ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಬಳಸಿದ 11 ಕಟು ಶಬ್ದಗಳು: ಇದು ಮಾಜಿ CMಗಳ ಸಮರ - Vistara News

ರಾಜಕೀಯ

ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಬಳಸಿದ 11 ಕಟು ಶಬ್ದಗಳು: ಇದು ಮಾಜಿ CMಗಳ ಸಮರ

ಮಂತ್ರಿಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡಿದ ಮೇಲೆ ಬಂಧಿಸುವ ಅಗತ್ಯವೇನಿದೆ ಎಂದು ಕುಮಾರಸ್ವಾಮಿ ಹೇಳಿದ ಮಾತಿಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದರು. ಇದು HDK ಅವರನ್ನು ಕೆರಳಿಸಿದೆ.

VISTARANEWS.COM


on

H.D Kumaraswamy'
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ (Santosh Suicide Case) ಕುರಿತಂತೆ ಮಾಜಿ ಸಚಿವ ಕೆ. ಎಸ್‌. ಈಶ್ವರಪ್ಪ (K.S. Eshwarappa) ಅವರನ್ನು ಬಂಧಿಸಬೇಕು ಎಂಬ ಕುರಿತು ತಮ್ಮ ವಿರುದ್ಧ ಮಂಡ್ಯದಲ್ಲಿ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ(Siddaramayya) ಮಾಡಿದ್ದ ವಾಗ್ದಾಳಿಗೆ ರಾಜ್ಯ ಜೆ.ಡಿ.ಎಸ್‌. ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ (H.D. Kumaraswamy) ತೀಕ್ಷ್ಣ ಪ್ರತ್ಯುತ್ತರ ನೀಡಿದ್ದಾರೆ.

ಈಶ್ವರಪ್ಪ ಅವರು ಮಂತ್ರಿಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಂಧಿಸುವ ಅಗತ್ಯವೇನಿದೆ ಎಂದು ಈ ಹಿಂದೆ ಎಚ್‌.ಡಿ. ಕುಮಾರಸ್ವಾಮಿ ಭಾನುವಾರ ಮಾತನಾಡಿದ್ದರು. ಈಶ್ವರಪ್ಪ ಪ್ರಕರಣ ಮುಗಿದಿದೆ. ಕಾಂಗ್ರೆಸ್‌ ಹೇಳುವಂತೆ ಬಂಧಿಸುವ ಅಗತ್ಯ ಏನಿದೆ? ಇಂಥ ವಿಚಾರಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ವೋಟ್‌ಬ್ಯಾಂಕ್‌ ಸೃಷ್ಟಿಸಿಕೊಳ್ಳಲು ಯತ್ನಿಸುತ್ತಿದೆ. ಒಂದು ಸಮುದಾಯದ ವೋಟು ಪಡೆಯಲು ಕಾಂಗ್ರೆಸ್‌ ಹಾಗೂ ಬಿಜೆಪಿ ಕೋಮುವಾದವನ್ನು ಬಳಸಿಕೊಳ್ಳುತ್ತಿವೆ ಎಂದಿದ್ದರು. ಇದನ್ನು ಪ್ರಸ್ತಾಪಿಸಿದ್ದ ಸಿದ್ದರಾಮಯ್ಯ, ಹಾಗಾದರೆ ಕೊಲೆ ಮಾಡಿದವನು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಬಿಟ್ಟುಬಿಡಬೇಕ? ಒಬ್ಬ ಕಳ್ಳನನ್ನು ಮತ್ತೊಬ್ಬ ಕಳ್ಳ ಹೇಗೆ ಬಚಾವು ಮಾಡುತ್ತಾರೆ ನೋಡಿ ಎಂದು ಮಂಡ್ಯದಲ್ಲಿ ಮಾತನಾಡಿದ್ದರು.

ಇದೇ ವಿಚಾರವನ್ನು ಟ್ವಿಟ್ಟರ್‌ನಲ್ಲಿ ಪ್ರಸ್ತಾಪಿಸಿದ್ದ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಅವರು, ಈಶ್ವರಪ್ಪ ರಾಜೀನಾಮೆ ವಿಚಾರದಲ್ಲಿ ಬಿಜೆಪಿಯ ʼಬಿʼ ಟೀಂ ಸೇವೆ ಸಲ್ಲಿಸುತ್ತಿದೆ ಎಂದಿದ್ದರು. 2018ರ ವಿಧಾನಸಭೆ ಚುನಾವಣೆ ಸೇರಿ ಅನೇಕ ಸಂದರ್ಭದಲ್ಲಿ ಜೆಡಿಎಸ್‌ ಪಕ್ಷವನ್ನು ಬಿಜೆಪಿಯ ಬಿ ಟೀಂ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆದಿಯಾಗಿ ಅನೇಕರು ಹೇಳಿದ್ದಾರೆ. ಈ ಎಲ್ಲ ಮಾತುಗಳಿಗೆ ಉತ್ತರವೆಂಬಂತೆ ಇದೀಗ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಹೆಚ್ಚಿನ ಓದಿಗಾಗಿ: ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯ ಹಗಲು ದರೋಡೆ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಕುಮಾರಸ್ವಾಮಿ ಮಾತಿನ ಪೀಠಿಕೆ
  • ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ, ಆ ಪಾಪಕ್ಕೆ ಪ್ರತಿಯಾಗಿ ಪಡೆದ ಫಲದ ಬಗ್ಗೆ ಪಲಾಯನವೇಕೆ ಸುಳ್ಳುರಾಮಯ್ಯ? ಕಳ್ಳಮಾಲು ಹ್ಯೂಬ್ಲೆಟ್ ವಾಚಿನ ಬಗ್ಗೆ ವಾಕರಿಕೆ ಬರುವಷ್ಟು ಹೇಸಿಗೆ ಕಥೆಗಳೇ ಇವೆ. ಇವೆರಡೂ ಪ್ರಶ್ನೆಗಳಿಗೂ ಉತ್ತರಿಸುತ್ತಿಲ್ಲ, ಯಾಕಯ್ಯಾ?
  • ಈಶ್ವರಪ್ಪ ಬಗ್ಗೆ ಮಾತನಾಡಿ, ಅಭ್ಯಂತರವಿಲ್ಲ. DYSP ಗಣಪತಿ ಬಗ್ಗೆಯೂ ಹೇಳಿ, ಬೇಜಾರಿಲ್ಲ. ಆದರೆ; ಕಲ್ಲಪ್ಪ ಹಂಡೀಭಾಗ್ ಬಗ್ಗೆ ಮಾತನಾಡಿದರೆ ನಿಮ್ಮ ಜಾಣ ಮೌನವೇಕೆ? ಆ ಪಾಪಕ್ಕೆ ಪ್ರಾಯಶ್ಚಿತ್ತ ಅನುಭವಿಸದೇ ವಿಧಿಯೇ ಇಲ್ಲ. ಪ್ರಾಮಾಣಿಕ ಅಧಿಕಾರಿಯ ದುರಂತ ಅಂತ್ಯ ನಿಮ್ಮನ್ನು ಸುಮ್ಮನೆ ಬಿಡಲ್ಲ.
  • ಮಂಡ್ಯದಲ್ಲಿ ಜೆಡಿಎಸ್ ಬಗ್ಗೆ ಸುಳ್ಳು ಹೇಳಿದ್ದೀರಿ. ನಾಚಿಕೆ ಆಗುವುದಿಲ್ಲವೇ ನಿಮಗೆ? ನಿಮ್ಮ 5 ವರ್ಷಗಳ ದುರಾಡಳಿತದಲ್ಲಿ ಆ ಜಿಲ್ಲೆಯೊಂದರಲ್ಲೇ 200 ರೈತರು ಆತ್ಮಹತ್ಯೆಗೆ ಶರಣಾದರು. ಮೈಷುಗರ್ ಕಾರ್ಖಾನೆ ಮುಚ್ಚಿಸಿ ಕಬ್ಬು ಬೆಳೆಗಾರರ ಮನೆ ಹಾಳು ಮಾಡಿದಿರಿ. ಮರೆತುಬಿಟ್ಟಿರಾ ಸುಳ್ಳುರಾಮಯ್ಯ?
  • ಮಂಡ್ಯದಲ್ಲಿ ಏಳೂ ಸೀಟು ಸಿಗಲಿಲ್ಲ ಎಂದು ಜನರ ಮುಂದೆ ಹಲುಬುತ್ತೀರಿ. 200 ಅನ್ನದಾತರ ಜೀವಕ್ಕೆ ಎರವಾಗಿ, ಇಡೀ ಜಿಲ್ಲೆಯಲ್ಲಿ ಮರಣಮೃದಂಗ ಭಾರಿಸಿದ ನಿಮ್ಮ ರೈತವಿರೋಧಿ ನೀತಿಗಳು ಕಸಿದ ಜೀವಗಳ ಲೆಕ್ಕವೆಲ್ಲಾ ಚುಕ್ತಾ ಆಗುವ ಕಾಲ ಬಂದಿದೆ. ಜೀವ ತೆಗೆಯುವ ಜವರಾಯನ ಅವತಾರವೇ ನೀವಾಗಿರುವಾಗ ನಮ್ಮ ಕಣ್ಣೀರನ್ನು ಹಂಗಿಸುತ್ತೀರಿ.
  • ಆಪರೇಷನ್ ಕಮಲದಿಂದ ನಿಮ್ಮ ಜೇಬು ಸೇರಿದ ಆಕರ್ಷಕ ಅಂಕಿಯ ಹಣದ ಅಸಲೀಯೆತ್ತು ನನಗೂ ಗೊತ್ತು! ನೀವು ರಾಜ್ಯ ಕಂಡ ಗ್ರೇಟ್ ಹಣಕಾಸು ಮಂತ್ರಿ, ಪ್ಲಸ್ಸೂ ಮೈನಸ್ಸಿನ ಪ್ರವೀಣ, ಪರ್ಸಂಟೇಜ್ ಪಿತಾಮಹನಷ್ಟೇ ಅಲ್ಲ.. ಅನೈತಿಕ ರಾಜಕಾರಣದ ಅಸಲಿ ಅಪ್ಪ. ಈಗ ಹೇಳಿ? ಉಂಡ ಮನೆಗೆ ಮೂರು ಬಗೆದ ನೈಜ ಕಳ್ಳ ಯಾರು?
  • ಮಿಸ್ಟರ್ ಸುಳ್ಳುರಾಮಯ್ಯ.. ದಿನಕ್ಕಿಷ್ಟು ಸುಳ್ಳು, ಕ್ಷಣಕ್ಕೊಂದು ಪೊಳ್ಳು; ಇದು ನಿಮ್ಮ ಜೀವನಶೈಲಿ. ಅದಕ್ಕೇ ನೀವು ರಾಜಕೀಯ ಊಸರವಳ್ಳಿ. ಮೈಯೆಲ್ಲಾ ಸುಳ್ಳನ್ನೇ ಮೆತ್ತಿಕೊಂಡು ಕಂಡೋರ ಮೇಲೆ ಸಿಡಿಸುವ ನಿಮ್ಮ ʼಸಿದ್ದಸೂತ್ರʼಕ್ಕೆ ಕೊನೆಗಾಲ ಹತ್ತಿರದಲ್ಲೇ ಇದೆ.
  • ನಾವು ಜಲಧಾರೆ ಮಾಡುತ್ತಿದ್ದೇವೆ, ನಿಜ. ನೀರಾವರಿ ಯೋಜನೆಗಳ ಬಗ್ಗೆ ನಮಗೆ ಸ್ಪಷ್ಟತೆ ಇದೆ. ಈ ರಾಜ್ಯಕ್ಕೆ ಹೆಚ್.ಡಿ.ದೇವೇಗೌಡರು ಕೊಟ್ಟ ಕೊಡುಗೆ ಕಣ್ಮುಂದೆಯೇ ಇದೆ. 1962ರಿಂದ ಅವರು ನಡೆಸಿದ ಹೊರಾಟದ ಬಗ್ಗೆ ತಿಳಿದು ಮಾತನಾಡಿ. ಅರಿವುಗೆಟ್ಟ ಹೇಳಿಕೆ ಕೊಟ್ಟು ಅಪಹಾಸ್ಯಕ್ಕೆ ಗುರಿಯಾಗಬೇಡಿ.
  • ಬಿಜೆಪಿ ಬಗ್ಗೆ ನಿಮ್ಮ ವಾದಸರಣಿ ಅದ್ಭುತಃ!! ನಿಮ್ಮ ಪಾಲಿಗೆ ಆ ಪಕ್ಷ ಹೊರಗಷ್ಟೇ ಕೋಮುವಾದಿ! ಹಣದ ವಿಷಯ ಎಂದಾಗ ಒಳಗೆಲ್ಲಾ ಅನುಕೂಲವಾದಿ!! ಸ್ವಯಂ ಘೋಷಿತ ಸಂವಿಧಾನ ತಜ್ಞ, ಸ್ವಯಂ ಘೋಷಿತ ಸತ್ಯ ಹರಿಶ್ಚಂದ್ರ, ಈಗ ಹೇಳಿ?
  • ಕಾಂಗ್ರೆಸ್ ಕಚೇರಿಯಲ್ಲೇ ಕಾರ್ಯಕರ್ತರ ಸಾಕ್ಷಿಯಾಗಿ “ಕಾಂಗ್ರೆಸ್ ಪಕ್ಷವನ್ನು ದೇಶದಿಂದಲೇ ಕಿತ್ತೊಗೆಯಬೇಕು” ಎಂದು ನೀವು ಮಾಡಿದ ಭೀಷಣ ಭಾಷಣ ಯಾರಿಗಯ್ಯಾ ಭೂಷಣ? ಮಾತೃಪಕ್ಷವನ್ನೇ ಮುಗಿಸಲು ಹೊರಟಿರುವ ನೀವು ಯಾವ ಟೀಮು?
  • ಸುಳ್ಳುರಾಮಯ್ಯ, ಈ ರಾಜ್ಯ ಕಂಡ ಅಪ್ರತಿಮ ಸುಳ್ಳುಗಾರ ನೀವು. ಆಶ್ರಯ ಕೊಟ್ಟ ಪಕ್ಷಕ್ಕೇ ಹಳ್ಳ ತೋಡುತ್ತಿರುವ ನೀವು ʼಬಿಜೆಪಿ ಬಾಲಂಗೋಚಿʼ & ʼಬಿಜೆಪಿಯ ಬೇನಾಮಿ ಆಸಾಮಿʼ ಎನ್ನುವುದು ಎಲ್ಲರಿಗೂ ಗೊತ್ತು!

ಸಿದ್ದರಾಮಯ್ಯಗೆ ನಾಲ್ಕು ಪ್ರಶ್ನೆ

  1. ಆಪರೇಷನ್ ಕಮಲಕ್ಕೆ ಸಹಕರಿಸಿದ್ದಕ್ಕೆ ಸಿಕ್ಕ ಪ್ರತಿಫಲವೆಷ್ಟು?
  2. ಆ ಪಾಪದ ಹಣವನ್ನು ಏನು ಮಾಡಿದಿರಿ?
  3. ಹ್ಯೂಬ್ಲೆಟ್ ವಾಚಿನ ʼಸಿದ್ದರಹಸ್ಯʼವೇನು?
  4. ಅರ್ಕಾವತಿ ರೀಡೂ ಬಗ್ಗೆ ಮೌನವೇಕೆ?

ಸಿದ್ದರಾಮಯ್ಯ ವಿರುದ್ಧ ಬಳಸಿದ ಮಾತುಗಳು

  1. ವಿನಾಶಕಾಲೇ ವಿಪರೀತ ಸುಳ್ಳು
  2. ಸತ್ಯಭಕ್ಷನಾಯಕಸುಳ್ಳಿನ_ಪ್ರಚಾರಕ
  3. ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ
  4. ಕಲ್ಲಪ್ಪ ಹಂಡಿಭಾಗ್‌ ಸಾವಿನ ಪಾಪಕ್ಕೆ ಪ್ರಾಯಶ್ಚಿತ್ತ ಅನುಭವಿಸದೇ ವಿಧಿಯೇ ಇಲ್ಲ
  5. ಮೈಷುಗರ್ ಕಾರ್ಖಾನೆ ಮುಚ್ಚಿಸಿ ಕಬ್ಬು ಬೆಳೆಗಾರರ ಮನೆ ಹಾಳು ಮಾಡಿದಿರಿ
  6. ನಿಮ್ಮ ರೈತವಿರೋಧಿ ನೀತಿಗಳು ಕಸಿದ ಜೀವಗಳ ಲೆಕ್ಕವೆಲ್ಲಾ ಚುಕ್ತಾ ಆಗುವ ಕಾಲ ಬಂದಿದೆ
  7. ದಿನಕ್ಕಿಷ್ಟು ಸುಳ್ಳು, ಕ್ಷಣಕ್ಕೊಂದು ಪೊಳ್ಳು; ಇದು ನಿಮ್ಮ ಜೀವನಶೈಲಿ
  8. ನಿಮ್ಮ ʼಸಿದ್ದಸೂತ್ರʼಕ್ಕೆ ಕೊನೆಗಾಲ ಹತ್ತಿರದಲ್ಲೇ ಇದೆ.
  9. ನಿಮ್ಮ ಪಾಲಿಗೆ ಆ ಪಕ್ಷ ಹೊರಗಷ್ಟೇ ಕೋಮುವಾದಿ! ಹಣದ ವಿಷಯ ಎಂದಾಗ ಒಳಗೆಲ್ಲಾ ಅನುಕೂಲವಾದಿ!!
  10. ಸ್ವಯಂ ಘೋಷಿತ ಸಂವಿಧಾನ ತಜ್ಞ, ಸ್ವಯಂ ಘೋಷಿತ ಸತ್ಯ ಹರಿಶ್ಚಂದ್ರ
  11. ಆಶ್ರಯ ಕೊಟ್ಟ ಪಕ್ಷಕ್ಕೇ ಹಳ್ಳ ತೋಡುತ್ತಿರುವ ನೀವು ʼಬಿಜೆಪಿ ಬಾಲಂಗೋಚಿʼ & ʼಬಿಜೆಪಿಯ ಬೇನಾಮಿ ಆಸಾಮಿ

ಹೆಚ್ಚಿನ ಓದಿಗಾಗಿ: ಕೊನೆಗೂ ರಾಜೀನಾಮೆ ನೀಡಿದ ಈಶ್ವರಪ್ಪ: ರಾಜಕೀಯ ಜೀವನದ ಅಂತ್ಯ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಘಟಾನುಘಟಿಗಳ ಸ್ಪರ್ಧೆ; ಮೇ 7ರ ಮೂರನೇ ಹಂತದ ಪೈಪೋಟಿಯ ಚಿತ್ರಣ ಇಲ್ಲಿದೆ

ಲೋಕಸಭಾ ಚುನಾವಣೆ 2024ರ 3ನೇ ಹಂತದ ಮತದಾನ ಮೇ 7 ರಂದು ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಎಸ್‌ಪಿಯ ಅಖಿಲೇಶ್‌ ಯಾದವ್‌ ಪತ್ನಿ ಡಿಂಪಲ್ ಯಾದವ್, ಮಧ್ಯ ಪ್ರದೇಶ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಎನ್‌ಸಿಪಿ ನಾಯಕ ಶರದ್‌ ಪವಾರ್‌ ಪುತ್ರಿ ಸುಪ್ರಿಯಾ ಸುಳೆ ಸೇರಿದಂತೆ ಹಲವು ಪ್ರಮುಖರ ಅದೃಷ್ಟ ಪರೀಕ್ಷೆ (Lok Sabha Election 2024) ನಡೆಯಲಿದೆ. ಈ ಕುರಿತ ಚಿತ್ರಣ ಇಲ್ಲಿದೆ.

VISTARANEWS.COM


on

By

Lok Sabha Elections-2024
Koo

ಲೋಕಸಭಾ ಚುನಾವಣೆ 2024ರ (Lok Sabha Election 2024) 3ನೇ ಹಂತದ (3rd phase) ಮತದಾನ (voting) ಮೇ 7ರಂದು 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 95 ಸ್ಥಾನಗಳಿಗೆ ನಡೆಯಲಿದೆ. ಈ ಬಾರಿ ಕಣದಲ್ಲಿರುವ ಹಲವು ಪ್ರಮುಖ ನಾಯಕರ ಅದೃಷ್ಟ ಪರೀಕ್ಷೆ ನಡೆಯಲಿದೆ.

ಇದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಬಂಡಾಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ( KS Eshwarappa), ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (Jyotiraditya Scindia), ಡಿಂಪಲ್ ಯಾದವ್ (Dimple Yadav), ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಮತ್ತು ಸುಪ್ರಿಯಾ ಸುಳೆ (Supriya Sule) ಸೇರಿದ್ದಾರೆ.


2024 ರ ಲೋಕಸಭಾ ಚುನಾವಣೆಯ 3ನೇ ಹಂತದಲ್ಲಿ ಸ್ಪರ್ಧಿಸುವ ಪ್ರಮುಖ ಪಕ್ಷಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ), ಸಮಾಜವಾದಿ ಪಕ್ಷ (ಎಸ್‌ಪಿ), ಕಾಂಗ್ರೆಸ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಸೇರಿವೆ.

ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು

ಅಮಿತ್ ಶಾ

ಕೇಂದ್ರ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಅವರು ಗುಜರಾತ್‌ನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಗಾಂಧಿನಗರದಿಂದ ಎರಡನೇ ಬಾರಿಗೆ ಕಣಕ್ಕಿಳಿದಿರುವ ಅಮಿತ್ ಶಾ ಅವರಿಗೆ ಕಾಂಗ್ರೆಸ್‌ನ ಸೋನಾಲ್ ಪಟೇಲ್ ಸ್ಪರ್ಧೆ ನೀಡುತ್ತಿದ್ದಾರೆ. 1989ರಿಂದ ಈ ಕ್ಷೇತ್ರದಲ್ಲಿ ಬಿಜೆಪಿ ಅಜೇಯವಾಗಿದೆ. 2019ರ ಚುನಾವಣೆಯಲ್ಲಿ ಅಮಿತ್ ಶಾ ಅವರು 5.55 ಲಕ್ಷ ಮತಗಳ ಅಂತರದಿಂದ ಕಾಂಗ್ರೆಸ್‌ನ ಸಿ.ಜೆ. ಚಾವ್ಡಾ ಅವರನ್ನು ಸೋಲಿಸಿದ್ದರು.

ಡಿಂಪಲ್ ಯಾದವ್

ಎಸ್‌ಪಿ ಅಭ್ಯರ್ಥಿ ಡಿಂಪಲ್ ಯಾದವ್ ಅವರು 2024ರ ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ ‘ಮೈನ್‌ಪುರಿ’ಯಿಂದ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರ ಸಮಾಜವಾದಿ ಪಕ್ಷದ ಭದ್ರಕೋಟೆ. ಡಿಂಪಲ್‌ ಯಾದವ್‌ ಅವರು ಎಸ್ಪಿ ವರಿಷ್ಠ ನಾಯಕ ಅಖಿಲೇಶ್‌ ಯಾದವ್‌ ಅವರ ಪತ್ನಿ. 2022ರಲ್ಲಿ ಎಸ್‌ಪಿ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಮರಣದ ಅನಂತರ ಅವರ ಸೊಸೆ ಡಿಂಪಲ್ ಯಾದವ್ ಅವರು ಉಪಚುನಾವಣೆಯಲ್ಲಿ ಇಲ್ಲಿಂದ ಗೆದ್ದಿದ್ದರು. ಡಿಂಪಲ್ ಯಾದವ್ ಅವರು ಮೂರು ಬಾರಿ ಸಂಸದರಾಗಿದ್ದಾರೆ. ಇವರ ವಿರುದ್ಧ ಬಿಜೆಪಿ ಅಭ್ಯರ್ಥಿ ಜೈವೀರ್ ಸಿಂಗ್ ಕಣದಲ್ಲಿ ಇದ್ದಾರೆ.

ಜ್ಯೋತಿರಾದಿತ್ಯ ಸಿಂಧಿಯಾ

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು 2024ರ ಲೋಕಸಭಾ ಚುನಾವಣೆಯ 3ನೇ ಹಂತದಲ್ಲಿ ಮೇ 7ರಂದು ನಡೆಯಲಿರುವ ಮಧ್ಯಪ್ರದೇಶದ ಗುಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್‌ನ ರಾವ್ ಯದ್ವೇಂದ್ರ ಸಿಂಗ್ ಅವರ ವಿರುದ್ಧ ಕಣದಲ್ಲಿ ಇದ್ದಾರೆ. 2019ರ ಚುನಾವಣೆಯಲ್ಲಿ ಬಿಜೆಪಿಯ ಕೃಷ್ಣ ಪಾಲ್ ಸಿಂಗ್ ಅವರು ಕಾಂಗ್ರೆಸ್ ಅಭ್ಯರ್ಥಿ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಸೋಲಿಸಿದ್ದರು. ಆ ಬಳಿಕ ಸಿಂಧಿಯಾ ಬಿಜೆಪಿ ಸೇರಿ ಕೇಂದ್ರದಲ್ಲಿ ಸಚಿವರಾಗಿದ್ದಾರೆ.

ಶಿವರಾಜ್ ಸಿಂಗ್ ಚೌಹಾಣ್

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿ ವಿದಿಶಾ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಮಧ್ಯಪ್ರದೇಶದಲ್ಲಿ ಬಹುಕಾಲ ಮುಖ್ಯಮಂತ್ರಿಯಾಗಿದ್ದ ಶಿವರಾಜ್ ಸಿಂಗ್ ಚೌಹಾಣ್ ಅವರು ವಿದಿಶಾ ಕ್ಷೇತ್ರದಿಂದ ಐದು ಬಾರಿ ಸಂಸದರಾಗಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರತಾಪ್ ಭಾನು ಶರ್ಮಾ ವಿರುದ್ಧ ಶಿವರಾಜ್ ಸಿಂಗ್ ಚೌಹಾಣ್ ಸ್ಪರ್ಧಿಸುತ್ತಿದ್ದಾರೆ.

ಸುಪ್ರಿಯಾ ಸುಳೆ

ಎನ್‌ಸಿಪಿ ವರಿಷ್ಠ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಅವರು ಮಹಾರಾಷ್ಟ್ರದ ಬಾರಾಮತಿ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಪವಾರ್‌ vs ಪವಾರ್‌ ಈ ಬಾರಿಯ ವಿಶೇಷ. ಬಿಜೆಪಿ ನೇತೃತ್ವದ ಎನ್‌ಡಿಎ ಸೇರಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿರುವ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಈಗ ಸುಪ್ರಿಯಾ ಸುಳೆ ವಿರುದ್ಧ ಸ್ಪರ್ಧಿಸಿದ್ದಾರೆ. ಹಾಗಾಗಿ ಫಲಿತಾಂಶ ಭಾರಿ ಕುತೂಹಲ ಮೂಡಿಸಿದೆ. ಹಾಲಿ ಸಂಸದೆ ಸುಪ್ರಿಯಾ ಸುಳೆ ಈ ಕ್ಷೇತ್ರದಲ್ಲಿ ಮೂರು ಬಾರಿ ಸ್ಪರ್ಧಿಸಿ ಗೆದ್ದಿದ್ದರು.

ಕರ್ನಾಟಕದಲ್ಲಿ ಬಿಜೆಪಿ ಹಿರಿಯ ನಾಯಕ ಕೆ ಎಸ್‌ ಈಶ್ವರಪ್ಪ ಅವರು ಈ ಬಾರಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗದಿಂದ ಕಣಕ್ಕೆ ಇಳಿದಿದ್ದಾರೆ. ಇಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಾಲಿಸ ಸಂಸದ ಬಿ ವೈ ರಾಘವೇಂದ್ರ ಸ್ಪರ್ಧಿಸುತ್ತಿದ್ದಾರೆ.

3ನೇ ಹಂತದ ಚುನಾವಣೆ ನಡೆಯಲಿರುವ ಕ್ಷೇತ್ರಗಳು

ಅಸ್ಸಾಂ: ಧುಬ್ರಿ, ಕೊಕ್ರಜಾರ್, ಬರ್ಪೇಟಾ, ಗೌಹಾಟಿ, ಬಿಹಾರದ ಝಂಜರ್ಪುರ್, ಸುಪೌಲ್, ಅರಾರಿಯಾ, ಮಾಧೆಪುರ, ಖಗಾರಿಯಾ

ಛತ್ತೀಸ್‌ಗಢ: ಸರ್ಗುಜಾ, ರಾಯ್‌ಗಢ, ಜಾಂಜ್‌ಗೀರ್-ಚಂಪಾ, ಕೊರ್ಬಾ, ಬಿಲಾಸ್‌ಪುರ್, ದುರ್ಗ್, ರಾಯ್‌ಪುರ್.

ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು

ಗೋವಾ: ಉತ್ತರ ಗೋವಾ, ದಕ್ಷಿಣ ಗೋವಾ, ಗುಜರಾತ್ ನ ಕಚ್ಛ್, ಬನಸ್ಕಾಂತ, ಪಟಾನ್, ಮಹೇಶಾನಾ, ಸಬರ್ಕಾಂತ, ಗಾಂಧಿನಗರ, ಅಹಮದಾಬಾದ್ ಪೂರ್ವ, ಅಹಮದಾಬಾದ್ ಪಶ್ಚಿಮ, ಸುರೇಂದ್ರನಗರ, ರಾಜ್‌ಕೋಟ್, ಪೋರಬಂದರ್, ಜಾಮ್‌ನಗರ, ಜುನಾಗಢ, ಅಮ್ರೇಲಿ, ಭಾವನಗರ, ಆನಂದ್, ಖೇಡಾ, ಪಂಚಮಹಲ್, ದಾಹೋದ್, ವಡೋದರ, ಛೋಟಾ ಉದಯಪುರ, ಭರೂಚ್, ಭರೂಚ್, ನವಸಾರಿ, ವಲ್ಸಾದ್

ಕರ್ನಾಟಕ: ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ

ಮಧ್ಯಪ್ರದೇಶ: ಬೇತುಲ್, ಮೊರೆನಾ, ಭಿಂಡ್, ಗ್ವಾಲಿಯರ್, ಗುಣ, ಸಾಗರ್, ವಿದಿಶಾ, ಭೋಪಾಲ್, ರಾಜ್‌ಗಢ್, ಬೇತುಲ್

ಮಹಾರಾಷ್ಟ್ರ: ಬಾರಾಮತಿ, ರಾಯಗಢ, ಧರಾಶಿವ, ಲಾತೂರ್ (SC), ಸೋಲಾಪುರ (SC), ಮಾಧಾ, ಸಾಂಗ್ಲಿ, ರತ್ನಗಿರಿ-ಸಿಂಧುದುರ್ಗ, ಕೊಲ್ಲಾಪುರ, ಹತ್ಕನಂಗಲೆ

ಉತ್ತರ ಪ್ರದೇಶ: ಸಂಭಾಲ್, ಹತ್ರಾಸ್, ಆಗ್ರಾ (SC), ಫತೇಪುರ್ ಸಿಕ್ರಿ, ಫಿರೋಜಾಬಾದ್, ಮೈನ್‌ಪುರಿ, ಇಟಾಹ್, ಬುಡೌನ್, ಅಯೋನ್ಲಾ, ರಾಯ್‌ ಬರೇಲಿ

ಪಶ್ಚಿಮ ಬಂಗಾಳ: ಮಾಲ್ಡಾ ಉತ್ತರ, ಮಾಲ್ಡಾ ದಕ್ಷಿಣ, ಜಂಗಿಪುರ, ಮುರ್ಷಿದಾಬಾದ್

ಕಣದಲ್ಲಿ 1,351 ಅಭ್ಯರ್ಥಿಗಳು

ಮೇ 7ರಂದು ನಡೆಯಲಿರುವ ಮೂರನೇ ಹಂತದ ಲೋಕಸಭೆ ಚುನಾವಣೆಯಲ್ಲಿ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 1,351 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ.

ಇದನ್ನೂ ಓದಿ: Amethi Unrest: ಕಾಂಗ್ರೆಸ್‌ ಕಚೇರಿ ಮೇಲೆ ಕಿಡಿಗೇಡಿಗಳಿಂದ ಅಟ್ಯಾಕ್‌; ಬಿಜೆಪಿಯ ದುಷ್ಕೃತ್ಯ ಎಂದು ಆರೋಪ

ಅತೀ ಹೆಚ್ಚು ನಾಮಪತ್ರ

ಮೂರನೇ ಹಂತದಲ್ಲಿ ಗುಜರಾತ್ 26 ಸಂಸದೀಯ ಕ್ಷೇತ್ರಗಳಿಂದ ಗರಿಷ್ಠ 658 ನಾಮನಿರ್ದೇಶನಗಳನ್ನು ಹೊಂದಿತ್ತು, ಅನಂತರ ಮಹಾರಾಷ್ಟ್ರವು 11 ಸ್ಥಾನಗಳಿಂದ 519 ನಾಮನಿರ್ದೇಶನಗಳನ್ನು ಹೊಂದಿದೆ. ಮಹಾರಾಷ್ಟ್ರದ ಒಸ್ಮಾನಾಬಾದ್ ಕ್ಷೇತ್ರಕ್ಕೆ ಗರಿಷ್ಠ 77 ನಾಮಪತ್ರಗಳು ಬಂದಿದ್ದು, ಛತ್ತೀಸ್‌ಗಢದ ಬಿಲಾಸ್‌ಪುರ ಕ್ಷೇತ್ರಕ್ಕೆ 68 ನಾಮಪತ್ರಗಳು ಬಂದಿವೆ ಎಂದು ಚುನಾವಣಾ ಸಮಿತಿ ತಿಳಿಸಿದೆ.

Continue Reading

ಕ್ರೈಂ

Prajwal Revanna Case: ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

Prajwal Revanna Case: ಅಪಹರಣ ಕೇಸ್‌ ಬಗ್ಗೆ ಎಚ್.ಡಿ. ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಸತೀಶ್ ಬಾಬು ಪರಿಚಯವಿದ್ದಾರಾ? ಅವರ ಮೂಲಕ ಕಿಡ್ನ್ಯಾಪ್ ಮಾಡಿಸಲು ನೀವೇ ತಿಳಿಸಿದ್ದಿರಾ? ಅಪಹರಣ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಮಾಡಿ ಉತ್ತರವನ್ನು ಪಡೆದುಕೊಂಡಿದ್ದರು. ಕೇಸ್‌ಗೆ ಸಂಬಂಧಿಸಿ ಕೆಲವು ಸಾಂದರ್ಭಿಕ ಪ್ರಶ್ನೆಗಳಿಗೆ ಹೇಳಿಕೆ ಪಡೆದು ಅದನ್ನು ಪೇಪರ್‌ನಲ್ಲಿ ನಮೂದಿಸಿ ಸ್ವ ಇಚ್ಛಾ ಹೇಳಿಕೆಗೆ ಸಹಿ ಮಾಡುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಸಹಿ ಹಾಕುವುದಿಲ್ಲ ಎಂದ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

VISTARANEWS.COM


on

Prajwal Revanna Case HD Revanna asks NO to sign voluntary statement in kidnapping case
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಅಪಹರಣ ಕೇಸ್‌ನಲ್ಲಿ ಬಂಧಿತರಾಗಿರುವ ಎಚ್‌.ಡಿ. ರೇವಣ್ಣ ಅವರ ವಿಚಾರಣೆ ತೀವ್ರಗತಿಯಲ್ಲಿ ಸಾಗಿದೆ. ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದು, ಸ್ವ-ಇಚ್ಛಾ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಈ ಸ್ವ-ಇಚ್ಛಾ ಹೇಳಿಕೆಗೆ ಸಹಿ ಹಾಕಲು ಎಚ್.ಡಿ. ರೇವಣ್ಣ (HD Revanna) ನಿರಾಕರಿಸಿದ್ದಾರೆ. ನಿಮಗೆ ಬೇಕಾದಂತೆ ಬರೆದುಕೊಂಡಿದ್ದೀರಾ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ಎಚ್.ಡಿ. ರೇವಣ್ಣ ಅವರನ್ನು ಐದು ದಿನಗಳ ಕಸ್ಟಡಿಗೆ ನೀಡಿ ಭಾನುವಾರ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಅಪಹರಣ ಕೇಸ್‌ನಲ್ಲಿ ರೇವಣ್ಣ ಅವರಿಂದ ಸ್ವ-ಇಚ್ಛಾ ಹೇಳಿಕೆ ದಾಖಲು ಮಾಡಿಕೊಳ್ಳಲು ಮುಂದಾಗಲಾಗಿದೆ. ಈ ಸಂಬಂಧ ರೇವಣ್ಣ ಅವರಿಗೆ ಭಾನುವಾರವೇ ಒಂದಷ್ಟು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವ ಪ್ರಯತ್ನವನ್ನು ಅಧಿಕಾರಿಗಳೂ ಮಾಡಿದ್ದರು.

ಅಪಹರಣ ಕೇಸ್‌ ಬಗ್ಗೆ ಎಚ್.ಡಿ. ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಸತೀಶ್ ಬಾಬು ಪರಿಚಯವಿದ್ದಾರಾ? ಅವರ ಮೂಲಕ ಕಿಡ್ನ್ಯಾಪ್ ಮಾಡಿಸಲು ನೀವೇ ತಿಳಿಸಿದ್ದಿರಾ? ಅಪಹರಣ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಮಾಡಿ ಉತ್ತರವನ್ನು ಪಡೆದುಕೊಂಡಿದ್ದರು. ಕೇಸ್‌ಗೆ ಸಂಬಂಧಿಸಿ ಕೆಲವು ಸಾಂದರ್ಭಿಕ ಪ್ರಶ್ನೆಗಳಿಗೆ ಹೇಳಿಕೆ ಪಡೆದು ಅದನ್ನು ಪೇಪರ್‌ನಲ್ಲಿ ನಮೂದಿಸಿ ಸ್ವ ಇಚ್ಛಾ ಹೇಳಿಕೆಗೆ ಸಹಿ ಮಾಡುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಸಹಿ ಹಾಕುವುದಿಲ್ಲ ಎಂದ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಅಪರಹಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಆದರೂ ನೀವುಗಳು ಬರೆದುಕೊಂಡಿದ್ದೀರಿ. ನಾನೇ ಮಾಡಿಸಿರುವ ಹಾಗೆ ಬರೆದುಕೊಂಡಿದ್ದೀರಿ. ನಾನು ಯಾವ ಹೇಳಿಕೆಗೂ ಸಹಿ ಹಾಕಲ್ಲ ಎಂದು ರೇವಣ್ಣ ನಿರಾಕರಣೆ ಮಾಡಿದ್ದಾರೆ.

ಎಚ್‌.ಡಿ.ರೇವಣ್ಣರಿಗೆ ಇಂದು ಜಾಮೀನು ಸಿಗುತ್ತಾ?

ಈ ಮಧ್ಯೆ ಇಂದು (ಮೇ 6) ರೇವಣ್ಣ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ. ಈ ಹಿಂದೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದ್ದರಿಂದ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆದರೆ ಇಂದು ಕೂಡ ಜಾಮೀನು ದೊರೆಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಹೀಗಾಗಿ ಇನ್ನೂ ನಾಲ್ಕು ದಿನ ರೇವಣ್ಣ ಅವರು ಎಸ್‌ಐಟಿ ವಶದಲ್ಲಿರುವುದು ಅನಿವಾರ್ಯವಾಗಲಿದೆ.

ಭಾನುವಾರ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಆ ವೇಳೆ ರೇವಣ್ಣ ಅವರನ್ನು ನ್ಯಾಯಾಧೀಶರು ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ ನೀಡಿದ್ದರು. ಹೀಗಾಗಿ ತನಿಖಾ ಭಾಗವಾಗಿ ನಾಲ್ಕು ದಿನಗಳ ಕಾಲ ರೇವಣ್ಣ ಎಸ್‌ಐಟಿ ವಶದಲ್ಲಿ ಇರಲಿದ್ದಾರೆ.

ಇಂದು ರೇವಣ್ಣ ಪರ ವಕೀಲರು ಬೇಲ್ ಅರ್ಜಿ ಸಲ್ಲಿಸಿದರೆ ಎಸ್ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ. ಕಸ್ಟಡಿಯಲ್ಲಿರುವ ಅವರಿಗೆ ಹಿನ್ನೆಲೆ ಜಾಮೀನು ಕೊಟ್ಟರೆ ತನಿಖೆಗೆ ಹಿನ್ನಡೆಯಾಗಬಹುದು ಎಂದು ಎಸ್‌ಐಟಿ ವಾದ ಮಂಡಿಸಲಿದೆ. ಇದೇ ಕಾರಣಕ್ಕೆ ರೇವಣ್ಣ ಅವರಿಗೆ ಇಂದು ಜಾಮೀನು ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಕಸ್ಟಡಿ ಅವಧಿ ನಂತರವೇ ಜಾಮೀನು ಭಾಗ್ಯ ಲಭಿಸಲಿದೆ ಎಂದು ಮೂಲಗಳು ತಿಳಿಸಿವೆ.

ಒತ್ತಡದಲ್ಲಿರುವ ರೇವಣ್ಣ

ಇನ್ನು ಎಸ್‌ಐಟಿ ವಶದಲ್ಲಿರುವ ರೇವಣ್ಣ ಅವರು ಮಾನಸಿಕವಾಗಿ ಕುಗ್ಗಿದ್ದಾರೆ. ಸುಸ್ತಾಗಿರುವಂತೆ ಅವರು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ನಿನ್ನೆ ತಡರಾತ್ರಿ ಎಸ್ಐಟಿ ಅಧಿಕಾರಿಗಳು ಯಾವುದೇ ವಿಚಾರಣೆ ನಡೆಸಲಿಲ್ಲ. ಇಂದು ಬೆಳಗ್ಗೆ ಮತ್ತೆ ಪ್ರಕರಣದ ಬಗ್ಗೆ ಪ್ರಶ್ನಿಸಲಿದ್ದಾರೆ.

ರೇವಣ್ಣ ಬಂಧನವಾಗಿ 24 ಗಂಟೆ ಕಳೆದರೂ ಅವರನ್ನು ಭೇಟಿಯಾಗಲು ಅವರ ಕುಟುಂಬಸ್ಥರು ಆಗಮಿಸಿಲ್ಲ. ಯಾವಾಗಲೂ ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೇವಣ್ಣ ಸದ್ಯ ಒಬ್ಬಂಟಿಯಾಗಿದ್ದಾರೆ. ಶನಿವಾರ ಬಂಧನವಾದಾಗಿನಿಂದ ಸರಿಯಾಗಿ ನಿದ್ದೆ ಮಾಡದೇ ತಲೆ ಕೆಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಥಳ ಮಹಜರು

ಇಂದು (ಮೇ 6) ಸ್ಥಳ ಮಹಜರಿಗೆ ರೇವಣ್ಣ ಅವರನ್ನು ಅಧಿಕಾರಿಗಳು ಕರೆದೊಯ್ಯುವ ಸಾಧ್ಯತೆ ಇದೆ. ಇದೇ ವೇಳೆ ಸಂತ್ರಸ್ತೆಯನ್ನು ಅಕ್ರಮವಾಗಿ ಕೂಡಿಟ್ಟಿ ಸ್ಥಳ ತೋಟದ ಮನೆಯಲ್ಲಿಯೂ ಮಹಜರು ಪ್ರಕ್ರಿಯೆ ನಡೆಯಲಿದೆ. ಈಗಾಗಲೇ ಸಂತ್ರಸ್ತೆಯರಿಗಾಗಿ ಹೆಲ್ಪ್‌ಲೈನ್‌ ಆರಂಭಿಸಿರುವ ಎಸ್‌ಐಟಿ ಹೇಳಿಕೆ ದಾಖಲಿಸಿಕೊಳ್ಳುತ್ತಿದೆ. ಈ ಮಧ್ಯೆ ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೊಗಳನ್ನು ಯಾರೇ ಆಗಲಿ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಸೇರಿ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

ರೇವಣ್ಣ ಜತೆ ಚರ್ಚೆ ನಡೆಸಿದ ವಕೀಲರು

ಎಚ್‌.ಡಿ. ರೇವಣ್ಣ ಅವರು ಎಸ್‌ಐಟಿ ವಶದಲ್ಲಿರುವ ಕಾರಣ ಅವರನ್ನು ವಕೀಲ ಮೂರ್ತಿ ಡಿ ನಾಯಕ್ ಭೇಟಿ ಮಾಡಿ ಒಂದು ಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ಪ್ರಕರಣ ಸಂಬಂಧ ವಕೀಲರ ಜತೆ ರೇವಣ್ಣ ಚರ್ಚೆ ನಡೆಸಿದ್ದಾರೆ. ಜಾಮೀನು ಸಲ್ಲಿಕೆ ಮಾಡುವ ಬಗ್ಗೆ ಮಾತುಕತೆ ನಡೆದಿದೆ.

Continue Reading

ದೇಶ

Amethi Unrest: ಕಾಂಗ್ರೆಸ್‌ ಕಚೇರಿ ಮೇಲೆ ಕಿಡಿಗೇಡಿಗಳಿಂದ ಅಟ್ಯಾಕ್‌; ಬಿಜೆಪಿಯ ದುಷ್ಕೃತ್ಯ ಎಂದು ಆರೋಪ

Amethi Unrest: ಉತ್ತರಪ್ರದೇಶದ ಅಮೇಥಿಯಲ್ಲಿ ಸ್ಮೃತಿ ಇರಾನಿ ಮತ್ತಿ ಬಿಜೆಪಿ ಕಾರ್ಯಕರ್ತರು ಭಯಬಿದ್ದಿದ್ದಾರೆ. ಸೋಲಿನ ಭೀತಿಗೊಳಗಾಗಿರುವ ಬಿಜೆಪಿ ಪುಂಡಾಟಕ್ಕೆ ಮುಂದಾಗಿದೆ. ಅಮೇಥಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಸಾಮಾನ್ಯ ಜನರ ಮೇಲೆ ಬಿಜೆಪಿ ಗೂಂಡಾಗಳು ಕೋಲು ದೊಣ್ಣೆಗಳಿಂದ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಿಜೆಪಿ ಈ ಬಾರಿ ಚುನಾವಣೆಯಲ್ಲಿ ಹೀನಾಯವಾಗಿ ಸೋಲುತ್ತದೆ ಎಂಬುದನ್ನು ಈ ಘಟನೆ ತೋರಿಸುತ್ತದೆ. ಇಷ್ಟು ದೊಡ್ಡ ಘಟನೆ ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

VISTARANEWS.COM


on

amethi unrest
Koo

ಅಮೇಥಿ: ಉತ್ತರಪ್ರದೇಶ ಅಮೇಥಿ(Amethi Unrest)ಯಲ್ಲಿ ಕಾಂಗ್ರೆಸ್‌ ಕಚೇರಿ(Congress Office)ಯ ಎದುರು ನಿಲ್ಲಿಸಿದ್ದ ಕಾರುಗಳನ್ನು ಕಿಡಿಗೇಡಿಗಳು ಭಾನುವಾರ ತಡರಾತ್ರಿ ಧ್ವಂಸಗೊಳಿಸಿದ್ದಾರೆ. ಇದು ಬಿಜೆಪಿ ಕಾರ್ಯಕರ್ತರ(BJP workers) ದುಷ್ಕೃತ್ಯ ಎಂದು ಕಾಂಗ್ರೆಸ್‌ ಆರೋಪಿಸಿದೆ. ಬಿಜೆಪಿ ಕಾರ್ಯಕರ್ತರ ಪುಂಡಾಟಿಕೆ ಮತ್ತೆ ಮುಂದುವರೆದಿದ್ದು, ದಾಳಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಎಕ್ಸ್‌ನಲ್ಲಿ ಟ್ವೀಟ್‌ ಮಾಡಿ ಮಾಡಿದೆ. ಈ ಬಗ್ಗೆ ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನಾಥ್‌(Supriya Shrinathe) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಪುಂಡಾಟ ಮೆರೆಯುತ್ತಿದ್ದರೂ ಪೊಲೀಸರು ಮೌನವಹಿಸಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಉತ್ತರಪ್ರದೇಶದ ಅಮೇಥಿಯಲ್ಲಿ ಸ್ಮೃತಿ ಇರಾನಿ ಮತ್ತಿ ಬಿಜೆಪಿ ಕಾರ್ಯಕರ್ತರು ಭಯಬಿದ್ದಿದ್ದಾರೆ. ಸೋಲಿನ ಭೀತಿಗೊಳಗಾಗಿರುವ ಬಿಜೆಪಿ ಪುಂಡಾಟಕ್ಕೆ ಮುಂದಾಗಿದೆ. ಅಮೇಥಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಸಾಮಾನ್ಯ ಜನರ ಮೇಲೆ ಬಿಜೆಪಿ ಗೂಂಡಾಗಳು ಕೋಲು ದೊಣ್ಣೆಗಳಿಂದ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಿಜೆಪಿ ಈ ಬಾರಿ ಚುನಾವಣೆಯಲ್ಲಿ ಹೀನಾಯವಾಗಿ ಸೋಲುತ್ತದೆ ಎಂಬುದನ್ನು ಈ ಘಟನೆ ತೋರಿಸುತ್ತದೆ. ಇಷ್ಟು ದೊಡ್ಡ ಘಟನೆ ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಬಿಜೆಪಿಗರೇ ಬದಲಾವಣೆ ಗಾಳಿ ಬೀಸುತ್ತಿದೆ. ವಾಹನಗಳನ್ನು ಧ್ವಂಸಗೊಳಿಸುವುದೊಂದೇ ಸಮಸ್ಯೆಗ ಪರಿಹಾರ ಅಲ್ಲ ಎಂದು ಅವರು ಟಾಂಗ್‌ ಕೊಟ್ಟಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರತಿಕ್ರಿಯಿಸಿದ್ದು, ಘಟನೆ ಕುರಿತು ಗೌರಿಗಂಜ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Boat Capsizes: ಜಲಾವೃತ ಸೇತುವೆಗೆ ದೋಣಿ ಡಿಕ್ಕಿ; ಶಾಕಿಂಗ್‌ ವಿಡಿಯೋ ವೈರಲ್‌

ಅಮೇಥಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿ ಆಪ್ತ ಕಿಶೋರಿ ಲಾಲ್‌ ಶರ್ಮಾ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. ಮೊದಲಿಗೆ ಪ್ರಿಯಾಂಕಾ ಗಾಂಧಿ ವಾಧ್ರಾ ಹಾಗೂ ಅಮೇಥಿಯಿಂದ ರಾಹುಲ್‌ ಗಾಂಧಿ ಕಣಕ್ಕಿಳಿಯುತ್ತಾರೆ ಎಂಬ ವಿಚಾರ ಬಹಳ ಚರ್ಚೆಯಾಗಿತ್ತು. ಅಮೇಥಿಯಲ್ಲಿ 2004, 2009, 2014ರವರೆಗೆ ರಾಹುಲ್‌ ಗಾಂಧಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ 2019ರಲ್ಲಿ ಬಿಜೆಪಿ ಸ್ಮೃತಿ ಇರಾನಿ ವಿರುದ್ಧ ಸೋಲನ್ನು ಅನುಭವಿಸಿದ್ದರು. ಈ ಬಾರಿ ಗಾಂಧಿ ಕುಟುಂಬದ ಆಪ್ತ ಕಿಶೋರಿ ಲಾಲ್‌ ಅವರನ್ನು ಅಮೇಥಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಕಣಕ್ಕಿಳಿಸಿ ಪಕ್ಷ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ.

Continue Reading

ಸಿನಿಮಾ

Megha Dhade: ನಮ್ಮ ದೇಶ ಬಿಟ್ಟು ನರಕಕ್ಕೆ ಹೋಗಿ ಎಂದು ರಾಹುಲ್‌ ಗಾಂಧಿ ವಿರುದ್ಧ ʻಬಿಗ್‌ ಬಾಸ್‌ʼ ವಿಜೇತೆ ಆಕ್ರೋಶ!

Megha Dhade:  ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ರಾಹುಲ್ ಗಾಂಧಿಯವರ ವೀಡಿಯೊವನ್ನು ಹಂಚಿಕೊಂಡ ನಟಿ ಮೇಘಾ, ‘ರಾಹುಲ್ ಗಾಂಧಿಯನ್ನು ಬೆಂಬಲಿಸುವವರಿಗೆ ನಾಚಿಕೆಯಾಗಬೇಕು. ರಾಹುಲ್ ಗಾಂಧಿ ಅವರನ್ನು ನಾನು ದ್ವೇಷಿಸುತ್ತೇನೆ. ನಮ್ಮ ದೇಶವನ್ನು ಬಿಟ್ಟು ನರಕಕ್ಕೆ ಹೋಗಿ’ ಎಂದು ಹೇಳಿದ ಪೋಸ್ಟ್ ಇದೀಗ ವೈರಲ್‌ ಆಗುತ್ತಿದೆ.

VISTARANEWS.COM


on

Megha Dhade bigg boss marathi winner crptic post about rahul gandhi
Koo

‘ಬಿಗ್ ಬಾಸ್ ಮರಾಠಿ’ ಮೊದಲ ಸೀಸನ್‌ನ ವಿಜೇತೆ ಮತ್ತು ನಟಿ ಮೇಘಾ ಧಾಡೆ (Megha Dhade) ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಸಖತ್‌ ಆಕ್ಟಿವ್‌ ಆಗಿದ್ದಾರೆ. ಬಿಜೆಪಿ ಸೇರಿದ್ದ ನಟಿ ಮೇಘಾ ಧಾಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದಾರೆ.

ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ರಾಹುಲ್ ಗಾಂಧಿಯವರ ವೀಡಿಯೊವನ್ನು ಹಂಚಿಕೊಂಡ ನಟಿ ಮೇಘಾ, ‘ರಾಹುಲ್ ಗಾಂಧಿಯನ್ನು ಬೆಂಬಲಿಸುವವರಿಗೆ ನಾಚಿಕೆಯಾಗಬೇಕು. ರಾಹುಲ್ ಗಾಂಧಿ ಅವರನ್ನು ನಾನು ದ್ವೇಷಿಸುತ್ತೇನೆ. ನಮ್ಮ ದೇಶವನ್ನು ಬಿಟ್ಟು ನರಕಕ್ಕೆ ಹೋಗಿ’ ಎಂದು ಹೇಳಿದ ಪೋಸ್ಟ್ ಇದೀಗ ವೈರಲ್‌ ಆಗುತ್ತಿದೆ.

ರಾಹುಲ್ ಗಾಂಧಿ ಅವರ ವಿಡಿಯೊವನ್ನು ನಟಿ ಹಂಚಿಕೊಂಡಿದ್ದಾರೆ. ಇದರಲ್ಲಿ ರಾಹುಲ್‌ ಛತ್ರಪತಿ ಶಿವಾಜಿ ಮಹಾರಾಜರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಸಭೆವೊಂದರಲ್ಲಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸುವಾಗ ಕಾರ್ಯಕರ್ತರೊಬ್ಬರು ಛತ್ರಪತಿ ಶಿವಾಜಿ ಮಹಾರಾಜರ ವಿಗ್ರಹವನ್ನು ಉಡುಗೊರೆಯಾಗಿ ನೀಡಿದ್ದಾರೆ.ರಾಹುಲ್‌ ವಿಗ್ರಹ ಜತೆ ಫೋಟೊ ತೆಗೆಸಿಕೊಂಡರೇ ವಿನಃ ವಿಗ್ರಹ ಸ್ವೀಕರಿಸಿಲ್ಲ. ಈ ವಿಡಿಯೊ ವೈರಲ್‌ ಆಗಿತ್ತು. ಇದನ್ನೇ ಆಧಾರವಾಗಿಟ್ಟುಕೊಂಡು ಮೇಘಾ ಧಾಡೆ ಕೂಡ ರಾಹುಲ್ ಅವರನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: Ranjani Raghavan: ರಂಜನಿ ರಾಘವನ್ ಸಿನಿಮಾದಲ್ಲಿ ಇರಲಿದೆ ಪಂಜುರ್ಲಿ ದೈವದ ಕಥೆ! ಬಿಡುಗಡೆ ಯಾವಾಗ?

ಮೇಘಾ ಧಾಡೆ ಅವರು ಭಾರತೀಯ ಜನತಾ ಪಕ್ಷದ ಸಾಂಸ್ಕೃತಿಕ ಘಟಕದ ಉಪಾಧ್ಯಕ್ಷರು ಕೂಡ ಆಗಿದ್ದಾರೆ.

Continue Reading
Advertisement
Cauvery Theatre bengaluru another single screen close
ಸಿನಿಮಾ4 mins ago

Cauvery Theatre: ಬೆಂಗಳೂರಿನಲ್ಲಿ ಪ್ರದರ್ಶನ ನಿಲ್ಲಿಸಿದ ʻಕಾವೇರಿʼ ಥಿಯೇಟರ್! ಮುಂದೇನು?

Bomb Threat
ದೇಶ8 mins ago

Bomb Threat: ದೆಹಲಿ ಬಳಿಕ ಇದೀಗ ಅಹಮದಾಬಾದ್​ನ ಶಾಲೆಗಳಿಗೂ ಬಾಂಬ್​ ಬೆದರಿಕೆ

Lok Sabha Elections-2024
Lok Sabha Election 202415 mins ago

Lok Sabha Election 2024: ಘಟಾನುಘಟಿಗಳ ಸ್ಪರ್ಧೆ; ಮೇ 7ರ ಮೂರನೇ ಹಂತದ ಪೈಪೋಟಿಯ ಚಿತ್ರಣ ಇಲ್ಲಿದೆ

ICC Women’s T20 World Cup 2024
ಕ್ರೀಡೆ16 mins ago

ICC Women’s T20 World Cup 2024: ಮಹಿಳಾ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದ ಶ್ರೀಲಂಕಾ

Road Accident
ಕ್ರೈಂ17 mins ago

Road Accident : ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಮೃತ್ಯು; 30ಕ್ಕೂ ಹೆಚ್ಚು ಮಂದಿಗೆ ಗಾಯ

Prajwal Revanna Case HD Revanna asks NO to sign voluntary statement in kidnapping case
ಕ್ರೈಂ20 mins ago

Prajwal Revanna Case: ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

Crude Bomb
ದೇಶ29 mins ago

Crude Bomb: ಚೆಂಡೆಂದು ಭಾವಿಸಿ ಬಾಂಬ್‌ ಜೊತೆ ಮಕ್ಕಳ ಆಟ; ಪಶ್ಚಿಮ ಬಂಗಾಳದಲ್ಲಿ ಭಾರೀ ಸ್ಫೋಟ

Shine Shetty follows diet and fitness
ಕಿರುತೆರೆ39 mins ago

Shine Shetty: ಸಖತ್‌ ಫಿಟ್‌ ಆದ ‘ಬಿಗ್ ಬಾಸ್‌’ ವಿನ್ನರ್ ಶೈನ್ ಶೆಟ್ಟಿ!

Rohit Sharma
ಕ್ರೀಡೆ54 mins ago

Rohit Sharma: ಐಪಿಎಲ್​ನಿಂದ ಹೊರಗುಳಿಯಲಿದ್ದಾರೆ ರೋಹಿತ್​ ಶರ್ಮ!

Karan Johar upset with Kettan Singh's poor mimicry of him
ಸಿನಿಮಾ60 mins ago

Karan Johar: ‘ಕಳಪೆ’ ಮಿಮಿಕ್ರಿ ಕಂಡು ಕರಣ್ ಜೋಹರ್ ಗರಂ; ಕ್ಷಮೆಯಾಚಿಸಿದ ಹಾಸ್ಯನಟ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ8 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ17 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ19 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ19 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌