ಧಾರವಾಡ ಭೀಕರ ಅಪಘಾತ ; ಓರ್ವ ಬಾಲಕಿ ದುರ್ಮರಣ - Vistara News

ಧಾರವಾಡ

ಧಾರವಾಡ ಭೀಕರ ಅಪಘಾತ ; ಓರ್ವ ಬಾಲಕಿ ದುರ್ಮರಣ

ಧಾರವಾಡದಲ್ಲಿ ಭೀಕರ ಅಪಘಾತ ಒಂದು ಸಂಭವಿಸಿತ್ತು. ಈ ದುರಂತದಲ್ಲಿ 14 ವರ್ಷದ ಬಾಲಕಿಯೂ ಮೃತಪಟ್ಟಿದ್ದಾಳೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧಾರವಾಡ: ಒಂಭತ್ತು ಜನರ ಸಾವಿಗೆ ಕಾರಣವಾದ ಬಾಡ ಗ್ರಾಮದ ಬಳಿ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರಲ್ಲಿ 14 ವಷದ ಬಾಲಕಿಯೂ ಇದ್ದಾಳೆ. ಈ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೆ 7 ಜನ ಸಾವನ್ನಪ್ಪಿದ್ದರು. ನಂತರ ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಮೃತಪಟ್ಟ ಇಬ್ಬರು ಚೆನ್ನವ್ವ ಹಾಗೂ ಮಧುಶ್ರೀ.ಇದೀಗ ಮೃತಪಟ್ಟ ಬಾಲಕಿಯನ್ನು ಅನನ್ಯ ಮಲ್ಲಪ್ಪ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ | ಕ್ರೂಸರ್‌ ಮರಕ್ಕೆ ಡಿಕ್ಕಿ: ಮದುವೆ ನಿಶ್ಚಿತಾರ್ಥ ಮುಗಿಸಿ ಹೊರಟ 7 ಮಂದಿ ದುರ್ಮರಣ

ಬಾಲಕಿ ದೊಡವಾಡ ಗ್ರಾಮದ ನಿವಾಸಿಯಾಗಿದ್ದರು. ಈಕೆ ಪ್ರತಿಭಾವಂತ ಬಾಲಿಕಿ. ಕಳೆದ ವಾರ ದೊಡವಾಡ ಗ್ರಾಮದಲ್ಲಿ ನಡೆದ ಗ್ರಾಮ ದೇವಿಯರ ಜಾತ್ರಾ ಮಹೋತ್ಸವದಲ್ಲಿ ಯೋಗಾಸನ ಮಾಡುವ ಮೂಲಕ ಗ್ರಾಮಸ್ಥರ ಕಣ್ಮನ ಸೆಳೆದಿದ್ದಳು. ಈಕೆಯನ್ನು ಕಳೆದುಕೊಂಡ ದುಃಖದಲ್ಲಿ ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ | ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಅಪಘಾತದಲ್ಲಿ ಇಬ್ಬರ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕಾರವಾರ, ಯಾದಗಿರಿಯಲ್ಲಿ ಅಬ್ಬರಿಸಿದ ವರುಣ; ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆ

Rain News : ಬೆಂಗಳೂರಲ್ಲಿ ವರುಣ ಬ್ರೇಕ್‌ ಕೊಟ್ಟಿದ್ದು, ಕರಾವಳಿಯಲ್ಲಿ ಅಬ್ಬರಿಸುತ್ತಿದ್ದಾನೆ. ಮುಂದಿನ 24 ಗಂಟೆಯಲ್ಲಿ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಮಂಗಳವಾರದಂದು ಕರಾವಳಿಯಲ್ಲಿ ಗುಡುಗು ಸಹಿತ ಭಾರಿ (Karnataka Weather Forecast) ಮಳೆಯಾಗಿತ್ತು. ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಭಾಗಗಳಲ್ಲಿ ಧಾರಾಕಾರ ಮಳೆಯಿಂದಾಗಿ (Rain News) ಜನಜೀವನ ಅಸ್ತವ್ಯಸ್ತವಾಗಿತ್ತು. ಭಾರಿ ಮಳೆಯಿಂದಾಗಿ (Heavy Rain Alert) ಹೆದ್ದಾರಿಯಲ್ಲಿ ನೀರು ನಿಂತಿತ್ತು. ಇದರಿಂದಾಗಿ ವಾಹನ ಸವಾರರು ಪರದಾಡಬೇಕಾಯಿತು.

ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಎಡಬಿಡದೆ ಮಳೆ ಸುರಿದಿದೆ. ಕಳೆದೊಂದು ವಾರದಿಂದ ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆ ಸುರಿದಿತ್ತು. ಇದೀಗ ಕರಾವಳಿ ತಾಲೂಕುಗಳಲ್ಲಿ ವರುಣಾರ್ಭಟ ಆರಂಭವಾಗಿದೆ. ಲೋಕಸಭೆ ಚುನಾವಣೆಯ ಮತ ಎಣಿಕೆಗೂ ಮಳೆ ಅಡ್ಡಿ ಆಯಿತು. ಮತ ಎಣಿಕೆ ಕೇಂದ್ರಕ್ಕೆ ಅಧಿಕಾರಿ, ಸಿಬ್ಬಂದಿ ಮಳೆಯಲ್ಲಿ ನೆನೆದುಕೊಂಡೆ ಬರುವಂತಾಯಿತು.

karnataka weather Forecast

ಯಾದಗಿರಿಯಲ್ಲಿ ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆ ಹಾನಿ

ಯಾದಗಿರಿಯಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆಗೆ ಹಾನಿಯಾಗಿದೆ. ಯಾದಗಿರಿಯ ಸುರಪುರ ತಾಲೂಕಿನ ತಳ್ಳಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮರಕ್ಕೆ ಸಿಡಿಲು ಬಡಿದು ಬೆಂಕಿಗಾಹುತಿಯಾಗಿದ್ದು, ಮರದ ಪಕ್ಕದಲ್ಲಿದ್ದ ಗುಡಿಸಲಿನಲ್ಲಿರುವ ಟಿವಿ ಸುಟ್ಟು ಹೋಗಿದೆ. ಗಿರಿನಗರದ ರಮೇಶ್ ಎಂಬುವವರ ಗುಡಿಸಲು ಹಾನಿಯಾಗಿದೆ. ಭಾರೀ ಮಳೆಗೆ ರೈಲ್ವೆ ನಿಲ್ದಾಣ ಸಮೀಪದ ಭವಾನಿ ಮಂದಿರದ ಮುಂಭಾಗದಲ್ಲಿ ಆಲದ ಮರ ಧರೆಗುರುಳಿದೆ.

ಬಿರುಗಾಳಿ ಸಹಿತ ಮಳೆಗೆ ಆಟೋ ಮೇಲೆ ಉರುಳಿ ಬಿದ್ದ ಮರ

ಬಸವಕಲ್ಯಾಣ: ಗುಡುಗು, ಮಿಂಚು, ಬಿರುಗಾಳಿಯೊಂದಿಗೆ ಸುರಿದ ಮಳೆಗೆ ನಿಂತಿದ್ದ ಆಟೋ ಮೇಲೆ ಮರ ಉರುಳಿ ಬಿದ್ದ ಘಟನೆ ನಗರದ ತ್ರಿಪುರಾಂತನಲ್ಲಿ ಜರುಗಿದೆ. ತ್ರಿಪುರಾಂತನ ಮಡಿವಾಳ ವೃತ್ತದಲ್ಲಿಯ ಮುಖ್ಯ ರಸ್ತೆ ಬದಿಯಲ್ಲಿ ನಿಲ್ಲಿಸಿದ ಆಟೋ ಮೇಲೆ ಬೃಹತ್ ಗಾತ್ರದ ಬೇವಿನ ಮರ ಉರುಳಿ ಬಿದ್ದು, ಆಟೋ ಜಖಂಗೊಂಡಿದೆ.
ನಗರದ ಹರಳಯ್ಯ ವೃತ್ತದ ಸಮೀಪದ ಕರ್ನಾಟಕ ಬ್ಯಾಂಕ್ ಮುಂಭಾಗದಲ್ಲಿ ಮುಖ್ಯ ರಸ್ತೆ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಈ ಮಾರ್ಗದಲ್ಲಿ ಕೆಲ ಕಾಲ ರಸ್ತೆ ಸಂಚಾರ ಬದಲಾಯಿಸಲಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ನಗರಸಭೆ ಅಧಿಕಾರಿಗಳು ತಕ್ಷಣ ಮರ ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇದನ್ನೂ ಓದಿ: Bellary VIMS Hospital : ಲೇಡಿ ಡಾಕ್ಟರ್‌ ಜುಟ್ಟು ಹಿಡಿದು ಎಳೆದಾಡಿ ಹೊಡೆದ; ವಿಮ್ಸ್‌ ಆಸ್ಪತ್ರೆಯಲ್ಲಿ ದಿಢೀರ್‌ ಪ್ರತಿಭಟನೆ

ಜೂನ್‌ 5ಕ್ಕೂ ಹಲವೆಡೆ ಮಳೆ ಅಬ್ಬರ

ಜೂ 5ರಂದು ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು ಸೇರಿ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಗಾಳಿಯ ವೇಗವು 30-40 ಕಿಮೀ ಇರಲಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುಲಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ದ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Karnataka election results 2024: ಕರ್ನಾಟಕದ ಜನರು ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ: ಪ್ರಲ್ಹಾದ್‌ ಜೋಶಿ

Karnataka election results 2024: ಐದು ವರ್ಷ ನನಗೆ ಮಂತ್ರಿಯಾಗಲು ಪ್ರಧಾನಿ ಮೋದಿಯವರು ಅವಕಾಶ ಮಾಡಿಕೊಟ್ಟಿದ್ದಾರೆ. ನನ್ನ ಸಚಿವ ಖಾತೆಯನ್ನು ಸರಿಯಾಗಿ ನಿಭಾಯಿಸಿದ್ದೇನೆ. ಮತ್ತೊಮ್ಮೆ ಆಶೀರ್ವಾದ ಮಾಡಿ ಜನರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಧಾರವಾಡ ವಿಜೇತ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.

VISTARANEWS.COM


on

Karnataka election results 2024
Koo

ಧಾರವಾಡ: ಜನತಾ ಜನಾರ್ದನರ ಆಶೀರ್ವಾದದಿಂದ ಗೆಲುವಾಗಿದೆ. ಮತದಾರ ಪ್ರಭುಗಳಿಗೆ ಈ ಗೆಲುವು ಸಲ್ಲಬೇಕು. ಎಲ್ಲ ಕಾರ್ಯಕರ್ತರು, ಮುಖಂಡರು ಸೇರಿ ಸಮರ್ಪಕವಾಗಿ ಕೆಲಸ ಮಾಡಿದ್ದಾರೆ. ಇಲ್ಲಿನ ಪ್ರತಿಸ್ಪರ್ಧಿಗಳು ಅಪಪ್ರಚಾರ ಮಾಡುತ್ತಾ ಬಂದಿದ್ದರು. ಸಾಕಷ್ಟು ಹಣ ಹೆಂಡವನ್ನು ಹಂಚಿದ್ದಾರೆ, ಆದ್ರೆ ಜನರು ನಮ್ಮ ಕೈ ಹಿಡಿದಿದ್ದಾರೆ. ಕರ್ನಾಟಕದ ಜನರು ಈಗಾಗಲೇ ಬಿಜೆಪಿಗೆ ಆಶಿರ್ವಾದ ಮಾಡಿದ್ದಾರೆ. ಹೀಗಾಗಿ ನಮ್ಮ ಕ್ಷೇತ್ರದ (Karnataka election results 2024) ಜನತೆಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಧಾರವಾಡ ವಿಜೇತ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ಧಾರವಾಡ ಮತ ಎಣಿಕೆ ಕೇಂದ್ರದ ಬಳಿ ಮಂಗಳವಾರ ಪ್ರತಿಕ್ರಿಯಿಸಿದ ಅವರು, ಈಗಾಗಲೇ ದೇಶದಲ್ಲಿ 300ರ ಗಡಿ ದಾಡುವ ನಿಟ್ಟಿನಲ್ಲಿದ್ದೇವೆ. ನಿರೀಕ್ಷೆಗೆ ತಕ್ಕಂತೆ, ನಾವು ಅಂದುಕೊಂಡಂತೆ ಸೀಟು ಬಂದಿಲ್ಲ. ಎಲ್ಲಿ ಏನು ಆಗಿದೆ, ವಾಸ್ತವಿಕವಾಗಿ ಏನು ಆಗಿದೆ ಅನ್ನೋದನ್ನು ನೋಡಬೇಕಾಗಿದೆ. ಸದ್ಯದಲ್ಲಿ ದೆಹಲಿಗೆ ಹೋಗುತ್ತೇನೆ, ವರಿಷ್ಠರ ಜೊತೆ ಚರ್ಚಿಸುತ್ತೇನೆ. ಚುನಾವಣೆ ಆಗಿದ್ದು ಎನ್‌ಡಿಎ ಮತ್ತು ಇಂಡಿ ನಡುವೆ. ಹೀಗಾಗಿ ಎನ್‌ಡಿಎ ಜೊತೆ ಇದ್ದವರು ಗಟ್ಟಿಯಾಗಿ ನಿಲ್ಲುತ್ತಾರೆ ಅನ್ನೋ ವಿಶ್ವಾಸವಿದೆ ಎಂದು ಹೇಳಿದರು.

ಈಗಾಗಲೇ ನಾವು ಕೈಗೊಂಡಿರುವ ಕಾಮಗಾರಿಗಳನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ನನ್ನ ಸಚಿವ ಖಾತೆಯನ್ನು ಸರಿಯಾಗಿ ನಿಭಾಯಿಸಿದ್ದೇನೆ. ಐದು ವರ್ಷ ನನಗೆ ಮಂತ್ರಿಯಾಗಲು ಪ್ರಧಾನಿ ಮೋದಿಯವರು ಅವಕಾಶ ಮಾಡಿಕೊಟ್ಟಿದ್ದಾರೆ. ದಿಂಗಾಲೇಶ್ವರ ಶ್ರೀಗಳು ಏನೇ ಹೇಳಿದರೂ ಆಶೀರ್ವಾದ ಅಂದಿದ್ದೆ, ಅವರ ಆಶಿರ್ವಾದದಿಂದ ಗೆದ್ದಿದ್ದೇನೆ ಎಂದು ತಿಳಿಸಿದರು .

ಇದನ್ನೂ ಓದಿ | Dharwad Election Result 2024: ಪ್ರಲ್ಹಾದ್‌ ಜೋಶಿಗೆ ‘ಧಾರವಾಡ ಪೇಡಾ’; ಅಸೂಟಿಗೆ ಸೋಲು

ಮತದಾರರಿಗೆ ಕಾಗೇರಿ ಧನ್ಯವಾದ

Vishweshwar Hegde Kageri

ಕಾರವಾರ: ಕ್ಷೇತ್ರದಲ್ಲಿ ಪ್ರಾರಂಭದಿಂದಲೂ ಬಿಜೆಪಿ ಗೆಲ್ಲುವ ವಿಶ್ವಾಸದಿಂದ ಕೆಲಸ ಮಾಡಿದ್ದೇವೆ. ಇದರ ಪರಿಣಾಮ ರಾಜ್ಯದಲ್ಲೇ ದಾಖಲೆ ಅಂತರದಿಂದ ಗೆಲುವು ಸಾಧ್ಯವಾಗಿದೆ ಎಂದು ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಕುಮಟಾದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕಾಗೇರಿ ಅವರು, ಗೆಲುವಿಗೆ ಕಾರಣಕರ್ತರಾದ ಮತದಾರರಿಗೆ ಮೊಟ್ಟಮೊದಲು ಅಭಿನಂದಿಸುತ್ತೇನೆ. 5 ವರ್ಷಕ್ಕೊಮ್ಮೆ ಬರುವ ಚುನಾವಣೆಯಲ್ಲಿ ಮತದಾರರು ಬಹುದೊಡ್ಡ ಜವಾಬ್ದಾರಿ ನಿಭಾಯಿಸಿದ್ದಾರೆ ಎಂದು ಹೇಳಿದ್ದಾರೆ.

ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್‌ ಹೆಸರು ಹೇಳದೇ ಪರೋಕ್ಷವಾಗಿ ಕಾಗೇರಿ ಟಾಂಗ್‌ ನೀಡಿದರು. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಇಬ್ಬರೇ ಬಿಜೆಪಿ ಶಾಸಕರು ಎಂದು ಕುಮಟಾದ ದಿನಕರ ಶೆಟ್ಟಿ, ಖಾನಾಪುರದ ವಿಠ್ಠಲ ಹಲಗೇಕರ್ ಹೆಸರನ್ನ ಮಾತ್ರ ಹೇಳಿದ ಕಾಗೇರಿ, ಸಂಘಟಿತವಾದ ಪ್ರಯತ್ನ ಈ ಚುನಾವಣಾ ಯಶಸ್ಸಿಗೆ ಕಾರಣ. ಸಂಘಟನೆಯ ಎಲ್ಲ ಹಂತದ ನಾಯಕರು, ಕಾರ್ಯಕರ್ತರಿಗೆ ಅಭಿನಂದಿಸಿದರು.

ಈ ಗೆಲುವು ನಮ್ಮ ಜವಾಬ್ದಾರಿಯನ್ನ ಹೆಚ್ಚಿಸಿದೆ, ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೇಂದ್ರೀಕರಿಸಿ ಕೆಲಸ ಮಾಡಲು ಬದ್ಧನಿದ್ದೇನೆ. ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ಗೊಂದಲ, ತೊಡಕು ಉಂಟುಮಾಡದೆ, ಎಲ್ಲಾ ರೀತಿ ಸಹಕಾರ ಕೊಟ್ಟಿದ್ದಾಗಿ ಕಾಂಗ್ರೆಸ್‌ಗೆ ಅಭಿನಂದಿಸಿದರು.

ಇದನ್ನೂ ಓದಿ | Uttara Kannada Election Result 2024: ಉತ್ತರ ಕನ್ನಡದಲ್ಲಿ ಗೆದ್ದು ಬೀಗಿದ ವಿಶ್ವೇಶ್ವರ ಹೆಗಡೆ ಕಾಗೇರಿ

ಉತ್ತರ ಕನ್ನಡ ಕ್ಷೇತ್ರ ಬಿಜೆಪಿ ನಿರಂತರವಾಗಿ ಗೆಲ್ಲುತ್ತಿದ್ದ ಕ್ಷೇತ್ರ. ಈ ಬಾರಿಯೂ ಗೆಲ್ಲುವ ಮೂಲಕ ವ್ಯಕ್ತಿ ಆಧಾರಿತ ಪಕ್ಷ ನಮ್ಮದಲ್ಲ ಎಂದು ತೋರಿಸಿಕೊಟ್ಟಿದ್ದಾರೆ. ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದು ನಂಬಿರುವ ಪಕ್ಷ ಬಿಜೆಪಿ. ಕೆಲವರು ಕೆಲವು ಭ್ರಮೆಗಳನ್ನ ಸೃಷ್ಟಿಸುತ್ತಿರುತ್ತಾರೆ, ಅಂತಹವರ ಮುಖವಾಡ ಬಯಲಾಗಿದೆ ಎಂದು ಹೇಳಿದರು.

Continue Reading

Lok Sabha Election 2024

Election Results 2024: ಧಾರವಾಡದ ಮತ ಎಣಿಕೆ ಕೇಂದ್ರಕ್ಕೆ ವಾಮಾಚಾರ! ಮರದಡಿ ಮೊಟ್ಟೆ ಇಟ್ಟ ಕಿಡಿಗೇಡಿಗಳು

Election Results 2024 : ಧಾರವಾಡದ ಮತ ಎಣಿಕೆ ಕೇಂದ್ರದಲ್ಲಿ ದುಷ್ಟರು ವಾಮಾಚಾರ (Black Magic) ನಡೆಸಿದರೆ, ಚಿಕ್ಕೋಡಿಯಲ್ಲಿ ಕಿಡಿಗೇಡಿಯೊಬ್ಬ ಪಾಕಿಸ್ತಾನ ಜಿಂದಾಬಾದ್‌ ಎಂದು ಕೂಗಿದ್ದಾನೆ.

VISTARANEWS.COM


on

By

Election Results 2024
Koo

ಧಾರವಾಡ: ಲೋಕಸಭೆ ಚುನಾವಣೆಯಲ್ಲಿ (Election Results 2024) ಗೆಲುವು -ಸೋಲಿನ ಲೆಕ್ಕಚಾರ ನಡೆಯುತ್ತಿರುವಾಗಲೇ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಮತ ಎಣಿಕೆ ಕೇಂದ್ರದ ಬಳಿ ದುಷ್ಕರ್ಮಿಗಳಿಂದ ವಾಮಾಚಾರ (Black Magic) ನಡೆದಿದೆ. ಮರದ ಪೊದೆಯಲ್ಲಿ ಎರಡು ಮೊಟ್ಟೆಗಳನ್ನು ಇಟ್ಟು ವಾಮಾಚಾರ ಮಾಡಿದ್ದಾರೆ ಎನ್ನಲಾಗಿದೆ. ಮರದಡಿ ಮೊಟ್ಟೆ ಇರುವುದನ್ನು ಕಂಡು ಕ್ಷಣಕಾಲ ಅಲ್ಲಿದ್ದವರು ಆತಂಕಗೊಂಡರು.

ಚುನಾವಣೆಯ ಫಲಿತಾಂಶದಲ್ಲಿ ಗೆಲವು ಸಾಧಿಸಲು ಯಾರಾದರೂ ಹೀಗೆ ಮಾಡಿದ್ದರಾ ಎಂಬ ಅನುಮಾನ ಮೂಡಿದೆ. ಮೊಟ್ಟೆಯನ್ನು ತಂದಿಟ್ಟವರು ಯಾರು? ನಿಜಕ್ಕೂ ಅಲ್ಲಿ ವಾಮಾಚಾರ ನಡೆದಿದ್ಯಾ ಅಥವಾ ಮರದಡಿ ಕುಳಿತಾಗ ಮರೆತು ಬಿಟ್ಟು ಹೋಗಿದ್ದರಾ ಎಂಬುದು ತಿಳಿದು ಬಂದಿಲ್ಲ.

ಅಂದಹಾಗೇ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪ್ರಲ್ಹಾದ್ ಜೋಶಿ ಗೆಲುವು ಸಾಧಿಸಿದ್ದಾರೆ. ಐದನೆಯ ಬಾರಿಯೂ ಮತದಾರರು ಪ್ರಲ್ಹಾದ್ ಜೋಶಿ ಅವರನ್ನು ಗೆಲ್ಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ 6,82,400 ಮತ ಗಳಿಸಿದರೆ, ಕಾಂಗ್ರೆಸ್‌ ಅಭ್ಯರ್ಥಿ ವಿನೋದ್ ಅಸೂಟಿ 5,87,397 ಮತ ಪಡೆದು, 95,003 ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದಾರೆ.

ಇದನ್ನೂ ಓದಿ:Election Results 2024: ಮೈತ್ರಿಕೂಟಕ್ಕೆ ಕಡಿಮೆ ಸ್ಥಾನ; ವಿಷಯ ತಿಳಿದು ಬಿಜೆಪಿ ಅಭಿಮಾನಿ ಹೃದಯಾಘಾತಕ್ಕೆ ಬಲಿ

ಚಿಕ್ಕೋಡಿಯಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್‌ ಎಂದ ಕಿಡಿಗೇಡಿ

ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಮುನ್ನಡೆ ಹಿನ್ನೆಲೆಯಲ್ಲಿ ಕಿಡಿಗೇಡಿಯೊಬ್ಬ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗಿದ್ದಾನೆ. ಚಿಕ್ಕೋಡಿಯ ಮತ ಎಣಿಕೆ ಕೇಂದ್ರದ ಹೊರವಲಯದಲ್ಲಿ ಘಟನೆ ನಡೆದಿದೆ. ಪಾಕಿಸ್ತಾನ್‌ಗೆ ಪ್ರಿಯಾಂಕಾ ಜಾರಕಿಹೊಳಿಗೆ ಜಿಂದಾಬಾದ್‌ ಎಂದು ಕೂಗಿದ್ದಾನೆ.

ಈ ಹಿಂದೆ ರಾಜ್ಯಸಭಾ ಚುನಾವಣೆಯ (Rajya Sabha Election) ಫಲಿತಾಂಶ ಹೊರಬಿದ್ದಾಗ ಕಾಂಗ್ರೆಸ್‌ ನೂತನ ಸದಸ್ಯ ನಾಸಿರ್ ಹುಸೇನ್ (Nasir Hussain) ಬೆಂಬಲಿಗರು ವಿಧಾನಸೌಧದೊಳಗೇ ಶತ್ರು ರಾಷ್ಟ್ರ ಪಾಕಿಸ್ತಾನದ ಪರ ಜೈಕಾರ ಕೂಗಿದ್ದರು. ದೇಶದ್ರೋಹದ (Sedition Case) ಕೆಲಸ ಮಾಡಿ ಉದ್ಧಟತನ ಮೆರೆದಿದ್ದರು. ಇದಕ್ಕೆ ರಾಜ್ಯಾದ್ಯಂತ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿದ್ದವು.

ಫೆ. 27ರಂದು ನಡೆದ ರಾಜ್ಯಸಭಾ ಚುನಾವಣೆಯ (Rajya Sabha Elections) ವಿಜಯೋತ್ಸವ ಸಂದರ್ಭದಲ್ಲಿ ವಿಧಾನ ಸೌಧದಲ್ಲೇ (Vidhana Soudha) ಪಾಕಿಸ್ತಾನ್‌ ಜಿಂದಾಬಾದ್‌ (Pakistan Zindabad) ಘೋಷಣೆ ಮಾಡಿದ ಪ್ರಕರಣಕ್ಕೆ (Sedition Case) ಸಂಬಂಧಿಸಿ ಬಂಧಿತರಾದ ಮೂವರಿಗೆ (Three Accused gets Bail) ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು (ಎಸಿಎಂಎಂ) ಷರತ್ತುಬದ್ಧ ಜಾಮೀನು (Bangalore Court) ನೀಡಿತ್ತು.

‌ಚಿಕ್ಕೋಡಿಯಲ್ಲಿ ಕಾಂಗ್ರೆಸ್‌ಗೆ ಗೆಲವು

ಇನ್ನೂ ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ, ಬಿಜೆಪಿ ಅಭ್ಯರ್ಥಿ ಅಣ್ಣಸಾಬ್ ಜೊಲ್ಲೆ ವಿರುದ್ಧ 96,253 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ 6,80,179 ಮತ ಗಳಿಸಿದರೆ, ಬಿಜೆಪಿ ಅಭ್ಯರ್ಥಿ ಅಣ್ಣಾಸಾಬ ಜೋಲ್ಲೆ 5,83,926 ಮತ ಪಡೆದು, 96,253 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಬಿಜೆಪಿಯ ಭದ್ರಕೋಟೆಯನ್ನು ಕಾಂಗ್ರೆಸ್ ವಶಪಡಿಸಿಕೊಂಡಿದೆ. ಚಿಕ್ಕೋಡಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂತಸ ಮನೆ ಮಾಡಿದ್ದು, ಸಚಿವ ಸತೀಶ್ ಜಾರಕಿಹೊಳಿ ಹೋಳಿಗೆ ಗುಲಾಬಿ ಬಣ್ಣ ಹಂಚಿ ಸಂಭ್ರಮಾಚರಣೆ ಮಾಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಧಾರವಾಡ

Dharwad Election Result 2024: ಪ್ರಲ್ಹಾದ್‌ ಜೋಶಿಗೆ ‘ಧಾರವಾಡ ಪೇಡಾ’; ಅಸೂಟಿಗೆ ಸೋಲು

Dharwad Election Result 2024: ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಪ್ರಲ್ಹಾದ್‌ ಜೋಶಿ ಅವರು ಸತತ ನಾಲ್ಕು ಬಾರಿ ಗೆಲುವು ಸಾಧಿಸಿ, ಐದನೇ ಬಾರಿಗೆ ಬಿಜೆಪಿಯಿಂದ ಕಣಕ್ಕಿಳಿದಿದ್ದರು. ಇವರಿಗೆ ಹೊಸಮುಖವಾದ ವಿನೋದ್ ಅಸೂಟಿ ಅವರು ಕಾಂಗ್ರೆಸ್‌ನಿಂದ ಸ್ಪರ್ಧೆಯೊಡ್ಡಿದ್ದರು. ತೀವ್ರ ಪೈಪೋಟಿ, ಪ್ರತಿಷ್ಠೆಯ ಕಣವಾದಲ್ಲಿ ಧಾರವಾಡದಲ್ಲಿ ಯಾರು ಗೆಲುವು ಸಾಧಿಸಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿತ್ತು.

VISTARANEWS.COM


on

Dharwad Election Result 2024
Koo

ಧಾರವಾಡ: ಪೇಡಾಗಳಿಗೆ ಹೆಸರುವಾಸಿಯಾಗಿರುವ ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ (Dharwad Election Result 2024) ಸತತ ನಾಲ್ಕು ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅವರು ಐದನೇ ಬಾರಿಗೆ ಗೆಲುವು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಕಾಂಗ್ರೆಸ್‌ನ ವಿನೋದ್‌ ಅಸೂಟಿ (Vinod Asooti) ಅವರು ಅವರ ವಿರುದ್ಧ ಪ್ರಲ್ಹಾದ್‌ ಜೋಶಿ ಅವರು ವಿಜಯದ ನಗೆ ಬೀರಿದ್ದಾರೆ.

ಗೆಲುವಿನ ಅಂತರ ಎಷ್ಟು?

ಪ್ರಲ್ಹಾದ್‌ ಜೋಶಿ (ಬಿಜೆಪಿ): 7,13,649

ವಿನೋದ್‌ ಅಸೂಟಿ (ಕಾಂಗ್ರೆಸ್): 6,17,616‌

ಜೋಶಿ ಗೆಲುವಿನ ಅಂತರ: 96,033

ಪ್ರಧಾನಿ ನರೇಂದ್ರ ಮೋದಿ ಅವರ ಅಲೆ, ಧಾರವಾಡ ಕ್ಷೇತ್ರದಲ್ಲಿ ಪ್ರಬಲ ಸಮುದಾಯಗಳ ಬೆಂಬಲ, ಕೇಂದ್ರ ಸಚಿವರಾಗಿ ಕ್ಷೇತ್ರಕ್ಕೆ ತಂದಿರುವ ಅಭಿವೃದ್ಧಿ ಯೋಜನೆಗಳು, ವಂದೇ ಭಾರತ್‌ ರೈಲು ಸೇರಿ ಹಲವು ಮೂಲ ಸೌಕರ್ಯಗಳು ಪ್ರಲ್ಹಾದ್‌ ಜೋಶಿ ಅವರಿಗೆ ವರದಾನವಾಗುವ ಲಕ್ಷಣಗಳಿದ್ದವು. ಕಳೆದ ನಾಲ್ಕು ಬಾರಿ ಗೆದ್ದು, ಕ್ಷೇತ್ರದ ಜನರ ಬೆಂಬಲ, ವಿಶ್ವಾಸ ಗಳಿಸಿರುವ ಪ್ರಲ್ಹಾದ್‌ ಜೋಶಿ ಅವರು ಸತತ ಐದನೇ ಬಾರಿಗೆ ಜಯಿಸುವ ವಿಶ್ವಾಸದಲ್ಲಿದ್ದರು. ಅದರಂತೆ, ಕ್ಷೇತ್ರದ ಜನ ಜೋಶಿ ಅವರನ್ನೇ ಗೆಲ್ಲಿಸಿದ್ದಾರೆ.

Dharwad Lok Sabha Constituency

ಗದಗ ಜಿಲ್ಲೆ ಶಿರಹಟ್ಟಿಯ ಭಾವೈಕ್ಯ ಪೀಠದ ದಿಂಗಾಲೇಶ್ವರ ಸ್ವಾಮೀಜಿ ಅವರ ವಿರೋಧದಿಂದಾಗಿ ಪ್ರಲ್ಹಾದ್‌ ಜೋಶಿ ಅವರಿಗೆ ತುಸು ಹಿನ್ನಡೆಯುಂಟಾಗಿತ್ತು. ಪಕ್ಷೇತರರಾಗಿ ದಿಂಗಾಲೇಶ್ವರ ಸ್ವಾಮೀಜಿ ಅವರು ಕಣಕ್ಕೂ ಇಳಿದಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಅವರು ಚುನಾವಣೆಯಿಂದ ಹಿಂದೆ ಸರಿದರೂ ಅವರ ಬೆಂಬಲವು ಕಾಂಗ್ರೆಸ್‌ ಅಭ್ಯರ್ಥಿಗಿತ್ತು. ಇದು ಜೋಶಿ ಅವರಿಗೆ ಹಿನ್ನಡೆ ತಂದರೂ ಅಚ್ಚರಿ ಇಲ್ಲ ಎನ್ನಲಾಗುತ್ತಿತ್ತು. ಆದರೆ, ಎಲ್ಲ ಲೆಕ್ಕಾಚಾರವೂ ತಲೆಕೆಳಗಾಗಿದೆ.

2018ರಲ್ಲಿ ನವಲಗುಂದ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದ ವಿನೋದ್ ಅಸೂಟಿಯವರು ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಈ ಬಾರಿ ಕಾಂಗ್ರೆಸ್‌ ಲಿಂಗಾಯತರ ಬದಲು ಕುರುಬ ಸಮುದಾಯದ ವಿನೋದ್ ಅಸೂಟಿ ಅವರಿಗೆ ಟಿಕೆಟ್‌ ನೀಡಿತ್ತು. ಇದು ಕ್ಷೇತ್ರದಲ್ಲಿ ಹಿಂದುಳಿದವರ ಮತ ಸೆಳೆಯಲು ಕಾರಣವಾಗಲಿದೆ ಎಂಬುದು ಪಕ್ಷದ ರಣತಂತ್ರವಾಗಿತ್ತು. ಗ್ಯಾರಂಟಿ ಯೋಜನೆಗಳಂತೂ ಸಕಾರಾತ್ಮಕ ಪ್ರಭಾವವನ್ನೇ ಬೀರಿದ್ದವು. ಇದರ ಮಧ್ಯೆಯೂ ಕ್ಷೇತ್ರದಲ್ಲಿ ಮೋದಿ ಅಲೆ ಕೆಲಸ ಮಾಡಿದೆ ಎನ್ನಲಾಗಿದೆ.

2019, 2014ರ ಫಲಿತಾಂಶ ಏನಾಗಿತ್ತು?

2019ರ ಲೋಕಸಭೆ ಚುನಾವಣೆಯಲ್ಲಿ ಪ್ರಲ್ಹಾದ್‌ ಜೋಶಿ ಅವರು ಕಾಂಗ್ರೆಸ್‌ನ ವಿನಯ್‌ ಕುಲಕರ್ಣಿ ಅವರ ವಿರುದ್ಧ 2.05 ಲಕ್ಷ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದರು. 2014ರ ಸಾರ್ವತ್ರಿಕ ಚುನಾವಣೆಯಲ್ಲೂ ಪ್ರಲ್ಹಾದ್‌ ಜೋಶಿ ಅವರೇ ಜಯಿಸಿದ್ದರು. ಇವರು ವಿನಯ್‌ ಕುಲಕರ್ಣಿ ಅವರ ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳ ಅಂತರಗಿಂದ ಜಯಭೇರಿ ಬಾರಿಸುವ ಮೂಲಕ ಕ್ಷೇತ್ರದಲ್ಲಿ ಬಿಜೆಪಿ ಹಿಡಿತವನ್ನು ಮತ್ತಷ್ಟು ಬಿಗಿಗೊಳಿಸಿದ್ದರು. ನರೇಂದ್ರ ಮೋದಿ ಅವರ ಅಲೆಯೂ ಪ್ರಲ್ಹಾದ್‌ ಜೋಶಿ ಅವರಿಗೆ ವರದಾನವಾಗಿತ್ತು.

ಇದನ್ನೂ ಓದಿ: Shivamogga Election Result 2024: ಶಿವಮೊಗ್ಗದಲ್ಲಿ ಬಿಜೆಪಿಯ ಬಿ.ವೈ.ರಾಘವೇಂದ್ರಗೆ ವಿಜಯಮಾಲೆ

Continue Reading
Advertisement
Anna Lezhneva
ರಾಜಕೀಯ17 mins ago

Anna Lezhneva: ಚುನಾವಣೆ ಗೆದ್ದು ಬಂದ ಪವನ್‌ಗೆ ತಿಲಕವಿಟ್ಟು ಸ್ವಾಗತಿಸಿದ ಈ ಮಹಿಳೆ ಯಾರು?

BJP celebration about lok sabha election results
ಕರ್ನಾಟಕ20 mins ago

R Ashok: ಸೋಲಿನ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್‌. ಅಶೋಕ್‌ ಆಗ್ರಹ

MLC TA Sharavana latest statement about lok sabha election results 2024
ಕರ್ನಾಟಕ21 mins ago

TA Sharavana: ಫಲಿತಾಂಶದಿಂದ ಬಲಿಷ್ಠವಾದ ಜೆಡಿಎಸ್‌: ಟಿ.ಎ.ಶರವಣ

Election Results 2024
ಪ್ರಮುಖ ಸುದ್ದಿ22 mins ago

Election Results 2024: ಬಿಜೆಪಿ ಹಿನ್ನಡೆ ನಡುವೆಯೂ ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಧಾನಿ ಆಗುವುದು ಖಚಿತ!

Election Results 2024
ಪ್ರಮುಖ ಸುದ್ದಿ31 mins ago

Election Results 2024: ಲೋಕಸಭೆ ಚುನಾವಣೆಯ ರಾಜ್ಯವಾರು ಬಲಾಬಲ ಹೀಗಿದೆ

Assault Case
ಕರ್ನಾಟಕ43 mins ago

Assault Case: ಬೆಳ್ತಂಗಡಿಯಲ್ಲಿ ಬಿಜೆಪಿ ಮುಖಂಡನ ಮೇಲೆ ತಲ್ವಾರ್‌ನಿಂದ ಹಲ್ಲೆ; ಸುರಪುರದಲ್ಲಿ ರಾಜುಗೌಡ ಅಳಿಯನ ಕಾರಿನ ಮೇಲೆ ಕಲ್ಲೆಸೆತ

Narendra Modi Election
ದೇಶ1 hour ago

Narendra Modi Election: ಚುನಾವಣೆ ಫಲಿತಾಂಶದ ಬಳಿಕ ತಾಯಿಯ ನೆನೆದು ಭಾವುಕರಾದ ಮೋದಿ

Karnataka Election Results 2024
ಕರ್ನಾಟಕ1 hour ago

Karnataka Election Results 2024: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿ ಆಗಿದ್ರೆ ಕಾಂಗ್ರೆಸ್‌ ಅಧಿಕಾರಕ್ಕೆ ಬರ್ತಿರಲಿಲ್ಲ: ಎಚ್‌ಡಿಕೆ

Novak Djokovic
ಕ್ರೀಡೆ1 hour ago

Novak Djokovic: ಫ್ರೆಂಚ್ ಓಪನ್‌ ಟೂರ್ನಿಯಿಂದ ಹಿಂದೆ ಸರಿದ ಜೊಕೊವಿಕ್

Election Results 2024
Lok Sabha Election 20242 hours ago

Election Results 2024: ತ.ನಾಡಿನಲ್ಲಿ ಪೈಪೋಟಿ ನೀಡಿ ಸೋತ ಅಣ್ಣಾಮಲೈ; ಬಿಜೆಪಿ ಮತ ಪ್ರಮಾಣ ಶೇ. 3.57ರಿಂದ 11.04ಕ್ಕೆ ಜಿಗಿತ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ16 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 day ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌