ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election Results 2023) ಮೇ 10ರಂದು ನಡೆದಿದೆ. ಈ ಚುನಾವಣೆಯ ಫಲಿತಾಂಶದ (Karnataka Election Results) ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಕಾಂಗ್ರೆಸ್ ಸ್ಪಷ್ಟ ಬಹುಮತಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ತುದಿಗಾಲಲ್ಲಿ ನಿಂತಿದೆ. ಬಿಜೆಪಿ ಪ್ರತಿಪಕ್ಷವಾಗಿದೆ. ಜೆಡಿಎಸ್ ಈ ಸಲ ಕಿಂಗ್ ಮೇಕರ್ ಆಗುವ ಭಾಗ್ಯವನ್ನು ಕಳೆದುಕೊಂಡಿದೆ. ಈ ಸಲದ ಚುನಾವಣೆಯಲ್ಲಿ ಸ್ಪಷ್ಟವಾಗಿ ಆಡಳಿತ ವಿರೋಧಿ ಅಲೆ ಕಾಣಿಸುತ್ತಿದೆ. ಇಂದು ಬೆಳಗ್ಗೆಯಿಂದ ನಡೆದ ಮತ ಎಣಿಕೆಯ ಸಮಗ್ರ ಮಾಹಿತಿ ಇಲ್ಲಿದೆ.
ಚಿಕ್ಕಬಳ್ಳಾಪುರದಲ್ಲಿ ಕೆ.ಸುಧಾಕರ್ಗೆ ಮುನ್ನಡೆ
ರಾಮದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಪಟ್ಟಣ 3918 ಮತಗಳಿಂದ ಮುನ್ನಡೆ. ಬಿಜೆಪಿ ಅಭ್ಯರ್ಥಿ ಚಿಕ್ಕರೆವಣ್ಣಗೆ 3467 ಮತಗಳು.
ಬೈಲಹೊಂಗಲ ಮೂರನೇ ಸುತ್ತಿನಲ್ಲೂ ಕಾಂಗ್ರೆಸ್ 1027 ಮತಗಳ ಮುನ್ನಡೆ. ಬಿಜೆಪಿ ಅಭ್ಯರ್ಥಿಗೆ ಹಿನ್ನಡೆ.
ನಿಪ್ಪಾಣಿಯಲ್ಲಿ ಬಿಜೆಪಿ ಅಭ್ಯರ್ಥಿ ಶಶಿಕಲಾ ಜೊಲ್ಲೆ ಅವರು 6693 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ.
ಎನ್ಸಿಪಿಯ ಉತ್ತಮ್ ಪಾಟೀಲ್ – 4884 ಮತ್ತು ಕಾಂಗ್ರೆಸ್ ಅಭ್ಯರ್ಥಿ ಕಾಕಾ ಸಾಹೀಬ್ ಪಾಟೀಲ್ 4940 ಮತಗಳಿಸಿದ್ದಾರೆ.
ಗಂಗಾವತಿ ಕ್ಷೇತ್ರದಲ್ಲಿ ಎರಡನೇ ಸುತ್ತಿನಲ್ಲಿ ಕೆಆರ್‌ಪಿಪಿಯ ಗಾಲಿ ಜನಾರ್ದನರಡ್ಡಿ ಮುನ್ನಡೆ
1,265 ವೋಟ್ ಗಳಿಂದ ರಡ್ಡಿ ಮುನ್ನಡೆ
ಜನಾರ್ದನರಡ್ಡಿ – 7,271
ಬಿಜೆಪಿಯ ಪರಣ್ಣ ಮುನವಳ್ಳಿ – 4,366
ಕಾಂಗ್ರೆಸ್ ನ ಇಕ್ಬಾಲ್ ಅನ್ಸಾರಿ -6,006
ಶಿರಸಿ-ಸಿದ್ದಾಪುರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 6788 ಮತಗಳ ಮೂಲಕ ಮುನ್ನಡೆಯಲ್ಲಿದ್ದಾರೆ. ಭೀಮಣ್ಣ ನಾಯ್ಕ್ ಅವರು 4015 ಮತ ಪಡೆದಿದ್ದಾರೆ. ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶಿವರಾಮ್ ಹೆಬ್ಬಾರ್ ಮುಂದಿದ್ದಾರೆ