Job Alert | RBI ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೇದಿನ - Vistara News

ಉದ್ಯೋಗ

Job Alert | RBI ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೇದಿನ

RBI ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಲು ಇಂದೇ ಕೊನೇದಿನವಾಗಿದೆ. 300ಕ್ಕೂ ಅಧಿಕ ಉದ್ಯೋಗ ಅವಕಾಶಗಳಿವೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ನಲ್ಲಿ 300ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಇಂದು(ಏಪ್ರಿಲ್‌ 18) ಕೊನೆಯ ದಿನಾಂಕ ಎಂದು ತಿಳಿಸಲಾಗಿದೆ. ಇಂದು ಸಂಜೆ 6 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ಸಹಾಯಕ ವ್ಯವಸ್ಥಾಪಕ ಸೇರಿದಂತೆ ಗ್ರೇಡ್‌ B ಅಧಿಕಾರಿಗಳ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶವಿದೆ. RBI ಅಧೀಕೃತ ವೆಬ್‌ಸೈಟ್‌(https://rbi.org.in/ )ನಲ್ಲಿ ಅರ್ಜಿಪತ್ರ ದೊರುಕುತ್ತದೆ.

ಹುದ್ದೆಗೆ ಅವಕಾಶವಿರುವ ಮಾಹಿತಿ:

  • ಗ್ರೇಡ್‌ ʼಬಿʼ (DR) ಅಧಿಕಾರಿ – ಸಾಮಾನ್ಯ – 238
  • ಗ್ರೇಡ್‌ ʼಬಿʼ (DR) ಅಧಿಕಾರಿ – DEPR – 31
  • ಗ್ರೇಡ್‌ ʼಬಿʼ (DR) – DSIM – 25
  • ಸಹಾಯಕ ವ್ಯವಸ್ಥಾಪಕ- – ರಾಜಭಾಷಾ – 06
  • ಸಹಾಯಕ ವ್ಯವಸ್ಥಾಪಕ- – ಶಿಷ್ಟಾಚಾರ ಮತ್ತು ಭದ್ರತೆ – 03

ಅರ್ಜಿಯ ಮೊತ್ತ:

ಗ್ರೇಡ್‌ ಬಿ ಹುದ್ದೆಗೆ: ಸಾಮಾನ್ಯ ವರ್ಗ, ಇತರೆ ಹಿಂದುಳಿದ ವರ್ಗ(ಓಬಿಸಿ) ಹಾಗೂ ಆರ್ಥಿಕ ಹಿಂದುಳಿದ ವರ್ಗ(ಇಡಬ್ಲೂಎಸ್‌)ಗಳ ಅಭ್ಯರ್ಥಿಗಳಿಗೆ ₹850. ಎಸ್‌.ಸಿ, ಎಸ್.ಟಿ ಹಾಗೂ ಪಿಡಬ್ಲೂಬಿಡಿ ಅಭ್ಯರ್ಥಿಗಳಿಗೆ ₹100.

ಸಹಾಯಕ ವ್ಯವಸ್ಥಾಪಕ ಹುದ್ದೆಗೆ: ಸಾಮಾನ್ಯ ವರ್ಗ, ಇತರೆ ಹಿಂದುಳಿದ ವರ್ಗ(ಓಬಿಸಿ) ಹಾಗೂ ಆರ್ಥಿಕ ಹಿಂದುಳಿದ ವರ್ಗ(ಇಡಬ್ಲೂಎಸ್‌)ಗಳ ಅಭ್ಯರ್ಥಿಗಳಿಗೆ ₹600. ಎಸ್‌.ಸಿ, ಎಸ್.ಟಿ ಹಾಗೂ ಪಿಡಬ್ಲೂಬಿಡಿ ಅಭ್ಯರ್ಥಿಗಳಿಗೆ ₹100.

ಹೆಚ್ಚಿನ ಓದಿಗಾಗಿ: ಭಾರತದಲ್ಲಿ ಬಡತನ 12% ಇಳಿಕೆ: ವಿಶ್ವಬ್ಯಾಂಕ್‌ ವರದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಗುಡ್‌ನ್ಯೂಸ್‌; 93 ಬ್ಯಾಂಕ್‌ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

Job Alert: ಬೆಂಗಳೂರಿನಲ್ಲೇ ಉದ್ಯೋಗ ಹೊಂದಬೇಕು ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ 93 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್‌ 6.

VISTARANEWS.COM


on

job alert
Koo

ಬೆಂಗಳೂರು: ಬೆಂಗಳೂರಿನಲ್ಲೇ ಉದ್ಯೋಗ ಹೊಂದಬೇಕು ಎನ್ನುವ ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ (The Karnataka State Co-Operative Apex Bank Ltd)ದ ಬೆಂಗಳೂರು ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 93 ಬ್ಯಾಂಕ್‌ ಸಹಾಯಕ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್‌ 6 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಾಮಾನ್ಯ 85, ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ 8 ಹುದ್ದೆಗಳಿವೆ. ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಭಾಷಾ ವಿಷಯಗಳು ಸೇರಿದಂತೆ ಕ್ರೋಢೀಕೃತ ಶೇ. 55ರಷ್ಟು ಅಂಕ ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮತ್ತು ಅಂಗವಿಕಲ ಅಭ್ಯರ್ಥಿಗಳು ಕನಿಷ್ಠ ಶೇ. 50ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.

ಕಂಪ್ಯೂಟರ್‌ ಜ್ಞಾನ ಕಡ್ಡಾಯ

ಅಭ್ಯರ್ಥಿಗಳು ಕನ್ನಡ ಓದುವ ಜತೆಗೆ ಬರೆಯಲು, ಸ್ಪಷ್ಟವಾಗಿ ಮಾತನಾಡಲು ಮತ್ತು ಅರ್ಥ ಮಾಡಿಕೊಳ್ಳುವಂತಿರಬೇಕು. ಕಂಪ್ಯೂಟರ್ ಅಪರೇಷನ್ ಮತ್ತು ಅಪ್ಲಿಕೇಷನ್‌ನಲ್ಲಿ ಉತ್ತಮ ಜ್ಞಾನ ಹೊಂದಿರಬೇಕು. ಸಹಕಾರ ವಿಷಯದಲ್ಲಿ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿರುವವರಿಗೆ ಆದ್ಯತೆ ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ

ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-Iರ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ಜಾತಿ, ಹಿಂದುಳಿದ ವರ್ಗಗಳ ಅಂದರೆ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು 500 ರೂ. + ಜಿಎಸ್‌ಟಿ, ಸಾಮಾನ್ಯ ವರ್ಗ ಮತ್ತು ಇತರ ಹಿಂದುಳಿದ ಜಾತಿ, ಹಿಂದುಳಿದ ವರ್ಗಗಳ ಅಂದರೆ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 1,000 ರೂ. + ಜಿಎಸ್‌ಟಿಯನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಅರ್ಜಿ ಪರಿಶೀಲನೆಯ ನಂತರ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಮೌಖಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ 28,425 ರೂ.- 87,125 ರೂ. ಮಾಸಿಕ ವೇತನ ಸಿಗಲಿದೆ. ಗಮನಿಸಿ ಅಭ್ಯರ್ಥಿಯ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಒಂದು ಹಾಳೆಯ ಮೇಲಿಟ್ಟು ಆದರ ಕೆಳಗೆ ಕಪ್ಪು ಶಾಹಿಯ ಸ್ಕೆಚ್/ ಮಾರ್ಕರ್ ಪೆನ್‌ನಲ್ಲಿ ಸಹಿಯನ್ನು ಸ್ಕ್ಯಾನ್ ಮಾಡಿ ಅರ್ಜಿ ಜತೆಗೆ ಅಪ್‌ಲೋಡ್‌ ಮಾಡಬೇಕು. ಭಾವಚಿತ್ರ ಹಾಗೂ ಸಹಿಯನ್ನು ಅಪ್‌ಲೋಡ್‌ ಮಾಡದ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಆಗ್ನೇಯ ಮಧ್ಯ ರೈಲ್ವೆಯಿಂದ 733 ಅಪ್ರೆಂಟಿಸ್‌ಗಳ ನೇಮಕಕ್ಕೆ ಅರ್ಜಿ ಆಹ್ವಾನ; ಐಟಿಐ ಪಾಸಾದವರು ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: ಎಸ್‌ವಿಸಿ ಕೋ-ಆಪರೇಟಿವ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಏ. 9ರೊಳಗೆ ಅರ್ಜಿ ಸಲ್ಲಿಸಿ

Job Alert: ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದು ಎನಿಸಿಕೊಂಡಿರುವ, ಸುಮಾರು 117 ವರ್ಷಗಳ ಇತಿಹಾಸ ಹೊಂದಿರುವ ಎಸ್‌ವಿಸಿ ಕೋ-ಆಪರೇಟಿವ್‌ ಬ್ಯಾಂಕ್‌ ಲಿಮಿಟೆಡ್‌ ತನ್ನಲ್ಲಿ ಖಾಲಿ ಇರುವ 113 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಏಪ್ರಿಲ್‌ 9ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.

VISTARANEWS.COM


on

job alert
Koo

ಬೆಂಗಳೂರು: ಬ್ಯಾಂಕ್‌ ಉದ್ಯೋಗಿಯಾಗಬೇಕು ಎಂದುಕೊಂಡಿದ್ದೀರಾ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ. ಎಸ್‌ವಿಸಿ ಕೋ-ಆಪರೇಟಿವ್‌ ಬ್ಯಾಂಕ್‌ ಲಿಮಿಟೆಡ್‌ (SVC Co-operative Bank) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬ್ರ್ಯಾಂಚ್‌ ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌ ಸೇರಿ ಸುಮಾರು 113 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ (SVC Co-operative Bank Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಏಪ್ರಿಲ್‌ 9 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಚೀಫ್ ಮ್ಯಾನೇಜರ್ – 2 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ, ಸಿಎಫ್‌ಎ, ಪದವಿ, ಎಂಬಿಎ
ಕ್ಲಸ್ಟರ್ ಮ್ಯಾನೇಜರ್ – 6 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ, ಸಿಎಫ್‌ಎ, ಪದವಿ
ಬ್ರ್ಯಾಂಚ್‌ ಮ್ಯಾನೇಜರ್ – 10 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ, ಸಿಎಫ್‌ಎ, ಎಂಬಿಎ
ರೀಜನಲ್ ಮ್ಯಾನೇಜರ್ – 3 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ, ಸಿಎಫ್‌ಎ, ಎಂಬಿಎ
ಸೇಲ್ಸ್ ಮ್ಯಾನೇಜರ್ – 15 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ, ಸಿಎಫ್‌ಎ, ಎಂಬಿಎ
ಮ್ಯಾನೇಜರ್ / ಅಸಿಸ್ಟೆಂಟ್ ಮ್ಯಾನೇಜರ್ ಇನ್‌ಸ್ಟಿಟ್ಯೂಷನಲ್‌ ಸೇಲ್ಸ್‌ – 7 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ, ಸಿಎಫ್‌ಎ, ಎಂಬಿಎ
ಅಸಿಸ್ಟೆಂಟ್ ಮ್ಯಾನೇಜರ್ – 20 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ, ಸಿಎಫ್‌ಎ, ಡಿಪ್ಲೋಮಾ, ಪದವಿ, ಎಂಬಿಎ, ಬಿ.ಆರ್ಕ್‌.
ಗ್ರಾಹಕ ಸೇವಾ ಅಧಿಕಾರಿ – 50 ಹುದ್ದೆ, ವಿದ್ಯಾರ್ಹತೆ: ಪದವಿ, ಎಂಬಿಎ

ಉದ್ಯೋಗ ಸ್ಥಳ ಮತ್ತು ಅರ್ಜಿ ಶುಲ್ಕ

ಆಯ್ಕೆಯಾದವರಿಗೆ ಕರ್ನಾಟಕ, ಮಹಾರಾಷ್ಟ್ರ, ಗುಜರಾತ್‌, ಮಧ್ಯಪ್ರದೇಶ, ಹೊಸದಿಲ್ಲಿ, ತಮಿಳುನಾಡುಗಳಲ್ಲಿ ಪೋಸ್ಟಿಂಗ್‌ ನೀಡಲಾಗುತ್ತದೆ. ಯಾವ ಅಭ್ಯರ್ಥಿಗೂ ಅರ್ಜಿ ಶುಲ್ಕವಿಲ್ಲ.

ಆಯ್ಕೆ ವಿಧಾನ ಮತ್ತು ವಯೋಮಿತಿ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಹುದ್ದೆಗೆ ಅನುಗುಣವಾಗಿ ಗರಿಷ್ಠ ವಯೋಮಿತಿ 27ರಿಂದ 55 ವರ್ಷ.

SVC Co-operative Bank Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಹೆಚ್ಚಿನ ವಿವರಗಳಿಗಾಗಿ ಬ್ಯಾಂಕ್‌ನ ವೆಬ್‌ಸೈಟ್‌ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

ಆಸಕ್ತರು ತಮ್ಮ ರೆಸ್ಯೂಮ್‌ ಅನ್ನು ಬ್ಯಾಂಕ್‌ನ ಅಧಿಕೃತ ಇಮೇಲ್‌ careers@svcbank.comಗೆ ಕಳುಹಿಸುವ ಮೂಲಕ ಅರ್ಜಿ ಸಲ್ಲಿಸಬಹುದು. ರೆಸ್ಯೂಮ್‌ ಕಳುಹಿಸುವಾಗ ಗಮನಿಸಬೇಕಾದ ಅಂಶಗಳು: ಸಬ್ಜೆಕ್ಟ್‌ನಲ್ಲಿ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರಿ ಎನ್ನುವುದನ್ನು ದಾಖಲಿಸಿ. ಮೊಬೈಲ್‌ ನಂಬರ್‌, ಇಮೇಲ್‌ ವಿಳಾಸಗಳನ್ನು ಸರಿಯಾಗಿ ನಮೂದಿಸಿ. ಮುಂದೆ ನಿಮ್ಮೊಂದಿಗೆ ಸಂವಹನ ನಡೆಸಲು ಇದು ಬೇಕಾಗುತ್ತದೆ. ರೆಸ್ಯೂಮ್‌ ಅನ್ನು ಇಮೇಲ್‌ ಮೂಲಕ ಮಾತ್ರವೇ ಕಳುಹಿಸಬೇಕು. ಬೇರೆ ವಿಧಾನಗಳಲ್ಲಿ ಕಳುಹಿಸಿದ ರೆಸ್ಯೂಮ್‌ಗಳನ್ನು ಸ್ವೀಕರಿಸುವುದಿಲ್ಲ. ಎವಿಸಿ ಬ್ಯಾಂಕ್ ಉದ್ಯೋಗಿಗಳ ನೇಮಕಾತಿಗಾಗಿ ಯಾವುದೇ ಏಜೆಂಟ್‌ / ಏಜೆನ್ಸಿಯನ್ನು ನೇಮಿಸಿಕೊಂಡಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಉದ್ಯೋಗಾವಕಾಶ; ಐಟಿಐ, ಡಿಪ್ಲೋಮಾ ಪಾಸಾದವರು ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ಆಗ್ನೇಯ ಮಧ್ಯ ರೈಲ್ವೆಯಿಂದ 733 ಅಪ್ರೆಂಟಿಸ್‌ಗಳ ನೇಮಕಕ್ಕೆ ಅರ್ಜಿ ಆಹ್ವಾನ; ಐಟಿಐ ಪಾಸಾದವರು ಅಪ್ಲೈ ಮಾಡಿ

Job Alert: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ನಿರ್ವಹಿಸಬೇಕು ಎನ್ನುವುದು ನಿಮ್ಮ ಕನಸೇ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ. ಆಗ್ನೇಯ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ 733 ಅಪ್ರೆಂಟಿಸ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್‌ 12.

VISTARANEWS.COM


on

job alert
Koo

ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಆಗ್ರಹಿಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಆಗ್ನೇಯ ಮಧ್ಯ ರೈಲ್ವೆ (South East Central Railway)ಯಲ್ಲಿ ಖಾಲಿ ಇರುವ ತರಬೇತುದಾರ ಹುದ್ದೆಗಳ (Apprentice posts) ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (South East Central Railway Trade Apprentice Recruitment 2024). ಒಟ್ಟು 733 ಅಪ್ರೆಂಟಿಸ್‌ ಹುದ್ದೆಗಳಿವೆ. ಎಸ್‌ಎಸ್‌ಎಲ್‌ಸಿ, ಐಟಿಐ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನ ಏಪ್ರಿಲ್‌ 12 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕಾರ್ಪೆಂಟರ್ – 38, ಸಿಒಪಿಎ (COPA) – 100, ಡ್ರಾಫ್ಟ್‌ಮನ್ (ಸಿವಿಲ್)- 10, ಎಲೆಕ್ಟ್ರೀಷಿಯನ್- 137, ಎಲೆಕ್ಟ್ರೀಷಿಯನ್ ಮೆಕ್ಯಾನಿಕಲ್) -5, ಫಿಟ್ಟರ್ -187, ಮಷಿನಿಸ್ಟ್‌ – 4, ಪೇಂಟರ್ – 42, ಪ್ಲಂಬರ್ – 25, ಮೆಕ್ಯಾನಿಕಲ್ (Rac) – 15, ಎಸ್‌ಎಂಡಬ್ಲ್ಯು – 4, ಸ್ಟೆನೊ (ಇಂಗ್ಲಿಷ್) – 27, ಸ್ಟೆನೊ (ಹಿಂದಿ) – 19, ಡೀಸೆಲ್ ಮೆಕ್ಯಾನಿಕ್ – 12, ಟರ್ನರ್ – 4, ವೆಲ್ಡರ್- 18, ವೈಯರ್‌ಮನ್ – 80, ಕೆಮಿಕಲ್ ಲ್ಯಾಬೋರೇಟರಿ ಅಸಿಸ್ಟಂಟ್ – 4, ಡಿಜಿಟಲ್ ಪೋಟೋಗ್ರಾಫರ್ – 2 ಹುದ್ದೆಗಳಿವೆ. ಈ ಹುದ್ದೆಗಳಿಗೆ ಅನುಗುಣವಾಗಿ ಎಸ್‌ಎಸ್‌ಎಲ್‌ಸಿ, ಐಟಿಐ ಅನ್ನು ಸಂಬಂಧಿಸಿದ ಟ್ರೇಡ್‌ನಲ್ಲಿ ಪಾಸ್‌ ಮಾಡಿದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 15 ವರ್ಷ ಮತ್ತು ಗರಿಷ್ಠ ವಯಸ್ಸು 24 ವರ್ಷ. ಮೀಸಲಾತಿಗೆ ಅನುಗುಣವಾಗಿ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಮಾಜಿ ಯೋಧರು ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಯಾವುದೇ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಆಗ್ನೇಯ ಮಧ್ಯ ರೈಲ್ವೆ ಅಪ್ರೆಂಟಿಸ್‌ ಪೋಸ್ಟ್‌ಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳ ಆಧಾರದಲ್ಲಿ ಮೆರಿಟ್‌ ಲಿಸ್ಟ್‌ ಸಿದ್ಧಪಡಿಸಿ, ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ. ಈ ಅಭ್ಯರ್ಥಿಗಳಿಗೆ ಮೆಡಿಕಲ್ ಟೆಸ್ಟ್‌ ನಡೆಸಿ, ನಂತರದಲ್ಲಿ ಅಂತಿಮವಾಗಿ ಆಯ್ಕೆ ಮಾಡಲಾಗುತ್ತದೆ. ಅಪ್ರೆಂಟಿಸ್ ಹುದ್ದೆ ಅವಧಿಯಲ್ಲಿ, ಅಪ್ರೆಂಟಿಸ್ ಕಾಯ್ದೆ -1961ರ ಪ್ರಕಾರ ಮಾಸಿಕ ಸ್ಟೈಫಂಡ್‌ ನೀಡಲಾಗುತ್ತದೆ. ಈ ತರಬೇತಿಯ ಅವಧಿ 1 ವರ್ಷ.

South East Central Railway Trade Apprentice Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಹೆಸರು ನೋಂದಾಯಿಸಿ.
  • ಲಾಗಿನ್‌ ಆಗಿ ಸರಿಯಾದ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯವಿದ್ದ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಅಪ್ಲಿಕೇಷನ್‌ ಫಾರಂ ಸೆಂಡ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಉದ್ಯೋಗಾವಕಾಶ; ಐಟಿಐ, ಡಿಪ್ಲೋಮಾ ಪಾಸಾದವರು ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ನೌಕರರ ರಾಜ್ಯ ವಿಮಾ ನಿಗಮದಲ್ಲಿದೆ 1,930 ಹುದ್ದೆ; ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಇನ್ನು ಎರಡೇ ದಿನ ಅವಕಾಶ

Job Alert: ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿರುವ ನೌಕರರ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ನರ್ಸಿಂಗ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 27 ಕೊನೆಯ ದಿನ.

VISTARANEWS.COM


on

esic
Koo

ಬೆಂಗಳೂರು: ನರ್ಸಿಂಗ್‌ ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಸುವರ್ಣಾವಕಾಶ. ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿರುವ ನೌಕರರ ರಾಜ್ಯ ವಿಮಾ ನಿಗಮದಲ್ಲಿ (Employees State Insurance Corporation) ಖಾಲಿ ಇರುವ ನರ್ಸಿಂಗ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರ ಲೋಕಸೇವಾ ಆಯೋಗವು (Union Public Service Commission) ಅಧಿಸೂಚನೆಯನ್ನು ಹೊರಡಿಸಿದೆ. ಬರೋಬ್ಬರಿ 1,930 ನರ್ಸಿಂಗ್‌ ಅಧಿಕಾರಿ ಹುದ್ದೆಗಳಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮಾರ್ಚ್ 27 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಾಮಾನ್ಯ ವರ್ಗ-892, ಇಡಬ್ಲ್ಯುಎಸ್‌-193, ಎಸ್‌ಸಿ-235, ಎಸ್‌ಟಿ-164, ಒಬಿಸಿ ವರ್ಗಗಳಿಗೆ 446 ಹುದ್ದೆಗಳಿವೆ. ಬಿ.ಎಸ್‌ಸಿ (Hons) ನರ್ಸಿಂಗ್/ ಬಿ.ಎಸ್‌ಸಿ ನರ್ಸಿಂಗ್/ ಪೋಸ್ಟ್ ಬೇಸಿಕ್ ಬಿ.ಎಸ್‌ಸಿ ನರ್ಸಿಂಗ್ ಉತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದು. ಗಮನಿಸಿ ಅಭ್ಯರ್ಥಿಗಳು ರಾಜ್ಯ ನರ್ಸಿಂಗ್ ಕೌನ್ಸಿಲ್‌ನಲ್ಲಿ ನರ್ಸ್ ಅಥವಾ ನರ್ಸ್ ಸೂಲಗಿತ್ತಿಯಾಗಿ ನೋಂದಾಯಿಸಿಕೊಂಡಿರಬೇಕು ಅಥವಾ ಜನರಲ್ ನರ್ಸಿಂಗ್ ಮಿಡ್ ವೈಫರಿಯಲ್ಲಿ ಡಿಪ್ಲೊಮಾ ಕೋರ್ಸ್ ಮಾಡಿರಬೇಕು. ಅಲ್ಲದೆ 50 ಹಾಸಿಗೆಗಳ ಆಸ್ಪತ್ರೆಯಲ್ಲಿ ಕನಿಷ್ಠ ಒಂದು ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ

ಅರ್ಜಿ ಸಲ್ಲಿಕೆಗೆ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವರ್ಗಕ್ಕೆ 3 ವರ್ಷ, ಎಸ್‌ಸಿ / ಎಸ್‌ಟಿ ವರ್ಗಕ್ಕೆ 5 ವರ್ಷ ಮತ್ತು ವಿಶೇಷ ಚೇತನ ವ್ಯಕ್ತಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್‌ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 25 ರೂ. ಪಾವತಿಸಬೇಕು. ಮಹಿಳಾ / ಎಸ್‌ಸಿ / ಎಸ್‌ಟಿ / ವಿಶೇಷ ಚೇತನ ವ್ಯಕ್ತಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ, ಡಾಕ್ಯುಮೆಂಟ್‌ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 2 ವರ್ಷ ಪ್ರೊಬೇಷನರಿ ಅವಧಿ ಇರಲಿದ್ದು, ಬಳಿಕ ಹುದ್ದೆ ಖಾಯಂ ಆಗಲಿದೆ. 42,300 ರೂ.- 63,300 ರೂ. ಮಾಸಿಕ ವೇತನ ದೊರೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಕೆ ವಿಧಾನ

Continue Reading
Advertisement
Chikkaballapura lok sabha constituency congress ticket aspirants Sivasankar Reddy Veerappa Moily and Raksha Ramayya
Lok Sabha Election 202430 seconds ago

Lok Sabha Election 2024: ಕಾಂಗ್ರೆಸ್‌ಗೆ ಚಿಕ್ಕಬಳ್ಳಾಪುರ ಟೆನ್ಶನ್‌; ಟಿಕೆಟ್‌ ಸಿಗದಿದ್ದರೆ ಪಕ್ಷ ತೊರೆಯುವ ಎಚ್ಚರಿಕೆ ಕೊಟ್ಟ ಶಿವಶಂಕರ ರೆಡ್ಡಿ!

Karnataka Weather
ಮಳೆ1 min ago

Karnataka Weather : ಕಲಬುರಗಿಯಲ್ಲಿ 40ರ ಗಡಿದಾಟಿದ ತಾಪಮಾನ; 4 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌

Suryakumar Yadav
ಕ್ರೀಡೆ8 mins ago

SuryaKumar Yadav : ಮುಂಬೈ ತಂಡಕ್ಕೆ ಮತ್ತಷ್ಟು ಸಂಕಷ್ಟ; ಸೂರ್ಯಕುಮಾರ್​ ಸೇರ್ಪಡೆ ಅನುಮಾನ

modi
ದೇಶ18 mins ago

ಇತರರನ್ನು ಬೆದರಿಸುವುದು ಕಾಂಗ್ರೆಸ್‌ನ ಸಂಸ್ಕೃತಿ; ಮುಖ್ಯ ನ್ಯಾಯಮೂರ್ತಿಗೆ ಬರೆದ ವಕೀಲರ ಪತ್ರಕ್ಕೆ ಮೋದಿ ಪ್ರತಿಕ್ರಿಯೆ

Lok Sabha Election 202432 mins ago

Lok Sabha Election 2024: ಕೋಲಾರ ಕಾಂಗ್ರೆಸ್‌ ಗಲಾಟೆಗೆ ಸಿಎಂ, ಡಿಸಿಎಂ ಟ್ರೀಟ್ಮೆಂಟ್‌! ತಣ್ಣಗಾದ ರಮೇಶ್‌ ಕುಮಾರ್‌, ಮುನಿಯಪ್ಪ ಬಣ

Health Tips
ಬೆಂಗಳೂರು37 mins ago

Health Tips : ಬೇಸಿಗೆಯಲ್ಲಿ ಲೈಫ್‌ಸ್ಟೈಲ್‌ ಹೇಗಿರಬೇಕು? ಆರೋಗ್ಯ ಇಲಾಖೆಯಿಂದ ಸರಳ ಸೂತ್ರ

Anurag Thakur
ಕ್ರೀಡೆ41 mins ago

Anurag Thakur : 2036ರಲ್ಲಿ ಭಾರತದಲ್ಲಿ ಒಲಿಂಪಿಕ್ಸ್​​; ಅನುರಾಗ್ ಠಾಕೂರ್​

Side Effects Of Pillow
ಆರೋಗ್ಯ53 mins ago

Side Effects Of Pillow: ಎತ್ತರದ ದಿಂಬು ಬಳಸುತ್ತೀರಾ? ಸಮಸ್ಯೆ ತಪ್ಪಿದ್ದಲ್ಲ!

Naveen Polishetty
ಸಿನಿಮಾ58 mins ago

Naveen Polishetty: ಅಮೆರಿಕದಲ್ಲಿ ಬೈಕ್‌ ಅಪಘಾತ; ಅನುಷ್ಕಾ ಶೆಟ್ಟಿ ಜತೆ ತೆರೆ ಹಂಚಿಕೊಂಡಿದ್ದ ನಟನಿಗೆ ಗಾಯ

Hardik Pandya
ಕ್ರೀಡೆ1 hour ago

Hardik Pandya : ಹೈದರಾಬಾದ್​ನಲ್ಲೂ ಪಾಂಡ್ಯಗೆ ಕಾಟ ಕೊಟ್ಟ ಕ್ರಿಕೆಟ್​ ಪ್ರೇಕ್ಷಕರು

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20245 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20246 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ14 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌