ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election Results 2023) ಮೇ 10ರಂದು ನಡೆದಿದೆ. ಈ ಚುನಾವಣೆಯ ಫಲಿತಾಂಶದ (Karnataka Election Results) ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಕಾಂಗ್ರೆಸ್ ಸ್ಪಷ್ಟ ಬಹುಮತಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ತುದಿಗಾಲಲ್ಲಿ ನಿಂತಿದೆ. ಬಿಜೆಪಿ ಪ್ರತಿಪಕ್ಷವಾಗಿದೆ. ಜೆಡಿಎಸ್ ಈ ಸಲ ಕಿಂಗ್ ಮೇಕರ್ ಆಗುವ ಭಾಗ್ಯವನ್ನು ಕಳೆದುಕೊಂಡಿದೆ. ಈ ಸಲದ ಚುನಾವಣೆಯಲ್ಲಿ ಸ್ಪಷ್ಟವಾಗಿ ಆಡಳಿತ ವಿರೋಧಿ ಅಲೆ ಕಾಣಿಸುತ್ತಿದೆ. ಇಂದು ಬೆಳಗ್ಗೆಯಿಂದ ನಡೆದ ಮತ ಎಣಿಕೆಯ ಸಮಗ್ರ ಮಾಹಿತಿ ಇಲ್ಲಿದೆ.
ಹಾವೇರಿಯಲ್ಲಿ ಮುಖ್ಯಮಂತ್ರಿ ನಿವಾಸದಲ್ಲಿ ನಾಗರಹಾವು ಕಾಣಿಸಿಕೊಂಡಿದೆ. ಬಳಿಕ ಪೊಲೀಸರು ಅದನ್ನು ಹಿಡಿದು ಹೊರಗೆ ಬಿಟ್ಟಿದ್ದಾರೆ.
ಸಿಎಂ ಬೊಮ್ಮಾಯಿ ಜಿಲ್ಲೆಯ 6ರಲ್ಲಿ 5 ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ
ಬೊಮ್ಮಾಯಿ ಸ್ಪರ್ಧಿಸಿದ ಶಿಗ್ಗಾವಿ ಹೊರತುಪಡಿಸಿ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ
ಆರ್ಆರ್ ನಗರದಲ್ಲಿ ಬಿಜೆಪಿಯ ವಿ.ಮುನಿರತ್ನ ಮತ್ತು ಕಾಂಗ್ರೆಸ್‌ನ ಕುಸುಮಾ ನಡುವೆ ತೀವ್ರ ಪೈಪೋಟಿ. ಇಲ್ಲಿ ವಿ ಮುನಿರತ್ನ ಅವರು ಕೇವಲ 700 ಮತಗಳಿಂದ ಮುನ್ನಡೆಯಲ್ಲಿದ್ದಾರೆ.
ಮೊದಲ ಸುತ್ತು ಹಾಗೂ ಎರಡನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ನರಗುಂದ ಮತ್ತು ರೋಣ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.
ಕಲಬುರಗಿಯ ಜೇವರ್ಗಿಯಲ್ಲಿ ಕಾಂಗ್ರೆಸ್‌ನ ಡಾ.ಅಜಯ್ ಸಿಂಗ್‌ಗೆ ಮುನ್ನಡೆ
800 ಮತಗಳ ಮುನ್ನಡೆಯಲ್ಲಿರುವ ಅಜಯ್ ಸಿಂಗ್
ಜೆಡಿಎಸ್‌ಗೆ ಎರಡನೇ ಸ್ಥಾನ, ಬಿಜೆಪಿಗೆ ಮೂರನೇ ಸ್ಥಾನ