ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election Results 2023) ಮೇ 10ರಂದು ನಡೆದಿದೆ. ಈ ಚುನಾವಣೆಯ ಫಲಿತಾಂಶದ (Karnataka Election Results) ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಕಾಂಗ್ರೆಸ್ ಸ್ಪಷ್ಟ ಬಹುಮತಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ತುದಿಗಾಲಲ್ಲಿ ನಿಂತಿದೆ. ಬಿಜೆಪಿ ಪ್ರತಿಪಕ್ಷವಾಗಿದೆ. ಜೆಡಿಎಸ್ ಈ ಸಲ ಕಿಂಗ್ ಮೇಕರ್ ಆಗುವ ಭಾಗ್ಯವನ್ನು ಕಳೆದುಕೊಂಡಿದೆ. ಈ ಸಲದ ಚುನಾವಣೆಯಲ್ಲಿ ಸ್ಪಷ್ಟವಾಗಿ ಆಡಳಿತ ವಿರೋಧಿ ಅಲೆ ಕಾಣಿಸುತ್ತಿದೆ. ಇಂದು ಬೆಳಗ್ಗೆಯಿಂದ ನಡೆದ ಮತ ಎಣಿಕೆಯ ಸಮಗ್ರ ಮಾಹಿತಿ ಇಲ್ಲಿದೆ.
ಶಿವಾಜಿ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರು ಗೆಲುವು ಸಾಧಿಸಿದ್ದಾರೆ. ಇವರ ಗೆಲುವಿನ ಕುರಿತು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಸರ್ವಜ್ಞ ನಗರದಲ್ಲಿ ಕೆ.ಜೆ ಜಾರ್ಜ್‌ಗೆ ಗೆಲುವು
ಬೆಂಗಳೂರಿನ ಸರ್ವಜ್ಞ ನಗರದಲ್ಲಿ ಭಾರಿ ಜಯ
ಮಾಜಿ ಸಚಿವ ಕೆ.ಜೆ. ಜಾರ್ಜ್
ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇಲ್ಲಿ ಬಿಜೆಪಿಯಿಂದ ಆರ್.ಅಶೋಕ್ ಸ್ಪರ್ಧಿಸಿದ್ದರು. ಆರಂಭಿಕ ಹಂತದಿಂದಲೂ ಆರ್.ಅಶೋಕ್ ಹಿನ್ನಡೆಯಲ್ಲೇ ಇದ್ದರು.
ಚಾಮರಾಜಪೇಟೆಯಲ್ಲಿ ಜಮೀರ್ ಅಹಮ್ಮದ್‌ಗೆ ಗೆಲುವು
30 ಸಾವಿರ ಮತಗಳ ಅಂತರದಲ್ಲಿ ಗೆದ್ದು ಬೀಗಿದ ಜಮೀರ್
ಕೆಪಿಸಿಸಿ ಕಚೇರಿಯಲ್ಲಿ ಮುಗಿಲು ಮುಟ್ಟಿದ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ
ಜೈಕಾರಗಳನ್ನ ಕೂಗಿ ಸಂಭ್ರಮಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು
ಚಳ್ಳೆಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ರಘುಮೂರ್ತಿಗೆ ಗೆಲುವು