Site icon Vistara News

Karnataka Election Results Live Updates: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ; ಡಬಲ್​ ಎಂಜಿನ್​​ನ ಕೊಂಡಿ ಕಳಚಿದ ‘ಕೈ’

election result live

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election Results 2023) ಮೇ 10ರಂದು ನಡೆದಿದೆ. ಈ ಚುನಾವಣೆಯ ಫಲಿತಾಂಶದ (Karnataka Election Results) ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಕಾಂಗ್ರೆಸ್​ ಸ್ಪಷ್ಟ ಬಹುಮತಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ತುದಿಗಾಲಲ್ಲಿ ನಿಂತಿದೆ. ಬಿಜೆಪಿ ಪ್ರತಿಪಕ್ಷವಾಗಿದೆ. ಜೆಡಿಎಸ್​ ಈ ಸಲ ಕಿಂಗ್​ ಮೇಕರ್ ಆಗುವ ಭಾಗ್ಯವನ್ನು ಕಳೆದುಕೊಂಡಿದೆ. ಈ ಸಲದ ಚುನಾವಣೆಯಲ್ಲಿ ಸ್ಪಷ್ಟವಾಗಿ ಆಡಳಿತ ವಿರೋಧಿ ಅಲೆ ಕಾಣಿಸುತ್ತಿದೆ. ಇಂದು ಬೆಳಗ್ಗೆಯಿಂದ ನಡೆದ ಮತ ಎಣಿಕೆಯ ಸಮಗ್ರ ಮಾಹಿತಿ ಇಲ್ಲಿದೆ.

Harish Kera

ಸಿಂಗಾಪುರದಿಂದ ಮರಳಿದ ಕುಮಾರಸ್ವಾಮಿ

ಬೆಂಗಳೂರು: ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ, ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ತೆರಳಿದ್ದ ಜೆಡಿಎಸ್‌ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಸಿಂಗಾಪುರದಿಂದ ವಾಪಸ್ ಆಗಿದ್ದಾರೆ. ರಾತ್ರಿ 12:20 ರ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ.

Exit mobile version