ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election Results 2023) ಮೇ 10ರಂದು ನಡೆದಿದೆ. ಈ ಚುನಾವಣೆಯ ಫಲಿತಾಂಶದ (Karnataka Election Results) ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಕಾಂಗ್ರೆಸ್ ಸ್ಪಷ್ಟ ಬಹುಮತಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ತುದಿಗಾಲಲ್ಲಿ ನಿಂತಿದೆ. ಬಿಜೆಪಿ ಪ್ರತಿಪಕ್ಷವಾಗಿದೆ. ಜೆಡಿಎಸ್ ಈ ಸಲ ಕಿಂಗ್ ಮೇಕರ್ ಆಗುವ ಭಾಗ್ಯವನ್ನು ಕಳೆದುಕೊಂಡಿದೆ. ಈ ಸಲದ ಚುನಾವಣೆಯಲ್ಲಿ ಸ್ಪಷ್ಟವಾಗಿ ಆಡಳಿತ ವಿರೋಧಿ ಅಲೆ ಕಾಣಿಸುತ್ತಿದೆ. ಇಂದು ಬೆಳಗ್ಗೆಯಿಂದ ನಡೆದ ಮತ ಎಣಿಕೆಯ ಸಮಗ್ರ ಮಾಹಿತಿ ಇಲ್ಲಿದೆ.
ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅಭಯ ಪಾಟೀಲ್ ಅವರು 58704 ಮತಗಳನ್ನು ಗಳಿಸಿ, ಮುನ್ನಡೆ ಸಾಧಿಸಿದ್ದಾರೆ.
ಮೋದಿ ಬಂದ್ರೂ ಏನೂ ಆಗಲ್ಲ!
ಮೈಸೂರು: ವಿ.ಸೋಮಣ್ಣನವರು ಚಾಮರಾಜನಗರ ಮತ್ತು ವರುಣ ಎರಡೂ ಕ್ಷೇತ್ರಗಳಲ್ಲಿ ಸೋಲುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಮ್ಮ ನಿರೀಕ್ಷೆ ಸುಳ್ಳಾಗಲಿಲ್ಲ. ಮೋದಿಯವರು ಬಂದರೂ ಹೊಸದೇನೂ ಆಗುವುದಿಲ್ಲ. ಕಾಂಗ್ರೆಸ್ 120 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ ಎಂದು ಹೇಳಿದ್ದಾರೆ.
ಮಲ್ಲೇಶ್ವರದಲ್ಲಿ ಬಿಜೆಪಿಯ ಅಶ್ವತ್ಥನಾರಾಯಣ ಅವರ ಪಾರಮ್ಯ ಮುಂದುವರಿದಿದೆ. ಅಶ್ವತ್ಥನಾರಾಯಣ ಅವರು ಗೆಲುವು ಸಾಧಿಸಿದ್ದು, ಕ್ಷೇತ್ರದಲ್ಲಿ ಬಿಜೆಪಿ ಸಂಭ್ರಮಾಚರಣೆ ನಡೆಸಿದೆ.
ವಿ.ಸೋಮಣ್ಣಗೆ ಚಾಮರಾಜನಗರದಲ್ಲಿ ಮುಖಭಂಗ
ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಅವರು ಗೆಲುವು ಸಾಧಿಸಿದ್ದು, ಬಿಜೆಪಿಯ ವಿ. ಸೋಮಣ್ಣ ಅವರು ಮುಖಭಂಗ ಅನುಭವಿಸಿದ್ದಾರೆ.
ನಾಗಮಂಗಲ ಕ್ಷೇತ್ರ
ಕಾಂಗ್ರೆಸ್ (ಚಲುವರಾಯಸ್ವಾಮಿ) – 43483
ಜೆಡಿಎಸ್ (ಸುರೇಶ್‌ಗೌಡ) – 41680
ಬಿಜೆಪಿ (ಸುಧಾ ಶಿವರಾಮೇಗೌಡ) – 4354
ಮುನ್ನಡೆ ಕಾಂಗ್ರೆಸ್ 1803