ರಸಗೊಬ್ಬರ, ಬಿತ್ತನೆ ಬೀಜ ಕೃತಕ ಅಭಾವ ಸೃಷ್ಟಿಸಿದರೆ ಮುಲಾಜಿಲ್ಲದೇ ಕ್ರಮ ಎಂದ ಬಿ.ಸಿ.ಪಾಟೀಲ್ - Vistara News

ಬೆಂಗಳೂರು

ರಸಗೊಬ್ಬರ, ಬಿತ್ತನೆ ಬೀಜ ಕೃತಕ ಅಭಾವ ಸೃಷ್ಟಿಸಿದರೆ ಮುಲಾಜಿಲ್ಲದೇ ಕ್ರಮ ಎಂದ ಬಿ.ಸಿ.ಪಾಟೀಲ್

ಸಕಾಲಕ್ಕೆ ರಸಗೊಬ್ಬರ ಬಿತ್ತನೆಬೀಜ ಕೊರತೆಯಾಗದಂತೆ ಹಂತಹಂತವಾಗಿ ನೋಡಿಕೊಳ್ಳಲಾಗುತ್ತಿದೆ. ಯಾವುದೇ ಕಾರಣಕ್ಕೂ ರೈತನಿಗೆ ತೊಂದರೆಯಾಗಲು ಬಿಡುವುದಿಲ್ಲ ಎಂದು ಬಿ.ಸಿ.ಪಾಟೀಲ್‌ ತಿಳಿಸಿದರು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೃತಕವಾಗಿ ಯಾರಾದರೂ ರಸಗೊಬ್ಬರ,ಬಿತ್ತನೆ ಬೀಜ ಅಭಾವ ಸೃಷ್ಟಿಸಿದರೆ ಅಂಥವರ ವಿರುದ್ಧ ಮುಲಾಜಿಲ್ಲದೇ ಕ್ರಮಕೈಗೊಳ್ಳಲಾಗುವುದೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಸಿದ್ದಾರೆ. ಕೆಲವರು ಬೇಕಂತಲೇ ಕೃತಕವಾಗಿ ರಸಗೊಬ್ಬರ, ಬಿತ್ತನೆ ಬೀಜಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಕೃತಕವಾಗಿ ಅಭಾವ ಸೃಷ್ಟಿಸುತ್ತಿರುವುದು ತಿಳಿದುಬಂದಿದೆ ಎಂದು ತಿಳಿಸಿದರು.

ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೃಷಿ ಸಚಿವ, ಸಕಾಲಕ್ಕೆ ರಸಗೊಬ್ಬರ ಬಿತ್ತನೆಬೀಜ ಕೊರತೆಯಾಗದಂತೆ ಹಂತಹಂತವಾಗಿ ನೋಡಿಕೊಳ್ಳಲಾಗುತ್ತಿದೆ. ಯಾವುದೇ ಕಾರಣಕ್ಕೂ ರೈತನಿಗೆ ತೊಂದರೆಯಾಗಲು ಬಿಡುವುದಿಲ್ಲ ಎಂದರು.

ರಾಜ್ಯ ಸರ್ಕಾರದ ರಿಯಾಯಿತಿ ಯೋಜನೆಯಡಿ ಭತ್ತ, ರಾಗಿ, ಜೋಳ, ಮೆಕ್ಕೆಜೋಳ, ಉದ್ದು, ಹೆಸರು, ಕಡಲೆ, ಅಲಸಂದೆ, ನೆಲಗಡಲೆ, ಸೋಯಾವರೆ, ಸೂರ್ಯಕಾಂತಿ, ಗೋದಿ, ಕುಸುಬೆ ಮತ್ತು ನವಣೆ ಬಿತ್ತನೆ ಬೀಜಗಳನ್ನು ರಾಜ್ಯದ ಎಲ್ಲಾ ವರ್ಗದ ರೈತರಿಗೆ ವಿತರಿಸಲಾಗುತ್ತಿದೆ. ಸಾಮಾನ್ಯ ರೈತರಿಗೆ 50% ವರೆಗೆ ಹಾಗೂ ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಪಂಗಡದವರಿಗೆ 75% ವರೆಗೆ ರೀಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಲಭ್ಯವಾಗುವಂತೆ ಮಾಡಲಾಗುತ್ತಿದೆ. ಈಗಾಗಲೇ ರೈತ ಸಂಪರ್ಕ ಕೇಂದ್ರಗಳಲ್ಲಿ 3505.8 ಕ್ವಿಂಟಾಲ್‌ಗಳಷ್ಟು ಬಿತ್ತನೆ ಬೀಜಗಳನ್ನು ವಿತರಣೆ ಮಾಡಲಾಗಿದ್ದು, 2185.8 ಕ್ವಿಂಟಾಲ್‌ಗಳಷ್ಟು ದಾಸ್ತಾನು ಇದೆ. ಬಿತ್ತನೆ ಬೀಜದ ಕೊರತೆಯಿರುವುದಿಲ್ಲ ಎಂದು ಭರವಸೆ ನೀಡಿದರು.

ಇದನ್ನೂ ಓದಿ | Explainer: ಶ್ರೀಲಂಕಾದಲ್ಲಿ ಮತ್ತೆ ಎಮರ್ಜೆನ್ಸಿ, ಹಸಿವು, ಪ್ರತಿಭಟನೆ, ಹಾಹಾಕಾರ

2021-22ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 12.67 ಲಕ್ಷ ರೈತರು ಬೆಳೆವಿಮೆಗಾಗಿ ನೊಂದಣಿ ಮಾಡಿಕೊಂಡಿದ್ದಾರೆ. ಈಗಾಗಲೇ ರಾಜ್ಯದ ವಿವಿಧೆಡೆ ಬಿತ್ತನೆ ವಿಫಲಗೊಂಡು ನಷ್ಟ ಅನುಭವಿಸಿದ ರೈತರಿಗೆ 2.10 ಲಕ್ಷ ರೈತರಿಗೆ ₹135,72 ಕೋಟಿ ಬೆಳೆವಿಮೆ ಪರಿಹಾರ ಮೊತ್ತ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಉಳಿದ ರೈತರ ಬೆಳೆ ವಿಮೆಯನ್ನು, ಇನ್ನು ಒಂದು ವಾರದೊಳಗೆ ಪರಿಹಾರ ಮೊತ್ತವನ್ನು ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು.

2022-23ನೇ ಸಾಲಿನ ಮುಂಗಾರು ಹಂಗಾಮಿನ ವಿವರ ಈ ಕೆಳಗಿನಂತಿದೆ.

ಇದೇ ವೇಳೆ ಸಚಿವ ಬಿ.ಸಿ.ಪಟೀಲ್ ‌ʼಪಕ್ಷದ ವರಿಷ್ಠರು ಅವರ ಕರ್ತವ್ಯ ಮಾಡುತ್ತಾರೆ. ಅಂತೆಯೇ ಪಕ್ಷದ ಆಜ್ಞೆಯನ್ನು ನಾವು ಪಾಲಿಸುತ್ತಾ ನಮ್ಮ ಕರ್ತವ್ಯ ನಿಭಾಯಿಸುತ್ತೇವೆ. ಪಕ್ಷದ ಸಂಘಟನೆ ಬೂತ್ ಮಟ್ಟದಲ್ಲಿ ಸಂಘಟನೆ ಚೆನ್ನಾಗಿದೆ. ನಮ್ಮ ಪ್ರಧಾನಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳ ಸಾಧನೆ, ಕಾರ್ಯವೈಖರಿ ನೋಡಿ ಬಹಳಷ್ಟು ಜನ ಬಿಜೆಪಿಯತ್ತ ವಾಲುತ್ತಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಹೇಳಲು ಸಾಧನೆಗಳು ಸಾಕಷ್ಟು ಇವೆʼ ಎಂದು ಹೇಳಿದರು.

ಕಾಂಗ್ರೆಸ್‌ ಪಕ್ಷದ ವಿರುದ್ಧ ಗುಡುಗಿದ ಬಿ.ಸಿ.ಪಾಟೀಲ್ ʼನಮ್ಮ ಪಕ್ಷದ ಸಾಧನೆಯ ಪ್ರಗತಿ ಹೇಳಲು ಸಾಕಷ್ಟು ಇದೆ. ಕಾಂಗ್ರೆಸ್‌ನವರಿಗೆ ಆರೋಪ ಮಾಡುವುದನ್ನು ಬಿಟ್ಟರೆ ಬೇರೇನೂ ಇಲ್ಲ. ಪ್ರಚಾರಕ್ಕಾಗಿ ಕಾಂಗ್ರೆಸ್‌ನವರು ಕೇವಲ ಆರೋಪ ಮಾಡುತ್ತಾರೆ. ಕೆಲವರಿಗೆ ಪ್ರಚಾರವೇ ಕಾಯಿಲೆ ಆಗಿದೆ. ಆರೋಪ ಮಾಡಿದ ಮಾತ್ರಕ್ಕೆ ಎಲ್ಲವೂ ಸತ್ಯವಾಗುವುದಿಲ್ಲ. ಬಿಜೆಪಿಯಲ್ಲಿ ಶಿಷ್ಟಾಚಾರ ವ್ಯವಸ್ಥೆಯಿದೆ. ಬಿಜೆಪಿ ಬಿಟ್ಟರೆ ಬೇರ್ಯಾವ ಪಕ್ಷದಲ್ಲೂ ಇಂತಹ ಶಿಸ್ತಿನ ವ್ಯವಸ್ಥೆ ಇಲ್ಲʼ ಎಂದು ಸಮರ್ಪಕವಾಗಿ ಉತ್ತರಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಪ್ರಧಾನಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ಶಿವಪ್ರಸಾದ್ ಉಪಸ್ಥಿತರಿದ್ದರು.

https://vistaranews.com/2022/05/05/b-c-patil-statement/
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Murder case : ಕೊಟ್ಟ ಹಣ ಕೇಳಿದ್ದಕ್ಕೆ ಗೆಳೆಯನನ್ನೇ ಕೊಂದಿದ್ದ ದ್ರೋಹಿ ಅರೆಸ್ಟ್‌

Murder case : ಹಣ ಸಹಾಯ ಮಾಡಿದ ಗೆಳೆಯನನ್ನೇ ಚಾಕುವಿನಿಂದ ಇರಿದು ಕೊಂದಿದ್ದ. ಕೊಲೆ ಮಾಡಿ ಶವವನ್ನು ನಿರ್ಜನ ಪ್ರದೇಶದಲ್ಲಿ ಬಿಸಾಡಿ, ಏನು ತಿಳಿಯದಂತೆ ಸುಮ್ಮನಾಗಿದ್ದ. ಆದರೆ ತನಿಖೆಗಿಳಿದ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ.

VISTARANEWS.COM


on

By

Murder Case in Bengaluru
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೆಂಗಳೂರಿನ ಶ್ರೀರಾಂಪುರದ ರೈಲ್ವೆ ಬ್ರಿಡ್ಜ್ ಬಳಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಮೃತದೇಹ (Murder case) ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೃತನ ಗುರುತು ಪತ್ತೆ ಹಚ್ಚಿ, ಆರೋಪಿಯನ್ನು ಬಂಧಿಸಿದ್ದಾರೆ. ಎಲ್.ಎನ್ ಪುರದ ದಿಲೀಪ್ (34) ಮೃತಪಟ್ಟವನು.

ದಿಲೀಪ್‌ ಬೈಕ್ ಮೆಕ್ಯಾನಿಕ್‌ ಆಗಿದ್ದ. ಇದೇ ತಿಂಗಳ 1ರಂದು ರೈಲ್ವೆ ಸೇತುವೆಯಲ್ಲಿ ಕೊಲೆ ಮಾಡಿದ ಸ್ಥಿತಿಯಲ್ಲಿ ದಿಲೀಪ್‌ನ ಕೊಳತೆ ಶವ ಪತ್ತೆಯಾಗಿತ್ತು. ಶ್ರೀರಾಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದರು. ಈ ಸಂಬಂಧ ಶ್ರೀರಾಂಪುರ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ತನಿಖೆಗಿಳಿದಿದ್ದ ಪೊಲೀಸರಿಗೆ ಅಸಲಿ ಕಹಾನಿ ಬಯಲಾಗಿದೆ.

ಇದನ್ನೂ ಓದಿ: Murder case : ತೃತೀಯ ಲಿಂಗಿಯನ್ನು ಕೊಂದ ಮಹಿಳೆ; ಮಗನಿಗೆ ನಾಯಿ ಚೈನ್‌ ಹಾಕಿ ಎಳೆಯುವಾಗ ಸಾವು

ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಗೆಳೆಯನಿಂದಲೇ ದಿಲೀಪ್‌ ಕೊಲೆ ಆಗಿದ್ದ. ಗೆಳೆಯ ವಿಠಲ ಅಲಿಯಾಸ್‌ ಪಾಂಡು ಎಂಬಾತ ದಿಲೀಪ್‌ನನ್ನು ಬರ್ಬರವಾಗಿ ಕೊಂದಿದ್ದ. ವಿಠಲ ಮತ್ತು ದಿಲೀಪ್ ಒಂದೇ ಏರಿಯಾದ ನಿವಾಸಿಗಳಾಗಿದ್ದರು. ನಾಲ್ಕು ತಿಂಗಳ ಹಿಂದೆ ದಿಲೀಪ್‌ನಿಂದ 20 ಸಾವಿರ ಹಣವನ್ನು ವಿಠಲ ಪಡೆದಿದ್ದ.

ಬಳಿಕ ಸಾಲದ ಹಣಕ್ಕೆ ಬಡ್ಡಿ ಸೇರಿ 30 ಸಾವಿರ ರೂ. ಆಗಿತ್ತು. ತಿಂಗಳು ಕಳೆದರೂ ವಿಠಲ ಹಣವನ್ನು ಕೊಟ್ಟಿರಲಿಲ್ಲ. ಇತ್ತ ದಿಲೀಪ್‌ ಹಣ ವಾಪಸ್ ಕೊಡುವಂತೆ ಪದೇಪದೆ ವಿಠಲನನ್ನು ಕೇಳುತ್ತಿದ್ದ. ಜತೆಗೆ ಅವಾಚ್ಯ ಶಬ್ಧಗಳಿಂದ ಕುಟುಂಬದವರನ್ನು ನಿಂದಿಸುತ್ತಿದ್ದ. ಇದೇ ವಿಚಾರವಾಗಿ ವಿಠಲ ದಿಲೀಪ್‌ ಮೇಲೆ ಕೋಪಗೊಂಡಿದ್ದ.

ದಿಲೀಪ್‌ ಮೇಲೆ ಸೇಡು ತೀರಿಸಿಕೊಳ್ಳಬೇಕೆಂದು ವಿಠಲ ಹಣ ಕೊಡುವುದಾಗಿ ಹೇಳಿ ಏಪ್ರಿಲ್ 28ರಂದು ಕರೆಸಿಕೊಂಡಿದ್ದ. ನಿರ್ಜನ ಪ್ರದೇಶವಾದ ಓಕಳಿಪುರಂನ ರೈಲ್ವೆ ಸೇತುವೆ ಸಮೀಪ ಭೇಟಿ ಮಾಡಿದ್ದ. ವಿಠಲ ಕೊಲೆ ಮಾಡುವ ಕಾರಣಕ್ಕೆ ಈ ಮೊದಲೇ ತಂದಿದ್ದ ಚಾಕುವಿನಿಂದ ದಿಲೀಪ್‌ಗೆ ಇರಿದು ಕೊಲೆ ಮಾಡಿ ಪರಾರಿ ಆಗಿದ್ದ.

ಕೊಲೆಯಾದ ಸ್ಥಳದಲ್ಲಿ ಯಾರು ಓಡಾಡದ ಕಾರಣಕ್ಕೆ ಮೂರು ದಿನಗಳ ಕಾಲ ದಿಲೀಪ್ ಮೃತ ದೇಹ ಅಲ್ಲೆ ಕುಳಿಯುತ್ತಿತ್ತು. ನಂತರ ಮೇ 1ರಂದು ಸ್ಥಳೀಯರ ಮಾಹಿತಿ ಮೇರೆಗೆ ಮೃತದೇಹ ಪತ್ತೆಯಾಗಿತ್ತು. ಅದನ್ನು ಕಂಡ ಮೃತ ವಿಠಲನ ತಮ್ಮನ ಗೆಳೆಯ ಮಾಹಿತಿ ನೀಡಿದ್ದ. ಈತನ ಮಾಹಿತಿ ಆಧರಿಸಿ ಮೃತನ ಸಹೋದರ ಠಾಣೆಗೆ ದೂರು ನೀಡಿದ್ದ. ತನಿಖೆ ವೇಳೆ ಕೊಲೆ ರಹಸ್ಯ ಬಯಲಾಗಿತ್ತು. ಸದ್ಯ ಶ್ರೀರಾಮಪುರಂ ಪೊಲೀಸರಿಂದ ಆರೋಪಿ ವಿಠಲನನ್ನು ಬಂಧಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna Case: ಪ್ರಜ್ವಲ್ ರೇವಣ್ಣ ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ!

Prajwal Revanna Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು ಮೂರು ಅತ್ಯಾಚಾರ ಕೇಸ್‌ಗಳು ದಾಖಲಾಗಿದ್ದು, ಅವರು ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾರೆ. ಇದೀಗ ಅವರನ್ನು ಹುಡುಕಿ ಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಜನತಾ ಪಕ್ಷ ಘೋಷಿಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಪಕ್ಷ, ಈ ಘೋಷಣೆಯ ನೋಟಿಸ್‌ ಅನ್ನು ಬೆಂಗಳೂರಿನಲ್ಲಿ ವಿವಿಧೆಡೆ ಅಂಟಿಸಲು ಮುಂದಾಗಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna case) ವಿರುದ್ಧ ಒಟ್ಟು ಮೂರು ಅತ್ಯಾಚಾರ ಕೇಸ್‌ಗಳು ದಾಖಲಾಗಿವೆ. ಆದರೆ ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಅವರನ್ನು ಹುಡುಕಿ ಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಜನತಾ ಪಕ್ಷ (Janata Party) ಘೋಷಿಸಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಪಕ್ಷ, ಈ ಘೋಷಣೆಯ ನೋಟಿಸ್‌ ಅನ್ನು ಬೆಂಗಳೂರಿನಲ್ಲಿ ವಿವಿಧಡೆ ಅಂಟಿಸಲು ಮುಂದಾಗಿದೆ. ರೆಡ್ಡಿ ಪೆಟ್ರೋಲ್‌ ಬಂಕ್‌ನಿಂದ ಶಿವಾನಂದ ಸರ್ಕಲ್‌, ಚಾಲುಕ್ಯ ಸರ್ಕಲ್‌, ಎಂ.ಎಸ್‌.ಬಿಲ್ಡಿಂಗ್‌, ಕೆ.ಆರ್‌.ಸರ್ಕಲ್‌, ಫ್ರೀಡಂ ಪಾರ್ಕ್‌, ಮೌರ್ಯ ಸರ್ಕಲ್‌, ಆನಂದದರಾವ್‌ ಸರ್ಕಲ್‌ವರೆಗೆ ನೋಟಿಸ್‌ ಅಂಟಿಸಲಿದೆ.

ಪ್ರಕಟಣೆಯಲ್ಲಿ ಏನಿದೆ?

ಮಹಿಳೆಯರ ಮೇಲಿನ ಲೈಂಗಿಕ-ಮಾನಸಿಕ ದೌರ್ಜನ್ಯ ಹಾಗೂ ಪೆನ್‌ಡ್ರೈವ್‌ ಹಗರಣಕ್ಕೆ ಸಂಬಂಧಿಸಿದಂತೆ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ. ಈ ಹಗರಣ ದೇಶಾದ್ಯಂತ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕುಖ್ಯಾತಿ ಪಡೆದಿದೆ. ಇದರಿಂದಾಗಿ ಹಾಸನ ಜಿಲ್ಲೆಯ, ಕರ್ನಾಟಕ ರಾಜ್ಯದ ಸಮಸ್ತ ಕನ್ನಡಿಗರ ಘನತೆಗೆ ಧಕ್ಕೆ ಉಂಟಾಗಿದೆ. ಪ್ರಭಾವಿ ಕುಟುಂಬದ ಹಾಗೂ ಜನಪ್ರತಿನಿಧಿಯೇ ಈ ರೀತಿ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿರುವುದು ನಿಜಕ್ಕೂ ನಾಚಿಗೆಗೇಡಿನ ವಿಷಯ. ಪ್ರಕರಣದ ಸತ್ಯಾಸತ್ಯತೆ ಏನೇ ಇದ್ದರೂ, ಆರೋಪಿಯಾದವರು ತನಿಖೆಯನ್ನು ಎದುರಿಸಿದ ತಾನು ನಿರಪರಾಧಿ ಎನ್ನುವುದನ್ನು ನಿರೂಪಿಸಬೇಕು. ಜವಾಬ್ದಾರಿಯುತ ಸಂಸದ ಹುದ್ದೆಯಲ್ಲಿರುವ ವ್ಯಕ್ತಿಯೇ ತಲೆಮರೆಸಿಕೊಂಡಿರುವುದು ತಪ್ಪು ಸಂದೇಶ ರವಾನಿಸಿದಂತಾಗುತ್ತದೆ.

ಕನ್ನಡಿಗರ, ಕರ್ನಾಟಕದ ಘನತೆಯನ್ನು ಮುಖ್ಯವಾಗಿ ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯುವ ಸಲುವಾಗಿ ರಾಷ್ಟ್ರದ ಪ್ರಜ್ಞಾವಂತ ರಾಜಕೀಯ ಪಕ್ಷವಾದ ನಮ್ಮ ಜನತಾ ಪಕ್ಷದ ವತಿಯಿಂದ ಈ ಪ್ರಕರಣದ ಮುಖ್ಯ ಆರೋಪಿ ಪ್ರಜ್ವಲ್‌ ರೇವಣ್ಣ ಅವರನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಸಹಿತ ಸನ್ಮಾನವನ್ನು ಘೋಷಿಸುತ್ತಿದ್ದೇವೆ ಎಂದು ನೋಟಿಸ್‌ನಲ್ಲಿ ಬರೆಯಲಾಗಿದೆ.

36 ಸೆಕೆಂಡ್‌‌ಗಳ ಮತ್ತೊಂದು ಆಡಿಯೊ ಬಾಂಬ್

ದೇಶಾದ್ಯಂತ ಸಂಚಲನ ಸೃಷ್ಟಿಸಿರುವ ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ (Prajwal Revanna Case) ಅಶ್ಲೀಲ ವಿಡಿಯೊ ಹರಿಬಿಟ್ಟವರ ಬಗ್ಗೆ ಮಾಹಿತಿ ಬಹಿರಂಗ ಮಾಡುತ್ತೇನೆ ಎಂದಿದ್ದ ವಕೀಲ ದೇವರಾಜೇಗೌಡ, ಇದೀಗ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಸ್ಫೋಟಕ ಆಡಿಯೊ ರಿಲೀಸ್‌ ಮಾಡಿದ್ದಾರೆ. ಇದರಿಂದ ಪ್ರಜ್ವಲ್‌ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ.

ಇತ್ತೀಚೆಗೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ವಕೀಲ ದೇವರಾಜೇಗೌಡ, ಹಾಸನ ಪೆನ್‌ಡ್ರೈವ್‌ ಪ್ರಕರಣದ ಹಿಂದಿನ ಕಥಾನಾಯಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಎಂದು ಗಂಭೀರ ಆರೋಪ ಮಾಡಿದ್ದರು. ನಂತರ ಇದಕ್ಕೆ ಸಂಬಂಧಪಟ್ಟಂತೆ ಮತ್ತಷ್ಟು ಸಾಕ್ಷ್ಯ ನೀಡುವುದಾಗಿ ಹೇಳಿದ್ದರು. ಇದೀಗ ಪ್ರಕರಣದ ಬಗ್ಗೆ ಮಂಡ್ಯ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಜತೆ ಮಾತುಕತೆಯ ಆಡಿಯೊವನ್ನು ಹರಿಬಿಟ್ಟಿದ್ದಾರೆ. ಒಟ್ಟು ಮೂರು ಆಡಿಯೊಗಳನ್ನು ದೇವರಾಜೇಗೌಡ ರಿಲೀಸ್‌ ಮಾಡಿದ್ದು, ಇದರಲ್ಲಿ ಹನಿಟ್ರ್ಯಾಪ್‌ ಮಾಡಿದ್ದರು ಎನ್ನಲಾಗಿದ್ದ ಮಹಿಳೆಯ ಗಂಡ ಮೋಹನ್‌ ಜತೆಗಿನ ಮಾತುಕತೆಯ ವಿಡಿಯೊ ಒಂದು ಇದ್ದು, ಉಳಿದೆರಡು ಆಡಿಯೊಗಳು ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಜತೆ ಮಾತನಾಡಿರುವುದಾಗಿದೆ.

ಆಡಿಯೊದಲ್ಲಿ ಏನಿದೆ?

ಆಡಿಯೊದಲ್ಲಿ ಮೊದಲಿಗೆ ನನ್ನನ್ನು ಭೇಟಿ ಆಗಿದ್ದೆ ಎಂದು ದೇವರಾಜೇಗೌಡ ಹೇಳಿರುವುದು ಯಾಕೆ ಎಂದು ಡಿಕೆಶಿ ತಮ್ಮ ಬಳಿ ಕೇಳಿರುವುದಾಗಿ ಮಾಜಿ ಸಂಸದ ಶಿವರಾಮೇಗೌಡ ಹೇಳುತ್ತಾರೆ. ಈ ವೇಳೆ ವಕೀಲ ದೇವರಾಜೇಗೌಡ, ನಮಗೆ ಏನಾದರೂ ಎಸ್‌ಐಟಿಯವರು ನೋಟಿಸ್‌ ಕೊಡತ್ತಾರಾ ಎಂದು ಪ್ರಶ್ನಿಸಿದ್ದಾರೆ. ಆಗ ಕೊಡ್ತಾರೆ, ಕೊಡ್ತಾರೆ ಎಂದ ಶಿವರಾಮೇಗೌಡ, ಎಸ್‌ಐಟಿ ಅಧಿಕಾರಿಗಳ ಮುಂದೆ ಡಿಕೆ ಬಗ್ಗೆ ನೀನು ಚಕಾರ ಎತ್ತಬೇಡ. ನಾನು ಇವತ್ತಿನಿಂದ ಅಲ್ಲ, ಬಹಳ ವರ್ಷಗಳಿಂದ ರೇವಣ್ಣ ಕುಟುಂಬದ ವಿರುದ್ಧ ಕೋರ್ಟ್‌ನಲ್ಲಿ ಹೋರಾಟ ಮಾಡುತ್ತಿದ್ದೇನೆ ಎಂದು ಹೇಳು ಎಂದು ಶಿವರಾಮೇಗೌಡ ಕಿವಿಮಾತು ಹೇಳಿದ್ದಾರೆ.

ಮತ್ತೊಂದು ಆಡಿಯೊದಲ್ಲಿ ತಮಗೆ ಹನಿಟ್ರ್ಯಾಪ್‌ ಮಾಡಿದ್ದರು ಎನ್ನಲಾದ ಮಹಿಳೆಯ ಗಂಡ ಮೋಹನ್‌ ಎಂಬುವವರ ಜತೆ ದೇವರಾಜೇಗೌಡ ಮಾತನಾಡಿದ್ದಾರೆ. ನಿಮ್ಮ ಹೆಂಡತಿ, ಅವರ ಜತೆ ಸೇರಿಕೊಂಡು ನನ್ನನ್ನು ಹನಿಟ್ರ್ಯಾಪ್‌ ಮಾಡಿದ್ದಾಳೆ, ಅವಳ ಜತೆ ಡಿವೋರ್ಸ್‌ ಆಗಿಲ್ಲವಾ ಎಂದು ಪ್ರಶ್ನಿಸಿದ್ದಾರೆ. ನಮ್ಮನ್ನು ಮನೆಯಿಂದ ಆಚೆ ಹಾಕಿ, ಹಾಸನದಲ್ಲಿ ನಮ್ಮ ಆಸ್ತಿಯನ್ನು ಅವಳ ಹೆಸರಿಗೆ ಮಾಡಿಕೊಂಡಿದ್ದಾಳೆ. ನಾನು ಹೇಗೋ ಜೀವನ ಮಾಡಿಕೊಂಡಿದ್ದೇನೆ ಎಂದು ಮೋಹನ್‌ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna case: ಪ್ರಜ್ವಲ್‌ ಮೇಲೆ ಒಟ್ಟು ಮೂರು FIR; ಮೂರರಲ್ಲೂ ವಾಂಟೆಡ್‌ ಲಿಸ್ಟ್‌ನಲ್ಲಿ ಸಂಸದ!

Continue Reading

ಕರ್ನಾಟಕ

Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

Gold Rate Today:ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,725ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,800 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹67,250 ಮತ್ತು ₹6,72,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹6,755 ಆಗಿದ್ದರೆ, ಎಂಟು ಗ್ರಾಂ ಬೆಲೆ ₹54,040 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹67,550 ಮತ್ತು ₹6,75,500 ವೆಚ್ಚವಾಗಲಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹30 ಹಾಗೂ ₹33 ಇಳಿಕೆಯಾಗಿವೆ. ಅಕ್ಷಯ ತೃತೀಯದ ಹಿನ್ನೆಲೆಯಲ್ಲಿ ಚಿನ್ನದ ಮಾರುಕಟ್ಟೆಯಲ್ಲಿ ಬೇಡಿಕೆ ಹಾಗೂ ವ್ಯಾಪಾರ ಏರಿಕೆ ಆಗಿದ್ದು, ಹೀಗಾಗಿ ನಿನ್ನೆ ಚಿನ್ನದ ಬೆಲೆ ಭಾರೀ ಏರಿಕೆ ಕಂಡಿತ್ತು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,725ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,800 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹67,250 ಮತ್ತು ₹6,72,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹6,755 ಆಗಿದ್ದರೆ, ಎಂಟು ಗ್ರಾಂ ಬೆಲೆ ₹54,040 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹67,550 ಮತ್ತು ₹6,75,500 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹87.10, ಎಂಟು ಗ್ರಾಂ ₹696.80 ಮತ್ತು 10 ಗ್ರಾಂ ₹871ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,710 ಮತ್ತು 1 ಕಿಲೋಗ್ರಾಂಗೆ ₹87,100 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ. ನಿನ್ನೆಗೆ ಹೋಲಿಸಿದರೆ ಈ ದರ ಕೊಂಚ ಏರಿಕೆ ಕಂಡಿದೆ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,40073,510
ಮುಂಬಯಿ67,25073,360
ಬೆಂಗಳೂರು67,25073,360
ಚೆನ್ನೈ67,50072,640

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ:Narendra Modi: “ದಿವ್ಯಾಂಗ ಸಹೋದರಿಯರಿಗೆ ವ್ಯವಸ್ಥೆ ಮಾಡಿ.. ಅಲ್ಲಿವರೆಗೆ ಭಾಷಣ ಮುಂದುವರೆಸಲ್ಲ”; ಪ್ರಧಾನಿ ಮೋದಿ ವಿಡಿಯೋ ವೈರಲ್

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

Continue Reading

ಕರ್ನಾಟಕ

Heavy Rain: ಧಾರಾಕಾರ ಮಳೆಯಿಂದ ಮನೆಗೆ ನುಗ್ಗಿದ ನೀರು; ಮರ ಉರುಳಿ ವಾಹನಗಳು ಜಖಂ

Heavy Rain: ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವೆಡೆ ಅವಾಂತರವನ್ನೇ ಸೃಷ್ಟಿಸಿದೆ. ಶುಕ್ರವಾರ ಸುರಿದ ಭಾರೀ ಮಳೆಯಿಂದ ಹಾನಿಯಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. ಇನ್ನು ಕೆಲೆವೆಡೆ ರಸ್ತೆಗಳಲ್ಲೇ ನೀರು ಹರಿದು ಮುಂದಕ್ಕೆ ಚಲಿಸಲಾಗದೆ ವಾಹನ ಸವಾರರು ಪರದಾಡಿದರು. ವಿವಿಧೆಡೆಗಳಲ್ಲಿ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ. ವಾಹನಗಳೂ ಜಖಂಗೊಂಡಿವೆ. ಜತೆಗೆ ಮೈಸೂರಿನ ಕೆಲವಡೆಡಯೂ ಹಾನಿ ಉಂಟಾಗಿದೆ.

VISTARANEWS.COM


on

Heavy Rain
Koo

ಬೆಂಗಳೂರು: ಕೆಲವು ದಿನಗಳಿಂದ ಮಾಯವಾಗಿದ್ದ ಮಳೆ ಮತ್ತೆ ಬೆಂಗಳೂರಿಗೆ ಬಂದಿದೆ. ರಾಜಧಾನಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವೆಡೆ ಅವಾಂತರವನ್ನೇ ಸೃಷ್ಟಿಸಿದೆ (Heavy Rain). ಶುಕ್ರವಾರ ಸುರಿದ ಭಾರೀ ಮಳೆಯಿಂದ ಹಾನಿಯಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. ಇನ್ನು ಕೆಲೆವೆಡೆ ರಸ್ತೆಗಳಲ್ಲೇ ನೀರು ಹರಿದು ಮುಂದಕ್ಕೆ ಚಲಿಸಲಾಗದೆ ವಾಹನ ಸವಾರರು ಪರದಾಡಿದರು. ವಿವಿಧೆಡೆಗಳಲ್ಲಿ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ. ವಾಹನಗಳೂ ಜಖಂಗೊಂಡಿವೆ.

ಮನೆಯೊಳಗೆ ನುಗ್ಗಿದ ನೀರು

ಅರ್‌.ಅರ್. ನಗರ ವಿಧಾನಸಭಾ ಕ್ಷೇತ್ರದ ಲಕ್ಷ್ಮೀ ದೇವಿನಗರದಲ್ಲಿ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದೆ. ಇಲ್ಲಿನ ನಿವಾಸಿಗಳು ರಾತ್ರಿ ಇಡೀ ನಿದ್ದೆಗೆಟ್ಟು ಮನೆಯಿಂದ ನೀರು ಹೊರ ಹಾಕುವ ದೃಶ್ಯ ಕಂಡು ಬಂತು. ಇನ್ನು ಕೆಂಗೇರಿ ಟಿಟಿಎಂಸಿ ಕಾಂಪೌಂಡ್ ಕುಸಿದು ಬಿದ್ದಿದೆ. ಭಾರಿ ಮಳೆಯಿಂದಾಗಿ ಕಾಂಪೌಂಡ್ ವಾಲ್ ಕುಸಿದಿದ್ದು, ವಾಹನ ನಿಲುಗಡೆಯ ಪಾರ್ಕಿಂಗ್ ಸ್ಥಳ ಸಂಪೂರ್ಣ ಜಲಾವೃತವಾಗಿತ್ತು.

ಕಾರು, ಟಿಟಿ ವಾಹನ ಜಖಂ

ದೀಪಾಂಜಲಿ ನಗರದ ವ್ಯಾಪ್ತಿಯಲ್ಲಿಯಂತೂ ವರುಣ ಸಾಕಷ್ಟು ಅವಾಂತರ ಸೃಷ್ಟಿಸಿದ್ದಾನೆ. ಶುಕ್ರವಾರದ ಗಾಳಿ ಮಳೆಯ ರೌದ್ರಾವತಾರಕ್ಕೆ ನಗರದ ಜನ ಬೆಚ್ಚಿ ಬಿದ್ದಿದ್ದಾರೆ. ಒಂದಲ್ಲ ಎರಡಲ್ಲ ಬರೋಬ್ಬರಿ ಮೂರು ವಿದ್ಯುತ್ ಕಂಬ ಧರೆಗುರುಳಿವೆ. ಜತೆಗೆ ಹೆಮ್ಮರವೊಂದು ಉರುಳಿ ಬಿದ್ದ ಕಾರಣ ಮನೆ ಮುಂದೆ ನಿಲ್ಲಿಸಿದ್ದ 2 ಕಾರು, ಒಂದು ಟಿಟಿ ಜಖಂಗೊಂಡಿದೆ. ರಾತ್ರಿ ಸುಮಾರು 11.30ಕ್ಕೆ ಈ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಮಳೆ ಅವಾಂತರ ನೋಡಿದ ಜನರು ಕಂಗಾಲಾಗಿದ್ದಾರೆ. ನಾಗರಭಾವಿಯ ಗೋವಿಂದ ರಾಜ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾರಿನ ಮೇಲೆ ಮರದ ಬೃಹತ್ ಕೊಂಬೆ ಬಿದ್ದು ಹಾನಿಯಾಗಿದೆ.

ಪೆಟ್ರೋಲ್‌ ಬಂಕ್‌ ಜಲಾವೃತ

ಇತ್ತ ಆರ್‌.ಆರ್‌.ನಗರದಲ್ಲಿಯೂ ಮಳೆಯ ಅಬ್ಬರ ಕಂಡು ಬಂತು. ವರುಣಾರ್ಭಟಕ್ಕೆ ಇಲ್ಲಿನ ಸರ್ಕಲ್ ಬಳಿಯ ಪೆಟ್ರೋಲ್ ಬಂಕ್ ಜಲಾವೃತಗೊಂಡಿತ್ತು. ಪೆಟ್ರೋಲ್ ಟ್ಯಾಂಕ್ ಒಳಗಡೆಯೇ ನೀರು ನುಗ್ಗಿ ತೊಂದರೆ ಎದುರಾಗಿದೆ. ರಾತ್ರಿ ಸಂಪೂರ್ಣ ಜಲಾವೃತವಾಗಿದ್ದ ಪೆಟ್ರೋಲ್ ಬಂಕ್‌ ಅನ್ನು ಸದ್ಯ ಸಿಬ್ಬಂದಿ ಶುಚಿಗೊಳಿಸುತ್ತಿದ್ದಾರೆ. ಪೆಟ್ರೋಲ್ ಸಿಗದೆ ಬಂಕ್ ಬಳಿ ಬಂದು ವಾಹನ ಸವಾರರು ವಾಪಾಸ್ ಹೋಗುತ್ತಿದ್ದಾರೆ.

ಮೈಸೂರಿನಲ್ಲಿಯೂ ಹಾನಿ

ಮೈಸೂರಿನಲ್ಲಿಯೂ ಬಿರುಗಾಳಿ ಸಹಿತ ಸುರಿದ ಮಳೆ ವಿವಿಧೆಡೆ ಹಾನಿ ಉಂಟು ಮಾಡಿದೆ. ನಂಜನಗೂಡು ತಾಲೂಕಿನ ಬಸವನಪುರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಯಿಂದ ಬೃಹತ್ ಗಾತ್ರದ ಅರಳಿ ಮರ ಉರುಳಿ ನಾಲ್ಕು ಮನೆಗಳಿಗೆ ಹಾನಿಯಾಗಿವೆ. ಗ್ರಾಮದ ಸಿದ್ದರಾಜು, ಮೂಗಯ್ಯ, ಮಲ್ಲೇಶ್, ಚೆನ್ನೇಗೌಡ ಎಂಬುವವರಿಗೆ ಸೇರಿದ ಮನೆಗಳಿಗೆ ಹಾನಿಯಾಗಿದ್ದು, ಕುಟುಂಬಸ್ಥರು, ಜಾನುವಾರುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಮರ ಬಿದ್ದ ಪರಿಣಾಮ ಹಲವು ವಿದ್ಯುತ್ ಕಂಬಗಳು ನೆಲ ಕಚ್ಚಿವೆ. ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಸ್ಥಳಕ್ಕೆ ಸೆಸ್ಕ್ ಅಧಿಕಾರಿಗಳು ಭೇಟಿ ನೀಡಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹಾನಿಯಾಗಿರುವ ಮನೆಗಳಿಗೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇನ್ನೂ ಕೆಲವು ದಿನ ರಾಜ್ಯದ ವಿವಿಧೆಡೆ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Weather : ಬಿರುಗಾಳಿ ಸಹಿತ ಭಾರಿ ಮಳೆ; ಸಿಡಿಲು ಬಡಿದು ಮಹಿಳೆ ಸೇರಿ ಶ್ವಾನ ಸಾವು‌, ಮತ್ತೊಬ್ಬ ಗಂಭೀರ

Continue Reading
Advertisement
Murder Case in kodagu
ಕೊಡಗು22 mins ago

Murder Case : ಕೊಡಗು ಹತ್ಯೆ ಕೇಸ್‌; ಬಾಲಕಿ ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ! ಬೆಚ್ಚಿ ಬಿದ್ದ ಪೊಲೀಸರು

Arvind Kejriwal
ದೇಶ24 mins ago

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಆರತಿ ಬೆಳಗಿ, ಹೂ ಹಾರ ಹಾಕಿ ಸ್ವಾಗತಿಸಿದ ತಾಯಿ; ಹೃದಯಸ್ಪರ್ಶಿ ವಿಡಿಯೊ ಇಲ್ಲಿದೆ

Siddaramaiah
ಕರ್ನಾಟಕ33 mins ago

Siddaramaiah: ಮೋದಿ ಸುಳ್ಳಿನ ಸರದಾರ, ಭಾವನಾತ್ಮಕ ಆಟ ನಡೆಯಲ್ಲ; ಸಿದ್ದರಾಮಯ್ಯ ತಿರುಗೇಟು

accident case
ಕ್ರೈಂ1 hour ago

Accident Case : ಬ್ಯಾನರ್‌ ಕಟ್ಟುವಾಗ ಕರೆಂಟ್‌ ಶಾಕ್‌ಗೆ ವ್ಯಕ್ತಿ ಸಾವು; ಡಿವೈಡರ್‌ಗೆ ಗುದ್ದಿ ಪಲ್ಟಿಯಾದ ಕಾರು

Chinese app
ವಿದೇಶ1 hour ago

Chinese Apps: ಟಿಕ್‌ಟಾಕ್‌ ಮಾತ್ರ ಅಲ್ಲ.. ಚೀನಾದ ಈ ಆಪ್‌ಗಳೂ ಅಷ್ಟೇ ಡೇಂಜರಸ್‌; ಶಾಕಿಂಗ್‌ ವರದಿ ಔಟ್‌

Jyoti Rai
ಕಿರುತೆರೆ1 hour ago

Jyoti Rai: ನೋವಿನ ನಡುವೆಯೂ ಸಹಾಯ ಹಸ್ತ ಚಾಚಿದ ನಟಿ ಜ್ಯೋತಿ ರೈ; ವಿಡಿಯೊ ವೈರಲ್‌ ಮಾಡುವಂತೆ ಸವಾಲು ಹಾಕಿದ್ದೇಕೆ?

BS Yediyurappa
ಕರ್ನಾಟಕ2 hours ago

BS Yediyurappa: ಪ್ರಜ್ವಲ್‌ ಕೇಸ್‌ನಿಂದ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಧಕ್ಕೆ? ಯಡಿಯೂರಪ್ಪ ಹೇಳಿದ್ದಿಷ್ಟು

Assault case in kalaburagi
ಕಲಬುರಗಿ2 hours ago

Assault Case : ಹಣಕ್ಕಾಗಿ ಕಿಡ್ನ್ಯಾಪ್‌; ಮೂವರನ್ನು ಬೆತ್ತಲೆ ಮಾಡಿ ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಟಾರ್ಚರ್‌!

Election Commission
ದೇಶ2 hours ago

Election Commission: ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಅಡ್ಡಿಪಡಿಸುವ ಪ್ರಯತ್ನ; ಖರ್ಗೆ ಪತ್ರಕ್ಕೆ EC ತಿರುಗೇಟು

Prajwal Revanna Case
ಕರ್ನಾಟಕ2 hours ago

Prajwal Revanna Case: ದೇವರಾಜೇಗೌಡ ಹುಚ್ಚುನಾಯಿ, ನಕಲಿ ವಕೀಲ ಎಂದ ಶಿವರಾಮೇಗೌಡ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ10 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ1 day ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌