ಜ್ವರ ಬಂದರೆ ಸಾಫ್ಟ್‌ವೇರ್‌ ಇಂಜಿನಿಯರ್‌ ಬಳಿ ಹೋಗುವ BBMP: ಕಸದ ಲಾರಿ ಕುರಿತ ತಪಾಸಣೆ ನಾಟಕ - Vistara News

ಬೆಂಗಳೂರು

ಜ್ವರ ಬಂದರೆ ಸಾಫ್ಟ್‌ವೇರ್‌ ಇಂಜಿನಿಯರ್‌ ಬಳಿ ಹೋಗುವ BBMP: ಕಸದ ಲಾರಿ ಕುರಿತ ತಪಾಸಣೆ ನಾಟಕ

ಕಸದ ಲಾರಿ ಚಾಲಕರ ನಿರ್ಲಕ್ಷ್ಯತನಕ್ಕೆ ಜನಾಕ್ರೋಶದ ಬೆನ್ನಲ್ಲೆ ಲಾರಿಗಳ ಫಿಟ್ನೆಸ್‌ ಪ್ರಮಾಣಪತ್ರ ಪರಿಶಿಲಿಸಲು ಸಂಚಾರಿ ಪೊಲೀಸರಿಗೆ ಬಿಬಿಎಂಪಿ ಪತ್ರ ಬರೆದಿದೆ.

VISTARANEWS.COM


on

bbmp
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಯಾವ ಸಮಸ್ಯೆ ಪರಿಹಾರಕ್ಕೆ ಯಾರ ಬಳಿ ತೆರಳಬೇಕು ಎಂಬ ಅರಿವು ಎಲ್ಲರಿಗೂ ಇರಬೇಕು. ಆದರೆ ರಾಜ್ಯದ ಆರನೇ ಒಂದು ಭಾಗ ಜನಸಂಖ್ಯೆಯನ್ನು ನಿಭಾಯಿಸುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP) ಆಯುಕ್ತರು ಕಸದ ಲಾರಿಗಳ ಫಿಟ್ನೆಸ್‌ ತಪಾಸಣೆಗೆ ಯಾರಿಗೆ ಪತ್ರ ಬರೆಯಬೇಕೆನ್ನುವುದನ್ನೇ ತಿಳಿದಿಲ್ಲ ಎನ್ನುವುದು ಸೋಜಿಗವಾದರೂ ಸತ್ಯ.

ಕಸದ ಲಾರಿಗೆ ನಾಗರಿಕರ ಸಾವು

ಬೆಂಗಳೂರಿನಲ್ಲಿ ಅಪಘಾತಗಳು ಸಾಮಾನ್ಯ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಬಿಬಿಎಂಪಿ ಕಸದ ಲಾರಿಗಳಿಗೆ ಸಿಲುಕಿ ನಾಗರಿಕರು ಸಾವಿಗೀಡಾಗುತ್ತಿದ್ದಾರೆ. ನಾಯಂಡಹಳ್ಳಿ ಬಳಿ ಬಿಬಿಎಂಪಿಯ ಕಸದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಚಲಾಯಿಸುತ್ತಿದ್ದ ಪದ್ಮಿನಿ(39) ನಡುರಸ್ತೆಯಲ್ಲಿ ಪ್ರಾಣ ಚೆಲ್ಲಿದ್ದರು. ಈ ಸಂಬಂಧ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಚಾಲಕನನ್ನು ಬಂಧಿಸಲಾಗಿದೆ. ಇದಕ್ಕೂ ಮುನ್ನೆ ಅನೇಕ ಪ್ರಕರಣಗಳು ವರದಿಯಾಗಿದ್ದವು. ಪದೇಪದೆ ನಗರದಲ್ಲಿ ಬಿಬಿಎಂಪಿ ಕಸದ ಲಾರಿಗೆ ಒಬ್ಬರೊಲ್ಲ ಒಬ್ಬರು ಬಲಿಯಾಗುತ್ತಿದ್ದಾರೆ. ಪದ್ಮಿನಿ ಅವರ ಸಾವಿನ ನಂತರ ಸಾರ್ವಜನಿಕರಲ್ಲಿ ಬಿಬಿಎಂಪಿ ವಿರುದ್ಧ ಆಕ್ರೋಶ ಹೆಚ್ಚಳವಾಗಿದೆ. ಅನನುಭವಿ ಹಾಗೂ ಪರವಾನಗಿ ಇಲ್ಲದ ಚಾಲಕರು ಟ್ರಕ್‌ ಚಲಾಯಿಸುತ್ತಿದ್ದಾರೆ. ಸಾರ್ವಜನಿಕ ರಸ್ತೆಗಳಲ್ಲಿ ಹೇಗೆ ಚಲಾಯಿಸಬೇಕೆನ್ನುವುದನ್ನು ಮರೆತಿದ್ದಾರೆ. ಆ ಲಾರಿಗಳು ಕಾನೂನು ಪ್ರಕಾರ ಅರ್ಹತಾ ಪ್ರಮಾಣಪತ್ರ ಹೊಂದಿಲ್ಲ ಎಂಬ ದೂರುಗಳು ಕೇಳಿಬಂದಿದ್ದವು. ಇದು ಬಿಬಿಎಂಪಿ ಅಧಿಕಾರಿಗಳನ್ನು ಎಚ್ಚರಗೊಳಿಸಿತ್ತು.

ಹೆಚ್ಚಿನ ಓದಿಗಾಗಿ: ಮಳೆಗೆ ಮುಳುಗಿದ ಬೆಂಗಳೂರು ಪ್ರದೇಶಗಳು: ಮನೆ, ದೇವಸ್ಥಾನಕ್ಕೆ ನುಗ್ಗಿದ ನೀರು

ಟ್ರಾಫಿಕ್‌ ಪೊಲೀಸರಿಗೆ ಪತ್ರ

ಕಸದ ಲಾರಿ ಚಾಲಕರ ನಿರ್ಲಕ್ಷ್ಯತನಕ್ಕೆ ಜನಾಕ್ರೋಶದ ಬೆನ್ನಲ್ಲೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ಕ್ರಿಯಾಶೀಲರಾಗಿದ್ದಾರೆ. ಕಸದ ಲಾರಿಗಳ ಫಿಟ್ನೆಸ್‌ ಪ್ರಮಾಣಪತ್ರ ಹಾಗೂ ವಾಹನಗಳ ದಾಖಲಾತಿಗಳನ್ನು ಪರಿಶೀಲನೆ ನಡೆಸುವಂತೆ ಸಂಚಾರಿ ಜಂಟಿ ಪೊಲೀಸ್‌ ಆಯಕ್ತರಿಗೆ ಪತ್ರ ಬರೆದಿದ್ದಾರೆ.

ಪೊಲೀಸರ ಸ್ಪೆಷಲ್‌ ಡ್ರೈವ್‌..!

ಬಿಬಿಎಂಪಿಯಿಂದ ಪತ್ರ ಬಂದ ಬೆನ್ನಲ್ಲೆ ಸಂಚಾರ ಜಂಟಿ ಪೊಲೀಸ್‌ ಆಯುಕ್ತ ರವಿಕಾಂತೇಗೌಡರು ತಮ್ಮ ಸಿಬ್ಬಂದಿಗೆ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ. ರಾತ್ರಿ ಸ್ಪೆಷಲ್‌ ಡ್ರೈವ್‌ ಮಾಡಿರುವ ಸಂಚಾರಿ ಪೊಲೀಸರು ಹಲವು ಕಸದ ವಾಹನಗಳ ತಪಾಸಣೆ ನಡೆಸಿ ಜಪ್ತಿ ಮಾಡುವ ಜೊತೆಗೆ ಪ್ರಕರಣ ದಾಖಲಿಸಿದ್ದಾರೆ. ಮಾರನೆಯ ದಿನವೂ ಬೆಳ್ಳಂಬೆಳಗ್ಗೆ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಹಲವು ವಾಹನಗಳು ನಿಯಮ ಉಲ್ಲಂಘನೆ ಮಾಡಿರುವುದು ಪತ್ತೆಯಾಗಿವೆ. ಈ ವೇಳೆ ಪೊಲೀಸರು ಒಟ್ಟು 652 ವಾಹನಗಳನ್ನು ತಪಾಸಣೆ ಮಾಡಿದ್ದಾರೆ. ಇದರಲ್ಲಿ ಫಿಟ್ನೆಸ್‌ ಸರ್ಟಿಫಿಕೇಟ್‌, ಲೈಸೆನ್ಸ್‌ ಇಲ್ಲದ 9 ವಾಹನಗಳನ್ನು ಜಪ್ತಿ ಮಾಡಿದ್ದಾರೆ. ವಿವಿಧ ಪ್ರಕರಣಗಳನ್ನು ದಾಖಲಿಸಿಕೊಂಡು ದಂಡ ವಿಧಿಸಿದ್ದಾರೆ.

ತಪಾಸಣೆಯ ವೇಳೆ ಓರ್ವ ಚಾಲಕ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿರುವುದು ಬೆಳಕಿಗೆ ಬಂದಿದ್ದು ಒಂದು ಕಸದ ವಾಹನ ಜಪ್ತಿ ಮಾಡಲಾಗಿದೆ. ಕಸ ವಿಲೇವಾರಿ ಮಾಡುವ ವಾಹನಗಳಿಗೂ ಸ್ಪೀಡ್‌ ಗವರ್ನರ್‌ ಅಳಡಿಸುವಂತೆ ಬಿಬಿಎಂಪಿಗೆ ಪೊಲೀಸರು ಸಲಹೆ ನೀಡಿದ್ದಾರೆ. ಈ ಮೂಲಕ ಕಸದ ಲಾರಿಯಿಂದ ಆಗುತ್ತಿರುವ ಅಪಘಾತಗಳನ್ನ ತಡೆಯಲು ಚಿಂತಿಸಲಾಗಿದೆ ಎಂದು ನಗರ ಸಂಚಾರಿ ಜಂಟಿ ಪೊಲೀಸ್‌ ಆಯುಕ್ತ ರವಿಕಾಂತೇಗೌಡರು ಸ್ಪಷ್ಟ ಪಡಿಸಿದ್ದಾರೆ.

ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದ ಹಿನ್ನೆಲೆಯಲ್ಲಿ ಗೌರವ್‌ ಗುಪ್ತಾ ಅವರು ಪತ್ರ ಬರೆದರು, ಸಂಚಾರಿ ಪೊಲೀಸರು ಅದರಂತೆ ತಪಾಸಣೆಯನ್ನೂ ಮಾಡಿದರು. ಆದರೆ ಅಸಲಿಗೆ ವಾಹನಗಳ ಫಿಟ್ನೆಸ್‌ ಪ್ರಮಾಣಪತ್ರಗಳನ್ನು ತಪಾಸಣೆ ಮಾಡಬೇಕಾಗಿರುವುದು ಸಂಚಾರಿ ಪೊಲೀಸರ ಕೆಲಸವಲ್ಲ. ಆರ್‌ಟಿಒ ಅಧಿಕಾರಿಗಳು ಈ ಕೆಲಸ ಮಾಡಬೇಕು. ಈ ವಿಚಾರ ಗೌರವ್‌ ಗುಪ್ತ ಅವರಿಗೂ ತಿಳಿಯಲಿಲ್ಲ. ಕಾರ್ಯಾಚರಣೆ ನಡೆಸಿದ ಸಂಚಾರಿ ಪೊಲೀಸರೂ ಆಲೋಚಿಸಲಿಲ್ಲ. ನಗರದಲ್ಲಿ ಅಪಘಾತಗಳು ಸಂಭವಿಸುತ್ತಿದ್ದರೂ ತಮಗೂ ಇದಕ್ಕೂ ಸಂಬಂಧವಿಲ್ಲವೆನ್ನುವಂತೆ ಆರ್‌ಟಿಒ ಅಧಿಕಾರಿಗಳು ಮಾತ್ರ ತಮ್ಮ ಪಾಡಿಗೆ ತಾವಿದ್ದಾರೆ.

ಪೊಲೀಸ್‌ ಕಾರ್ಯಾಚರಣೆ ಅಂಕಿ ಅಂಶಗಳು
  • ಒಟ್ಟು ತಪಾಸಣೆ ಮಾಡಿದ ವಾಹನಗಳ ಸಂಖ್ಯೆ- 652
  • ಜಪ್ತಿಯಾದ ವಾಹನಗಳ ಒಟ್ಟು ಸಂಖ್ಯೆ- 09
  • ದಾಖಲಾದ ಒಟ್ಟು ಪ್ರಕರಣಗಳ ಸಂಖ್ಯೆ -307
  • ತಪಾಸಣೆ ನಡೆಸಬೇಕಾದವರು ಯಾರು?

ವರದಿ: ಸಂತೋಷ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

HD Revanna: ರೇವಣ್ಣ ಬಂಧನ ಬೆನ್ನಲ್ಲೇ ಕುಮಾರಸ್ವಾಮಿ ಮೀಟಿಂಗ್;‌ ಮಗನ ಬಳಿಕ ತಂದೆಯೂ ಅಮಾನತು?

HD Revanna: HD Revanna: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಲು ನಿರಾಕರಿಸಿತು. ಇದಾದ ಕೆಲ ಹೊತ್ತಿನಲ್ಲೇ, ಮಾಜಿ ಪ್ರಧಾನಿ ದೇವೇಗೌಡರ ನಿವಾಸದಲ್ಲಿಯೇ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದರು. ಇದಾದ ಬಳಿಕ ಎಚ್‌.ಡಿ.ಕುಮಾರಸ್ವಾಮಿ ಅವರು ಮಹತ್ವದ ಸಭೆ ನಡಸಿದ್ದು, ಎಚ್‌.ಡಿ.ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗುತ್ತದೆ ಎಂದು ತಿಳಿದುಬಂದಿದೆ.

VISTARANEWS.COM


on

HD Revanna
Koo

ಬೆಂಗಳೂರು: ಮಗ ಪ್ರಜ್ವಲ್‌ ರೇವಣ್ಣ (Prajwal Revanna) ಮಾಡಿದ್ದಾರೆ ಎನ್ನಲಾದ ತಪ್ಪಿಗೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ (HD Revanna) ಬಂಧಿತರಾಗಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು (SIT Officials) ವಶಪಡಿಸಿಕೊಂಡಿದ್ದು, ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊಗಳು ವೈರಲ್‌ ಆದ ಬಳಿಕ ವಿದೇಶಕ್ಕೆ ಪರಾರಿಯಾಗಿದ್ದು, ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಈಗ ಎಚ್‌.ಡಿ.ರೇವಣ್ಣ ಅವರನ್ನೂ ಅಮಾನತುಗೊಳಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸುತ್ತಲೇ ಮಾಜಿ ಸಿಎಂ, ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಜಿ.ಟಿ.ದೇವೇಗೌಡ ಸೇರಿ ಹಲವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣವು ಜೆಡಿಎಸ್‌ಗೆ ಮುಜುಗರ ತಂದಿದ್ದು, ಮೈತ್ರಿ ಪಕ್ಷವಾದ ಬಿಜೆಪಿಯೂ ಪ್ರಕರಣದಿಂದ ದಿನೇದಿನೆ ಅಂತರ ಕಾಪಾಡಿಕೊಳ್ಳುತ್ತಿದೆ. ಹಾಗಾಗಿ, ಎಚ್‌.ಡಿ.ರೇವಣ್ಣ ಅವರನ್ನೂ ಪಕ್ಷದಿಂದ ಅಮಾನತುಗೊಳಿಸಲು ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗೊಂದು ವೇಳೆ ಅಮಾನತುಗೊಳಿಸಿದರೆ ತಂದೆ-ಮಗ ಇಬ್ಬರೂ ಅಮಾನತಾದಂತಾಗುತ್ತದೆ. ಮುಜುಗರ ತಪ್ಪಿಸಿಕೊಳ್ಳಲು ಕುಮಾರಸ್ವಾಮಿ ಅವರ ಬಳಿ ಇರುವ ಏಕೈಕ ಮಾರ್ಗ ಎಂದರೆ, ಅವರನ್ನು ಅಮಾನತುಗೊಳಿಸುವುದಾಗಿದೆ ಎಂದು ಹೇಳಲಾಗುತ್ತಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಕೇಸ್‌ನಲ್ಲಿ ಮೊದಲ ಆರೋಪಿಯಾಗಿರುವ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ, ರೇವಣ್ಣ ಅವರನ್ನು ವಶಪಡಿಸಿಕೊಂಡಿರುವ ಕುರಿತು ಪ್ರಕ್ರಿಯೆ ಮುಗಿಸುವ ಅವರು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಿದ್ದಾರೆ. ಆದಾಗ್ಯೂ, ಬಂಧಿಸಿದ 24 ಗಂಟೆಯೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾದ ಕಾರಣ ಎಸ್‌ಐಟಿ ಅಧಿಕಾರಿಗಳು ವೈದ್ಯಕೀಯ ಪರೀಕ್ಷೆ ಬಳಿಕ ವಿಚಾರಣೆ ನಡೆಸಲಿದ್ದಾರೆ. ಇಲ್ಲವೇ, ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜ್ವಲ್‌ ಶರಣಾಗತಿ?

“ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಾನೂನು ಪ್ರಕಾರ ಯಾವ ಪ್ರಕ್ರಿಯೆ ಅನುಸರಿಸಬೇಕೋ, ಅದೆಲ್ಲವನ್ನೂ ಅನುಸರಿಸಲಾಗುತ್ತದೆ. ಕಾನೂನು ಪ್ರಕಾರ ಅವರು ನಡೆದುಕೊಳ್ಳುತ್ತಾರೆ. ಇನ್ನು, ಪ್ರಜ್ವಲ್‌ ರೇವಣ್ಣ ಕೂಡ ಆಗಮಿಸಲಿದ್ದಾರೆ. ಅವರು ಪೊಲೀಸರಿಗೆ ಶರಣಾಗಲಿದ್ದಾರೆ” ಎಂಬುದಾಗಿ ಜೆಡಿಎಸ್‌ ನಾಯಕ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮಾಹಿತಿ ನೀಡಿದ್ದಾರೆ. ಆದರೆ, ಪ್ರಜ್ವಲ್‌ ರೇವಣ್ಣ ಯಾವಾಗ ಭಾರತಕ್ಕೆ ವಾಪಸಾಗಲಿದ್ದಾರೆ ಎಂಬುದರ ಕುರಿತು ಅವರು ಮಾಹಿತಿ ನೀಡಿಲ್ಲ.

ಇದನ್ನೂ ಓದಿ: HD Revanna: ರೇವಣ್ಣ ಬಂಧನದ ಬೆನ್ನಲ್ಲೇ ಪೊಲೀಸರಿಗೆ ಪ್ರಜ್ವಲ್‌ ಶರಣಾಗತಿ? ಸಿ.ಎಸ್.ಪುಟ್ಟರಾಜು ಮಹತ್ವದ ಹೇಳಿಕೆ

Continue Reading

ಕರ್ನಾಟಕ

HD Revanna: ರೇವಣ್ಣ ಬಂಧನದ ಬೆನ್ನಲ್ಲೇ ಪೊಲೀಸರಿಗೆ ಪ್ರಜ್ವಲ್‌ ಶರಣಾಗತಿ? ಸಿ.ಎಸ್.ಪುಟ್ಟರಾಜು ಮಹತ್ವದ ಹೇಳಿಕೆ

HD Revanna: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಲು ನಿರಾಕರಿಸಿತು. ಇದಾದ ಕೆಲ ಹೊತ್ತಿನಲ್ಲೇ, ಮಾಜಿ ಪ್ರಧಾನಿ ದೇವೇಗೌಡರ ನಿವಾಸದಲ್ಲಿಯೇ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದರು. ಇನ್ನು ಪ್ರಜ್ವಲ್‌ ರೇವಣ್ಣ ಕೂಡ ವಿದೇಶದಿಂದ ಬಂದು ಪೊಲೀಸರಿಗೆ ಶರಣಾಗಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

HD Revanna
Koo

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅಶ್ಲೀಲ ವಿಡಿಯೊಗಳು, ಲೈಂಗಿಕ ದೌರ್ಜನ್ಯ, ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ, ಜೆಡಿಎಸ್‌ ನಾಯಕ ಎಚ್‌.ಡಿ.ರೇವಣ್ಣ (HD Revanna) ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕರ್ನಾಟಕ ಸೇರಿ ದೇಶಾದ್ಯಂತ ಸುದ್ದಿಯಾಗಿರುವ ಪೆನ್‌ಡ್ರೈವ್‌ ಕೇಸ್‌ನಲ್ಲಿ (Pendrive Case) ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಪುತ್ರ ಎಸ್‌ಐಟಿ ವಶಕ್ಕೆ ಸೇರಿದ್ದು, ಪ್ರಕರಣಕ್ಕೆ ಮಹತ್ವದ ತಿರುವೊಂದು ಸಿಕ್ಕಿದೆ. ಇದರ ಬೆನ್ನಲ್ಲೇ‌, ಅಶ್ಲೀಲ ವಿಡಿಯೊಗಳು ವೈರಲ್‌ ಆಗುತ್ತಲೇ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ ಕೂಡ ಭಾರತಕ್ಕೆ ಬಂದು ಪೊಲೀಸರಿಗೆ ಶರಣಾಗಲಿದ್ದಾರೆ ಎಂದು ತಿಳಿದುಬಂದಿದೆ.

“ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಾನೂನು ಪ್ರಕಾರ ಯಾವ ಪ್ರಕ್ರಿಯೆ ಅನುಸರಿಸಬೇಕೋ, ಅದೆಲ್ಲವನ್ನೂ ಅನುಸರಿಸಲಾಗುತ್ತದೆ. ಕಾನೂನು ಪ್ರಕಾರ ಅವರು ನಡೆದುಕೊಳ್ಳುತ್ತಾರೆ. ಇನ್ನು, ಪ್ರಜ್ವಲ್‌ ರೇವಣ್ಣ ಕೂಡ ಆಗಮಿಸಲಿದ್ದಾರೆ. ಅವರು ಪೊಲೀಸರಿಗೆ ಶರಣಾಗಲಿದ್ದಾರೆ” ಎಂಬುದಾಗಿ ಜೆಡಿಎಸ್‌ ನಾಯಕ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮಾಹಿತಿ ನೀಡಿದ್ದಾರೆ. ಆದರೆ, ಪ್ರಜ್ವಲ್‌ ರೇವಣ್ಣ ಯಾವಾಗ ಭಾರತಕ್ಕೆ ವಾಪಸಾಗಲಿದ್ದಾರೆ ಎಂಬುದರ ಕುರಿತು ಅವರು ಮಾಹಿತಿ ನೀಡಿಲ್ಲ.

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಕೇಸ್‌ನಲ್ಲಿ ಮೊದಲ ಆರೋಪಿಯಾಗಿರುವ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ, ರೇವಣ್ಣ ಅವರನ್ನು ವಶಪಡಿಸಿಕೊಂಡಿರುವ ಕುರಿತು ಪ್ರಕ್ರಿಯೆ ಮುಗಿಸುವ ಅವರು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಿದ್ದಾರೆ. ಆದಾಗ್ಯೂ, ಬಂಧಿಸಿದ 24 ಗಂಟೆಯೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾದ ಕಾರಣ ಎಸ್‌ಐಟಿ ಅಧಿಕಾರಿಗಳು ವೈದ್ಯಕೀಯ ಪರೀಕ್ಷೆ ಬಳಿಕ ವಿಚಾರಣೆ ನಡೆಸಲಿದ್ದಾರೆ. ಇಲ್ಲವೇ, ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಹಂಗೇರಿಯಲ್ಲಿ ಪ್ರಜ್ವಲ್?‌

ಪ್ರಜ್ವಲ್‌ ರೇವಣ್ಣ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಪಾಸ್‌ಪೋರ್ಟ್‌ ಎಂಟ್ರಿ ಮಾಹಿತಿಯ ಮೇರೆಗೆ ಒಂದಷ್ಟು ಸುಳಿವು ಪತ್ತೆಹಚ್ಚಿದ್ದಾರೆ. ಪಾಸ್‌ಪೋರ್ಟ್‌ ಎಂಟ್ರಿ ಆಧಾರದ ಮೇಲೆ ಪ್ರಜ್ವಲ್‌ ರೇವಣ್ಣ ಬುಡಾಫೆಸ್ಟ್‌ನಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಜ್ವಲ್‌ ರೇವಣ್ಣ ಪತ್ತೆಗೆ ಕಸರತ್ತು ನಡೆಸುತ್ತಿರುವ ಎಸ್‌ಐಟಿ ಅಧಿಕಾರಗಳು, ಬ್ಲ್ಯೂ ಕಾರ್ನರ್‌ ನೋಟಿಸ್‌ ಹೊರಡಿಸಬೇಕು ಎಂದು ಸಿಬಿಐಗೆ ಮನವಿ ಕೂಡ ಮಾಡಿದ್ದಾರೆ.

ಆರೋಪಿಯ ಚಲನವಲನಗಳ ಬಗ್ಗೆ ಮಾಹಿತಿಯನ್ನು ಕಲೆ ಹಾಕಲು ಬ್ಲ್ಯೂ ಕಾರ್ನರ್ ನೋಟೀಸ್‌ ಜಾರಿಗೊಳಿಸಲಾಗುತ್ತದೆ. ಆರೋಪಿ ಬಗ್ಗೆ ಸುಳಿವು ಸಿಕ್ಕ ಬಳಿಕ ಆ ಮಾಹಿತಿಯನ್ನು ಸಿಐಡಿಗೆ ಸಿಬಿಐ ನೀಡಲಿದೆ. ಮತ್ತೆ ಇದನ್ನು ಆಧರಿಸಿ ಕೋರ್ಟ್‌ಗೆ ಮಾಹಿತಿ ‌ನೀಡಿ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಲು ಎಸ್ಐಟಿ ಮನವಿ ಮಾಡಬೇಕಿದೆ. ಸಿಬಿಐ, ಇಂಟರ್‌ಫೋಲ್‌ಗೆ ಮನವಿ ಮಾಡಿ ರೆಡ್ ಕಾರ್ನರ್ ನೊಟೀಸ್ ಪಡೆಯಲಿದೆ.

ಇದನ್ನೂ ಓದಿ: HD Revanna: ಮಾಜಿ ಪ್ರಧಾನಿ ಪುತ್ರ ಎಚ್‌.ಡಿ.ರೇವಣ್ಣ ಬಂಧನ; ಮುಂದೇನಾಗಲಿದೆ? ಪ್ರಕ್ರಿಯೆ ಏನು?

Continue Reading

ಕರ್ನಾಟಕ

HD Revanna: ಮಾಜಿ ಪ್ರಧಾನಿ ಪುತ್ರ ಎಚ್‌.ಡಿ.ರೇವಣ್ಣ ಬಂಧನ; ಮುಂದೇನಾಗಲಿದೆ? ಪ್ರಕ್ರಿಯೆ ಏನು?

HD Revanna: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಲು ನಿರಾಕರಿಸಿತು. ಇದಾದ ಕೆಲ ಹೊತ್ತಿನಲ್ಲೇ, ಮಾಜಿ ಪ್ರಧಾನಿ ದೇವೇಗೌಡರ ನಿವಾಸದಲ್ಲಿಯೇ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದರು. ಬಂಧನದ ನಂತರ ಪ್ರಕ್ರಿಯೆಗಳ ಕುರಿತ ವಿವರ ಇಲ್ಲಿದೆ.

VISTARANEWS.COM


on

HD Revanna
Koo

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅಶ್ಲೀಲ ವಿಡಿಯೊಗಳು, ಲೈಂಗಿಕ ದೌರ್ಜನ್ಯ, ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ, ಜೆಡಿಎಸ್‌ ನಾಯಕ ಎಚ್‌.ಡಿ.ರೇವಣ್ಣ (HD Revanna) ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕರ್ನಾಟಕ ಸೇರಿ ದೇಶಾದ್ಯಂತ ಸುದ್ದಿಯಾಗಿರುವ ಪೆನ್‌ಡ್ರೈವ್‌ ಕೇಸ್‌ನಲ್ಲಿ (Pendrive Case) ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಪುತ್ರ ಎಸ್‌ಐಟಿ ವಶಕ್ಕೆ ಸೇರಿದ್ದು, ಪ್ರಕರಣಕ್ಕೆ ಮಹತ್ವದ ತಿರುವೊಂದು ಸಿಕ್ಕಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಕೇಸ್‌ನಲ್ಲಿ ಮೊದಲ ಆರೋಪಿಯಾಗಿರುವ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ, ರೇವಣ್ಣ ಅವರನ್ನು ವಶಪಡಿಸಿಕೊಂಡಿರುವ ಕುರಿತು ಪ್ರಕ್ರಿಯೆ ಮುಗಿಸುವ ಅವರು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಿದ್ದಾರೆ. ಆದಾಗ್ಯೂ, ಬಂಧಿಸಿದ 24 ಗಂಟೆಯೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾದ ಕಾರಣ ಎಸ್‌ಐಟಿ ಅಧಿಕಾರಿಗಳು ವೈದ್ಯಕೀಯ ಪರೀಕ್ಷೆ ಬಳಿಕ ವಿಚಾರಣೆ ನಡೆಸಲಿದ್ದಾರೆ. ಇಲ್ಲವೇ, ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಎಚ್‌.ಡಿ.ರೇವಣ್ಣ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಎಸ್‌ಐಟಿ ಅಧಿಕಾರಿಗಳು, ಆರೋಪಿಯ ವಿಚಾರಣೆಗಾಗಿ ವಶಕ್ಕೆ ನೀಡಬೇಕು ಎಂಬುದಾಗಿ ಮನವಿ ಮಾಡಲಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯೂ ಪತ್ತೆಯಾಗಿರುವುದರಿಂದ, ಪ್ರಕರಣದ ಗಾಂಭೀರ್ಯವನ್ನು ಅರಿತು ವಿಚಾರಣೆಗಾಗಿ ಕಸ್ಟಡಿಗೆ ನೀಡಬೇಕು ಎಂಬುದಾಗಿ ಎಸ್‌ಐಟಿ ಅಧಿಕಾರಿಗಳು ಮನವಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್.‌ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸಿತು, ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತು. ಇದಾದ ಕೆಲ ಹೊತ್ತಿನಲ್ಲೇ ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡರು.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್‌ ಕೇಸ್;‌ ದೇವೇಗೌಡರ ನಿವಾಸದಲ್ಲೇ ಎಚ್‌.ಡಿ.ರೇವಣ್ಣ ಬಂಧನ

Continue Reading

ಕರ್ನಾಟಕ

Prajwal Revanna Case: ಪೆನ್‌ಡ್ರೈವ್‌ ಕೇಸ್;‌ ದೇವೇಗೌಡರ ನಿವಾಸದಲ್ಲೇ ಎಚ್‌.ಡಿ.ರೇವಣ್ಣ ಬಂಧನ

Prajwal Revanna Case: ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್.‌ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸಿತು, ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತು. ಇದಾದ ಬಳಿಕ ಅಧಿಕಾರಿಗಳು ಮಾಜಿ ಸಚಿವರನ್ನು ಬಂಧಿಸಿದರು.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ, ಕೆ.ಆರ್.ನಗರದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್‌ ನಾಯಕ, ಮಾಜಿ ಸಚಿವ, ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರ ಪುತ್ರ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎಚ್‌.ಡಿ.ರೇವಣ್ಣ (HD Revanna) ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನಿರಾಕರಿಸುತ್ತಲೇ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ವಶಕ್ಕೆ ಪಡೆದರು.

ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ನಿವಾಸದಲ್ಲಿಯೇ ಎಚ್‌.ಡಿ.ರೇವಣ್ಣ ಅವರನ್ನು ವಶಪಡಿಸಿಕೊಂಡ ಎಸ್‌ಐಟಿ ಅಧಿಕಾರಿಗಳು ಸಿಐಡಿ ಕಚೇರಿಯತ್ತ ಅವರನ್ನು ಕರೆದುಕೊಂಡು ಹೋಗುತ್ತಿದ್ದಾರೆ. ಸಿಐಡಿ ಕಚೇರಿಯಲ್ಲಿ ವಿಚಾರಣೆ ನಡೆಸಿದ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಮೇ 4ರ ಸಂಜೆ 5.30ರೊಳಗೆ ವಿಚಾರಣೆಗೆ ಹಾಜರಾಗಬೇಕು ಎಂದು ಎಸ್‌ಐಟಿ ನೋಟಿಸ್‌ ನೀಡಿತ್ತು. ಆದರೆ, ವಿಚಾರಣೆಗೆ ಹಾಜರಾಗದ ರೇವಣ್ಣ ಮೂರು ದಿನಗಳಿಂದ ತಲೆಮರೆಸಿಕೊಂಡಿದ್ದರು. ಇನ್ನು, ನಿರೀಕ್ಷಣಾ ಜಾಮೀನಿಗೂ ಅವರು ಅರ್ಜಿ ಸಲ್ಲಿಸಿದ್ದರು.

ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್.‌ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸಿತು, ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತು. ಇದಾದ ಬಳಿಕ ಅಧಿಕಾರಿಗಳು ಮಾಜಿ ಸಚಿವರನ್ನು ಬಂಧಿಸಿದರು.

ನಿವಾಸಗಳಲ್ಲಿ ಎಸ್‌ಐಟಿ ಮಹಜರು

ಶುಕ್ರವಾರ (ಮೇ 3) ಪ್ರಜ್ವಲ್ ತೋಟದ ಮನೆಗೆ ಎಸ್ಐಟಿ ಅಧಿಕಾರಿಗಳ ತಂಡ ರೇಡ್ ಮಾಡಿದ್ದು, ಐವರ ತಂಡದಿಂದ ಪಡುವಲಹಿಪ್ಪೆಯ ತೋಟದ ಮನೆಯಲ್ಲಿ ಪರಿಶೀಲನೆ ನಡೆಸಿತ್ತು. ಬೆಳಗ್ಗೆ 3.30ರ ಸುಮಾರಿನಲ್ಲೇ ಬಂದು ಪರಿಶೀಲನೆ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಪ್ರಜ್ವಲ್ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗುತ್ತಲೇ ಹಾಸನಕ್ಕೆ ಬಂದಿರುವ ಪೊಲೀಸರ ಎರಡು ತಂಡ, ಪಡುವಲಹಿಪ್ಪೆ ಸೇರಿ ಎರಡು ಕಡೆ ಸ್ಥಳ ಪರಿಶೀಲನೆ ನಡೆಸಿದೆ.

ಮೇ 2ರಂದು ತಡರಾತ್ರಿ ಬೆಂಗಳೂರಿನ ಬಸವನಗುಡಿಯಲ್ಲಿರುವ ಮನೆ, ಹೊಳೆನರಸೀಪುರದ ಪಡುವಲಹಿಪ್ಪೆಯ ಫಾರ್ಮ್ ಹೌಸ್, ಸೂರಜ್ ರೇವಣ್ಣಗೆ ಸೇರಿದ ಗನ್ನಿಕಡದಲ್ಲಿರುವ ಫಾರ್ಮ್ ಹೌಸ್ ಮೇಲೆ ಹೀಗೆ ಒಟ್ಟು ಮೂರು ಕಡೆ SIT ಅಧಿಕಾರಿಗಳು ದಾಳಿ ನಡೆಸಿದ್ದರು. ಸುಮಾರು 30ಕ್ಕೂ ಅಧಿಕ ಅಧಿಕಾರಿಗಳು, ಸಿಬ್ಬಂದಿ ಏಕಕಾಲಕ್ಕೆ ದಾಳಿ ಮಾಡಿದ್ದು, ಮಹತ್ವದ ಸಾಕ್ಷ್ಯಗಳನ್ನು ಕಲೆಹಾಕಿದ್ದರು. ಎಸ್‌ಪಿ ಸೀಮಾ ಲಾಠ್ಕರ್ ನೇತೃತ್ವದಲ್ಲಿ ದಾಳಿ ನಡೆದಿತ್ತು.

ಇದನ್ನೂ ಓದಿ: Prajwal Revanna Case: ಜರ್ಮನಿ ಆಯ್ತು, ದುಬೈ ಬಿಟ್ಟಾಯ್ತು; ಮತ್ತೊಂದು ದೇಶಕ್ಕೆ ಹಾರಿದ ಪ್ರಜ್ವಲ್‌ ರೇವಣ್ಣ!

Continue Reading
Advertisement
HD Revanna
ಕರ್ನಾಟಕ15 mins ago

HD Revanna: ರೇವಣ್ಣ ಬಂಧನ ಬೆನ್ನಲ್ಲೇ ಕುಮಾರಸ್ವಾಮಿ ಮೀಟಿಂಗ್;‌ ಮಗನ ಬಳಿಕ ತಂದೆಯೂ ಅಮಾನತು?

Terrorist Attack
ಪ್ರಮುಖ ಸುದ್ದಿ15 mins ago

Terrorist Attack : ಪೂಂಚ್​​ನಲ್ಲಿ ಭಯೋತ್ಪಾದಕರ ದಾಳಿ: ನಾಲ್ವರು ವಾಯುಪಡೆ ಸಿಬ್ಬಂದಿಗೆ ಗಾಯ

HD Revanna
ಕರ್ನಾಟಕ34 mins ago

HD Revanna: ರೇವಣ್ಣ ಬಂಧನದ ಬೆನ್ನಲ್ಲೇ ಪೊಲೀಸರಿಗೆ ಪ್ರಜ್ವಲ್‌ ಶರಣಾಗತಿ? ಸಿ.ಎಸ್.ಪುಟ್ಟರಾಜು ಮಹತ್ವದ ಹೇಳಿಕೆ

Drown in River
ಕರ್ನಾಟಕ42 mins ago

Drown In River: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಕುರಿಗಾಹಿ ಯುವಕ ಸಾವು

Champions Trophy
ಪ್ರಮುಖ ಸುದ್ದಿ43 mins ago

Champions Trophy : ಭಾರತ ಕ್ರಿಕೆಟ್​ ತಂಡಕ್ಕೆ ಬೆದರಿಕೆ ಒಡ್ಡಿದ ಪಾಕಿಸ್ತಾನದ ಮಾಜಿ ಆಟಗಾರ

Davanagere lok sabha constituency bjp candidate gayatri siddeshwar election campaign
ದಾವಣಗೆರೆ53 mins ago

Lok Sabha Election: ಚುನಾವಣೆಯಲ್ಲಿ ಗೆಲ್ಲಿಸುವಂತೆ ಗಾಯತ್ರಿ ಸಿದ್ದೇಶ್ವರ್ ಮನವಿ

HD Revanna
ಕರ್ನಾಟಕ58 mins ago

HD Revanna: ಮಾಜಿ ಪ್ರಧಾನಿ ಪುತ್ರ ಎಚ್‌.ಡಿ.ರೇವಣ್ಣ ಬಂಧನ; ಮುಂದೇನಾಗಲಿದೆ? ಪ್ರಕ್ರಿಯೆ ಏನು?

Prajwal Revanna Case
ಕರ್ನಾಟಕ1 hour ago

Prajwal Revanna Case: ಪೆನ್‌ಡ್ರೈವ್‌ ಕೇಸ್;‌ ದೇವೇಗೌಡರ ನಿವಾಸದಲ್ಲೇ ಎಚ್‌.ಡಿ.ರೇವಣ್ಣ ಬಂಧನ

Village Administrative Officer
ಪ್ರಮುಖ ಸುದ್ದಿ2 hours ago

Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

Lok Sabha Election
Latest2 hours ago

Lok Sabha Election : ಕಾಂಗ್ರೆಸ್​ ತೊರೆದ ಲವ್ಲಿ ಸೇರಿ ನಾಲ್ವರಿಂದ ಬಿಜೆಪಿ ಸೇರ್ಪಡೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ15 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌