450 ಪೊಲೀಸರ ಕಣ್ಗಾವಲಿನಲ್ಲಿ ಬೆಂಗಳೂರು ಕರಗ: ದರ್ಗಾ ಪ್ರವೇಶ ತಡೆದರೆ ಅರೆಸ್ಟ್‌ - Vistara News

ಬೆಂಗಳೂರು

450 ಪೊಲೀಸರ ಕಣ್ಗಾವಲಿನಲ್ಲಿ ಬೆಂಗಳೂರು ಕರಗ: ದರ್ಗಾ ಪ್ರವೇಶ ತಡೆದರೆ ಅರೆಸ್ಟ್‌

38 ಅಧಿಕಾರಿಗಳು, 428 ಸಿಬ್ಬಂದಿ ಸೇರಿ 450ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗುತ್ತದೆ. ಉಳಿದ ದಿನಗಳಲ್ಲಿಯೂ ಜನದಟ್ಟಣೆಗೆ ಅನುಗುಣವಾಗಿ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಐತಿಹಾಸಿಕ ಹಾಗೂ ಬೆಂಗಳೂರಿನ ಪ್ರಮುಖ ಉತ್ಸವಗಳಲ್ಲೊಂದಾದ ಧರ್ಮರಾಯಸ್ವಾಮಿ ಕರಗ ಶಕ್ತ್ಯೋತ್ಸವಕ್ಕೆ ಈ ಬಾರಿ ಎಂದಿಗಿಂತಲೂ ಹೆಚ್ಚಿನ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗುತ್ತಿದ್ದು, ಬರೊಬ್ಬರಿ 450ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ಹಾಗೂ ಅಧಿಕಾರಿಗಳು ನಿಗಾ ವಹಿಸಲಿದ್ದಾರೆ.

ಕರೊನಾ ಕಾರಣಕ್ಕೆ ಕಳೆದೆರಡು ವರ್ಷ ಸಾರ್ವಜನಿಕವಾಗಿ ಕರಗ ನಡೆದಿಲ್ಲ. ಈ ಬಾರಿ ಕರೊನಾ ಸಂಕಷ್ಟ ಕಡಿಮೆಯಾಗಿರುವುದರಿಂದ ಜನರು ಸೇರಲು ಅವಕಾಶ ನೀಡಲಾಗಿದೆ. ಹೀಗಾಗಿ ಹೆಚ್ಚಿನ ಭಕ್ತರು ಸೇರುವ ಅಂದಾಜಿದೆ. ಅದರ ಜತೆಗೆ, ಇತ್ತೀಚೆಗೆ ಕರ್ನಾಟಕದಲ್ಲಿ ಹಿಜಾಬ್‌, ಹಲಾಲ್‌ ಸೇರಿ ಅನೇಕ ವಿಚಾರದಲ್ಲಿ ಹಿಂದು ಮುಸ್ಲಿಂ ನಡುವೆ ಕಲಹೆ ನಡೆಯುತ್ತಿದೆ.

ಇದರ ಮುಂದುವರಿದ ಭಾಗವಾಗಿ ಕೆಲವರು, ಹಿಂದುಗಳ ಪವಿತ್ರ ಉತ್ಸವವಾದ ಕರಗ ಮಹೋತ್ಸವದಲ್ಲಿ ಹಸಿ ಕರಗ ಹೊತ್ತುಕೊಂಡು ಬಳೇಪೇಟೆಯ ಮಸ್ತಾನ್‌ ಷಾ ದರ್ಗಾಕ್ಕೆ ಭೇಟಿ ನೀಡುವುದು ಬೇಡ ಎಂದು ಕೆಲವರು ಹೇಳಿಕೆ ನೀಡಿದ್ದರು. ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯವನ್ನು ಸ್ಥಗಿತಗೊಳಿಸಬೇಕು ಎಂಬ ಹೇಳಿಕೆಗಳಿಂದ ಚರ್ಚೆ ಕಾವು ಏರಿತ್ತು.
ಈಗಾಗಲೆ ಈ ಕುರಿತು ಸಚಿವ ಆರ್‌. ಅಶೋಕ್‌ ಸೇರಿ ಅನೇಕರು ಹೇಳಿಕೆ ನೀಡಿದ್ದು, ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಯಾವುದೇ ಸಂಪ್ರದಾಯವನ್ನು ಬದಲಾಯಿಸುವುದಿಲ್ಲ. ಕರಗ ಶಕ್ತ್ಯೋತ್ಸವ ಎಂದಿನಂತೆ ನಡೆಯುತ್ತದೆ ಎಂದು ಹೇಳಿದ್ದಾರೆ.

ಇಷ್ಟೆಲ್ಲದರ ನಂತರವೂ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸರು ಬಿಗಿ ಬಂದೋಬಸ್ತ್‌ ಕೈಗೊಳ್ಳುತ್ತಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ವಿಭಾಗ DCP ಎಂ.ಎನ್‌. ಅನುಚೇತ್‌, ಏಪ್ರಿಲ್‌ 13ರ ದೀಪೋತ್ಸವ, 14ರ ಹಸಿ ಕರಗ ಹಾಗೂ 16ರ ಮಹೋತ್ಸವಗಳಂದು ಪ್ರಮುಖವಾಗಿ ಬಂದೋಬಸ್ತ್‌ ವ್ಯವಸ್ಥೆ ಹೆಚ್ಚಿರುತ್ತದೆ. ಜನರ ನಿಯಂತ್ರಣ, ಸಂಚಾರ ನಿಯಂತ್ರಣ ಹಾಗೂ ಕರಗ ಹೋಗುವ ಮಾರ್ಗದಲ್ಲಿ ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ. ಉತ್ಸವ ಸಮಿತಿಯವರ ನಿರ್ಧಾರಕ್ಕೆ ಅನುಗುಣವಾಗಿ ಎಲ್ಲ ಬಂದೋಬಸ್ತ್‌ ನೀಡಲಾಗುತ್ತಿದೆ.

ವಿಶೇಷವಾಗಿ ಏಪ್ರಿಲ್‌ 16ರಂದು ಹೆಚ್ಚಿನ ಸಿಬ್ಬಂದಿ ನಿಯೋಜನೆ ಆಗಲಿದ್ದಾರೆ. 38 ಅಧಿಕಾರಿಗಳು, 428 ಸಿಬ್ಬಂದಿ ಸೇರಿ 450ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗುತ್ತದೆ. ಉಳಿದ ದಿನಗಳಲ್ಲಿಯೂ ಜನದಟ್ಟಣೆಗೆ ಅನುಗುಣವಾಗಿ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ. ಎಲ್ಲ ಕಡೆಗಳಲ್ಲಿ ಸಿಸಿಟಿವಿ ಹಾಗೂ ಲೈಟಿಂಗ್‌ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ. ಮಸ್ತಾನ್‌ ಷಾ ದರ್ಗಾ ಪ್ರವೇಶ ಸೇರಿ ಯಾವುದೇ ಧಾರ್ಮಿಕ ಆಚರಣೆಗಳಿಗೆ ಅಡ್ಡಿಪಡಿಸಲು ಯಾರೇ ಬಂದರು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅನುಚೇತ್‌ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಹೆಚ್ಚಿನ ಓದಿಗಾಗಿ: ʻಹಿಂದೂ ಯುವಕರು ಅತ್ಯಾಚಾರ ಮಾಡುವ ಮನಸ್ಥಿತಿಯವರಲ್ಲ.. ಹೀಗಾಗಿ ಆಕೆ ಬಚಾವಾಗಿದ್ದಾಳೆʼ: ಸಿ.ಟಿ.ರವಿ ವಿವಾದಿತ ಹೇಳಿಕೆ

ಕರಗ ಮಹೋತ್ಸವ ಆಚರಣೆಗಳು

ಏಪ್ರಿಲ್‌ 16ರಂದು ಕರಗ ಉತ್ಸವ ಸಾಗುವ ಮಾರ್ಗ

‘ಬೆಂಗಳೂರು ಸಿಟಿ ತಿಗಳರಪೇಟೆ ಶ್ರೀ ಧರ್ಮರಾಯಸ್ವಾಮಿ ದೇವಾಲಯದಿಂದ ಶನಿವಾರ ರಾತ್ರಿ 12-30ಕ್ಕೆ ಬಿಜಯ ಮಾಡಿಸಿ ಶ್ರೀ ಗಣಪತಿ ದೇವಾಲಯ ಮತ್ತು ಮುತ್ಯಾಲಮ್ಮ ದೇವಾಲಯಗಳಲ್ಲಿ ಪೂಜೆಯನ್ನು ಸ್ವೀಕರಿಸಿ, ಅಲಸೂರುಪೇಟೆ ಆಂಜನೇಯಸ್ಹಾಮಿ, ಶ್ರೀರಾಮ ದೇವಾಲಯ ಮತ್ತು ಶ್ರೀ ಪ್ರಸನ್ನ ಗಂಗಾಧರೇಶ್ವರಸ್ವಾಮಿ ದೇವಾಲಯಗಳಲ್ಲಿ ಪೂಜೆಗಳನ್ನು ಸ್ವೀಕರಿಸಿ, ನಗರ್ತರ ಪೇಟೆಯ ಶ್ರೀ ವೇಣುಗೋಪಾಲ ಕೃಷ್ಣಸ್ವಾಮಿ ದೇವಾಲಯದಿಂದ ಶ್ರೀ ನಗರೇಶ್ವರ ಸ್ವಾಮಿ ದೇವಾಲಯದಲ್ಲಿ ಪೂಜೆಯನ್ನು ಸ್ವೀಕರಿಸಿ, ಸಿದ್ದಣ್ಣ ಗಲ್ಲಿ ಭೈರೇದೇವರ ದೇವಾಲಯದ ಮಾರ್ಗವಾಗಿ ಕಬ್ಬನ್‌ಪೇಟೆ 14ನೇ ಕ್ರಾಸಿನಲ್ಲಿರುವ ಶ್ರೀ ರಾಮ ಸೇವಾ ಮಂದಿರ, 15ನೇ ಗಲ್ಲಿ ಮತ್ತು ಆಂಜನೇಯಸ್ಟಾಮಿ ದೇವಾಲಯಗಳಲ್ಲಿ ಪೂಜೆಗಳನ್ನು ಸ್ಟೀಕರಿಸಿ ಮಕ್ಕಳ ಬಸವಣ್ಣ ಗುಡಿ, ಗಾಣಿಗರ ಪೇಟೆ ಚೆನ್ನರಾಯ ಸ್ಟಾಮಿ ದೇವಸ್ಥಾನದಲ್ಲಿ ಪೂಜೆ.

ನಂತರ ಚಾಮುಂಡೇಶ್ವರಿ ದೇವಸ್ಥಾನ (ಕಾಳಮ್ಮನಗುಡಿ)ಯಿಂದ ಅವಿನ್ಯೂ ರಸ್ತೆಯ ಈಶ್ವರ ದೇವಾಲಯದವರೆಗೆ ಆಗಮಿಸುವುದು ನಂತರ ದೊಡ್ಡಪೇಟೆ ಮೂಲಕ ಕೋಟಿ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸ್ಟೀಕರಿಸಿ ನಂತರ ಶ್ರೀ ಕೃಷ್ಣೆರಾಜೇಂದ್ರ ಮಾರುಕಟ್ಟೆ ಸಮೀಪದ ಶ್ರೀ ಉದ್ಧವ ಗಣಪತಿ ದೇವಾಲಯದಲ್ಲಿ ಪೂಜೆ ಸ್ವೀಕರಿಸಿ ಪೋಲೀಸ್‌ ರಸ್ತೆ ಮೂಲಕ ಮುರಹರಿ ಸ್ಟಾಮಿ ಮಠ, ಬೀರೇದೇವರ ಗುಡಿ, ಅರಳೇಪೇಟೆ ಮುಖ್ಯರಸ್ತೆ ಮಾರ್ಗವಾಗಿ ಅರಳೇಪೇಟೆಯಲ್ಲಿರುವ ಶ್ರೀ ಲಕ್ಷೀನಾರಾಯಣಸ್ಟಾಮಿ ದೇವಾಲಯದಲ್ಲಿ ಪೂಜೆ ಸ್ವೀಕರಿಸಿ, ಬಳೇಪೇಟೆ ಬಳೇಗರಡಿ ಮಾರ್ಗವಾಗಿ ಮಸ್ತಾನ್‌ ಸಾಹೇಬರ ದರ್ಗಾದಲ್ಲಿ ಪೂಜೆ ಸ್ವೀಕಾರ.

ನಂತರ ಶ್ರೀ ನಿಮಿಷಾಂಭ ದೇವಾಲಯದಲ್ಲಿ ಪೂಜೆಯನ್ನು ಸ್ವೀಕರಿಸಿ, ನಗರದೇವತೆ ಶ್ರೀ ಅಣ್ಣಮ್ಮ ದೇವಾಲಯದಲ್ಲಿ ಪೂಜೆ ಸ್ವೀಕರಿಸಿ, ನಂತರ ಕಿಲಾರಿ ರಸ್ತೆಯಲ್ಲಿರುವ ಶ್ರೀ ಚಿಕ್ಕ ಧರ್ಮರಾಯಸ್ಜಾಮಿ ದೇವಾಲಯದಲ್ಲಿ ಪೂಜೆ ಸ್ಟೀಕರಿಸಿ, ಯಲಹಂಕ ಗೇಟ್‌ ಶ್ರೀ ಆಂಜನೇಯಸ್ಟಾಮಿ ದೇವಸ್ಥಾನದಲ್ಲಿ ಪೂಜೆಯನ್ನು ಸ್ಟೀಕರಿಸಿ, ಅವೆನ್ಯುರಸ್ತೆ ಮೂಲಕ ಶ್ರೀ ತುಪ್ಪದಾಂಜನೇಯ ಸ್ಹಾಮಿ ಗುಡಿ, ಶ್ರೀ ರಂಗನಾಥಸ್ಪಾಮಿ. ಶ್ರೀ ಜೌಡೇಶ್ವರಿ ಗುಡಿಗಳಲ್ಲಿ ಪೂಜೆ ಸ್ಟೀಕರಿಸಿ, ಸಿ.ಟಿ. ರಸ್ತೆಯ
ಮೂಲಕ ಕುಂಬಾರಪೇಟೆ ಮುಖ್ಯರಸ್ತೆಯನ್ನು ಪ್ರವೇಶಿಸಿ ಗೊಲ್ಲರಪೇಟಿ, ತಿಗಳರಪೇಟಿಗಳಲ್ಲಿ ಕುಲಬಾಂಧವರ ಮನೆಗಳಲ್ಲಿ ಮತ್ತು ಭಕ್ತರಿಂದ ಪೂಜೆಯನ್ನು ಸ್ವೀಕರಿಸಿ ಆನಂತರ ಹಾಲುಬೀದಿ, ಕಬ್ಬನ್‌ಪೇಟೆ ಮೂಲಕ ಸುಣ್ಣಕಲ್‌ಪೇಟೆ ಮಾರ್ಗವಾಗಿ ಕುಲ ಪುರೋಹಿತರ ಮನೆಗಳಲ್ಲಿ ಪೂಜಾದಿಗಳನ್ನು ಸ್ಟೀಕರಿಸಿ, ನರಸಿಂಹ ಜೋಯಿಸ್‌ ಗಲ್ಲಿ ಮೂಲಕ ಹಾದು ದೇವಾಲಯವನ್ನು ಸೇರುತ್ತದೆ.


ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

Latest

ಮೇನಲ್ಲಿ ನಡೆಯಲಿದೆ ಪ್ಯಾನ್-ಐಐಟಿ ಬೆಂಗಳೂರು ಸಮ್ಮಿಟ್-2026

VISTARANEWS.COM


on

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಪ್ಯಾನ್ ಐಐಟಿ ಅಲ್ಯೂಮ್ನಿ ಇಂಡಿಯಾ ಅಸೋಸಿಯೇಷನ್ ಜಂಟಿಯಾಗಿ ಮೇ 16ರಂದು ನಗರದಲ್ಲಿ “ಪ್ಯಾನ್-ಐಐಟಿ ಬೆಂಗಳೂರು ಸಮಿಟ್ 2026” ಆಯೋಜಿಸಿವೆ.
“ತಂತ್ರಜ್ಞಾನದಲ್ಲಿನ ಸ್ವಾಯತ್ತತೆ” ಎಂಬ ವಿಷಯದಡಿ ಈ ಸಮ್ಮಿಟ್ ನಡೆಯಲಿದೆ ಎಂದು ಇ-ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕರ್ನಾಟಕ, ವಿಶೇಷವಾಗಿ ಬೆಂಗಳೂರು, ಇಂದು ಭಾರತದ ತಂತ್ರಜ್ಞಾನ ಮಹತ್ವಾಕಾಂಕ್ಷೆಯ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ದೇಶದ ಪ್ರಮುಖ ಜಿಡಿಪಿ ಕೊಡುಗೆ ನೀಡುವ ನಗರಗಳಲ್ಲಿ ಬೆಂಗಳೂರು ಒಂದಾಗಿದೆ, ವೆಂಚರ್ ಕ್ಯಾಪಿಟಲ್ ಹೂಡಿಕೆಗಳ ಪ್ರಮುಖ ಕೇಂದ್ರವಾಗಿಯೂ ಗುರುತಿಸಿಕೊಂಡಿದೆ.

Continue Reading

Latest

ಪರಮಾಣು ಶಸ್ತ್ರಾಸ್ತ್ರಗಳು ಶಾಂತಿಯ ಉದ್ದೇಶಕ್ಕೆ ಬಳಕೆಯಾಗಲಿ: ವಿಶ್ವಸಂಸ್ಥೆ ಕಳಕಳಿ

VISTARANEWS.COM


on

ನ್ಯೂಯಾರ್ಕ್:‌ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಪರಮಾಣು ಶಸ್ತ್ರಾಸ್ತ್ರಗಳ ಶಾಂತಿಯುತ ಬಳಕೆಗೆ ಕರೆ ನೀಡಿದೆ.
ಚೆರ್ನೋಬಿಲ್‌ ದುರಂತದ ಸ್ಮರಣಾರ್ಥ ಶುಕ್ರವಾರ ಇಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷೆ ಅನ್ನಾಲೆನಾ ಬೇರ್‌ಬಾಕ್ ಅವರು, ಚೆರ್ನೋಬಿಲ್‌ನ ಪ್ರಮಾಣವು, ಪರಮಾಣು ತಂತ್ರಜ್ಞಾನವನ್ನು ಶಾಂತಿಯುತವಾಗಿ ಬಳಸಿದಾಗಲೂ ಇತರ ತಂತ್ರಜ್ಞಾನಗಳಿಗಿಂತ ಮೂಲಭೂತವಾಗಿ ಭಿನ್ನವಾಗಿದೆ ಎಂದು ಒತ್ತಿ ಹೇಳಿದರು.
ಏಪ್ರಿಲ್ 26, 1986 ರಂದು ಚೆರ್ನೋಬಿಲ್ ಪರಮಾಣು ವಿದ್ಯುತ್ ಸ್ಥಾವರ ಇತಿಹಾಸದಲ್ಲಿಯೇ ಅತ್ಯಂತ ಭೀಕರವಾದ ಪರಮಾಣು ಅಪಘಾತಗಳಲ್ಲಿ ಒಂದನ್ನು ಕಂಡಿತು. ಆ ದಿನ, ಸರಣಿ ಸ್ಫೋಟಕಗಳು ನಂ. 4 ರಿಯಾಕ್ಟರ್ ಅನ್ನು ಹಾಳು ಮಾಡಿ, ಉಕ್ರೇನ್, ಬೆಲಾರಸ್ ಮತ್ತು ಯುರೋಪಿನ ಇತರ ಭಾಗಗಳಲ್ಲಿ ವಿಕಿರಣಶೀಲ ಮಾಲಿನ್ಯವನ್ನು ಹರಡಿತು.
8 ಮಿಲಿಯನ್‌ಗಿಂತಲೂ ಹೆಚ್ಚು ಜನರು ವಿಕಿರಣಕ್ಕೆ ಒಡ್ಡಿಕೊಂಡರು, ಸಾವಿರಾರು ಜನರು ಸತ್ತರು ಮತ್ತು ಮಕ್ಕಳು ಲ್ಯುಕೇಮಿಯಾ ಮತ್ತು ಇತರ ಕಾಯಿಲೆಗಳನ್ನು ಬೆಳೆಸಿಕೊಂಡರು ಎಂದು ಬೇರ್‌ಬಾಕ್ ಹೇಳಿದರು.

Continue Reading
Advertisement
Latest11 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest1 day ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest1 day ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest1 day ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest1 day ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest1 day ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest1 day ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest1 day ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest1 day ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest2 days ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌