ಮಳೆಯಿಂದ ಬೆಂಗಳೂರಿನ 3,453 ಮನೆಗಳಿಗೆ ಹಾನಿ: 60% ಪರಿಹಾರ ಬಾಕಿ - Vistara News

ಬೆಂಗಳೂರು

ಮಳೆಯಿಂದ ಬೆಂಗಳೂರಿನ 3,453 ಮನೆಗಳಿಗೆ ಹಾನಿ: 60% ಪರಿಹಾರ ಬಾಕಿ

ರಾಜಕಾಲುವೆ ಒತ್ತುವರಿ ಕರಿತು ಅನೇಕ ಪ್ರಕರಣಗಳು ಈಗಾಗಲೇ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ. ಆದಷ್ಟು ಬೇಗ ಪ್ರಕರಣ ಇತ್ಯರ್ಥ ಬಗೆಹರಿಸಿ ತೆರವು ಮಾಡಲಾಗುವುದು ಎಂದು ಹೇಳಿದರು.

VISTARANEWS.COM


on

ಶೇ.೬೦ರಷ್ಟು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇತ್ತೀಚೆಗೆ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ 3,453 ಮನೆಗಳಿಗೆ ಹಾನಿಯಾಗಿದೆ. ಈಗಾಗಲೆ 40% ಪರಿಹಾರ ವಿತರಣೆ ಮಾಡಲಾಗಿದೆ ಎಂದು ಬಿಬಿಎಂಪಿ ಆಡಳಿತ ವಿಭಾಗದ ವಿಶೇಷ ಆಯುಕ್ತ ಎಸ್‌. ರಂಗಪ್ಪ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಂಗಪ್ಪ, ಮಳೆಯಿಂದಾಗಿ ಮನೆಗಳಿಗೆ ನೀರು ಹರಿದ ಪ್ರಕರಣದಲ್ಲಿ ಬಿಬಿಎಂಪಿ ಈಗಾಗಲೇ ಸರ್ವೆ ಮಾಡಿದೆ. ನಿಯಮದ ಪ್ರಕಾರ ನೆಲಮಹಡಿಗೆ ಮಾತ್ರ ಪರಿಹಾರ ನೀಡಲಾಗುತ್ತಿದೆ. ಮೊದಲನೆ ಮಹಡಿಯಲ್ಲಿರುವವರಿಗೆ ಹೆಚ್ಚು ಅನಾಹುತವಾಗಿಲ್ಲ. ನೆಲಮಹಡಿಯಲ್ಲಿ ಇದ್ದಮನೆಗಳಲ್ಲಿನ ವಸ್ತುಗಳು ಹಾನಿಗೊಳಗಾಗಿವೆ.

ಇದನ್ನೂ ಓದಿ | 24 ಗಂಟೆಯಲ್ಲಿ ಸರಾಸರಿ 27 ಮಿ.ಮೀ. ಮಳೆ: ರಾಜ್ಯಾದ್ಯಂತ ಅಪಾರ ಹಾನಿ

ನಗರದ 8 ವಲಯಗಳಲ್ಲಿ 3,453 ಮನೆಗಳಿಗೆ ಹಾನಿಯಾಗಿದೆ. ಒಟ್ಟು ಹಾನಿಯಾಗಿರುವ ಮನೆಗಳ ಪೈಕಿ 40% ಮನೆಗಳಿಗೆ ಪರಿಹಾರ ವಿತರಿಸಲಾಗಿದೆ. ಶೀಘ್ರದಲ್ಲೆ ಉಳಿದ 60% ಪರಿಹಾರವನ್ನೂ ವಿತರಣೆ ಮಾಡಲಾಗುತ್ತದೆ ಎಂದರು. ಭವಿಷ್ಯದಲ್ಲಿ ಮಳೆ ಬಂದಾಗ ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಮುನ್ನೆಚ್ಚರಿಕೆ ಕೈಗೊಳ್ಳಲಾಗುತ್ತಿದೆ ಎಂದರು.

ರಾಜಕಾಲುವೆ ಒತ್ತುವರಿ ತೆರವು ಮಾಡಲಾಗುತ್ತದೆ. ಈ ಸಂಬಂಧ 696 ಪ್ರಕರಣಗಳು ಈಗಾಗಲೇ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ. ಆದಷ್ಟು ಬೇಗ ಪ್ರಕರಣ ಇತ್ಯರ್ಥ ಬಗೆಹರಿಸಿ ತೆರವು ಮಾಡಲಾಗುವುದು ಎಂದು ಹೇಳಿದರು.

ಬ್ರಿಗೇಡ್ ರಸ್ತೆಯ ಶಾಪಿಂಗ್‌ ಮಾಲ್‌ನಿಂದ ಯುವತಿ ಬಿದ್ದು ಸಾವನ್ನಪ್ಪಿದ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ರಂಗಪ್ಪ, ನಗರದಲ್ಲಿರುವ ಎಲ್ಲ ಮಾಲ್‌ಗಳ ಸುರಕ್ಷತೆ ಕುರಿತಂತೆ ಬಿಬಿಎಂಪಿ ನಿಗಾ ವಹಿಸುತ್ತದೆ. ಒಂದು ವೇಳೆ ಮಾಲ್‌ನವರು ನಿಯಮ ಪಾಲನೆ ಮಾಡದೇ ಇದ್ದರೆ ಅವರ ಮೇಲೆ ಕ್ರಮಕ್ಕೆ ಸೂಚಿಸಲಾಗುವುದು ಎಂದು ಹೇಳಿದ್ದಾರೆ.

ಇದ್ದನೂ ಓದಿ: ಶಿವಮೊಗ್ಗ,ಬೆಂಗಳೂರು,ಮೈಸೂರನ್ನು ತೊಯ್ದ ಭಾರೀ ಮಳೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

TA Sharavana: ಮಂಡ್ಯದಿಂದ ಕುಮಾರಸ್ವಾಮಿ ಲೋಕಸಭೆಗೆ ಆಯ್ಕೆ; ಸಾಯಿಬಾಬಾ ಪ್ರಸಾದ ನೀಡಿ, ಅಭಿನಂದಿಸಿದ ಟಿ.ಎ.ಶರವಣ

TA Sharavana: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ, ವಿಧಾನ ಪರಿಷತ್‌ ಸದಸ್ಯ ಡಾ. ಟಿ.ಎ. ಶರವಣ ಅವರು, ಶಿರಡಿ ಸಾಯಿಬಾಬಾ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ, ಪ್ರಸಾದವನ್ನು ನೀಡುವುದರ ಮೂಲಕ ಎಚ್.ಡಿ. ಕುಮಾರಸ್ವಾಮಿ ಅವರನ್ನು ಅಭಿನಂದಿಸಿದರು.

VISTARANEWS.COM


on

TA Sharavana congratulated former CM hd Kumaraswamy who was elected to Lok Sabha from Mandya
Koo

ಬೆಂಗಳೂರು: ಮಂಡ್ಯ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ವಿಧಾನ ಪರಿಷತ್‌ ಸದಸ್ಯ, ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಡಾ. ಟಿ.ಎ. ಶರವಣ (TA Sharavana) ಅವರು ಶಿರಡಿ ಸಾಯಿಬಾಬಾ ಪ್ರಸಾದ ನೀಡಿ, ಅಭಿನಂದಿಸಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ, ವಿಧಾನ ಪರಿಷತ್‌ ಸದಸ್ಯ ಡಾ. ಟಿ.ಎ. ಶರವಣ, ಶಿರಡಿ ಸಾಯಿಬಾಬಾ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ, ಪ್ರಸಾದವನ್ನು ನೀಡುವುದರ ಮೂಲಕ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಶುಭ ಕೋರಿದರು.

ಫಲಿತಾಂಶದಿಂದ ಬಲಿಷ್ಠವಾದ ಜೆಡಿಎಸ್‌: ಟಿ.ಎ.ಶರವಣ

ಈ ಚುನಾವಣೆಯ ಫಲಿತಾಂಶವು ಜೆಡಿಎಸ್ (JDS) ಮತ್ತೊಮ್ಮೆ ಬಲಿಷ್ಠ ಪಕ್ಷ ಎನ್ನುವುದನ್ನು ಸಾಬೀತು ಮಾಡಿದೆ. ಸತತ ಮೂರನೇ ಬಾರಿಗೆ ಎನ್‌ಡಿಎ ಮೈತ್ರಿಕೂಟ ಗೆಲುವಿನ ಮೂಲಕ ಹೊಸ ದಾಖಲೆ ಬರೆದಿದೆ ಎಂದು ವಿಧಾನ ಪರಿಷತ್‌ ಸದಸ್ಯ ಟಿ.ಎ. ಶರವಣ ತಿಳಿಸಿದ್ದಾರೆ.

ಇದನ್ನೂ ಓದಿ: World Environment Day: ಬೆಂಗಳೂರಿನಲ್ಲಿ ಎನ್‌ಸಿಸಿ ತಂಡದಿಂದ ವಿಶೇಷ ಪರಿಸರ ಜಾಗೃತಿ ಕಾರ್ಯಕ್ರಮ

ಲೋಕಸಭಾ ಚುನಾವಣಾ ಫಲಿತಾಂಶ 2024 ರ ಕುರಿತು ಹೇಳಿಕೆ ನೀಡಿರುವ ಅವರು, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಪ್ರಧಾನಿ ಮೋದಿ ಅವರ ನಾಯಕತ್ವಕ್ಕೆ ದೇಶದ ಜನ ಆಯ್ಕೆ ಮಾಡಿದ್ದಾರೆ. ಸತತ ಮೂರನೇ ಬಾರಿಗೆ ಎನ್‌ಡಿಎ ಮೈತ್ರಿಕೂಟ ಗೆಲುವಿನ ಮೂಲಕ ಹೊಸ ದಾಖಲೆ ಬರೆದಿದೆ. ಬಿಜೆಪಿ-ಜೆಡಿಎಸ್‌ ಮೈತ್ರಿಯು ಒಂದು ಪ್ರಬಲ ರಾಜಕೀಯ ಶಕ್ತಿ ಎನ್ನುವುದು ಸಾಬೀತಾಗಿದೆ ಎಂದು ಹೇಳಿದ್ದಾರೆ.

ಜೆಡಿಎಸ್‌ ಪಕ್ಷವನ್ನು ಮುಗಿಸುವ ಸಂಚು ವಿಫಲ ಆಗಿದೆ. ಅಧಿಕೃತವಾಗಿ ಜೆಡಿಎಸ್‌ ಪಕ್ಷವು ಎರಡು ಸ್ಥಾನಗಳನ್ನು ಗೆದ್ದಿರಬಹುದು. ಆದರೆ ಸುಮಾರು 9 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲು ಜೆಡಿಎಸ್ ಸಹಕಾರ ಸಿಕ್ಕಿದೆ. ಹೀಗಾಗಿ ರಾಜ್ಯದಲ್ಲಿ ಜೆಡಿಎಸ್ ಪ್ರಬಲ ಶಕ್ತಿಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತ; ಇನ್ನೈದು ದಿನ ಭಾರಿ ವರ್ಷಧಾರೆ

ರಾಷ್ಟ್ರ ರಾಜಕಾರಣದಲ್ಲಿ ಮೋದಿ ಪ್ರಶ್ನಾತೀತ ನಾಯಕರಾಗಿ ಹೊರ ಹೊಮ್ಮಿದ್ದಾರೆ ಎಂದು ತಿಳಿಸಿರುವ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರವು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಂಡರೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನ ಗೆಲ್ಲಲು ಆಗಿಲ್ಲ, ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ, ವೋಟ್ ಬ್ಯಾಂಕ್ ಸೃಷ್ಟಿಸುವಲ್ಲಿ ಗ್ಯಾರಂಟಿ ಯೋಜನೆ ವಿಫಲವಾಗಿವೆ ಎಂದು ಅವರು ತಿಳಿಸಿದ್ದಾರೆ.

Continue Reading

ಮಳೆ

Karnataka Weather : ಭಾರಿ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತ; ಇನ್ನೈದು ದಿನ ಭಾರಿ ವರ್ಷಧಾರೆ

Karnataka Weather Forecast: ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ ಎಂದು (Rain News) ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆ ಭರ್ಜರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗಲಿದೆ.

ಬೆಳಗಾವಿ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಕೋಲಾರ, ಹಾಸನದ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಇನ್ನು ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಒಳನಾಡಿನ ಬೀದರ್‌, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳುರು, ಚಿತ್ರದುರ್ಗ, ದಾವಣಗೆರೆ, ಕೊಡಗು ಹಾಗೂ ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ವಿಜಯನಗರದ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾಗಲಿದೆ.

ಇದನ್ನೂ ಓದಿ: Physical Abuse : ಮಹಿಳೆಯರು ಚಳಿ ಬಿಡಿಸಲು ಬಂದಾಗ ಕಾಂಪೌಂಡ್‌ ಹಾರಿದ ಪುರಸಭೆ ಮಾಜಿ ಅಧ್ಯಕ್ಷೆಯ ಪತಿಗೆ ಧರ್ಮದೇಟು

ಮುಂದುವರಿದ ಮಳೆ ಅವಾಂತರ

ಕೋಲಾರದಲ್ಲಿ ಗುರುವಾರ ಸುರಿದ ದಿಢೀರ್‌ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತಗೊಂಡಿತ್ತು. ಸುಮಾರು 2-3 ಅಡಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಬೇಕಾಯಿತು. ದೊಡ್ಡ ದೊಡ್ಡ ವಾಹನಗಳು ಜಲಾವೃತಗೊಂಡ ರಸ್ತೆಯಲ್ಲೇ ಬಂದರೆ, ಬೈಕ್‌ ಸವಾರರು ತಳ್ಳಿಕೊಂಡು ಹೋಗುತ್ತಿದ್ದ ದೃಶ್ಯ ಕಂಡು ಬಂತು.

karnataka weather Forecast

ಇತ್ತ ಶಾಲಾ ‌ಮಕ್ಕಳು ಮನೆಗೆ ತೆರಳಲು ಹರಸಾಹಸ ಪಡೆಬೇಕಾಯಿತು. ಅಪಾಯವನ್ನು ಲೆಕ್ಕಿಸದೆ ಸೈಕಲ್‌ನಲ್ಲಿ ಹೋದ ಶಾಲಾ ವಿದ್ಯಾರ್ಥಿಯೊಬ್ಬ ನೀರಿನ ರಭಸಕ್ಕೆ ವಾಪಸ್‌ ಹಿಂದಕ್ಕೆ ಬಂದಿದ್ದ. ಅಂಡರ್‌ಪಾಸ್‌ನಲ್ಲಿ ನೀರು ಸರಿಯಾಗಿ ಹರಿದು ಹೋಗಲು ಆಗದ ಕಾರಣಕ್ಕೆ ಈ ಸಮಸ್ಯೆ ಆಗಿದೆ ಎಂದು ಸಾರ್ವಜನಿಕರು ಕಿಡಿಕಾರಿದರು.

karnataka weather Forecast

ಮಾವಿನ ಮಾರುಕಟ್ಟೆಗೆ ತೆರಳಲು ಇರುವ ಏಕೈಕ ಮಾರ್ಗವಿದು. ಪ್ರತಿ ಬಾರಿ ಮಳೆಯಾದರೂ ಇದೇ ಪರಿಸ್ಥಿತಿ ಎದುರಾಗುತ್ತದೆ. ಆದರೆ ಸಂಬಂಧ ಪಟ್ಟ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

Karnataka weather Forecast

ಇನ್ನೂ ರಾಜಧಾನಿ ಬೆಂಗಳೂರು ನಗರದಲ್ಲಿ ಮಳೆ ಅಬ್ಬರಕ್ಕೆ ಮರಗಳು ನೆಲಕ್ಕುರುಳಿವೆ. ಆದರೆ ಕೆಲವೆಡೆ ಮರಗಳ ತೆರವು ಕಾರ್ಯಾಚರಣೆ ನಡೆದಿಲ್ಲ. ರಸ್ತೆ ಹಾಗೂ ಫುಟ್‌ಪಾತ್‌ ಮಧ್ಯೆ ಮರದ ರೆಂಬೆ, ಕೊಂಬೆಗಳು ಬಿದ್ದಿವೆ. ಹೀಗಾಗಿ ಜನರ ಓಡಾಟ ಸೇರಿ ವ್ಯಾಪಾರಸ್ಥರು ಪರದಾಡಬೇಕಾಗಿದೆ. ಇನ್ನೂ ಜಯನಗರದಲ್ಲಿ ಮರಗಳು ಬಿದ್ದ ಕಾರಣ ವ್ಯಾಪಾರಸ್ಥರಿಗೆ ಅನಾನುಕೂಲವಾಗಿದೆ. ಬಿಬಿಎಂಪಿ‌ಯವರು ಮರ ಕತ್ತರಿಸಿ ಪಕ್ಕಕ್ಕೆ ಹಾಕಿ ಹೋಗಿದ್ದಾರೆ. ಆದರೆ ಅದನ್ನು ತೆರವು ಮಾಡದೆ ಇರುವುದರಿಂದ ವ್ಯಾಪಾರ ಮಾಡಲು ಕಷ್ಟವಾಗುತ್ತಿದೆ ಎಂದು ವೃದ್ಧೆಯೊಬ್ಬರು ಅಳಲು ತೋಡಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Valmiki Corporation Scam: ರಾಜೀನಾಮೆ ಸ್ವಯಂಪ್ರೇರಿತ, ಯಾರ ಒತ್ತಡಕ್ಕೂ ಮಣಿದಿಲ್ಲ: ಬಿ.ನಾಗೇಂದ್ರ

Valmiki Corporation Scam: ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ನಿಗಮದ ಅಧಿಕಾರಿ ಕೂಡ ನನ್ನ ಹೆಸರನ್ನು ಎಲ್ಲೂ ಪ್ರಸ್ತಾಪ ಮಾಡಿಲ್ಲ. ಆದರೂ ನಿಸ್ಪಕ್ಷಪಾತವಾಗಿ ತನಿಖೆ ನಡೆಯಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದೇನೆ ಎಂದು ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ.

VISTARANEWS.COM


on

Koo

ಬೆಂಗಳೂರು: ಕಳೆದ ಹತ್ತು ದಿನಗಳಿಂದ ವಾಲ್ಮೀಕಿ ನಿಗಮ ಅಕ್ರಮದ (Valmiki Corporation Scam) ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆ ಆಗುತ್ತಿದೆ. ವಿಪಕ್ಷದವರು ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧಿಕಾರಿ ಕೂಡ ನನ್ನ ಹೆಸರನ್ನು ಎಲ್ಲೂ ಪ್ರಸ್ತಾಪ ಮಾಡಿಲ್ಲ. ನನಗೆ ಯಾರ ಒತ್ತಡಜಕ್ಕೂ ಮಣಿದಿಲ್ಲ, ನಿಸ್ಪಕ್ಷಪಾತವಾಗಿ ತನಿಖೆ ನಡೆಯಲು ಸಚಿವ ಸ್ಥಾನಕ್ಕೆ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುತ್ತಿದ್ದೇನೆ. ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ತರುವುದು ಬೇಡ ಎಂದು ಈ ನಿರ್ಧಾರ ಕೈಗೊಂಡಿರುವುದಾಗಿ ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜೀನಾಮೆ ನೀಡುವುದು ನನ್ನ ಸ್ವ ನಿರ್ಧಾರವಾಗಿದೆ. ರಾಜೀನಾಮೆ ನೀಡಲು ಯಾರೂ ಒತ್ತಡ ಹಾಕಿಲ್ಲ. ಆತ್ಮ ಸಾಕ್ಷಿಯಾಗಿ ರಾಜೀನಾಮೆ ನೀಡುತ್ತಿದ್ದೇನೆ. ಇದಕ್ಕಾಗಿ ಸಿಎಂ ಬಳಿ ಸಮಯ ಕೇಳಿದ್ದೇನೆ. 7.30ಕ್ಕೆ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ. ಈ ಬಗ್ಗೆ ನಾನು ಸಿಎಂ, ಡಿಸಿಎಂ ಹಾಗೂ ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ನಾನು ಯಾವ ತಪ್ಪೂ ಮಾಡಿಲ್ಲ, ನಾನು ನಿರ್ದೋಷಿ. ಪ್ರಕರಣದಲ್ಲಿ ತನಿಖೆ ನಡೆದು ಸತ್ಯಾಂಶ ಜನರಿಗೆ ತಿಳಿಯಲಿದೆ ಎಂದು ತಿಳಿಸಿದ್ದಾರೆ.

ರಾಜೀನಾಮೆಗೆ ಬಿಜೆಪಿ ನಾಯಕರ ಒತ್ತಾಯ

ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿ, ರಾಜ್ಯಪಾಲರಿಗೆ ಗುರುವಾರ ಬೆಳಗ್ಗೆ ಮನವಿ ಪತ್ರಸಲ್ಲಿಸಿದ್ದರು. ನಂತರ ಸಚಿವ ಸ್ವಯಂ ಪ್ರೇರಿತವಾಗಿಯೇ ರಾಜೀನಾಮೆ ನೀಡಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದರು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ.

ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಈಗಾಗಲೇ ಎಸ್‌ಐಟಿ ರಚಿಸಿದೆ. ಒಂದು ವೇಳೆ ಸಿಬಿಐ ಎಂಟ್ರಿಯಾದರೆ ಎಸ್‌ಐಟಿಗೆ ತನಿಖೆ ನಡೆಸುವ ಅವಕಾಶ ಇರಲ್ಲ. ಹೀಗಾಗಿ ಸಿಬಿಐ ತನಿಖೆ ಬಿಸಿ ತಟ್ಟುವ ಮುನ್ನ ನಾಗೇಂದ್ರ ರಾಜಿನಾಮೆ ಪಡೆಯುವುದು ಸೂಕ್ತ ಎನ್ನುವ ಅಭಿಪ್ರಾಯ ವ್ಯಕ್ತವಾಗಿತ್ತು. ಹೀಗಾಗಿ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು. ನಂತರ ಅಧಿಕಾರಿಗಳ ಬಂಧನವಾಗಿತ್ತು.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿದೆ.

ಇದನ್ನೂ ಓದಿ | Prajwal Revanna Case: ಭವಾನಿ ರೇವಣ್ಣ ವಿರುದ್ಧ ಬಂಧನ ವಾರಂಟ್‌ ಹೊರಡಿಸಿದ ಕೋರ್ಟ್

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆಯುತ್ತಿದ್ದಾರೆ. ಶಿವಮೊಗ್ಗ ಮತ್ತು ಬೆಂಗಳೂರಿನ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

MLC Election: ವಿಧಾನ ಪರಿಷತ್ ಚುನಾವಣೆ; ಯತೀಂದ್ರ, ಸಿ.ಟಿ.ರವಿ ಸೇರಿ 11 ಅಭ್ಯರ್ಥಿಗಳ ಅವಿರೋಧ ಆಯ್ಕೆ, ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

MLC Election: ವಿಧಾನ ಪರಿಷತ್‌ ಚುನಾವಣೆಗೆ 11 ಅಭ್ಯರ್ಥಿಗಳು ಹೊರತುಪಡಿಸಿ ಯಾರೊಬ್ಬರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆ ಘೋಷಿಸಲಾಗಿದೆ.

VISTARANEWS.COM


on

ಸಿ.ಟಿ.ರವಿ, ಯತೀಂದ್ರ ಸಿದ್ದರಾಮಯ್ಯ ಮತ್ತು ಬಲ್ಕೀಸ್‌ ಬಾನು
Koo

ಬೆಂಗಳೂರು: ವಿಧಾನಪರಿಷತ್‌ ಚುನಾವಣೆಗೆ (MLC Election) ನಾಮಪತ್ರ ಸಲ್ಲಿಸಿದ್ದ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯಿಂದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಜೂನ್‌ 13ರಂದು ಮತದಾನ ನಿಗದಿಯಾಗಿತ್ತು. ಆದರೆ, 11 ಅಭ್ಯರ್ಥಿಗಳು ಹೊರತುಪಡಿಸಿ ಯಾರೊಬ್ಬರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆ ಘೋಷಿಸಲಾಗಿದೆ. ಕಾಂಗ್ರೆಸ್‌ನ 7, ಬಿಜೆಪಿಯ 3 ಹಾಗೂ ಜೆಡಿಎಸ್‌ನ ಒಬ್ಬರು ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದಾರೆ.

ವಿಧಾನ ಪರಿಷತ್‌ ನೂತನ ಸದಸ್ಯರ ಪಟ್ಟಿ (ಒಟ್ಟು 11)

ಕಾಂಗ್ರೆಸ್‌ ಸದಸ್ಯರು7
1.ಐವಾನ್‌ ಡಿಸೋಜ
2.ಕೆ.ಗೋವಿಂದರಾಜ್
3.ಜಗದೇವ ಗುತ್ತೇದಾರ್‌
4.ಬಲ್ಕೀಸ್‌ ಬಾನು
5.ಎನ್‌.ಎಸ್‌.ಭೋಸರಾಜು
6.ಡಾ.ಯತೀಂದ್ರ ಸಿದ್ದರಾಮಯ್ಯ‌,
7. ಎ. ವಸಂತ್‌ ಕುಮಾರ್

ಬಿಜೆಪಿ ಸದಸ್ಯರು-3
1.ಸಿ.ಟಿ.ರವಿ
2.ಎನ್‌.ರವಿಕುಮಾರ್
3.ಮಾರುತಿರಾವ್‌ ಮುಳೆ

ಜೆಡಿಎಸ್‌ ಸದಸ್ಯರು-1
1.ಟಿ.ಎನ್. ಜವರಾಯಿ ಗೌಡ

ಈ ಬಗ್ಗೆ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಸುತ್ತೋಲೆ ಹೊರಡಿಸಿದ್ದಾರೆ. ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ 11 ಸದಸ್ಯರನ್ನು ಆಯ್ಕೆ ಮಾಡಲು ಜೂನ್‌ 13ರಂದು ದ್ವೈವಾರ್ಷಿಕ ಚುನಾವಣೆ ನಿಗದಿಯಾಗಿತ್ತು. ಅದರಂತೆ ಜೂನ್ 3ರಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ಒಟ್ಟು 12 ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದರು. ನಾಮಪತ್ರಗಳ ಪರಿಶೀಲನೆಯ ಸಂದರ್ಭದಲ್ಲಿ ಆಸಿಫ್ ಪಾಷಾ ಆರ್.ಎಮ್. ಎಂಬುವವರ ನಾಮಪತ್ರವು ಸೂಚಕರಿಲ್ಲದ ಕಾರಣ ತಿರಸ್ಕೃತಗೊಂಡಿದ್ದು, ಉಳಿದ 11 ಜನ ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರಗೊಂಡಿದ್ದವು.

ಇದನ್ನೂ ಓದಿ | HD Kumaraswamy: ಎಚ್‌ಡಿ ಕುಮಾರಸ್ವಾಮಿ ಕೇಳಿದ ಕೃಷಿ ಖಾತೆ ಮೇಲೇ ನಿತೀಶ್‌ ಕಣ್ಣು; ಯಾರಿಗೆ ಒಲಿಯತ್ತೆ ಇಲಾಖೆ?

ಜೂನ್ 6 ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿತ್ತು, ಯಾರು ನಾಮಪತ್ರ ಹಿಂಪಡೆದಿದಿಲ್ಲ. ಹೀಗಾಗಿ ಭರ್ತಿ ಮಾಡಬೇಕಾದ 11 ಸ್ಥಾನಗಳಿಗೆ 11 ಜನ ಅಭ್ಯರ್ಥಿಗಳು ಮಾತ್ರ ಅಂತಿಮವಾಗಿ ಕಣದಲ್ಲಿದ್ದರು. ಹೀಗಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಐವಾನ್ ಡಿಸೋಜಾ, ಕೆ. ಗೋವಿಂದರಾಜ್, ಜಗದೇವ ಗುತ್ತೇದಾರ್, ಬಲ್ಕೀಸ್ ಬಾನು, ಯತೀಂದ್ರ ಎಸ್. ಎ. ವಸಂತ ಕುಮಾರ, ಭಾರತೀಯ ಜನತಾ ಪಾರ್ಟಿಯ ಮಾರುತಿರಾವ್ ಮುಳೆ , ಸಿ.ಟಿ. ರವಿ,ರವಿಕುಮಾರ. ಎನ್ ಹಾಗೂ ಜನತಾದಳ(ಜಾ) ಪಕ್ಷದ ಟಿ.ಎನ್. ಜವರಾಯಿ ಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆಂದು ಘೋಷಿಸಿದ್ದಾರೆ.

Continue Reading
Advertisement
MLC Election Results
ಪ್ರಮುಖ ಸುದ್ದಿ5 mins ago

MLC Election Results: ದಕ್ಷಿಣ ಶಿಕ್ಷಕರ ಕ್ಷೇತ್ರ; ಮೊದಲ ಪ್ರಾಶಸ್ತ್ಯ ಮತದಲ್ಲೇ ಮೈತ್ರಿ ಅಭ್ಯರ್ಥಿ ವಿವೇಕಾನಂದ ಭರ್ಜರಿ ಗೆಲುವು

TA Sharavana congratulated former CM hd Kumaraswamy who was elected to Lok Sabha from Mandya
ಬೆಂಗಳೂರು8 mins ago

TA Sharavana: ಮಂಡ್ಯದಿಂದ ಕುಮಾರಸ್ವಾಮಿ ಲೋಕಸಭೆಗೆ ಆಯ್ಕೆ; ಸಾಯಿಬಾಬಾ ಪ್ರಸಾದ ನೀಡಿ, ಅಭಿನಂದಿಸಿದ ಟಿ.ಎ.ಶರವಣ

Stock market Crash
ಪ್ರಮುಖ ಸುದ್ದಿ11 mins ago

Stock market Crash : ಜೂ. 4ರ ಷೇರುಪೇಟೆ ಕುಸಿತ ಮೋದಿ, ಅಮಿತ್​ ಶಾ ನಡೆಸಿದ ಮಹಾ ಹಗರಣ; ರಾಹುಲ್ ಗಾಂಧಿ ಆರೋಪ

Lok Sabha Election 2024
ರಾಜಕೀಯ13 mins ago

Lok Sabha Election 2024: ಈ ಬಾರಿ ಲೋಕಸಭೆ ಪ್ರವೇಶಿಸಲಿದ್ದಾರೆ 41 ಪಕ್ಷಗಳ ಸಂಸದರು!

Fancy Handbags Fashion
ಫ್ಯಾಷನ್18 mins ago

Fancy Handbags Fashion: ಸ್ಟೈಲಿಶ್‌ ಲುಕ್‌ಗೆ ಫ್ಯಾನ್ಸಿ ಹ್ಯಾಂಡ್‌ ಬ್ಯಾಗ್‌ಗಳ ಸಾಥ್‌!

Suresh Gopi
ರಾಜಕೀಯ23 mins ago

Suresh Gopi: ಕೇರಳದಲ್ಲಿ ಬಿಜೆಪಿ ಖಾತೆ ತೆರೆದಿರುವ ಸುರೇಶ್‌ ಗೋಪಿ ಜೀವನದಲ್ಲಿ ನಡೆದಿತ್ತೊಂದು ಘೋರ ದುರಂತ

Karnataka weather Forecast
ಮಳೆ49 mins ago

Karnataka Weather : ಭಾರಿ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತ; ಇನ್ನೈದು ದಿನ ಭಾರಿ ವರ್ಷಧಾರೆ

Kangana Ranaut
ಪ್ರಮುಖ ಸುದ್ದಿ57 mins ago

Kangana Ranaut: ನಟಿ, ಸಂಸದೆ ಕಂಗನಾ ರಣಾವತ್​ಗೆ ಏರ್​ಪೋರ್ಟ್​ ಭದ್ರತಾ ಸಿಬ್ಬಂದಿಯಿಂದಲೇ ಕಪಾಳಮೋಕ್ಷ!

ಕರ್ನಾಟಕ1 hour ago

Valmiki Corporation Scam: ರಾಜೀನಾಮೆ ಸ್ವಯಂಪ್ರೇರಿತ, ಯಾರ ಒತ್ತಡಕ್ಕೂ ಮಣಿದಿಲ್ಲ: ಬಿ.ನಾಗೇಂದ್ರ

Parachute Pants Fashion
ಫ್ಯಾಷನ್1 hour ago

Parachute Pants Fashion: ಪ್ಯಾರಾಶೂಟ್‌ ಪ್ಯಾಂಟ್ಸ್; ಟೀನೇಜ್‌ ಹುಡುಗಿಯರ ಹೊಸ ಟ್ರೆಂಡ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ6 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌