ಮತಯಂತ್ರಗಳನ್ನ ಒಡೆದು ಪುಡಿಪುಡಿ
ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ಇವಿಎಂ ಹಾಗೂ ವಿವಿಪ್ಯಾಟ್ ಯಂತ್ರಗಳನ್ನು ಒಡೆದುಹಾಕಿದ್ದಾರೆ.
ಹೆಚ್ಚುವರಿ ಮತಯಂತ್ರಗಳನ್ನು ಬಿಸನಾಳ, ಡೋಣುರ ಗ್ರಾಮದಿಂದ ವಿಜಯಪುರಕ್ಕೆ ವಾಪಸ್ ತೆಗೆದುಕೊಂಡು ಹೋಗುತ್ತಿದ್ದಾಗ ತಪ್ಪು ತಿಳಿದ ಗ್ರಾಮಸ್ಥರು ಈ ಕೃತ್ಯ ನಡೆಸಿದ್ದಾರೆ.
ಅರ್ಧಕ್ಕೆ ಮತದಾನ ಕಾರ್ಯ ಸ್ಥಗಿತಗೊಳಿಸಿ ವಾಪಸ್ ಕೊಂಡೊಯ್ಯಲಾಗ್ತಿದೆ ಎಂದು ತಪ್ಪು ಭಾವಿಸಿ ಮತ ಯಂತ್ರ ಒಡೆದು ಹಾಕಿದ್ದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
ಅಧಿಕಾರಿಗಳ ಕಾರನ್ನು ಜಖಂಗೊಳಿಸಲಾಗಿದ್ದು, ಸ್ಥಳದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ.
1 ಗಂಟೆ ವೇಳೆಗೆ ಶೇಕಡಾ 35ಕ್ಕಿಂತಲೂ ಅಧಿಕ ಮತದಾನ
ರಾಜ್ಯದಲ್ಲಿ ಮಧ್ಯಾಹ್ನ ಒಂದು ಗಂಟೆಯ ವೇಳೆಗೆ ಶೇ. 35 ಕ್ಕಿಂತಲೂ ಹೆಚ್ಚು ಮತದಾನ ವಾಗಿದೆ ಎಂದು ಅಂದಾಜಿಸಲಾಗಿದೆ.
ಬೆಂಗಳೂರಿನಲ್ಲೂ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಿದ್ದು, ಕುತೂಹಲ ಮೂಡಿಸಿದೆ.
ಮದು ಮಕ್ಕಳ ಮತದಾನ
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಹೊಸ ಬಾಳಿನ ಹೊಸ್ತಿಲಲ್ಲಿ ನಿಂತಿರುವ ಹೊಸ ಜೋಡಿ ಮತ ಚಲಾಯಿಸಿದ ಕ್ಷಣ.@ECISVEEP @SpokespersonECI @DeoMysuru #KarnatakaAssemblyElection2023 pic.twitter.com/WzYD7rGy2v
— Chief Electoral Officer, Karnataka (@ceo_karnataka) May 10, 2023
ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ
ರಾಯಚೂರಿನ ಲಿಂಗಸಗೂರು ಪಟ್ಟಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.
ಬಿಜೆಪಿ ಪಕ್ಷದ ಬಾವುಟ ವಿಚಾರ ಘರ್ಷಣೆಗೆ ಕಾರಣ. ಬಿಜೆಪಿ ಅಭ್ಯರ್ಥಿ ಮಾನಪ್ಪ ವಜ್ಜಲ್ ಕಾರಿಗೆ ಬಿಜೆಪಿ ಬಾವುಟ ಅಳವಡಿಸಲಾಗಿದ್ದು, ಕಾರನ್ನು ಮತಗಟ್ಟೆಯ ಆವರಣದಲ್ಲಿ ನಿಲ್ಲಿಸಲಾಗಿತ್ತು. ಇದನ್ನು ಕಾಂಗ್ರೆಸ್ ಕಾರ್ಯಕರ್ತರು ಪ್ರಶ್ನಿಸಿದಾಗ ಘರ್ಷಣೆ ನಡೆದಿದೆ.
ಶ್ರೀನಿವಾಸಪುರದಲ್ಲಿ ಘರ್ಷಣೆ
ಶ್ರೀನಿವಾಸಪುರ ತಾಲೂಕಿನ ಆಲಂಬಗಿರಿ ಮತಗಟ್ಟೆಯಲ್ಲಿ ಘರ್ಷಣೆ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಕುಮಾರ್ ಬೆಂಬಲಿಗರು ಸ್ವತಂತ್ರ ಅಭ್ಯರ್ಥಿ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.