ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ - Vistara News

ಪ್ರಮುಖ ಸುದ್ದಿ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ

ನಿಕಟಪೂರ್ವ ಅಧ್ಯಕ್ಷ ಸಾ. ರಾ. ಗೋವಿಂದು ಹಾಗೂ ಭಾ. ಮಾ. ಹರೀಶ್‌ ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ರಾತ್ರಿ ವೇಳೆಗೆ ಫಲಿತಾಂಶ ಹೊರಬೀಳಲಿದೆ.

VISTARANEWS.COM


on

ಚಲನಚಿತ್ರ ವಾಣಿಜ್ಯ ಮಂಡಳಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಲನಚಿತ್ರ ವಾಣಿಜ್ಯ ಮಂಡಳಿಯ (Karnataka Film Chamber) ಸ್ಥಾನಗಳಿಗೆ ಶನಿವಾರ ಚುನಾವಣೆ ನಡೆಯಲಿದೆ. ಅಧ್ಯಕ್ಷ ಸ್ಥಾನಕ್ಕೆ ಸಾ.ರಾ ಗೋವಿಂದು ಮತ್ತು ಬಾ.ಮಾ. ಹರೀಶ್‌ ನಡುವೆ ಪ್ರಬಲ ಪೈಪೋಟಿ ಏರ್ಪಡುವ ನಿರೀಕ್ಷೆಯಿದೆ. ಬೆಳಗ್ಗೆ 10 ಗಂಟೆಯಿಂದ ವಾರ್ಷಿಕ ಸರ್ವಸದಸ್ಯರ ಸಭೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಯಿಂದ ಆರಂಭವಾದ ಮತದಾನ 6 ಗಂಟೆಯವರೆಗೆ ನಡೆಯಲಿದೆ. ಬ್ಯಾಲೆಟ್‌ ಪೇಪರ್‌ ಮೂಲಕ ಮತದಾನ ನಡೆಯುತ್ತಿದ್ದು, ರಾತ್ರಿ ವೇಳೆಗೆ ಫಲಿತಾಂಶ ಲಭಿಸುವ ಸಾಧ್ಯತೆಯಿದೆ.

ಹಿರಿಯ ನಿರ್ಮಾಪಕ ಮತ್ತು ಕನ್ನಡಪರ ಹೋರಾಟಗಾರ ಸಾ.ರಾ.ಗೋವಿಂದು ಈ ಹಿಂದೆ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿದ್ದಾಗ ಸಿನಿಮಾರಂಗದ ಕಲಾವಿದರು ಮತ್ತು ತಂತ್ರಜ್ಞರನ್ನು ಸಮಭಾವದಿಂದ ಕಂಡು ಕಷ್ಟ-ಸುಖಗಳಿಗೆ ಬೆನ್ನೆಲುಬಾಗಿ ನಿಂತಿದ್ದು, ಹಲವು ಸಕಾರಾತ್ಮಕ ಸುಧಾರಣೆಗಳು ಅವರ ಗೆಲುವಿಗೆ ನೆರವಾಗಲಿವೆ ಎಂದು ಹಿರಿಯ ಕಲಾವಿದರ ಮತ್ತು ತಂತ್ರಜ್ಞರ ಅಭಿಪ್ರಾಯವಾಗಿದೆ.

ಇದನ್ನೂ ಓದಿ | ಕಿಚ್ಚ ಸುದೀಪ್‌ V/S ಅಜಯ್‌ ದೇವಗನ್‌: ʼThank Godʼ ಸಿನಿಮಾ ರಿಲೀಸ್‌ ಡೇಟ್‌ ಮುಂದಕ್ಕೆ, ವಿಕ್ರಾಂತ್‌ ರೋಣ ಫಿಕ್ಸ್‌

ಅಷ್ಟೆ ಅಲ್ಲದೆ, ಅನೇಕ ನಿರ್ಮಾಪಕರು ಇವರ ಹಿಂದೆ ಇರುವುದು ಮತ್ತಷ್ಟು ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಸಾ.ರಾ.ಗೋವಿಂದು ಅಧಿಕಾರದಲ್ಲಿಲ್ಲದಿದ್ದರೂ ಕೊರೊನಾ ಸಮಯದಲ್ಲಿ ಸಿನಿಮಾರಂಗದ ಸದಸ್ಯರಿಗೆ ಸಹಾಯ ಮಾಡಿದ್ದರು.

ನಿರ್ಮಾಪಕರ ವಲಯದ ಉಪಾಧ್ಯಕ್ಷ ಸ್ಥಾನಕ್ಕೆ ವಿ.ಸುಬ್ರಮಣಿ. ವಿತರಕರ ವಲಯದ ಉಪಾಧ್ಯಕ್ಷ ಸ್ಥಾನದಲ್ಲಿ ಪಿ.ಎಸ್.ಜ್ಞಾನೇಶ್ವರ ಐತಾಳ್, ಪ್ರದರ್ಶಕರ ಉಪಾಧ್ಯಕ್ಷ ಸ್ಥಾನದಲ್ಲಿ ಜಿ.ಪಿ.ಕುಮಾರ್ ಸ್ಪರ್ಧಾಕಣದಲ್ಲಿದ್ದಾರೆ. ಬಾಮಾ ಹರೀಶ್ ಅವರ ತಂಡದಿಂದ ಉಪಾಧ್ಯಕ್ಷ ಸ್ಥಾನಕ್ಕೆ ನಟ ಜೈಜಗದೀಶ್, ವಿತರಕ ಉಪಾಧ್ಯಕ್ಷ ಸ್ಥಾನಕ್ಕೆ ಶಿಲ್ಪಾ ಶ್ರೀನಿವಾಸ್ ಮುತ್ತು ಕೆ.ಮೋ.ರಂಗಪ್ಪ, ವಿತರಕರ ಕಾರ್ಯದರ್ಶಿ ಸ್ಥಾನಕ್ಕೆ ಕುಶಾಲ್ ಮತ್ತು ಪಾರ್ಥಸಾರಥಿ, ನಿರ್ಮಾಪಕ ಕಾರ್ಯದರ್ಶಿ ಸ್ಥಾನಕ್ಕೆ ಸುಂದರರಾಜು, ಹಣಕಾಸಿನ ಸ್ಥಾನಕ್ಕೆ ನಟ ಲೂಸ್ ಮಾದ ಯೋಗಿ ಅವರ ತಂದೆ ಟಿ.ಆರ್. ಸಿದ್ದರಾಜು ಸ್ಪರ್ಧಾ ಕಣದಲ್ಲಿದ್ದಾರೆ.

ಇದನ್ನೂ ಓದಿ | ವಿಧಾನ ಪರಿಷತ್ ವಾಯವ್ಯ ಪದವೀಧರ, ಶಿಕ್ಷಕರ ಕ್ಷೇತ್ರಕ್ಕೆ ಜೂನ್‌ 13 ರಂದು ಚುನಾವಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

T20 World Cup 2024: ಎಂದಿನಂತೆ ಜೆರ್ಸಿಯು ನೀಲಿ ಬಣ್ಣದಿಂದ ಕೂಡಿದೆ. ಆದರೆ, ಕೇಸರಿಯ ರಂಗು ಹೆಚ್ಚಿದೆ. ತೋಳುಗಳು ಕೇಸರಿ ಬಣ್ಣದ್ದಾಗಿವೆ. ಭುಜದ ಮೇಲೆ ಸಾಂಪ್ರದಾಯಿಕ ಬಿಳಿ ಅಡಿಡಾಸ್ ಪಟ್ಟಿಗಳಿವೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್​​ನಲ್ಲಿ ಭಾರತದ ಜರ್ಸಿಯಲ್ಲಿ ಭುಜದ ಮೇಲೆ ತ್ರಿವರ್ಣ ಪಟ್ಟೆಗಳಿದ್ದವು.

VISTARANEWS.COM


on

T20 World Cup 2024
Koo

ಬೆಂಗಳೂರು: 2024ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಗೆ (T20 World Cup 2024) ಟೀಂ ಇಂಡಿಯಾ ತನ್ನ ಜೆರ್ಸಿಯನ್ನು ಬಿಡುಗಡೆ ಮಾಡಿದೆ. ಜೂನ್ 1 ರಿಂದ 29 ರವರೆಗೆ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ (USA) ಮತ್ತು ವೆಸ್ಟ್​ ಇಂಡೀಸ್​​ನಲ್ಲಿ ಈ ಟೂರ್ನಿ ನಡೆಯಲಿದೆ. ‘ಎ’ ಗುಂಪಿನಲ್ಲಿ ಭಾರತ, ಸಾಂಪ್ರದಾಯಿಕ ಎದುರಾಳಿಗಳಾದ ಪಾಕಿಸ್ತಾನ, ಆತಿಥೇಯ ಅಮೆರಿಕ, ಐರ್ಲೆಂಡ್ ಮತ್ತು ಕೆನಡಾ ತಂಡಗಳಿವೆ. ಮೆನ್ ಇನ್ ಬ್ಲೂ (Men In Blue) ತಮ್ಮ ಎಲ್ಲಾ ಗುಂಪು ಪಂದ್ಯಗಳನ್ನು ಯುಎಸ್ಎಯಲ್ಲಿ ಆಡಲಿದೆ. ಅವರ ಮೊದಲ ಮೂರು ಪಂದ್ಯಗಳು ನ್ಯೂಯಾರ್ಕ್​​ನಲ್ಲಿ ನಡೆದರೆ, ಕೊನೆಯ ಗುಂಪು ಪಂದ್ಯವು ಲಾಡರ್​ಹಿಲ್​ನಲ್ಲಿ ನಡೆಯಲಿದೆ.

ಬಹುನಿರೀಕ್ಷಿತ ಟಿ 20 ವಿಶ್ವಕಪ್ 2024 ಪ್ರಾರಂಭವಾಗಲು ಒಂದು ತಿಂಗಳಿಗಿಂತ ಕಡಿಮೆ ಸಮಯ ಇರುವಾಗ ಭಾರತವು ಆಕರ್ಷಕ ಜೆರ್ಸಿಯನ್ನು ಅನಾವರಣಗೊಳಿಸಿದೆ. ಎಂದಿನಂತೆ ಜೆರ್ಸಿಯು ನೀಲಿ ಬಣ್ಣದಿಂದ ಕೂಡಿದೆ. ಆದರೆ, ಕೇಸರಿಯ ರಂಗು ಹೆಚ್ಚಿದೆ. ತೋಳುಗಳು ಕೇಸರಿ ಬಣ್ಣದ್ದಾಗಿವೆ. ಭುಜದ ಮೇಲೆ ಸಾಂಪ್ರದಾಯಿಕ ಬಿಳಿ ಅಡಿಡಾಸ್ ಪಟ್ಟಿಗಳಿವೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್​​ನಲ್ಲಿ ಭಾರತದ ಜರ್ಸಿಯಲ್ಲಿ ಭುಜದ ಮೇಲೆ ತ್ರಿವರ್ಣ ಪಟ್ಟೆಗಳಿದ್ದವು.

ಇದನ್ನೂ ಓದಿ: IPL 2024 : ಮುಂಬೈ ಚಾ ರಾಜಾ ರೋಹಿತ್​ ಶರ್ಮಾ ಎಂದು ಕೂಗಿದ ಹೇಡನ್​ ಪುತ್ರಿ ಗ್ರೇಸ್​​; ಇಲ್ಲಿದೆ ವಿಡಿಯೊ

ಭಾರತದ ಜೆರ್ಸಿಯ ಮುಂಭಾಗದಲ್ಲಿ ಪ್ರಾಯೋಜಕ ‘ಡ್ರೀಮ್ 11’ ಹೆಸರನ್ನು ಸಹ ಇರಬೇಕು. ಆದರೆ ಐಸಿಸಿ ಸ್ಪರ್ಧೆಯ ಸಮಯದಲ್ಲಿ ಜೆರ್ಸಿಯಲ್ಲಿ ಯಾವುದೇ ಪ್ರಾಯೋಜಕರ ಹೆಸರನ್ನು ಹಾಕಲು ಐಸಿಸಿ ನಿಯಮವು ತಂಡಗಳಿಗೆ ಅನುಮತಿಸುವುದಿಲ್ಲ. ಹೀಗಾಗಿ ವಿಶ್ವ ಕಪ್​ ನಲ್ಲಿ ಅದನ್ನು ತೆಗೆದು ಹಾಕಲಾಗಿದೆ.

ನಾಯಕ ರೋಹಿತ್ ಶರ್ಮಾ, ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ಜರ್ಸಿ ಅನಾವರಣದ ವೀಡಿಯೊದಲ್ಲಿ ಕಾಣಿಸಿಕೊಂಡಿದ್ದಾರೆ. ಧರ್ಮಶಾಲಾದ ಸುಂದರವಾದ ಎಚ್​​ಪಿಸಿಎ ಕ್ರೀಡಾಂಗಣದಲ್ಲಿ ಈ ವೀಡಿಯೊವನ್ನು ಚಿತ್ರೀಕರಿಸಲಾಗಿದೆ.

20 ವಿಶ್ವಕಪ್ ಗಾಗಿ ಭಾರತದ ತಂಡವನ್ನು ಕಳೆದ ವಾರ ಘೋಷಿಸಲಾಗಿತ್ತು. ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಹಾರ್ದಿಕ್ ಪಾಂಡ್ಯ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ಭಾರತ ತಂಡ ಜೂನ್ 5ರಂದು ಐರ್ಲೆಂಡ್ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದ್ದು, ಜೂನ್ 9ರಂದು ಪಾಕಿಸ್ತಾನ ವಿರುದ್ಧ ಸೆಣಸಲಿದೆ. ಜೂನ್ 12ರಂದು ಅಮೆರಿಕ ವಿರುದ್ಧ ಸೆಣಸಲಿದ್ದು, ಜೂನ್ 15ರಂದು ಕೆನಡಾ ವಿರುದ್ಧ ಸೆಣಸಲಿದೆ.

ಭಾರತ ತಂಡ ಇ ರೀತಿ ಇದೆ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಅರ್ಶ್​ದೀಪ್​ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ. ಸಿರಾಜ್

Continue Reading

ಪ್ರಮುಖ ಸುದ್ದಿ

IPL 2024 : ಮುಂಬೈ ಚಾ ರಾಜಾ ರೋಹಿತ್​ ಶರ್ಮಾ ಎಂದು ಕೂಗಿದ ಹೇಡನ್​ ಪುತ್ರಿ ಗ್ರೇಸ್​​; ಇಲ್ಲಿದೆ ವಿಡಿಯೊ

IPL 2024: ಸ್ಟಾರ್ ಸ್ಪೋರ್ಟ್ಸ್ ಪ್ಯಾನೆಲ್​ನ ಭಾಗವಾಗಿ, ಗ್ರೇಸ್ ಹೇಡನ್ ಮೇ 6 ರಂದು ಎಸ್​ಆರ್​ಎಚ್​​ ವಿರುದ್ಧದ ಮುಂಬೈ ಇಂಡಿಯನ್ಸ್ ತವರು ಪಂದ್ಯಕ್ಕಾಗಿ ಮುಂಬೈನ ವಾಂಖೆಡೆ ಕ್ರೀಡಾಂಗಣಕ್ಕೆ ಹೋಗಿದ್ದರು. ಸ್ಟೇಡಿಯಮ್ ಹೊರಗೆ, ಅವರು ಹಲವಾರು ಸ್ಥಳೀಯ ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಮತ್ತು ರೋಹಿತ್ ಶರ್ಮಾ ಉತ್ಸಾಹಿಗಳೊಂದಿಗೆ ಸಂವಹನ ನಡೆಸಿದರು.

VISTARANEWS.COM


on

IPL 2024
Koo

ಮುಂಬಯಿ: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಅವರ ಪುತ್ರಿ ಗ್ರೇಸ್ ಹೇಡನ್ (Grace Hayden) ಮೇ 6 ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಮತ್ತು ಎಸ್​ಆರ್​ಎಚ್ ಐಪಿಎಲ್ (IPL 2024) ಪಂದ್ಯಕ್ಕೆ ಮೊದಲು ಮುಂಬೈ ಇಂಡಿಯನ್ಸ್ (ಎಂಐ) ಅಭಿಮಾನಿಗಳೊಂದಿಗೆ ನಡೆಸಿದ ಸಂವಾದ ವೈರಲ್ ಆಗಿದೆ. ಅವರು ಮುಂಬಯಿ ಇಂಡಿಯನ್ಸ್​ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಅವರನ್ನು ‘ಮುಂಬೈ ಚಾ ರಾಜಾ ರೋಹಿತ್ ಶರ್ಮಾ’ ಎಂದು ಕೂಗಿರುವುದು ಅಭಿಮಾನಿಗಳ ಉತ್ಸಾಹಕ್ಕೆ ಕಿಚ್ಚು ಹಚ್ಚಿದೆ.

ಐಪಿಎಲ್ 2024 ಋತುವಿನ ಅಧಿಕೃತ ಪ್ರಸಾರಕ ಸ್ಟಾರ್​ ಸ್ಪೋರ್ಟ್ಸ್​​ ನಿರೂಪಕರಲ್ಲಿ ಒಬ್ಬರಾದ ಗ್ರೇಸ್, ಮುಂಬೈ ಇಂಡಿಯನ್ಸ್ ದಂತಕಥೆ ರೋಹಿತ್ ಶರ್ಮಾ ಅವರನ್ನು ಹೊಗಳುವ ಮೂಲಕ ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾದರು. ಅವರು ಮೈದಾನದ ಹೊರಗೆ ನಿಂತು ಅಭಿಮಾನಿಗಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ಅಭಿಮಾನಿಗಳೇ ರೋಹಿತ್​ ಶರ್ಮಾ ಅವರನ್ನು ಹೇಗೆ ಕರೆಬೇಕು ಎಂದು ಗ್ರೇಸ್​ಗೆ ಹೇಳಿಕೊಟ್ಟರು. ಆಸ್ಟ್ರೇಲಿಯಾ ಮೂಲದ ಈ ನಿರೂಪಕಿ ಸಿಕ್ಕಿದ ಅವಕಾಶನವನ್ನು ಚೆನ್ನಾಗಿ ಬಳಸಿಕೊಂದು ಹಿಂದಿಯಲ್ಲಿ ಅವರನ್ನು ಹೊಗಳಿದರು.

ಸ್ಟಾರ್ ಸ್ಪೋರ್ಟ್ಸ್ ಪ್ಯಾನೆಲ್​ನ ಭಾಗವಾಗಿ, ಗ್ರೇಸ್ ಹೇಡನ್ ಮೇ 6 ರಂದು ಎಸ್​ಆರ್​ಎಚ್​​ ವಿರುದ್ಧದ ಮುಂಬೈ ಇಂಡಿಯನ್ಸ್ ತವರು ಪಂದ್ಯಕ್ಕಾಗಿ ಮುಂಬೈನ ವಾಂಖೆಡೆ ಕ್ರೀಡಾಂಗಣಕ್ಕೆ ಹೋಗಿದ್ದರು. ಸ್ಟೇಡಿಯಮ್ ಹೊರಗೆ, ಅವರು ಹಲವಾರು ಸ್ಥಳೀಯ ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಮತ್ತು ರೋಹಿತ್ ಶರ್ಮಾ ಉತ್ಸಾಹಿಗಳೊಂದಿಗೆ ಸಂವಹನ ನಡೆಸಿದರು. ಈ ವೇಳೆ ಅವರು ರೋಹಿತ್ ಶರ್ಮಾ ಅವರನ್ನು ಅಭಿಮಾನದಿಂದ ಕೂಗಿದರು.

ಇದನ್ನೂ ಓದಿ: IPL 2024 : ಕೆಕೆಆರ್​ನಲ್ಲಿ ನಾಯಕ ಶ್ರೇಯಸ್​ ಮಾತು ಯಾರೂ ಕೇಳುತ್ತಿಲ್ಲ!

ಸ್ಟಾರ್ ಸ್ಪೋರ್ಟ್ಸ್ ಕ್ರೀಡಾಂಗಣದ ಹೊರಗೆ ಸರತಿ ಸಾಲಿನಲ್ಲಿ ಕಾಯುತ್ತಿರುವ ಅಭಿಮಾನಿಗಳೊಂದಿಗೆ ಬೆರೆಯುವ ಒಂದು ನಿಮಿಷದ ತುಣುಕನ್ನು ಸಹ ಹಂಚಿಕೊಂಡಿದೆ. ವೀಡಿಯೊದ ಒಂದು ಹಂತದಲ್ಲಿ, ಗ್ರೇಸ್ ಮುಂಬೈನ ಮಾಜಿ ನಾಯಕನ ಅಭಿಮಾನಿಗಳೊಂದಿಗೆ “ಮುಂಬೈ ಚಾ ರಾಜಾ ರೋಹಿತ್ ಶರ್ಮಾ” ಎಂಬ ಜನಪ್ರಿಯ ರೋಹಿತ್ ಪರ ಘೋಷಣೆಯನ್ನು ಕೂಗಿದ್ದಾರೆ. ಅವರ ಮಾತು ಅಭಿಮಾನಿಗಳ ಉತ್ಸಾಹವನ್ನು ಇನ್ನಷ್ಟು ಹೆಚ್ಚಿಸಿತ್ತು.

ಗ್ರೇಸ್ ಹೇಡನ್ ಕಳೆದ ಕೆಲವು ವಾರಗಳಿಂದ ಅಧಿಕೃತ ಪ್ರಸಾರಕರಿಗಾಗಿ ಐಪಿಎಲ್ 2024ರ ನಾನಾ ದೃಶ್ಯಗಳನ್ನು ಸಕ್ರಿಯವಾಗಿ ವರದಿ ಮಾಡುತ್ತಿದ್ದಾರೆ. ಅವರ ತಂದೆ ಮ್ಯಾಥ್ಯೂ ಹೇಡನ್ ಕೂಡ ಭಾರತದಲ್ಲಿದ್ದಾರೆ. ಇತ್ತೀಚೆಗೆ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್​​ಕೆ ) ಆಟಗಾರರೊಂದಿಗೆ ಸಂವಹನ ನಡೆಸುತ್ತಿರುವುದು ಕಂಡುಬಂದಿದೆ.

ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಗಾಗಿ ತಮ್ಮ ಅಭಿಯಾನ ಮುಂದುವರಿಸುತ್ತಿದ್ದಾರೆ. ಈ ಐಪಿಎಲ್ 2024 ಋತುವಿನಲ್ಲಿ ಇಲ್ಲಿಯವರೆಗೆ, ಡೈನಾಮಿಕ್ ಆರಂಭಿಕ ಬ್ಯಾಟರ್​ 11 ಇನ್ನಿಂಗ್ಸ್​ಗಳಿಂದ 32.60 ಸರಾಸರಿಯಲ್ಲಿ 326 ರನ್ ಗಳಿಸಿದ್ದಾರೆ. ಪಂದ್ಯಾವಳಿ ಪ್ರಾರಂಭವಾಗುವ ಕೆಲವು ತಿಂಗಳುಗಳ ಮೊದಲು ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಲಾಗಿತ್ತು. ದಶಕದ ನಾಯಕತ್ವವನ್ನು ತೆಗೆದು ಹಾಕಿರುವುದು ಅಭಿಮಾನಿಗಳಿಗೆ ಬೇಸರ ಉಂಟು ಮಾಡಿತ್ತು.

Continue Reading

ಪ್ರಮುಖ ಸುದ್ದಿ

Champions Trophy : ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯಲು ಬಿಡುವುದಿಲ್ಲ ? ಬಿಸಿಸಿಐ ಸ್ಫೋಟಕ ಹೇಳಿಕೆ

Champions Trophy: ಎಎನ್ಐ ಜೊತೆ ಮಾತನಾಡಿದ ಶುಕ್ಲಾ, ಬಿಸಿಸಿಐ ಭಾರತ ಸರ್ಕಾರದ ನಿರ್ಧಾರವನ್ನು ಮಾತ್ರ ಪಾಲಿಸುತ್ತದೆ. ಇದನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ ಅಂತಿಮವೆಂದು ಪರಿಗಣಿಸಲಾಗುವುದು ಎಂದು ಹೇಳಿದರು. “ಚಾಂಪಿಯನ್ಸ್ ಟ್ರೋಫಿಯ ವಿಷಯದಲ್ಲಿ ಭಾರತ ಸರ್ಕಾರವು ನಮಗೆ ಏನು ಹೇಳುತ್ತದೆಯೋ ಅದನ್ನು ನಾವು ಮಾಡುತ್ತೇವೆ. ಭಾರತ ಸರ್ಕಾರ ನಮಗೆ ಅನುಮತಿ ನೀಡಿದಾಗ ಮಾತ್ರ ನಾವು ನಮ್ಮ ತಂಡವನ್ನು ಕಳುಹಿಸುತ್ತೇವೆ ಎಂದು ಹೇಳಿದ್ದಾರೆ.

VISTARANEWS.COM


on

Champions Trophy
Koo

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ (Champions Trophy) ಭಾರತದ ಸಂಭಾವ್ಯ ಭಾಗವಹಿಸುವಿಕೆಯ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಪಂದ್ಯಾವಳಿಯಲ್ಲಿ ಭಾರತ ತಂಡದ ಭಾಗವಹಿಸುವಿಕೆಯು ಸರ್ಕಾರದ ಅನುಮೋದನೆಗೆ ಒಳಪಟ್ಟಿರುತ್ತದೆ ಎಂದು ಬಹಿರಂಗಪಡಿಸಿದ್ದಾರೆ. ಇದೇ ವೇಳೆ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯುವುದೇ ಡೌಟು ಎಂಬುದಾಗಿ ಹೇಳಿದ್ದಾರೆ.

ಎಎನ್ಐ ಜೊತೆ ಮಾತನಾಡಿದ ಶುಕ್ಲಾ, ಬಿಸಿಸಿಐ ಭಾರತ ಸರ್ಕಾರದ ನಿರ್ಧಾರವನ್ನು ಮಾತ್ರ ಪಾಲಿಸುತ್ತದೆ. ಇದನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ ಅಂತಿಮವೆಂದು ಪರಿಗಣಿಸಲಾಗುವುದು ಎಂದು ಹೇಳಿದರು. “ಚಾಂಪಿಯನ್ಸ್ ಟ್ರೋಫಿಯ ವಿಷಯದಲ್ಲಿ ಭಾರತ ಸರ್ಕಾರವು ನಮಗೆ ಏನು ಹೇಳುತ್ತದೆಯೋ ಅದನ್ನು ನಾವು ಮಾಡುತ್ತೇವೆ. ಭಾರತ ಸರ್ಕಾರ ನಮಗೆ ಅನುಮತಿ ನೀಡಿದಾಗ ಮಾತ್ರ ನಾವು ನಮ್ಮ ತಂಡವನ್ನು ಕಳುಹಿಸುತ್ತೇವೆ. ಆದ್ದರಿಂದ ನಾವು ಭಾರತ ಸರ್ಕಾರದ ನಿರ್ಧಾರದ ಪ್ರಕಾರ ಹೋಗುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: IPL 2024 : ಕೆಕೆಆರ್​ನಲ್ಲಿ ನಾಯಕ ಶ್ರೇಯಸ್​ ಮಾತು ಯಾರೂ ಕೇಳುತ್ತಿಲ್ಲ!

ವಿಶೇಷವೆಂದರೆ, 2008 ರಲ್ಲಿ ಕುಖ್ಯಾತ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನ ಭಾಗಿಯಾಗಿದ್ದ ನಂತರ ಭಾರತವು ಪಾಕಿಸ್ತಾನದೊಂದಿಗಿನ ದ್ವಿಪಕ್ಷೀಯ ಕ್ರಿಕೆಟ್ ಸಂಬಂಧವನ್ನು ರದ್ದುಗೊಳಿಸಿತು. 2012-13ರಲ್ಲಿ ಅಲ್ಪಾವಧಿಗೆ ಪುನರಾರಂಭಗೊಂಡರೂ, ಭಾರತವು ಅಂತಿಮವಾಗಿ ಅದೇ ಕಾರಣಕ್ಕಾಗಿ ಅದನ್ನು ಮತ್ತೆ ರದ್ದುಗೊಳಿಸಿತು.

ಹೀಗಾಗಿ 2012-13ರ ಬಳಿಕ ಉಭಯ ತಂಡಗಳು ಒಂದೇ ಒಂದು ದ್ವಿಪಕ್ಷೀಯ ಸರಣಿ ಆಡಿಲ್ಲ. ಆದಾಗ್ಯೂ, 2008 ರಿಂದ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸದ ಕಾರಣ ಪಾಕಿಸ್ತಾನ ನೆಲದಲ್ಲಿ ಚಾಂಪಿಯನ್ಸ್ ಟ್ರೋಫಿ ಆಡಲು ಆಟಗಾರರಿಗೆ ಅವಕಾಶ ನೀಡದು ಎಂಬುದು ಖಾತರಿಯಾಗಿದೆ. ಇದು ನಿಜವಾಗಿಯೂ ಸಂಭವಿಸಿದರೆ ಪಿಸಿಬಿ ಹೈಬ್ರಿಡ್ ಮಾದರಿ ಪ್ರಸ್ತಾಪಿಸಬಹುದು ಮತ್ತು ಏಷ್ಯಾ ಕಪ್ 2023 ರಂತೆ ಪಂದ್ಯಾವಳಿಯನ್ನು ನಡೆಸಬಹುದು ಎಂದು ಹೇಳಿದರು.

Continue Reading

ಪ್ರಮುಖ ಸುದ್ದಿ

Lok Sabha Election 2024: ನಾಳೆ ರಾಜ್ಯದಲ್ಲಿ 2ನೇ ಹಂತದ ಮತದಾನಕ್ಕೆ ಸಕಲ ಸಿದ್ಧತೆ; 14 ಕ್ಷೇತ್ರಗಳಲ್ಲಿ 227 ಅಭ್ಯರ್ಥಿಗಳ ಸ್ಪರ್ಧೆ

Lok Sabha Election 2024: ಮತದಾನ ಕೇಂದ್ರಗಳಲ್ಲಿ ಮತದಾರರ ಅನುಕೂಲಕ್ಕಾಗಿ ಕುಡಿಯುವ ನೀರು ಸೇರಿ ಅಗತ್ಯ ವ್ಯವಸ್ಥೆ ಮಾಡಲಾಗಿದ್ದು, ಮತಗಟ್ಟೆಗಳ ಸುತ್ತ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

VISTARANEWS.COM


on

Lok Sabha Election 2024
Koo

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ನಡೆಸಿದ್ದು, ಮೇ 17ರಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಮತದಾನ ಕೇಂದ್ರದಲ್ಲಿ ಮತದಾರರ ಅನುಕೂಲಕ್ಕಾಗಿ ಕುಡಿಯುವ ನೀರು ಸೇರಿ ಅಗತ್ಯ ವ್ಯವಸ್ಥೆ ಮಾಡಲಾಗಿದ್ದು, ಮತಗಟ್ಟೆಗಳ ಸುತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಭದ್ರತೆ ಏರ್ಪಡಿಸಲಾಗಿದೆ.

ಮತದಾನ ನಡೆಯುವ 14 ಕ್ಷೇತ್ರಗಳು ಯಾವುವು?

ಮೇ 7 ರಂದು ಮಂಗಳವಾರ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 14 ಕ್ಷೇತ್ರಗಳಲ್ಲಿ 28,269 ಮತಗಟ್ಟೆ ಸ್ಥಾಪಿಸಿದ್ದು, ಶಾಂತಿಯುತ ಚುನಾವಣೆ ನಡೆಸಲು ಸುಮಾರು 40 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಘಟಾನುಘಟಿಗಳು ಸ್ಪರ್ಧಿಸಿರುವ‌ 2ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಒಟ್ಟು 2.59 ಕೋಟಿ ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ.

227 ಅಭ್ಯರ್ಥಿಗಳು ಸ್ಪರ್ಧೆ

ಕಾಂಗ್ರೆಸ್, ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದರೆ, ಬಿಎಸ್‌ಪಿ 9, ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ
ಪಕ್ಷಗಳು 23, ಸ್ವತಂತ್ರ ಅಭ್ಯರ್ಥಿಗಳು 117 ಸೇರಿ ಒಟ್ಟು 227 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಇದರಲ್ಲಿ 206
ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ.

ಈ ಕ್ಷೇತ್ರಗಳಲ್ಲಿ 2,59,52,958 ಮತದಾರರಿದ್ದು, 1,29,48,978 ಪುರುಷ, 1,29,64,570 ಮಹಿಳಾ ಹಾಗೂ 1,945 ತೃತೀಯ ಲಿಂಗಿ ಮತದಾರರು ಇದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅತೀ ಕಡಿಮೆ 16,41,156 ಮತದಾರರಿದ್ದರೆ, ಅತಿ ಹೆಚ್ಚು ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ 20,98,202 ಮತದಾರರಿದ್ದಾರೆ.

ಮತಗಟ್ಟೆಗಳಲ್ಲಿ ಮತದಾರರಿಗೆ ಮೂಲಸೌಕರ್ಯ

ತಾಪಮಾನ ಹೆಚ್ಚಾಗಿರುವುದನ್ನು ಗಮನದಲ್ಲಿಟ್ಟುಕೊಂಡು ಚುನಾವಣೆ ಆಯೋಗ ಮತದಾನದ ದಿನದಂದು ಮತಗಟ್ಟೆಯಲ್ಲಿ ಮತದಾರರಿಗಾಗಿ ಕನಿಷ್ಠ ಸೌಲಭ್ಯಗಳಾದ ಕುಡಿಯುವ ನೀರು, ಒಆರ್‌ಎಸ್ ಜ್ಯೂಸ್, ಕುಳಿತುಕೊಳ್ಳಲು ಕಾಯ್ದಿರಿಸಿದ ಕೊಠಡಿಗಳು, ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ, ಆಂಬ್ಯುಲೆನ್ಸ್ ವಾಹನಗಳು ಮುಂತಾದ ಹಲವು ಮೂಲ ಸೌಲಭ್ಯಗಳನ್ನು ಒದಗಿಸಿದೆ. ಇನ್ನು ದೃಷ್ಟಿಹೀನ ಮತದಾರರ ಸಹಾಯಕ್ಕಾಗಿ ಬ್ರೈಲ್ ಸೌಲಭ್ಯವುಳ್ಳ ಇವಿಎಂ ಗಳನ್ನು ಮತಗಟ್ಟೆಗಳಲ್ಲಿ ಅಳವಡಿಸಲಾಗಿದೆ.

ಇದನ್ನೂ ಓದಿ | ನಾಳೆ ಎರಡನೇ ಹಂತದ ಮತದಾನ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ಮತದಾರರ ಗುರುತಿನ ಚೀಟಿ ಕಡ್ಡಾಯ

ಚುನಾವಣಾ ಆಯೋಗದಿಂದ ಈಗಾಗಲೇ ನೀಡಲಾಗಿರುವ ವೋಟರ್‌ ಸ್ಲಿಪ್‌ ಜತೆಗೆ ಮತದಾರರ ಗುರುತಿನ ಚೀಟಿ,
ಆಧಾರ್‌ಕಾರ್ಡ್, ನರೇಗಾ ಜಾಬ್‌ ಕಾರ್ಡ್, ಬ್ಯಾಂಕ್, ಪೋಸ್ಟ್ ಆಫೀಸ್ ಪಾಸ್‌ಬುಕ್, ಕಾರ್ಮಿಕ ಸಚಿವರು ನೀಡುವ
ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೆಸೆನ್ಸ್, ಪ್ಯಾನ್ ಕಾರ್ಡ್, ಪಾಸ್‌ಪೋರ್ಟ್, ಪಿಂಚಣಿಯ ದಾಖಲೆ,
ರಾಜ್ಯಸರ್ಕಾರ, ಸಾರ್ವಜನಿಕ ಸಂಸ್ಥೆಗಳು, ಪಬ್ಲಿಕ್ ಲಿಮಿಟೆಡ್ ಕಂಪನಿಗಳು ಉದ್ಯೋಗಿಗಳಿಗೆ ನೀಡಿದ
ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಎಂಪಿ, ಎಂಎಲ್‌ಎ, ಎಂಎಲ್‌ಸಿಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ, ಸಾಮಾಜಿಕ ನ್ಯಾಯ ಸಬಲೀಕರಣ ನೀಡಿರುವ ವಿಶಿಷ್ಟ ಅಂಗವಿಕಲ ಗುರುತಿನ ಚೀಟಿ ತೋರಿಸಿ ಮತ ಚಲಾಯಿಸಬಹುದು.

Continue Reading
Advertisement
T20 World Cup 2024
ಕ್ರೀಡೆ6 mins ago

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

108 Ambulance
ಕರ್ನಾಟಕ24 mins ago

108 Ambulance: 108 ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

IPL 2024
ಪ್ರಮುಖ ಸುದ್ದಿ28 mins ago

IPL 2024 : ಮುಂಬೈ ಚಾ ರಾಜಾ ರೋಹಿತ್​ ಶರ್ಮಾ ಎಂದು ಕೂಗಿದ ಹೇಡನ್​ ಪುತ್ರಿ ಗ್ರೇಸ್​​; ಇಲ್ಲಿದೆ ವಿಡಿಯೊ

Champions Trophy
ಪ್ರಮುಖ ಸುದ್ದಿ52 mins ago

Champions Trophy : ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯಲು ಬಿಡುವುದಿಲ್ಲ ? ಬಿಸಿಸಿಐ ಸ್ಫೋಟಕ ಹೇಳಿಕೆ

Lok Sabha Election 2024
ಪ್ರಮುಖ ಸುದ್ದಿ1 hour ago

Lok Sabha Election 2024: ನಾಳೆ ರಾಜ್ಯದಲ್ಲಿ 2ನೇ ಹಂತದ ಮತದಾನಕ್ಕೆ ಸಕಲ ಸಿದ್ಧತೆ; 14 ಕ್ಷೇತ್ರಗಳಲ್ಲಿ 227 ಅಭ್ಯರ್ಥಿಗಳ ಸ್ಪರ್ಧೆ

IPL 2024
ಪ್ರಮುಖ ಸುದ್ದಿ2 hours ago

IPL 2024 : ಕೆಕೆಆರ್​ನಲ್ಲಿ ನಾಯಕ ಶ್ರೇಯಸ್​ ಮಾತು ಯಾರೂ ಕೇಳುತ್ತಿಲ್ಲ!

Bomb Threat
ದೇಶ2 hours ago

ಶಾಲೆಗಳಿಗೆ ಇ-ಮೇಲ್‌ ಮೂಲಕ ಹುಸಿ ಬಾಂಬ್‌ ಬೆದರಿಕೆ; ಕಠಿಣ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ!

Prajwal Revanna Case Delete vulgar video and avoid legal action says SIT chief
ಹಾಸನ2 hours ago

Prajwal Revanna Case: ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ಇದ್ದರೆ ಡಿಲೀಟ್‌ ಮಾಡಿ, ಇಲ್ಲದಿದ್ದರೆ ಕ್ರಮ: SIT ಮುಖ್ಯಸ್ಥರ ಖಡಕ್‌ ವಾರ್ನಿಂಗ್

IPL 2024
ಕ್ರೀಡೆ2 hours ago

IPL 2024 : ಹಳೆ ಸೇಡು; ರಾಹುಲ್ ವಿರುದ್ಧವೇ ತಿರುಗಿಬಿದ್ದ ನವಿನ್​ ಉಲ್ ಹಕ್​

Prajwal Revanna Case HD Deve Gowda takes a big decision
ಕ್ರೈಂ2 hours ago

Prajwal Revanna Case: ‌ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ಮಹತ್ವದ ಫರ್ಮಾನು ಹೊರಡಿಸಿದ ಎಚ್‌.ಡಿ. ದೇವೇಗೌಡ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ4 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ5 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ5 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ18 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌