KL Rahul : ಉತ್ತಮ ಪ್ರದರ್ಶನ ನೀಡದೇ ಹೋದರೆ ಟೀಕೆಗಳನ್ನು ಎದುರಿಸಲೇಬೇಕು ಎಂದ ಸೌರವ್​ ಗಂಗೂಲಿ - Vistara News

ಅವಿಭಾಗೀಕೃತ

KL Rahul : ಉತ್ತಮ ಪ್ರದರ್ಶನ ನೀಡದೇ ಹೋದರೆ ಟೀಕೆಗಳನ್ನು ಎದುರಿಸಲೇಬೇಕು ಎಂದ ಸೌರವ್​ ಗಂಗೂಲಿ

ಅಗ್ರ ಕ್ರಮಾಂಕದ ಬ್ಯಾಟರ್​ ಆಗಿರುವ ಕೆ. ಎಲ್​ ರಾಹುಲ್​ (KL Rahul) ಬಗ್ಗೆ ಟೀಮ್​ ಇಂಡಿಯಾ ಮ್ಯಾನೇಜ್ಮೆಂಟ್​ಗೆ ದೊಡ್ಡ ನಿರೀಕ್ಷೆ ಇರುತ್ತದೆ ಎಂದು ಸೌರವ್​ ಗಂಗೂಲಿ ಹೇಳಿದ್ದಾರೆ.

VISTARANEWS.COM


on

Sourav Ganguly said that if he does not perform well, he will have to face criticism
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಕೋಲ್ಕೊತಾ: ಭಾರತ ಕ್ರಿಕೆಟ್​ ತಂಡದ ಆರಂಭಿಕ ಬ್ಯಾಟರ್​ ಕೆ. ಎಲ್​ ರಾಹುಲ್ (KL Rahul)​ ತೀವ್ರ ಬ್ಯಾಟಿಂಗ್ ವೈಫಲ್ಯ ಎದುರಿಸುತ್ತಿದ್ದಾರೆ. ಕಳೆದ 10 ಟೆಸ್ಟ್​ಗಳಲ್ಲಿ ಅವರು ಗರಿಷ್ಠ 25 ರನ್​ ಬಾರಿಸಿಲ್ಲ. ಹೀಗಾಗಿ ಭಾರತ ತಂಡದಿಂದ ಅವರನ್ನು ಕೈಬಿಡಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ. ಹಿರಿಯ ಕ್ರಿಕೆಟಿಗರೂ ಅವರ ಬಗ್ಗೆ ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಭಾರತ ತಂಡದ ಮಾಜಿ ನಾಯಕ ಸೌರವ್​ ಗಂಗೂಲಿ ಕೂಡ ಅದೇ ಸಾಲಿಗೆ ಸೇರಿಕೊಂಡಿದ್ದು, ರಾಹುಲ್​ ವಿರುದ್ಧ ಟೀಕೆ ವ್ಯಕ್ತಪಡಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದ್ದಾರೆ.

ಭಾರತ ತಂಡದ ಪರ ಸ್ಕೋರ್​ ಮಾಡಿಲ್ಲ ಎಂದರೆ ಟೀಕೆಗಳನ್ನು ಎದುರಿಸಲೇಬೇಕು. ಇದಕ್ಕೆ ಕೆ. ಎಲ್​ ರಾಹುಲ್ ಕೂಡ ಹೊರತಲ್ಲ. ಈ ಹಿಂದೆಯೂ ಸಾಕಷ್ಟು ಆಟಗಾರರು ಉತ್ತಮ ಪ್ರದರ್ಶನದ ನೀಡದ ಹಿನ್ನೆಲೆಯಲ್ಲಿ ಟೀಕೆಗಳನ್ನು ಎದುರಿಸಿದ್ದಾರೆ ಎಂಬುದು ಸೌರವ್​ ಗಂಗೂಲಕ ಪಿಟಿಐಗೆ ಸಂದರ್ಶನ ನೀಡುತ್ತಾ ಅಭಿಪ್ರಾಯಪಟ್ಟಿದ್ದಾರೆ.

ಆಟಗಾರರ ಮೇಲೆ ಹೆಚ್ಚಿನ ಒತ್ತಡವಿರುತ್ತದೆ. ಟೀಮ್​ ಮ್ಯಾನೇಜ್ಮೆಂಟ್​ ಒಬ್ಬ ಆಟಗಾರ ಅತ್ಯಗತ್ಯ ಎಂದು ಅನಿಸಿದರೆ ಅವರು ಉತ್ತಮ ಪ್ರದರ್ಶನ ನೀಡಬೇಕಾಗುತ್ತದೆ. ಯಾಕಂದರೆ ದಿನದಂತ್ಯಕ್ಕೆ ಆ ಆಟಗಾರ ಉತ್ತಮ ಪ್ರದರ್ಶನ ನೀಡುವುದೇ ಪ್ರಮುಖವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ರಾಜಕೀಯಕ್ಕೆ ಕಾಲಿಡ್ತಾರಾ ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ?

ರಾಹುಲ್​ ಈ ಹಿಂದೆ ಹಲವಾರು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿರಬಹುದು. ಆದರೆ ಅಗ್ರ ಕ್ರಮಾಂಕದಲ್ಲಿ ಬ್ಯಾಟ್​ ಮಾಡುವ ಅವರಿಂದ ರನ್​ ಹರಿದುಬರಲೇಬೇಕು. ಭಾರತ ತಂಡದಲ್ಲಿ ರನ್​ ಗಳಿಕೆಗೆ ಒಂದು ಮಾನದಂಡ ಇರುತ್ತದೆ. ಅದನ್ನು ಪೂರೈಸಲೇಬೇಕು ಎಂಬುದಾಗಿ ಗಂಗೂಲಿ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಹುಬ್ಬಳ್ಳಿ: ಮತ್ತೊಂದು ವಿಮಾನ ತಡವಾಗಿ ಭೂ ಸ್ಪರ್ಶ; ಆಂತಕಕ್ಕೀಡಾದ ಪ್ರಯಾಣಿಕರು

VISTARANEWS.COM


on

ಹುಬ್ಬಳ್ಳಿ: ಹವಾಮಾನ ವೈಪರೀತ್ಯದಿಂದ ಹುಬ್ಬಳ್ಳಿಯಲ್ಲಿ ಮತ್ತೊಂದು ವಿಮಾನ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಮಂಗಳವಾರ ಸಂಜೆ ರಾತ್ರಿ ಹೊರಟಿದ್ದ ಫ್ಲೈ–91 ಸಂಸ್ಥೆ ವಿಮಾನವು ಹವಾಮಾನ ವೈಪರೀತ್ಯದಿಂದ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಒಂದೂವರೆ ಗಂಟೆ ತಡವಾಗಿ ಭೂಸ್ಪರ್ಶ ಮಾಡಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ರಾತ್ರಿ 8.15ಕ್ಕೆ ಲ್ಯಾಂಡ್‌ ಆಗಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದ ರಾತ್ರಿ 9.40ಕ್ಕೆ ಸುರಕ್ಷಿತವಾಗಿ ಭೂ ಸ್ಪರ್ಶ ಮಾಡಿದೆ. ಈ ವಿಮಾನದಲ್ಲಿ 21 ಮಂದಿ ಪ್ರಯಾಣಿಕರು ಇದ್ದರು ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕರು ತಿಳಿಸಿದ್ದಾರೆ.
ಸುರಕ್ಷತೆಯ ದೃಷ್ಟಿಯಿಂದ ಪೈಲಟ್‌ ವಿಮಾನವನ್ನು ಹುಬ್ಬಳ್ಳಿ ಮತ್ತು ದಾಂಡೇಲಿ ಸುತ್ತಮುತ್ತಲಿನ ಪ್ರದೇಶಗಳ ಆಗಸದಲ್ಲಿ ಒಂದು ಗಂಟೆ ಕಾಲ ಹಾರಾಟ ನಡೆಸಿದ್ದಾರೆ. ನಂತರ ಪರಿಸ್ಥಿತಿ ಸ್ವಲ್ಪ ಸುಧಾರಿಸಿದ ಬಳಿಕ ರಾತ್ರಿ 9.40ಕ್ಕೆ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದಾರೆ. ಇದರಿಂದ ಪ್ರಯಾಣಿಕರಲ್ಲಿ ಒಂದೂವರೆ ಗಂಟೆ ಕಾಲ ಚಡಪಡಿಕೆಗೆ ಒಳಗಾಗುವಂತಾಯಿತು.
ಏಪ್ರಿಲ್ 19ರಂದು ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿದ್ದ ಫ್ಲೈ91 ವಿಮಾನವು ಸಹ, ಹವಾಮಾನ ವೈಪರೀತ್ಯದಿಂದ ಮೂರು ಗಂಟೆಗೂ ಹೆಚ್ಚು ಸಮಯ ಆಕಾಶದಲ್ಲೇ ಹಾರಾಡಿ, ನಂತರ ಬೆಂಗಳೂರಿನಲ್ಲಿ ಸುರಕ್ಷಿತವಾಗಿ ಭೂ ಸ್ಪರ್ಶ ಮಾಡಿತ್ತು.

Continue Reading

Latest

ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಮತದಾನ ಆರಂಭ; ಸ್ಟಾಲಿನ್‌, ಮಮತಾ ಬ್ಯಾನರ್ಜಿ ಹಣೆಬರಹ ನಿರ್ಧಾರ

VISTARANEWS.COM


on

ನವದೆಹಲಿ:ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಪಶ್ಚಿಮ ಬಂಗಾಳದ 294 ಕ್ಷೇತ್ರಗಳಲ್ಲಿ 152 ಕ್ಷೇತ್ರಗಳಿಗೆ ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿವೆ. ಎರಡೂ ರಾಜ್ಯಗಳಲ್ಲಿ ಶೇ.20 ರಷ್ಟು ಮತದಾನವಾಗಿದೆ ಎಂದು ತಿಳಿದು ಬಂದಿದೆ.
ತಮಿಳುನಾಡಿನಲ್ಲಿ, 5.73 ಕೋಟಿಗೂ ಹೆಚ್ಚು ಮತದಾರರು 4,023 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಮುಖ್ಯವಾಗಿ ಡಿಎಂಕೆ ನೇತೃತ್ವದ ಮೈತ್ರಿ ಹಾಗೂ ಎಐಎಡಿಎಂಕೆ ನೇತೃತ್ವದ ಎನ್‌ಡಿಎ ನಡುವಿನ ತ್ರಿಕೋನ ಸ್ಪರ್ಧೆ ನಡೆಯುತ್ತಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಐದು ವರ್ಷಗಳ ಬಳಿಕ ಮತ್ತೆ ಅಧಿಕಾರಕ್ಕೆ ಮರಳಲು ಪ್ರಯತ್ನಿಸುತ್ತಿದ್ದಾರೆ. ನಟ ವಿಜಯ ಅವರ ಟಿವಿಕೆ ಪಕ್ಷ ಈ ಎರಡೂ ಪಕ್ಷಗಳಿಗೆ ಪೈಪೋಟಿ ನೀಡಿದೆ.
ಚೆನ್ನೈನ ದಕ್ಷಿಣದಲ್ಲಿರುವ ತಿರುವನ್ಮಿಯೂರ್ ಮತಗಟ್ಟೆಯಲ್ಲಿ ನಟ ಅಜಿತ್ ಮೊದಲು ಮತ ಚಲಾಯಿಸಿದರು. ಬೆಳಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಬೇಕಿತ್ತು. ಆದರೆ, ಅಜಿತ್ ಬೆಳಗ್ಗೆ 6.55ಕ್ಕೆ ತಮ್ಮ ಮತದಾನದ ಹಕ್ಕು ಚಲಾಯಿಸಿದರು. ಪಿ. ಚಿದಂಬರಂ, ನಟರಾದ ಕಮಲಹಾಸನ್‌,ರಜನಿಕಾಂತ್ ನಟಿ ಶೃತಿ ಹಾಸನ್‌, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಖುಷ್ಬೂ ಸುಂದರ್‌ ಸೇರಿದಂತೆ ಹಲವರು ಮತ ಚಲಾಯಿಸಿದರು.
ರಜನಿಕಾಂತ್ ರು ಚೆನ್ನೈನ ಸ್ಟೆಲ್ಲಾ ಮೇರಿ ಶಾಲೆಯಲ್ಲಿರುವ ಮತಗಟ್ಟೆಯಲ್ಲಿ ವೋಟ್ ಹಾಕಿದರು. ಆ ಬಳಿಕ ಅವರು ಮತ ಹಾಕಿದ ಬೆರಳನ್ನು ಜನರತ್ತ ತೋರಿಸಿದರು.
ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆ:
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಉತ್ತರ ಬಂಗಾಳದ ಎಲ್ಲಾ 152 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಉತ್ತರ ಬಂಗಾಳದ ಮುರ್ಶಿದಾಬಾದ್‌, ಜರ್ಗಾಮ, ಮೇದಿನಿಪುರ, ಬಂಕುರಾ, ಪುರುಲಿಯಾ, ಪಶ್ಚಿಮ ಬರ್ಧಮಾನ್‌ ಮತ್ತು ಬಿರ್ಬುಮ್‌ನಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ 16 ಜಿಲ್ಲೆಗಳ 152 ಕ್ಷೇತ್ರಗಳಿದ್ದು, 1,478 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಹೆಚ್ಚುವರಿ 4,660 ಸಹಾಯಕ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಒಟ್ಟು ಮತಗಟ್ಟೆಗಳ ಪೈಕಿ 8,000ಕ್ಕೂ ಹೆಚ್ಚು ಮತಗಟ್ಟೆಗಳನ್ನು ಅತಿಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. ರಾಜ್ಯದಾದ್ಯಂತ 780ಕ್ಕೂ ಹೆಚ್ಚು ಕೇಂದ್ರ ಭದ್ರತಾ ಪಡೆಗಳ ಕಂಪನಿಗಳು ನಿಯೋಜನೆ ಮಾಡಿದೆ. ಮತದಾನಕ್ಕೂ ಮುನ್ನ ಈಗಾಗಲೇ 199ಕ್ಕೂ ಹೆಚ್ಚು ಗೂಂಡಾಗಳನ್ನು ಬಂಧಿಸಲಾಗಿದೆ
ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಮತ ಎಣಿಕೆ ಮೇ 4ರಂದು ನಡೆಯಲಿದೆ. ಇದೇ ದಿನ ಕೇರಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿಯಲ್ಲಿ ಮತ ಎಣಿಕೆ ನಡೆಯಲಿದೆ.

Continue Reading

Latest

ಬ್ರೇಕ್ ವಿಫಲ:ಉತ್ತರ ಪ್ರದೇಶದಲ್ಲಿ ಭೀಕರ ಸರಣಿ ಅಪಘಾತ: 11 ಮಂದಿ ಸಜೀವ ದಹನ

VISTARANEWS.COM


on

ಮಿರ್ಜಾಪುರ್: ಬ್ರೇಕ್ ವಿಫಲಗೊಂಡ ಪರಿಣಾಮ ಹೆದ್ದಾರಿಯಲ್ಲಿ ಯದ್ವಾತದ್ವಾ ಟ್ರಕ್‌ ಚಲಾಯಿಸಿದ್ದರಿಂದ ಭೀಕರ
ಸರಣಿ ಅಪಘಾತವೊಂದು ಉತ್ತರ ಪ್ರದೇಶದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಇದರ ಪರಿಣಾಮ 11 ಮಂದಿ ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಿರ್ಜಾಪುರ್–ರೆವಾ ರಾಷ್ಟ್ರೀಯ ಹೆದ್ದಾರಿ 135ರ ಧರ್ಮಾಗಂಜ್‌ನ ಬೈಸೋದಾ ಹಿಲ್‌ ಸಮೀಪ ಕಳೆದ
ರಾತ್ರಿ 9 ಗಂಟೆ ವೇಳೆಗೆ ಸಂಭವಿಸಿದೆ.
ಮಿರ್ಜಾಪುರಕ್ಕೆ ಚಲಿಸುತ್ತಿದ್ದ ಟ್ರಕ್, ಬ್ರೇಕ್ ವಿಫಲವಾಗಿ ಮುಂದೆ ಚಲಿಸುತ್ತಿದ್ದ ಆಲ್ಟೋ ಹಾಗೂ ಬೊಲೆರೊ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟ್ರಕ್‌, ಆ ಎರಡೂ ಕಾರುಗಳ ಜತೆಗೆ ಇನ್ನೊಂದು ಟ್ರಕ್‌ಗೆ ಗುದ್ದಿದೆ. ಇದರಿಂದ ಅಕ್ಕಪಕ್ಕ ಸಾಗುತ್ತಿದ್ದ ಮತ್ತಷ್ಟು ವಾಹನಗಳಿಗೆ ಹಾನಿ ಉಂಟಾಗಿದೆ.
ಅತಿಯಾದ ವೇಗದಲ್ಲಿ ಚಲಿಸುತ್ತಿದ್ದ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಬೊಲೆರೊ ವಾಹನಕ್ಕೆ ಬೆಂಕಿ ಹೊತ್ತಿಕೊಂಡು ಮಕ್ಕಳು ಸೇರಿದಂತೆ ಏಳು ಮಂದಿ ಸಜೀವ ದಹನವಾಗಿದ್ದಾರೆ. ಆಲ್ಟೊ ಕಾರಿನಲ್ಲಿದ್ದ 4 ಪ್ರಯಾಣಿಕರೂ ಅಸುನೀಗಿದ್ದಾರೆ.
ಮೃತಪಟ್ಟ ಎಲ್ಲರನ್ನೂ ಗುರುತಿಸಲಾಗಿದೆ. ಗಾಯಾಳುಗಳನ್ನು ಮಿರ್ಜಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್‌ಪಿ ಅಪರ್ಣಾ ಕೌಶಿಕ್ ತಿಳಿಸಿದ್ದಾರೆ. ಮೇಲ್ನೋಟಕ್ಕೆ ಬ್ರೇಕ್ ವಿಫಲವಾಗಿದ್ದರಿಂದಲೇ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಆದರೂ ಪ್ರಕರಣ ಕುರಿತು ವಿಸ್ತ್ರತ ತನಿಖೆ ಮಾಡುತ್ತೇವೆ ಎಂದೂ ಅವರು ತಿಳಿಸಿದ್ದಾರೆ.
ಈ ಅಪಘಾತ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗಾಯಾಳುಗಳು ಆದಷ್ಟೂ ತ್ವರಿತವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

Continue Reading

Latest

ಎಸ್ಎಸ್ಎಲ್‌ಸಿ: ಹಿಂದಿಗೆ ಈ ಬಾರಿ ಗ್ರೇಡ್‌ ಬದಲು ಅಂಕ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

VISTARANEWS.COM


on

ಸೊರಬ: ನ್ಯಾಯಾಲಯದ ಆದೇಶದ ಪ್ರಕಾರ ಈ ಬಾರಿ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಗ್ರೇಡ್ ಬದಲು ಅಂಕ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಇಲ್ಲಿನ ಬಂಗಾರಧಾಮದಲ್ಲಿ ತಮ್ಮ ತಾಯಿ ಶಕುಂತಲಾ ಬಂಗಾರಪ್ಪ ಅವರ ಪುಣ್ಯಸ್ಮರಣೆ ಅಂಗವಾಗಿ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಅವರು ಮಾತನಾಡಿದರು.
ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಗ್ರೇಡ್ ಬದಲು ಅಂಕ ನೀಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಆ ಪ್ರಕಾರ ಅಂಕ ನೀಡಲಾಗುವುದು. ಮುಂದಿನ ವರ್ಷ ಗ್ರೇಡ್ ನೀಡುವ ಕುರಿತು ಸರ್ಕಾರ ನಿರ್ಧರಿಸಲಿದೆ ಎಂದರು.
ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ತೃತಿಯ ಭಾಷೆಯಾದ ಹಿಂದಿ ಕಡ್ಡಾಯವಲ್ಲ ಎಂಬ ತೀರ್ಮಾನವನ್ನು ಸರ್ಕಾರ ಕೈಗೊಂಡಿತ್ತು.‌ ಕನ್ನಡವನ್ನು ಉಳಿಸುವ ದೃಷ್ಟಿಯಿಂದ ಈ ಕೆಲಸ ಮಾಡಲಾಗಿತ್ತು. ಸರ್ಕಾರ ಹಿಂದಿ ವಿರೋಧಿ ಅಲ್ಲ. ಆದರೂ ಹೈಕೋರ್ಟ್ ಆದೇಶವನ್ನು ಸರ್ಕಾರ ಸ್ವಾಗತಿಸುತ್ತದೆ ಎಂದು ತಿಳಿಸಿದರು.

Continue Reading
Advertisement
Latest12 minutes ago

ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಪೆಟ್ಟು: 3.5 ಬಿಲಿಯನ್ ಡಾಲರ್ ಸಾಲ ಮರುಪಾವತಿಗೆ ಯುಎಇ ಸೂಚನೆ

ಸಿನಿಮಾ1 hour ago

ಎಲೆಕ್ಷನ್ ಮುಗಿದರೂ ಮುಗಿಯದ ದಳಪತಿ ಆಸ್ತಿ ಸಂಘರ್ಷ: ಹೆಂಡತಿಗೆ ಕೊಟ್ಟ 12 ಕೋಟಿ ಸಾಲದ ರಹಸ್ಯವೇನು?

Latest1 hour ago

ಹರಿಹರ ಪೀಠದಲ್ಲಿ ಲೆಕ್ಕ ಸಮರ: ವಚನಾನಂದ ಶ್ರೀ, ಟ್ರಸ್ಟಿಗಳ ನಡುವೆ ಆರೋಪ-ಪ್ರತ್ಯಾರೋಪ.

Latest3 hours ago

RCB v/s GT ಪಂದ್ಯದ ವೇಳೆ ಭದ್ರತಾ ವೈಫಲ್ಯ: 240 ಸಿಸಿಟಿವಿಗಳನ್ನು ನಿಷ್ಕ್ರಿಯಗೊಳಿಸಿದ್ದೇಕೆ? ಹೊರಬಿತ್ತು ಶಾಕಿಂಗ್‌ ಸತ್ಯ!

Latest3 hours ago

ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ: ಮೇ 1ರಿಂದ ಬದಲಾಗಲಿವೆ ಎಲ್‌ಪಿಜಿ ನಿಯಮಗಳು

Latest5 hours ago

ಮೇನಲ್ಲಿ ನಡೆಯಲಿದೆ ಪ್ಯಾನ್-ಐಐಟಿ ಬೆಂಗಳೂರು ಸಮ್ಮಿಟ್-2026

ಕರ್ನಾಟಕ6 hours ago

ಡಿಕೆಶಿ ಪದೇ ಪದೇ ದೆಹಲಿಗೆ ಹೋಗುತ್ತಿರುವುದೇಕೆ? ಸತೀಶ್ ಜಾರಕಿಹೊಳಿ ನೀಡಿದ ಆ ಗೊಂದಲದ ಹೇಳಿಕೆಯಲ್ಲಿದೆಯೇ ದೊಡ್ಡ ಸುಳಿವು

Latest6 hours ago

ಇರಾನ್‌ನಿಂದ ಹೊಸ ಶಾಂತಿ ಸಂಧಾನ: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಲು ಅಮೆರಿಕಕ್ಕೆ ಷರತ್ತುಬದ್ಧ ಪ್ರಸ್ತಾವನೆ ಸಲ್ಲಿಕೆ

Latest7 hours ago

ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾದ RCB! ಹೇಗಿರಲಿದೆ ಹೈವೋಲ್ಟೇಜ್‌ ಮ್ಯಾಚ್‌?

Latest23 hours ago

ಮೇ 15ಕ್ಕೆ ಸಿಗುತ್ತಾ ಗುಡ್​ ನ್ಯೂಸ್?​ ಸಂಭ್ರಮಾಚರಣೆ ಬೇಡವೆಂದು ಬೆಂಬಲಿಗರಿಗೆ ಖಡಕ್​ ಸೂಚನೆ! ಡಿ ಕೆ ಬ್ರದರ್ಸ್‌ ಪ್ಲ್ಯಾನ್‌ಗೆ ಟಕ್ಕರ್‌ ಕೊಡ್ತಾರಾ ಸಿಎಂ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌