Heavy Rains | ಮಳೆಗೆ ಬೆಳೆ ನಷ್ಟ; ಮನೆಗಳಿಗೆ ನೀರು ನುಗ್ಗಿ ಜನರ ಪರದಾಟ - Vistara News

ಕರ್ನಾಟಕ

Heavy Rains | ಮಳೆಗೆ ಬೆಳೆ ನಷ್ಟ; ಮನೆಗಳಿಗೆ ನೀರು ನುಗ್ಗಿ ಜನರ ಪರದಾಟ

ಜಮೀನುಗಳ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಪರಿಹಾರ ನೀಡಬೇಕು ಎಂದು ಜನರು ಆಗ್ರಹಿಸಿದ್ದಾರೆ. ಅನೇಕ ಕಡೆಗಳಲ್ಲಿ ಪ್ರತಿಭಟನೆಗಳೂ ನಡೆದಿವೆ.

VISTARANEWS.COM


on

RAIN
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ರಾಜ್ಯದಲ್ಲಿ ಸತತ ಮಳೆಯಿಂದ(Rain) ವಿವಿಧೆಡೆ ಅಪಾರ ಬೆಳೆಹಾನಿ ಜತೆಗೆ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

114 ಮನೆಗಳಿಗೆ ಹಾನಿ: ಬಾಗಲಕೋಟೆ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ 114 ಮನೆಗಳಿಗೆ ಭಾಗಶಃ ಹಾನಿಯಾಗಿ, ಒಂದು ಮನೆ ಸಂಪೂರ್ಣ ಹಾನಿಯಾಗಿರುವುದರಿಂದ ಜನರು ಪರದಾಡುವಂತಾಗಿದೆ. ಮುಧೋಳ ತಾಲೂಕಿನ ಮಿರ್ಜಿ ಸೇತುವೆ ಜಲಾವೃತಗೊಂಡಿದ್ದು, ಸೇತುವೆ ಮೇಲೆ ನೀರು ಹರಿಯುತ್ತಿರುವುದರಿಂದ ಸಾರಿಗೆ ಸಂಪರ್ಕ ಸ್ಥಗಿತವಾಗಿದೆ. ಪೆಟ್ಲೂರ ಕ್ರಾಸ್ ಬಳಿಯ ಜಮೀನುಗಳಲ್ಲಿ ಸೂರ್ಯಕಾಂತಿ ಬೆಳೆ ಸೇರಿ ಹಲವು ಬೆಳೆಗಳು ಜಲಾವೃತವಾಗಿವೆ. ರಬಕವಿ-ಬನಹಟ್ಟಿ ತಾಲೂಕಿನ ಧವಳೇಶ್ವರ ಸೇತುವೆಯೂ ಜಲಾವೃತವಾಗಿ ರಸ್ತೆ ಸಂಪರ್ಕ ಬಂದ್ ಆಗಿದೆ. ಜತೆಗೆ ಜಿಲ್ಲೆಯ ಹಲವೆಡೆ ಜಮೀನುಗಳಿಗೆ ಮಳೆ ನೀರು ನುಗಿದೆ. ಜಮಖಂಡಿ ತಾಲೂಕಿನಲ್ಲಿ ಜಮೀನುಗಳಿಗೆ ನೀರು ನುಗ್ಗಿದೆ.

ಭತ್ತದ ಗದ್ದೆಗೆ ನುಗಿದ ನೀರು: ಇನ್ನು ವಿಜಯನಗರ ಜಿಲ್ಲೆಯಲ್ಲೂ ಧಾರಾಕಾರ ಮಳೆ ಸುರಿದಿದೆ. ಹೂವಿನ ಹಡಗಲಿ ತಾಲೂಕಿನ ಬ್ಯಾಲಹುಣಸಿ ಗ್ರಾಮದಲ್ಲಿ ಭತ್ತದ ಬೆಳೆಗೆ ಅಪಾರ ಪ್ರಮಾಣದ ನೀರು ಹೋಗಿದ್ದು, ‌ಕಟಾವಿನ ಹಂತಕ್ಕೆ ತಲುಪಿರೋ ಸಾವಿರಾರು ಎಕರೆ ಭತ್ತದ ಗದ್ದೆಗಳು ನಾಶವಾಗುವ ಭೀತಿ ರೈತರನ್ನು ಕಾಡುತ್ತಿದೆ. ವರುಣನ ಅವಾಂತರಕ್ಕೆ ವಿಜಯಪುರ ತಾಲೂಕು ಹೊನ್ನುಟಗಿ ಗ್ರಾಮದ ರೈತ ಸುರೇಶ ಬಿಸನಾಳ ಜಮೀನಿನಲ್ಲಿದ್ದ ಶೇಂಗಾ ಬೆಳೆ ನಾಶವಾಗಿದೆ. ಕೆಲವೆಡೆ ಕಟಾವು ಮಾಡಿದ ಶೇಂಗಾ ತೇವಾಂಶದಿಂದ ಕಪ್ಪುಬಣ್ಣಕ್ಕೆ ತಿಗುಗಿದೆ.

ರಸ್ತೆಯಲ್ಲಿ ಪೈರು ನಾಟಿ ಮಾಡಿ ಆಕ್ರೋಶ: ಮಂಡ್ಯ ಜಿಲ್ಲೆಯಲ್ಲಿ ಜೋರು ಮಳೆಯಿಂದ ಹಲವು ರಸ್ತೆಗಳು ಹಾಳಾಗಿದ್ದು, ದುರಸ್ತಿ ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಚೊಟ್ಟನಹಳ್ಳಿಯಲ್ಲಿ ಮೋರಿ ಅವ್ಯವಸ್ಥೆ, ರಸ್ತೆ ಕೆಸರುಗದ್ದೆಯಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ರಸ್ತೆಯಲ್ಲೆ ರಾಗಿ ಪೈರು ನಾಟಿ ಮಾಡಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.

protest
ಚೊಟ್ಟನಹಳ್ಳಿ ಗ್ರಾಮಸ್ಥರ ಪ್ರತಿಭಟನೆ

ತುಂಗಭದ್ರಾ ಜಲಾಶಯಕ್ಕೆ ಅಪಾರ ನೀರು: ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯ ತುಂಗಭದ್ರಾ ಜಲಾಶಯಕ್ಕೆ ಶನಿವಾರ 61189 ಕ್ಯೂಸೆಕ್‌ ನೀರು ಒಳಹರಿವು, 285 ಕ್ಯೂಸೆಕ್ ನೀರು ಹೊರ ಹರಿವು ಇದೆ. ಸದ್ಯ ಜಲಾಶಯದಲ್ಲಿ 19.766 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯದ ಒಟ್ಟು 100.089 ಟಿಎಂಸಿ, ಗರಿಷ್ಠ ಮಟ್ಟ 1633 ಅಡಿ, ಇಂದಿನ ಮಟ್ಟ 1600 ಅಡಿ ಇದೆ. ಹೆಚ್ಚಿದ ಪರಿಣಾಮದಿಂದ ಹಿನ್ನೀರ ಪ್ರದೇಶದ ಬೆಳೆಗಳಿಗೆ ನೀರು ನುಗ್ಗಿ, ಉದ್ದು, ಅಲಸಂದಿ, ಮೆಕ್ಕೆಜೋಳ ಸೇರಿ ಇನ್ನಿತರ ಬೆಳೆ ನಷ್ಟವಾಗಿದೆ. ಕೊಪ್ಪಳದ ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್ ಬಂದ್ ಆಗಿದ್ದರಿಂದ ಅಪಾರ ಪ್ರಮಾಣದ ಬೆಳೆ ಹಾನಿದ್ದು, ಮಾಧ್ಯಮಗಳ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು ಗೇಟ್‌ಗಳನ್ನು ತೆಗೆಸಿದ್ದಾರೆ. ತುಂಗಭದ್ರಾ ಜಲಾಶಯದ ಹಿನ್ನೀರಲ್ಲಿ ಭಾರಿ ಗಾತ್ರದ ಮೀನು ಪತ್ತೆಯಾಗಿದೆ. ತಾಲೂಕಿನ ತಿಗರಿ ಬಳಿ ಸುಮಾರು 20 ಕೆಜಿ ತೂಕದ ಮೀನು ಕಂಡು ಬಂದಿದ್ದು, ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಮಾಡಿದ್ದಾರೆ.

ಮಳೆ ಹಾನಿ ವೀಕ್ಷಣೆ
ಶಿವಮೊಗ್ಗ ನಗರದ ವಿವಿಧೆಡೆ ಭೇಟಿ ನೀಡಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಳೆ ಹಾನಿ ಪರಿಶೀಲಿಸಿ, ಸಾರ್ವ ಜನಿಕರ ಆಲಿಸಿದರು. ಶಾಸಕ ಕೆ.ಎಸ್.ಈಶ್ವರಪ್ಪ , ಎಂಎಲ್ಸಿ ರುದ್ರೇಗೌಡ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಇದ್ದರು. ಇನ್ನು ಕೊಪ್ಪಳ ತಾಲೂಕಿನಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಭೇಟಿ ಹಿರೇಸಿಂದೋಗಿ ಬಳಿಯ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ರೈತರ ಜಮೀನುಗಳಿಗೆ ನೀರು ನುಗಿ ಬೆಳೆಹಾನಿಯಾಗಿರುವುದನ್ನು ಪರಿಶೀಲಿಸಿದರು.

HOME MINISTER VISIT
ಗೃಹಸಚಿವ ಆರಗ ಜ್ಞಾನೇಂದ್ರ ಪರಿಶೀಲನೆ

ಸಂತ್ರಸ್ತ ಕುಟುಂಬಗಳಿಗೆ ಪರಿಹಾರ
ಬೆಂಗಳೂರಿನಲ್ಲಿ ಭಾರಿ ಮಳೆಯಿಂದ 3453 ಮನೆಗಳು ಹಾನಿಯಾಗಿದ್ದು, ಪ್ರತಿ ಸಂತ್ರಸ್ತ ಕುಟುಂಬಕ್ಕೆ 25 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಬಿಬಿಎಂಪಿ ವಿಶೇಷ ಆಯುಕ್ತ ಶರತ್‌ ತಿಳಿಸಿದ್ದಾರೆ. 8.63 ಕೋಟಿ ರೂಪಾಯಿ ಪರಿಹಾರಧನ ನೀಡಲು ಕ್ರಮ ಕೈಗೊಳ್ಳಲಾಗಿದ್ದು, ಸರ್ವೇ ಕಾರ್ಯ ಮುಂದುವರಿಯುತ್ತಿದೆ. ಇಂದಿನಿಂದ ಹಣ ವರ್ಗಾವಣೆ ಆಗುತ್ತದೆ ಎಂದು ತಿಳಿಸಿದ್ದಾರೆ.

BUS

ಸಾರಿಗೆ ಬಸ್ ಚಾಲಕನ ದುಸ್ಸಾಹಸ
ನಿರಂತರ ಮಳೆಯಿಂದ ಸೇತುವೆಯ ಮೇಲೆ ನೀರು ಹರಿಯುತ್ತಿದ್ದರೂ ಲೆಕ್ಕಿಸದೆ ‌ಚಾಲಕ ಬಸ್‌ ಚಾಲನೆ ಮಾಡಿರುವುದು ವಿಜಯಪುರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹಾಳ್‌ ತಿಮ್ಮಲಾಪುರದ ಬಳಿ ನಡೆದಿದೆ. ಅರ್ಧ ಬಸ್‌ ಮುಳಗುವಷ್ಟು ನೀರು ಹರಿಯುತ್ತಿದ್ದರೂ ಇದ್ಯಾವುದನ್ನು ಲೆಕ್ಕಿಸದೆ ಬಸ್ಸನ್ನು ಚಾಲನೆ ಮಾಡಿದ್ದು, ಪ್ರಾಣದ ಹಂಗು ತೊರೆದು ಬಸ್ ಅನ್ನು ಸೇತುವೆ ದಾಟಿಸಿದ್ದಾನೆ ಎಂದು ಕೆಲವರು ಹೇಳುತ್ತಿದ್ದರೆ, ಅಷ್ಟು ಮಳೆ ನೀರಲ್ಲಿ ಹಳ್ಳ ದಾಟಿಸೋ ಅವಶ್ಯಕತೆ ಇರಲಿಲ್ಲಾ ಎಂದು ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ.

87 ಮನೆಗಳಿಗೆ ಹಾನಿ: ಹಾವೇರಿ ಜಿಲ್ಲೆಯಲ್ಲಿ ಮಳೆಯ ಆರ್ಭಟದಿಂದ 87 ಮನೆಗಳಿಗೆ ಹಾನಿಯಾಗಿದ್ದು, 370 ಹೆಕ್ಟೇರ್ ಕೃಷಿ ಬೆಳೆ ಹಾನಿ, 76 ಹೆಕ್ಟೇರ್ ತೋಟಗಾರಿಕೆ ಬೆಳೆ ನಷ್ಟವಾಗಿದೆ. ಮೇ ತಿಂಗಳಲ್ಲಿ 40 ಮಿ.ಮಿಮೀ ವಾಡಿಕೆ ಮಳೆಯಾಗಬೇಕು, ಆದರೆ ಈ ಬಾರಿ 186 ಮಿ.ಮೀ ಮಳೆಯಾಗಿದೆ.

ಮಳೆಯಿಂದ ಅನುಕೂಲ, ಅನಾನುಕೂಲ : ಸಚಿವ ಗೋವಿಂದ್ ಕಾರಜೋಳ

ಬೆಳಗಾವಿ: ಕಳೆದ ನಾಲ್ಕು ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆಯಾಗಿದೆ. ಇದರಿಂದ ತೊಂದರೆ ಹಾಗೂ ಅನುಕೂಲ ಎರಡೂ ಆಗಿದೆ. ಮಳೆ ಹಾನಿ ಪರಿಹಾರ ಒದಗಿಸಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಳೆಯಿಂದ 10% ಜನರಿಗೆ ತೊಂದರೆಯಾಗಿದ್ದು, ಚಿಕ್ಕೋಡಿಯಲ್ಲಿ ಡಿಸಿಗೆ ಸಭೆ ನಡೆಸಲು, ನದಿ ತೀರದಲ್ಲಿ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ. ಹಣಮಂತ ‌ನಿರಾಣಿ ಒಳ್ಳೆಯ ಅಭ್ಯರ್ಥಿಯಾಗಿದ್ದು, ಅರುಣ್ ಶಹಾಪುರ ಆ್ಯಕ್ಟಿವ್ ಆಗಿದ್ದು, ‌ಶಿಕ್ಷಕ್ಷರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಮೋದಿ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಸಾಧನೆಯನ್ನು ಮುಂದಿಟ್ಟುಕೊಂಡು ಜನರ ಬಳಿ ಮತಯಾಚನೆ ಮಾಡುತ್ತೇವೆ ಎಂದರು.

ಬಣ ರಾಜಕೀಯ ಇಲ್ಲ: ಬಿಜೆಪಿ ಎಲ್ಲ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿದೆ. ಜಾರಕಿಹೊಳಿ ಬ್ರದರ್ಸ್ ಸೇರಿ ಎಲ್ಲ ಮುಖಂಡರು ಸಭೆಗೆ ಬರ್ತಾರೆ. ಪಕ್ಷದಲ್ಲಿ ಬಣ ರಾಜಕೀಯ ಇಲ್ಲ, ಕೆಲವು ವಿಷಯಗಳಲ್ಲಿ ಭಿನ್ನಭಿಪ್ರಾಯ ಸಹಜ, ಇದು ಎಲ್ಲ ಪಕ್ಷಗಳಲ್ಲೂ ಇದೆ ಎಂದರು. ಸಿಎಂ ಆದ್ರೆ ಸಾಲ ಮನ್ನಾ ಮಾಡುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, 2023ರ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಆದರೆ ದೇಶದಲ್ಲಿ ಮೋಸಗಾರಿಕೆ ಮಾಡಿಕೊಂಡು ಕಾಂಗ್ರೆಸ್ ಆಡಳಿತ ಮಾಡಿದೆ. ಜನರಿಗೆ ಬೇಕಾಗಿರುವುದು ಅಕ್ಕಿ ಅಲ್ಲ ಸ್ವಾಭಿಮಾನದ ಬದುಕು ಬೇಕಾಗಿದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ | Bengaluru Rain | ಅಬ್ಬರಿಸಿದ ಮಳೆ-ತತ್ತರಿಸಿದ ಬೆಂಗಳೂರು: ಇಬ್ಬರು ಕಾರ್ಮಿಕರ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಮರು ಮತ ಎಣಿಕೆಯಲ್ಲೂ ಜಯ ಸಾಧಿಸಿದ ಶಾಸಕ ಟಿ.ಡಿ ರಾಜೇಗೌಡ

VISTARANEWS.COM


on

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್​ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ. ಹೈಕೋರ್ಟ್ ಆದೇಶದ ಮೇರೆಗೆ ಇಂದು ಅಂಚೆ ಮತಗಳ ಮರು ಎಣಿಕೆ ಮಾಡಲಾಯಿತು. ಹಾಲಿ ಮತ್ತು ಮಾಜಿ ಶಾಸಕರ ನಡುವೆ ಮರು ಎಣಿಕೆ ಫೈಟ್ ಜೋರಾಗಿತ್ತು. ಸಾಕಷ್ಟು ಕುತೂಹಲದ ಮಧ್ಯೆ ಇದೀಗ ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್​ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರ ತೀವ್ರ ಕುತೂಹಲ ಮೂಡಿಸಿತ್ತು. ಅಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು, ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರ ವಿರುದ್ಧ ಕೇವಲ 201 ಮತಗಳ ಅಂತರದಲ್ಲಿ ಸೋಲನುಭವಿಸಿದ್ದರು. ಈ ಚುನಾವಣೆಯಲ್ಲಿ ಚಲಾವಣೆಯಾದ 1822 ಅಂಚೆ ಮತಗಳ ಪೈಕಿ 279 ಮತಗಳನ್ನು ತಿರಸ್ಕೃತಗೊಳಿಸಲಾಗಿತ್ತು. ಈ ಫಲಿತಾಂಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜೀವರಾಜ್ ಅವರು ಮರು ಎಣಿಕೆಗೆ ಮನವಿ ಮಾಡಿದ್ದರು.
ಆದರೆ ಅಂದಿನ ಜಿಲ್ಲಾ ಚುನಾವಣಾಧಿಕಾರಿಗಳು ಆ ಮನವಿಯನ್ನು ಪರಿಗಣಿಸದೆ ರಾಜೇಗೌಡರನ್ನು ವಿಜೇತರೆಂದು ಘೋಷಿಸಿದ್ದರು. ಈ ಕ್ರಮವನ್ನು ಪ್ರಶ್ನಿಸಿ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಇಂದು ಅಂಚೆ ಮತಗಳ ಮರು ಎಣಿಕೆಗೆ ಆದೇಶ ಹೊರಡಿಸಿತ್ತು. ಅದರಂತೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮರು ಎಣಿಕೆಯಲ್ಲೂ ಟಿ.ಡಿ.ರಾಜೇಗೌಡ ಅವರು ಜಯಭೇರಿ ಬಾರಿಸಿದ್ದಾರೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading
Advertisement
Latest9 hours ago

ಮರು ಮತ ಎಣಿಕೆಯಲ್ಲೂ ಜಯ ಸಾಧಿಸಿದ ಶಾಸಕ ಟಿ.ಡಿ ರಾಜೇಗೌಡ

Latest14 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest15 hours ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest2 days ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest2 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest2 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest2 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest3 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest3 days ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest3 days ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌