ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election Results 2023) ಮೇ 10ರಂದು ನಡೆದಿದೆ. ಈ ಚುನಾವಣೆಯ ಫಲಿತಾಂಶದ (Karnataka Election Results) ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಕಾಂಗ್ರೆಸ್ ಸ್ಪಷ್ಟ ಬಹುಮತಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ತುದಿಗಾಲಲ್ಲಿ ನಿಂತಿದೆ. ಬಿಜೆಪಿ ಪ್ರತಿಪಕ್ಷವಾಗಿದೆ. ಜೆಡಿಎಸ್ ಈ ಸಲ ಕಿಂಗ್ ಮೇಕರ್ ಆಗುವ ಭಾಗ್ಯವನ್ನು ಕಳೆದುಕೊಂಡಿದೆ. ಈ ಸಲದ ಚುನಾವಣೆಯಲ್ಲಿ ಸ್ಪಷ್ಟವಾಗಿ ಆಡಳಿತ ವಿರೋಧಿ ಅಲೆ ಕಾಣಿಸುತ್ತಿದೆ. ಇಂದು ಬೆಳಗ್ಗೆಯಿಂದ ನಡೆದ ಮತ ಎಣಿಕೆಯ ಸಮಗ್ರ ಮಾಹಿತಿ ಇಲ್ಲಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಮಧು ಬಂಗಾರಪ್ಪ ಅವರು ಗೆಲುವು ಸಾಧಿಸಿದ್ದಾರೆ.
ಕಲಬುರಗಿ ಜಿಲ್ಲೆ ಚಿತ್ತಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪ್ರಿಯಾಂಕ್ ಖರ್ಗೆ ಅವರು ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಮಣಿಕಂಠ ರಾಠೋಡ್ ವಿರುದ್ಧ ಪ್ರಿಯಾಂಕ್ ಜಯ ಗಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ 13ನೇ ಸುತ್ತಿನ ಮತ ಎಣಿಕೆ ನಂತರವೂ ಸುಧಾಕರ್ ಅವರು ಭಾರಿ ಹಿನ್ನಡೆಯಲ್ಲಿದ್ದಾರೆ.
ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರು ಕಾಂಗ್ರೆಸ್ ಅಭ್ಯರ್ಥಿ ನಾಗೇಂದ್ರ ವಿರುದ್ಧ ಸೋತಿದ್ದಾರೆ.
ಕುಡಚಿಯಲ್ಲಿ ಮತ ಎಣಿಕೆ ತಾತ್ಕಾಲಿಕ ಸ್ಥಗಿತ
ಕುಡಚಿ ಮತಕ್ಷೇತ್ರದ ಪಿಎಸ್ ನಂಬರ್ 97ರಲ್ಲಿ ಇವಿಎಂ ಮಷಿನ್ ಬ್ಯಾಟರಿ ಲೋ ಆದ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ ಎಣಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಿದ್ದಾರೆ.