ರೋಹಿತ್‌ ಚಕ್ರತೀರ್ಥ ಸಮಿತಿ ಮೇಲಿನ ಆರೋಪಕ್ಕೆ ಸಚಿವ ನಾಗೇಶ್‌ರವರ ಸಂಪೂರ್ಣ ವರದಿ ಇಲ್ಲಿದೆ - Vistara News

ಪ್ರಮುಖ ಸುದ್ದಿ

ರೋಹಿತ್‌ ಚಕ್ರತೀರ್ಥ ಸಮಿತಿ ಮೇಲಿನ ಆರೋಪಕ್ಕೆ ಸಚಿವ ನಾಗೇಶ್‌ರವರ ಸಂಪೂರ್ಣ ವರದಿ ಇಲ್ಲಿದೆ

ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದ ದಿನವೇ ರೋಹಿತ್‌ ಚಕ್ರತೀರ್ಥ ಸಮಿತಿ ವಜಾಗೊಳಿಸುವ ಬಹುತೇಕ ನಿರ್ಧಾರವಾಗಿತ್ತು. ಆದರೆ ಅದಕ್ಕೂ ಮುನ್ನ ಕೆಲವು ಪ್ರಕ್ರಿಯೆಗಳನ್ನು ಪೂರೈಸಲಾಗಿದೆ, ಅವುಗಳಲ್ಲಿ ಒಂದು ಬಿ.ಸಿ. ನಾಗೇಶ್‌ ಅವರು ನೀಡಿರುವ ಈ ವರದಿ ಎನ್ನಲಾಗುತ್ತಿದೆ.

VISTARANEWS.COM


on

bc nagesh report on rohit chakratirtha
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆಗೆ ರಾಜ್ಯ ಸರ್ಕಾರ ರಚಿಸಿದ್ದ ರೋಹಿತ್‌ ಚಕ್ರತೀರ್ಥ ಸಮಿತಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ವಿಸರ್ಜನೆ ಮಾಡಿದ್ದಾರೆ. ಟಿಪ್ಪು ವಿಚಾರವನ್ನು ಪಠ್ಯದಿಂದ ಕೈಬಿಡಲಾಗಿದೆ ಎನ್ನುವುದರಿಂದ ಆರಂಭವಾರ ವಿವಾದ ಕುವೆಂಪು, ಬಸವಣ್ಣ, ನಾಡಗೀತೆವರೆಗೆ ಸಾಗಿಬಂತು.

ಮುಖ್ಯವಾಗಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ನಾಡಗೀತೆಗೆ ಅವಮಾನದ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದ ನಂತರದಲ್ಲಿ ಇಡೀ ವಿವಾದದ ದಿಕ್ಕು ಬದಲಾಯಿತು. ರೋಹಿತ್‌ ಚಕ್ರತೀರ್ಥ ಅವರನ್ನು ವಜಾ ಮಾಡಬೇಕು ಎಂಬ ಮಾತು ಸಚಿವ ಸಂಪುಟ ಸಭೆಯಲ್ಲಿ ವ್ಯಕ್ತವಾದರೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಒತ್ತಾಸೆ ಮೇರೆಗೆ ನಿರ್ಧಾರ ಮುಂದೂಡಲಾಯಿತು.

ಕೊನೆಯ ಅವಕಾಶವಾಗಿ, ಸ್ವತಃ ಸಚಿವರೇ ಸ್ವಾಮೀಜಿಯವರನ್ನು ಮಾತನಾಡಿಸಿ ಮನವೊಲಿಸುವ ಹೊಣೆ ಹೊತ್ತರು. ಈ ಸಂದರ್ಭದಲ್ಲಿ, ಆರೋಪಗಳ ಕುರಿತು ಒಂದು ವರದಿಯನ್ನು ಸಿದ್ಧಪಡಿಸಿ ಕೊಡುವಂತೆ ನಾಗೇಶ್‌ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ಈ ವರದಿಯನ್ನು ಆಧರಿಸಿ ನಿರ್ಧಾರ ಮಾಡುವುದಾಗಿ ತಿಳಿಸಿದ್ದರು. ನಾಗೇಶ್‌ ಅವರು ಸಿಎಂ ಬೊಮ್ಮಾಯಿ ಅವರಿಗೆ ನೀಡಿದ 14 ಅಂಶಗಳ ಸ್ಪಷ್ಟೀಕರಣ ವರದಿ ಇಲ್ಲಿದೆ.

ಕ್ರಮ ಸಂಖ್ಯೆಆರೋಪ/ಆಕ್ಷೇಪಣೆ ಸ್ಪಷ್ಟೀಕರಣ
1ರಾಷ್ಟ್ರಕವಿ ಕುವೆಂಪು ರವರ ವ್ಯಕ್ತಿತ್ವಕ್ಕೆ ಅವಮಾನವಾದಂತೆ ಬರೆಯಲಾಗಿದೆ.(4ನೇ ತರಗತಿಯ ಪರಿಸರ ಅಧ್ಯಯನದ ಪಠ್ಯಪುಸ್ತಕದಲ್ಲಿ ಕುವೆಂಪು ರವರ ಪರಿಚಯ ಮಾಡಿಸುವ ವಿಷಯಾಂಶದಲ್ಲಿ ‘ಅನೇಕರ ಪ್ರೋತ್ಸಾಹದಿಂದ ಇವರು ಮುಂದೆ ಪ್ರಖ್ಯಾತ ಕವಿ ಎನ್ನಿಸಿಕೊಂಡರು’ ಎಂದು ಬರೆದಿರುವ ಸಾಲುಗಳ ಬಗ್ಗೆ.-1ರಿಂದ 5ನೇ ತರಗತಿಗಳ ಪರಿಸರ ಅಧ್ಯಯನ ಪಠ್ಯಪುಸ್ತಕಗಳನ್ನು ಶ್ರೀ ರೋಹಿತ್‌ ಚಕ್ರತೀರ್ಥ ಸಮಿತಿಯು ಪರಿಷ್ಕರಣೆಯನ್ನು ಮಾಡಿರುವುದಿಲ್ಲ. 4ನೇ ತರಗತಿಗೆ ಸಂಬಂಧಿಸಿದ ಸದರಿ ವಿಷಯಾಂಶವು 2014-15ರಲ್ಲಿ ಪ್ರೊ. ಮುಡಂಬಡಿತ್ತಾಯ ಸಮಿತಿಯು ರಚಿಸಿದ ಪಠ್ಯ ಹಾಗೂ ಪ್ರೊ. ಬರಗೂರುರವರ ಸಮಿತಿಯು ಪರಿಷ್ಕರಿಸಿದ ಪಠ್ಯಗಳಲ್ಲಿ ಇದ್ದದ್ದು ಹಾಗೆಯೇ ಮುಂದುವರಿದಿದೆ.

-2014-15ನೇ ಸಾಲಿನಿಂದಲೂ ಸದರಿ ಪಠ್ಯಪುಸ್ತಕ ಜಾರಿಯಲ್ಲಿದ್ದರೂ, ಈ ಕುರಿತು ಯಾವುದೇ ವಿವಾದ ಆಗಿರಲಿಲ್ಲ.
2ಕುವೆಂಪುರವರ ರಾಷ್ಟ್ರಕವಿ ಬರಹಗಳನ್ನು ಭಾಷಾ ಪಠ್ಯಪುಸ್ತಕದಿಂದ ಕೈಬಿಟ್ಟಿರುವ ಆರೋಪ-ಪ್ರೊ. ಮುಡಂಬಂಡಿತ್ತಾಯ ಸಮಿತಿಯು ರಚಿಸಿದ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ಕುವೆಂಪು ಅವರ ಒಟ್ಟು 8 ಪಾಠ/ಪದ್ಯಗಳಿದ್ದವು.

-ಪ್ರೊ. ಬರಗೂರು ಸಮಿತಿಯು ಕನ್ನಡ ಪ್ರಥಮ ಭಾಷೆ, ದ್ವಿತೀಯ ಭಾಷೆ ಹಾಗೂ ತೃತೀಯ ಭಾಷೆ ಸೇರಿ ಕುವೆಂಪುರವರ 1 ಪಾಠ ಕಡಿಮೆ ಮಾಡಿ ಒಟ್ಟು 7 ಬರಹಗಳನ್ನು ಪಠ್ಯಪುಸ್ತಕಗಳಲ್ಲಿ ಅಳವಡಿಸಲಾಗಿತ್ತು

-ಶ್ರೀ ರೋಹಿತ್‌ ಚಕ್ರತೀರ್ಥ ರವರು ಪರಿಷ್ಕರಿಸಿದ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ಹೊಸದಾಗಿ ಕುವೆಂಪುರವರ 3 ಪಾಠ/ಪದ್ಯಗಳನ್ನು ಸೇರಿಸಿದ್ದು, ಒಟ್ಟು 10 ಪಾಠ/ಪದ್ಯಗಳನ್ನು ಅಳವಡಿಸಲಾಗಿದೆ.
3ಭಗತ್‌ಸಿಂಗ್ ಪಾಠವನ್ನು ಕೈಬಿಡಲಾಗಿದೆ ಎಂಬ ಆರೋಪ-2021-22 ಸಾಲಿನ ಕನ್ನಡ ಪ್ರಥಮ ಭಾಷೆ ಪಠ್ಯಪುಸ್ತಕದಲ್ಲಿ ಇದ್ದ ಭಗತ್‌ ಸಿಂಗ್‌ ಪಾಠವು (ಲೇಖಕರು: ಜಿ. ರಾಮಕೃಷ್ಣ) ಪರಿಷ್ಕೃತ ಪಠ್ಯಪುಸ್ತಕದಲ್ಲಿ ಮುಂದುವರಿದಿದೆ.

-ಭಗತ್‌ ಸಿಂಗ್‌ ಕುರಿತು ಸಮಾಜ ವಿಜ್ಞಾನ 7ನೇ ತರಗತಿ ಹಾಗೂ 10ನೇ ತರಗತಿ ಪಠ್ಯಪುಸ್ತಕಗಳಲ್ಲಿಯೂ ಮಾಹಿತಿಯನ್ನು ನೀಡಲಾಗಿದೆ.  

-2021-22 ಸಾಲಿನ ಕನ್ನಡ ಪ್ರಥಮ ಭಾಷೆ ಪಠ್ಯಪುಸ್ತಕದಲ್ಲಿ ಇದ್ದ ಭಗತ್‌ ಸಿಂಗ್‌ ಪಾಠವು (ಲೇಖಕರು: ಜಿ. ರಾಮಕೃಷ್ಣ) ಪರಿಷ್ಕೃತ ಪಠ್ಯಪುಸ್ತಕದಲ್ಲಿ ಮುಂದುವರಿದಿದೆ.

-ಭಗತ್‌ ಸಿಂಗ್‌ ಕುರಿತು ಸಮಾಜ ವಿಜ್ಞಾನ 7ನೇ ತರಗತಿ ಹಾಗೂ 10ನೇ ತರಗತಿ ಪಠ್ಯಪುಸ್ತಕಗಳಲ್ಲಿಯೂ ಮಾಹಿತಿಯನ್ನು ನೀಡಲಾಗಿದೆ.  
4ಶ್ರೀ ನಾರಾಯಣ ಗುರು ಹಾಗೂ ಪೆರಿಯಾರ್‌ ಪಠ್ಯವನ್ನು ಪಠ್ಯಪುಸ್ತಕದಿಂದ ತೆಗೆದು ಹಾಕಿರುವ ಬಗ್ಗೆ.-ಕಳೆದ ಸಾಲಿನ 10ನೇ ತರಗತಿ ಸಮಾಜವಿಜ್ಞಾನ ಪಠ್ಯಪುಸ್ತಕದಲ್ಲಿ ಶ್ರೀ ನಾರಾಯಣಗುರು ಹಾಗೂ ಪೆರಿಯಾರ್‌ ವಿಷಯಾಂಶವನ್ನು ನೀಡಲಾಗಿತ್ತು. ಪರಿಷ್ಕರಣೆ ಸಂದರ್ಭದಲ್ಲಿ ಮಕ್ಕಳಿಗೆ ಸಮಾಜವಿಜ್ಞಾನ ಪಠ್ಯಗಳಲ್ಲಿ ವಿಷಯಾಂಶಗಳ ಹೊರೆ ಎಂಬ ದೂರುಗಳು ಇದ್ದುದ್ದರಿಂದ ಸಮಾಜವಿಜ್ಞಾನದ ಕೆಲವು ಘಟಕಗಳನ್ನು ಸಂಪೂರ್ಣವಾಗಿ ಕೈಬಿಡಲಾಗಿತ್ತು. ಕೆಲವನ್ನು ಸಂಕ್ಷಿಪ್ತಗೊಳಿಸಲಾಗಿತ್ತು ಹಾಗೂ ಕೆಲವನ್ನು ಬೇರೆ ವಿಷಯಗಳಿಗೆ ವರ್ಗಾಯಿಸಲಾಗಿದೆ.

-ಅದರಂತೆ ಸಮಾಜವಿಜ್ಞಾನ ಪಠ್ಯಪುಸ್ತಕದಲ್ಲಿದ್ದ ಶ್ರೀ ನಾರಾಯಣಗುರು ಹಾಗೂ ಪೆರಿಯಾರ್‌ ವಿಷಯಾಂಶಗಳನ್ನು 10ನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದ ಸಾಮಾಜಿಕ ಮತ್ತು ಧಾರ್ಮಿಕ ಸುಧಾರಕರು ಎಂಬ ಪಾಠದಲ್ಲಿ ನೀಡಲಾಗಿದೆ.

-ಶ್ರೀ ನಾರಾಯಣಗುರು ಕುರಿತ ಪಾಠವನ್ನು 7ನೇ ತರಗತಿ ಸಮಾಜವಿಜ್ಞಾನ ಪಠ್ಯಪುಸ್ತಕದಲ್ಲಿ ಮುಂದುವರಿಸಲಾಗಿದೆ.
5ಟಿಪ್ಪು ಸುಲ್ತಾನ್‌ ಕುರಿತ ಪಾಠಗಳನ್ನು ತೆಗೆದಿರುವ ಆರೋಪ-ಕಳೆದ ಸಾಲಿನ ಸಮಾಜವಿಜ್ಞಾನ 6,7 ಹಾಗೂ 10ನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಟಿಪ್ಪು ಸುಲ್ತಾನ್‌ ಕುರಿತು ಪಾಠಗಳನ್ನು ನೀಡಲಾಗಿತ್ತು.

-ಪರಿಷ್ಕೃತ 6,7 ಹಾಗೂ 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕಗಳಲ್ಲು ಟಿಪ್ಪು ಸುಲ್ತಾನ್‌ ಪಾಠಗಳನ್ನು ಉಳಿಸಿಕೊಳ್ಳಲಾಗಿದೆ.
6ಬಸವಣ್ಣನವರನ್ನು ಕುರಿತು ನೀಡಿರುವ ವಿಷಯಾಂಶಗಳಲ್ಲಿ ವಿವಾದಾತ್ಮಕ ಅಂಶಗಳಿವೆ ಎನ್ನುವ ಆರೋಪ-ಹಿಂದಿನ ಪಠ್ಯಪುಸ್ತಕದಲ್ಲಿದ್ದ ಬಸವೇಶ್ವರ ಪಾಠ ಹಾಗೂ ಈಗ ಅಳವಡಿಸಿರುವ ಪಾಠ ಎರಡರಲ್ಲಿಯೂ ʼವೀರಶೈವ ಧರ್ಮʼ ಎಂಬ ಉಲ್ಲೇಖವಿದೆ.

-ಎರಡೂ ಪಠ್ಯಗಳಲ್ಲಿ ಬಸವಣ್ಣನವರು ʼಲಿಂಗದೀಕ್ಷೆ ಪಡೆದರುʼ ಎಂಬ ಉಲ್ಲೇಖವಿದೆ. 
7ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿದ್ದ ಕೆಲವು ಲೇಖಕರ ಪಾಠ/ಪದ್ಯಗಳನ್ನು ಪಠ್ಯಪುಸ್ತಕದಿಂದ ಕೂಬಿಟ್ಟಿರುವ ಆಕ್ಷೇಪಣೆ-1ರಿಂದ 10ನೇ ತರಗತಿ ಭಾಷಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸುವ ಸಂದರ್ಭದಲ್ಲಿ ಪ್ರಥಮಭಾಷೆಯಲ್ಲಿ 33 ಪಾಠ/ಪದ್ಯಗಳು, ದ್ವಿತೀಯ ಭಾಷೆಯಲ್ಲಿ 8 ಪಾಠ/ಪದ್ಯಗಳು, ತೃತೀಯ ಭಾಷೆಯಲ್ಲಿ 4 ಪಾಠ/ಪದ್ಯಗಳು ಬದಲಾವಣೆ ಮಾಡಲಾಗಿದೆ.

-ಯಥಾವತ್ತಾಗಿ ಉಳಿಸಿಕೊಂಡಿರುವ ಪಾಠ/ಪದ್ಯಗಳು:
*ಪ್ರಥಮ ಭಾಷೆ:165
*ದ್ವಿತೀಯ ಭಾಷೆ: 162
*ತೃತೀಯ ಭಾಷೆ:94
8ಪರಿಷ್ಕೃತ ಕನ್ನಡ ಪಠ್ಯಪುಸ್ತಕದಲ್ಲಿರುವ ಕೆಲವುಪದ್ಯ/ಗದ್ಯಗಳಿಗೆ ನೀಡಿದ ಅನುಮತಿಯನ್ನು ಹಿಂಪಡೆದಿರುವ ಬಗ್ಗೆ1ರಿಂದ 10ನೇ ತರಗತಿಯ ಪರಿಷ್ಕೃತ ಕನ್ನಡ ಭಾಷೆ ಪಠ್ಯಪುಸ್ತಕದಲ್ಲಿರುವ ತಮ್ಮ ಪದ್ಯ/ಗದ್ಯಗಳಿಗೆ ನೀಡಿದ್ದ ಅನುಮತಿಯನ್ನು ಹಿಂಪಡೆಯುವುದಾಗಿ ಇದುವರೆಗೆ 7 ಲೇಖಕರು ಹೇಳಿದ್ದಾರೆ
9ಶ್ರೀ ಹೆಡಗೆವಾರ್‌ ರವರ ಪಾಠವನ್ನು 10ನೇ ತರಗತಿ ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿ ಸೇರಿಸಿರುವ ಬಗ್ಗೆ-ನಿಜವಾದ ಆದರ್ಶಪುರುಷ ಯಾರಾಗಬೇಕು ಎಂಬ ಸದರಿ ಪಾಠವು ವ್ಯಕ್ತಿಗಳ ಬದಲು ತತ್ವವನ್ನು ಗೌರವಿಸಿ ಎಂಬ ಸಂದೇಶ ನೀಡುತ್ತಿದ್ದು, ಬರಹದ ಮೌಲ್ಯವನ್ನಾಧರಿಸಿ ಆಯ್ಕೆ ಮಾಡಿ ಅಳವಡಿಸಲಾಗಿದೆ.

-ಶಿವಕೋಟ್ಯಾಚಾರ್ಯರವರ ಸುಕುಮಾರ ಸ್ವಾಮಿಯ ಕಥೆ ಪಾಠದ ಬದಲು ಸೇರ್ಪಡೆ ಮಾಡಲಾಗಿದೆ
10ಶ್ರೀ ಸೂಲಿಬೆಲೆಯವರ ʼತಾಯಿ ಭಾರತಿಯ ಅಮರ ಪುತ್ರರುʼ ಎಂಬ ಪಾಠವನ್ನು ಹೊಸದಾಗಿ ಸೇರ್ಪಡೆ ಮಾಡಿರುವ ಬಗ್ಗೆ-ಸದರಿ ಪಾಠವು ಹುತಾತ್ಮರಾದ ಶ್ರೀ ಭಗತ್‌ ಸಿಂಗ್‌, ಸುಖದೇವ್‌ ಹಾಗೂ ರಾಜಗುರುರವರ ಸ್ವಾತಂತ್ರ್ಯ ಹೋರಾಟದ ಸ್ಪೂರ್ತಿಯ ಕಥೆಯನ್ನು ಹೊಂದಿದ್ದು, ಪಾಠದ ವಿಷಯದ ಮೌಲ್ಯದ ಕಾರಣ ಆಯ್ಕೆ ಮಾಡಿ ಅಳವಡಿಸಲಾಗಿದೆ.
11ಸಮಿತಿ ಅಧ್ಯಕ್ಷರಾದ ಶ್ರೀ ರೋಹಿತ್‌ ಚಕ್ರತೀರ್ಥರವೆ ಮೇಲೆ ಇರುವ ಆರೋಪ ಕುರಿತು-2017ರಲ್ಲಿ ಆದ ಘಟನೆಯಿದು. ಅಪರಿಚಿತರು ಕುವೆಂಪುರವರ ಪದ್ಯದ ದಾಟಿಯಲ್ಲಿ ಯಾರೋ ಬರೆದ ಕವನವನ್ನು ರೋಹಿತ್‌ ಚಕ್ರತೀರ್ಥರವರು ಸಾಮಾಜಿಕ ಮಾಧ್ಯಮದಲ್ಲಿ ಷೇರ್‌ ಮಾಡಿದ್ದರಷ್ಟೆ. ಅದು ಅವರು ಬರೆದದ್ದಲ್ಲ.

-ಈ ಕುರಿತು ಪೊಲೀಸ್‌ ತನಿಖೆ ನಡೆದಿದ್ದು, ಬಿ, ರಿಪೋರ್ಟ್‌ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
12ಶ್ರೀ ರೋಹಿತ್‌ ಚಕ್ರತೀರ್ಥ ಸಮಿತಿಯು ಎಲ್ಲ ವಿಷಯಗಳ ಪಠ್ಯಪುಸ್ತಕಗಳನ್ನೂ ಸಮಗ್ರವಾಗಿ ಪರಿಷ್ಕರಣೆ ಮಾಡಲಾಗಿದೆ ಎಂಬ ಆರೋಪಶ್ರೀ ರೋಹಿತ್‌ ಚಕ್ರತೀರ್ಥ ಸಮಿತಿಯು ವಾಸ್ತವವಾಗಿ 1ರಿಂದ 10ನೇ ತರಗತಿಯ ಕನ್ನಡ ಭಾಷೆಯ 15 ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿದೆ.

-6ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ವಿಷಯದ 5 ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿದೆ.
13ಪಠ್ಯಪುಸ್ತಕಗಳನ್ನು ಪಕ್ಷ ಪುಸ್ತವನ್ನಾಗಿ ಮಾಡಿದ್ದು ಯಾರು?-2014-15ರಲ್ಲಿ ಸಾಕಷ್ಟು ಉತ್ತಮವಾಗಿ ರೂಪಿಸಲ್ಪಟ್ಟ ನೂತನ ಪಠ್ಯಪುಸ್ತಕಗಳನ್ನು ಜಾರಿಯಾದ ಒಂದೆರಡು ವರ್ಷದಲ್ಲಿಯೇ ಅನಗತ್ಯವಾಗಿ ಕೇಸರೀಕರಣದ ನೆಪವೊಡ್ಡಿ ಮತ್ತೊಮ್ಮೆ ಪರಿಷ್ಕರಿಸಲು ಅಂದಿನ ಸರ್ಕಾರ ನಿರ್ಧಾರ ಮಾಡಿ 2017-18ರಲ್ಲಿ ಪ್ರೊ. ಬರಗೂರು ರಾಮಚಂದ್ರಪ್ಪ ಸಮಿತಿಯಿಂದ ರಚಿತವಾದ ಪರಿಷ್ಕೃತ ಪಠ್ಯ ಪುಸ್ತಕಗಳನ್ನು ಜಾರಿಗೊಳಿಸಿತ್ತು.

-ಪ್ರೊ. ಬರಗೂರು ಸಮಿತಿಯಿಂದ ರಚಿತವಾದ ಪಠ್ಯಪುಸ್ತಕಗಳಲ್ಲಿ ನಿರ್ದಿಷ್ಟ ಜಾತಿ, ಧರ್ಮ, ಪಂಥಗಳಿಗೆ ಚ್ಯುತಿ ತರುವ ಅಂಶಗಳು ಇದ್ದ ಕಾರಣ ಸಮಾಜದ ಕೆಲ ವರ್ಗ ಸರ್ಕಾರಕ್ಕೆ ಮನವಿ ಮಾಡಿದ್ದರ ಮೇರೆಗೆ 2020-21ನೇ ಸಾಲಿನಲ್ಲಿ ಸರ್ಕಾರವು ರೋಹಿತ್‌ ಚಕ್ರತೀರ್ಥರವರ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕಗಳ ಪರಿಷ್ಕರಣೆ ಸಮಿತಿಯನ್ನು ರಚನೆ ಮಾಡಿತ್ತು.

-ಪ್ರೊ. ಬರಗೂರು ಸಮಿತಿಯ ಪಠ್ಯಪುಸ್ತಸಕಗಳಲ್ಲಿ ಇದ್ದ ಕೆಲ ಸಮಸ್ಯೆಗಳ ಕುರಿತ ವಿವರಗಳನ್ನು ನೀಡಲಾಗಿದೆ.
14ಪಠ್ಯಪುಸ್ತಕಗಳು ಮುದ್ರಣಗೊಂಡಿಲ್ಲ ಮತ್ತು ಶಾಲೆಗಳಿಗೆ ಸರಬರಾಜು ಆಗಿಲ್ಲ ಎಂಬ ಮಾಹಿತಿಯ ಕುರಿತು-ಪಠ್ಯಪುಸ್ತಕಗಳ ಮುದ್ರಣ ಪೂರೈಕೆಗಾಗಿ ಟೆಂಡರನ್ನು ದಿನಾಂಕ 22.12.2021ರಂದು ಕರೆಯಲಾಗಿತ್ತು. ಮುದ್ರಕರಿಗೆ ಕಾರ್ಯಾದೇಶವನ್ನು ದಿನಾಂಕ 18.02.2022ರಿಂದ 05.03.2022ರಲ್ಲಿ ನೀಡಲಾಗಿತ್ತು.

-ಪ್ರಸ್ತುತ ದಿನಾಂಕ: 3-6-2022ರಲ್ಲಿದ್ದಂತೆ ಪಠ್ಯಪುಸ್ತಕಗಳು ಶೇ.79.70ರಷ್ಟು ಮುದ್ರಣಗೊಂಡು ಶೇ.66.98 ಶಾಲೆಗಳಿಗೆ ಸರಬರಾಜು ಆಗಿರುತ್ತದೆ.

ಇದನ್ನೂ ಓದಿ | ರೋಹಿತ್‌ ʼಚಕ್ರವ್ಯೂಹʼದಲ್ಲಿ CM ಬಸವರಾಜ ಬೊಮ್ಮಾಯಿ: ಇಂದು ಕ್ಲೈಮ್ಯಾಕ್ಸ್‌?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ದೇವೇಗೌಡ ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ವಲ್ಲ; ಹೊಸ ಆಡಿಯೊದಲ್ಲಿ ಶಿವರಾಮೇಗೌಡ ಸ್ಫೋಟಕ ಹೇಳಿಕೆ

Prajwal Revanna Case: ನೀವು ಡಿ.ಕೆ.ಶಿವಕುಮಾರ್‌ ಅವರ ಜತೆ ಕೈಜೋಡಿಸಿದರೆ ಯಾವ ಸಹಾಯ ಬೇಕೋ ಎಲ್ಲವನ್ನೂ ಮಾಡುತ್ತಾರೆ. ಜೆಡಿಎಸ್‌ಅನ್ನು ಎನ್‌ಡಿಎಯಿಂದ ಆಚೆಗೆ ಹಾಕಲು ನಾನೇ ನರೇಂದ್ರ ಮೋದಿ ಅವರಿಗೆ ಒತ್ತಾಯ ಮಾಡುತ್ತೇನೆ. ಇನ್ನೇನು ವಿಡಿಯೊಗಳು ಇವೆಯೋ, ಎಲ್ಲವನ್ನೂ ನಮಗೆ ಕೊಡಿ. ದೇವೇಗೌಡ ಕುಟುಂಬವನ್ನು ಬಲಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂಬುದಾಗಿ ದೇವರಾಜೇಗೌಡ ಅವರಿಗೆ ಶಿವರಾಮೇಗೌಡ ಭರವಸೆ ನೀಡಿದ ಆಡಿಯೊ ಈಗ ಸಂಚಲನ ಮೂಡಿಸಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಎಸಗಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಆಡಿಯೊ ಲಭ್ಯವಾಗಿದ್ದು, ಇದು ಈಗ ಸಂಚಲನ ಮೂಡಿಸಿದೆ. ವಕೀಲ ದೇವರಾಜೇಗೌಡ (Devaraje Gowda) ಹಾಗೂ ಮಾಜಿ ಸಂಸದ ಎಲ್‌.ಆರ್.ಶಿವರಾಮೇಗೌಡ (LR Shivarame Gowda) ಅವರ ಮಧ್ಯೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೊ ಬಯಲಾಗಿದ್ದು, “ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಕುಟುಂಬವನ್ನು ಬಲಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಅಷ್ಟಕ್ಕೂ, ದೇವೇಗೌಡ ಅವರು ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ಲವಲ್ಲ” ಎಂಬುದಾಗಿ ಶಿವರಾಮೇಗೌಡ ಹೇಳಿದ್ದಾರೆ.

“ನೀವು ಡಿ.ಕೆ.ಶಿವಕುಮಾರ್‌ ಅವರ ಜತೆ ಕೈಜೋಡಿಸಿದರೆ ಯಾವ ಸಹಾಯ ಬೇಕೋ ಎಲ್ಲವನ್ನೂ ಮಾಡುತ್ತಾರೆ. ಜೆಡಿಎಸ್‌ಅನ್ನು ಎನ್‌ಡಿಎಯಿಂದ ಆಚೆಗೆ ಹಾಕಲು ನಾನೇ ನರೇಂದ್ರ ಮೋದಿ ಅವರಿಗೆ ಒತ್ತಾಯ ಮಾಡುತ್ತೇನೆ. ಇನ್ನೇನು ವಿಡಿಯೊಗಳು ಇವೆಯೋ, ಎಲ್ಲವನ್ನೂ ನಮಗೆ ಕೊಡಿ. ದೇವೇಗೌಡ ಕುಟುಂಬವನ್ನು ಬಲಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ನೀವು ಯಾವುದಕ್ಕೂ ಹೆದರಬೇಡಿ. ನಿಮಗೆ ಏನು ಹೆಲ್ಪ್‌ ಬೇಕೋ ಅದನ್ನು ಡಿಕೆಶಿ ಮಾಡುತ್ತಾರೆ” ಎಂಬುದಾಗಿ ಶಿವರಾಮೇಗೌಡ ಭರವಸೆ ನೀಡಿರುವುದು ಆಡಿಯೊದಲ್ಲಿದೆ.

ವಿಡಿಯೊ ಕೊಡಿ ಎಂಬುದಕ್ಕೆ ಉತ್ತರಿಸಿದ ದೇವರಾಜೇಗೌಡ, “ಅಣ್ಣ ಇದು ಹೆಣ್ಣುಮಕ್ಕಳ ಮಾನ ಮರ್ಯಾದೆ ಪ್ರಶ್ನೆ ಅಲ್ಲವೇ? ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದಿದ್ದಾರೆ. ಅದಕ್ಕೆ ಶಿವರಾಮೇಗೌಡ, “ನಿನಗೆ ಏನು ಸಹಾಯ ಬೇಕೋ ಅದನ್ನು ಮಾಡುತ್ತಾರೆ. ಅಷ್ಟಕ್ಕೂ, ನೀನೇನೂ ಹಾಸನದಲ್ಲಿ ಪೆನ್‌ಡ್ರೈವ್‌ ಹಂಚಿಲ್ಲ. ಹಂಚಿದರೂ ಅದರಲ್ಲಿ ತಪ್ಪೇನಿಲ್ಲ. ನೀನೊಬ್ಬ ವಕೀಲನಾಗಿ ಹೀಗೆ ಹೆದರಿದರೆ ಹೇಗೆ? ಏನೂ ಆಗುವುದಿಲ್ಲ. ಯಾವ ವಿಡಿಯೊ ಇದೆ ನಮಗೆ ಕೊಡು” ಎಂದಿದ್ದಾರೆ.

ಗೌಡರು ಸೂಸೈಡ್‌ ಮಾಡಿಕೊಂಡಿಲ್ವಲ್ಲ

“ಕುಮಾರಸ್ವಾಮಿ ಅವರೇ ವಿಡಿಯೊಗಳನ್ನು ಬಿಟ್ಟಿದ್ದಾರೆ ಎಂಬುದಾಗಿ ಹೇಳು. ಆ ದೇವೇಗೌಡರ ಮಕ್ಕಳು ಏನೂ ಕಡಿಮೆ ಇಲ್ಲ. ದೇವೇಗೌಡರು ಇಷ್ಟಾದರೂ ಆತ್ಮಹತ್ಯೆ ಮಾಡಕೊಂಡಿಲ್ಲವಲ್ಲ. ಪ್ರಜ್ವಲ್‌ ರೇವಣ್ಣ ಬೆಳೆಯುತ್ತಿದ್ದಾನೆ. ಕುಮಾರಸ್ವಾಮಿ ಅವರಿಗೆ ತಮ್ಮ ಮಗ ಮುಂದೆ ಬರಬೇಕು ಎಂಬ ಆಸೆ ಇದೆ. ಹಾಗಾಗಿ, ಕುಮಾರಸ್ವಾಮಿ ಅವರೇ ವಿಡಿಯೊಗಳನ್ನು ಹಂಚಿದ್ದಾರೆ ಎಂಬುದಾಗಿ ಹೇಳಿ” ಎಂದು ದೇವರಾಜೇಗೌಡ ಅವರಿಗೆ ಶಿವರಾಮೇಗೌಡ ಹೇಳಿರುವುದು ಆಡಿಯೊದಲ್ಲಿ ದಾಖಲಾಗಿದೆ. ಇದು ಈಗ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ನೀಡಿದೆ.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Continue Reading

ಬ್ಯಾಡ್ಮಿಂಟನ್

Thailand Open 2024: ಥಾಯ್ಲೆಂಡ್‌ ಓಪನ್‌ ಗೆದ್ದ ಭಾರತದ ಚಿರಾಗ್‌-ಸಾತ್ವಿಕ್‌ ಜೋಡಿ

Thailand Open 2024: ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌(Thailand Open 2024) ಫೈನಲ್​ ಪಂದ್ಯದಲ್ಲಿ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ(Satwiksairaj Rankireddy-Chirag Shetty) ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

VISTARANEWS.COM


on

Thailand Open 2024
Koo

ಬ್ಯಾಂಕಾಕ್‌: ಭಾರತದ ಸ್ಟಾರ್‌ ಡಬಲ್ಸ್‌ ಬ್ಯಾಡ್ಮಿಂಟನ್​ ಆಟಗಾರರಾದ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ(Satwiksairaj Rankireddy-Chirag Shetty) ಪ್ಯಾರಿಸ್​ ಒಲಿಂಪಿಕ್ಸ್​ ಟೂರ್ನಿ ಆರಂಭಕ್ಕೂ ಮುನ್ನವೇ ಶ್ರೇಷ್ಠ ಪ್ರದರ್ಶನವೊಂದನ್ನು ನೀಡಿದ್ದಾರೆ. ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌(Thailand Open 2024) ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

ಏಕಪಕ್ಷೀಯವಾಗಿ ಸಾಗಿದ ಫೈನಲ್​ ಪಂದ್ಯದಲ್ಲಿ ಏಷ್ಯಾಡ್‌ ಚಾಂಪಿಯನ್‌ ಹಾಗೂ ಕೂಟದ ಅಗ್ರ ಶ್ರೇಯಾಂಕಿ ಭಾರತೀಯ ಜೋಡಿ ಚೀನದ ಚೆನ್‌ ಬೊ ಯಾಂಗ್‌-ಲಿಯು ಯಿ(Chen Bo Yang-Liu Yi) ವಿರುದ್ಧ 21-15, 21-15 ನೇರ ಗೇಮ್​ಗಳಿಂದ ಹಿಮ್ಮೆಟಿಸಿದರು. ಶನಿವಾರ ನಡೆದಿದ್ದ ಸೆಮಿಫೈನಲ್ ಪಂದ್ಯದಲ್ಲಿ ಚಿರಾಗ್‌- ಸಾತ್ವಿಕ್‌ ಜೋಡಿ ಚೈನೀಸ್‌ ತೈಪೆಯ ಲು ಮಿಂಗ್‌ ಚೆ-ಟಾಂಗ್‌ ಕೈ ವೀ ವಿರುದ್ಧವೂ 21-11, 21-12 ಅಂತರದ ಸುಲಭ ಜಯ ಸಾಧಿಸುವಲ್ಲಿ ಯಶಸ್ವಿಯಾಗಿದ್ದರು. ಫೈನಲ್​ನಲ್ಲಿಯೂ ಇದೇ ಪ್ರದರ್ಶನ ತೋರಿ ಪ್ರಶಸ್ತಿಗೆ ಮುತ್ತಿಕ್ಕಿದರು.

ಕೆಲವು ವಾರಗಳ ಹಿಂದೆ ನಡೆದಿದ್ದ ಥಾಮಸ್‌ ಕಪ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫ‌ಲರಾಗಿದ್ದ ಚಿರಾಗ್​-ಸಾತ್ವಿಕ್​ ಜೋಡಿ ಇದೀಗ ಮರಳಿ ಲಯ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ದೊಡ್ಡ ಪದಕವೊಂದನ್ನು ಗೆಲ್ಲುವ ನೆಚ್ಚಿನ ಜೋಡಿಯಾಗಿ ಭರವಸೆ ಮೂಡಿಸಿದೆ.

ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಕರ್ನಾಟಕ ಮೂಲದ ಚಿರಾಗ್‌ ಶೆಟ್ಟಿ ಜೋಡಿಗೆ ಇದೇ ವರ್ಷ ದೇಶದ ಪರಮೋಚ್ಚ ಕ್ರೀಡಾ ಪ್ರಶಸ್ತಿಯಾದ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಏಷ್ಯನ್​ ಗೇಮ್ಸ್​ನಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಸಾಧನೆ ಈ ಜೋಡಿಯದ್ದಾಗಿದೆ. 1982ರಲ್ಲಿ ಲೆರೋಯ್‌ ಫ್ರಾನ್ಸಿಸ್‌-ಪ್ರದೀಪ್‌ ಗಾಂಧಿ ಕಂಚು ಗೆದ್ದಿದ್ದು ಭಾರತಕ್ಕೆ ಪುರುಷರ ಡಬಲ್ಸ್‌ನಲ್ಲಿ ಸಿಕ್ಕ ಏಕೈಕ ಪದಕವಾಗಿತ್ತು. ಆದರೆ, ಚಿರಾಗ್‌-ಸಾತ್ವಿಕ್‌ ಚಿನ್ನ ಗೆಲ್ಲುವ ಮೂಲಕ ಐತಿಹಾಸಿಕ ದಾಖಲೆ ಬರೆದಿದ್ದರು.

ಇದನ್ನೂ ಓದಿ Thomas Cup 2024: ಉಬೆರ್‌ ಕಪ್‌ ಬಳಿಕ ಥಾಮಸ್‌ ಕಪ್​ನಲ್ಲಿಯೂ ಮುಗ್ಗರಿಸಿದ ಭಾರತ

ಬಹುನಿರೀಕ್ಷಿತ ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಕ್ರೀಡಾಕೂಡಕ್ಕೆ ಅವಳಿ ಒಲಿಂಪಿಕ್ಸ್​ ಪದಕ ವಿಜೇತೆ ಪಿ.ವಿ ಸಿಂಧು(PV Sindhu) ಸೇರಿ 7 ಭಾರತೀಯ ಶಟ್ಲರ್​ಗಳು ಈಗಾಗಲೇ ಅರ್ಹತೆ ಪಡೆದಿದ್ದಾರೆ. ಮಹಿಳಾ ಡಬಲ್ಸ್​ನಲ್ಲಿ ಕನ್ನಡತಿ ಅಶ್ವಿನಿ ಪೊನ್ನಪ್ಪ ಅವರಿಗೂ ಒಲಿಂಪಿಕ್ಸ್​ ಟಿಕೆಟ್​ ಲಭಿಸಿದೆ.

ಅರ್ಹತೆ ಪಡೆದ ಶಟ್ಲರ್​ಗಳು

ಪಿವಿ ಸಿಂಧು, ಲಕ್ಷ್ಯ ಸೇನ್, ಎಚ್ ಎಸ್ ಪ್ರಣಯ್, ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ, ಚಿರಾಗ್ ಶೆಟ್ಟಿ, ಅಶ್ವಿನಿ ಪೊನ್ನಪ್ಪ, ತನಿಶಾ ಕ್ರಾಸ್ಟೊ.

ಜುಲೈ 26ಕ್ಕೆ ಒಲಿಂಪಿಕ್ಸ್​ ಆರಂಭ

ಮಹತ್ವದ ಕ್ರೀಡಾಕೂಡವಾದ ಪ್ಯಾರಿಸ್ ಒಲಿಂಪಿಕ್ಸ್‌ನ(Paris Olympics 2024) ಉದ್ಘಾಟನಾ ಸಮಾರಂಭಕ್ಕೆ(paris olympics 2024 opening ceremony) ದಿನಾಂಕ ನಿಗದಿಯಾಗಿದೆ. ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮ ನೆರವೇರಲಿದೆ.

ಒಲಿಂಪಿಕ್ಸ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Continue Reading

ಕರ್ನಾಟಕ

Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Prajwal Revanna Case: ಲಭ್ಯವಾಗಿರುವ ಆಡಿಯೊ ಪ್ರಕಾರ, ಮೊದಲು ದೇವರಾಜೇಗೌಡ ಹಾಗೂ ಎಲ್‌.ಆರ್.ಶಿವರಾಮೇಗೌಡ ದೂರವಾಣಿಯಲ್ಲಿ ಮಾತನಾಡಿದ್ದಾರೆ. “ನಾನು ಫೋನ್‌ಅನ್ನು ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡುತ್ತೇನೆ. ಏನೇನಾಗಿದೆ ಎಲ್ಲದರ ಕುರಿತು ಮಾಹಿತಿ ಕೊಡು” ಎಂಬುದಾಗಿ ಶಿವರಾಮೇಗೌಡ ಅವರು ದೇವರಾಜೇಗೌಡರಿಗೆ ತಿಳಿಸುತ್ತಾರೆ. ಇದಾದ ಬಳಿಕ ದೇವರಾಜೇಗೌಡ ಹಾಗೂ ಡಿ.ಕೆ.ಶಿವಕುಮಾರ್‌ ಅವರು ಪೆನ್‌ಡ್ರೈವ್‌ ಕೇಸ್‌ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೊ ಈಗ ಲಭ್ಯವಾಗಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣಕ್ಕೆ (Prajwal Revanna Case) ಸಂಬಂಧಿಸಿದಂತೆ ಮತ್ತೊಂದು ಆಡಿಯೊ ಬಯಲಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಹಾಸನ ಪೆನ್‌ಡ್ರೈವ್‌ ಕೇಸ್‌ಗೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ (Devarajegowda), ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ (LR Shivarame Gowda) ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರ ನಡುವಿನ ದೂರವಾಣಿ ಸಂಭಾಷಣೆ ಎನ್ನಲಾದ ಆಡಿಯೊ ಲಭ್ಯವಾಗಿದ್ದು, ಮಾತುಕತೆಯು ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಕುರಿತೇ ಇವರು ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.

ಲಭ್ಯವಾಗಿರುವ ಆಡಿಯೊ ಪ್ರಕಾರ, ಮೊದಲು ದೇವರಾಜೇಗೌಡ ಹಾಗೂ ಎಲ್‌.ಆರ್.ಶಿವರಾಮೇಗೌಡ ದೂರವಾಣಿಯಲ್ಲಿ ಮಾತನಾಡಿದ್ದಾರೆ. “ನಾನು ಫೋನ್‌ಅನ್ನು ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡುತ್ತೇನೆ. ಏನೇನಾಗಿದೆ ಎಲ್ಲದರ ಕುರಿತು ಮಾಹಿತಿ ಕೊಡು” ಎಂಬುದಾಗಿ ಶಿವರಾಮೇಗೌಡ ಅವರು ದೇವರಾಜೇಗೌಡರಿಗೆ ತಿಳಿಸುತ್ತಾರೆ. ಇದಾದ ಬಳಿಕ ದೇವರಾಜೇಗೌಡ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ ಜತೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.

ಇಲ್ಲಿದೆ ಆಡಿಯೊ ಸಂಭಾಷಣೆ

“ಏನೇನಾಯ್ತು? ಏನಿದೆ ಪರಿಸ್ಥಿತಿ” ಎಂಬುದಾಗಿ ಡಿ.ಕೆ.ಶಿವಕುಮಾರ್‌ ಕೇಳುತ್ತಾರೆ. ಆಗ ದೇವರಾಜೇಗೌಡ ಅವರು, “ಸದ್ಯದ ಪರಿಸ್ಥಿತಿಯಲ್ಲಿ ನಾಳೆ ಕೋರ್ಟ್‌ನಲ್ಲಿ ಸ್ಟೇ ಆಗೋ ಚಾನ್ಸ್‌ ಇದೆ. ಸರಿಯಾಗಿ ದೂರು ಕೊಟ್ಟಿಲ್ಲ. ಮಹಿಳೆ ನೀಡಿರುವ ಹೇಳಿಕೆ ಹಾಗೂ ನಡೆದಿರುವ ಘಟನೆ ಮಧ್ಯೆ ಹಲವು ವರ್ಷ ವ್ಯತ್ಯಾಸ ಇದೆ. ಆದರೆ, ಎಸ್‌ಐಟಿಯವರು ಮಹಿಳೆಯನ್ನು ಕರೆದುಕೊಂಡು ಹೋಗಿ ವಿಚಾರಣೆ, ತನಿಖೆ ನಡೆಸಿದರೆ ಸೀರಿಯಸ್‌ ಕೇಸ್‌ ಆಗುತ್ತದೆ. ಆದರೆ, ಮಹಿಳೆಯು ಪ್ರಕರಣದಲ್ಲಿ ಸ್ಟ್ರಾಂಗ್‌ ಇಲ್ಲ” ಎಂದಿದ್ದಾರೆ.

ಇದಾದ ಬಳಿಕ ಡಿ.ಕೆ.ಶಿವಕುಮಾರ್‌, “ಏನಾದರೂ ಬೇರೆ ಎವಿಡೆನ್ಸ್‌ ಇದೆಯಾ” ಎಂದು ಪ್ರಶ್ನಿಸಿದ್ದಾರೆ. ಆಗ, ದೇವರಾಜೇಗೌಡ ಅವರು “ಯಾವುದೇ ಎವಿಡೆನ್ಸ್‌ ಇಲ್ಲ” ಎಂದಿದ್ದಾರೆ. ಇದಾದ ಬಳಿಕ ಇಬ್ಬರ ನಡುವಿನ ಮಾತುಕತೆ ಮುಗಿದಿದೆ. ದೇವರಾಜೇಗೌಡ ಅವರು ಜೈಲಿಗೆ ಹೋಗುವ ಮೊದಲು ನಡೆದ ಮಾತುಕತೆ ಇದಾಗಿದೆ ಎಂದು ಮೂಲಗಳು ತಿಳಿಸಿವೆ.

ದೇವರಾಜೇಗೌಡ ಗಂಭೀರ ಆರೋಪ

ಪೆನ್‌ಡ್ರೈವ್‌ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್‌ ಅವರ ಬಗ್ಗೆ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ. “ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಇದ್ದಾರೆ. ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಳಿ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್‌ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಎಲ್.ಆರ್. ಶಿವರಾಮೇಗೌಡ ಮೂಲ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಜತೆಗೆ ಮಾತನಾಡಿದ್ದಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಕಾಂಗ್ರೆಸ್‌ ಸರ್ಕಾರದಿಂದ ಪ್ರಜ್ವಲ್‌ ಕೇಸ್‌ ನಿಯಂತ್ರಣ; ಡೈವರ್ಟ್‌ ಮಾಡಲು ಬಿಜೆಪಿಗರ ಮೇಲೆ ದಾಳಿ ಎಂದ ಅಶೋಕ್‌!

Continue Reading

ಕರ್ನಾಟಕ

Prajwal Revanna Case: ಡಿಕೆಶಿ 100 ಕೋಟಿ ರೂ. ಆಫರ್;‌ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಎಂದ ಆರ್.‌ ಅಶೋಕ್

ದೇವರಾಜೇಗೌಡ ಬಳಿ ಸಾಕ್ಷ್ಯ ಇದೆ ಎಂಬ ಕಾರಣಕ್ಕಾಗಿಯೇ ಅವರನ್ನು ಬಂಧಿಸಲಾಗಿದೆ. ದೇವರಾಜೇಗೌಡ ಹೊರಗಿದ್ದರೆ ದಾಖಲೆ ಬಿಡುಗಡೆ ಮಾಡುತ್ತಾರೆ ಎಂಬ ಭಯದಿಂದ ಬಂಧಿಸಲಾಗಿದೆ. ದೇವರಾಜೇಗೌಡ ಮಾಡಿದ ಆರೋಪಗಳು ನಿಜವೇ ಇರಬೇಕು. ಅದಕ್ಕೆಲ್ಲ ಅವರ ಬಳಿ ಸಾಕ್ಷ್ಯ ಇದೆ ಎನಿಸುತ್ತದೆ. ಅವರು ಹೇಳಿದ್ದೆಲ್ಲ ನೂರಕ್ಕೆ ನೂರು ಸತ್ಯ. ಅಷ್ಟಕ್ಕೂ ಬೆಂಕಿಯೇ ಇಲ್ಲದೆ ಹೊಗೆಯಾಡಲ್ಲ ಎಂದು ಆರ್.‌ ಅಶೋಕ್‌ ಹೇಳಿದರು.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ (Devarajegowda) ನೀಡಿದ ಹೇಳಿಕೆ ಸಂಚಲನ ಮೂಡಿಸಿದೆ. ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಇದ್ದಾರೆ. ಅವರು 100 ಕೋಟಿ ರೂ. ಆಫರ್‌ ಮಾಡಿದ್ದರು ಎಂದು ದೇವರಾಜೇಗೌಡ ನೀಡಿದ ಹೇಳಿಕೆ ಕುರಿತು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಪ್ರತಿಕ್ರಿಯಿಸಿದ್ದು, “ಬೆಂಕಿ ಇಲ್ಲದೆ ಹೊಗೆಯಾಡಲ್ಲ” ಎಂದಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಭೇಟಿಯಾದ ಬಳಿಕ ಆರ್‌.ಅಶೋಕ್‌ ಸುದ್ದಿಗಾರರೊಂದಿಗೆ ಮಾತನಾಡಿದರು. “ದೇವರಾಜೇಗೌಡ ಬಳಿ ಸಾಕ್ಷ್ಯ ಇದೆ ಎಂಬ ಕಾರಣಕ್ಕಾಗಿಯೇ ಅವರನ್ನು ಬಂಧಿಸಲಾಗಿದೆ. ದೇವರಾಜೇಗೌಡ ಹೊರಗಿದ್ದರೆ ದಾಖಲೆ ಬಿಡುಗಡೆ ಮಾಡುತ್ತಾರೆ ಎಂಬ ಭಯದಿಂದ ಬಂಧಿಸಲಾಗಿದೆ. ದೇವರಾಜೇಗೌಡ ಮಾಡಿದ ಆರೋಪಗಳು ನಿಜವೇ ಇರಬೇಕು. ಅದಕ್ಕೆಲ್ಲ ಅವರ ಬಳಿ ಸಾಕ್ಷ್ಯ ಇದೆ ಎನಿಸುತ್ತದೆ. ಅವರು ಹೇಳಿದ್ದೆಲ್ಲ ನೂರಕ್ಕೆ ನೂರು ಸತ್ಯ. ಅಷ್ಟಕ್ಕೂ ಬೆಂಕಿಯೇ ಇಲ್ಲದೆ ಹೊಗೆಯಾಡಲ್ಲ” ಎಂದು ಹೇಳಿದರು.

“ದೇವರಾಜೇಗೌಡ ಅವರೇ ತಮಗೆ ಹಣದ ಆಫರ್ ಮಾಡಿದ ಬಗ್ಗೆ ಹೇಳಿದ್ದಾರೆ. ಈಗಾಗಲೇ ಡಿಕೆಶಿ ಮಾತಾಡಿದ ದಾಖಲೆ ಸಹ ಬಿಡುಗಡೆ ಮಾಡಿದ್ದಾರೆ. ಅವರನ್ನು ಬಿಟ್ಟರೆ ಸರಣಿ ದಾಖಲೆ ಬಿಡುಗಡೆ ಮಾಡುತ್ತಾರೆ. ಸರ್ಕಾರಕ್ಕೆ ಮುಜುಗರ ಆಗುತ್ತದೆ ಎಂದು ಬಂಧಿಸಿದ್ದಾರೆ. ಇದೆಲ್ಲ ಮಾಧ್ಯಮಗಳಲ್ಲಿ ಬರಬಾರದು ಎಂಬುದು ಡಿಕೆಶಿ ಉದ್ದೇಶವಾಗಿದೆ. ದೇವರಾಜೇಗೌಡ ಹೇಳಿದ್ದೆಲ್ಲ ಸತ್ಯ ಇರಬಹುದು. ರಣದೀಪ್ ಸುರ್ಜೇವಾಲಾ, ಸಿಎಂ‌ ಸಿದ್ದರಾಮಯ್ಯ, ಡಿಕೆಶಿ ಸೇರಿ ಮಾಸ್ಟರ್‌ ಪ್ಲಾನ್‌ ಮಾಡಿದ್ದಾರೆ” ಎಂದು ಆರೋಪಿಸಿದರು.

ಒಕ್ಕಲಿಗರ ಮುಗಿಸಲು ತಂತ್ರ

“ರಾಜ್ಯದಲ್ಲಿ ಒಕ್ಕಲಿಗರನ್ನು ಮುಗಿಸಲು ಕಾಂಗ್ರೆಸ್‌ ತಂತ್ರ ಮಾಡುತ್ತಿದೆ. ಈಗಾಗಲೇ ಸಿದ್ದರಾಮಯ್ಯ ದಲಿತರನ್ನು ಮುಗಿಸಿದ್ದಾರೆ. ಪರಮೇಶ್ವರ್ ಅವರು ಸಿಎಂ ಅಗೋದನ್ನು ತಪ್ಪಿಸಿದ್ದಾರೆ. ಸಿಬಿಐ ತನಿಖೆಗೆ ಕೊಟ್ರೆ ಸತ್ಯ ಹೊರಗೆ ಬರುತ್ತದೆ ಎಂದು ತನಿಖೆಗೆ ಕೊಡತ್ತಿಲ್ಲ. ಕೆ.ಜೆ. ಜಾರ್ಜ್‌ ವಿಚಾರದಲ್ಲೂ ಸಿಬಿಐ ತನಿಖೆ ನಡೆಯಿತು. ತಪ್ಪಿದ್ದರೆ ತಪ್ಪಿದೆ ಎಂದು, ತಪ್ಪಿಲ್ಲದಿದ್ದರೆ ತಪ್ಪಿಲ್ಲ ಎಂದು ಸಿಬಿಐ ವರದಿ ನೀಡುತ್ತದೆ. ಎಸ್ಐಟಿಯಿಂದ ಸತ್ಯ ಹೊರಗೆ ಬರುತ್ತದೆ ಎಂಬ ನಂಬಿಕೆ ಯಾರಿಗೂ ಇಲ್ಲ. ಸರ್ಕಾರ ಹೇಳಿದಂತೆ ಎಸ್‌ಐಟಿ ಕೆಲಸ ಮಾಡುತ್ತದೆ. ಕಾರ್ತಿಕ್‌ಗೆ ಜಾಮೀನು ನಿರಾಕರಿಸಿದರೂ ಯಾಕೆ ಬಂಧಿಸಿಲ್ಲ? ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಲಿ. ಇದು ಪ್ರಜ್ವಲ್‌ ರೇವಣ್ಣ ಅವರಿಗೂ ಅನ್ವಯವಾಗುತ್ತದೆ. ಆದರೆ, ಪೆನ್‌ಡ್ರೈವ್‌ ಹಂಚಿಕೆ ಮಾಡಿದವರಿಗೂ ಶಿಕ್ಷೆಯಾಗಬೇಕು” ಎಂದು ಒತ್ತಾಯಿಸಿದರು.

ದೇವರಾಜೇಗೌಡ ಹೇಳಿದ್ದೇನು?

“ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಇದ್ದಾರೆ. ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಳಿ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್‌ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಎಲ್.ಆರ್. ಶಿವರಾಮೇಗೌಡ ಮೂಲ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಜತೆಗೆ ಮಾತನಾಡಿದ್ದಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: Prajwal Revanna Case: ವಿದೇಶದಿಂದ ಪ್ರಜ್ವಲ್‌ ಕರೆತರೋಕೆ ಎಸ್‌ಐಟಿ ಮಾಸ್ಟರ್‌ ಸ್ಟ್ರೋಕ್!‌

Continue Reading
Advertisement
RCB vs CSK
ಕ್ರೀಡೆ18 mins ago

RCB vs CSK: ಆನ್​ಲೈನ್​ ವೀಕ್ಷಣೆಯಲ್ಲೂ ದಾಖಲೆ ಬರೆದ ಆರ್​ಸಿಬಿ-ಚೆನ್ನೈ ಪಂದ್ಯ

Rain News
ಕರ್ನಾಟಕ31 mins ago

Rain News: ಕುಷ್ಟಗಿಯಲ್ಲಿ ಸಿಡಿಲು ಬಡಿದು ರೈತ ಸಾವು, ಯುವಕನಿಗೆ ಗಂಭೀರ ಗಾಯ

Prajwal Revanna Case
ಕರ್ನಾಟಕ46 mins ago

ದೇವೇಗೌಡ ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ವಲ್ಲ; ಹೊಸ ಆಡಿಯೊದಲ್ಲಿ ಶಿವರಾಮೇಗೌಡ ಸ್ಫೋಟಕ ಹೇಳಿಕೆ

Rohit Sharma
ಕ್ರೀಡೆ59 mins ago

Rohit Sharma: ಐಪಿಎಲ್ ಪ್ರಸಾರಕರ ವಿರುದ್ಧ ಕಿಡಿ ಕಾರಿದ ಹಿಟ್​ಮ್ಯಾನ್​ ರೋಹಿತ್​

R Ashok
ರಾಜಕೀಯ1 hour ago

R Ashok: ರಾಜ್ಯದಲ್ಲಿ ಮಳೆಗಿಂತ ಹೆಚ್ಚಾಗಿ ಕೊಲೆಗಳೇ ನಡೆಯುತ್ತಿವೆ: ಆರ್‌.ಅಶೋಕ್‌ ಕಿಡಿ

Thailand Open 2024
ಬ್ಯಾಡ್ಮಿಂಟನ್2 hours ago

Thailand Open 2024: ಥಾಯ್ಲೆಂಡ್‌ ಓಪನ್‌ ಗೆದ್ದ ಭಾರತದ ಚಿರಾಗ್‌-ಸಾತ್ವಿಕ್‌ ಜೋಡಿ

Prajwal Revanna Case
ಕರ್ನಾಟಕ2 hours ago

Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Money Guide
ಮನಿ-ಗೈಡ್2 hours ago

Money Guide: ಪ್ಯಾನ್‌ ಕಾರ್ಡ್‌ ಇಲ್ಲದೆಯೂ ಸಿಬಿಲ್‌ ಸ್ಕೋರ್‌ ಪರಿಶೀಲಿಸಬೇಕೆ? ಈ ಟಿಪ್ಸ್‌ ಫಾಲೋ ಮಾಡಿ

Road Accident
ಕ್ರೈಂ2 hours ago

Road Accident: ಬೆಂಗಳೂರು, ಗದಗದಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್ ಸ್ಫೋಟಕ್ಕೆ ಮನೆಗಳೇ ಭಸ್ಮ

Janhvi Kapoor felt sexualised at the age of 12
ಬಾಲಿವುಡ್2 hours ago

Janhvi Kapoor: 12ನೇ ವಯಸ್ಸಿನಲ್ಲಿಯೇ ಅಶ್ಲೀಲ ವೆಬ್‌ಸೈಟ್‌ನಲ್ಲಿ ನನ್ನ ಫೋಟೊ ಅಪ್‌ಲೋಡ್‌ ಆಗಿತ್ತು ಎಂದ ಶ್ರೀದೇವಿ ಮಗಳು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌