ಮುದುಡಿದ ಕಮಲ
ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಪೊನ್ನಣ್ಣ
ಕಾರ್ಕಳದಲ್ಲಿ ಬಿಜೆಪಿಯ ಸುನೀಲ್ ಕುಮಾರ್ಗೆ ಅಲ್ಪ ಹಿನ್ನಡೆಯಾಗಿದೆ. ಇಲ್ಲೀಗ ಕಾಂಗ್ರೆಸ್‌ನ ಉದಯ್ ಶೆಟ್ಟಿ ಮುನ್ನಡೆ ಸಾಧಿಸಿದ್ದಾರೆ. ಸುನೀಲ್ ಕುಮಾರ್ ಅವರು ಆರಂಭದಿಂದಲೂ ಮುನ್ನಡೆಯಲ್ಲಿದ್ದರು. ಆದರೆ ಅಚ್ಚರಿಯ ತಿರುವು ಸಿಕ್ಕಿದೆ.
ಮಾಜಿ ಸಿಎಂ ಸಿದ್ದರಾಮಯ್ಯನವ ಮನೆಯಲ್ಲಿ ಸೂತಕ
ಕರ್ನಾಟಕ ವಿಧಾನ ಸಭಾ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪರವಾಗಿ ಹೊರಬೀಳುತ್ತಿದೆ. ಈ ಸಂಭ್ರಮದಲ್ಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯನವರ ಮನೆಯಲ್ಲೀಗ ಸೂತಕ ಆವರಿಸಿದೆ. ಅವರ ಸ್ವಂತ ತಂಗಿ ಶಿವಮ್ಮನವರ ಪತಿ ರಾಮೇಗೌಡ (69) ಇಂದು ನಿಧನರಾಗಿದ್ದಾರೆ. ಸಂಜೆ ಸಿದ್ದರಾಮನಹುಂಡಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.