Site icon Vistara News

Karnataka Election Results Live Updates: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ; ಡಬಲ್​ ಎಂಜಿನ್​​ನ ಕೊಂಡಿ ಕಳಚಿದ ‘ಕೈ’

election result live

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election Results 2023) ಮೇ 10ರಂದು ನಡೆದಿದೆ. ಈ ಚುನಾವಣೆಯ ಫಲಿತಾಂಶದ (Karnataka Election Results) ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಕಾಂಗ್ರೆಸ್​ ಸ್ಪಷ್ಟ ಬಹುಮತಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ತುದಿಗಾಲಲ್ಲಿ ನಿಂತಿದೆ. ಬಿಜೆಪಿ ಪ್ರತಿಪಕ್ಷವಾಗಿದೆ. ಜೆಡಿಎಸ್​ ಈ ಸಲ ಕಿಂಗ್​ ಮೇಕರ್ ಆಗುವ ಭಾಗ್ಯವನ್ನು ಕಳೆದುಕೊಂಡಿದೆ. ಈ ಸಲದ ಚುನಾವಣೆಯಲ್ಲಿ ಸ್ಪಷ್ಟವಾಗಿ ಆಡಳಿತ ವಿರೋಧಿ ಅಲೆ ಕಾಣಿಸುತ್ತಿದೆ. ಇಂದು ಬೆಳಗ್ಗೆಯಿಂದ ನಡೆದ ಮತ ಎಣಿಕೆಯ ಸಮಗ್ರ ಮಾಹಿತಿ ಇಲ್ಲಿದೆ.

Lakshmi Hegde

ಗೆದ್ದ ಬಳಿಕ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ

ಮೊದಲ ಪ್ರಯತ್ನದಲ್ಲೇ ಯಶಸ್ಸು ಕಂಡಿದ್ದಕ್ಕೆ, ಪಕ್ಷದ ಹಿರಿಯರು, ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುತ್ತೇನೆ. ಬಿ.ಎಸ್.ಯಡಿಯೂರಪ್ಪ, ಬಿ.ವೈ.ರಾಘವೇಂದ್ರ ಮತ್ತು ಪಕ್ಷದ ಇತರ ಹಿರಿಯ ನಾಯಕರ ಮಾರ್ಗದರ್ಶನಲ್ಲಿ ಶಿಕಾರಿಪುರ ಅಭಿವೃದ್ಧಿ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಜನರ ಪ್ರೀತಿಯನ್ನು ಹೆಚ್ಚು ಗಳಿಸುತ್ತೇನೆ. ನಮ್ಮ ಬಿಜೆಪಿ ಪಕ್ಷ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುತ್ತದೆ. ನಾವು ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇವೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ. ಕಾಂಗ್ರೆಸ್​ ಸುಳ್ಳುಗಳನ್ನು 100 ಬಾರಿ ಹೇಳಿ ಗೆಲುವು ಸಾಧಿಸಿದೆ. ಈ ಬಗ್ಗೆ ಪಕ್ಷದಲ್ಲಿ ಇನ್ನಷ್ಟು ಹೆಚ್ಚಿನ ವಿಮರ್ಶೆ ಆಗಲಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

Lakshmi Hegde

ಕ್ಷೇತ್ರದ ಜನರಿಗೆ ಸುನೀಲ್ ಕುಮಾರ್ ಧನ್ಯವಾದ

ಉಡುಪಿ: ಕಾರ್ಕಳದಲ್ಲಿ ಗೆದ್ದ ಬಳಿಕ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಾಲ್ಕನೇ ಬಾರಿ ನನ್ನನ್ನು ಗೆಲ್ಲಿಸಿದ್ದಕ್ಕೆ ಕಾರ್ಕಳ ಜನರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ. ಇದು ಕಾರ್ಯಕರ್ತರ ಗೆಲುವು ಎಂದಿದ್ದಾರೆ.

ಇದು ಕಾರ್ಯಕರ್ತರ ಗೆಲುವು ಕಾಂಗ್ರೆಸ್ ನನ್ನ ವಿರುದ್ಧ ಅಪಪ್ರಚಾರ ಮಾಡಲು ಯತ್ನಿಸಿತ್ತು. ಆದರೆ ಕ್ಷೇತ್ರದ ಜನರು ಅದನ್ನ ನಂಬಲೂ ಇಲ್ಲ, ನನ್ನನ್ನು ಬಿಟ್ಟುಕೊಡಲೂ ಇಲ್ಲ ಎಂದು ಹೇಳಿದ್ದಾರೆ.

Lakshmi Hegde

ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​ನ ಸುರೇಶ್ ಬಾಬು, ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​ನ ಎಂ.ಟಿ.ಕೃಷ್ಣಪ್ಪ ಗೆದ್ದಿದ್ದಾರೆ.

Lakshmi Hegde

ಲಕ್ಷ್ಮೀ ಹೆಬ್ಬಾಳ್​ಕರ್ ಫುಲ್ ಖುಷ್​

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಗೆದ್ದಿರುವ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳಕರ್​ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ‘ಕ್ಷೇತ್ರದ ಜನರ ಆಶೀರ್ವಾದ ಮತ್ತು ಸುಳೆಭಾವಿಯ ಲಕ್ಷ್ಮೀ ದೇವಿ ಆಶೀರ್ವಾದದಿಂದ ಚುನಾಯಿತಳಾಗಿದ್ದೇನೆ. ಜನರು ನನ್ನನ್ನು ಮನೆಮಗಳು ಎಂದು ಒಪ್ಪಿಕೊಂಡಿದ್ದಾರೆ. ಇದಕ್ಕೆ ನನ್ನ ಗೆಲುವೇ ಸಾಕ್ಷಿ ಎಂದು ಹೇಳಿದ್ದಾರೆ. ಹಾಗೇ, ಸಚಿವ ಸ್ಥಾನ, ಯಾವ ಖಾತೆ ಬಗ್ಗೆ ಒಲವು ಎಂಬ ಪ್ರಶ್ನೆಗೆ ಉತ್ತರಿಸಿದ ಲಕ್ಷ್ಮೀ ಹೆಬ್ಬಾಳಕರ್​, ಅದೆಲ್ಲವನ್ನೂ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಹೇಳಿದ್ದಾರೆ.

Lakshmi Hegde

ಶೆಟ್ಟರ್ ಅಭೀಮಾನಿಗಳ ಕಣ್ಣೀರು

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಸೋತ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ.

ಮಾಜಿ ಸಿಎಮ್ ಜಗದೀಶ್ ಶೆಟ್ಟರ್‌ಗೆ ಸೋಲು ಹಿನ್ನಲೆ ಅವರ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ. ಒಬ್ಬ ಅಭಿಮಾನಿಯಂತೂ ಕುರ್ಚಿಯನ್ನೆಲ್ಲ ಕಿತ್ತು ಎಸೆದಿದ್ದಾನೆ.

Exit mobile version