ಸುಸಜ್ಜಿತ ಸ್ಮಾರ್ಟ್ ಅಂಗನವಾಡಿ ನಿರ್ಮಾಣ: ಮಕ್ಕಳು ಫುಲ್ ಹ್ಯಾಪಿ ಹ್ಯಾಪಿ - Vistara News

ರಾಮನಗರ

ಸುಸಜ್ಜಿತ ಸ್ಮಾರ್ಟ್ ಅಂಗನವಾಡಿ ನಿರ್ಮಾಣ: ಮಕ್ಕಳು ಫುಲ್ ಹ್ಯಾಪಿ ಹ್ಯಾಪಿ

ನೋಡುಗರ ಕಣ್ಣು ಕುಕ್ಕುವಂತಹ ಸ್ಮಾರ್ಟ್ ಅಂಗನವಾಡಿ ಕೇಂದ್ರ ರಾಮನಗರ ತಾಲೂಕಿನ ಪುಟ್ಟ ಗ್ರಾಮ ಚೌಡೇಶ್ವರಿಪುರದಲ್ಲಿದೆ ಶುರು ಆಗಿದೆ.

VISTARANEWS.COM


on

ಸ್ಮಾರ್ಟ್ ಅಂಗನವಾಡಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ಜಾರುಬಂಡೆ, ಜೋಕಾಲಿ ಆಡುತ್ತಾ ಸಂಭ್ರಮಿಸುತ್ತಿರುವ ಪುಟ್ಟ ಮಕ್ಕಳು.. ಕೊಠಡಿಯಲ್ಲಿ ಕುಳಿತು ಲವಲವಿಕೆಯಿಂದ ಕಲಿಯುತ್ತಿರುವ ಚಿಣ್ಣರು.. ಟಿವಿ ಪರದೆ ಮೇಲೆ ಸ್ಮಾರ್ಟ್ ಟಿವಿಯಲ್ಲಿ ಸ್ಮಾರ್ಟ್ ಆಗಿ ಪಾಠ ಮಾಡುತ್ತಿರುವ ಶಿಕ್ಷಕಿಯರು.. ಇದ್ಯಾವುದೊ ಖಾಸಗಿ ಪ್ಲೇ ಹೋಂ ಅಲ್ಲ. ಹೈಟೆಕ್ ಕಾನ್ವೆಂಟ್ ಕೂಡ ಅಲ್ಲ. ಇದು ಒಂದು ಸರ್ಕಾರಿ ಅಂಗನವಾಡಿ. ಇಲ್ಲಿ ಎಲ್ಲವೂ ಸ್ಮಾರ್ಟ್ ಆಗಿಯೇ ನಡೆಯುತ್ತಿದೆ.

ಸ್ಮಾರ್ಟ್ ಅಂಗನವಾಡಿ
ಸ್ಮಾರ್ಟ್ ಅಂಗನವಾಡಿ

ವಿಭೂತಿಕೆರೆ ಗ್ರಾಂ ಪಂಚಾಯಿತಿ ವ್ಯಾಪ್ತಿಯ ಚೌಡೇಶ್ವರಿಪುರ ಗ್ರಾಮದಲ್ಲಿ ಸುಸಜ್ಜಿತ ಸ್ಮಾರ್ಟ್ ಅಂಗನವಾಡಿ ಕಟ್ಟಡ ನಿರ್ಮಾಣಗೊಂಡಿದೆ. ಅಡುಗೆ ಮನೆ, ಶುದ್ಧ ಕುಡಿಯುವ ನೀರು, ಶೌಚಾಲಯ ಮುಂತಾದ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರದಲ್ಲಿ ಕಲ್ಪಿಸಲಾಗಿದೆ.
ಸರ್ಕಾರದ ಶಿಕ್ಷಣ ಸಂಸ್ಥೆಗಳೆಂದರೆ ಮೂಗು ಮುರಿಯುವಂಥ ಪರಿಸ್ಥಿತಿಯಿದೆ. ಎಷ್ಟೋ ಕಡೆ ಪಡಸಾಲೆ, ಜೋಪಡಿಗಳಲ್ಲಿ ಅಂಗನವಾಡಿ ಕೇಂದ್ರಗಳು ನಡೆಯುತ್ತಿರುವುದು ನಮ್ಮ ಕಣ್ಣಿಂದ ನೋಡಿರುತ್ತೇವೆ. ಅದಕ್ಕೆ ತಕ್ಕಂತೆ ಇಲ್ಲಿ ನೋಡುಗರ ಕಣ್ಣು ಕುಕ್ಕುವಂತಹ ಸ್ಮಾರ್ಟ್ ಅಂಗನವಾಡಿ ಕೇಂದ್ರ ರಾಮನಗರ ತಾಲೂಕಿನ ಪುಟ್ಟ ಗ್ರಾಮದಲ್ಲಿ ಶುರುವಾಘಿದೆ. ಈ ಅಂಗನವಾಡಿ ಯಾವುದೇ ಖಾಸಗಿ ಪ್ಲೇ ಹೋಮ್‌ಗೇನೂ ಕಡಿಮೆ ಇಲ್ಲ.

ಅಂಗನವಾಡಿಯಲ್ಲಿ ಎಲ್.ಇ.ಡಿ ಟಿವಿ ಪರದೆ ಮೇಲೆ ಸ್ಮಾರ್ಟ್ ಕ್ಲಾಸ್‌ನಲ್ಲಿ ಮಕ್ಕಳಿಗೆ ಕಲಿಕಾ ಅಭ್ಯಾಸ ಮಾಡಲಾಗುತ್ತದೆ. ಸುಸಜ್ಜಿತವಾದ ಅಡುಗೆ ಮನೆ ಹಾಗು ಹಚ್ಚ ಹಸಿರಿನ ಲಾನ್ ಇದ್ದು, ಆಕರ್ಷಕ ಆಟದ ಸಲಕರಣೆಗಳಿವೆ. ವಿದ್ಯುತ್ ಸಮಸ್ಯೆ ಎದುರಾಗಬಾರದೆಂದು ಯುಪಿಎಸ್ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.

-ಚನ್ನಕೇಶವ, ಜಿಲ್ಲಾ ಮುಖ್ಯ ಗ್ರಂಥಾಲಯ ಅಧಿಕಾರಿ

ಈ ಅಂಗನವಾಡಿ ನಿರ್ಮಿಸಲು ರಾಮನಗರ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತಿ ಸಹಯೋಗವಿದೆ. ಅಂದಾಜು ₹20 ಲಕ್ಷ ವೆಚ್ಚದಲ್ಲಿ ಈ ಸ್ಮಾರ್ಟ್ ಅಂಗನವಾಡಿ ನಿರ್ಮಾಣ ಮಾಡಲಾಗಿದೆ. ಜಿಲ್ಲೆಯಲ್ಲೇ ಹೈಟೆಕ್ ಅಂಗನವಾಡಿ ಎಂಬ ಕೀರ್ತಿಗೆ ಇದು ಪಾತ್ರವಾಗಿದ್ದು, ನಗರ ಪ್ರದೇಶಗಳಲ್ಲಿನ ಪ್ಲೇ ಹೋಮ್‌ಗಳಿಗೆ ಮಾರು ಹೋಗಿರುವ ಈ ಭಾಗದ ಜನರು ಈ ಸ್ಮಾರ್ಟ್ ಅಂಗನವಾಡಿ ನೋಡಿ, ತಮ್ಮ ಮಕ್ಕಳನ್ನು ಅಲ್ಲಿಗೇ ಸೇರಿಸಲು ಮನಸ್ಸು ಮಾಡುತ್ತಿದ್ದಾರೆ.

ಕೊಠಡಿಯಲ್ಲಿ ಮಕ್ಕಳು
ಕೊಠಡಿಯಲ್ಲಿ ಮಕ್ಕಳು

ಈ ಕುರಿತು ಪ್ರತಿಕ್ರಿಯಿಸಿರುವ ಚೌಡೇಶ್ವರಿಪುರ ಗ್ರಾಮಸ್ಥ ನಾಗರಾಜ್, ಊರಿನಲ್ಲಿ ಒಂದು ಚಿಕ್ಕ ಕೊಠಡಿ ಇತ್ತು. ಮೂರು ಮಕ್ಕಳು ಕೂರುವುದಕ್ಕೂ ಜಾಗ ಇರಲಿಲ್ಲ. ಮಕ್ಕಳಿಗೆ ಉಸಿರು ಕಟ್ಟಿದ ವಾತಾವರಣ ನಿರ್ಮಾಣವಾಗಿತ್ತು. ಅದ್ದನ್ನು ನೋಡಿ ಇಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ಸುನೀತಾ ನಾಗರಾಜ್ ಸಿಂಗ್ ಅವರು ಇಲ್ಲಿ ಒಂದು ಅತ್ಯುತ್ತಮ ಅಂಗನವಾಡಿ ಕಟ್ಟಲೇಬೇಕು ಎಂದು ಹೊರಟರು. ಪಂಚಾಯತಿ ಅನುದಾನ, ಜಿಲ್ಲಾ ಪಂಚಾಯತಿ ಅನುದಾನ ಮತ್ತು ತಾಲೂಕ್ ಪಂಚಾಯತಿ ಅನುದಾನದಿಂದ ಈ ಸ್ಮಾರ್ಟ್ ಅಂಗನವಾಡಿ ನಿರ್ಮಾಣ ಮಾಡಿದರು. ಮಕ್ಕಳಿಗೆ ಯಾವುದೇ ಕೊರತೆ ಆಗದಂತೆ ಒಳ್ಳೆಯ ವಾತಾವರಣ ನಿರ್ಮಾಣ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಅಂಗನವಾಡಿಗಳ ಬಗ್ಗೆ ಸಂಶೋಧನೆ ನಡೆಸುತ್ತಿರುವ ತಂಡವೊಂದು ಈ ಅಂಗನವಾಡಿಗೆ ಭೇಟಿ ಕೊಟ್ಟು ನೋಡಿ ಸಂತಸ ವ್ಯಕ್ತಪಡಿಸಿದೆ. ಒಟ್ಟಾರೆ ಸರಕಾರಿ ಶಾಲೆ, ಅಂಗನವಾಡಿ ಕೇಂದ್ರ ಎಂದರೆ ತಿರುಗಿಯೂ ನೋಡದ ಜನರೇ ಹೆಚ್ಚಾಗಿರುವ ಈ ಕಾಲಘಟ್ಟದಲ್ಲಿ ಸರ್ಕಾರಿ ಅಂಗನವಾಡಿಯನ್ನು ಸ್ಮಾರ್ಟ್ ಆಗಿ ನಿರ್ಮಾಣ ಮಾಡಿ, ನಾವು ಖಾಸಗಿಯವರಿಗಿಂತ ಕಡಿಮೆ ಇಲ್ಲ ಎಂಬುದನ್ನ ಸಾಬೀತುಗೊಳಿಸಿದವರಿಗೆ ನಿಜಕ್ಕೂ ಶಹಬ್ಬಾಶ್ ಗಿರಿ ನೀಡಲೇಬೇಕಿದೆ.

ಇದನ್ನೂ ಓದಿ| ಸರಕಾರಿ ನೌಕರರ ಸಂಘದಿಂದ ಮಕ್ಕಳಿಗೆ ಉಚಿತ ಸ್ಕೂಲ್‌ಬ್ಯಾಗ್, ನೋಟ್‌ಬುಕ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಸೇರಿ ವಿವಿಧೆಡೆ ಮಳೆ ಅಬ್ಬರ; ಆರೆಂಜ್‌ ಅಲರ್ಟ್‌ ಘೋಷಣೆ

Karnataka Weather Forecast : ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜೂನ್‌ 27ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Heavy Rain Alert) ಸಾಧ್ಯತೆಯಿದೆ. ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕ (Rain News) ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಭಾಗದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಊತ್ತರ ಒಳನಾಡಿನ ಕೆಲ ಪ್ರದೇಶದಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಬೆಳಗಾವಿಯಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ.

ಮಲೆನಾಡಿನ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲಿಯಸ್‌ ಇರಲಿದೆ.

ಆರೆಂಜ್‌ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.

ಜೂನ್‌ 27ರವರೆಗೆ ಮೀನುಗಾರರಿಗೆ ಎಚ್ಚರಿಕೆ

ಜೂನ್‌ 27 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ

ಇದನ್ನೂ ಓದಿ: Tumkur Shoot out : ತುಮಕೂರಿನಲ್ಲಿ ಸದ್ದು ಮಾಡಿದ ಪೊಲೀಸ್ ತುಪಾಕಿ; ಸರಗಳ್ಳನ ಹೆಡೆಮುರಿ ಕಟ್ಟಿದ ಖಾಕಿ

ಮಾನ್ಸೂನ್‌ಗೂ ಕಾಲಿಟ್ಟ ಟ್ರೆಂಚ್‌ ಕೋಟ್‌ ಫ್ಯಾಷನ್‌!

ಮಳೆಗಾಲಕ್ಕೂ ಟ್ರೆಂಚ್‌ ಕೋಟ್‌ (Monsoon trench coat fashion) ಫ್ಯಾಷನ್‌ ಎಂಟ್ರಿ ನೀಡಿದೆ. ಹೌದು, ಕೇವಲ ಚಳಿಗಾಲದಲ್ಲಿ ಟ್ರೆಂಡಿಯಾಗುತ್ತಿದ್ದ, ಟ್ರೆಂಚ್‌ ಕೋಟ್‌ಗಳು ಇದೀಗ ಮಾನ್ಸೂನ್‌ ಸೀಸನ್‌ಗೂ ಕಾಲಿಟ್ಟಿದ್ದು, ಸೆಲೆಬ್ರೆಟಿಗಳನ್ನು ಮಾತ್ರವಲ್ಲ, ಸಾಮಾನ್ಯ ಹುಡುಗಿಯರನ್ನು ಸವಾರಿ ಮಾಡತೊಡಗಿವೆ. ಇದಕ್ಕೆ ಪೂರಕ ಎಂಬಂತೆ, ಕಿಂಗ್‌ ಖಾನ್‌ ಮಗಳು ಹಾಗೂ ನಟಿ ಸುಹಾನಾ ಖಾನ್‌ ಟ್ರೆಂಚ್‌ ಕೋಟ್‌ ಧರಿಸಿದ್ದು, ಈ ಫ್ಯಾಷನ್‌ ಜೆನ್‌ ಜಿ ಹುಡುಗಿಯರನ್ನು ಸೆಳೆದಿದೆ. ಮಾನ್ಸೂನ್‌ನಲ್ಲೂ ಟ್ರೆಂಚ್‌ ಕೋಟ್‌ ಕ್ಲಾಸಿಯಾಗಿ ಕಾಣಿಸುತ್ತದೆ ಎಂಬುದನ್ನು ಪ್ರೂವ್‌ ಮಾಡಿದೆ.

Monsoon Trench Coat Fashion

ಟ್ರೆಂಚ್‌ಕೋಟ್‌ ವೆರೈಟಿ ವಿನ್ಯಾಸ

ಟ್ರೆಂಚ್‌ ಕೋಟ್‌ಗಳು ನೋಡಲು ಒಂದೇ ಬಗೆಯದ್ದಾಗಿ ಕಾಣುತ್ತವಾದರೂ ಸ್ಟಿಚ್ಚಿಂಗ್‌ ನಾನಾ ಶೈಲಿಯಲ್ಲಿರುತ್ತವೆ. ಸ್ಲೀಕ್‌ ಲುಕ್‌, ಫಾರ್ಮಲ್‌ ಬ್ಲೇಜರ್‌ ಸ್ಟೈಲ್‌ನಲ್ಲೂದೊರಕುತ್ತವೆ. ಮೊದಲೆಲ್ಲಾ ಹಿಲ್‌ ಸ್ಟೇಷನ್‌ಗಳಲ್ಲಿ ಮಾತ್ರ ಇವುಗಳ ಬಳಕೆ ಹೆಚ್ಚಾಗಿತ್ತು. ಬರಬರುತ್ತಾ ಸಿನಿಮಾ ತಾರೆಯರ ವಾರ್ಡ್‌ರೋಬ್‌ ಸೇರಿದ ನಂತರ ಸಾಮಾನ್ಯ ಹುಡುಗಿಯರ ಮನಸ್ಸನ್ನು ಗೆಲ್ಲತೊಡಗಿದವು. ಸ್ವೆಟರ್‌ ಹಾಗೂ ಜಾಕೆಟ್‌ ಧರಿಸುವಂತೆ, ಟ್ರೆಂಚ್‌ ಕೋಟ್‌ಗಳನ್ನು ಧರಿಸುವುದು ಹೆಚ್ಚಾಯಿತು ಎನ್ನುತ್ತಾರೆ ಜಿಯಾ.

ಕ್ಲಾಸಿಕ್‌ ಲುಕ್‌ ಗ್ಯಾರಂಟಿ

ಅಂದಹಾಗೆ, ವೆಸ್ಟರ್ನ್‌ ಲುಕ್‌ ನೀಡುವಲ್ಲಿಈ ಟ್ರೆಂಚ್‌ ಕೋಟ್‌ಗಳು ಪ್ರಮುಖ ಪಾತ್ರ ವಹಿಸುತ್ತವೆ. ಡಿಸೈನರ್‌ ಋತು ಹೇಳುವಂತೆ, ಇದೀಗ ಇಂಡೋ – ವೆಸ್ಟರ್ನ್ ಸ್ಟೈಲ್‌ನಲ್ಲೂ ಈ ಕೋಟ್‌ಗಳನ್ನು ಬಳಸುವುದು ಹೆಚ್ಚಾಗತೊಡಗಿದೆ. ಹಾಗಾಗಿ ಫಾರ್ಮಲ್‌ , ಎಥ್ನಿಕ್‌ ಡ್ರೆಸ್‌ ಧರಿಸುವ ಮಾನಿನಿಯರಿಗೂ ಪ್ರಿಯವಾಗತೊಡಗಿವೆ ಎನ್ನುತ್ತಾರೆ ಅವರು.

ಹೀಗಿರಲಿ ಟ್ರೆಂಚ್‌ ಕೋಟ್‌ ಸ್ಟೈಲಿಂಗ್‌

  • ಟ್ರೆಂಚ್‌ ಕೋಟ್‌ ಬೆಚ್ಚಗಿಡುವುದರಿಂದ ಧರಿಸುವವರು ಸಿಂಪಲ್‌ ಇನ್ನರ್‌ ಡ್ರೆಸ್‌ ಧರಿಸುವುದು ಬೆಸ್ಟ್.
  • ಉದ್ದಗಿರುವವರಿಗೆ ಯಾವುದೇ ಬಗೆಯ ಟ್ರೆಂಚ್‌ ಕೋಟ್‌ ಆದರೂ ಸೂಟ್‌ ಆಗುತ್ತವೆ.
  • ಪ್ಲಂಪಿಯಾಗಿರುವವರು ಆದಷ್ಟು ಡಿಸೈನರ್‌ ಕೋಟ್‌ ಧರಿಸುವುದು ಉತ್ತಮ.
  • ವಿಂಟೆಂಜ್‌ ಹಾಗೂ ರಾಯಲ್‌ ಕಲರ್‌ಗಳ ಟ್ರೆಂಚ್‌ ಕೋಟ್‌ಗಳು ರಾಯಲ್‌ ಲುಕ್‌ ನೀಡುತ್ತವೆ.
  • ಪ್ರಿಂಟೆಡ್‌ ಕೋಟ್‌ಗಳು ಟ್ರೆಂಡ್‌ನಲ್ಲಿಲ್ಲ.
  • ಫಿಟ್ಟಿಂಗ್‌ ಇದ್ದರೇ ಮಾತ್ರ ಚೆನ್ನಾಗಿ ಕಾಣಿಸುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಮನಗರ

DK Shivakumar: ವಿವಿಧ ಸಮಸ್ಯೆ ಹೊತ್ತು ಬಂದವರಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದ ಡಿ.ಕೆ. ಶಿವಕುಮಾರ್

DK Shivakumar: ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಹಾಗೂ ಅಕ್ಕೂರು ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ ಸರ್ಕಾರದ ವತಿಯಿಂದ ಸೋಮವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌, ವಿವಿಧ ಸಮಸ್ಯೆ ಹೊತ್ತು ಬಂದವರಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು.

VISTARANEWS.COM


on

bagilige bantu sarkara sevege irali sahakara programme in channapattana
Koo

ಚನ್ನಪಟ್ಟಣ: ತಾಲೂಕಿನ ಕೋಡಂಬಳ್ಳಿ ಹಾಗೂ ಅಕ್ಕೂರು ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ ಸರ್ಕಾರದ ವತಿಯಿಂದ ಸೋಮವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar), ವಿವಿಧ ಸಮಸ್ಯೆ ಹೊತ್ತು ಬಂದವರಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು.

ಕಾರ್ಯಕ್ರಮದಲ್ಲಿ (Kannada News) ವ್ಯಾಪ್ತಿಯಲ್ಲಿ ಖಾತೆ ಮಾಡಿಕೊಡಲು 15- 20 ಸಾವಿರ ರೂ. ಲಂಚ ತೆಗೆದುಕೊಳ್ಳುತ್ತಿದ್ದಾರೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಪೂರ್ಣಿಮಾ ದೂರು ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, ಲಂಚ ಪಡೆಯುವ ಪಿಡಿಓ, ಗ್ರಾಮ ಲೆಕ್ಕಿಗರು ಬೇರೆ ಜಾಗ ಹುಡುಕಿಕೊಳ್ಳಿ. ನನ್ನ ಕ್ಷೇತ್ರದ ಜನರಿಗೆ ತೊಂದರೆ ಆಗಬಾರದು‌ ಎಂದರು.

ಮುಂದಿನ 15 ದಿನಗಳಲ್ಲಿ ಲಂಚ ಪಡೆಯುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಮುಂದಿನ ದಿನಗಳಲ್ಲಿ ಈ ಬಗ್ಗೆ ದೂರುಗಳು ಬರಬಾರದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ದಿಗ್ವಿಜಯ ಬೋಡಕೆ ಅವರಿಗೆ ಖಡಕ್ ಸೂಚನೆ ನೀಡಿದರು.

ಇದನ್ನೂ ಓದಿ: Samsung: ಸ್ಯಾಮ್‌ಸಂಗ್‌ನಿಂದ ಮ್ಯೂಸಿಕ್ ಫ್ರೇಮ್ ಬಿಡುಗಡೆ; ವಿಶೇಷತೆ ಏನು, ಬೆಲೆ ಎಷ್ಟು?

ಶ್ರವಣಯ್ಯನ ತೋಪಿನ ಸುಶೀಲ, ರತ್ನಮ್ಮ, ರಾಜಮ್ಮ, ಚಿಕ್ಕತಾಯಮ್ಮ ಸೇರಿದಂತೆ 21 ಕ್ಕೂ ಹೆಚ್ಚು ಜನ ಕಳೆದ 10 ವರ್ಷಗಳಿಂದ ಮನೆಗಳಿಗೆ ಹಕ್ಕುಪತ್ರ ನೀಡುತ್ತಿಲ್ಲ ಎಂದು ದೂರಿದಾಗ, ಮುಂದಿನ ವಾರದೊಳಗೆ ಇವರಿಗೆ ಹಕ್ಕು ಪತ್ರಗಳನ್ನು ನೀಡಬೇಕು ಎಂದು ಸೂಚಿಸಿದರು. ಸ್ಥಳದಲ್ಲೇ ಇದ್ದ ಜಿಲ್ಲಾಧಿಕಾರಿಗಳು ಮುಂದಿನ ವಾರ ಖುದ್ದಾಗಿ ನಾನೇ ಬಂದು ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ತಿಳಿಸಿದರು.

ನಿಮ್ಮನ್ನು ನೋಡಲು ಮಾತ್ರ ಬಂದಿದ್ದೇನೆ

“ಅರ್ಜಿ ಎಲ್ಲಿ, ಏನು ಸಮಸ್ಯೆ” ಎಂದು ಡಿಸಿಎಂ ಅವರ ಪ್ರಶ್ನೆಗೆ ಉತ್ತರಿಸಿದ ಚನ್ನಪಟ್ಟಣದ ನಿವಾಸಿ ಶಿವಗಂಗಮ್ಮ, “ಗೃಹಲಕ್ಷ್ಮಿ, ಅನ್ನಭಾಗ್ಯ ಮತ್ತು ಶಕ್ತಿ ಯೋಜನೆಯಿಂದ ನನಗೆ ತುಂಬಾ ಒಳ್ಳೆಯದಾಗಿದೆ, ನನ್ನದು ಏನೂ ಸಮಸ್ಯೆ ಇಲ್ಲ. ನಿಮ್ಮನ್ನು ನೋಡಲು ಮಾತ್ರ ಬಂದಿದ್ದೇನೆ” ಎಂದಾಗ ಡಿಸಿಎಂ ನಕ್ಕು ಹಿರಿಯ ಜೀವದ ಆಶೀರ್ವಾದ ಪಡೆದು “ನಿನ್ನಂತೆ ಎಲ್ಲರ ಸಮಸ್ಯೆಯು ಇಲ್ಲದಂತೆ ಆಗಲಿ ಕಣವ್ವ” ಎಂದರು.

ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

ಬಳಿಕ ಕೊಂಡಾಪುರ ಕೃಷ್ಣ ಎಂಬುವವರು, ಜಮೀನು ನನ್ನ ಹೆಸರಿಗೆ ಆಗಿ 5 ವರ್ಷಗಳು ಕಳೆದರೂ ಖಾತೆ ನೀಡುತ್ತಿಲ್ಲ ಎಂದು ಡಿಸಿಎಂ ಬಳಿ ಹೇಳಿದಾಗ, ಪಕ್ಕದಲ್ಲೇ ಇದ್ದ ಜಿಲ್ಲಾಧಿಕಾರಿಗಳು ಡಿಸಿಎಂ ಸೂಚನೆ ಮೇರೆಗೆ ತಕ್ಷಣ ಕಂದಾಯ ಅಧಿಕಾರಿಗೆ ಕರೆ ಮಾಡಿ ಕೂಡಲೇ ದಾಖಲೆ ನೀಡುವಂತೆ ತಿಳಿಸಿದರು.

ಅಂಬಾಡಳ್ಳಿಯ ರೇಣುಕಮ್ಮ, ಮಾದಾಪುರ ಗ್ರಾಮದ ಚಿಕ್ಕಮ್ಮ ಎಂಬುವವರು ನಮಗೆ ಒಂದು ವರ್ಷ ಕಳೆದರೂ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದಾಗ “ಮುಂದಿನ ತಿಂಗಳು ಬರುವಂತೆ ಮಾಡುತ್ತೇನೆ” ಎಂದು ಡಿಸಿಎಂ ಈ ವೇಳೆ ಭರವಸೆ ನೀಡಿದರು.

ಇದನ್ನೂ ಓದಿ: Kannada New Movie: ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ʼಚಿನ್ನಮ್ಮʼ ಹಾಡಿಗೆ ಗೋಲ್ಡನ್ ಸ್ಟಾರ್ ಅಭಿಮಾನಿಗಳು ಫಿದಾ

ಈ ವೇಳೆ ಪೋಡಿ, ಪಹಣಿ, ಬಗರ್ ಹುಕುಂ, ವಸತಿ ಯೋಜನೆಗೆ ಸಂಬಂಧಿಸಿದ ಹೆಚ್ಚಿನ ಮನವಿಗಳು ಸಲ್ಲಿಕೆಯಾದವು.

Continue Reading

ಪ್ರಮುಖ ಸುದ್ದಿ

DK Shivakumar: ದೊಡ್ಡವರು ಚನ್ನಪಟ್ಟಣ ಜನರ ಸಮಸ್ಯೆ ಬಗೆಹರಿಸಿಲ್ಲ, ಹೀಗಾಗಿ ಬಂದಿದ್ದೇನೆ: ಎಚ್‌ಡಿಕೆಗೆ ಡಿಕೆಶಿ ತಿರುಗೇಟು

DK Shivakumar: ಚನ್ನಪಟ್ಟಣದಲ್ಲಿ ಇಷ್ಟು ದಿನ ಅನುಭವಿಗಳು, ದೊಡ್ಡವರು ಇದ್ದರು. ಅವರು ಜನರ ಸಮಸ್ಯೆಗೆ ಸ್ಪಂದಿಸಿ, ಪರಿಹಾರ ನೀಡುತ್ತಾರೆ ಎಂದು ಭಾವಿಸಿದ್ದೆ. ಅದರೆ, ಏನೂ ಆಗಿಲ್ಲ ಎಂಬುದು ನನ್ನ ಗಮನಕ್ಕೆ ಬಂದಿದೆ. ಹೀಗಾಗಿ ನಾನು ಬಂದಿದ್ದೇನೆ ಎಂದು ಪರೋಕ್ಷವಾಗಿ ಎಚ್‌ಡಿಕೆ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ಟೀಕಿಸಿದ್ದಾರೆ.

VISTARANEWS.COM


on

DK Shivakumar
Koo

ಚನ್ನಪಟ್ಟಣ: ಚನ್ನಪಟ್ಟಣದಲ್ಲಿ ಅಧಿಕಾರದಲ್ಲಿದ್ದ ದೊಡ್ಡವರು, ಅನುಭವಿ ನಾಯಕರು ಇಲ್ಲಿನ ಜನರ ಸಮಸ್ಯೆ ಬಗೆಹರಿಸುತ್ತಾರೆ ಎಂದು ನಾನು ಭಾವಿಸಿದ್ದೆ. ಆದರೆ ಸಮಸ್ಯೆ ಬಗೆಹರಿದಿಲ್ಲ. ಹೀಗಾಗಿ ನಾನು ಬಂದಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.

ಚನ್ನಪಟ್ಟಣ ಈಗ ನೆನಪಾಗಿದೆಯೇ ಎಂಬ ಕುಮಾರಸ್ವಾಮಿ ಅವರ ಟೀಕೆಗೆ ಚನ್ನಪಟ್ಟಣದಲ್ಲಿ ಸೋಮವಾರ ಆಯೋಜಿಸಿದ್ದ ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮದ ಬಳಿಕ ಅವರು ಪ್ರತಿಕ್ರಿಯಿಸಿದ್ದಾರೆ.

ಇಷ್ಟು ದಿನ ಈ ಕ್ಷೇತ್ರ ಖಾಲಿ ಇರಲಿಲ್ಲ. ಇಲ್ಲಿ ಅನುಭವಿಗಳು ದೊಡ್ಡವರು ಇದ್ದರು. ಅವರು ಜನರ ಸಮಸ್ಯೆಗೆ ಸ್ಪಂದಿಸಿ, ಪರಿಹಾರ ನೀಡುತ್ತಾರೆ ಎಂದು ಭಾವಿಸಿದ್ದೆ. ಇತ್ತೀಚೆಗೆ ಅಧಿಕಾರಿಗಳ ಸಭೆ ಮಾಡಿದ ಬಳಿಕ ಪರಿಸ್ಥಿತಿ ತಿಳಿಯಿತು. ಇಲ್ಲಿ ಏನೂ ಆಗಿಲ್ಲ ಎಂಬುದು ನನ್ನ ಗಮನಕ್ಕೆ ಬಂದಿದೆ. ಅದಕ್ಕೆ ನಮ್ಮ ಶೈಲಿಯಲ್ಲಿ ನಾವು ಕಾರ್ಯಕ್ರಮ ಮಾಡುತ್ತಿದ್ದೇವೆ. ರಾಮನಗರ, ಕನಕಪುರ, ಬೆಂಗಳೂರಿನಲ್ಲೂ ಈ ಕಾರ್ಯಕ್ರಮ ಮಾಡಿದ್ದೇವೆ” ಎಂದು ತಿಳಿಸಿದರು.

ಮಾಧ್ಯಮಗಳನ್ನು ಹೊರಗಿಟ್ಟು ಸಭೆ ಮಾಡಿ ಅಧಿಕಾರಿಗಳನ್ನು ಎದುರಿಸಿದ್ದೀರಿ ಎಂದು ಆರೋಪ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಯಾರಿಗಾದರೂ ಬೆದರಿಕೆ ಹಾಕಿದ್ದರೆ ದೂರು ನೀಡಲಿ” ಎಂದು ತಿಳಿಸಿದರು.

ಇದನ್ನೂ ಓದಿ | Parliament Session 2024: ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಎಚ್‌ಡಿಕೆ, ಶೋಭಾ ಕರಂದ್ಲಾಜೆ; Video ಇಲ್ಲಿದೆ

ಮತದಾರರ ಪಟ್ಟಿಯಲ್ಲಿ ಬಿಟ್ಟುಹೋಗಿರುವ ಹೆಸರು ಸೇರ್ಪಡೆಗೆ ಸೂಚನೆ

ಹೊಸ ಮತದಾರರ ಸೇರ್ಪಡೆಗೆ ಸೂಚಿಸಿದ್ದೀರಾ ಎಂದು ಕೇಳಿದಾಗ, “ಲೋಕಸಭಾ ಚುನಾವಣೆ ಸಮಯದಲ್ಲಿ ಮುಸಲ್ಮಾನ ಸಮುದಾಯದವರ ಹೆಸರು ತೆಗೆದು ಹಾಕಲಾಗಿದೆ ಎಂದು ದೂರುಗಳು ಬಂದಿದ್ದವು. ಹೀಗಾಗಿ ಜಿಲ್ಲಾಧಿಕಾರಿಗಳಿಗೆ ಮತ್ತೆ ಈ ಮತದಾರರ ಮನೆಗೆ ಭೇಟಿ ನೀಡಿ ಅವರ ಹೆಸರನ್ನು ಮತ್ತೆ ಸೇರಿಸಲು ಸೂಚಿಸಿದ್ದೇನೆ. ಹೊರಗಿನಿಂದ ಬೇರೆಯವರನ್ನು ತಂದು ಇಲ್ಲಿನ ಮತದಾರರ ಪಟ್ಟಿಯಲ್ಲಿ ಸೇರಿಸಲು ಆಗುವುದಿಲ್ಲ. ಇಲ್ಲಿ ಹೊಸದಾಗಿ ಸೇರಿಸಬೇಕು ಎಂದರೆ ಹಳೇ ಬೇರೆ ಕಡೆ ಇರುವ ಮತದಾರರ ಹೆಸರನ್ನು ಅಳಿಸಬೇಕು. ಹೀಗಾಗಿ ಹೊಸ ತಂತ್ರಜ್ಞಾನದಲ್ಲಿ ಈ ರೀತಿ ಬೇರೆಯವರನ್ನು ತಂದು ಸೇರಿಸಲು ಆಗುವುದಿಲ್ಲ” ಎಂದು ತಿಳಿಸಿದರು.

ಡಿ.ಕೆ. ಶಿವಕುಮಾರ್ ಚುನಾವಣಾ ಅಕ್ರಮ ಮಾಡುತ್ತಿದ್ದು ಚುನಾವಣಾ ಆಯೋಗಕ್ಕೆ ಪತ್ರ ಬರೆಯುತ್ತೇನೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಕೇವಲ ಪತ್ರ ಯಾಕೆ ಬರೆಯುತ್ತಾರೆ. ಚುನಾವಣಾ ಆಯೋಗದ ಕಚೇರಿಗೆ ಹಾಸಿಗೆ, ದಿಂಬು ತೆಗೆದುಕೊಂಡು ಹೋಗಿ ಮಲಗಲಿ” ಎಂದು ತಿಳಿಸಿದರು.

ಶಿವಕುಮಾರ್ ಅವರ ಚನ್ನಪಟ್ಟಣ ಪ್ರವೇಶ ಮೈತ್ರಿನಾಯಕರನ್ನು ಭಯ ಬೀಳಿಸಿದೆಯೇ ಎಂದು ಕೇಳಿದಾಗ, “ಅಲ್ಲಿ ದೊಡ್ಡ ದೊಡ್ಡ ನಾಯಕರು ಇದ್ದಾರೆ. ಹೀಗಾಗಿ ಅವರು ಭಯ ಯಾಕೆ ಬೀಳುತ್ತಾರೆ” ಎಂದರು.

ಕುಮಾರಸ್ವಾಮಿ ಅವರು ಶಾಸಕರಾಗಿ ಇಲ್ಲಿ ಕೆಲಸ ಮಾಡಿಲ್ಲವೇ ಎಂದು ಕೇಳಿದಾಗ, “ಅವರು ಕೆಲಸ ಮಾಡಿದ್ದಾರೋ ಇಲ್ಲವೋ ಎಂದು ಜನ ತೀರ್ಮಾನ ಮಾಡುತ್ತಾರೆ” ಎಂದು ತಿಳಿಸಿದರು.

ಪಕ್ಷದಲ್ಲಿ ಮೂವರು ಡಿಸಿಎಂ ಹುದ್ದೆ ಬೇಡಿಕೆ ಬಗ್ಗೆ ಕೇಳಿದಾಗ, “ಆ ಬಗ್ಗೆ ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ” ಎಂದು ತಿಳಿಸಿದರು.

ಜನರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ತೀರ್ಮಾನ

ಉಪಚುನಾವಣೆಗೆ ಸಚಿವ ಚೆಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಸಮಿತಿ ರಚನೆ ಬಗ್ಗೆ ಕೇಳಿದಾಗ, “ಪಕ್ಷದಲ್ಲಿ ಒಂದು ಪದ್ಧತಿ ಇರುತ್ತದೆ. ಮತದಾರರು ಹಾಗು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುತ್ತೇವೆ. ನಂತರ ನಾನು, ಮುಖ್ಯಮಂತ್ರಿಗಳು ಹಾಗೂ ಪ್ರದಾನ ಕಾರ್ಯದರ್ಶಿಗಳು ಕೂತು ಚರ್ಚೆ ಮಾಡುತ್ತೇವೆ. ನಮ್ಮ ಪಕ್ಷದ ಚುನಾವಣಾ ಸಮಿತಿಯೂ ಚರ್ಚೆ ಮಾಡಿ ಯಾರು ಸ್ಪರ್ಧೆ ಮಾಡಬೇಕು ಎಂದು ತೀರ್ಮಾನ ಕೈಗೊಳ್ಳುತ್ತದೆ” ಎಂದು ತಿಳಿಸಿದರು.

ಸಮಿತಿ ನಿಮ್ಮ ಹೆಸರು ಸೂಚಿಸಿದರೆ ನೀವು ಸ್ಪರ್ಧೆ ಮಾಡುತ್ತೀರಾ ಎಂದು ಕೇಳಿದಾಗ, “ಪಕ್ಷ ಹೇಳಿದಂತೆ ನಾವು ಕೇಳಬೇಕು” ಎಂದು ತಿಳಿಸಿದರು.”

ಕನಕಪುರದ ಹೆದರಿಕೆ, ಬೆದರಿಕೆ, ಭ್ರಷ್ಟಾಚಾರದ ಮಾದರಿ ನಮಗೆ ಬೇಡ ಎಂಬ ಯೋಗೇಶ್ವರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕನಕಪುರದಲ್ಲಿ ಭ್ರಷ್ಟಾಚಾರದ ಬಗ್ಗೆ ಏನಾದರೂ ದೂರು ಬಂದಿದೆಯೇ?” ಎಂದು ಕೇಳಿದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ಕೇಳಿದಾಗ, “ಜನ ನಮಗೆ ತಿದ್ದಿಕೊಳ್ಳಲು ಅವಕಾಶ ನೀಡಿದ್ದಾರೆ. ಸುರೇಶ್ ಅವರಿಗೆ ವಿಶ್ರಾಂತಿ ಪಡೆಯಲು ಹೇಳಿದ್ದಾರೆ. ನೂತನ ಸಂಸದರಾಗಿ ಆಯ್ಕೆಯಾಗಿರುವ ಡಾ.ಮಂಜುನಾಥ್ ಅವರು ಸುರೇಶ್ ಅವರಿಗಿಂತ ಹೆಚ್ಚಿನ ಕೆಲಸ ಮಾಡಲಿ” ಎಂದರು.

ಸುರೇಶ್ ಅವರು ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದು, ಪಕ್ಷ ಅವರನ್ನು ಸ್ಪರ್ಧಿಸಲು ಸೂಚಿಸಿದರೆ ಅವರು ನಿಲ್ಲುತ್ತಾರಾ ಎಂದು ಕೇಳಿದಾಗ, “ಪಕ್ಷ ಹೇಳಿದರೆ ನಾನಾಗಲಿ, ಸುರೇಶ್ ಆಗಲಿ ಕೇಳಬೇಕು. ಸುರೇಶ್ ಅವರಿಗೆ ಸಂಸತ್ ಚುನಾವಣೆಗೂ ಸ್ಪರ್ಧೆ ಮಾಡುವ ಆಸಕ್ತಿ ಇರಲಿಲ್ಲ. ಕಾರ್ಯಕರ್ತರ ಒತ್ತಾಯದ ಮೇರೆಗೆ ಅವರು ಸ್ಪರ್ಧೆ ಮಾಡಿದ್ದಾರೆ. ಅವರು ಎಂದಿಗೂ ಅಧಿಕಾರಕ್ಕೆ ಆಸೆ ಪಟ್ಟವರಲ್ಲ” ಎಂದು ತಿಳಿಸಿದರು.

ಕುಮಾರಸ್ವಾಮಿ ಅವರು ನಿನ್ನೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿರುವ ಬಗ್ಗೆ ಕೇಳಿದಾಗ, “ಬಹಳ ಸಂತೋಷ, ಅವರಿಗೆ ಒಳ್ಳೆಯದಾಗಲಿ” ಎಂದು ತಿಳಿಸಿದರು.

ರಾಮನಗರ ಅಭಿವೃದ್ಧಿ ಮಾಡಿದ್ದು ನಾನು, ಅವರು ಕಲ್ಲು ಹೊಡೆಯುತ್ತಿದ್ದರು ಎಂಬ ಕುಮಾರಸ್ವಾಮಿ ಟೀಕೆ ಬಗ್ಗೆ ಕೇಳಿದಾಗ, “ಹೌದು, ಕಲ್ಲು ಒಡೆಯುತ್ತಿದ್ದೇವೆ. ಈಗಲೂ ಒಡೆಯುತ್ತಿದ್ದೇವೆ” ಎಂದು ಲೇವಡಿ ಮಾಡಿದರು.

ನಮ್ಮನ್ನು ಸ್ಮರಿಸದಿದ್ದರೆ ಕುಮಾರಸ್ವಾಮಿ ರಾಜಕಾರಣ ನಡೆಯಲ್ಲ: ಡಿ.ಕೆ. ಸುರೇಶ್

DK Suresh

ಬೆಂಗಳೂರು: “ಡಿ.ಕೆ. ಶಿವಕುಮಾರ್ ಹಾಗು ನನ್ನನ್ನು ಸ್ಮರಿಸದಿದ್ದರೆ ಕುಮಾರಸ್ವಾಮಿ ಅವರ ರಾಜಕಾರಣ ಹಾಗು ದಿನಚರಿ ನಡೆಯಲ್ಲ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು.

ಸದಾಶಿವನಗರ ನಿವಾಸದ ಬಳಿ ಡಿ.ಕೆ. ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ಡಿ.ಕೆ. ಸಹೋದರರ ಗುಲಾಮರಾಗಬೇಡಿ ಎಂದು ಕುಮಾರಸ್ವಾಮಿ ಅವರು ಚನ್ನಪಟ್ಟಣದ ಅಧಿಕಾರಿಗಳಿಗೆ ತಿಳಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರು ಪ್ರತಿ ವಿಚಾರದಲ್ಲೂ ನಮ್ಮ ಹೆಸರನ್ನು ಎಳೆದುತರುತ್ತಾರೆ. ಚನ್ನಪಟ್ಟಣ ತ್ಯಜಿಸಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆದ್ದಿದ್ದಾರೆ. ಅವರು ಚನ್ನಪಟ್ಟಣದಲ್ಲಿ ಮಾಡಿರುವ ಕೆಲಸ ಕಾರ್ಯಗಳ ಬಗ್ಗೆ, ಸಭೆಗಳ ಬಗ್ಗೆ ಮಾಧ್ಯಮಗಳಲ್ಲಿ ದಾಖಲೆಗಳಿವೆ. ಅವರು ಚನ್ನಪಟ್ಟಣ ಎಷ್ಟು ಬಾರಿ ಬಂದಿದ್ದಾರೆ ಎಂಬ ದಾಖಲೆ ನಿಮ್ಮ ಬಳಿ ಇದೆ. ನೀವೇ ಪರಿಶೀಲನೆ ಮಾಡಿ ಜನರ ಮುಂದೆ ಇಡಿ” ಎಂದು ಮನವಿ ಮಾಡಿದರು.

ಸುಳ್ಳು ಹೇಳಿ ದಾರಿತಪ್ಪಿಸುವುದನ್ನು ಕಡಿಮೆ ಮಾಡಲಿ

ಮುಂದೆ ನಮ್ಮ ಸರ್ಕಾರ ಬರುತ್ತದೆ ಎಂದು ಅಧಿಕಾರಿಗಳಿಗೆ ಬೆದರಿಸಿರುವ ಬಗ್ಗೆ ಕೇಳಿದಾಗ, “ಜನ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಆಶೀರ್ವಾದ ಮಾಡಿದ್ದು ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿಯಾಗಿದ್ದಾರೆ. ಅವರು ಜನರನ್ನು ಹಾಗು ಅಧಿಕಾರಿಗಳನ್ನು ಮೊದಲಿನಿಂದಲೂ ಬೆದರಿಸಿಕೊಂಡು ಬಂದಿದ್ದು, ಈಗಲೂ ಅದನ್ನೇ ಮಾಡುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ. ಅವರು ಸುಳ್ಳು ಹೇಳಿ ಜನರ ದಾರಿತಪ್ಪಿಸುವುದನ್ನು ಕಡಿಮೆ ಮಾಡಿಕೊಳ್ಳಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ” ಎಂದು ತಿಳಿಸಿದರು.

ಜನರ ತೀರ್ಮಾನದಂತೆ ಉಪಚುನಾವಣೆ ಅಭ್ಯರ್ಥಿ

ಚನ್ನಪಟ್ಟಣ ಉಪಚುನಾವಣೆಯಲ್ಲಿ ಯಾರು ಅಭ್ಯರ್ಥಿಯಾಗಬೇಕು ಎಂದು ಕೇಳಿದಾಗ, “ಜನ ಯಾರನ್ನು ಬಯಸುತ್ತಾರೋ ಅವರು ಸ್ಪರ್ಧಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪು ಅಂತಿಮ. ಅವರ ಸೂಚನೆಯಂತೆ ಪಕ್ಷ ನಡೆಯುತ್ತದೆ. ರಾಮನಗರ ಜಿಲ್ಲೆ ನಮ್ಮ ಸ್ವಂತ ಜಿಲ್ಲೆ. ಪಕ್ಷದ ಅಧ್ಯಕ್ಷರಾಗಿ, ಉಪಮುಖ್ಯಮಂತ್ರಿಯಾಗಿ ಶಿವಕುಮಾರ್ ಅವರ ಮೇಲೆ ಜವಾಬ್ದಾರಿ ಇದೆ. ಕ್ಷೇತ್ರದಲ್ಲಿ ಶಾಸಕರು ಇಲ್ಲದ ಕಾರಣ ಶಿವಕುಮಾರ್ ಅವರು ಜನರ ಸಮಸ್ಯೆ ಆಲಿಸುತ್ತಿದ್ದಾರೆ. ಜನ ಕೂಡ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದರು.

ನಿಮ್ಮ ಮುಂದಿನ ನಡೆ ಏನು ಎಂದು ಕೇಳಿದಾಗ, “ಸಾಮಾನ್ಯ ಕಾರ್ಯಕರ್ತನಾಗಿ, ಕ್ಷೇತ್ರದ ಜನರ ಕಷ್ಟಸುಖ ಕೇಳುತ್ತಾ, ರಾಜ್ಯದ ಹಿತದೃಷ್ಟಿಯಿಂದ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ” ಎಂದು ತಿಳಿಸಿದರು.

ಸೋತು ಒಂದು ತಿಂಗಳೂ ಆಗಿಲ್ಲ, ಮತ್ತೆ ಸ್ಪರ್ಧೆ ಮಾಡಿದರೆ ಜನ ನಗುತ್ತಾರೆ

ಚನ್ನಪಟ್ಟಣದಲ್ಲಿ ಸುರೇಶ್ ಅವರು ಸ್ಪರ್ಧೆ ಮಾಡುವುದಿಲ್ಲವೇ ಎಂದು ಕೇಳಿದಾಗ, “ಜನ ನನ್ನನ್ನು ತಿರಸ್ಕಾರ ಮಾಡಿದ್ದಾರೆ. ನಾನು ಸೋತು ಇನ್ನು ಒಂದು ತಿಂಗಳೂ ಕಳೆದಿಲ್ಲ. ಮತ್ತೆ ಚುನಾವಣೆ ಸ್ಪರ್ಧೆ ಮಾಡಿದರೆ ಜನ ನಗುತ್ತಾರೆ. ಜನ ಹೇಳಬಹುದು. ಆದರೆ ಸ್ಪರ್ಧಿಸುವ ಮನಸ್ಥಿತಿ ನಮಗೂ ಇರಬೇಕು. ಜನ ನನಗೆ ವಿಶ್ರಾಂತಿ ಪಡೆಯಲು ಹೇಳಿದ್ದು, ಬೇರೆಯವರಿಗೆ ಕೆಲಸ ಮಾಡಲು ಹೇಳಿದ್ದಾರೆ. ಬೇರೆಯವರು ಕೆಲಸ ಮಾಡಲಿ, ನಾವು ಅವರಿಗೆ ಸಹಕಾರ ನೀಡುತ್ತೇವೆ. ಚನ್ನಪಟ್ಟಣದ ಜನ ನಮ್ಮ ಸ್ವಂತ ಜನ. ಮೊದಲಿಂದಲೂ ಅವರ ಜತೆ ಒಡನಾಟವಿದೆ. ವಿಶೇಷವಾಗಿ ಲೋಕಸಭೆಯಲ್ಲಿ ಈ ಜನ ಉತ್ತಮ ಬೆಂಬಲ ನೀಡಿದ್ದಾರೆ. ಚನ್ನಪಟ್ಟಣದಲ್ಲಿ ಪಕ್ಷಕ್ಕೆ ನೆಲೆ ಇದೆ. ಆದರೆ ಅಧಿಕಾರದ ಆಸೆಗೆ ಪಕ್ಷಾಂತರ ಮಾಡಿದ ಪರಿಣಾಮ ನಮಗೆ ಹಿನ್ನಡೆ ಆಗುತ್ತಿತ್ತು” ಎಂದು ತಿಳಿಸಿದರು.

ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡಿದರೆ ತಪ್ಪಾಗುತ್ತದೆ

ಸೂರಜ್ ರೇವಣ್ಣ ಅವರ ಪ್ರಕರಣದ ಬಗ್ಗೆ ಕೇಳಿದಾಗ, “ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿಚಾರ. ಅವರ ಬಗ್ಗೆ ನಾವು ಮಾತನಾಡಿದರೆ ತಪ್ಪಾಗುತ್ತದೆ. ಹೀಗಾಗಿ ನೀವು ಮಾತನಾಡಬೇಡಿ. ರಾಜ್ಯದ ಜನ ಗಮನಿಸುತ್ತಿದ್ದು, ಕಾನೂನು ಕ್ರಮ ಕೈಗೊಳ್ಳಲಿದೆ” ಎಂದು ತಿಳಿಸಿದರು.

ಇದನ್ನೂ ಓದಿ | LKG UKG in Anganwadis: ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಹಮತ

ಷಡ್ಯಂತ್ರಕ್ಕೆ ಹೆದರಲ್ಲ, ಓಡಿಹೋಗಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಯಾವ ಕಾರಣಕ್ಕೆ, ಯಾರನ್ನು ಉದ್ದೇಶಿಸಿ ಹೇಳಿದ್ದಾರೆ ಗೊತ್ತಿಲ್ಲ. ಅವರ ರಕ್ಷಣೆಗಾಗಿ ಬೇರೆಯವರ ಮೇಲೆ ಹೇಳುವುದು ಅಭ್ಯಾಸವಾಗಿದೆ. ಬೇರೆಯವರ ಹೆಸರು ಹೇಳಿ ತಾವು ರಕ್ಷಣೆ ಪಡೆಯುವ ಕೆಲಸ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

Continue Reading

ಮಳೆ

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

Karnataka Weather Forecast : ರಾಜ್ಯಾದ್ಯಂತ ನೈರುತ್ಯ ಮುಂಗಾರು ದುರ್ಬಲವಾಗಿದ್ದರೂ, ಕರಾವಳಿ ಹಾಗೂ ಒಳನಾಡಿನ ವಿವಿಧೆಡೆ ಮಳೆಯು (Rain News) ಅಬ್ಬರಿಸುತ್ತಿದೆ. ಕಡಲ ತೀರದಲ್ಲಿ ಅಲೆಗಳು ಆಳೆತ್ತರದಲ್ಲಿ ಅಪ್ಪಳಿಸುತ್ತಿದ್ದು, ನಾಳೆಗೂ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರಾವಳಿಯಲ್ಲಿ ವರುಣಾರ್ಭಟ (Rain News) ಮುಂದುವರೆದಿದೆ. ಕಳೆದ ಎರಡು ಮೂರು ದಿನಗಳಿಂದ ಕರಾವಳಿಯಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುತ್ತಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿದ್ದು, ಭಾರೀ ಗಾಳಿ ಹಿನ್ನೆಲೆಯಲ್ಲಿ ದಡಕ್ಕೆ ಆಳೆತ್ತರದ ಅಲೆಗಳು ಅಪ್ಪಳಿಸುತ್ತಿದೆ. ರೆಡ್‌ ಅಲರ್ಟ್‌ ನೀಡಲಾಗಿದ್ದು, ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್ ಬಿದ್ದಿದೆ. ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಮುನ್ಸೂಚನೆ (Karnataka Weather Forecast) ನೀಡಿದೆ.

ಜೂನ್‌ 25ರವರೆಗೆ ಕರಾವಳಿ ಮತ್ತು ದಕ್ಷಿನ ಒಳನಾಡಿನಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳಾದ ಬೀದರ್‌, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ , ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ವಿಜಯನಗರದಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿ ಬೀಸಲಿದೆ.

ರಾಜ್ಯಾದ್ಯಂತ ಮುಂಗಾರು ದುರ್ಬಲವಾಗಿದ್ದರೂ, ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಪಣಂಬೂರು, ಭಾಲ್ಕಿ 5 ಸೆಂ.ಮೀ, ಮಂಗಳೂರು ವಿಮಾನ ನಿಲ್ದಾಣ , ಕೊಟ್ಟಿಗೆಹಾರ ತಲಾ 4 ಸೆಂ.ಮೀ ಮಳೆಯಾಗಿದೆ. ಉಡುಪಿ, ಸುಳ್ಯ, ಬಾದಾಮಿ, ದೇವರಹಿಪ್ಪರಗಿಯಲ್ಲಿ 3 ಸೆಂ.ಮೀ ಮಳೆಯಾಗಿದೆ. ಧರ್ಮಸ್ಥಳ, ಮಂಕಿ, ಪುತ್ತೂರು , ಅಂಕೋಲಾ, ರೋನ್, ಭಾಗಮಂಡಲ, ಆಗುಂಬೆಯಲ್ಲಿ 2 ಸೆಂ.ಮೀ ಮಳೆಯಾಗಿದೆ. ಕಾರವಾರ, ಮೂಲ್ಕಿ, ಕುಂದಾಪುರ, ಬೆಳ್ತಂಗಡಿ, ಹೊನ್ನಾವರ, ಕಾರ್ಕಳ, ಉಪ್ಪಿನಂಗಡಿ, ನರಗುಂದ, ನಿಪ್ಪಾಣಿ, ಶಹಪುರ, ಕುಷ್ಟಗಿ, ಲಿಂಗನಮಕ್ಕಿ ಎಚ್‌ಎಂಎಸ್ , ಪೊನ್ನಂಪೇಟೆಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Karnataka Weather
ಕರ್ನಾಟಕ5 mins ago

Karnataka Weather: ಇಂದು ಹಾಸನ, ಕೊಡಗು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

David Warner
ಪ್ರಮುಖ ಸುದ್ದಿ35 mins ago

David Warner : ವಿಶ್ವ ಕಪ್​ನಿಂದ ಹೊರಬಿದ್ದ ಬೇಸರ; ಬಿಯರ್ ಕುಡಿತಾ ಕುಳಿತ ಆಸ್ಟ್ರೇಲಿಯಾದ ಆಟಗಾರರು

Fatty Lever Disease
ಆರೋಗ್ಯ35 mins ago

Fatty Lever Disease: ಎಚ್ಚರ ವಹಿಸಿ, ಮಕ್ಕಳನ್ನು ಸದ್ದಿಲ್ಲದೆ ಕಾಡುತ್ತಿದೆ ಫ್ಯಾಟಿ ಲಿವರ್‌ ಕಾಯಿಲೆ!

Karnataka Milk Federation
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ಹಾಲು ದರ ಏರಿಕೆ ಬಳಕೆದಾರನಿಗೆ ಹೊರೆಯಾಗದಿರಲಿ

Dina Bhavishya
ಭವಿಷ್ಯ2 hours ago

Dina Bhavishya: ಈ ರಾಶಿಯವರಿಗೆ ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದುಕೊಡಲಿದೆ

Women's Asia Cup
ಪ್ರಮುಖ ಸುದ್ದಿ7 hours ago

Women’s Asia Cup 2024 : ಮಹಿಳೆಯರ ಏಷ್ಯಾ ಕಪ್​ ಕ್ರಿಕೆಟ್​ನ ವೇಳಾಪಟ್ಟಿ ಬಿಡುಗಡೆ, ಜುಲೈ 19ಕ್ಕೆ ಭಾರತ- ಪಾಕ್ ಪಂದ್ಯ

minister mb patil visit japan and discuss about investment in Karnataka
ಕರ್ನಾಟಕ7 hours ago

Foreign Investment: 100 ಕೋಟಿ ರೂ. ವೆಚ್ಚದ ತ್ಯಾಜ್ಯ ನೀರು ನಿರ್ವಹಣಾ ಉಪಕರಣಗಳ ತಯಾರಿಕಾ ಘಟಕ ಸ್ಥಾಪನೆಗೆ ಒಪ್ಪಂದ

Arvind Kejriwal
ಪ್ರಮುಖ ಸುದ್ದಿ8 hours ago

Arvind Kejriwal : ಜಾಮೀನು ಅರ್ಜಿ ವಿಚಾರಣೆಗೂ ಮುನ್ನ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಸಿಬಿಐ

Kodagu News
ಕೊಡಗು8 hours ago

Kodagu News: ಕಳೆದುಕೊಂಡಿದ್ದ ಚಿನ್ನದ ನಾಣ್ಯ ವಾರಸುದಾರನ ಕೈ ಸೇರುವಂತೆ ಮಾಡಿದ ಪೊಲೀಸರು!

Lok Sabha Speaker
ಪ್ರಮುಖ ಸುದ್ದಿ8 hours ago

Lok Sabha Speaker : ಸ್ಪೀಕರ್​ ಚುನಾವಣೆಯಲ್ಲಿ ವೈಎಸ್​ಆರ್​ ಪಕ್ಷದಿಂದ ಬಿಜೆಪಿಗೆ ಬೆಂಬಲ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ1 day ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ4 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌