ಸೊರಬ: ನ್ಯಾಯಾಲಯದ ಆದೇಶದ ಪ್ರಕಾರ ಈ ಬಾರಿ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಗ್ರೇಡ್ ಬದಲು ಅಂಕ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಇಲ್ಲಿನ ಬಂಗಾರಧಾಮದಲ್ಲಿ ತಮ್ಮ ತಾಯಿ ಶಕುಂತಲಾ ಬಂಗಾರಪ್ಪ ಅವರ ಪುಣ್ಯಸ್ಮರಣೆ ಅಂಗವಾಗಿ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಅವರು ಮಾತನಾಡಿದರು.
ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಗ್ರೇಡ್ ಬದಲು ಅಂಕ ನೀಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಆ ಪ್ರಕಾರ ಅಂಕ ನೀಡಲಾಗುವುದು. ಮುಂದಿನ ವರ್ಷ ಗ್ರೇಡ್ ನೀಡುವ ಕುರಿತು ಸರ್ಕಾರ ನಿರ್ಧರಿಸಲಿದೆ ಎಂದರು.
ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ತೃತಿಯ ಭಾಷೆಯಾದ ಹಿಂದಿ ಕಡ್ಡಾಯವಲ್ಲ ಎಂಬ ತೀರ್ಮಾನವನ್ನು ಸರ್ಕಾರ ಕೈಗೊಂಡಿತ್ತು. ಕನ್ನಡವನ್ನು ಉಳಿಸುವ ದೃಷ್ಟಿಯಿಂದ ಈ ಕೆಲಸ ಮಾಡಲಾಗಿತ್ತು. ಸರ್ಕಾರ ಹಿಂದಿ ವಿರೋಧಿ ಅಲ್ಲ. ಆದರೂ ಹೈಕೋರ್ಟ್ ಆದೇಶವನ್ನು ಸರ್ಕಾರ ಸ್ವಾಗತಿಸುತ್ತದೆ ಎಂದು ತಿಳಿಸಿದರು.
ಎಸ್ಎಸ್ಎಲ್‌ಸಿ: ಹಿಂದಿಗೆ ಈ ಬಾರಿ ಗ್ರೇಡ್ ಬದಲು ಅಂಕ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

