MLC Election | ರಂಗೇರಿದೆ ಪಶ್ಚಿಮ ಶಿಕ್ಷಕರ ಕ್ಷೇತ್ರ: ಹೊರಟ್ಟಿ ಮೂಲಕ ಖಾತೆ ತೆರೆಯುವುದೆ ಬಿಜೆಪಿ? - Vistara News

ಉತ್ತರ ಕನ್ನಡ

MLC Election | ರಂಗೇರಿದೆ ಪಶ್ಚಿಮ ಶಿಕ್ಷಕರ ಕ್ಷೇತ್ರ: ಹೊರಟ್ಟಿ ಮೂಲಕ ಖಾತೆ ತೆರೆಯುವುದೆ ಬಿಜೆಪಿ?

ಸತತ ಏಳು ಬಾರಿ ಪರಿಷತ್‌ಗೆ ಆಯ್ಕೆಯಾಗಿ ದಾಖಲೆ ನಿರ್ಮಿಸಿರುವ ಬಸವರಾಜ ಹೊರಟ್ಟಿ ಈ ಬಾರಿ ಪಕ್ಷಾಂತರ ಮಾಡಿ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ಹೊರಟ್ಟಿಯವರನ್ನು ಸೋಲಿಸಲು ಕಾಂಗ್ರೆಸ್‌ ಪ್ರಚಾರ ತೀವ್ರಗೊಳಿಸಿದ್ದರೆ, ಹೊರಟ್ಟಿಯವರ ಶಿಷ್ಯನನ್ನೇ ಕಣಕ್ಕಿಳಿಸುವ ಮೂಲಕ ಅವರ ಗೆಲುವಿಗೆ ಅಡ್ಡಿಯಾಗಲು ಜೆಡಿಎಸ್‌ ರಣತಂತ್ರ ಹೆಣೆದಿದೆ.

VISTARANEWS.COM


on

basavaraj horatti north west karnataka election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
MLC Election karnataka

ಪರಶುರಾಮ್ ತಹಶೀಲ್ದಾರ್, ಹುಬ್ಬಳ್ಳಿ
ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣಾ ಕಣ ರಂಗೇರಿದೆ. ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಗೆಲುವಿಗೆ ಬ್ರೇಕ್ ಹಾಕಲು ಎದುರಾಳಿಗಳು ತಂತ್ರ ರೂಪಿಸುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಯಾರೇ ಗೆದ್ದರೂ ಹೊಸ ದಾಖಲೆ ನಿರ್ಮಾಣವಾಗಲಿದೆ. ಬಿಜೆಪಿಯ ಬಸವರಾಜ ಹೊರಟ್ಟಿ, ಕಾಂಗ್ರೆಸ್‌ನ ಬಸವರಾಜ ಗುರಿಕಾರ, ಜೆಡಿಎಸ್‌ನ ಶ್ರೀಶೈಲ ಗಡದಿನ್ನಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಎಂಟನೇ ಬಾರಿ ಗೆಲುವು ಸಾಧಿಸಿ ಹೊಸ ದಾಖಲೆ ಬರೆಯುವ ಹುಮ್ಮಸ್ಸು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ. ಹೊರಟ್ಟಿ ಮೂಲಕ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಖಾತೆ ತೆರೆಯುವ ತವಕ ಬಿಜೆಪಿಗೆ. ಚುನಾವಣೆ ಘೋಷಣೆಗೂ ಆರು ತಿಂಗಳ ಮುನ್ನವೇ ಅಭ್ಯರ್ಥಿ ಘೋಷಿಸಿರುವ ಕಾಂಗ್ರೆಸ್‌ಗೆ ಎಲ್ಲ ದಾಖಲೆ ಅಳಿಸಿ ಹಾಕಬೇಕೆನ್ನುವ ಛಲ. ಶಿಷ್ಯನಿಂದಲೇ ಹೊರಟ್ಟಿಗೆ ತಿರುಗೇಟು ಕೊಡಿಸಬೇಕೆನ್ನುವ ತಂತ್ರಗಾರಿಕೆ ಜೆಡಿಎಸ್‌ನದ್ದು. ಇವು ವಿಧಾನ ಪರಿಷತ್‌ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದಲ್ಲಿ ನಡೆದಿರುವ ರಾಜಕೀಯ ಮೇಲಾಟಗಳು.

ಇದನ್ನೂ ಓದಿ | ವಿಧಾನ ಪರಿಷತ್‌ ಚುನಾವಣೆ ಪ್ರಯುಕ್ತ ಹಾವೇರಿಯಲ್ಲಿ ಜೂನ್ 17 ರವರೆಗೆ ನೀತಿ ಸಂಹಿತೆ ಜಾರಿ

ಪಶ್ಚಿಮ ಶಿಕ್ಷಕರ ಕ್ಷೇತ್ರ ಹೆಚ್ಚು ಗಮನ ಸೆಳೆದಿರುವುದು ಸೋಲಿಲ್ಲದ ಸರದಾರ ಬಸವರಾಜ ಹೊರಟ್ಟಿಯವರ‌ ಕಾರಣದಿಂದಾಗಿ. 1980ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಇವರು ಪ್ರಭಾವಿ ಅಭ್ಯರ್ಥಿಯಾಗಿದ್ದ ಎಸ್‌.ಐ. ಶೆಟ್ಟರ್ ಅವರನ್ನು ಸೋಲಿಸಿ ಗೆಲುವಿನ ಕುದುರೆಯನ್ನೇರಿದ್ದರು. ಆ ಬಳಿಕ ಹಿಂದಿರುಗಿ ನೋಡಿದ್ದೇ ಇಲ್ಲ. ಸತತ ಏಳನೇ ಬಾರಿಗೆ ಗೆಲವು ಸಾಧಿಸಿ ದಾಖಲೆ ಸೃಷ್ಟಿಸಿದ್ದಾರೆ. ಹೊರಟ್ಟಿ ಯಾವತ್ತೂ ಪಕ್ಷ ನೆಚ್ಚಿಕೊಂಡು ಗೆದ್ದವರಲ್ಲ. ಇವರು ಪ್ರತಿನಿಧಿಸುವ ಕ್ಷೇತ್ರದಲ್ಲಿ ಜೆಡಿಎಸ್‌ಗೆ ನೆಲೆಯೇ ಇರಲಿಲ್ಲ ಎನ್ನುವುದು ಗಮನಾರ್ಹ. ಶಿಕ್ಷಕರೊಂದಿಗೆ ಹೊಂದಿದ್ದ ನಿಕಟ ಸಂಪರ್ಕದಿಂದಾಗಿಯೇ ಇವರು ಗೆಲುವಿನ ದಡ ಸೇರುತ್ತಿದ್ದರು. ಪ್ರಸ್ತುತ ಚುನಾವಣೆಯ ಸಂದರ್ಭದಲ್ಲೇ ಪಕ್ಷಾಂತರ ಮಾಡಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈ ಚುನಾವಣೆಯಲ್ಲಿ ಇವರು ಗೆಲುವು ಸಾಧಿಸಿದರೆ ಎಂಟು ಬಾರಿ ಗೆದ್ದ ಹೊಸ ದಾಖಲೆ ಸೃಷ್ಟಿಯಾಗಲಿದೆ. ಇದರೊಟ್ಟಿಗೆ ಕ್ಷೇತ್ರದಲ್ಲಿ ಬಿಜೆಪಿಯೂ ಖಾತೆ ತೆರೆದಂತಾಗಲಿದೆ. ಕ್ಷೇತ್ರದಲ್ಲಿ ಹೊರಟ್ಟಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ ಶೆಟ್ಟರ್ ಕ್ಷೇತ್ರದಲ್ಲಿ ಹೊರಟ್ಟಿ ಪರ ಭರ್ಜರಿ ಪ್ರಚಾರ ಮಾಡಿದ್ದಾರೆ. ಬಿಜೆಪಿ ಹವಾ ಜೋರಾಗಿಯೇ ಬೀಸುತ್ತಿದೆ.

ಇದನ್ನು ಓದಿ: ಇಡೀ ರಾಜ್ಯದ ಜನರಿಗಾಗಿ ಸೇವೆ ಸಲ್ಲಿಸಿದ್ದೇನೆ : ಬಸವರಾಜ ಹೊರಟ್ಟಿ

ಪಕ್ಷಗಳ ಬಲಾಬಲ

ಹಿಂದಿನ ಚುನಾವಣೆಗಳಲ್ಲಿ ಗೆಲುವಿನ ಚಿತ್ರಣ ಮುಂಚೆಯೇ ಸ್ಪಷ್ಟವಾಗುತ್ತಿತ್ತು. ಆದರೆ, ಈ ಬಾರಿ ಅಷ್ಟು ಹಗುರವಾಗಿ ಪರಿಗಣಿಸುವಂತಿಲ್ಲ. ಕೊನೇ ಕ್ಷಣದಲ್ಲಿ ಅಭ್ಯರ್ಥಿ ಹೆಸರು ಘೋಷಿಸುತ್ತಿದ್ದ ಕಾಂಗ್ರೆಸ್ ಆರು ತಿಂಗಳಿಗೂ ಮುನ್ನವೇ ಬಸವರಾಜ ಗುರಿಕಾರ ಹೆಸರನ್ನು ಅಖೈರುಗೊಳಿಸಿದೆ. ಕ್ಷೇತ್ರದಲ್ಲಿ ಓಡಾಡಿಕೊಂಡು ಪ್ರಚಾರ ಮಾಡಲು ಗುರಿಕಾರ ಅವರಿಗೆ ಸಾಕಷ್ಟು ಸಮಯಾವಕಾಶ ಸಿಕ್ಕಿದೆ. ಗುರಿಕಾರ ಕೂಡ ಕಳೆದ ಮೂರು ದಶಕಗಳಿಂದ ಶಿಕ್ಷಕರ ಸಂಘಟನೆಯಲ್ಲಿ ಗುರುತಿಸಿಕೊಂಡವರು. ಹೊರಟ್ಟಿ ಅವರಿಗೆ ಸಮಬಲದ ಪೈಪೋಟಿ ನೀಡುವಷ್ಟು ಸಮರ್ಥರೂ ಆಗಿದ್ದಾರೆ. ಈ ಕಾರಣಕ್ಕಾಗಿಯೇ ಹೊರಟ್ಟಿ ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಓಡಾಡುತ್ತಿದ್ದಾರೆ. ಈ ಮಧ್ಯೆ ಗುರಿಕಾರ ಮೂರು ಸುತ್ತಿನ ಪ್ರಚಾರ ನಡೆಸಿದ್ದಾರೆ. ಈ ಬಾರಿ ಎಲ್ಲ ದಾಖಲೆ ಅಳಿಸಿ ಹಾಕುತ್ತೇವೆ ಎನ್ನುತ್ತಿದ್ದಾರೆ. ಇನ್ನೊಂದು ಕಡೆ ಬಸವರಾಜ ಹೊರಟ್ಟಿ ಪಕ್ಷ ತ್ಯಜಿಸಿದ್ದರಿಂದ ಜೆಡಿಎಸ್‌ ಅನಾಥವಾಗಿತ್ತು. ಹಾಗಂತ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸುಮ್ಮನೇ ಕುಳಿತುಕೊಳ್ಳಲಿಲ್ಲ. ಪಕ್ಷದ ಅಭ್ಯರ್ಥಿ ಗೆಲ್ಲದೇ ಹೋದರೂ ಪರವಾಗಿಲ್ಲ ಆಡಿ ಕೆಡಿಸೋಣ ಎನ್ನುವ ತಂತ್ರ ಹೆಣೆದಿದ್ದಾರೆ. ಒಂದು ಕಾಲದಲ್ಲಿ ಹೊರಟ್ಟಿ ಅವರ ಆಪ್ತ ಬಣದಲ್ಲಿದ್ದ ಹಾಗೂ ಅವರ ಗೆಲುವಿಗೆ ಶ್ರಮಿಸುತ್ತಿದ್ದ ಶ್ರೀಶೈಲ ಗಡದಿನ್ನಿ ಅವರನ್ನು ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾರೆ. ಇದರಿಂದಾಗಿ ಹೊರಟ್ಟಿಯವರ ಪಾಲಾಗುತ್ತಿದ್ದ ಒಂದಿಷ್ಟು ಮತಗಳು ಶ್ರೀಶೈಲ ಗಡದಿನ್ನಿ ಅವರಿಗೆ ಲಭಿಸಲಿವೆ. ನೆಕ್‌ ಟು ನೆಕ್ ಸ್ಪರ್ಧೆಯಾದರೆ ಇದು ನಿರ್ಣಾಯಕವಾಗಲಿದೆ ಎನ್ನುವ ಲೆಕ್ಕಾಚಾರವೂ ಇದೆ. ಬಸವರಾಜ ಹೊರಟ್ಟಿ ನಾಗಾಲೋಟಕ್ಕೆ ಬ್ರೇಕ್‌ ಹಾಕುವ ರಾಜಕೀಯ ತಂತ್ರವನ್ನು ಕುಮಾರಸ್ವಾಮಿ ರೂಪಿಸಿದ್ದಾರೆ. ಆದರೆ, ಇದು ಎಷ್ಟರಮಟ್ಟಿಗೆ ಫಲಪ್ರದವಾಗುತ್ತದೆ ಎನ್ನುವುದನ್ನು ಕಾದು ನೋಡಬೇಕು.
ಆಮ್ ಆದ್ಮಿ ಪಕ್ಷ ಕೂಡ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ. ಯಂಗ್ ಇಂಡಿಯಾ ಪರಿವಾರದ ಸಂಸ್ಥಾಪಕ ವೆಂಕನಗೌಡ ಗೋವಿಂದಗೌಡ್ರ ಆಪ್ ಅಭ್ಯರ್ಥಿಯಾಗಿ ಕಣದಲ್ಲಿದ್ದು, ಶಿಕ್ಷಕರ ಮನವೊಲಿಸಲು ಭರ್ಜರಿ ಪ್ರಚಾರ ನಡೆಸಿದ್ದಾರೆ.

ಕ್ಷೇತ್ರದ ಇತಿಹಾಸ

1958ರಿಂದ 64 ವರ್ಷಗಳ ಇತಿಹಾಸವನ್ನು ಹೊಂದಿರುವ ಶಿಕ್ಷಕರ ಕ್ಷೇತ್ರದಲ್ಲಿ ಕಾಲಕಾಲಕ್ಕೆ ಅಲ್ಪಸ್ವಲ್ಪ ಬದಲಾವಣೆಗಳು ಆಗಿವೆ. ಈವರೆಗೆ ಆರು ಜನಪ್ರತಿನಿಧಿಗಳನ್ನು ಈ ಕ್ಷೇತ್ರ ಕಂಡಿದೆ. ಅದರಲ್ಲಿ 42 ವರ್ಷ ಆಧಿಪತ್ಯ ಸಾಧಿಸಿದ್ದು ಒನ್ ಆ್ಯಂಡ್ ಓನ್ಲಿ ಬಸವರಾಜ ಹೊರಟ್ಟಿ. ಇದು ರಾಷ್ಟ್ರಮಟ್ಟದ ದಾಖಲೆಯಾಗಿ ಉಳಿದಿದೆ.
1958ರಲ್ಲಿ ಈ ಕ್ಷೇತ್ರದ ಹೆಸರು ಮೈಸೂರು ಉತ್ತರ ಶಿಕ್ಷಕರ ಕ್ಷೇತ್ರವಾಗಿತ್ತು. 1962ರಲ್ಲಿ ಮೈಸೂರು ಪಶ್ಚಿಮ ಶಿಕ್ಷಕರ ಕ್ಷೇತ್ರ ಎಂದು ನಾಮಕರಣ ಮಾಡಲಾಗಿತ್ತು. 1980ರ ಚುನಾವಣೆ ವೇಳೆಗೆ ಉತ್ತರ ಕೇಂದ್ರ ಶಿಕ್ಷಕರ ಕ್ಷೇತ್ರವಾಗಿತ್ತು. ಅಂದಿನ ಅವಿಭಜಿತ ಧಾರವಾಡ, ರಾಯಚೂರು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳು ಈ ಕ್ಷೇತ್ರದ ವ್ಯಾಪ್ತಿಗೆ ಬರುತ್ತಿದ್ದವು. ನಂತರ ಧಾರವಾಡ, ಹಾವೇರಿ, ಉತ್ತರ ಕನ್ನಡ ಹಾಗೂ ಗದಗ ಜಿಲ್ಲೆಗೆ ಸೀಮಿತಗೊಳಿಸಿ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರವೆಂದು ಮಾಡಲಾಗಿದೆ.

ಹೊರಟ್ಟಿ ದಾಖಲೆ

1958ರಿಂದ 1980ರವರೆಗೆ ಆರು ಬಾರಿ ಈ ಕ್ಷೇತ್ರದಲ್ಲಿ ಚುನಾವಣೆ ನಡೆದಿದೆ. ಆಗ ಬಿ.ಬಿ. ಮಮದಾಪುರ, ಬಿ.ಜಿ‌. ದೇಶಪಾಂಡೆ, ಕೇಶವರಾವ್‌ ತಾತ್ಯಾರಾವ್‌ ನಿಟ್ಟೂರಕರ್‌, ಜಿ.ಕೆ. ಕುಲಕರ್ಣಿ, ಎಸ್‌.ಐ. ಶೆಟ್ಟರ್‌ ಆಯ್ಕೆಯಾಗಿದ್ದರು.
1980ರಲ್ಲಿ ಬಸವರಾಜ ಹೊರಟ್ಟಿ ಪ್ರಥಮ ಬಾರಿಗೆ ಪಕ್ಷೇತರರಾಗಿ ಕಣಕ್ಕೆ ಇಳಿದಿದ್ದರು. ಆಗ ರಾಜಕೀಯದಲ್ಲಿ ತಮ್ಮದೇ ಆದ ಪ್ರಭಾವ ಬೆಳೆಸಿದ್ದ ಎಸ್‌.ಐ. ಶೆಟ್ಟರ್‌, ಕೆ.ಮಲ್ಲಪ್ಪ, ಕೋಣಂದೂರು ಲಿಂಗಪ್ಪ, ಆರ್‌.ಟಿ. ಮಜ್ಜಗಿ, ಚೆನ್ನಬಸಪ್ಪ ಅವರಂಥ ಘಟಾನುಘಟಿಗಳು ಚುನಾವಣಾ ಕಣದಲ್ಲಿ ಸ್ಪರ್ಧಿಸಿದ್ದರು. ಇವರೆಲ್ಲರ ಎದುರಿಗೆ ಪಕ್ಷೇತರರಾಗಿ ಸ್ಪರ್ಧಿಸಿದ್ದ ಬಸವರಾಜ ಹೊರಟ್ಟಿ ಅತ್ಯಂತ ಕಿರಿಯ ವಯಸ್ಸಿನ ಅಭ್ಯರ್ಥಿಯಾಗಿದ್ದರು. ತೀವ್ರ ಪೈಪೋಟಿಯ ನಡುವೆ ಅಚ್ಚರಿಯೆಂಬಂತೆ ಹೊರಟ್ಟಿಯವರು ಗೆದ್ದು ಮೊದಲ ಪ್ರಯತ್ನದಲ್ಲೇ ವಿಧಾನ ಪರಿಷತ್‌ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದರು. ಅಂದು ಗೆದ್ದ ಹೊರಟ್ಟಿ 1986, 1992, 1998, 2004, 2010, 2016ರಲ್ಲಿ ನಡೆದ ಚುನಾವಣೆಗಳಲ್ಲಿ ನಿರಂತರವಾಗಿ ಗೆಲುವು ಸಾಧಿಸಿದ್ದಾರೆ. ಸತತವಾಗಿ ಏಳು ಬಾರಿ ಪರಿಷತ್‌ಗೆ ಆಯ್ಕೆಯಾಗಿ ರಾಷ್ಟ್ರದಾಖಲೆ ನಿರ್ಮಿಸಿದ್ದಾರೆ. ಹೀಗೆ 64 ವರ್ಷಗಳ ಇತಿಹಾಸ ಹೊಂದಿರುವ ಪರಿಷತ್ ಕ್ಷೇತ್ರವನ್ನು ಬರೋಬ್ಬರಿ 42 ವರ್ಷಗಳಿಂದ ಪ್ರತಿನಿಧಿಸುತ್ತಿದ್ದಾರೆ. ಮೊದಲ ಬಾರಿಗೆ ಮಾತ್ರ ಪಕ್ಷೇತರರಾಗಿ ಸ್ಪರ್ಧಿಸಿದ್ದ ಹೊರಟ್ಟಿ ಆಮೇಲೆ ಜನತಾ ಪರಿವಾರದಿಂದಲೇ ಸ್ಪರ್ಧಿಸಿದ್ದಾರೆ. ಇದೇ ಮೊದಲ ಬಾರಿಗೆ ಬಿಜೆಪಿಯಿಂದ ಕಣಕ್ಕೆ ಇಳಿದಿದ್ದಾರೆ.

ಇದನ್ನು ಓದಿ: ಅವನ್ಯಾವನೋ ಅರುಣ್ ಶಹಾಪುರ ಅಂತಿದ್ದಾನಲ್ಲಾ ಮುಖ ತೋರ್ಸಿದ್ದಾನಾ?: ಸಿದ್ದರಾಮಯ್ಯ

ಪ್ರಥಮ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ

ಬಿಜೆಪಿ ಈ ಕ್ಷೇತ್ರದಲ್ಲಿ ಒಂದು ಬಾರಿಯೂ ಗೆದ್ದಿಲ್ಲ. ಪ್ರತಿ ಚುನಾವಣೆಯಲ್ಲೂ ಹೊರಟ್ಟಿ ಅವರಿಗೆ ತೀವ್ರ ಪೈಪೋಟಿ ನೀಡಿದ್ದಷ್ಟೆ ಬಿಜೆಪಿ ಸಾಧನೆ. ಆದರೆ ಗೆಲುವು ಮಾತ್ರ ಕಂಡಿಲ್ಲ. ಈಗ ರಾಜಕೀಯ ಚಿತ್ರಣ ಸಂಪೂರ್ಣ ಬದಲಾಗಿದ್ದು ಹೊರಟ್ಟಿ ಬಿಜೆಪಿ ಸೇರಿ ಕಣದಲ್ಲಿದ್ದಾರೆ. ಹೀಗಾಗಿ ಈ ಸಲ ಹೊರಟ್ಟಿ ಅವರ ಪರವಾಗಿ ಬಿಜೆಪಿ ನಾಯಕರು ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ಹೊರಟ್ಟಿ ಗೆದ್ದರೂ ಅವರ ವೈಯಕ್ತಿಕ ದಾಖಲೆ ಮತ್ತೊಂದು ಹಂತ ಮೇಲೇರಲಿದೆ. ಜತೆಗೆ ಬಿಜೆಪಿ ಮೊದಲ ಬಾರಿಗೆ ಗೆಲ್ಲುವ ಮೂಲಕ ಖಾತೆ ತೆರೆದಂತಾಗುತ್ತೆ. ಒಂದು ವೇಳೆ ಬೇರೆ ಯಾರಾದರೂ ಗೆದ್ದರೆ ರಾಷ್ಟ್ರ ದಾಖಲೆ ಮಾಡಿದವರನ್ನು ಸೋಲಿಸಿದ ದಾಖಲೆ ಅವರದ್ದಾಗಲಿದೆ. ಹೀಗಾಗಿ ಕ್ಷೇತ್ರ ಗಮನ ಸೆಳೆದಿದೆ.

ಕ್ಷೇತ್ರದ ಮತದಾರರ ವಿವರ

ಜಿಲ್ಲೆಮತದಾರರು
ಧಾರವಾಡ6,445
ಹಾವೇರಿ4,623
ಗದಗ3,300
ಉತ್ತರ ಕನ್ನಡ3,605
ಒಟ್ಟು17,973
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Uttara Kannada News: ಕಾರವಾರ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಸತೀಶ ಕೆ. ಸೈಲ್ ಭೇಟಿ

Uttara Kannada News: ಕಾರವಾರ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಸತೀಶ ಕೆ ಸೈಲ್, ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ದೇವಭಾಗದ ಕಡಲ ಕೊರೆತ ಸ್ಥಳ ಪರಿಶೀಲಿಸಿದರು. ಬಳಿಕ ಕದ್ರಾ ಡ್ಯಾಂ ಗೆ ತೆರಳಿದ ಶಾಸಕರು, ಡ್ಯಾಂ ತುಂಬಿದ ಹಿನ್ನಲೆ ಬಾಗೀನ ಅರ್ಪಿಸಿದ್ದು, ಈ ಹಿಂದೆ ನಡೆದ ಅವಘಡಗಳು ಮತ್ತೆ ಮರುಕಳಿಸದಂತೆ ಮಹಾಮಾಯಿ ಮತ್ತು ಕ್ಷೇತ್ರದ ದೇವತೆಗಳಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದರು.

VISTARANEWS.COM


on

MLA Satish Sail visited the flood affected areas of Karwar taluk
Koo

ಕಾರವಾರ: ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಸತೀಶ ಕೆ. ಸೈಲ್, ಸೋಮವಾರ ಭೇಟಿ ನೀಡಿ, ಪರಿಶೀಲನೆ (Uttara Kannada News) ನಡೆಸಿದರು.

ದೇವಭಾಗದ ಕಡಲ ಕೊರೆತ ಸ್ಥಳ ಪರಿಶೀಲಿಸಿ, ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ದೇವಭಾಗದಿಂದ ಮಾಜಾಳಿವರೆಗೆ ಅಂದಾಜು 8 ರಿಂದ 15 ಕೋಟಿ ವೆಚ್ವದಲ್ಲಿ ರಸ್ತೆ ನಿರ್ಮಾಣವಾಗಿದ್ದು, ತಡೆಗೋಡೆ ಕಾಮಗಾರಿ ಮಾಡದ ಕಾರಣ ಸಮುದ್ರದ ನೀರು ರಸ್ತೆ ದಾಟಿ ಮನೆಗಳಿಗೆ ನುಗ್ಗುತ್ತಿದೆ. ಈ ಭಾಗದಲ್ಲಿ ತಡೆಗೋಡೆ ನಿರ್ಮಾಣ ಮಾಡಲು ಬಿಡುಗಡೆಯಾದ 10 ಕೋಟಿ ರೂ. ಗಳನ್ನು 2022ನೇ ಸಾಲಿನಲ್ಲಿ ಸರ್ಕಾರ ಹಿಂದೆ ಪಡೆದಿದ್ದು, ಬಂದರು ಇಲಾಖೆಯಿಂದ ವರದಿ ಪಡೆದುಕೊಂಡು 10 ಕೋಟಿ ಅನುದಾನ ಬಿಡುಗಡೆ ಮಾಡಲು ಮನವಿ ಮಾಡಲಾಗುವುದು ಎಂದರು.

ಮಾಜಾಳಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಂದರು ಕಾಮಗಾರಿಯನ್ನು ಮೀನುಗಾರರಿಗೆ ಅನುಕೂಲವಾಗುವ ರೀತಿಯಲ್ಲಿ ನಿರ್ಮಿಸಬೇಕು. ಸ್ಥಳೀಯ ಮೀನುಗಾರರ ದೋಣಿ ನಿಲ್ಲಿಸಲು ಸೂಕ್ತ ರ‍್ಯಾಂಪ್ ವ್ಯವಸ್ಥೆ ಮಾಡುವಂತೆ ಹಾಗೂ ಪ್ರವಾಸೋದ್ಯಮ ಉದ್ದೇಶದಿಂದ ಗೋವಾ ಕರ್ನಾಟಕ ಗಡಿ ಭಾಗಕ್ಕೆ ಹೊಂದಿಕೊಂಡಿರುವ ತಿಳಮಾತಿ ಕಡಲತೀರವನ್ನು ಅಭಿವೃದ್ಧಿ ಪಡಿಸಲು ಈ ಹಿಂದೆ ನಬಾರ್ಡ್‌ನಲ್ಲಿ ಓಂ ಆಕಾರದಲ್ಲಿ ನೀಲನಕ್ಷೆ ಸಿದ್ದಪಡಿಸಿ ಅನುಮೋದನೆ ಪಡೆದಿದ್ದರೂ, ಕಾಮಗಾರಿ ಆರಂಭವಾಗದೇ ಹಾಗೇ ಉಳಿದುಕೊಂಡಿದ್ದು, ಈಗ ಪುನಃ ತಿಳಮಾತಿ ಸಂಪರ್ಕಿಸಲು ತೂಗು ಸೇತುವೆ ಸೇರಿದಂತೆ ಈ ಹಿಂದೆ ರೂಪಿಸಿರುವ ನೀಲನಕ್ಷೆಯಂತೆ ಕಾಮಗಾರಿ ಕೈಗೊಳ್ಳಲು ಬಂದರು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: CM Siddaramaiah: ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ವಂಚನೆ; ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಕೆರವಡಿಯ ಸೇತುವೆ ಹಾಗೂ ಗೋಕರ್ಣ ಮತ್ತು ಅಂಕೋಲಾ ಸಂಪರ್ಕಿಸುವ ಗಂಗಾವಳಿ ನದಿಗೆ ಅಡ್ಡಲಾಗಿ ಮಂಜಗುಣಿ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.

ಈ ಸಂದರ್ಭದಲ್ಲಿ ತಹಸೀಲ್ದಾರ್‌ ನಿಶ್ಚಲ್ ನರೋನಾ, ಬಂದರು ಇಲಾಖೆ ಇಇ ರಾಜಕುಮಾರ್, ಇತರರು ಇದ್ದರು.

ಇದನ್ನೂ ಓದಿ: Job Alert: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 6128 ಹುದ್ದೆ; ಪರೀಕ್ಷೆ ಸ್ವರೂಪ ಹೇಗಿರುತ್ತದೆ? ಅರ್ಜಿ ಸಲ್ಲಿಸುವುದು ಹೇಗೆ?

ನಂತರ ಕದ್ರಾ ಡ್ಯಾಂ ಗೆ ತೆರಳಿದ ಶಾಸಕರು, ಡ್ಯಾಂ ತುಂಬಿದ ಹಿನ್ನಲೆ ಬಾಗೀನ ಅರ್ಪಿಸಿದ್ದು, ಈ ಹಿಂದೆ ನಡೆದ ಅವಘಡಗಳು ಮತ್ತೆ ಮರುಕಳಿಸದಂತೆ ಮಹಾಮಾಯಿ ಮತ್ತು ಕ್ಷೇತ್ರದ ದೇವತೆಗಳಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದರು. ನಂತರ ಡ್ಯಾಮ್‌ನ 4 ಗೇಟ್‌ಗಳಿಂದ 10,600 ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದನ್ನು ವೀಕ್ಷಣೆ ಮಾಡಿದರು. ಈ ವೇಳೆ ತಹಸೀಲ್ದಾರ್‌ ನಿಶ್ಚಲ್ ನರೋನಾ, ಕೆಪಿಸಿಎಲ್ ಅಧಿಕಾರಿಗಳು, ಕದ್ರಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹನುಮವ್ವ ಹಾಗೂ ಇತರರು ಇದ್ದರು.

Continue Reading

ಉತ್ತರ ಕನ್ನಡ

Uttara Kannada News: ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ, 12 ಕಾಳಜಿ ಕೇಂದ್ರಗಳಲ್ಲಿ 437 ಜನರಿಗೆ ಆಸರೆ

Uttara Kannada News: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ ವ್ಯಾಪಕ ಮಳೆಯಾಗಿದ್ದು, ಹೊನ್ನಾವರ ತಾಲೂಕಿನಲ್ಲಿ ತೆರೆಯಲಾದ 12 ಕಾಳಜಿ ಕೇಂದ್ರಗಳಲ್ಲಿ 437 ಮಂದಿ ಆಶ್ರಯ ಪಡೆದಿದ್ದಾರೆ. ಅವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ. ಕೆ ತಿಳಿಸಿದ್ದಾರೆ.

VISTARANEWS.COM


on

Heavy rain in coastal areas of Uttara Kannada district
Koo

ಕಾರವಾರ: ಜಿಲ್ಲೆಯಲ್ಲಿ ಸೋಮವಾರ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದು, ಹೊನ್ನಾವರ ತಾಲೂಕಿನಲ್ಲಿ ತೆರೆಯಲಾದ 12 ಕಾಳಜಿ ಕೇಂದ್ರಗಳಲ್ಲಿ 437 ಮಂದಿ ಆಶ್ರಯ ಪಡೆದಿದ್ದು, ಅವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. (Uttara Kannada News) ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ವಿವಿಧ ಗ್ರಾಮಗಳ ಸಾರ್ವಜನಿಕರಿಗೆ ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಪಟ್ಟ ತಾಲೂಕುಗಳ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಲಾಗಿದೆ.

ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ ಊಟದ ವ್ಯವಸ್ಥೆ ಮತ್ತು ರಾತ್ರಿ ತಂಗಲು ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗಿದ್ದು, ವೈದ್ಯರ ತಂಡದಿಂದ ಆರೋಗ್ಯ ಪರಿಶೀಲನೆ ಮತ್ತು ಅಗತ್ಯವಿರುವ ಔಷಧ ಸೌಲಭ್ಯವನ್ನು ಒದಗಿಸಲಾಗಿದೆ.

ಇದನ್ನೂ ಓದಿ: Maldives: ವಿಶ್ವಕಪ್​ ಗೆಲುವಿನ ಸಂಭ್ರಮಾಚರಣೆಗೆ ಭಾರತ ತಂಡವನ್ನು ಆಹ್ವಾನಿಸಿದ ಮಾಲ್ಡೀವ್ಸ್‌

ಕದ್ರಾ ಜಲಾಶಯದಲ್ಲಿ ನೀರಿನ ಮಟ್ಟವು ಜಿಲ್ಲಾಡಳಿತ ನಿಗದಿಪಡಿಸಿದ ಮಟ್ಟಕ್ಕಿಂತ ಹೆಚ್ಚಾದ ಹಿನ್ನೆಲೆಯಲ್ಲಿ ಜಲಾಶಯದಿಂದ 10,600 ಕೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ.

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 2 ಮನೆಗಳಿಗೆ ತೀವ್ರ ಹಾನಿ ಹಾಗೂ 13 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹೊನ್ನಾವರ ತಾಲೂಕಿನ ಕಡತೋಕಾ ಗ್ರಾಮದ ಗುದ್ನಕಟ್ಟು ಮಜಿರೆಯಲ್ಲಿ ನೀರಿನ ಹರಿವು ಜಾಸ್ತಿ ಆಗಿದ್ದು, ಇಲ್ಲಿನ ನೇರಪೀಡಿತ ಪ್ರದೇಶದಲ್ಲಿನ 60 ಜನರನ್ನು ಎನ್‌ಡಿಆರ್‌ಎಫ್‌ ತಂಡದ ಮೂಲಕ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: Job Alert: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 6128 ಹುದ್ದೆ; ಪರೀಕ್ಷೆ ಸ್ವರೂಪ ಹೇಗಿರುತ್ತದೆ? ಅರ್ಜಿ ಸಲ್ಲಿಸುವುದು ಹೇಗೆ?

ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮಾನವ ಜೀವ ಹಾನಿಯಾಗದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಜಾನುವಾರು ಪ್ರಾಣ ಹಾನಿ ತಡೆಗೂ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಯಾವುದೇ ಸಮಸ್ಯೆಗಳಲ್ಲಿ ಜಿಲ್ಲಾಡಳಿತದ ಉಚಿತ ತುರ್ತು ಸಹಾಯವಾಣಿ ಸಂಖ್ಯೆ 1077 ಗೆ ಹಾಗೂ ಮೊ.ಸಂ. ಸಂಖ್ಯೆ 94835 11015 ಕರೆ, ಮೆಸೇಜ್, ವಾಟ್ಸಾಪ್ ಸಂದೇಶ ಮತ್ತು ವಾಟ್ಸಾಪ್ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

Continue Reading

ಮಳೆ

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Rain Effect : ರಾಜ್ಯಾದ್ಯಂತ ಮುಂಗಾರು ಅಬ್ಬರಿಸುತ್ತಿದ್ದು, ಅವಾಂತರವನ್ನೇ ಸೃಷ್ಟಿಸಿದೆ. ನಾಳೆ ಮಂಗಳವಾರವೂ (Heavy rain) ಭಾರಿ ಮಳೆಯಾಗಲಿದ್ದು, ಉಡುಪಿಯ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ (Karnataka Weather Forecast) ಮಾಡಲಾಗಿದೆ.

VISTARANEWS.COM


on

By

Rain Effect
Koo

ಮಹಾರಾಷ್ಟ್ರ/ಬೆಳಗಾವಿ: ಮಹಾರಾಷ್ಟ್ರದ‌ ಬುಲಡಾನ್ ಪ್ರದೇಶದಲ್ಲಿ ನಿರಂತರ ಮಳೆಯಿಂದ (Karnataka Rain) ಪ್ರವಾಸವೇ ಸೃಷ್ಟಿಯಾಗಿದೆ. ಉಕ್ಕಿ ಹರಿಯುವ ನೀರಲ್ಲಿ ಪಾನ್‌ ಶಾಪ್‌ ಹಾಗೂ ಕಾರು ಎರಡು ಕೊಚ್ಚಿ (Rain Effect) ಹೋಗಿವೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ ಎನ್ನಲಾಗಿದೆ.

ಮಹಾರಾಷ್ಟ್ರದಲ್ಲಿ ಮಳೆ ಅವಾಂತರ ಮುಂದುವರಿದಿದ್ದು, ಬೆಳಗಾವಿಯ ಗಡಿಯಲ್ಲಿ ಮಳೆಯಿಂದಾಗಿ ಪ್ರವಾಸಿಗರು ಪರದಾಟ ಅನುಭವಿಸಿದರು. ಚಂದಗಡ್ ತಾಲೂಕಿನ ತಿಲಾರಿ ಮತ್ತು ಪಾಟ್ನೆಪಾಟಾದಲ್ಲಿ ಹಿರಣ್ಯಕೇಶಿ ನದಿ ನೀರು ಏಕಾಏಕಿ ರಸ್ತೆಗೆ ಹರಿದು ಬಂದಿತ್ತು. ಪರಿಣಾಮ ಸೇತುವೆ ಮೇಲೆ ಮೂರು ಅಡಿಯಷ್ಟು ನೀರು ಹರಿದು ತಿಲಾರಿ ಬೆಳಗಾವಿ ಸಂಪರ್ಕಿಸುವ ರಸ್ತೆಯು ಹೊಳೆಯಂತಾಗಿ ಮಾರ್ಪಟ್ಟಿತ್ತು. ಕೆಲ ಪ್ರವಾಸಿಗರು ಎರಡ್ಮೂರು ಅಡಿ ನಿಂತ ನೀರಲ್ಲೇ ಕಾರು ಚಲಾಯಿಸಿಕೊಂಡು ಹೊರ ಬಂದರು. ನೀರಲ್ಲಿ ಬೈಕ್‌ ಚಲಾಯಿಸಲು ಆಗದೆ ಬೈಕ್‌ಗಳನ್ನು ತಳ್ಳಿಕೊಂಡು ಬಂದರು.

ಬೆಂಗಳೂರಿನಲ್ಲೂ ಅಬ್ಬರಿಸಿದ ಮಳೆ

ಜು.8ರ ಸಂಜೆ ರಾಜ್ಯದ ವಿವಿಧೆಡೆ ಮಳೆಯು ಆರ್ಭಟಿಸಿದೆ. ಬೆಂಗಳೂರಿನ ಮಲ್ಲೇಶ್ವರಂ, ಶಿವಾನಂದ, ಮೆಜೆಸ್ಟಿಕ್ ಹಾಗೂ ವಿಧಾನಸೌಧ, ಶಿವಾಜಿನಗರ ಸೇರಿದಂತೆ ಬೆಂಗಳೂರಿನ ಹಲವೆಡೆ ಭಾರಿ ಮಳೆಯಾಗಿದೆ. ಇತ್ತ ವಿಜಯನಗರ ಜಿಲ್ಲೆಯಲ್ಲಿ ದಿಢೀರ್ ಮಳೆಯಿಂದಾಗಿ ಜನ-ಜೀವನ ಅಸ್ತವ್ಯಸ್ತವಾಗಿತ್ತು. ವಿಜಯನಗರದ ಹೊಸಪೇಟೆಯಲ್ಲಿ ಬಿರುಗಾಳಿ ಸಹಿತ ಭಾರಿ ಪ್ರಮಾಣದಲ್ಲಿ ಮಳೆಯಾಗಿತ್ತು. ದಿಢೀರ್ ಸುರಿದ ಭಾರೀ ಮಳೆಗೆ ರಸ್ತೆ ಇಕ್ಕೆಲಗಳಲ್ಲೆಲ್ಲ ನೀರು ತುಂಬಿ ಹರಿದಿತ್ತು. ಏಕಾಏಕಿ ಸುರಿದ ಮಳೆಗೆ ರಸ್ತೆ, ಚರಂಡಿಗಳು ತುಂಬಿ ಹರಿದಿತ್ತು.

ನಿರಂತರ ಮಳೆಗೆ ಉರುಳಿ ಬಿದ್ದ ಮರ; ಕಾರು ಜಖಂ

ನಿರಂತರ ಮಳೆಯಿಂದ ಬೃಹತ್‌ ಮರವೊಂದು ಬುಡಸಮೇತ ಉರುಳಿ ಕಾರಿನ ಮೇಲೆ ಬಿದ್ದಿದೆ. ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯ ಮುಂಭಾಗದಲ್ಲಿ ಘಟನೆ ನಡೆದಿದೆ. ದಿಲೀಪ ಪವಾರ್ ಎಂಬುವವರಿಗೆ ಸೇರಿದ ಕಾರು ಸಂಪೂರ್ಣ ಜಖಂಗೊಂಡಿದೆ. ಆಸ್ಪತ್ರೆಯಲ್ಲಿದ್ದ ರೋಗಿಯ ಭೇಟಿಗೆ ಬಂದಿದ್ದ ದಿಲೀಪ್ ಪವಾರ್, ಆಸ್ಪತ್ರೆಯ ಮುಂದೆ‌ ಕಾರು ಪಾರ್ಕ್ ಮಾಡಿದ್ದರು. ಈ ವೇಳೆ ಮರ ಬಿದ್ದಿದೆ, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

ದಾವಣಗೆರೆಯಲ್ಲಿ ಕೆಸರು ಗದ್ದೆಯಾದ ಶಾಲಾ ಆವರಣ

ಸತತ ಮಳೆಯಿಂದ ಶಾಲಾ ಆವರಣವು ಕೆಸರು ಗದ್ದೆಯಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದ ನೀಲಕಂಠ ನಗರದಲ್ಲಿ ಘಟನೆ ನಡೆದಿದೆ. ಒಂದನೇ ತರಗತಿ ರಿಂದ ಏಳನೇ ತರಗತಿ ವರೆಗೆ ಶಾಲೆಗೆ ಹೋಗುವ ಮಕ್ಕಳು ಪರದಾಟ ಅನುಭವಿಸುತ್ತಿದ್ದಾರೆ.

ಶಾಲಾ ಆವರಣದಲ್ಲಿ ಮಳೆ ನೀರು ಹೊರ ಹೋಗದೆ ನಿಂತಲ್ಲೇ ನಿಲ್ಲುವಂತಾಗಿದೆ. ಇದರಿಂದಾಗಿ ಮಕ್ಕಳು ಶಾಲೆ ಒಳಗೆ ಹೋಗಲು ಪರದಾಟ ಅನುಭವಿಸುವಂತಾಗಿದೆ. ಮಳೆ ಬಂದರೆ ಸಾಕು ಮಕ್ಕಳು ಶಾಲೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಆವರಣವೆಲ್ಲವೂ ಕೆಸರು ಗದ್ದೆಯಾಗಿದೆ.

ಕೊಡಗಿನ ನದಿ ತಟ್ಟದ ನಿವಾಸಿಗಳಿಗೆ ಎಚ್ಚರಿಕೆ

ಹಾರಂಗಿ ಜಲಾನಯ ಪ್ರದೇಶದಲ್ಲಿ ಮಳೆ ಮುಂದುವರಿದ್ದು, ಒಳಹರಿವು ಪ್ರಮಾಣ ಹೆಚ್ಚಳಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ನದಿಗೆ ನೀರು ಹರಿಸಲು ಸಿದ್ಧತೆ ನಡೆದಿದ್ದು, ನದಿ ತಟ್ಟದ ನಿವಾಸಿಗಳು ಎಚ್ಚರದಿಂದ ಇರುವಂತೆ ಸೂಚನೆ‌ ನೀಡಲಾಗಿದೆ. 1000 ಕ್ಯೂಸೆಕ್ಸ್ ನೀರು ನದಿಗೆ ಹರಿಸಲು ಚಿಂತನೆ ನಡೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕಾವೇರಿ ನೀರಾವರಿ ನಿಗಮ ಆದೇಶ ಹೊರಡಿಸಿದೆ.

ಜು.9ರಂದು ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ ಆಗುತ್ತಿದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಎಲ್ಲಾ ತಾಲೂಕಿನ ಶಾಲಾ-ಕಾಲೇಜಿಗೆ ಜು.9 ರಂದು ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ, ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain : ರಾಜ್ಯದಲ್ಲಿ ಮಳೆ ಅವಾಂತರ ಮುಂದುವರಿದ್ದು, ಹಾಸನದಲ್ಲಿ ಕಾರೊಂದರ ಮೇಲೆ ಬೃಹತ್‌ ಗಾತ್ರ ಮರ ಬಿದ್ದು ಜಖಂಗೊಂಡರೆ, ಪಾವಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ತಡೆಗೋಡೆ ಕುಸಿದು ಬಿದ್ದಿದೆ. ಚಿಕ್ಕೋಡಿಯಲ್ಲಿ ಬಾಬಾ ದರ್ಗಾ ಜಲಾವೃತಗೊಂಡಿದೆ.

VISTARANEWS.COM


on

By

Karnataka Rain Effect
Koo

ಹಾಸನ: ಭಾರಿ ಮಳೆ-ಗಾಳಿಗೆ (Karnataka Rain Effect) ಬೃಹತ್ ಗಾತ್ರದ ಮರವೊಂದು (Tree fall) ಧರೆಗುರುಳಿದೆ. ಬಿದ್ದ ರಭಸಕ್ಕೆ ಮನೆಯ ಮುಂದೆ ನಿಲ್ಲಿಸಿದ್ದ ಕಾರು ಸಂಪೂರ್ಣ ಜಖಂಗೊಂಡಿದೆ. ಹಾಸನದ ಕುವೆಂಪುನಗರದಲ್ಲಿ ಘಟನೆ ನಡೆದಿದೆ. ರಾಕೇಶ್ ಎಂಬುವವರು ತಮ್ಮ ಕಾರನ್ನು ಮರದ ಕೆಳಗೆ ನಿಲ್ಲಿಸಿದ್ದರು.

karnataka rain effect

ನೋಡನೋಡುತ್ತಿದ್ದಂತೆ ಮರವು ಕಾರಿನ ಮೇಲೆ ಬಿದ್ದು ಪೂರ್ತಿ ಜಖಂಗೊಂಡಿದೆ. ಅದೃಷ್ಟವಶಾತ್‌ ಕಾರಿನೊಳಗೆ ಯಾರು ಇಲ್ಲದೆ ಇರುವುದರಿಂದ ಅನಾಹುತವೊಂದು ತಪ್ಪಿದೆ. ಸ್ಥಳಕ್ಕೆ ನಗರಸಭೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ರಸ್ತೆಗೆ ಅಡ್ಡಲಾಗಿ, ಕಾರಿನ ಮೇಲೆ ಬಿದ್ದಿದ್ದ ಮರವನ್ನು ತೆರವುಗೊಳಿಸಿದರು. ಇತ್ತ ಕೊಪ್ಪಳದಲ್ಲಿ ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆರಾಯ, ಸೋಮವಾರ ಮಧ್ಯಾಹ್ನದ ಸುಮಾರು ಅರ್ಧಗಂಟೆಗೂ ಹೆಚ್ಚು ಸಮಯ ಅಬ್ಬರಿಸಿದ್ದ.

ದೇವಸ್ಥಾನ ತಡೆಗೋಡೆ ಕುಸಿತ

ಮಂಗಳೂರಿನಲ್ಲಿ ಭಾರೀ ಮಳೆಗೆ ಮತ್ತೊಂದು ಅವಘಡ ಸಂಭವಿಸಿದೆ. ನಿರಂತರ ಮಳೆಗೆ ಪ್ರಸಿದ್ಧ ಧಾರ್ಮಿಕ ಕ್ಷೇತ್ರದ ತಡೆಗೋಡೆ ಕುಸಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಾವಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ತಡೆಗೋಡೆ ಬಿದ್ದಿದೆ.

ಭಾರೀ ಗಾಳಿ ಮತ್ತು ಮಳೆಗೆ ತೆಂಗಿನ ಗಿಡದ ಬುಡದ ಮಣ್ಣು ಸಡಿಲಗೊಂಡಿದೆ. ಪರಿಣಾಮ ಕೆಂಪು ಕಲ್ಲಿನ ಐದಾರು ಅಡಿ ಎತ್ತರದ ತಡೆಗೋಡೆ ಕುಸಿದಿದೆ. ಪರಿಣಾಮ ವಿದ್ಯುತ್ ಕಂಬ, ಬಾವಿ ಹಾಗೂ ದೇವಸ್ಥಾನದ ಪಾರ್ಕಿಂಗ್ ಜಾಗಕ್ಕೆ ಹಾನಿಯಾಗಿದೆ. ಯಾವುದೇ ವಾಹನ ಪಾರ್ಕ್ ಮಾಡದ ಹಿನ್ನೆಲೆಯಲ್ಲಿ ಅನಾಹುತ ತಪ್ಪಿದೆ. ಸದ್ಯ ಮಣ್ಣು ತೆಗೆದು ಪ್ಲಾಸ್ಟಿಕ್ ಟರ್ಪಾಲ್ ಹಾಕಿ ಮುನ್ನೆಚ್ಚರಿಕೆ ವಹಿಸಲಾಗಿದೆ.

ಚಿಕ್ಕೋಡಿಯಲ್ಲಿ ಬಾಬಾ ದರ್ಗಾಕ್ಕೆ ನುಗ್ಗಿದ ನೀರು

ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಪ್ರವಾಹ ಭೀತಿ ಶುರುವಾಗಿದೆ. ದೂದಗಂಗಾ ನದಿಯು ಉಕ್ಕಿ ಹರಿದಿದ್ದು, ಯಕ್ಸಂಬಾ ಬಳಿಯ ಮುಲ್ಕಾನಿ ಬಾಬಾ ದರ್ಗಾಕ್ಕೆ ನೀರು ನುಗ್ಗಿ ಜಲಾವೃತಗೊಂಡಿದೆ. ನದಿಯಲ್ಲಿ ಇನ್ನೂ ಆರು ಅಡಿ ನೀರು ಬಂದರೆ ಹಲವು ಗ್ರಾಮಕ್ಕೆ ನೀರು ನುಗ್ಗುವ ಭೀತಿ ಇದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

ಹಾಸನದಲ್ಲೂ ಅಬ್ಬರಿಸುತ್ತಿರುವ ಮಳೆ

ಹಾಸನ ಜಿಲ್ಲೆಯ ವಿವಿಧೆಡೆ ಸೋಮವಾರ ಭಾರಿ ಮಳೆಯಾಗಿದೆ. ಮಲೆನಾಡು ಭಾಗವಾದ ಸಕಲೇಶಪುರ, ಆಲೂರು, ಬೇಲೂರಿನಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ವಾಹನ ಸವಾರರು, ವಿದ್ಯಾರ್ಥಿಗಳು ಪರದಾಡಿದರು. ಇನ್ನೂ ಚಿಕ್ಕಮಗಳೂರು ಭಾಗದಲ್ಲೂ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನದ ಗೊರೂರಿನಲ್ಲಿರುವ ಜೀವನದಿ ಹೇಮಾವತಿ ನದಿಗೆ ಒಳಹರಿವಿನಲ್ಲಿ ಹೆಚ್ಚಳವಾಗಿದೆ.

ಕಾರವಾರದ‌ ಕದ್ರಾ ಜಲಾಶಯದಿಂದ ನೀರು ಬಿಡುಗಡೆ

ಉತ್ತರ ಕನ್ನಡದ ಕಾರವಾರದ‌ ಕದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ವಿದ್ಯುತ್ ಉತ್ಪಾದನೆ ಹಾಗೂ ಕ್ರಸ್ಟ್ ಗೇಟ್ ಸೇರಿ 31,000 ಕ್ಯೂಸೆಕ್ಸ್‌ಗೂ ಅಧಿಕ ನೀರು ಬಿಡುಗಡೆ ಮಾಡಲಾಗಿದೆ. 34.50 ಮೀ ಗರಿಷ್ಠ ಸಾಮರ್ಥ್ಯದ ಕದ್ರಾ ಜಲಾಶಯದಿಂದ 4 ಗೇಟ್‌ಗಳಿಂದ 10,600 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ.

karnataka rain Kadhra dam

ಸದ್ಯ ಜಲಾಶಯದಲ್ಲಿ 31 ಮೀ ನೀರಿನ ಸಂಗ್ರಹ ತಲುಪಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತವು ಜಲಾಶಯದಲ್ಲಿ 30 ಮೀ ನೀರು ಸಂಗ್ರಹಕ್ಕೆ ನಿಗಧಿಪಡಿಸಿದೆ. ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಿಂದ ಜಲಾಶಯದ ಒಳಹರಿವು ಹೆಚ್ಚಿದ್ದು,22,000 ಕ್ಯೂಸೆಕ್ಸ್ ನೀರು ಜಲಾಶಯಕ್ಕೆ ಹರಿದುಬರುತ್ತಿದೆ. ಜಲಾಶಯದಿಂದ ವಿದ್ಯುತ್ ಉತ್ಪಾದಿಸಿ 21,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ನದಿ ಪಾತ್ರದ ನಿವಾಸಿಗಳನ್ನು ಸ್ಥಳಾಂತರಗೊಳಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
PM Modi Russia Visit
ವಿದೇಶ4 hours ago

PM Modi Russia Visit: ದೇಶ, ಜನರಿಗಾಗಿ ನಿಮ್ಮ ಜೀವನವೇ ಮುಡಿಪು ಎಂದು ಮೋದಿಯನ್ನು ಹೊಗಳಿದ ಪುಟಿನ್

LKG UKG
ಪ್ರಮುಖ ಸುದ್ದಿ5 hours ago

LKG, UKG: ಎಲ್‌ಕೆಜಿ, ಯುಕೆಜಿ, 1ನೇ ತರಗತಿ ಪ್ರವೇಶಾತಿಗೆ ಗರಿಷ್ಠ ವಯೋಮಿತಿ ನಿಗದಿ; ಇಲ್ಲಿದೆ ಹೊಸ ಅಪ್‌ಡೇಟ್

IND vs SL
ಕ್ರೀಡೆ5 hours ago

IND vs SL: ಶ್ರೀಲಂಕಾ ವಿರುದ್ಧದ ಸರಣಿಗೆ ರೋಹಿತ್​-ಕೊಹ್ಲಿಗೆ ವಿಶ್ರಾಂತಿ

Ramniwas Rawat
ದೇಶ6 hours ago

Ramniwas Rawat: 15 ನಿಮಿಷದಲ್ಲಿ 2 ಬಾರಿ ಸಚಿವನಾಗಿ ಬಿಜೆಪಿ ಶಾಸಕ ಪ್ರಮಾಣವಚನ; ಎಲ್ಲಾಯ್ತು ಎಡವಟ್ಟು?

Paris Olympics 2024
ಕ್ರೀಡೆ6 hours ago

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್‌ಗೆ ಸಿಂಧು, ಶರತ್ ಕಮಲ್ ಭಾರತದ ಧ್ವಜಧಾರಿ

MLA Satish Sail visited the flood affected areas of Karwar taluk
ಉತ್ತರ ಕನ್ನಡ6 hours ago

Uttara Kannada News: ಕಾರವಾರ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಸತೀಶ ಕೆ. ಸೈಲ್ ಭೇಟಿ

Union Budget 2024
ದೇಶ7 hours ago

Union Budget 2024: ಕೇಂದ್ರ ಬಜೆಟ್;‌ 8ನೇ ವೇತನ ಆಯೋಗ ಸೇರಿ 7 ಬೇಡಿಕೆ ಇಟ್ಟ ಸರ್ಕಾರಿ ನೌಕರರು!

Dengue Cases
ಕರ್ನಾಟಕ7 hours ago

Dengue Cases: ರಾಜ್ಯದಲ್ಲಿ ಸೋಮವಾರ 197 ಡೆಂಗ್ಯೂ ಕೇಸ್‌ಗಳು ಪತ್ತೆ, ಒಬ್ಬರ ಸಾವು

ಕ್ರೀಡೆ7 hours ago

Kuldeep Yadav: ಕುಲ್​ದೀಪ್ ಯಾದವ್​ರನ್ನು​ ಅಭಿನಂದಿಸಿದ ಯೋಗಿ ಆದಿತ್ಯನಾಥ್

Channappa Gowda Mosambi elected as new District President of Akhila bharata Veerashaiva Mahasabha
ಯಾದಗಿರಿ7 hours ago

Yadgiri News: ಅಖಿಲ ಭಾರತ ವೀರಶೈವ ಮಹಾಸಭಾ ನೂತನ ಜಿಲ್ಲಾಧ್ಯಕ್ಷರಾಗಿ ಚನ್ನಪ್ಪಗೌಡ ಮೋಸಂಬಿ ಅವಿರೋಧ ಆಯ್ಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect
ಮಳೆ11 hours ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ13 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ15 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ15 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು17 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ1 day ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ1 day ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ2 days ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಟ್ರೆಂಡಿಂಗ್‌