ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election Results 2023) ಮೇ 10ರಂದು ನಡೆದಿದೆ. ಈ ಚುನಾವಣೆಯ ಫಲಿತಾಂಶದ (Karnataka Election Results) ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಕಾಂಗ್ರೆಸ್ ಸ್ಪಷ್ಟ ಬಹುಮತಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ತುದಿಗಾಲಲ್ಲಿ ನಿಂತಿದೆ. ಬಿಜೆಪಿ ಪ್ರತಿಪಕ್ಷವಾಗಿದೆ. ಜೆಡಿಎಸ್ ಈ ಸಲ ಕಿಂಗ್ ಮೇಕರ್ ಆಗುವ ಭಾಗ್ಯವನ್ನು ಕಳೆದುಕೊಂಡಿದೆ. ಈ ಸಲದ ಚುನಾವಣೆಯಲ್ಲಿ ಸ್ಪಷ್ಟವಾಗಿ ಆಡಳಿತ ವಿರೋಧಿ ಅಲೆ ಕಾಣಿಸುತ್ತಿದೆ. ಇಂದು ಬೆಳಗ್ಗೆಯಿಂದ ನಡೆದ ಮತ ಎಣಿಕೆಯ ಸಮಗ್ರ ಮಾಹಿತಿ ಇಲ್ಲಿದೆ.
ರಾಯಬಾಗ ಕ್ಷೇತ್ರದ ಎರಡನೇಯ ಹಂತದ ಮತ ಎಣಿಕೆ ಮುಕ್ತಾಯವಾಗಿದ್ದು, ಇಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಬಿಜೆಪಿ – 3626
ಕಾಂಗ್ರೆಸ್ – 1885
ಪಕ್ಷೇತರ – 1953
ಉಡುಪಿ ಬೈಂದೂರಿನಲ್ಲಿ ಕಾಂಗ್ರೆಸ್ ಗೋಪಾಲ ಪೂಜಾರಿ 5643 ಮತಗಳೊಂದಿಗೆ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬಿಜೆಪಿ ಗುರುರಾಜಶೆಟ್ಟಿ- 3696 ಮತ ಪಡೆದಿದ್ದಾರೆ
ಮೇಲುಕೋಟೆ ಕ್ಷೇತ್ರದ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ 135 ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ
ಅಥಣಿಯಲ್ಲಿ 2ನೇ ಸುತ್ತಿನ ಮತಎಣಿಕೆಯಲ್ಲೂ ಲಕ್ಷ್ಮಣ್ ಸವದಿ ಮುನ್ನಡೆ
5,374 ಮತಗಳಿಂದ ಲಕ್ಷ್ಮಣ್ ಸವದಿ ಮುನ್ನಡೆ
ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ – 5763
ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಸವದಿ – 11,137
ವಿಜಯನಗರ ಮೊದಲ ಸುತ್ತು
ಬಿಜೆಪಿ ರವೀಂದ್ರ 4410 ಮತ
ಕಾಂಗ್ರೆಸ್ ನ ಕೃಷ್ಣಪ್ಪ 2720 ಮತ
ಬಿಜೆಪಿಗೆ 1690 ಮತಗಳ ಮುನ್ನಡೆ