ಸಿದ್ದರಾಮಯ್ಯ- ಈಶ್ವರಪ್ಪ ಬಣಗಳ ನಡುವೆ ಮಾತಿನ ಚಕಮಕಿ - Vistara News

ತುಮಕೂರು

ಸಿದ್ದರಾಮಯ್ಯ- ಈಶ್ವರಪ್ಪ ಬಣಗಳ ನಡುವೆ ಮಾತಿನ ಚಕಮಕಿ

ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಯಿತು ಈ ವೇಳೆ ಸಿದ್ದರಾಮಯ್ಯ ಹಾಗೂ ಈಶ್ವರಪ್ಪ ನಾಯಕರ ಬಣಗಳ ನಡುವೆ ವಾಗ್ದಾಳಿ ನಡೆಯಿತು. ಎರಡು ಬಣಗಳು ನಡುವೆ ಡ್ರಾಮಾ ನಡೆಯಿತು.

VISTARANEWS.COM


on

sidramaya and ishwarappa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ಶನಿವಾರ ನಡೆಯುವ ಕುರುಬರ ಸಮಾವೇಶಕ್ಕೆ ಸಂಬಂಧಿಸಿದಂತೆ ಶುಕ್ರವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆದ ಸಂದರ್ಭ, ಸಿದ್ದರಾಮಯ್ಯ ಹಾಗೂ ಈಶ್ವರಪ್ಪ ಪರ ಬಣಗಳ ನಡುವೆ ಮಾತಿನ ಚಕಮಕಿ ನಡೆಯಿತು.

ಒಂದೇ ಬಣದ ಕೆಲವು ಮುಖಂಡರನ್ನು ಸಮಾವೇಶಕ್ಕೆ ಆಹ್ವಾನಿಸಿದ್ದಕ್ಕೆ ಎರಡು ಬಣಗಳ ನಡುವೆ ಕಿತ್ತಾಟ ಉಂಟಾಯಿತು. ಈಶ್ವರಪ್ಪನವರನ್ನು ಆಹ್ವಾನಿಸದೇ ಕೇವಲ ಸಿದ್ದರಾಮಯ್ಯರನ್ನು ಆಹ್ವಾನಿಸಲಾಗಿದೆ, ಈಶ್ವರಪ್ಪ ಅವರನ್ನು ಉಪೇಕ್ಷೆ ಮಾಡಲಾಗಿದೆ ಎಂದು ಈಶ್ವರಪ್ಪ ಬಣ ಆರೋಪಿಸಿತು. ಸುದ್ದಿಗೋಷ್ಠಿ ಬಳಿಕ ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆದು, ಪರಸ್ಪರ ಕೈ ಕೈ ಮಿಲಾಯಿಕೊಳ್ಳುವ ಹಂತಕ್ಕೆ ಹೋಯಿತು.

ಈಶ್ವರಪ್ಪ ಯಾವತ್ತೂ ಹಿಂದುಳಿದವರ ಪರ ಧ್ವನಿ ಎತ್ತಿಲ್ಲ, ಸಿದ್ದರಾಮಯ್ಯ ಮಾತ್ರ ಕುರುಬರ ಪರ ನಿಲ್ಲುತ್ತಾರೆ. ಈಶ್ವರಪ್ಪ ತಾನು ಕುರುಬ ಎಂದು ಹೇಳಲಿ, ಆಮೇಲೆ ಅವರನ್ನು ಸಮಾವೇಶಕ್ಕೆ ಕರೆಯುತ್ತೇವೆ ಎಂದು ಕುರುಬರ ರಾಜ್ಯ ಸಂಘದ ನಿರ್ದೇಶಕ ರಾಮಚಂದ್ರಪ್ಪ ಹೇಳಿದರು.

ರಾಮಚಂದ್ರಪ್ಪರ ಹೇಳಿಕೆಯಿಂದ ಇನ್ನಷ್ಟು ಕೆರಳಿದ ಪಂಗಡ ನಾಯಕರು ಹೋಟೆಲ್‌ನ ಮುಂಭಾಗದಲ್ಲಿ ನಡುರಸ್ತೆಯಲ್ಲಿ ಜಗಳಕ್ಕೆ ನಿಂತರು. ಆಗ ಎರಡು ಬಣಗಳ ನಡುವೆ ಕಿತ್ತಾಟದ ಹೈಡ್ರಾಮಾ ನಡೆಯಿತು.

ಇದನ್ನೂ ಓದಿ| ಇವತ್ತು ಹೆಡ್ಗೆವಾರ್‌ ಪಠ್ಯ, ನಾಳೆ ಗೋಡ್ಸೆ ಪಠ್ಯ: ಸಿದ್ದರಾಮಯ್ಯ ವಾಗ್ದಾಳಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತುಮಕೂರು

Murder case : ಸ್ನೇಹಿತರೇ ದುಷ್ಮನ್‌ಗಳು; ಕಂಠಪೂರ್ತಿ ಕುಡಿಸಿ ಗೆಳೆಯನ ತಲೆ ಮೇಲೆ‌ ಕಲ್ಲು ಎತ್ತಿಹಾಕಿ ಕೊಲೆ

Murder case : ಮಿಸ್ಸಿಂಗ್‌ (Missing Case) ಆಗಿದ್ದ ವ್ಯಕ್ತಿಯೊಬ್ಬ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದಾಗ ವ್ಯಕ್ತಿಯನ್ನು ಆತನ ಸ್ನೇಹಿತರೇ ಕಂಠ ಪೂರ್ತಿ ಮದ್ಯ ಕುಡಿಸಿ, ತಲೆ ಮೇಲೆ‌ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.

VISTARANEWS.COM


on

By

Murder Case in tumkur
ಶಂಕರ ಹಾಗೂ ನಾಗೇಶ್‌ ಬಂಧಿತ ಆರೋಪಿಗಳು ಹಾಗೂ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರದೀಪ್‌ ಮೃತದೇಹ
Koo

ತುಮಕೂರು: ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬ ಕೊಲೆಯಾದ (Murder Case) ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹುಲಿಯೂರುದುರ್ಗ ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೀಪುರದ ಶಂಕರ (30), ಹಾಗೂ ಬೂದಾನಹಳ್ಳಿಯ ನಾಗೇಶ್ (32) ಬಂಧಿತ ಆರೋಪಿಗಳು.

ಹುಲಿಯೂರುದುರ್ಗ ಬಳಿಯ ಮೂದನಹಳ್ಳಿ ಗ್ರಾಮದ ಪ್ರದೀಪ್ ಎಂಬಾತನನ್ನು ಹತ್ಯೆ ಮಾಡಿದ್ದರು. ತುಮಕೂರಿನ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಬಳಿಯ ಲಕ್ಷ್ಮೀಪುರದ ಉಲ್ಲಾಳಬೆಟ್ಟದಲ್ಲಿ ಕಳೆದ ಮೇ 30ರ ಗುರುವಾರ ಸಂಜೆ ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಕೊಲೆಯಾದ ಪ್ರದೀಪ್‌ಗೆ ಆರೋಪಿಗಳಾದ ಶಂಕರ ಹಾಗೂ ನಾಗೇಶ್ ಮೂವರೂ ಸ್ನೇಹಿತರು.

ಪ್ರದೀಪ್ ವೃತ್ತಿಯಲ್ಲಿ ಟ್ರ್ಯಾಕ್ಟರ್ ಚಾಲಕನಾಗಿದ್ದ. ಇತ್ತೀಚೆಗೆ ಶಂಕರ ಹಾಗೂ ನಾಗೇಶ್ ಜತೆ ದುವರ್ತನೆ ತೋರಿ ಮನಬಂದಂತೆ ನಡೆದುಕೊಳ್ಳುತ್ತಿದ್ದ. ಇದು ಶಂಕರ್‌ ಹಾಗೂ ನಾಗೇಶ್‌ ಸಿಟ್ಟಿಗೆ ಕಾರಣವಾಗಿತ್ತು. ಪ್ರದೀಪ್‌ಗೆ ಸರಿಯಾಗಿ ಬುದ್ಧಿ ಕಲಿಸಬೇಕೆಂದು ಪ್ಲ್ಯಾನ್‌ ಮಾಡಿಕೊಂಡಿದ್ದರು.

ಕಳೆದ 27 ರಂದು ಹುಲಿಯೂರುದುರ್ಗ ಪಟ್ಟಣದ ಬಾರ್‌ವೊಂದರಲ್ಲಿ ಶಂಕರ ಹಾಗೂ ನಾಗೇಶ್‌ ಮದ್ಯದ ಬಾಟೆಲ್‌ಗಳನ್ನು ತೆಗೆದುಕೊಂಡು ಹೋಗಿದ್ದರು. ನಂತರ ಈ ಮೂವರು ಸೇರಿ ಉಲ್ಲಾಳ ಬೆಟ್ಟದಲ್ಲಿ ಪಾರ್ಟಿ ಮಾಡಿದ್ದರು. ಇದೇ ಸರಿಯಾದ ಸಮಯವೆಂದು ಆರೋಪಿಗಳು ಪ್ರದೀಪ್‌ಗೆ ಕಂಠಪೂರ್ತಿ ಕುಡಿಸಿದ್ದರು. ಬಳಿಕ ನಶೆಯಲ್ಲಿದ್ದ ಪ್ರದೀಪ್‌ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದು, ಅಲ್ಲಿಂದ ನಾಪತ್ತೆಯಾಗಿದ್ದರು.

ಇತ್ತ ಪ್ರದೀಪ್‌ ಕುಟುಂಬಸ್ಥರು ಮಿಸ್ಸಿಂಗ್‌ ಕೇಸ್‌ ದಾಖಲಿಸಿದ್ದರು. ಅನಂತರ ಮೇ 30ರಂದು ಉಲ್ಲಾಳ ಬೆಟ್ಟದಲ್ಲಿ ಪ್ರದೀಪ್‌ ಮೃತದೇಹವು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡ ಹುಲಿಯೂರುದುರ್ಗ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: Rameshwaram Cafe: ಗ್ರಾಹಕರ ಕ್ಷಮೆ ಕೋರಿದರೂ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ರಾಮೇಶ್ವರಂ ಕೆಫೆ ಮಾಲೀಕ; ಕಾರಣ ಇದು

ಜಸ್ಟ್‌ ಗುರಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ; ಸಾವಿನ ಕೊನೆ ಕ್ಷಣ ಸೆರೆ

ಮೈಸೂರು: ಮೈಸೂರಿನಲ್ಲಿ ಗುರಾಯಿಸಿದ್ದಕ್ಕೆ ಯುವಕನ (Murder case) ಕೊಲೆಯಾಗಿದೆ. ಯುವಕನ ಸಾವಿನ ಕೊನೆ ಕ್ಷಣದ ವಿಡಿಯೊಗಳು ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಅರ್ಬಾಜ್ ಖಾನ್ (18) ಕೊಲೆಯಾದವನು.

ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರದಲ್ಲಿ ಘಟನೆ ನಡೆದಿದೆ. ಶಾಂತಿನಗರದ ಲಾಲ್ ಮಸೀದಿ ಬಳಿ ಅರ್ಬಾಜ್ ಖಾನ್ ಗುರಾಯಿಸಿದ ಎಂಬ ಕಾರಣಕ್ಕೆ ಯುವಕರ ಮಧ್ಯೆ ಗಲಾಟೆ ಶುರುವಾಗಿತ್ತು. ಗಲಾಟೆ ವಿಕೋಪಕ್ಕೆ ತಿರುಗಿತ್ತು. ನೋಡನೋಡುತ್ತಲೇ ನಾಲ್ವರು ಆರೋಪಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.

ಈ ವೇಳೆ ಕುತ್ತಿಗೆಗೆ ಸೀಳಿದ ಕಾರಣಕ್ಕೆ ಅರ್ಬಾಜ್‌ ಖಾನ್‌ ನಡುರಸ್ತೆಯಲ್ಲಿ ರಕ್ತಕಾರುತ್ತಾ ಒದ್ದಾಡುತ್ತಿದ್ದ. ಸ್ಥಳೀಯ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು, ಕೂಡಲೇ ಆಟೋದಲ್ಲಿ ಗಾಯಾಳು ಅರ್ಬಾಜ್‌ ಖಾನ್‌ನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ತೀವ್ರ ರಕ್ತಸ್ರಾವವಾಗಿ ಆಸ್ಪತ್ರೆಯಲ್ಲಿ ಅರ್ಬಾಜ್‌ ಖಾನ್‌ ಮೃತಪಟ್ಟಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಇನ್ನೂ ಪರಸ್ಪರ ಗಲಾಟೆಯಲ್ಲಿ ಆರೋಪಿ ಶಹಬಾಜ್‌ ಎಂವಾತನಿಗೂ ಗಾಯವಾಗಿದ್ದ, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಪ್ರಕರಣ ಸಂಬಂಧ ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಿಸ್‌ಯಿಲ್ಲದೇ ಮಳೆ ಹಾಜರ್‌

Rain News : ವಾರಾಂತ್ಯದಲ್ಲಿ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಜೂನ್‌ 1ರಂದು ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರತ್ಯೇಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ ಮತ್ತು ಚಾಮರಾಜನಗರದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ‌ಂತೆ ಯಾವುದೇ ಮಳೆ ಮುನ್ಸೂಚನೆ ಇಲ್ಲ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರವಾದ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಇನ್ನೂ ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗದಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ.

ಬೆಂಗಳೂರಿಗೂ ಮಳೆ ಮುನ್ಸೂಚನೆ

ಬೆಂಗಳೂರು ವ್ಯಾಪ್ತಿಯ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Exit Poll: ಈ ಹಿಂದೆ 5 ಬಾರಿ ಎಕ್ಸಿಟ್ ಪೋಲ್ ಭವಿಷ್ಯ ಉಲ್ಟಾ ಹೊಡೆದಿತ್ತು! ಯಾವಾಗ ನೆನಪಿದೆಯೆ?

ಹಣ್ಣು, ತರಕಾರಿಗಳ ಆರೋಗ್ಯಕರ ಸ್ಮೂದಿ ಎಂಬ ಟ್ರೆಂಡ್‌! ಒಳ್ಳೆಯದೇ, ಕೆಟ್ಟದ್ದೇ?

ಸದ್ಯದ ಯುವಜನರ ಆಹಾರದ ಟ್ರೆಂಡ್‌ ಎಂದರೆ ಅದು ಸ್ಮೂದಿ. ಬಹಳ ಸುಲಭವಾಗಿ ಮಾಡಬಲ್ಲ, ಹೊಟ್ಟೆ ತುಂಬಿಸಿಕೊಳ್ಳಬಹುದಾದ ಹಾಗೂ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಲಾದ ಟ್ರೆಂಡ್‌ ಆದ ಆಹಾರ ಕ್ರಮ. ಒಂದಿಷ್ಟು ಹಣ್ಣುಗಳನ್ನು ಸೇರಿಸಿ ಮಾಡುವ ಸ್ಮೂದಿ, ತರಕಾರಿಗಳನ್ನು ಸೇರಿಸಿ ಮಾಡುವ ಸ್ಮೂದಿ, ಬೀಜಗಳು ಒಣ ಹಣ್ಣುಗಳು, ವೇಗನ್‌ ಹಾಲು ಇತ್ಯಾದಿ ಇತ್ಯಾದಿ ಹಲವು ಬಗೆಯನ್ನು ಸೇರಿಸಿ ಮಾಡಬಹುದಾದ ಸ್ಮೂದಿಗಳು ಬಹುತೇಕರ ಜೀವನದಲ್ಲಿ ಇಂದು ಪ್ರತಿನಿತ್ಯದ ಆಹಾರ. ಹಲವು ಪೋಷಕಾಂಶಗಳನ್ನು ಒಳಗೊಂಡ, ಒಮ್ಮೆಲೇ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಸುಲಭವಾಗಿ ದೇಹಕ್ಕೆ ಸಿಗುವಂತೆ ಮಾಡಬಲ್ಲ, ಸುಲಭ ಸರಳವಾದ, ಫಟಾಫಟ್‌ ಮಾಡಬಹುದಾದ ಆಯ್ಕೆ ಇದು ಎಂಬುದರಲ್ಲಿ ಯಾವ ಸಂಶಯವೂ ಇಲ್ಲ. ಹಾಗಾದರೆ, ಈ ಸ್ಮೂದಿಗಳನ್ನು ಕುಡಿಯುವುದರಿಂದ, ದೇಹಕ್ಕೆ ಹಣ್ಣು, ತರಕಾರಿ, ಬೀಜಗಳನ್ನು ತಿಂದಷ್ಟೇ ಲಾಭಗಳು ದೊರೆಯುತ್ತವೆಯೇ ಎಂಬ ಬಗ್ಗೆ ನಿಮಗೆ ಪ್ರಶ್ನೆ ಉದ್ಭವಿಸಿದಲ್ಲಿ ಅದಕ್ಕೆ (Fruit and Veggie Smoothies) ಉತ್ತರ ಇಲ್ಲಿದೆ.

  • ನೀವು ಸ್ಮೂದಿಗಾಗಿ ಬಳಸುವ ಹಣ್ಣು ಹಂಪಲಾಗಿರಬಹುದು, ತರಕಾರಿಗಳಿರಬಹುದು, ಬೀಜ ಒಣಹಣ್ಣುಗಳಿರಬಹುದು, ಅವುಗಳನ್ನು ಹಾಗೆಯೇ ಜಗಿದು ತಿಂದರೆ ಆ ಜಗಿಯುವ ಪ್ರಕ್ರಿಯೆಯಲ್ಲಿ ಬಾಯಲ್ಲಿ ಲಾಲಾರಸವೂ ಅಂದರೆ ಜೊಲ್ಲೂ ಕೂಡಾ ಅದಕ್ಕೆ ಸೇರುತ್ತದೆ. ಈ ರಸ ಜೀರ್ಣಕ್ರಿಯೆಗೆ ಸಹಾಯ ಮಾಡುವ ರಸ. ಜೊತೆಗೆ ಇದು ಬಾಯಿಯನ್ನು ತೇವವಾಗಿ ಇಟ್ಟುಕೊಳ್ಳುವ ರಸವಾದ್ದರಿಂದ ಇದು ಬಾಯಿಯ ಮೂಲಕ ದೇಹಕ್ಕೆ ಇನ್‌ಫೆಕ್ಷನ್‌ ಹೋಗದಂತೆಯೂ ರಕ್ಷಿಸುತ್ತದೆ. ಸ್ಮೂದಿ ಮಾಡಿ ಕುಡಿಯುವುದರಿಂದ ದೇಹದ ಈ ನೈಸರ್ಗಿಕ ಕ್ರಿಯೆಯನ್ನೇ ನೀವು ದೂರ ಮಾಡಿ ಸುಲಭವಾಗಿ ಆಹಾರವನ್ನು ಹೊಟ್ಟೆಗೆ ಕಳುಹಿಸುತ್ತಿದ್ದೀರಿ ಎಂದಾಯಿತು. ಬಾಯಿಗೆ ಕೆಲಸವೇ ಇಲ್ಲ. ಜೀರ್ಣಕ್ರಿಗೆ ಸಹಾಯ ಆಡುವ ಅಂಶಗಳೂ ಅಲ್ಲಿ ಸೇರಲಿಲ್ಲ!
  • ಸ್ಮೂದಿಯನ್ನು ಕುಡಿಯುವುದರಿಂದ ಬಾಯಿಗೆ ಕೆಲಸವಿಲ್ಲದೆ ಅದು ನೇರವಾಗಿ ಹೊಟ್ಟೆಗೆ ಇಳಿಯುತ್ತದೆ. ಅಲ್ಲಿ ನಿಮ್ಮ ಜೊಲ್ಲುರಸ ಅಂದರೆ ಲಾಲಾರಸ ಈ ಆಹಾರದ ಜೊತೆಗೆ ಸರಿಯಾಗಿ ಸೇರಲಿಲ್ಲ ಅಂತಾಯಿತು. ಇದರಿಂದಾಗಿ ನಿಮ್ಮ ಜೀರ್ಣಕ್ರಿಯೆಯ ಸಾಮರ್ಥ್ಯ ನಿಧಾನವಾಗಿ ಕುಂಠಿತವಾಗುತ್ತಾ ಬರುತ್ತದೆ. ಕೇವಲ ಜೀರ್ಣಕ್ರಿಯೆಯಷ್ಟೇ ಅಲ್ಲ, ರೋಗನಿರೋಧಕ ಶಕ್ತಿಯೂ ಕುಂಠಿತವಾಗುತ್ತಾ ಬರುತ್ತದೆ. ಇಂತಹ ಬಗೆಯ ಆಹಾರಕ್ಕೇ ದೇಹ ಹೊಂದಿಕೊಂಡು, ಜೀರ್ಣ ಮಾಡುವ ಶಕ್ತಿ ಇಳಿಕೆಯಾಗುತ್ತದೆ.
  • ಸ್ಮೂದಿಯು ದ್ರವರೂಪದಲ್ಲಿರುವುದರಿಂದ ಸಹಜವಾಗಿಯೇ, ಸ್ಮೂದಿಯಲ್ಲಿರುವ ನೈಸರ್ಗಿಕ ಸಕ್ಕರೆ ಬಹುಬೇಗನೆ ರಕ್ತಕ್ಕೆ ಸೇರಿ ರಕ್ತದಲ್ಲಿರುವ ಸಕ್ಕರೆಯ ಪ್ರಮಾಣ ಇದ್ದಕ್ಕಿದ್ದಂತೆ ಏರಿಕೆಯಾಗುತ್ತದೆ. ಇದರಿಂದಾಗಿ ಸುಸ್ತಿನ ಅನುಭವ, ತಲೆಸುತ್ತಿನಂತ ಸಮಸ್ಯೆಗಳೂ ಮುಂದೆ ತಲೆದೋರಬಹುದು. ಹಣ್ಣುಗಳು, ಹಂಪಲುಗಳು ಹಾಗೂ ತರಕಾರಿಗಳಲ್ಲಿರುವ ನಾರಿನಂಶ ಸರಿಯಾಗಿ ಹೊಟ್ಟೆ ಸೇರದೆ, ವ್ಯರ್ಥವಾಗಬಹುದು. ಪೋಷಕಾಂಶವೂ ನಷ್ಟವಾಗಬಹುದು. ಇವೆಲ್ಲವನ್ನೂ ಜಗಿದು ತಿನ್ನುವಾಗ ಸಿಗಬಹುದಾದ ಆರೋಗ್ಯದ ಲಾಭಗಳೆಲ್ಲವೂ ಸ್ಮೂದಿಯ ಮೂಲಕ ಸಿಗದೇ ಹೋಗುವ ಸಾಧ್ಯತೆಗಳೇ ಹೆಚ್ಚು.
  • ಕೆಲವು ಮಂದಿಗೆ ದೇಹದಲ್ಲಿರುವ ಸಕ್ಕರೆಯ ಅಂಶದ ಏರಿಕೆಯಿಂದಾಗಿ ತಕ್ಷಣ ತಲೆಸುತ್ತು, ತಲೆನೋವು ಮತ್ತಿತರ ಸಮಸ್ಯೆಯೂ ಕಾಡಬಹುದು. ಆದರೆ, ಸ್ಮೂದಿಗೆ ಬಳಸಿದ ಹಣ್ಣು ಹಂಪಲು ಅಥವಾ ತರಕಾರಿ, ಒಣ ಹಣ್ಣು ಬೀಜಗಳನ್ನು ಹಾಗೆಯೇ ತಿನ್ನುವುದರಿಂದ ಈ ಪರಿಣಾಮಗಳು ಕಾಣಿಸಿಕೊಳ್ಳಲಾರದು. ಹಾಗಾಗಿ, ಸ್ಮೂದಿಗಿಂತ ಹಾಗೆಯೇ ತಿನ್ನುವುದೇ ಆರೋಗ್ಯಕ್ಕೆ ಹೆಚ್ಚು ಸೂಕ್ತ ಎಂಬುದನ್ನು ನೆನಪಿಡಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯದಲ್ಲಿ ತಗ್ಗಿದ ಮಳೆ ಪ್ರಮಾಣ; ಸ್ವಲ್ಪ ಕಡೆ ವರುಣ ಸಾಧಾರಣ, ಗಾಳಿ ರಭಸ ಅಸಾಧಾರಣ

Rain News : ರಾಜ್ಯಾದ್ಯಂತ ಬ್ರೇಕ್‌ ಕೊಟ್ಟಿದ್ದ ವರುಣ ಜೂನ್‌ ಮೊದಲ ವಾರದಿಂದ ಮತ್ತೆ ಅಬ್ಬರಿಸಲಿದ್ದಾನೆ. ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ರಭಸವಾಗಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ (Rain news) ಪ್ರಮಾಣವು ತಗ್ಗಿದೆ. ಕಳೆದ ಎರಡ್ಮೂರು ದಿನದಿಂದ ಮಳೆಯು ಕಣ್ಮರೆಯಾಗಿದೆ. ನಿನ್ನೆ ಗುರುವಾರ ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ (Karnataka Weather Forecast) ಮಳೆಯಾಗಿದೆ. ಉಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ (Dry Weather) ಇತ್ತು.

ಶಿವಮೊಗ್ಗದ ಆಗುಂಬೆಯಲ್ಲಿ 5 ಸೆಂ.ಮೀ, ಕೊಡಗಿನ ಗೋಣಿಕೊಪ್ಪಲು 3 ಸೆಂ.ಮೀ ಮಳೆಯಾಗಿದೆ. ಹಾಗೇ ದಕ್ಷಿಣ ಕನ್ನಡದ ಧರ್ಮಸ್ಥಳ, ಉಡುಪಿಯ ಕೋಟ, ಉತ್ತರ ಕನ್ನಡದ ಮಂಕಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಇನ್ನೂ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 41.3 ಡಿ.ಸೆ ದಾಖಲಾಗಿತ್ತು.

ಇದನ್ನೂ ಓದಿ: World No Tobacco Day: ತಂಬಾಕಿನ ಚಟ ಎಷ್ಟೊಂದು ರೋಗಗಗಳಿಗೆ ಕಾರಣ ಆಗುತ್ತದೆ ನೋಡಿ!

ನಾಳೆಯಿಂದ ಮತ್ತೆ ಶುರುವಾಗುತ್ತಾ ಅಬ್ಬರ?

ದಕ್ಷಿಣ ಒಳನಾಡು ಹಾಗೂ ಮಲೆನಾಡಿನ ಭಾಗಗಳಲ್ಲಿ ಮಳೆ ಅಬ್ಬರ ಇರಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ 30-40 ಕಿ.ಮೀ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ.

ಇನ್ನೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: Kukke Subramanya: ಹೊಳೆ ಉಕ್ಕಿ ಹರಿದು ಕೊಚ್ಚಿ ಹೋದ ಪಿಕ್ಅಪ್ ವಾಹನ; ಚಾಲಕನ ರಕ್ಷಣೆ

ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ಕಲಬುಲಗಿ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿಗುಡುಗು ಸಹಿತ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ 40-50 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಮೇಲ್ಮೈ ಮಾರುತಗಳು (30-40 kmph) ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಮೇಲೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ಮುಂದಿನ 24 ಗಂಟೆಯಲ್ಲಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿಯಲಿದೆ. ಕೆಲವೊಮ್ಮೆ ಹಗುರ ಮಳೆಯಾಗಲಿದ್ದು, ಮೇಲ್ಮೈ ಗಾಳಿಯು ಪ್ರಬಲವಾಗಿರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Theft Case : ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು; ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರ ಕೈಚಳಕ

Theft Case : ದಾವಣಗೆರೆ ಹಾಗೂ ತುಮಕೂರಿನ ಪ್ರತ್ಯೇಕ ಕಡೆಗಳಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿದ್ದಾರೆ. ದಾವಣಗೆರೆಯಲ್ಲಿ ರಾತ್ರೋ ರಾತ್ರಿ ದೇವರ ಹರಕೆ ಕುರಿಯನ್ನೇ ಕಳ್ಳರು ಕದ್ಯೊಯ್ದರೆ, ಇತ್ತ ತುಮಕೂರಿನ ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರನ್ನು ಹಿಡಿಯಲು ಹೋದರೆ ಹಲ್ಲೆ ಮಾಡಿ ಎಸ್ಕೇಪ್‌ ಆಗಿದ್ದಾರೆ.

VISTARANEWS.COM


on

By

theft Case
Koo

ದಾವಣಗೆರೆ/ತುಮಕೂರು: ದೇವರ ಹರಕೆಗಾಗಿ ತಂದಿದ್ದ ಕುರಿಯನ್ನೇ ಕಳ್ಳರು (Theft Case) ಹೊತ್ತೊಯ್ದಿದ್ದಾರೆ. ದಾವಣಗೆರೆ (Davanagere news) ತಾಲೂಕಿನ ಮಾಯಾಕೊಂಡದಲ್ಲಿ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದ‌ ಕಿರಾತಕರು ರಾತ್ರೋ ರಾತ್ರಿ ಕುರಿಯನ್ನು ಕದ್ದಿದ್ದಾರೆ.

ಸುಮಾರು 8 ಮಂದಿ ಖದೀಮರ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾಯಾಕೊಂಡದ ನಿವಾಸಿ ಪ್ರಭು ಎಂಬುವರಿಗೆ ಸೇರಿದ ಕುರಿಯನ್ನು ಬೆಳಗಿನ‌ ಜಾವ 3ಗಂಟೆ ಸುಮಾರಿಗೆ ಬೈಕ್‌ನಲ್ಲಿ ಬಂದು ಎಗರಿಸಿದ್ದಾರೆ. ಸದ್ಯ ಪ್ರಭು ಅವರು ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ಆಧಾರದ ಮೇಲೆ ಖದೀಮರನ್ನು ಹಿಡಿಲು ಮುಂದಾಗಿದ್ದಾರೆ.

ತುಮಕೂರಿನ 2 ಸೂಪರ್ ಮಾರ್ಕೆಟ್‌ಗಳಲ್ಲಿ ಕಳ್ಳತನ

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಶ್ರೀನಿವಾಸ ಹೈಪರ್ ಮಾರ್ಕೆಟ್ ಹಾಗೂ ಜಿಎಮ್‌ಆರ್ ಮೆಗಾ ಮಾರ್ಟ್‌ನಲ್ಲಿ ಕಳ್ಳತನವಾಗಿದೆ. ಕಳ್ಳರು ಜಿಎಮ್‌ಆರ್ ಮೆಗಾ ಮಾರ್ಟ್‌ನ ಬೀಗ ಮುರಿಯುವಾಗ ಮಾಲೀಕನ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ವೇಳೆ ಕಳ್ಳತನ ತಡೆಯಲು ಬಂದವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಅಂಗಡಿ ಮಾಲೀಕರನ್ನೇ ಹೆದರಿಸಿ ಕಳ್ಳರು ಪರಾರಿಯಾಗಿದ್ದಾರೆ.

theft Case

50 ಸಾವಿರ ರೂ. ನಗದು ಹಾಗೂ 10ಕ್ಕೂ ಹೆಚ್ಚು ಅಕ್ಕಿ ಚೀಲಗಳನ್ನು ಕದ್ದಿದ್ದು, ಜತೆಗೆ ಸಿಸಿಟಿವಿಯ ಡಿವಿಆರ್ ಕದ್ದಿದ್ದಾರೆ. ಸುಮಾರು ನಾಲ್ಕೈದು ಕಳ್ಳರ ತಂಡ ಲಗ್ಗೆ ಇಟ್ಟ ಪೂರ್ತಿ ದೃಶ್ಯವು ಮತ್ತೊಂದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Huligemma Temple : ಹುಲಿಗೆಮ್ಮ ದೇವಿ ಜಾತ್ರೆಗೆ ಹೊರಟಿದ್ದ ಪಾದಯಾತ್ರಿ ಮೇಲೆ ಹರಿದ ಲಾರಿ; ಓರ್ವ ಸಾವು, ಮತ್ತೋರ್ವ ಗಂಭೀರ

ಏರ್ ಇಂಡಿಯಾ ವಿಮಾನ 20 ಗಂಟೆ ವಿಳಂಬ; ಎಸಿ ಇಲ್ಲದೆ ಪ್ರಜ್ಞೆ ತಪ್ಪಿ ಬಿದ್ದ ಪ್ರಯಾಣಿಕರು

ನವದೆಹಲಿ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಗುರುವಾರ ಮಧ್ಯಾಹ್ನ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ (Air India Flight) 20 ಗಂಟೆಗಳ ಕಾಲ ವಿಳಂಬವಾಗಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ. ಹವಾ ನಿಯಂತ್ರಣ ವ್ಯವಸ್ಥೆ ಇಲ್ಲದೆ ವಿಮಾನದೊಳಗೆ ಕೆಲವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಮಾನ ಇಂದು (ಶುಕ್ರವಾರ) ಬೆಳಿಗ್ಗೆ 11 ಗಂಟೆಗೆ ಹೊರಡಲಿದೆ.

ಗುರುವಾರ ಪತ್ರಕರ್ತೆ ಶ್ವೇತಾ ಪುಂಜ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಎಸಿ ಇಲ್ಲದೆ ಪ್ರಯಾಣಿಕರು ಪರದಾಡುತ್ತಿರುವ ಫೋಟೊವನ್ನು ಪೋಸ್ಟ್‌ ಮಾಡಿದ್ದಾರೆ. ʼʼಫ್ಲೈಟ್ ನಂ. ಎಐ 183 ವಿಮಾನಕ್ಕೆ ಪ್ರಯಾಣಿಕರನ್ನು ಹತ್ತಿಸಲಾಯಿತು. ಹವಾ ನಿಯಂತ್ರಣವಿಲ್ಲದೆ ಹಲವರು ಪರದಾಡಿದರು. ಈ ವೇಳೆ ಕೆಲವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ನಂತರ ಪ್ರಯಾಣಿಕರಿಗೆ ವಿಮಾನದಿಂದ ನಿರ್ಗಮಿಸಲು ತಿಳಿಸಲಾಯಿತುʼʼ ಎಂದು ಅವರು ಬರೆದುಕೊಂಡಿದ್ದಾರೆ.

ದೆಹಲಿಯಲ್ಲಿ ಉಷ್ಣಾಂಶ ದಾಖಲೆಯ ಮಟ್ಟಕ್ಕೆ ಏರಿದೆ. ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ 52.9 ಡಿಗ್ರಿ ಸೆಲ್ಶಿಯಸ್‌ ತಾಪಮಾನ ಕಂಡು ಬಂದಿತ್ತು. ʼʼಇದು ಖಾಸಗೀಕರಣ ವಿಫಲವಾಗಿದೆ ಎನ್ನುವುದಕ್ಕೆ ಸ್ಪಷ್ಟ ಉದಾಹರಣೆ. ಎಐ 183 ವಿಮಾನವು ಎಂಟು ಗಂಟೆಗಳಿಗಿಂತ ಹೆಚ್ಚು ವಿಳಂಬವಾಗಿದೆ. ಪ್ರಯಾಣಿಕರನ್ನು ಹವಾನಿಯಂತ್ರಣ ವ್ಯವಸ್ಥೆ ಇಲ್ಲದ ವಿಮಾನವನ್ನು ಹತ್ತಿಸಿದ್ದು ಅಮಾನವೀಯ” ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಟ್ಯಾಗ್ ಮಾಡಿ ಶ್ವೇತಾ ಪುಂಜ್ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಏರ್‌ ಇಂಡಿಯಾ ಹೇಳಿದ್ದೇನು?

ಶ್ವೇತಾ ಪುಂಜ್ ಅವರ ಪೋಸ್ಟ್‌ ವೈರಲ್‌ ಆದ ಬೆನ್ನಲ್ಲೇ ಏರ್‌ ಇಂಡಿಯಾ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ. ʼʼಈ ಘಟನೆಗಾಗಿ ವಿಷಾಧ ವ್ಯಕ್ತಪಡಿಸುತ್ತಿದ್ದೇವೆ. ನಮ್ಮ ತಂಡದವರು ಸೂಕ್ತವಾಗಿ ಸ್ಪಂದಿಸಲಿದ್ದಾರೆ. ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಮ್ಮ ಸಿಬ್ಬಂದಿ ಕ್ರಮ ಕೈಗೊಳ್ಳಲಿದ್ದಾರೆʼʼ ಎಂದು ತಿಳಿಸಿದ್ದಾರೆ.

ಮತ್ತೊಬ್ಬ ಪ್ರಯಾಣಿಕ ಅಭಿಷೇಕ್ ಶರ್ಮಾ ತ್ವರಿತ ಕ್ರಮಕ್ಕಾಗಿ ವಿಮಾನಯಾನ ಸಂಸ್ಥೆಗೆ ಮನವಿ ಮಾಡಿದ್ದಾರೆ. ಬೋರ್ಡಿಂಗ್ ಪ್ರದೇಶದಲ್ಲಿ ಸಿಲುಕಿರುವ ಹಿರಿಯ ನಾಗರಿಕರಿಗೆ ಮನೆಗೆ ಹೋಗಲು ಅವಕಾಶ ನೀಡುವಂತೆ ಆಗ್ರಹಿಸಿದ್ದಾರೆ. ಅನೇಕ ಪ್ರಯಾಣಿಕರು ಪೋಸ್ಟ್ ಮಾಡಿದ ದೃಶ್ಯಗಳಲ್ಲಿ ಮಕ್ಕಳು ಸೇರಿದಂತೆ ಹಿರಿಯ ನಾಗರಿಕರು ನೆಲದ ಮೇಲೆ ಕುಳಿತಿರುವುದನ್ನು ಕಂಡು ಬಂದಿದೆ.

ಇದನ್ನೂ ಓದಿ: Air India: ನಿಯಮ ಉಲ್ಲಂಘಿಸಿದ ಏರ್‌ ಇಂಡಿಯಾಕ್ಕೆ ಬಿತ್ತು ಭಾರೀ ದಂಡ

ಕೆಲವು ತಿಂಗಳ ಹಿಂದೆ ಇಂತಹದ್ದೇ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿತ್ತು. ಬೆಂಗಳೂರಿಗೆ ಡಿ. 23ರ ರಾತ್ರಿ 8.15ಕ್ಕೆ ಮಂಗಳೂರಿನಿಂದ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನ ಕೊನೇ ಕ್ಷಣದಲ್ಲಿ ರದ್ದಾಗಿತ್ತು. ಇದರಿಂದ ಪ್ರಯಾಣಿಕರು ಆಕ್ರೋಶಗೊಂಡಿದ್ದು, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಕೆಂಜಾರಿನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾತ್ರಿ 8.15ಕ್ಕೆ ಏರ್ ಇಂಡಿಯಾ ವಿಮಾನ ಬೆಂಗಳೂರಿಗೆ ಹೊರಡಬೇಕಿತ್ತು. ಆದರೆ ವಿಮಾನ ಬಾರದ ಕಾರಣದಿಂದ ಆಕ್ರೋಶಗೊಂಡಿದ್ದರು. ಅಮೆರಿಕಕ್ಕೆ ಪ್ರಯಾಣ ಬೆಳೆಸಬೇಕಿದ್ದವರು, ಪರೀಕ್ಷೆ ಬರೆಯಲು ಹೊರಟವರು ಹಾಗೂ ಕ್ರಿಸ್ಮಸ್ ಹಬ್ಬಕ್ಕೆ ತೆರಳುತ್ತಿದ್ದ ಪ್ರಯಾಣಿಕರು ವಿಮಾನ ಬಾರದ ಕಾರಣ ಮಂಗಳೂರು ವಿಮಾನ ನಿಲ್ದಾಣದಲ್ಲೇ ಬಾಕಿ ಆಗಿದ್ದರು. ರಾತ್ರಿ 8.15ಕ್ಕೆ ಹೊರಡಬೇಕಿದ್ದ ವಿಮಾನಕ್ಕಾಗಿ ಬಂದಿದ್ದ ಪ್ರಯಾಣಿಕರು ಬದಲಿ ವ್ಯವಸ್ಥೆಗಾಗಿ ವಿಮಾನ ನಿಲ್ದಾಣದಲ್ಲಿಯೇ ನಡುರಾತ್ರಿಯವರೆಗೆ ಕಾದು ಕುಳಿತು ಬಳಿಕ ಪ್ರಯಾಣಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Actor Jaggesh talk about body shame
ಸ್ಯಾಂಡಲ್ ವುಡ್12 mins ago

Actor Jaggesh: ಬಾಲ್ಯದಲ್ಲಿ ನನ್ನನ್ನು ಕರಿಯ ಎಂದು ಗೇಲಿ ಮಾಡುತ್ತಿದ್ದರು, ಆದರೆ ನಾನು…; ಜಗ್ಗೇಶ್‌ ಮನದ ಮಾತು

Modi Meditation
ದೇಶ13 mins ago

Modi Meditation: ಕನ್ಯಾಕುಮಾರಿಯಲ್ಲಿ ಧ್ಯಾನಾಸಕ್ತ ಪ್ರಧಾನಿ ಮೋದಿಯಿಂದ ಸೂರ್ಯ ವಂದನೆ; ವಿಡಿಯೊ ನೋಡಿ

Cristiano Ronaldo
ಕ್ರೀಡೆ15 mins ago

Cristiano Ronaldo: ಕಿಂಗ್ಸ್ ಕಪ್ ಫೈನಲ್​ನಲ್ಲಿ ಸೋಲು; ಬಿಕ್ಕಿ ಬಿಕ್ಕಿ ಅತ್ತ ಕ್ರಿಸ್ಟಿಯಾನೊ ರೊನಾಲ್ಡೊ

Chikkamagaluru Tragedy
ಚಿಕ್ಕಮಗಳೂರು30 mins ago

Chikkamagaluru Tragedy : ಬಾಯ್ಲರ್‌ ಶಾಖಕ್ಕೆ ಸುಟ್ಟು ಕರಕಲಾದ ಯುವಕ; ಸಿಲ್ವರ್ ಮರವೇರಿದಾಗ ಕರೆಂಟ್‌ ಶಾಕ್‌ಗೆ ಕಾರ್ಮಿಕ ಸಾವು

Valmiki Corporation Scam
ಕರ್ನಾಟಕ36 mins ago

Valmiki Corporation Scam: ವಾಲ್ಮೀಕಿ ನಿಗಮ ಅಕ್ರಮ ಕೇಸ್‌; 16 ಕಂಪನಿಗಳಿಗೆ 80 ಕೋಟಿ ವರ್ಗಾವಣೆ, ಯಾರಿಗೆ ಎಷ್ಟು ಹಣ?

rahul gandhi
ಪ್ರಮುಖ ಸುದ್ದಿ56 mins ago

Rahul Gandhi: ಬಿಜೆಪಿ ಮಾನನಷ್ಟ ಕೇಸ್‌ನಲ್ಲಿ ಸಿಎಂ, ಡಿಸಿಎಂಗೆ ಶರತ್ತುಬದ್ಧ ಜಾಮೀನು; ರಾಹುಲ್‌ ಗಾಂಧಿ ಮೇಲೆ ಕೋರ್ಟ್‌ ಗರಂ

Salman Khan Cops arrest 4 with alleged links to Bishnoi gang
ಬಾಲಿವುಡ್57 mins ago

Salman Khan: ಸಲ್ಮಾನ್ ಖಾನ್ ಕಾರಿನ ಮೇಲೆ ಗುಂಡಿನ ದಾಳಿಗೆ ಸಂಚು; ನಾಲ್ವರ ಬಂಧನ

Chikkalluru Siddappaji temple
ಧಾರ್ಮಿಕ1 hour ago

Chikkalluru Siddappaji Temple : ಚಿಕ್ಕಲ್ಲೂರಲ್ಲಿ ಪೂಜೆ ವಿಚಾರಕ್ಕೆ ತ್ರಿಶೂಲದಲ್ಲಿ ಹೊಡೆದಾಟ; ಮೂವರು ಅರ್ಚಕರಿಗೆ ಗಾಯ

Gold Rate Today
ಚಿನ್ನದ ದರ1 hour ago

Gold Rate Today: ಚಿನ್ನ ಕೊಳ್ಳಲು ಇಂದೇ ಸಕಾಲ, ಬಂಗಾರದ ಬೆಲೆಯಲ್ಲಿ ಇಳಿಕೆ

T20 World Cup 2024
ಕ್ರಿಕೆಟ್1 hour ago

Team India: ವೆಸ್ಟ್​ ಇಂಡೀಸ್​ ಮೈದಾನ ಭಾರತದ ಪಾಲಿಗೆ ಅನ್ ಲಕ್ಕಿ; ಹಿಂದಿನ 2 ವಿಶ್ವಕಪ್ ಟೂರ್ನಿಯ​ ಹಿನ್ನೋಟ ಇಲ್ಲಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌