ತೆರವಾಗಿರುವ ಗ್ರಾ.ಪಂ. ಸ್ಥಾನಗಳಿಗೆ ಮೇ 20ರಂದು ಉಪಚುನಾವಣೆ - Vistara News

ಶಿವಮೊಗ್ಗ

ತೆರವಾಗಿರುವ ಗ್ರಾ.ಪಂ. ಸ್ಥಾನಗಳಿಗೆ ಮೇ 20ರಂದು ಉಪಚುನಾವಣೆ

ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾ.ಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ಮತಪೆಟ್ಟಿಗೆಗಳ ಮೂಲಕ ನಡೆಯಲಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ : ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾ.ಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಗುರುವಾರ ಜಿಲ್ಲಾಧಿಕಾರಿ ಚುನಾವಣಾ ಅಧಿಸೂಚನೆ ಹೊರಡಿಸಿದ್ದು, ಮೇ 10 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ.

ಮೇ 11 ನಾಮಪತ್ರಗಳನ್ನು ಪರಿಶೀಲಿಸುವ ದಿನವಾಗಿದ್ದು, ಮೇ 13ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ. ಮೇ 20ರಂದು ಅವಶ್ಯವಿದ್ದರೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಮೇ 21 ಮರು ಮತದಾನ ದಿನವಾಗಿದೆ. ಮೇ 22ರಂದು ಬೆಳಿಗ್ಗೆ 8 ಗಂಟೆಯಿಂದ ತಾಲ್ಲೂಕು ಕೇಂದ್ರದಲ್ಲಿ ಮತಗಳ ಎಣಿಕೆ ನಡೆಯಲಿದೆ.

ಇದನ್ನೂ ಓದಿ : ಏರ್‌ ಏಷ್ಯಾವನ್ನೂ ಖರೀದಿಸಲು ಮುಂದಾದ TATA: ಪೂರ್ಣ ಮಾಲೀಕತ್ವ ಕುರಿತು ಪ್ರಸ್ತಾಪ

ಸ್ಥಾನಗಳ ವಿವರ :

ಶಿವಮೊಗ್ಗ ತಾಲ್ಲೂಕಿನ ಗೌತಮಪುರ ಗ್ರಾ.ಪಂ ಯ ಕಣ್ಣೂರು-2, ಅನುಸೂಚಿತ ಪಂಗಡ ಮಹಿಳೆ, ಸೈದೂರು ಗ್ರಾಮ ಪಂಚಾಯತಿಯ ತಡಗಳಲೆ-2, ಹಿಂದುಳಿದ ವರ್ಗʼಬʼ, ಹಾಗೂ ಶಿಕಾರಿಪುರ ತಾಲ್ಲೂಕಿನ ಗೊಗ್ಗ-2, ಅನುಸೂಚಿತ ಪಂಗಡ, ಮಹಿಳೆ, ಬೇಗೂರು ಗ್ರಾ.ಪಂಚಾಯತಿಯ ಬೇಗೂರು-1, ಸಾಮಾನ್ಯ ಮಹಿಳೆ ತಲಾ 1 ಸ್ಥಾನಗಳಿಗೆ ಚುನಾವಣೆ ನಡೆಯಲಿವೆ.

ಈ ಚುನಾವಣೆಯನ್ನು ಬ್ಯಾಲಟ್‌ ಬಾಕ್ಸ್‌ಗಳ ಮೂಲಕ ನಡೆಸಲಾಗವುದು. ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಗ್ರಾ.ಪಂ ಚುನಾವಣೆಗಳ ಮತಪತ್ರದಲ್ಲಿ ‘NOTA’ ಅವಕಾಶವಿರುವುದಿಲ್ಲ. ಚುನಾವಣಾ ಕಾರ್ಯ ನಿರ್ವಹಿಸಲು ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರ ತಿಳಿಸಿದ್ದಾರೆ.

ಮಾದರಿ ನೀತಿ ಸಂಹಿತೆ :

ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದಿನಿಂದ ಮೇ 22 ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಡಾ. ಶಿವಕುಮಾರ ಸ್ವಾಮೀಜಿಯವರ ನುಡಿಯೇ ಪ್ರೇರಣೆ: ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತ ಕೃಷ್ಣಪ್ರಸಾದ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Kumar Bangarappa: ಶಿವರಾಜ್ ಕುಮಾರ್ ನಮ್ಮೂರಿನ ಜಾತ್ರೆಯಲ್ಲಿ ಕುಣಿಯಲು ಅರ್ಜಿ ಹಾಕಲಿ! ಗೀತಾ ಸೋತ ಹಿನ್ನೆಲೆಯಲ್ಲಿ ಕುಮಾರ್ ಬಂಗಾರಪ್ಪ ಗೇಲಿ

Kumar Bangarappa: ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಸೋತ ಹಿನ್ನೆಲೆಯಲ್ಲಿ ಸಹೋದರಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್, ಬಾವ ಶಿವರಾಜ್ ಕುಮಾರ್, ಸಹೋದರ ಮಧುಬಂಗಾರಪ್ಪ ಅವರ ಬಗ್ಗೆ ಮಾಜಿ ಶಾಸಕ ಕುಮಾರ್‌ ಬಂಗಾರಪ್ಪ ವ್ಯಂಗ್ಯವಾಡಿದ್ದಾರೆ.

VISTARANEWS.COM


on

Kumar Bangarappa
Koo

ಶಿವಮೊಗ್ಗ: ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ (Karnataka election results 2024) ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಸ್ಪರ್ಧಿಸಿ ಸೋತ ಸಹೋದರಿ ಗೀತಾ ಶಿವರಾಜ್‌ಕುಮಾರ್‌ಗೆ ಮಾಜಿ ಶಾಸಕ ಕುಮಾರ್ ಬಂಗಾರಪ್ಪ (Kumar Bangarappa) ಟಕ್ಕರ್ ಕೊಟ್ಟಿದ್ದಾರೆ. ಬಂಗಾರಪ್ಪ ಹಾಗೂ ರಾಜ್ ಕುಮಾರ್ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದೆ ಸೋಲಿಗೆ ಕಾರಣ. ನಟ ಶಿವರಾಜ್ ಕುಮಾರ್ ನಿರುದ್ಯೋಗಿ ಆಗಬೇಕಿಲ್ಲ, ನಮ್ಮ ಊರಿನ ಜಾತ್ರೆಯಲ್ಲಿ ಕುಣಿಯೋಕೆ ಅರ್ಜಿ ಹಾಕಲಿ ಎಂದು ಕುಮಾರ್ ಬಂಗಾರಪ್ಪ ಗೇಲಿ ಮಾಡಿದ್ದಾರೆ.

ಶಿವಮೊಗ್ಗ ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ನನ್ನ ತಂಗಿ ಸಿನಿಮಾ ಡಾನ್ ಆಗಿರುವುದರಿಂದ ಬೇಸರ ಪಡುವುದು ಬೇಕಿಲ್ಲ. ದೊಡ್ಮನೆ ವ್ಯವಹಾರ ಸಾಕಷ್ಟಿದೆ, ಅದು ಬೇರೆಯವರಿಗೆ ಅವಕಾಶ ಸಿಗಲ್ಲ. ಹೆದರಿಸುವ, ಬೆದರಿಸುವ, ಹುಷಾರ್ ಎನ್ನುವ ಮಾತುಗಳು ಏನಿದ್ದರೂ ತಮ್ಮ ಪಟಾಲಂ ಮುಂದೆ ಮಾತ್ರ ಇರಲಿ. ದಿಕ್ಕು ಗೆಟ್ಟು ದಿಕ್ಕಾ ಪಾಲಾಗಿ ಬೆಂಗಳೂರು ಸೇರಿದವರಿಗೆ ಇದು ಕೊನೆಯ ಎಚ್ಚರಿಕೆ. ನೀವು ಹಿಂತುಗಿರುಗಿ ಬರುವುದು ನಿಮ್ಮ ಕನಸಿನ ಮಾತು. ಹೋಗಿ ಬನ್ನಿ ಟಾಟಾ ಬೈ ಬೈ ಎಂದು ತಿರುಗೇಟು ನೀಡಿದ್ದಾರೆ.

ಬಂಗಾರಪ್ಪನವರನ್ನು ಪ್ರಚಾರ ಸಾಮಗ್ರಿಯಾಗಿ ಬಳಸಿಕೊಂಡವರಿಗೆ ತಕ್ಕ ಶಾಸ್ತಿ

ಬಂಗಾರಪ್ಪನವರನ್ನು ಕೇವಲ ಪ್ರಚಾರ ಸಾಮಗ್ರಿಯನ್ನಾಗಿ ಬಳಸಿಕೊಂಡವರಿಗೆ ತಕ್ಕ ಶಾಸ್ತಿಯಾಗಿದೆ ಎಂದು ಗೀತಾ ಶಿವರಾಜ್‌ಕುಮಾರ್‌, ಬಾವ ಶಿವರಾಜ್‌ ಕುಮಾರ್‌ ಹಾಗೂ ಸಹೋದರ ಮಧು ಬಂಗಾರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಶಾಸಕ ಕುಮಾರ್‌ ಬಂಗಾರಪ್ಪ, ಕರ್ನಾಟಕ ಕಂಡ ಧೀಮಂತ ರಾಜಕಾರಣಿ, ಬಡವರ ಬಂಧು ಎಂಬ ಸಾರ್ಥಕ ಬಿರುದಾವಳಿಯನ್ನು ತಮ್ಮ ಹೆಸರಿನೊಡನೆ ನಡೆಸಿಕೊಂಡು ಬದುಕಿದವರು ಸಾರೆಕೊಪ್ಪ ಬಂಗಾರಪ್ಪ. ಹಿಂದುಳಿದ ವರ್ಗಗಳಿಗೆ ಆಶಾಕಿರಣವಾಗಿದ್ದ, ರೈತಬಂದುವೂ, ಗೇಣಿದಾರರ ಜೀವಜಲವೆನಿಸಿದ್ದ ಹೋರಾಟಗಾರ, ನಾಡು ನುಡಿ ಸಂಸ್ಕೃತಿಗಳ ರಕ್ಷಾ ದೀಕ್ಷೆಯನ್ನು ತೊಟ್ಟಿದ್ದ ವೀರಯೋಧನೆನಿಸಿದ್ದ ಕರ್ನಾಟಕದ ಈ ಮಾಜಿ ಮುಖ್ಯಮಂತ್ರಿ, ಲಿಂಗಾಯತ, ಬ್ರಾಹ್ಮಣ, ಒಕ್ಕಲಿಗರೆಲ್ಲರಲ್ಲಿಯೂ ಸಮ ಭಾವ, ಸಮಚಿತ್ತದಿಂದ ಬೆರೆತಿದ್ದವರು. ಇವರ ಆಡಳಿತ ವೈಖರಿಯು ಅನುಕರಣೀಯ ಮಾತ್ರವಲ್ಲದೆ ಆದರ್ಶರೂಪದ್ದಾಗಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ | Shivamogga Election Result 2024: ಶಿವಮೊಗ್ಗದಲ್ಲಿ ಬಿಜೆಪಿಯ ಬಿ.ವೈ.ರಾಘವೇಂದ್ರಗೆ ವಿಜಯಮಾಲೆ

ಇವರು ಜಾರಿಗೆ ತಂದಿದ್ದ ಪಂಚಮುಖಿ ಕಾರ್ಯಕ್ರಮಗಳಾದ ವಿಶ್ವ, ಸುಶ್ರತ, ಆರಾಧನ, ಆಶ್ರಯ, ಅಕ್ಷಯ ಮುಂತಾದವನ್ನು ಇಡೀ ರಾಜ್ಯ ನೆನೆಯುತ್ತಾ ಆರಾಧಿಸುತ್ತಿದೆ, ಬೇರೆ ರಾಜ್ಯಗಳೂ ಅನುಕರಿಸುತ್ತಿವೆ. ಇಂತಹ ಒಬ್ಬ ಧಿರೋದ್ಧಾತ ನಾಯಕನನ್ನು ನನ್ನ ತಮ್ಮ ಹಾಗೂ ತಂಗಿ ತಮ್ಮ ಸ್ವಾರ್ಥಸಾಧನೆಗಾಗಿ, ಕೇವಲ ಒಂದು ಲೋಕಸಭಾ ಕ್ಷೇತ್ರಕ್ಕೆ ಅಂದರೆ ಶಿವಮೊಗ್ಗ ಕ್ಷೇತ್ರಕ್ಕೆ ಸೀಮಿತಗೊಳಿಸಿದ್ದು ಇವರ ಸಂಕುಚಿತ ಸ್ವಭಾವದಿಂದ ಬಂಗಾರಪ್ಪನವರನ್ನು ಕೇವಲ ಪ್ರಚಾರ ಸಾಮಗ್ರಿಯನ್ನಾಗಿ ಬಳಸಿಕೊಂಡ ಇವರಿಗೆ ತಕ್ಕ ಶಾಸ್ತಿಯಾಯಿತು. ಈ ಮಹಾಪರಾಧಕ್ಕಾಗಿ ಜಿಲ್ಲೆಯ, ಕ್ಷೇತ್ರದ ಜನರ ಕ್ಷಮಾಪಣೆ ಕೇಳಿ ಹೋಗಿಬರಲಿ, ಟಾಟಾ! ಎಂದು ತಿಳಿಸಿದ್ದಾರೆ.

ಮೇಲಾಗಿ, ಕನ್ನಡದ ಕಣ್ಮಣಿ Dr. ರಾಜಕುಮಾರ್ ರವರ ಹೆಸರನ್ನು ದುರುಪಯೋಗ ಪಡಿಸಿಕೊಂಡಿದ್ದಲ್ಲದೆ ಅವರಿಗಿಲ್ಲದಿದ್ದ ಇಂಗಿತವನ್ನು ಇತ್ತೆಂದು ಪ್ರಚುರಪಡಿಸಿ ಲಾಭ ಮಾಡಿಕೊಳ್ಳಬಯಸಿದ ಇವರಿಗೆ ಮಾಡಿದ್ದುಣೋ ಮಹಾರಾಯ ಎಂಬಂತ ಸ್ಥಿತಿಯಾಗಿದೆ. ಉತ್ತಮ ಉದ್ದೇಶ ಇವರದ್ದಾಗಿದ್ದರೆ ಖಂಡಿತ ವಿಜಯಲಕ್ಷ್ಮಿ ಒಲಿಯುತ್ತಿದ್ದಳು, ಸ್ವಂತ ಸಹೋದರನ ಭವಿಷ್ಯಕ್ಕೆ ತೊಡರುಗಾಲು ಹಾಕಲೆಂದೇ ಬೆಂಗಳೂರಿನಿಂದ ಧಾವಿಸಿಬಂದು ತಿಳಿಯಾಗಿಸಬೇಕಿದ್ದ ವಾತಾವರಣವನ್ನು ಕಲುಷಿತಗೊಳಿಸಿ, ದಿಕ್ಕು ದೆಸೆ ಇಲ್ಲದಂತಾಗಿ ಹೋಗಿ ಗೂಡು ಸೇರಿಕೊಂಡಿದ್ದಾರೆ ಬೆಂಗಳೂರಿಗೆ, ಹಿಂತಿರುಗಿ ಬರುವುದು ಕನಸಿನ ಮಾತು. ಅವರ ಕ್ಷೇತ್ರ, ಸಿನಿಮಾ ಅದನ್ನು ನಿಭಾಯಿಸಿಕೊಂಡಿರುವುದು ಆರೋಗ್ಯಕರ ಎಂದು ಸಲಹೆ ನೀಡಿದ್ದಾರೆ.

ಈ ವಿಜಯೋತ್ಸವದ ಕೊಡುಗೆ ಜಿಲ್ಲೆಯ ಹಾಗೂ ಲೋಕ ಸಭಾ ಕ್ಷೇತ್ರದ ಮತದಾರರಿಂದ ಲಭಿಸಿದ್ದು ಅವರಿಗೆ ನಾವು ಚಿರಋಣಿಗಳಾಗಿರುತ್ತೇವೆ ಅವರ ಆಶಯಗಳನ್ನು ಸಾಕಾರಗೊಳಿಸುತ್ತೇವೆ ಅವರ ನಂಬಿಕೆಗೆ ಚ್ಯುತಿಬಾರದಂತೆ ನಡೆದುಕೊಳ್ಳುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರು, ಹಿರಿಯ ಕಿರಿಯ ಪದಾಧಿಕಾರಿಗಳು, ಸಂಘಟನೆಯಲ್ಲಿ ತೊಡಗಿಸಿಕೊಂಡ ಬ್ರಿಗೇಡ್/ಶಿಸ್ತಿನ ಸಿಪಾಯಿಗಳು ಹಗಲಿರುಲೆನ್ನದೆ ದುಡಿದು, B Y ರಾಘವೇಂದ್ರರಿಗೆ ಅತ್ಯಧಿಕ ಬಹುಮತದಿಂದ ವಿಜಯಶಾಲಿಯನ್ನಾಗಿಸಿದ್ದಾರೆ ಅವರೆಲ್ಲರಿಗೂ ನನ್ನ ನಮನಗಳು. ರಾಜ್ಯಮಟ್ಟದಲ್ಲಿ, ರಾಷ್ಟ್ರ ಮಟ್ಟದಲ್ಲಿ ಮಾರ್ಗದರ್ಶನ ನೀಡಿದ ನಾಯಕರೆಲ್ಲರಿಗೂ ಧನ್ಯವಾದಗಳು.

War is over but battle remains ZP, TP ಚುನಾವಣೆಗಳು, ಇದೇ ಓಟ ನಿರಂತರವಾಗಿ ನಡೆಯಬೇಕು, ಗೆಲುವನ್ನು ನಮ್ಮದಾಗಿಸಿಕೊಳ್ಳಬೇಕು ಪಣತೋಡೋಣ, ಗುರಿ ಮುಟ್ಟೋಣ. ಜೊತೆ ಜೊತೆಗೆ ಅಭಿವೃದ್ಧಿ ಕಾರ್ಯಗಳು ಶರವೇಗದಲ್ಲಿ ಚಾಲನೆಯಗಬೇಕು. ಪಶ್ಚಿಮ ಘಟ್ಟದ ಈ ತಪ್ಪಲು ಸರ್ವ ಜನಾಂಗದ ಶಾಂತಿಯ ತೋಟವಾಗಿ ಕಂಗೊಳಿಸಬೇಕು. ಇನ್ನು ನನ್ನ ತಮ್ಮ ಮಧು ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು, ಇಲ್ಲ CM ಅವನನ್ನು ಸಂಪುಟ ದಿಂದ ವಜಾ ಮಾಡಬೇಕು. ಕನ್ನಡಕ್ಕೆ, ಕನ್ನಡನಾಡಿಗೆ ಅವಮಾನಪಡಿಸಿದಾತ, ಟ್ರೊಲ್ ಮಾಡಿದವರಿಗೆ, ಮಾಧ್ಯಮದವರಿಗೆ ಶಾಪ ಹಾಕಿ ತಾನೇ ಶಾಪಗ್ರಸ್ತನಾದ. ಅವನ bAವ, ನನ್ನ ತಂಗಿಯ ಗಂಡ Dr. ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು.

ನನ್ನ ತಂಗಿ ಸಿನಿಮಾ ಡಾನ್ ಆಗಿರುವುದರಿಂದ ಬೇಸರಕ್ಕೆ ಕಾರಣವಿಲ್ಲ ದೊಡ್ಡಮನೆಯ ವ್ಯವಹಾರ ಸಾಕಷ್ಟಿರುತ್ತದೆ, ಬೇರೆಯವರಿಗೆ ಅವಕಾಶ ಸಿಗಲಾರದು. ಹೆದರಿಸುವ, ಬೆದರಿಸುವ, ಹುಷಾ‌ರ್ ಅನ್ನುವ ಮಾತುಗಳೇನಿದ್ದರೂ ಗಂಟಲೋಳಗೇ, ನಾಲ್ಕು ಗೋಡೆಗಳೊಳಗೆ, ತಮ್ಮ ಪಟಾಲಂ ಮುಂದೆ ಮಾತ್ರ ಚಾಲ್ತಿಯಲ್ಲಿರಬೇಕು ಎಂದು ತಾಕೀತು ಮಾಡಿದ್ದಾರೆ.

ಇದನ್ನೂ ಓದಿ | Udupi Chikmagalur Election Result 2024 : ಉಡುಪಿಯಲ್ಲಿ ಬಿಜೆಪಿಯ ಕೋಟಾ ಶ್ರೀನಿವಾಸ್​ ಪೂಜಾರಿಗೆ ವಿಜಯ

ದಿಕ್ಕು ಗೆಟ್ಟು ದಿಕ್ಕಾಪಾಲಾಗಿ ಹೋಗಿ ಬೆಂಗಳೂರು ಸೇರಿಕೊಂಡವರಿಗೆ ಕೊನೆಯ ಎಚ್ಚರಿಕೆ, ನೀವು ಹಿಂತಿರುಗಿ ಬರುವುದು ಕನಸಿನ ಮಾತು. ಜೈಹಿಂದ್, ಜೈ ಕರ್ನಾಟಕ! ಎಂದು ತಿಳಿಸಿದ್ದಾರೆ. ಇದೇ ವೇಳೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮತ್ತೊಮ್ಮೆ ಸಂಸದರಾಗಿ ವಿಜಯಶಾಲಿಯಾಗಿದ್ದಾರೆ ಎಂದು ಬಿ. ವೈ ರಾಘವೇಂದ್ರ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಮಳೆ ಅಲರ್ಟ್‌; ಬೆಂಗಳೂರಲ್ಲಿ ಹೇಗೆ?

Rain news : ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮುಂದಿನ 48 ಗಂಟೆಗಳಲ್ಲಿ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಿಂದ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ (Karnataka Weather Forecast) ಇದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯೊಂದಿಗೆ (Heavy Rain) ಗುಡುಗು ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿ.ಸೆ ಇರಲಿದೆ.

ಜೂನ್‌ 7ರವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು ಬುಧವಾರ ಕರಾವಳಿಯ ಉತ್ತರ ಕನ್ನಡದಲ್ಲಿ ಭಾರಿ ಮಳೆಗೆ ಗುಡುಗು ಸಾಥ್‌ ನೀಡಲಿದೆ. ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆಯಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿಯ ವೇಗವು 30-40 ಕಿಮೀ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ದ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: NEET UG Result 2024 : ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌

ಯಾದಗಿರಿಯಲ್ಲಿ ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆ ಹಾನಿ

ಯಾದಗಿರಿಯಲ್ಲಿ ನಿನ್ನೆ ಮಂಗಳವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆಗೆ ಹಾನಿಯಾಗಿದೆ. ಯಾದಗಿರಿಯ ಸುರಪುರ ತಾಲೂಕಿನ ತಳ್ಳಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮರಕ್ಕೆ ಸಿಡಿಲು ಬಡಿದು ಬೆಂಕಿಗಾಹುತಿಯಾಗಿದ್ದು, ಮರದ ಪಕ್ಕದಲ್ಲಿದ್ದ ಗುಡಿಸಲಿನಲ್ಲಿರುವ ಟಿವಿ ಸುಟ್ಟು ಹೋಗಿದೆ. ಗಿರಿನಗರದ ರಮೇಶ್ ಎಂಬುವವರ ಗುಡಿಸಲು ಹಾನಿಯಾಗಿದೆ. ಭಾರೀ ಮಳೆಗೆ ರೈಲ್ವೆ ನಿಲ್ದಾಣ ಸಮೀಪದ ಭವಾನಿ ಮಂದಿರದ ಮುಂಭಾಗದಲ್ಲಿ ಆಲದ ಮರ ಧರೆಗುರುಳಿದೆ.

ಬಿರುಗಾಳಿ ಸಹಿತ ಮಳೆಗೆ ಆಟೋ ಮೇಲೆ ಉರುಳಿ ಬಿದ್ದ ಮರ

ನಿನ್ನೆ ಮಂಗಳವಾರ ರಾತ್ರಿ ಗುಡುಗು, ಮಿಂಚು, ಬಿರುಗಾಳಿಯೊಂದಿಗೆ ಸುರಿದ ಮಳೆಗೆ ನಿಂತಿದ್ದ ಆಟೋ ಮೇಲೆ ಮರ ಉರುಳಿ ಬಿದ್ದ ಘಟನೆ ನಗರದ ತ್ರಿಪುರಾಂತನಲ್ಲಿ ಜರುಗಿದೆ. ತ್ರಿಪುರಾಂತನ ಮಡಿವಾಳ ವೃತ್ತದಲ್ಲಿಯ ಮುಖ್ಯ ರಸ್ತೆ ಬದಿಯಲ್ಲಿ ನಿಲ್ಲಿಸಿದ ಆಟೋ ಮೇಲೆ ಬೃಹತ್ ಗಾತ್ರದ ಬೇವಿನ ಮರ ಉರುಳಿ ಬಿದ್ದು, ಆಟೋ ಜಖಂಗೊಂಡಿದೆ.
ನಗರದ ಹರಳಯ್ಯ ವೃತ್ತದ ಸಮೀಪದ ಕರ್ನಾಟಕ ಬ್ಯಾಂಕ್ ಮುಂಭಾಗದಲ್ಲಿ ಮುಖ್ಯ ರಸ್ತೆ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಈ ಮಾರ್ಗದಲ್ಲಿ ಕೆಲ ಕಾಲ ರಸ್ತೆ ಸಂಚಾರ ಬದಲಾಯಿಸಲಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ನಗರಸಭೆ ಅಧಿಕಾರಿಗಳು ತಕ್ಷಣ ಮರ ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕಾರವಾರ, ಯಾದಗಿರಿಯಲ್ಲಿ ಅಬ್ಬರಿಸಿದ ವರುಣ; ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆ

Rain News : ಬೆಂಗಳೂರಲ್ಲಿ ವರುಣ ಬ್ರೇಕ್‌ ಕೊಟ್ಟಿದ್ದು, ಕರಾವಳಿಯಲ್ಲಿ ಅಬ್ಬರಿಸುತ್ತಿದ್ದಾನೆ. ಮುಂದಿನ 24 ಗಂಟೆಯಲ್ಲಿ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಮಂಗಳವಾರದಂದು ಕರಾವಳಿಯಲ್ಲಿ ಗುಡುಗು ಸಹಿತ ಭಾರಿ (Karnataka Weather Forecast) ಮಳೆಯಾಗಿತ್ತು. ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಭಾಗಗಳಲ್ಲಿ ಧಾರಾಕಾರ ಮಳೆಯಿಂದಾಗಿ (Rain News) ಜನಜೀವನ ಅಸ್ತವ್ಯಸ್ತವಾಗಿತ್ತು. ಭಾರಿ ಮಳೆಯಿಂದಾಗಿ (Heavy Rain Alert) ಹೆದ್ದಾರಿಯಲ್ಲಿ ನೀರು ನಿಂತಿತ್ತು. ಇದರಿಂದಾಗಿ ವಾಹನ ಸವಾರರು ಪರದಾಡಬೇಕಾಯಿತು.

ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಎಡಬಿಡದೆ ಮಳೆ ಸುರಿದಿದೆ. ಕಳೆದೊಂದು ವಾರದಿಂದ ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆ ಸುರಿದಿತ್ತು. ಇದೀಗ ಕರಾವಳಿ ತಾಲೂಕುಗಳಲ್ಲಿ ವರುಣಾರ್ಭಟ ಆರಂಭವಾಗಿದೆ. ಲೋಕಸಭೆ ಚುನಾವಣೆಯ ಮತ ಎಣಿಕೆಗೂ ಮಳೆ ಅಡ್ಡಿ ಆಯಿತು. ಮತ ಎಣಿಕೆ ಕೇಂದ್ರಕ್ಕೆ ಅಧಿಕಾರಿ, ಸಿಬ್ಬಂದಿ ಮಳೆಯಲ್ಲಿ ನೆನೆದುಕೊಂಡೆ ಬರುವಂತಾಯಿತು.

karnataka weather Forecast

ಯಾದಗಿರಿಯಲ್ಲಿ ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆ ಹಾನಿ

ಯಾದಗಿರಿಯಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆಗೆ ಹಾನಿಯಾಗಿದೆ. ಯಾದಗಿರಿಯ ಸುರಪುರ ತಾಲೂಕಿನ ತಳ್ಳಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮರಕ್ಕೆ ಸಿಡಿಲು ಬಡಿದು ಬೆಂಕಿಗಾಹುತಿಯಾಗಿದ್ದು, ಮರದ ಪಕ್ಕದಲ್ಲಿದ್ದ ಗುಡಿಸಲಿನಲ್ಲಿರುವ ಟಿವಿ ಸುಟ್ಟು ಹೋಗಿದೆ. ಗಿರಿನಗರದ ರಮೇಶ್ ಎಂಬುವವರ ಗುಡಿಸಲು ಹಾನಿಯಾಗಿದೆ. ಭಾರೀ ಮಳೆಗೆ ರೈಲ್ವೆ ನಿಲ್ದಾಣ ಸಮೀಪದ ಭವಾನಿ ಮಂದಿರದ ಮುಂಭಾಗದಲ್ಲಿ ಆಲದ ಮರ ಧರೆಗುರುಳಿದೆ.

ಬಿರುಗಾಳಿ ಸಹಿತ ಮಳೆಗೆ ಆಟೋ ಮೇಲೆ ಉರುಳಿ ಬಿದ್ದ ಮರ

ಬಸವಕಲ್ಯಾಣ: ಗುಡುಗು, ಮಿಂಚು, ಬಿರುಗಾಳಿಯೊಂದಿಗೆ ಸುರಿದ ಮಳೆಗೆ ನಿಂತಿದ್ದ ಆಟೋ ಮೇಲೆ ಮರ ಉರುಳಿ ಬಿದ್ದ ಘಟನೆ ನಗರದ ತ್ರಿಪುರಾಂತನಲ್ಲಿ ಜರುಗಿದೆ. ತ್ರಿಪುರಾಂತನ ಮಡಿವಾಳ ವೃತ್ತದಲ್ಲಿಯ ಮುಖ್ಯ ರಸ್ತೆ ಬದಿಯಲ್ಲಿ ನಿಲ್ಲಿಸಿದ ಆಟೋ ಮೇಲೆ ಬೃಹತ್ ಗಾತ್ರದ ಬೇವಿನ ಮರ ಉರುಳಿ ಬಿದ್ದು, ಆಟೋ ಜಖಂಗೊಂಡಿದೆ.
ನಗರದ ಹರಳಯ್ಯ ವೃತ್ತದ ಸಮೀಪದ ಕರ್ನಾಟಕ ಬ್ಯಾಂಕ್ ಮುಂಭಾಗದಲ್ಲಿ ಮುಖ್ಯ ರಸ್ತೆ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಈ ಮಾರ್ಗದಲ್ಲಿ ಕೆಲ ಕಾಲ ರಸ್ತೆ ಸಂಚಾರ ಬದಲಾಯಿಸಲಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ನಗರಸಭೆ ಅಧಿಕಾರಿಗಳು ತಕ್ಷಣ ಮರ ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇದನ್ನೂ ಓದಿ: Bellary VIMS Hospital : ಲೇಡಿ ಡಾಕ್ಟರ್‌ ಜುಟ್ಟು ಹಿಡಿದು ಎಳೆದಾಡಿ ಹೊಡೆದ; ವಿಮ್ಸ್‌ ಆಸ್ಪತ್ರೆಯಲ್ಲಿ ದಿಢೀರ್‌ ಪ್ರತಿಭಟನೆ

ಜೂನ್‌ 5ಕ್ಕೂ ಹಲವೆಡೆ ಮಳೆ ಅಬ್ಬರ

ಜೂ 5ರಂದು ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು ಸೇರಿ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಗಾಳಿಯ ವೇಗವು 30-40 ಕಿಮೀ ಇರಲಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುಲಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ದ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Shivamogga Election Result 2024: ಶಿವಮೊಗ್ಗದಲ್ಲಿ ಬಿಜೆಪಿಯ ಬಿ.ವೈ.ರಾಘವೇಂದ್ರಗೆ ವಿಜಯಮಾಲೆ

Shivamogga Election Result 2024: ಗೀತಾ ಶಿವರಾಜ್‌ ಕುಮಾರ್‌ ಜತೆಗೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆ.ಎಸ್.‌ ಈಶ್ವರಪ್ಪ ಅವರು ಸ್ಪರ್ಧಿಸಿರುವುದು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಚುನಾವಣೆ ಫಲಿತಾಂಶವು ಇನ್ನಿಲ್ಲದಷ್ಟು ಕುತೂಹಲ ಕೆರಳಿಸಿತ್ತು. ಇನ್ನು ಬಿ.ವೈ.ರಾಘವೇಂದ್ರ ಅವರಿಗೆ ತಂದೆ ಬಿ.ಎಸ್.ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಲ ಇದ್ದಿದ್ದು ಅವರ ವಿಶ್ವಾಸವನ್ನು ಹೆಚ್ಚಿಸಿತ್ತು. ಅದರಂತೆ, ಬಿ.ವೈ.ರಾಘವೇಂದ್ರ ಅವರು ಗೆಲುವು ಸಾಧಿಸಿದ್ದಾರೆ.

VISTARANEWS.COM


on

Shivamogga Election Result 2024
Koo

ಶಿವಮೊಗ್ಗ: ಕರ್ನಾಟಕದಲ್ಲಿಯೇ ಅತಿ ಹೆಚ್ಚು ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲಿ ಒಂದಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ (Shivamogga Election Result 2024) ಬಿಜೆಪಿಯ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ, ಮತ್ತೊಬ್ಬ ಮಾಜಿ ಸಿಎಂ ಎಸ್‌.ಬಂಗಾರಪ್ಪ ಅವರ ಪುತ್ರಿ, ನಟ ಶಿವರಾಜ್‌ ಕುಮಾರ್‌ ಅವರ ಪತ್ನಿ ಗೀತಾ ಶಿವರಾಜ್‌ ಕುಮಾರ್‌ (Geetha Shivarajkumar) ಅವರ ನಡುವಿನ ಪೈಪೋಟಿಯ ಮಧ್ಯೆ ರಾಘವೇಂದ್ರ ಗೆಲುವು ಸಾಧಿಸಿದ್ದಾರೆ. ಬಂಡಾಯದ ಬಾವುಟ ಬೀಸಿದ್ದ ಕೆ.ಎಸ್.ಈಶ್ವರಪ್ಪ (KS Eshwarappa) ಅವರಿಗೆ ಹಿನ್ನಡೆಯಾದಂತಾಗಿದೆ.

ಯಾರಿಗೆ ಎಷ್ಟು ಮತ?

ಬಿ.ವೈ.ರಾಘವೇಂದ್ರ (ಬಿಜೆಪಿ): 7,78,721

ಗೀತಾ ಶಿವರಾಜ್‌ಕುಮಾರ್‌ (ಕಾಂಗ್ರೆಸ್): 5,35,006

ಕೆ.ಎಸ್.ಈಶ್ವರಪ್ಪ (ಪಕ್ಷೇತರ): 30,050

ರಾಘವೇಂದ್ರ ಗೆಲುವಿನ ಅಂತರ: 2,43,715

ಕ್ಷೇತ್ರದಲ್ಲಿ ಬಿ.ವೈ.ರಾಘವೇಂದ್ರ ಅವರಿಗೆ ಹಲವು ರೀತಿಯ ಅನುಕೂಲಕರ ವಾತಾವರಣವಿತ್ತು. ಕ್ಷೇತ್ರವು ಬಿಜೆಪಿ ಭದ್ರಕೋಟೆಯಾಗಿದೆ. ಬಿ.ಎಸ್‌.ಯಡಿಯೂರಪ್ಪ ಅವರು ತವರು ಜಿಲ್ಲೆ ಶಿವಮೊಗ್ಗ. ರಾಘವೇಂದ್ರ ಅವರ ಸಹೋದರ ಬಿ.ವೈ.ವಿಜಯೇಂದ್ರ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ. ಅದರಲ್ಲೂ, ಸಂಸದರಾಗಿ ಬಿ.ವೈ.ರಾಘವೇಂದ್ರ ಅವರು ರೈಲು ಸಂಪರ್ಕ ಸೇರಿ ಹಲವು ರೀತಿಯ ಅಭಿವೃದ್ಧಿಗೆ ಕಾರಣರಾಗಿದ್ದರು. ನರೇಂದ್ರ ಮೋದಿ ಅವರ ಅಲೆಯೂ ಇಲ್ಲಿ ಕೆಲಸ ಮಾಡುವ ಸಾಧ್ಯತೆ ಇತ್ತು. ಹಾಗಾಗಿ, ರಾಘವೇಂದ್ರ ಅವರು ಗೆಲುವಿನ ವಿಶ್ವಾಸದಲ್ಲಿದ್ದರು. ಅದರಂತೆ ಅವರು ಮುನ್ನಡೆ ಸಾಧಿಸಿದ್ದಾರೆ.

ಎಸ್.‌ ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್‌ ಕುಮಾರ್‌ ಅವರು ಎರಡನೇ ಬಾರಿ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದು, ಈ ಬಾರಿ ರಣತಂತ್ರ ರೂಪಿಸಿದ್ದರು. ಶಿವರಾಜ್‌ ಕುಮಾರ್‌ ಅವರ ವರ್ಚಸ್ಸು, ಎಸ್‌. ಬಂಗಾರಪ್ಪ ಅವರ ಹೆಸರು, ಸಹೋದರ, ಸಚಿವ ಮಧು ಬಂಗಾರಪ್ಪ ನೆರವಿನ ಬಲದೊಂದಿಗೆ ಅವರು ಅಬ್ಬರದ ಪ್ರಚಾರ ಕೈಗೊಂಡಿದ್ದ ಕಾರಣ ಬಿ.ವೈ.ರಾಘವೇಂದ್ರ ಅವರಿಗೆ ಗೆಲುವು ಸುಲಭವಲ್ಲ ಎಂದು ಹೇಳಲಾಗುತ್ತಿತ್ತು. ಆದರೆ, ಗೀತಾ ಶಿವರಾಜ್‌ ಕುಮಾರ್‌ ಅವರಿಗೆ ಮತ್ತೆ ಹಿನ್ನಡೆಯಾದಂತಾಗಿದೆ.

ಕೆ.ಎಸ್.ಈಶ್ವರಪ್ಪ ಅವರು ಪುತ್ರ ಕಾಂತೇಶ್‌ಗೆ ಟಿಕೆಟ್‌ ನೀಡಲಿಲ್ಲ ಎಂದು ಬಿಜೆಪಿ ವಿರುದ್ಧ ಬಂಡಾಯವೆದ್ದು, ಪಕ್ಷೇತರರಾಗಿ ಚುನಾವಣೆ ಕಣಕ್ಕಿಳಿದಿದ್ದರು. ಕಟ್ಟಾ ಆರೆಸ್ಸೆಸ್ಸಿಗರಾಗಿರುವ ಕೆ.ಎಸ್.ಈಶ್ವರಪ್ಪ ಅವರು ಹಿಂದುತ್ವದ ನೆಲೆಗಟ್ಟಿನಲ್ಲಿ ಮತಯಾಚನೆ ಮಾಡಿದ್ದರು. ಹಾಗಾಗಿ, ಇವರು ಮತಗಳನ್ನು ಒಡೆದಿದ್ದರೂ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿತ್ತು. ಇಷ್ಟೆಲ್ಲ ಕಾರಣಗಳಿಂದಾಗಿ ಶಿವಮೊಗ್ಗ ಲೋಕಸಭೆ ಕ್ಷೇತ್ರವು ಎಲ್ಲರಿಗೂ ಪ್ರತಿಷ್ಠೆಯ ಕಣವಾಗಿತ್ತು.

2019, 2014ರ ಫಲಿತಾಂಶ ಏನಾಗಿತ್ತು?

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಬಿ.ವೈ.ರಾಘವೇಂದ್ರ ಅವರು 2.23 ಲಕ್ಷ ಮತಗಳ ಅಂತರದಲ್ಲಿ ಜೆಡಿಎಸ್‌ನ ಮಧು ಬಂಗಾರಪ್ಪ ಅವರ ವಿರುದ್ಧ ಗೆಲುವು ಸಾಧಿಸಿದ್ದರು. 2014ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿಯಿಂದ ಸ್ಪರ್ಧಿಸಿ ಸುಮಾರು 3 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಆಗ ಎಸ್.‌ ಬಂಗಾರಪ್ಪ ಅವರ ಪುತ್ರಿ, ನಟ ಶಿವರಾಜ್‌ ಕುಮಾರ್‌ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಅವರು ಕೂಡ ಸ್ಪರ್ಧಿಸಿ, ಮೂರನೇ ಸ್ಥಾನ ಪಡೆದಿದ್ದರು. ಈಗ ಮತ್ತೆ ಗೀತಾ ಶಿವರಾಜ್‌ ಕುಮಾರ್‌ ಅವರು ಕಣಕ್ಕಿಳಿದಿದ್ದರು.

ಇದನ್ನೂ ಓದಿ: Raichur Election Result 2024: ರಾಯಚೂರಿನಲ್ಲಿ ಕಾಂಗ್ರೆಸ್‌ನ ಕುಮಾರ್‌ ನಾಯಕ್‌ ಜಯಭೇರಿ; ಹಾಲಿ ಎಂಪಿಗೆ ಮುಖಭಂಗ

Continue Reading
Advertisement
Postal Ballets
ದೇಶ20 mins ago

Postal Ballots: ಕೈ ಹಿಡಿದ ಅಂಚೆ ಮತಗಳು..ಕೊನೆಯ ಕ್ಷಣದಲ್ಲಿ ಸೋತು ಗೆದ್ದ ಅಭ್ಯರ್ಥಿಗಳಿವರು

Megha Shetty Pose With R Madhavan
ಕಿರುತೆರೆ28 mins ago

Megha Shetty: ನಟ ಮಾಧವನ್​ ಭೇಟಿ ಮಾಡಿ ಖುಷಿ ಹಂಚಿಕೊಂಡ ಮೇಘಾ ಶೆಟ್ಟಿ!

valmiki corporation scam nagendra siddaramaiah
ಕರ್ನಾಟಕ48 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇಂದೇ ಸಚಿವ ನಾಗೇಂದ್ರ ರಾಜೀನಾಮೆ?

Sunil Chhetri
ಕ್ರೀಡೆ54 mins ago

Sunil Chhetri: ಭಾರತದ ಫುಟ್ಬಾಲ್ ಐಕಾನ್​​ ಸುನೀಲ್‌ ಚೆಟ್ರಿಗೆ ಇಂದು ವಿದಾಯ ಪಂದ್ಯ

Lok Sabha Election 2024
ದೇಶ56 mins ago

Election results 2024: 280 ಸಂಸದರು ಮೊದಲ ಬಾರಿಗೆ ಲೋಕಸಭೆಗೆ ಎಂಟ್ರಿ! ಲಿಸ್ಟ್‌ನಲ್ಲಿದ್ದಾರೆ ಮಾಜಿ ಸಿಎಂಗಳು, ಸಿನಿ ತಾರೆಯರು, ಹೈಕೋರ್ಟ್‌ ಜಡ್ಜ್‌

Dolly Dhananjay Will He Get Married says During Kotee Trailer Launch
ಸ್ಯಾಂಡಲ್ ವುಡ್57 mins ago

Dolly Dhananjay: ರೋಡಲ್ಲಿ ಹೋಗೋರೆಲ್ಲ ನನ್ನ ಮದ್ವೆ ಬಗ್ಗೆನೇ ಕೇಳ್ತಾರೆ ಎಂದ  ಡಾಲಿ ಧನಂಜಯ್!

Hinduism Beliefs
ಧಾರ್ಮಿಕ59 mins ago

Hinduism Beliefs: ಸತ್ತ ವ್ಯಕ್ತಿಯ ದೇಹವನ್ನು ಏಕಾಂಗಿಯಾಗಿ ಬಿಡಬಾರದು ಅನ್ನೋದು ಯಾಕೆ ಗೊತ್ತೇ?

Job Alert
ಉದ್ಯೋಗ59 mins ago

Job Alert: ರೈಲ್ವೆ ಇಲಾಖೆಯಲ್ಲಿನ 1,202 ಹುದ್ದೆಗಳಿಗೆ ಐಟಿಐ ಪಾಸಾದವರು ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

Norway Tour
ಪ್ರವಾಸ1 hour ago

Norway Tour: ಜಗತ್ತಿನ ಕೊನೆಯ ದೇಶ ಇದು! ಇಲ್ಲಿ 6 ತಿಂಗಳು ಹಗಲು, 6 ತಿಂಗಳು ರಾತ್ರಿ!

Rohit Sharma
ಕ್ರೀಡೆ1 hour ago

Rohit Sharma: ಹಲವು ದಾಖಲೆಗಳ ಸರದಾರನಾದ ಹಿಟ್​ಮ್ಯಾನ್​ ರೋಹಿತ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ7 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 weeks ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌