PAYTM ಸಿಬ್ಬಂದಿಗೆ ಷೇರು ಖರೀದಿ ಆಯ್ಕೆ - Vistara News

ವಾಣಿಜ್ಯ

PAYTM ಸಿಬ್ಬಂದಿಗೆ ಷೇರು ಖರೀದಿ ಆಯ್ಕೆ

ಪೇಟಿಎಂ ತನ್ನ ಸಿಬ್ಬಂದಿಗೆ ಷೇರು ಖರೀದಿ ಆಯ್ಕೆಯನ್ನು ನೀಡಿದ್ದು, ಈ ಬಗ್ಗೆ ಮಾರುಕಟ್ಟೆ ನಿಯಂತ್ರಕ್ಕಕೆ ತಿಳಿಸಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಹೊಸದಿಲ್ಲಿ: ಪೇಟಿಎಂನ ಸಿಬ್ಬಂದಿಗೆ 220 ಕೋಟಿ ರೂ. ಮೌಲ್ಯದ ಷೇರುಗಳ ಖರೀದಿ ಆಯ್ಕೆಯನ್ನು (ಇಎಸ್‌ಒಪಿ) ಕಂಪನಿಯ ಮಾತೃ ಸಂಸ್ಥೆ ಒದಗಿಸಿದೆ.
ನಿಯಂತ್ರಕಕ್ಕೆ ಪೇಟಿಎಂನ ಮಾತೃ ಸಂಸ್ಥೆ ಒನ್‌ 97 ಕಮ್ಯುನಿಕೇಶನ್ಸ್ ಈ ಸಂಬಂಧ ಸಲ್ಲಿಸಿರುವ ವಿವರದಲ್ಲಿ, ಷೇರುಗಳ ಆಯ್ಕೆಯನ್ನು ಅರ್ಹ ಉದ್ಯೋಗಿಗಳಿಗೆ ನೀಡಲಾಗಿದೆ ಎಂದು ತಿಳಿಸಿದೆ.‌ ಇದರ ಮೌಲ್ಯ 220 ಕೋಟಿ ರೂ.ಗಳಾಗಿದೆ.

ಏನಿದು ಇಎಸ್‌ಒಪಿ?
ಉದ್ಯೋಗಿಗಳ ಷೇರು ಖರೀದಿ ಆಯ್ಕೆ (Employee stock ownership plan) ಎಂದರೆ ಉದ್ಯೋಗಿಗಳಿಗೆ ಕಂಪನಿಯ ಷೇರುಗಳನ್ನು ಹೊಂದುವ ಆಯ್ಕೆಯನ್ನು ನೀಡುವುದು. ಉದ್ಯೋಗಿಗಳಿಗೆ ವೇತನದ ಹೊರತಾಗಿ ಕಂಪನಿಗಳು ತಮ್ಮ ಷೇರುಗಳನ್ನೂ ನೀಡುವ ಅವಕಾಶ ಇಎಸ್‌ಒಪಿಯಲ್ಲಿ ಇರುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Tata Motors: ಬಜಾಜ್ ಫೈನಾನ್ಸ್ ಜತೆ ಪಾಲುದಾರಿಕೆ ಮಾಡಿಕೊಂಡ ಟಾಟಾ ಮೋಟಾರ್ಸ್

Tata Motors: ಟಾಟಾ ಮೋಟಾರ್ಸ್, ದೇಶದ ಅತಿದೊಡ್ಡ ಹಣಕಾಸು ಸೇವಾ ಗುಂಪುಗಳಲ್ಲಿ ಒಂದಾದ ಬಜಾಜ್ ಫಿನ್‌ಸರ್ವ್ ಲಿಮಿಟೆಡ್‌ನ ಭಾಗವಾಗಿರುವ ಬಜಾಜ್ ಫೈನಾನ್ಸ್ ಲಿಮಿಟೆಡ್‌ನೊಂದಿಗೆ ತಿಳಿವಳಿಕೆ ಒಪ್ಪಂದಕ್ಕೆ (ಎಂಓಯು) ಸಹಿ ಹಾಕಿದೆ. ಈ ಮೂಲಕ ಬಜಾಜ್ ಫೈನಾನ್ಸ್ ಸಂಸ್ಥೆ ಟಾಟಾ ಮೋಟಾರ್ಸ್‌ನ ಸಂಪೂರ್ಣ ವಾಣಿಜ್ಯ ವಾಹನ ಉತ್ಪನ್ನಗಳಿಗೆ ಹಣಕಾಸು ವ್ಯವಸ್ಥೆ ಒದಗಿಸುತ್ತದೆ.

VISTARANEWS.COM


on

Tata Motors has partnered with Bajaj Finance
Koo

ಬೆಂಗಳೂರು: ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕರಾದ ಟಾಟಾ ಮೋಟಾರ್ಸ್, ದೇಶದ ಅತಿದೊಡ್ಡ ಹಣಕಾಸು ಸೇವಾ ಗುಂಪುಗಳಲ್ಲಿ ಒಂದಾದ ಬಜಾಜ್ ಫಿನ್‌ಸರ್ವ್ ಲಿಮಿಟೆಡ್‌ನ ಭಾಗವಾಗಿರುವ ಬಜಾಜ್ ಫೈನಾನ್ಸ್ ಲಿಮಿಟೆಡ್‌ನೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (ಎಂಓಯು) ಸಹಿ ಹಾಕಿದೆ. ಈ ಮೂಲಕ ಬಜಾಜ್ ಫೈನಾನ್ಸ್ ಸಂಸ್ಥೆ ಟಾಟಾ ಮೋಟಾರ್ಸ್‌ನ (Tata Motors) ಸಂಪೂರ್ಣ ವಾಣಿಜ್ಯ ವಾಹನ ಉತ್ಪನ್ನಗಳಿಗೆ ಹಣಕಾಸು ವ್ಯವಸ್ಥೆ ಒದಗಿಸುತ್ತದೆ ಮತ್ತು ಗ್ರಾಹಕರು ಕಂಪನಿಯ ವಿಸ್ತಾರವಾದ ವ್ಯಾಪ್ತಿ, ಸ್ಪರ್ಧಾತ್ಮಕ ಬಡ್ಡಿ ದರಗಳು, ಫ್ಲೆಕ್ಸಿ ಲೋನ್ ಮತ್ತು ಡಿಜಿಟಲ್ ಆಧರಿತ ಸಾಲ ಪ್ರಕ್ರಿಯೆಗಳ ಪ್ರಯೋಜನಗಳನ್ನು ಪಡೆಯುತ್ತಾರೆ.

ಈ ಕುರಿತು ಟಾಟಾ ಮೋಟಾರ್ಸ್ ಕಮರ್ಷಿಯಲ್ ವೆಹಿಕಲ್ಸ್ ಟ್ರಕ್ಸ್ ವೈಸ್ ಪ್ರೆಸಿಡೆಂಟ್ ಮತ್ತು ಬಿಸಿನೆಸ್ ಹೆಡ್ ರಾಜೇಶ್ ಕೌಲ್ ಮಾತನಾಡಿ, ಗ್ರಾಹಕರ ಸಂತೋಷಕ್ಕಾಗಿ ಉನ್ನತ ದರ್ಜೆಯ ಉತ್ಪನ್ನಗಳನ್ನು ಒದಗಿಸುವ ನಮ್ಮ ದೃಷ್ಟಿಯನ್ನು ಹೊಂದಿರುವ ಕಂಪನಿಯಾದ ಬಜಾಜ್ ಫೈನಾನ್ಸ್ ಜತೆ ಪಾಲುದಾರಿಕೆ ಹೊಂದಲು ನಾವು ಸಂತೋಷ ಪಡುತ್ತೇವೆ. ವಾಣಿಜ್ಯ ವಾಹನಗಳ ಫೈನಾನ್ಸಿಂಗ್‌ ಕ್ಷೇತ್ರದ ಅವರ ಈ ಆರಂಭಿಕ ಹೆಜ್ಜೆಯು ಸಾರಿಗೆ ವಲಯದ ಅಗಾಧ ಸಾಮ್ರಾಜ್ಯವನ್ನು ಅವರದನ್ನಾಗಿ ಮಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ ಎಂದು ನಾವಂದು ಕೊಂಡಿದ್ದೇವೆ.

ಇದನ್ನೂ ಓದಿ: Bengaluru News: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಜೂ.30ಕ್ಕೆ

ಜತೆಗೆ ಈ ಪಾಲುದಾರಿಕೆಯು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಜಾಜ್ ಫೈನಾನ್ಸ್‌ನ ದೊಡ್ಡ ನೆಟ್‌ವರ್ಕ್‌ನ ಪ್ರಯೋಜನವನ್ನು ನೀಡುತ್ತದೆ. ಗ್ರಾಹಕರು ಅವಶ್ಯಕತೆಗಳಿಗೆ ಅನುಗುಣವಾಗಿ ಹಣಕಾಸು ಪರಿಹಾರಗಳನ್ನು ಸುಲಭವಾಗಿ ಪಡೆಯಬಹುದಾಗಿದೆ. ನಮ್ಮ ಮೌಲ್ಯಯುತ ಗ್ರಾಹಕರಿಗೆ ಹೆಚ್ಚಿನ ಅನುಕೂಲವನ್ನು ಒದಗಿಸಲು ನಾವು ಎದುರು ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಬಜಾಜ್ ಫೈನಾನ್ಸ್‌ನ ಉಪ ವ್ಯವಸ್ಥಾಪಕ ನಿರ್ದೇಶಕ ಅನುಪ್ ಸಹಾ ಮಾತನಾಡಿ, ಬಜಾಜ್ ಫೈನಾನ್ಸ್‌ನಲ್ಲಿನ ನಮ್ಮ ವ್ಯವಹಾರದ ನೀತಿಯಲ್ಲಿ ಗ್ರಾಹಕರ ಕೇಂದ್ರಿತತೆ ಬೇರೂರಿದೆ. ನಾವು ಗ್ರಾಹಕರಿಗೆ ಅನುಕೂಲಕರ ಹಣಕಾಸು ಪರಿಹಾರಗಳನ್ನು ಒದಗಿಸುತ್ತೇವೆ. ಆ ಮೂಲಕ ಅವರು ಮಾಲೀಕತ್ವದ ಸಂತೋಷಕರ ಅನುಭವವನ್ನು ಹೊಂದುತ್ತಾರೆ. ಟಾಟಾ ಮೋಟಾರ್ಸ್ ಜತೆಗಿನ ನಮ್ಮ ಪಾಲುದಾರಿಕೆಯು ಈ ಬದ್ಧತೆಗೆ ಪುರಾವೆಯಾಗಿದೆ. ಇಂಡಿಯಾ ಸ್ಟಾಕ್ ಅನ್ನು ಬಳಸಿಕೊಂಡು ನಮ್ಮ ಅತ್ಯುತ್ತಮ- ದರ್ಜೆಯ ವ್ಯವಸ್ಥೆಯ ಮೂಲಕ ಗ್ರಾಹಕರಿಗೆ ವಾಣಿಜ್ಯ ವಾಹನವನ್ನು ಖರೀದಿಸುವ ಪ್ರಕ್ರಿಯೆಯನ್ನು ಸುಲಭ ಮತ್ತು ತೊಂದರೆ- ಮುಕ್ತಗೊಳಿಸುವ ಗುರಿಯನ್ನು ಹೊಂದಿದ್ದೇವೆ. ಪಾಲುದಾರಿಕೆಯು ಹೆಚ್ಚಿನ ವಾಣಿಜ್ಯ ವಾಹನ ಮಾಲೀಕರಿಗೆ ಹಣಕಾಸು ಪರಿಹಾರಗಳನ್ನು ಒದಗಿಸಿ ಸಶಕ್ತಗೊಳಿಸುತ್ತದೆ ಎಂದು ನಮಗೆ ವಿಶ್ವಾಸವಿದೆ ಎಂದು ಹೇಳಿದರು.

ಟಾಟಾ ಮೋಟಾರ್ಸ್ 1-ಟನ್‌ನಿಂದ 55-ಟನ್ ತೂಕದ ಸರಕು ವಾಹನಗಳು ಮತ್ತು 10-ಆಸನಗಳಿಂದ 51-ಆಸನಗಳ ಸಮೂಹ ಚಲನಶೀಲತೆ ಪರಿಹಾರಗಳು ಅಂದರೆ ಪ್ರಯಾಣಿಕರನ್ನು ಕರೆದೊಯ್ಯುವ ವಾಹನಗಳನ್ನು ಒದಗಿಸುತ್ತದೆ. ಸಣ್ಣ ವಾಣಿಜ್ಯ ವಾಹನಗಳು ಮತ್ತು ಪಿಕಪ್‌ಗಳು, ಟ್ರಕ್‌ಗಳು ಮತ್ತು ಬಸ್‌ಗಳನ್ನು ಒದಗಿಸುವ ಮೂಲಕ ಸರಕು ಸಾಗಣೆ ಮತ್ತು ಪ್ರಯಾಣಿಕರ ಪ್ರಯಾಣ ವಿಭಾಗದ ಅಗತ್ಯತೆಗಳನ್ನು ಪೂರೈಸುತ್ತದೆ. ಕಂಪನಿಯು ತನ್ನ 2500+ ಟಚ್‌ಪಾಯಿಂಟ್‌ಗಳ ವ್ಯಾಪಕ ನೆಟ್‌ವರ್ಕ್ ಮೂಲಕ ಅತ್ಯುತ್ತಮ ಗುಣಮಟ್ಟ ಮತ್ತು ಸರ್ವೀಸ್ ಅನ್ನು ಒದಗಿಸುತ್ತದೆ. ಈ ಟಚ್ ಪಾಯಿಂಟ್‌ಗಳು ತರಬೇತಿ ಪಡೆದ ಪರಿಣಿತರಿಂದ ನಿರ್ವಹಿಸಲ್ಪಡುತ್ತದೆ ಮತ್ತು ಅಲ್ಲಿ ಟಾಟಾದ ಅಸಲಿ ಭಾಗಗಳು ಲಭ್ಯವಾಗುತ್ತವೆ.

ಇದನ್ನೂ ಓದಿ: Kannada New Movie: ಅದ್ಧೂರಿಯಾಗಿ ನಡೆದ ’ದ ಪ್ರಸೆಂಟ್’ ಚಿತ್ರದ ಮುಹೂರ್ತ

ಬಜಾಜ್ ಫೈನಾನ್ಸ್ ಭಾರತದಲ್ಲಿನ ಅತ್ಯಂತ ವೈವಿಧ್ಯಮಯ ಎನ್‌ಬಿಎಫ್‌ಸಿಗಳಲ್ಲಿ ಒಂದಾಗಿದೆ. ಇದು ಸಾಲ, ಠೇವಣಿ (ಡಿಪಾಸಿಟ್) ಮತ್ತು ಪಾವತಿ ವಿಭಾಗಗಳಲ್ಲಿ 83.64 ಮಿಲಿಯನ್ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿದೆ. ಮಾರ್ಚ್ 31, 2024ರ ಪ್ರಕಾರ ಕಂಪನಿಯ ಅಸೆಟ್ ಅಂಡರ್ ಮ್ಯಾನೇಜ್ಮೆಂಟ್ (ಎಯುಎಂ) ₹3,30,615 ಕೋಟಿಗಳಷ್ಟಿದೆ.

Continue Reading

ಪ್ರಮುಖ ಸುದ್ದಿ

Share Market : ಷೇರು ಮಾರುಕಟ್ಟೆಯಲ್ಲಿ ನೂತನ ದಾಖಲೆ; ಮೊದಲ ಬಾರಿಗೆ 78,000 ಮಟ್ಟವನ್ನು ದಾಟಿದ ಸೆನ್ಸೆಕ್ಸ್

share market : 30 ಕಂಪನಿಗಳ ಷೇರುಗಳ ಬಿಎಸ್ಇ ಸೆನ್ಸೆಕ್ಸ್ 712.44 ಪಾಯಿಂಟ್ಸ್ ಅಥವಾ ಶೇಕಡಾ 0.92 ರಷ್ಟು ಏರಿಕೆ ಕಂಡು, 78,053.52ರಲ್ಲಿತ್ತು . ದಿನದ ವಹಿವಾಟಿನ ಬೆಂಚ್ ಮಾರ್ಕ್ 823.63 ಪಾಯಿಂಟ್ ಅಥವಾ ಶೇಕಡಾ 1 ರಷ್ಟು ಏರಿಕೆಯಾಗಿ 78,164.71 ಅಂಕಗಳಿಗೆ ತಲುಪಿದೆ.

VISTARANEWS.COM


on

share market
Koo

ಬೆಂಗಳೂರು ; ಏಷ್ಯಾದ ಷೇರು ಮಾರುಕಟ್ಟೆಗಳಲ್ಲಿನ (Share Market ) ಸದೃಢ ಪ್ರವೃತ್ತಿಯ ನಡುವೆ ಬ್ಲೂ-ಚಿಪ್ ಬ್ಯಾಂಕ್ ಷೇರುಗಳು ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳಿಗೆ ಮಂಗಳವಾರ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಚ್ ಮಾರ್ಕ್ ಸೆನ್ಸೆಕ್ಸ್ ಮೊದಲ ಬಾರಿಗೆ ಐತಿಹಾಸಿಕ 78,000 ಮಟ್ಟವನ್ನು ದಾಟಿದರೆ, ನಿಫ್ಟಿ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿತ್ತು.

30 ಕಂಪನಿಗಳ ಷೇರುಗಳ ಬಿಎಸ್ಇ ಸೆನ್ಸೆಕ್ಸ್ 712.44 ಪಾಯಿಂಟ್ಸ್ ಅಥವಾ ಶೇಕಡಾ 0.92 ರಷ್ಟು ಏರಿಕೆ ಕಂಡು, 78,053.52ರಲ್ಲಿತ್ತು . ದಿನದ ವಹಿವಾಟಿನ ಬೆಂಚ್ ಮಾರ್ಕ್ 823.63 ಪಾಯಿಂಟ್ ಅಥವಾ ಶೇಕಡಾ 1 ರಷ್ಟು ಏರಿಕೆಯಾಗಿ 78,164.71 ಅಂಕಗಳಿಗೆ ತಲುಪಿದೆ. ನಿಫ್ಟಿ 183.45 ಪಾಯಿಂಟ್ ಅಥವಾ ಶೇಕಡಾ 0.78 ರಷ್ಟು ಏರಿಕೆ ಕಂಡು 23,721.30 ಕ್ಕೆ ತಲುಪಿದೆ. ದಿನದ ವಹಿವಾಟಿನಲ್ಲಿ ಇದು 216.3 ಪಾಯಿಂಟ್ ಅಥವಾ ಶೇಕಡಾ 0.91 ರಷ್ಟು ಏರಿಕೆಯಾಗಿ ಹೊಸ ಸಾರ್ವಕಾಲಿಕ ಗರಿಷ್ಠ 23,754.15 ಅಂಕಗಳಿಗೆ ತಲುಪಿದೆ.

ಇದನ್ನೂ ಓದಿ: Karnataka Weather: ನಾಳೆ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ವಿವಿಧೆಡೆ ಭಾರಿ ಮಳೆ; ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ!

ಸೆನ್ಸೆಕ್ಸ್ ನ 30 ಕಂಪನಿಗಳಲ್ಲಿ ಆಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಎಚ್ ಡಿಎಫ್ ಸಿ ಬ್ಯಾಂಕ್, ಟೆಕ್ ಮಹೀಂದ್ರಾ, ಲಾರ್ಸನ್ ಆ್ಯಂಡ್​ ಟರ್ಬೋ, ಬಜಾಜ್ ಫಿನ್ ಸರ್ವ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಇನ್ಫೋಸಿಸ್ ಅತಿ ಹೆಚ್ಚು ಲಾಭ ಗಳಿಸಿದ ಷೇರುಗಳಾಗಿವೆ. ಪವರ್ ಗ್ರಿಡ್, ಏಷ್ಯನ್ ಪೇಂಟ್ಸ್, ಟಾಟಾ ಸ್ಟೀಲ್, ನೆಸ್ಲೆ, ಮಾರುತಿ ಮತ್ತು ಜೆಎಸ್​​ಡಬ್ಲ್ಯೂ ಸ್ಟೀಲ್ ನಷ್ಟ ಅನುಭವಿಸಿದವು.

ಏಷ್ಯಾದ ಮಾರುಕಟ್ಟೆಗಳಾದ ಸಿಯೋಲ್, ಟೋಕಿಯೊ ಮತ್ತು ಹಾಂಗ್ ಕಾಂಗ್ ನಲ್ಲಿಯೂ ಏರಿಕೆ ಕಂಡು ಬಂದಿದ್ದರೆ ಶಾಂಘೈ ಮಾರಕಟ್ಟೆಯಲ್ಲಿ ಕಡಿಮೆ ವಹಿವಾಟು ನಡೆಯಿತು. ಇವೆಲ್ಲದರ ನಡುವೆ ಯುರೋಪಿಯನ್ ಮಾರುಕಟ್ಟೆಗಳು ನಕಾರಾತ್ಮಕ ವಹಿವಾಟು ನಡೆಸಿವೆ. ಇನ್ನು ಯುಎಸ್ ಮಾರುಕಟ್ಟೆಗಳು ಮಿಶ್ರ ಫಲ ಉಂಡವು.

ಮಾರ್ಚ್ ತ್ರೈಮಾಸಿಕದಲ್ಲಿ ಭಾರತವು 5.7 ಬಿಲಿಯನ್ ಡಾಲರ್ ಅಥವಾ ಜಿಡಿಪಿಯ ಶೇಕಡಾ 0.6 ರಷ್ಟು ಆಮದು ಮತ್ತು ರಪ್ತು ವಹಿವಾಟಿನಲ್ಲಿ (ಚಾಲ್ತಿ ಖಾತೆ) ಮಿಗತೆಯಾಗಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸೋಮವಾರ ತಿಳಿಸಿದೆ. ಹತ್ತು ತ್ರೈಮಾಸಿಕಗಳಲ್ಲಿ ಇದೇ ಮೊದಲ ಬಾರಿಗೆ ಈ ಸರ್​​ಪ್ಲಸ್​ ಮೋಡ್​ಗೆ ಬದಲಾಗಿದೆ ಎಂದು ಆರ್​ಬಿಐ ಹೇಳಿದೆ.

“ಮಾರುಕಟ್ಟೆ ದೃಷ್ಟಿಕೋನದಿಂದ ಸಕಾರಾತ್ಮಕ ಸುದ್ದಿಯೆಂದರೆ ಚಾಲ್ತಿ ಖಾತೆಯು 2024 ರ ನಾಲ್ಕನೇ ತ್ರೈಮಾಸಿಕದಲ್ಲಿ ಸರ್​​ಪ್ಲಸ್​ ಆಗಿದೆ. ಇದು ರೂಪಾಯಿ ಮೇಲಿನ ಒತ್ತಡ ಕಡಿಮೆ ಮಾಡಲಿದೆ. ಮತ್ತು ಫೆಡ್ ದರ ಕಡಿತದ ಬಗ್ಗೆ ಸ್ಪಷ್ಟತೆ ಇದ್ದಾಗ ಎಫ್ಐಐ (ವಿದೇಶಿ ಸಾಂಸ್ಥಿಕ ಹೂಡಿಕೆದಾರರು ) ಆಸಕ್ತಿಗೆ ದಾರಿ ಮಾಡಿಕೊಡುತ್ತದೆ “ಎಂದು ಮುಖ್ಯ ಹೂಡಿಕೆ ತಂತ್ರಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಬೆಂಚ್​ಮಾರ್ಕ್ ದರವು 0.44 ರಷ್ಟು ಇಳಿದು ಬ್ಯಾರೆಲ್​​ಗೆ 85.63 ಡಾಲರ್​ಗೆ ತಲುಪಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್ಐಐ) ಸೋಮವಾರ 653.97 ಕೋಟಿ ರೂ.ಗಳ ಈಕ್ವಿಟಿಗಳನ್ನು ಮಾರಾಟ ಮಾಡಿದ್ದಾರೆ ಎಂದು ಷೇರು ವಿನಿಮಯ ದಾಖಲೆಗಳು ತಿಳಿಸಿವೆ.

ಬಿಎಸ್ಇ ಬೆಂಚ್ ಮಾರ್ಕ್ ಸೋಮವಾರ 131.18 ಪಾಯಿಂಟ್ ಅಥವಾ ಶೇಕಡಾ 0.17 ರಷ್ಟು ಏರಿಕೆ ಕಂಡು 77,341.08 ಕ್ಕೆ ತಲುಪಿತ್ತು. ನಿಫ್ಟಿ 36.75 ಪಾಯಿಂಟ್ ಅಥವಾ ಶೇಕಡಾ 0.16 ರಷ್ಟು ಏರಿಕೆ ಕಂಡು 23,537.85 ಕ್ಕೆ ತಲುಪಿತ್ತು.

Continue Reading

Latest

Nita Ambani: ಕಾಶಿಯಲ್ಲಿ ಮದುವೆ ಆಮಂತ್ರಣ ಪೂಜೆ; ಚಾಟ್‌ ಅಂಗಡಿಗೂ ಭೇಟಿ ನೀಡಿದ ನೀತಾ ಅಂಬಾನಿ

Nita Ambani ಮಕ್ಕಳ ಮದುವೆ ಎಂದರೆ ತಂದೆ-ತಾಯಂದಿರ ಮನಸ್ಸಿನಲ್ಲಿ ಆಗುವ ಖುಷಿನೇ ಬೇರೆ. ಅಂಬಾನಿ ಕುಟುಂಬ ಕೂಡ ಇದಕ್ಕೆ ಹೊರತಾಗಿಲ್ಲ. ಅಂಬಾನಿ ಮನೆಯಲ್ಲಿ ಈಗ ಮದುವೆಯ ಸಂಭ್ರಮ. ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ವಿವಾಹವು ಜುಲೈ 12ರಂದು ನಡೆಯಲಿದೆ. ಇನ್ನು ನೀತಾ ಅಂಬಾನಿ ಇವರಿಬ್ಬರ ಮದುವೆ ಆಮಂತ್ರಣ ಪತ್ರಿಕೆಯನ್ನು ಕಾಶಿ ವಿಶ್ವನಾಥ ಸನ್ನಿಧಿಯಲ್ಲಿ ಇಟ್ಟು ಪೂಜೆ ಸಲ್ಲಿಸಿದರು. ಇನ್ನು ಕಾಶಿಯಲ್ಲಿರುವ ಚಾಟ್ ಅಂಗಡಿಗೆ ಭೇಟಿ ನೀಡಿ ತನ್ನಿಷ್ಟದ ತಿಂಡಿಗಳನ್ನು ಸವಿದರು.

VISTARANEWS.COM


on

Nita Ambani
Koo

ವಾರಣಾಸಿ: ಮುಕೇಶ್‌ ಅಂಬಾನಿ ಮನೆಯಲ್ಲಿ ಈಗ ಮದುವೆಯ ಸಂಭ್ರಮ ಮನೆಮಾಡಿದೆ. ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಈಗಾಗಲೇ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಇವರ ಪ್ರೀ ವೆಡ್ಡಿಂಗ್‌ ಶೂಟ್‌ಗಳು ಸಿಕ್ಕಾಪಟ್ಟೆ ವೈರಲ್‌ ಆಗಿತ್ತು. ಈ ಜೋಡಿಯ ಮದುವೆ ತಯಾರಿ ಕೂಡ ಜೋರಾಗಿ ನಡೆಯುತ್ತಿದೆ.  ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್‌ ಅವರ ವಿವಾಹಕ್ಕೂ ಮೊದಲು ನೀತಾ ಅಂಬಾನಿ (Nita Ambani) ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಸೋಮವಾರ ವಾರಣಾಸಿಯಲ್ಲಿ ರಿಲಯನ್ಸ್ ಫೌಂಡೇಶನ್ ಅಧ್ಯಕ್ಷ ಮತ್ತು ಬಿಲಿಯನೇರ್ ಮುಖೇಶ್ ಅಂಬಾನಿ ಪತ್ನಿ ನೀತಾ ಅಂಬಾನಿ ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿ ಅವರ ವಿವಾಹಕ್ಕೂ ಮುನ್ನ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ನೀತಾ ಅಂಬಾನಿ ಪವಿತ್ರ ನಗರದ ಸ್ಥಳೀಯ ಚಾಟ್ ಅಂಗಡಿಗೆ ಭೇಟಿ ನೀಡಿ ಸ್ಥಳೀಯ ಭಕ್ಷ್ಯಗಳನ್ನು ರುಚಿ ನೋಡಿದರು. ಹಾಗೂ ಅಲ್ಲಿನ ಸಿಬ್ಬಂದಿಗಳ ಜೊತೆ ಖುಷಿಯಿಂದ ಮಾತನಾಡಿದರು.

ಈ ಸಂದರ್ಭದಲ್ಲಿ ಅವರು ಮಗ ಅನಂತ್ ಅಂಬಾನಿ ಮತ್ತು ಸೊಸೆ ರಾಧಿಕಾ ಮರ್ಚೆಂಟ್‌ ಅವರ ವಿವಾಹ ಆಮಂತ್ರಣವನ್ನು ಶಿವನ ಪಾದಗಳಿಗೆ ಅರ್ಪಿಸಿ ಪೂಜೆ ಸಲ್ಲಿಸಿದರು. ತಮ್ಮ ಕುಟುಂಬದ ಮೇಲೆ ಶ್ರೀ ದೇವರ ಆಶೀರ್ವಾದವಿರಲಿ ಎಂದು ಬೇಡಿಕೊಂಡರು.

ಇನ್ನು ಉತ್ತರ ಪ್ರದೇಶದ ವಾರಣಾಸಿ ನಗರದ ಚಾಟ್ ಅಂಗಡಿಯಲ್ಲಿ ನೀತಾ ಅಂಬಾನಿ ಸ್ಥಳೀಯ ಅಂಗಡಿಯವರೊಂದಿಗೆ ಮಾತುಕತೆ ನಡೆಸಿ, ತಮ್ಮಿಷ್ಟದ ಭಕ್ಷ್ಯಗಳನ್ನು ಸವಿದಿದ್ದಾರೆ. ಅವರಿಷ್ಟದ ಆಲೂ ಚಾಟ್ ಅನ್ನು ಬಹಳ ಖುಷಿಯಿಂದ ಎಲ್ಲರ ಜೊತೆ ಕುಳಿತು ಸವಿದಿದ್ದಾರೆ.

ಈ ಸಂದರ್ಭದಲ್ಲಿ ಪತಿ ಮುಕೇಶ್ ಅವರನ್ನು ನೆನಪಿಸಿಕೊಂಡ ನೀತಾ, “ಮುಕೇಶ್ ಇದನ್ನು ಖಂಡಿತಾ ಇಷ್ಟಪಡುತ್ತಿದ್ದರು’ ಎಂದಿದ್ದಾರೆ. ಮುಕೇಶ್ ಸ್ವತಃ ಚಾಟ್ ಪ್ರಿಯರಾಗಿದ್ದು ಮುಂಬಯಿಯ ಸ್ವಾತಿ ಸ್ನಾಕ್ಸ್ ಮಳಿಗೆಯಿಂದ ಕನಿಷ್ಠ ವಾರಕ್ಕೊಮ್ಮೆ ವೈವಿಧ್ಯಮಯ ತಿನಿಸುಗಳನ್ನು ಆರ್ಡರ್ ಮಾಡುತ್ತಿರುತ್ತಾರೆ.

ಇದನ್ನೂ ಓದಿ: ವೃದ್ಧ ರೋಗಿಯ ಮೇಲೆ ದರ್ಪ ತೋರಿದ ಆಸ್ಪತ್ರೆ ಸಿಬ್ಬಂದಿ; ಆಘಾತಕಾರಿ ವಿಡಿಯೊ

ಡಿಸೈನರ್ ಮನಿಷ್ ಮಲ್ಹೋತ್ರಾ ಈ ಸಂದರ್ಭದಲ್ಲಿ ನೀತಾ ಜೊತೆಗಿದ್ದರು. ಆ ಬಳಿಕ ಗಂಗಾ ನದಿ ತಟದಲ್ಲಿ ನಡೆದ ಗಂಗಾರತಿಯ ಸೊಬಗನ್ನೂ ಕಣ್ತುಂಬಿಕೊಂಡರು. ಇನ್ನು ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಅವರ ಮದುವೆ ಜುಲೈ 12ರಂದು ನಡೆಯಲಿದೆ.

Continue Reading

ಚಿನ್ನದ ದರ

Gold Rate Today: ಏರಿಕೆಯೂ ಇಲ್ಲ ಇಳಿಕೆಯೂ ಇಲ್ಲ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ (ಜೂನ್‌ 25) ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಶನಿವಾರ ಬೆಲೆ ಇಳಿಕೆಯಾಗಿದ್ದರೆ ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಸೋಮವಾರ ಮತ್ತೆ ದರ ಇಳಿಕೆಯಾಗಿ ಗ್ರಾಹಕರು ನಿರಾಳರಾಗಿದ್ದರು.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ (ಜೂನ್‌ 25) ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ (Gold Rate Today). ಶನಿವಾರ ಬೆಲೆ ಇಳಿಕೆಯಾಗಿದ್ದರೆ ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಸೋಮವಾರ ಮತ್ತೆ ದರ ಇಳಿಕೆಯಾಗಿ ಗ್ರಾಹಕರು ನಿರಾಳರಾಗಿದ್ದರು.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,625 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,223 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 53,000. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,250 ಮತ್ತು ₹ 6,62,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,784 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,230 ಮತ್ತು ₹ 7,22,300 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹6,640 ₹ 7,238₹ 7,238
ಮುಂಬೈ₹ 6,625₹ 7,223
ಬೆಂಗಳೂರು₹ 6,625₹ 7,223
ಚೆನ್ನೈ₹ 6,680 ₹ 7,288

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯೂ ಕೊಂಚ ಇಳಿಮುಖವಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 91.05 ಹಾಗೂ 8 ಗ್ರಾಂಗೆ ₹ 728.40 ಇದೆ. 10 ಗ್ರಾಂಗೆ ₹ 910.50 ಹಾಗೂ 1 ಕಿಲೋಗ್ರಾಂಗೆ ₹ 91,050 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: JioMart: ಕುಶಲಕರ್ಮಿಗಳು, ನೇಕಾರರ ಉತ್ತೇಜನಕ್ಕೆ ಜಿಯೋಮಾರ್ಟ್‌ನಿಂದ ಮತ್ತೊಂದು ಘೋಷಣೆ

Continue Reading
Advertisement
Karnataka Milk Federation
ಪ್ರಮುಖ ಸುದ್ದಿ9 mins ago

ವಿಸ್ತಾರ ಸಂಪಾದಕೀಯ: ಹಾಲು ದರ ಏರಿಕೆ ಬಳಕೆದಾರನಿಗೆ ಹೊರೆಯಾಗದಿರಲಿ

Women's Asia Cup
ಪ್ರಮುಖ ಸುದ್ದಿ6 hours ago

Women’s Asia Cup 2024 : ಮಹಿಳೆಯರ ಏಷ್ಯಾ ಕಪ್​ ಕ್ರಿಕೆಟ್​ನ ವೇಳಾಪಟ್ಟಿ ಬಿಡುಗಡೆ, ಜುಲೈ 19ಕ್ಕೆ ಭಾರತ- ಪಾಕ್ ಪಂದ್ಯ

minister mb patil visit japan and discuss about investment in Karnataka
ಕರ್ನಾಟಕ6 hours ago

Foreign Investment: 100 ಕೋಟಿ ರೂ. ವೆಚ್ಚದ ತ್ಯಾಜ್ಯ ನೀರು ನಿರ್ವಹಣಾ ಉಪಕರಣಗಳ ತಯಾರಿಕಾ ಘಟಕ ಸ್ಥಾಪನೆಗೆ ಒಪ್ಪಂದ

Arvind Kejriwal
ಪ್ರಮುಖ ಸುದ್ದಿ6 hours ago

Arvind Kejriwal : ಜಾಮೀನು ಅರ್ಜಿ ವಿಚಾರಣೆಗೂ ಮುನ್ನ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಸಿಬಿಐ

Kodagu News
ಕೊಡಗು6 hours ago

Kodagu News: ಕಳೆದುಕೊಂಡಿದ್ದ ಚಿನ್ನದ ನಾಣ್ಯ ವಾರಸುದಾರನ ಕೈ ಸೇರುವಂತೆ ಮಾಡಿದ ಪೊಲೀಸರು!

Lok Sabha Speaker
ಪ್ರಮುಖ ಸುದ್ದಿ7 hours ago

Lok Sabha Speaker : ಸ್ಪೀಕರ್​ ಚುನಾವಣೆಯಲ್ಲಿ ವೈಎಸ್​ಆರ್​ ಪಕ್ಷದಿಂದ ಬಿಜೆಪಿಗೆ ಬೆಂಬಲ

Rahul Gandhi
ಪ್ರಮುಖ ಸುದ್ದಿ7 hours ago

Rahul Gandhi : ಲೋಕ ಸಭೆಯಲ್ಲಿ ಪ್ರತಿ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ

Ayodhya Ram Mandir
ಪ್ರಮುಖ ಸುದ್ದಿ8 hours ago

Ayodhya Ram Mandir : ಅಯೋಧ್ಯೆಯಲ್ಲಿ ನಿರ್ಮಾಣವಾಗಲಿದೆ ‘ಟೆಂಪಲ್ ಮ್ಯೂಸಿಯಮ್​’; ಯೋಗಿ ಸಂಪುಟದ ಸಮ್ಮತಿ

Milk Price
ಪ್ರಮುಖ ಸುದ್ದಿ8 hours ago

Milk Price: ನಂದಿನಿ ಹಾಲಿನ ಹೊಸ ದರ ಹೇಗಿದೆ; ಯಾವುದಕ್ಕೆ ಎಷ್ಟು ಹೆಚ್ಚಳ?

Ayodhya Ram Mandir:
ಪ್ರಮುಖ ಸುದ್ದಿ8 hours ago

Ayodhya Ram Mandir : ರಾಮಮಂದಿರದ ಚಾವಣಿ ಸೋರುತ್ತಿಲ್ಲ; ನಿರ್ಮಾಣ ಸಮಿತಿ ಸ್ಪಷ್ಟನೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ1 day ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ4 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ5 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌