ಸರ್ಕಾರಕ್ಕೆ ಮತ್ತೊಂದು ಪತ್ರ ಕಂಟಕ: ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ 75 ಗಣ್ಯರ ಮನವಿ - Vistara News

ಕರ್ನಾಟಕ

ಸರ್ಕಾರಕ್ಕೆ ಮತ್ತೊಂದು ಪತ್ರ ಕಂಟಕ: ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ 75 ಗಣ್ಯರ ಮನವಿ

ಸಿಎಂ ಬಸವರಾಜ ಬೊಮ್ಮಾಯಿ ನವದೆಹಲಿಗೆ ತೆರಳಿ ವಾಪಸಾಗುವ ಮುನ್ನವೇ ಮತ್ತೊಂದು ಸುತ್ತಿನ ಸೈದ್ಧಾಂತಿಕ ಜಟಾಪಟಿಗೆ ವೇದಿಕೆ ಸಿದ್ಧವಾಗಿದೆ. ರಾಜ್ಯದಲ್ಲಿ ಕೋಮು ಸಾಮರಸ್ಯ ಕುರಿತು ಪತ್ರ ಬರೆಯಲಾಗಿದೆ.

VISTARANEWS.COM


on

cm basavaraj bommai on gst
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಠ್ಯಪುಸ್ತಕ ವಿವಾದದಿಂದ ಹೊರಬರಲು ಸರ್ಕಾರ ಒದ್ದಾಡುತ್ತಿರುವಾಗಲೇ ರಾಜ್ಯ ಸರ್ಕಾರದ ಮೇಲೆ ಮತ್ತೊಮ್ಮೆ ಸಾಹಿತಿಗಳು ಒತ್ತಡ ತಂತ್ರ ಮುಂದುವರಿಸಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆಗೆ ರಚಿಸಲಾಗಿದ್ದ ಲೇಖಕ ರೋಹಿತ್‌ ಚಕ್ರತೀರ್ಥ ಸಮಿತಿಯನ್ನು ವಜಾ ಮಾಡುವಂತೆ ಈ ಹಿಂದೆ 83 ಸಾಹಿತಿಗಳ ಪತ್ರ ಬರೆದಂತೆಯೇ ಇದೀಗ ಎಡಪಂಥೀಯ ಚಿಂತಕರು, ನಿವೃತ್ತ ಅಧಿಕಾರಿಗಳನ್ನೊಳಗೊಂಡ 75 ಗಣ್ಯರು, ರಾಜ್ಯದಲ್ಲಿ ಕೋಮು ಸಾಮರಸ್ಯ ಕಾಪಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಶುಕ್ರವಾರ ಬರೆದಿರುವ ಈ ಮೂರು ಪುಟಗಳ ಪತ್ರಕ್ಕೆ ನಿವೃತ್ತ ಐಎಎಸ್‌ ಅಧಿಕಾರಿ ಎನ್‌.ಟಿ. ಅಬ್ರೂ, ಡಾ. ಎಚ್‌.ಎಸ್‌. ಅನುಪಮಾ, ಲೇಖಕ ನಾಗೇಶ್‌ ಹೆಗಡೆ, ಲೇಖಕಿ ಸಬೀಹಾ ಭೂಮಿಗೌಡ, ಕರ್ನಾಟಕ ಲೇಖಕಿಯ ಸಂಘದ ಡಾ. ವಸುಂಧರಾ ಭೂಪತಿ, ನಿವೃತ್ತ ಐಪಿಎಸ್‌ ಅಧಿಕಾರಿ ಫ್ರಾನ್ಸಿಸ್‌ ಟಿ.ಆರ್‌. ಕೊಲಾಸೊ, ಲೇಖಕಿ ಶಶಿ ದೇಶಪಾಂಡೆ, ಡಾ. ರಾಂಚಂದ್ರ ಗುಹಾ, ಬೆಂಗಳೂರು ವಿವಿ ನಿವೃತ್ತ ಕುಲಪತಿ ಡಾ. ಎಸ್‌. ಜಾಫೆಟ್‌, ಚಿತ್ರನಿರ್ದೇಶಕ ಗಿರೀಶ್‌ ಕಾಸರವಳ್ಳಿ, ಲೇಖಕ ಲಕ್ಷ್ಮೀಪತಿ ಕೋಲಾರ, ನಿವೃತ್ತ ಅಧಿಕಾರಿ ವಿಶುಕುಮಾರ್‌, ಪತ್ರಕರ್ತ ಜಿ.ಎನ್‌. ಮೋಹನ್‌, ಲೇಖಕಿ ಪ್ರತಿಭಾ ನಂದಕುಮಾರ್‌, ಗಾಯಕಿ ಎಂ.ಡಿ. ಪಲ್ಲವಿ, ಪತ್ರಕರ್ತೆ ಆರ್‌. ಪೂರ್ಣಿಮಾ, ಪರಿಸರವಾದಿ ಡಾ. ಯಲ್ಲಪ್ಪ ರೆಡ್ಡಿ, ಲೇಖಕ ವಿವೇಕ್‌ ಶಾನಭಾಗ್‌, ನಿವೃತ್ತ ಐಎಎಸ್‌ ಅಧಿಕಾರಿ ಚಿರಂಜೀವಿ ಸಿಂಗ್‌, ನಿವೃತ್ತ ಐಪಿಎಸ್‌ ಅಧಿಕಾರಿ ಅಜಯ್‌ಕುಮಾರ್‌ ಸಿಂಗ್‌, ನಿರ್ದೇಶಕ ಬಿ. ಸುರೇಶ, ಲೇಖಕಿ ವೈದೇಹಿ, ಕಲಾವಿದ ಎಸ್‌.ಜಿ. ವಾಸುದೇವ್‌, ಅಂಕಣಕಾರ ಎಸ್‌.ಆರ್‌. ವಿಜಯಶಂಕರ್‌ ಸೇರಿ 75 ಜನರ ಸಮ್ಮತಿ ಇದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಕೋಮು ಸಾಮರಸ್ಯ ಮರುಸ್ಥಾಪಿಸಿ

ನಾವು ಕರ್ನಾಟಕದಲ್ಲಿ ನೆಲೆಸಿರುವ ವಿವಿಧ ಕ್ಷೇತ್ರ ಮತ್ತು ವೃತ್ತಿಗಳಿಗೆ ಸೇರಿದ ಸಾರ್ವಜನಿಕ ಕಳಕಳಿಯುಳ್ಳ ನಾಗರೀಕರಾಗಿದ್ದೇವೆ. ಶಾಂತಿ, ಸಹಬಾಳ್ವೆ, ವೈವಿದ್ಯತೆ, ಬಹುತ್ವಕ್ಕೆ ಹೆಸರಾಗಿದ್ದ ಈ ನಾಡಿನಲ್ಲಿ ಇವುಗಳನ್ನೆಲ್ಲ ನಾಶಗೊಳಿಸುವಂತಹ ಇತ್ತೀಚಿನ ಬೆಳವಣಿಗೆಗಳನ್ನು ನೋಡಿ ಲಕ್ಷಾಂತರ ನಾಗರಿಕರಂತೆ ನಾವೂ ತೀವ್ರವಾಗಿ ವ್ಯಾಕುಲಗೊಂಡಿದ್ದೇವೆ. ಇಂಥ ತಪ್ಪು ನಡೆಗಳನ್ನು ಸರಿಪಡಿಸಲು ಈಗಲೂ ಅವಕಾಶವಿದ್ದು ಅದಕ್ಕೆ ಅಗತ್ಯವಾದ ಸಲಹೆಗಳನ್ನು ಸರ್ಕಾರಕ್ಕೆ ನೀಡುವುದು ನಾಗರಿಕರಾದ ನಮ್ಮ ಕರ್ತವ್ಯವೆಂದು ಭಾವಿಸಿ ಈ ಪತ್ರವನ್ನು
ತಮಗೆ ಸಲ್ಲಿಸುತ್ತಿದ್ದೇವೆ ಎಂದು ಪತ್ರವನ್ನು ಆರಂಭಿಸಲಾಗಿದೆ.

ರಾಜ್ಯದ ಇತಿಹಾಸದ ಕುರಿತು ಪ್ರಸ್ತಾಪಿಸಿರುವ ಲೇಖಕರು, ಕೋಮು ಸೌಹಾರ್ದತೆಯ ವಿಷಯದಲ್ಲಿ ನಮ್ಮ ರಾಜ್ಯಕ್ಕೆ ಭವ್ಯ ಪರಂಪರೆಯಿದೆ. 1956 ರಲ್ಲಿ ಕರ್ನಾಟಕ ಏಕೀಕರಣವಾಯಿತು. ಆದರೆ ಕರ್ನಾಟಕದ ಮತೀಯ ಸೌಹಾರ್ದತೆಯ ಇತಿಹಾಸ ಇದಕ್ಕಿಂತಲೂ ಹಳೆಯದು. ಹನ್ನೆರಡನೆಯ ಶತಮಾನದಲ್ಲಿಯೇ ಕವಿ-ದಾರ್ಶನಿಕ
ಬಸವಣ್ಣನವರ ಪ್ರಯತ್ನಗಳಿಂದಾಗಿ ಸಾಮಾಜಿಕ ಹಾಗೂ ಧಾರ್ಮಿಕ ಸುಧಾರಣೆಯಲ್ಲಿ ನಮ್ಮ ಕನ್ನಡ ನಾಡು ಸೌಹಾರ್ದತೆಯ ಇತಿಹಾಸವನ್ನೇ ನಿರ್ಮಿಸಿದೆ. ಸಮ್ಮಿಶ್ರ ಸಂಪ್ರದಾಯಗಳಿಗೆ, ಹಿಂದು ಮುಸ್ಲಿಂರನ್ನು ಒಳಗೊಂಡಂತೆ ಜನಸಮುದಾಯಗಳ ನಡುವೆ ಶಾಂತಿಯುತ ಸಹಬಾಳ್ವೆಗೆ ನಮ್ಮ ನಾಡಿನ ಇತಿಹಾಸ ಸಾಕ್ಷಿಯಾಗಿದೆ. ಈ ಭವ್ಯ ಪರಂಪರೆಯ ಹಿನ್ನೆಲೆಯಲ್ಲೇ ನಮ್ಮ ರಾಷ್ಟ್ರಕವಿ ಕುವೆಂಪುರವರು ನೂರು ವರ್ಷಗಳಷ್ಟು ಹಿಂದೆಯೇ ಈ ನಾಡನ್ನು “ಸರ್ವ ಜನಾಂಗದ ಶಾಂತಿಯ ತೋಟ” ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ | ರೋಹಿತ್‌ ಚಕ್ರತೀರ್ಥ ಆಯ್ಕೆಗೆ ಮಾನದಂಡ ಏನು?: ಸರ್ಕಾರಕ್ಕೆ 83 ಸಾಹಿತಿಗಳ ಪತ್ರ

ಕರ್ನಾಟಕದ ಈ ಮುಕ್ತ ಮನಸ್ಸಿನ ಹಲನಡಾವಳಿಯ, ಸಂಸ್ಕೃತಿಯೇ ಈ ಕಾಲಘಟ್ಟದಲ್ಲಿ ಸೃಜನಶೀಲ ಮತ್ತು ಹೊಸತನ್ನರಸುವ ವ್ಯಕ್ತಿಗಳನ್ನು ರಾಷ್ಟ್ರದ ಎಲ್ಲೆಡೆಯಿಂದ ಸೂಜಿಗಲ್ಲಿನಂತೆ ಆಕರ್ಷಿಸಿದೆ. ಭಾರತದ ವಿವಿಧ ಪ್ರಾಂತ್ಯಗಳಿಗೆ ಸೇರಿದ ವಿಭಿನ್ನ ಜನಸಮುದಾಯಗಳ ಜನರು ಕರ್ನಾಟಕಕ್ಕೆ ಅಪಾರ ಸಂಖ್ಯೆಯಲ್ಲಿ ವಲಸೆ ಬಂದು ಇಲ್ಲಿ ನೆಲೆಸಿ ನಮ್ಮ ರಾಜ್ಯದ ಸಮೃದ್ಧ ವೈವಿಧ್ಯಮಯ ಸಂಸ್ಕೃತಿಯನ್ನು ಮೆಚ್ಚಿ ತಮ್ಮ ಬದುಕಿನಲ್ಲೂ ಅವುಗಳನ್ನು ಅಳವಡಿಸಿಕೊಂಡಿದ್ದಾರೆ. ತನ್ಮೂಲಕ ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ಅರೋಗ್ಯ ರಕ್ಷಣೆ, ಉದ್ಯಮಶೀಲತೆ, ಸಾಹಿತ್ಯ, ಕಲೆ, ಸಾಮಾಜಿಕ, ಸಾಂಸ್ಕೃತಿಕ ಮತ್ತಿತರ ಕ್ಷೇತ್ರಗಳಲ್ಲಿ ಕರ್ನಾಟಕವನ್ನು ಚೈತನ್ಯಶೀಲ ರಾಜ್ಯವನ್ನಾಗಿ ರೂಪಿಸಿದ್ದಾರೆ.

ಇಂಥ ಉಜ್ವಲ ಹಿನ್ನೆಲೆಯ ನಾಡಿನಲ್ಲಿ ಇತ್ತೀಚಿಗೆ ಮುಸ್ಲಿಂ, ಕ್ರೈಸ್ತ ಮತ್ತು ದಲಿತ ಸಮುದಾಯಗಳ ಮೇಲೆ ನಾನಾ ರೀತಿಯಲ್ಲಿ ಹಲ್ಲೆಗಳು ನಡೆಯುತ್ತಿವೆ. ಸರ್ವರನ್ನೂ ಒಳಗೊಳ್ಳುವ, ಒಪ್ಪಿ ಅಪ್ಪಿಕೊಳ್ಳುವ ಗುಣಲಕ್ಷಣದ ಕರ್ನಾಟಕ ರಾಜ್ಯದ ಬಗ್ಗೆ ಹೆಮ್ಮೆ, ಅಭಿಮಾನ ಹೊಂದಿರುವ ಜನರಲ್ಲಿ ಈ ಘಟನೆಗಳು ಆಘಾತ ಮೂಡಿಸಿವೆ.

ಸಂಕುಚಿತ ಮತೀಯವಾದಿಗಳು ಹಾಗೂ ದ್ವೇಷಪೂರಿತ ಕೆಲ ವ್ಯಕ್ತಿಗಳು ಮತ್ತು ಗುಂಪುಗಳು ಧರ್ಮ ಮತ್ತು ಜಾತಿಯ ಆಧಾರದಲ್ಲಿ ಅಲ್ಪಸಂಖ್ಯಾತರನ್ನು ಪ್ರತ್ಯೇಕಿಸಿ ದೂರವಿಡುವ ಹಾಗೂ ಅವರನ್ನು ದಮನಗೊಳಿಸುವ ಕೃತ್ಯಗಳಲ್ಲಿ ತೊಡಗಿರುವುದು ಆತಂಕದ ವಿಷಯವಾಗಿದೆ.

ಭಾರತ ಸಂವಿಧಾನದ ಮೌಲ್ಯ ಮತ್ತು ಆಶಯಗಳನ್ನು ಅಕ್ಷರಶಃ ಎತ್ತಿ ಹಿಡಿಯುತ್ತೇವೆಂದು ಪ್ರಮಾಣವಚನ ಸ್ವೀಕರಿಸಿರುವ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಜವಾಬ್ದಾರಿ ಹುದ್ದೆಗಳಲ್ಲಿರುವ ಹಲವರು ಈ ವಚನವನ್ನು ಬಹಿರಂಗವಾಗಿ ಉಲ್ಲಂಘಿಸಿ ಅಲ್ಪಸಂಖ್ಯಾತ ಸಮುದಾಯದವರನ್ನು ಭೀತರನ್ನಾಗಿಸುವುದು ಇದಕ್ಕಿಂತಲೂ ಕಳವಳದ ಹಾಗೂ ಹತಾಶೆಯ ಸಂಗತಿಯಾಗಿದೆ. ಇದಲ್ಲದೆ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ಈ ಕೇಡುಕೃತ್ಯಗಳನ್ನು ಸಮರ್ಥಿಸಿಕೊಳ್ಳುತ್ತಾ ಹಿಂಸೆ ದುರಾಕ್ರಮಣ ಕೃತ್ಯಗಳಿಗೆ ಉತ್ತೇಜನ ನೀಡುತ್ತಿರುವುದಂತೂ ಇನ್ನೂ ನೋವಿನ ಸಂಗತಿಯಾಗಿದೆ. ಇನ್ನೂ ಮುಂದುವರಿದು ಈ ಸಮುದಾಯಗಳ ಮೇಲೆ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರ ಹಾಕಿ ಅವರನ್ನು ದ್ವಿತೀಯ ದರ್ಜೆ ನಾಗರಿಕರಂತೆ ಪರಿಗಣಿಸಿ ಅವರ ಸಾಂವಿಧಾನಿಕ ಹಕ್ಕುಗಳನ್ನು ಅನುಭವಿಸದಂತೆ
ಹತ್ತಿಕ್ಕುತ್ತಿರುವುದು ಹೀನಾಯ ಕೃತ್ಯವಾಗಿದೆ.

ಈ ಹಿನ್ನೆಲೆಯಲ್ಲಿ, ಭಾರತದ ಸಂವಿಧಾನದ ಅನುಚ್ಚೇದ 51%) ಯಲ್ಲಿ “ಭಾರತದ ಎಲ್ಲ ಜನರ ನಡುವೆ ಧಾರ್ಮಿಕ, ಭಾಷೆ, ಪ್ರಾದೇಶಿಕ ಹಾಗೂ ವರ್ಗೀಯ ವೈವಿಧ್ಯತೆಗಳನ್ನು ಮೀರಿ ಪರಸ್ಪರ ಸೌಹಾರ್ದತೆ ಮತ್ತು ಬಂಧುತ್ವವನ್ನು ಉತ್ತೇಜಿಸುವುದು” ಪ್ರತಿಯೊಬ್ಬ ನಾಗರಿಕರ ಮೂಲಭೂತ ಕರ್ತವ್ಯ ಎಂದು ಹೇಳಿದೆ. ಅನುಚ್ಚೇದ 54(0ವು. “ಸಮ್ಮಿಶ್ರ ಸಂಸ್ಕೃತಿಯನ್ನೊಳಗೊಂಡ ದೇಶದ ಭವ್ಯ ಪರಂಪರೆಗೆ ಪ್ರಾಮುಖ್ಯತೆ ನೀಡಿ ಅದನ್ನು ಉಳಿಸಬೇಕು” ಎಂದು ಪ್ರತಿಯೊಬ್ಬ ನಾಗರಿಕರನ್ನು ಒತ್ತಾಯಿಸುತ್ತದೆ. ಆದರೆ ನಮ್ಮ ಚುನಾಯಿತ ಜನಪ್ರತಿನಿಧಿಗಳು ಇದನ್ನು ಮರೆತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ರಾಜ್ಯವು ಅಭಿವೃದ್ಧಿ ಹೊಂದಿ “ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌, ಸಬ್‌ ಕಾ ವಿಶ್ವಾಸ್‌” ಅಂದರೆ “ಎಲ್ಲರ ಜೊತೆ, ಎಲ್ಲರ ವಿಶ್ವಾಸದೊಂದಿಗೆ, ಎಲ್ಲರ ಅಭಿವೃದ್ಧಿ”ಯನ್ನು ಸಾಧಿಸಬೇಕಾದರೆ ಶಾಂತಿ, ಸೌಹಾರ್ದತೆ ಮತ್ತು ನ್ಯಾಯದಾನಗಳು ಅತ್ಯಗತ್ಯ ಮೂಲ ಅಂಶಗಳಾಗಿವೆ. ಸರ್ವ ಜನರ ಸುಸ್ಥಿರ ಮತ್ತು ಉತ್ತಮ ಭವಿಷ್ಯದ ನೀಲ ನಕ್ಷೆಯೆಂಬಂತಿರುವ ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳ 16 ನೆಯ ಅಂಶವೂ ಸಹ ಇದನ್ನೇ ಹೇಳುತ್ತದೆ. ಏನೆಂದರೆ, “ಜಾಗತಿಕ ಸುಸ್ಥಿರ ಅಭಿವೃದ್ಧಿಯ ಯಾವುದೇ ಉದ್ದೇಶವನ್ನು ಈಡೇರಿಸುವಲ್ಲಿ ಮೊದಲ ಹೆಜ್ಜೆಯೆಂದರೆ, ಸಾಂಸ್ಥಿಕ ನಿರ್ಬಂಧಗಳ ಹೇರಿಕೆಯಿಂದ ನ್ಯಾಯವಂಚಿತರಾಗಿ ಅಥವಾ ನೇರ ದಂಗೆ ಹಿಂಸೆಗಳಿಂದಾಗಿ ತಮ್ಮ
ಮೂಲಭೂತ ಸ್ವಾತಂತ್ರ್ಯಕ್ಕೆ ಅಪಾಯವನ್ನು ಎದುರಿಸುತ್ತಿರುವ ವ್ಯಕ್ತಿಗಳ ಜೀವ ರಕ್ಷಣೆ ಹಾಗೂ ಮಾನವ ಹಕ್ಕುಗಳನ್ನು
ಸಂರಕ್ಷಿಸುವುದಾಗಿದೆ”.

ಇದನ್ನೂ ಓದಿ | ಮುಸ್ಲಿಮರು ಕತ್ತರಿಸಿದ ಮಾಂಸವನ್ನೇ ನಾವು ಸೇವಿಸೋದು: ಸಿದ್ದರಾಮಯ್ಯ

ಇತ್ತೀಚಿಗೆ ಕೆಲವು ವಿಭಜಕ ಕೃತ್ಯಗಳಿಂದ ನಿರ್ದಿಷ್ಟ ಸಮುದಾಯಗಳನ್ನು ಅನ್ಯಗೊಳಿಸಿ ಆ ಜನರನ್ನು ಮೂಲಭೂತ ಹಕ್ಕುಗಳಿಂದ ವಂಚಿತರನ್ನಾಗಿಸುವ ಪ್ರವೃತ್ತಿ ಕಂಡು ಬರುತ್ತಿದೆ. ಇದು ರಾಜ್ಯದ ಪ್ರಗತಿಯನ್ನು ಕುಂಠಿತಗೊಳಿಸುವುದಷ್ಟೇ ಅಲ್ಲದೆ ನಮ್ಮ ರಾಜ್ಯದ ಕೀರ್ತಿಯನ್ನು ಸಹ ಕುಂದಿಸುವ ಜೊತೆಗೆ ಹೂಡಿಕೆದಾರರು ಮತ್ತು ಹೊಸತನ್ನರಸುವ ಉದ್ಯಮಿಗಳ ನಂಬಿಕೆ ಮತ್ತು ವಿಶ್ವಾಸವನ್ನು ಹುಸಿಗೊಳಿಸುತ್ತದೆ. ನಾಗರಿಕರಲ್ಲಿ ಅಪನಂಬಿಕೆ ಮಾತು ಅಸುರಕ್ಷಿತ ಭಾವನೆ ಮೂಡಿಸಿ ಭಯದ ವಾತಾವರಣವನ್ನು ಸೃಷ್ಟಿಸುತ್ತದೆ. ಇದು ಸಮಾಜದ ಎಲ್ಲ ವರ್ಗಗಳಿಗೂ ಹಾನಿ ಉಂಟು ಮಾಡುವುದಲ್ಲದೆ ನಮ್ಮ ದೇಶದ ಸಮಗ್ರತೆಗೆ ಕೂಡಾ ಧಕ್ಕೆ ತರುತ್ತದೆ. ಇಂಥ “ದಿಗಿಲು ಹುಟ್ಟಿಸುವ ಭಾರತ” ಮತ್ತು “ಕಳಂಕಿತ ಭಾರತ”ದ ವಾತಾವರಣದಲ್ಲಿ “ಭಾರತದಲ್ಲಿ ತಯಾರಿಸು” ಎನ್ನುವ ಘೋಷ ವಾಕ್ಯವನ್ನು ಸಾಕಾರಗೊಳಿಸುವುದು ಸಾಧ್ಯವಿಲ್ಲದ ಮಾತು.

ಇತ್ತೀಚಿಗೆ ನಡೆದ ‘ಬಸವ ಜಯಂತಿ – 2022’ ಸಂದರ್ಭದಲ್ಲಿ ಬಸವಣ್ಣನವರ ಕನಸಿನ ಸಮಾನತೆಯ ಸೌಹಾರ್ದಯುತ ಸಮಾಜವನ್ನು ಕಟ್ಟುವುದು ನಮ್ಮ ಗುರಿ ಎಂದು ಸರ್ಕಾರದ ಜಾಹಿರಾತಿನಲ್ಲಿ ಪ್ರಕಟಿಸಲಾಗಿದೆ. ಸಾಮಾಜಿಕ ಸೌಹಾರ್ದತೆ, ಬ್ರಾತೃತ್ವ, ಏಕತೆ ಮತ್ತು ಅಂತಃಕರಣಕ್ಕೆ ಬಸವಣ್ಣನವರು ಒತ್ತು ನೀಡಿದ್ದರು ಎನ್ನುವ ನಮ್ಮ ಪ್ರಧಾನ ಮಂತ್ರಿಯವರ ಮಾತುಗಳನ್ನು ಸಹ ಇದರ ಜತೆ ಉದ್ಧರಿಸಲಾಗಿದೆ. ಈ ಸಂದರ್ಭದಲ್ಲಿ ಸರ್ಕಾರವು ಪವಿತ್ರ ರಂಜಾನ್‌/ ಈದ್‌ ಉಲ್‌ ಫಿತರ್‌ ಹಬ್ಬವನ್ನು ಬಸವ ಜಯಂತಿಯಂತೆಯೇ ಆಚರಿಸಿ ಸತತವಾಗಿ ಕೋಮು ದ್ವೇಷಿಗಳ ದಾಳಿಗೆ ತುತ್ತಾಗುತ್ತಿರುವ ಮುಸ್ಲಿಂ ನಾಗರಿಕರನ್ನು ಉದ್ದೇಶಿಸಿ ಅವರ ರಕ್ಷಣೆ ಮತ್ತು ಸುರಕ್ಷತೆ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದರೆ ಅದು ಮತ್ತಷ್ಟು ಹೃದಯ ಸ್ಪರ್ಶಿಯಾಗುತ್ತಿತ್ತು.

ಶಾಂತಿ ಸೌಹಾರ್ದತೆ ಮತ್ತು ನ್ಯಾಯದಾನ ನೀಡುವ ಹೊಣೆಗಾರಿಕೆಯನ್ನು ಕರ್ನಾಟಕ ಸರ್ಕಾರವು ನಿರ್ವಹಿಸುತ್ತದೆ ಎನ್ನುವ ನಂಬಿಕೆಯಿಂದ ನಾವು ಸನ್ಮಾನ್ಯ ಮುಖ್ಯಮಂತ್ರಿಗಳಲ್ಲಿ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವ ಮೂಲಕ ಎಲ್ಲ ನಾಗರಿಕರ ಸೌಖ್ಯ ಮತ್ತು ವಿಶ್ವಾಸವನ್ನು ಪುನರ್‌ ಪ್ರತಿಷ್ಠಾಪಿಸಬೇಕೆಂದು ಮನವಿ ಮಾಡಿ ಕೊಳ್ಳುತ್ತೇವೆ.

  • ರಾಜ್ಯ ಪೊಲೀಸ್‌ ಪಡೆಯು ತನ್ನ ಸಾಂವಿಧಾನಿಕ ಕರ್ತವ್ಯಕ್ಕೆ ಬದ್ಧವಾಗಿ ಕಾನೂನು ಪಾಲನೆಯನ್ನು ಎತ್ತಿ ಹಿಡಿದು ಸಮಾಜದ ದುರ್ಬಲ ವರ್ಗದ ನಾಗರಿಕರ ರಕ್ಷಣೆ ಮಾಡುವಂತೆ ಸೂಕ್ತ ನಿರ್ದೇಶನ ನೀಡಬೇಕು. ಮತೀಯವಾದಿ ಮತ್ತು ಜಾತಿವಾದಿ ಅಪರಾಧಗಳಿಗೆ ತುತ್ತಾಗುವ ನಾಗರಿಕರಿಗೆ ಪೂರ್ಣ ನ್ಯಾಯ ದೊರಕುವಂತೆಯೂ, ಇಂಥ ಅಪರಾಧಗಳನ್ನು ಎಸಗುವವರ ವಿರುದ್ಧ ಸಾಕ್ಷಿದಾರರು ಧೈರ್ಯದಿಂದ ಮುಂದೆ ಬಂದು ಮುಕ್ತವಾಗಿ ತಮ್ಮ ಸಾಕ್ಷ್ಯವನ್ನು ನೀಡುವಂತೆಯೂ, ಅವರಿಗೆಲ್ಲಾ ಪೂರ್ಣ ರಕ್ಷಣೆ ಒದಗಿಸಿ ಅವರಲ್ಲಿ ವಿಶ್ವಾಸ ತುಂಬಿಸಬೇಕು.
  • ಕೋಮುವಾದೀ ಗಲಭೆಗಳಿಂದಾಗಿ ಹಿಂಸೆ, ಸಾವು ಹಾಗು ಬದುಕು ನಷ್ಟವಾದಾಗ, ಸ್ಥಳೀಯ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಜವಾಬ್ದಾರರಾದ ಅಧಿಕಾರಿಗಳ ವಿರುದ್ಧ, ವಿಶೇಷವಾಗಿ ಜಿಲ್ಲಾಧಿಕಾರಿಗಳು, ಜಿಲ್ಲಾಡಳಿತ ಹಾಗೂ ಪೋಲಿಸ್‌ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು.
  • ನಿರ್ದಿಷ್ಟ ಕೋಮಿನ ಜನರನ್ನು ನಿಂದಿಸಿ ಅಮಾನವೀಕರಣಗೊಳಿಸುವುದರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು.
  • ದೈಹಿಕ ಹಿಂಸೆಗೆ ಪ್ರಚೋದನೆ ನೀಡುವಂತಹ ಪ್ರವೃತ್ತಿಗೆ ತಡೆಯೊಡ್ಡಿ ಅಲ್ಪಸಂಖ್ಯಾತರ ವಿರುದ್ಧ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡಿ ಸಮಾಜದ ಸ್ವಾಸ್ತ್ಯ ಹಾಳುಗೆಡುವತ್ತಿರುವ ವ್ಯಕ್ತಿಗಳ ವಿರುದ್ಧ ಪ್ರಬಲ ಕಾನೂನು ಕ್ರಮ ಜರುಗಿಸಬೇಕು.
  • ಸಾಮಾಜಿಕ ಜಾಲತಾಣಗಳು ಹಾಗೂ ಇನ್ನಿತರ ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಸಹ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಸುಳ್ಳು ಸುದ್ದಿಗಳು ಮತ್ತು ಗಾಳಿ ಸಮಾಚಾರಗಳನ್ನು ಹಬ್ಬಿಸುವ ಕೃತ್ಯ ನಡೆಯುತ್ತಿದೆ. ಇದರಿಂದ ಈ ಸಮುದಾಯಗಳನ್ನು ಅನ್ಯವಾಗಿಸುವ ಮತ್ತು ಅವರನ್ನು ಹಿಂಸೆಗೆ ಒಳಪಡಿಸುವ ಅಪಾಯ ಹೆಚ್ಚಾಗುತ್ತಿದೆ. ಇಂಥ ಅಪರಾಧಗಳ ವಿರುದ್ಧ ಸರ್ಕಾರ ಬಹಿರಂಗವಾಗಿ ದನಿಯೆತ್ತಿ ಮಾತನಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು.
  • ನೀತಿಯುತ ಪತ್ರಿಕೋದ್ಯಮದ ತತ್ವಬದ್ಧ ಮೌಲ್ಯಗಳನ್ನು ಉಲ್ಲಂಘಿಸಿ ಸುಳ್ಳು ಮಾಹಿತಿಯ ಸುದ್ದಿ ಬಿತ್ತರಿಸುತ್ತಾ ಸಮಾಜದಲ್ಲಿ
    ಅಸಹಿಷ್ಣುತೆ, ದ್ವೇಷ, ಮತ್ತು ಹಿಂಸೆಯನ್ನು ಪ್ರಚೋದಿಸುತ್ತಿರುವ ಮಾಧ್ಯಮಗಳಲ್ಲಿನ ಹಲವರಿಗೆ ಅಂತಹ ಕರ್ತವ್ಯಲೋಪಗಳನ್ನು ನಿಗ್ರಹಿಸುವಂತೆ ಒತ್ತಾಯಯಿಸಬೇಕು. ರಾಜ್ಯದಲ್ಲಿನ ಸೌಹಾರ್ದಯುತ ವಾತಾವರಣವನ್ನು ನಿರ್ಭೀತರಾಗಿ ಹಾಳುಗೆಡವುತ್ತಿರುವುದು ಒಪ್ಪಿತವಲ್ಲವೆಂಬುದನ್ನು ಮನದಟ್ಟು ಮಾಡಬೇಕು.

ಕರ್ನಾಟಕ ಸರ್ಕಾರವು ಈ ಸಕ್ರಿಯ ಕ್ರಮಗಳನ್ನು ಕೈಗೊಂಡರೆ ಹಿಂಸೆಯಲ್ಲಿ ತೊಡಗಿರುವ ಹಾಗೂ ಹಿಂಸೆಗೆ ಪ್ರಚೋದನೆ ನೀಡುತ್ತಿರುವರಿಗೆ, ಹಾಗೂ ನಾಗರಿಕರಲ್ಲಿ ಭಯ ಮತ್ತು ಅಭದ್ರತೆಯ ವಾತಾವರಣ ಮೂಡಿಸುತ್ತಿರುವವರಿಗೆ ಇಂತಹ ಕಾನೂನು ಬಾಹಿರ ಹಾಗೂ ಒಪ್ಪಿತವಲ್ಲದ ವರ್ತನೆಗಳನ್ನು ಹಾಗೂ ದ್ವೇಷಪೂರಿತ ಅಪರಾಧಗಳನ್ನು ಸರ್ಕಾರ ಸಹಿಸುವುದಿಲ್ಲ ಎನ್ನುವ ಸ್ಪಷ್ಟ ಸಂದೇಶ ಸಾರಿದಂತಾಗುವುದು. ರಾಜ್ಯವು ಇಂತಹ ಸಂಕ್ರಮಣ ಸ್ಥಿತಿಯಲ್ಲಿರುವಾಗ ಮತೀಯ ಸೌಹಾರ್ದತೆಯನ್ನು ಮರುಪ್ರತಿಷ್ಠಾಪಿಸುವುದು ಪ್ರಾಮುಖ್ಯವಾದ ಮತ್ತು ಅತ್ಯಂತ ತುರ್ತಿನ ಕಾರ್ಯವೆಂದು ನಾವು ಪರಿಭಾವಿಸಿದ್ದೇವೆ. ಈ ನಿಟ್ಟಿನಲ್ಲಿ ತಮ್ಮ ನೇತೃತ್ವದ ಸರ್ಕಾರವು ಮುನ್ನಡಿ ಇಡಬೇಕೆಂದು ಬಯಸುತ್ತೇವೆ. ಈ ಸಂದರ್ಭದಲ್ಲಿ ರಾಜ್ಯವು ಪ್ರಗತಿಯೆಡೆಗೆ ಸಾಗುವ ಬದಲಾಗಿ ಸರ್ಕಾರದ ನಿಷ್ಕ್ರಿಯತೆಯಿಂದಾಗಿ ತಳಮಟ್ಟಕ್ಕಿಳಿಯಿತು ಎನ್ನುವ ಅಪಖ್ಯಾತಿಗೆ ತಾವು ಒಳಗಾಗಬಾರದು ಎನ್ನುವ ಆಶಯ ನಮ್ಮದು. ಈ ನಿಟ್ಟಿನಲ್ಲಿ ಸರ್ಕಾರದ ಪ್ರಬಲ, ಸ್ಪಷ್ಟ, ಅಧಿಕೃತ ಆದೇಶ ಕ್ರಮಗಳನ್ನು ನಾವು ನಿಮ್ಮಿಂದ ನಿರೀಕ್ಷಿಸುತ್ತಿದ್ದೇವೆ ಎಂದು ಸಾಹಿತಿಗಳು ಪತ್ರದಲ್ಲಿ ತಿಳಿಸಿದ್ದಾರೆ.

ಅನೇಕ ದಿನಗಳಿಂದ ಭೇಟಿಗೆ ಯತ್ನ

ಕಳೆದ ಒಂದು ತಿಂಗಳಿಂದ ತಮ್ಮನ್ನು ಭೇಟಿ ಮಾಡಿ ಈ ಕೆಳಕಂಡ ಪತ್ರವನ್ನು ಸಲ್ಲಿಸಲು ತಮ್ಮ ಕಚೇರಿಯ ಮೂಲಕ
ಪ್ರಯತ್ನಿಸಿದ್ದೇವೆ. ನಮ್ಮ ಪ್ರಯತ್ನಗಳು ವಿಫಲವಾಗಿರುವುದರಿಂದ, ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಕೂಡಿರುವ ಈ ಪತ್ರವನ್ನು ಬಹಿರಂಗ ಪತ್ರವನ್ನಾಗಿ ಬಿಡುಗಡೆ ಮಾಡಲು ನಿರ್ಧರಿಸಿದ್ದೇವೆ. ನಮ್ಮ ಕಾಳಜಿಗಳನ್ನೂ ಸಲಹೆಗಳನ್ನೂ ತಮ್ಮ ಗಮನಕ್ಕೆ ತರುವುದು ನಾಗರಿಕರಾಗಿ ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ. ತಾವು ಹಾಗೂ ತಮ್ಮ ಸರಕಾರವು ಈ ಪತ್ರವನ್ನು ಗಂಭೀರವಾಗಿ ಪರಿಗಣಿಸುವಿರೆಂದು ನಂಬಿದ್ದೇವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ | BJP ಆದ್ಯತೆ ಕೋಮುವಾದವೇ ವಿನಃ ಅಭಿವೃದ್ಧಿಯಲ್ಲ ಎಂದ ಡಿ.ಕೆ. ಶಿವಕುಮಾರ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

PUC Exam 2024: ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ!

PUC Exam 2024: ಪಿಯುಸಿ ಎರಡನೇ ವಾರ್ಷಿಕ ಪರೀಕ್ಷೆಯನ್ನು ಬರೆಯಲು ರಾಜ್ಯಾದ್ಯಂತ ಒಟ್ಟು 1,49,300 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 84,933 ವಿದ್ಯಾರ್ಥಿಗಳು ಹಾಗೂ 64,367 ವಿದ್ಯಾರ್ಥಿನಿಯರು ಇದ್ದಾರೆ. ಇನ್ನು, 32,848 ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಮಂಡಳಿಯು ಸಕಲ ಸಿದ್ಧತೆ ಮಾಡಿಕೊಂಡಿದೆ.

VISTARANEWS.COM


on

PUC Exam 2024
Koo

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು (KSEAB) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 (PUC Exam 2024) ನಡೆಯಲಿದೆ. ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು, ಅವಶ್ಯಕತೆ ಇರುವ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಇನ್ನು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಸ್‌ ಸಂಚಾರ ಸೇವೆಯು ಉಚಿತವಾಗಿ ಸಿಗಲಿದೆ.

ರಾಜ್ಯಾದ್ಯಂತ 301 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಂಡಳಿಯು ನಾಳೆಯಿಂದ ಪ್ರಾರಂಭವಾಗಿ ಮೇ 16ರವರೆಗೂ ಈ ಪರೀಕ್ಷೆ ನಡೆಸಲಿದೆ. ದ್ವಿತೀಯ ಪಿಯುಸಿ ಮೊದಲ ವಾರ್ಷಿಕ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಎರಡನೇ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಂಡಿದ್ದಾರೆ. ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಅನುತ್ತೀರ್ಣರಾದ ಕೆಲ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

SSLC exam

1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಎರಡನೇ ವಾರ್ಷಿಕ ಪರೀಕ್ಷೆಯನ್ನು ಬರೆಯಲು ರಾಜ್ಯಾದ್ಯಂತ ಒಟ್ಟು 1,49,300 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 84,933 ವಿದ್ಯಾರ್ಥಿಗಳು ಹಾಗೂ 64,367 ವಿದ್ಯಾರ್ಥಿನಿಯರು ಇದ್ದಾರೆ. ಇನ್ನು, 32,848 ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಮಂಡಳಿಯು ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.

ಮೇ 9 ರಂದು ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ, ಮೇ 11 ರಂದು ಸಮಾಜಶಾಸ್ತ್ರ, ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಮೇ 13 ರಂದು ಅರ್ಥಶಾಸ್ತ್ರ, ಮೇ 14 ರಂದು ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ, ಮೇ 15 ರಂದು ಹಿಂದಿ ಪರೀಕ್ಷೆಗಳು ನಡೆಯಲಿವೆ. ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌ ಭಾಷಾ ಪರೀಕ್ಷೆಗಳು ಮೇ 16 ರಂದು ಬೆಳಗಿನ ಅವಧಿಯಲ್ಲಿ ನಡೆಯಲಿವೆ.

ಇತರೆ ಕಲಾ ಮತ್ತು ಕೌಶಲ ವಿಭಾಗಕ್ಕೆ ಸಂಬಂಧಪಟ್ಟ ವಿಷಯಗಳಾದ ಹಿಂದುಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್‌, ಆಟೋಮೊಬೈಲ್‌, ಬ್ಯೂಟಿ ಅಂಡ್‌ ವೆಲ್‌ನೆಸ್‌ ಪರೀಕ್ಷೆಗಳು ಮಧ್ಯಾಹ್ನ 2.15 ರಿಂದ ಸಂಜೆ 4.30 ರವರೆಗೆ ನಡೆಯಲಿವೆ. ಆದರೆ, ದ್ವಿತೀಯ ಪಿಯುಸಿ ಪರೀಕ್ಷೆ 2 ನಡೆಯುತ್ತಿರುವುದರಿಂದ ಸಿಇಟಿ ಬರೆಯುವ ಮಕ್ಕಳಿಗೆ ತೊಂದರೆಯಾಗುತ್ತಿದೆ. ಇದರಿಂದ ಮಕ್ಕಳು ಗೊಂದಲಕ್ಕೀಡಾಗಿದ್ದಾರೆ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೆಕ್ಷನ್‌ 144 ಜಾರಿ

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ. ಪರೀಕ್ಷೆಯು ದ್ವಿತೀಯ ಪಿಯುಸಿ ಪರೀಕ್ಷೆ ನಡೆದ ಮಾದರಿಯಲ್ಲೇ ನಡೆಯಲಿದೆ. ಆದರೆ ಈ ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಮೆರಾ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: CET 2024: ಸಿಇಟಿ ಮರು ಪರೀಕ್ಷೆಯೋ? ಗ್ರೇಸ್‌ ಮಾರ್ಕ್ಸ್‌ ಭಾಗ್ಯವೋ? ನಾಳೆ ನಿರ್ಧಾರ ಪ್ರಕಟ?

Continue Reading

ದಾವಣಗೆರೆ

Lehar Singh Siroya: ಹರಿಹರದ ಪಂಚಮಸಾಲಿ ಜಗದ್ಗುರು ಪೀಠಕ್ಕೆ ರಾಜ್ಯಸಭಾ ಸದಸ್ಯ ಲೆಹರ್​ಸಿಂಗ್ ಭೇಟಿ

Lehar Singh Siroya: ಬಿಜೆಪಿ ಹೈಕಮಾಂಡ್​ ಪ್ರತಿನಿಧಿಯಾಗಿ ಲೆಹರ್​ಸಿಂಗ್ ಅವರು ಹಲವು ವಿಚಾರಗಳನ್ನು ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಶ್ರೀಗಳ ಜತೆ ​ ಚರ್ಚಿಸಿದ್ದಾರೆ.

VISTARANEWS.COM


on

lehar singh siroya
Koo

ಹರಿಹರ: ಬಿಜೆಪಿಯ ರಾಜ್ಯಸಭಾ ಸದಸ್ಯ ಲೆಹರ್​ಸಿಂಗ್ ಅವರು​ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭಾನುವಾರ ಭೇಟಿ ನೀಡಿ ಜಗದ್ಗುರುಗಳಾದ ಶ್ರೀ ವಚನಾನಂದ ಸ್ವಾಮೀಜಿ ಅವರ ಜೊತೆ ಚರ್ಚೆ ನಡೆಸಿದರು. ಬಿಜೆಪಿ ಹೈಕಮಾಂಡ್​ ಪ್ರತಿನಿಧಿಯಾಗಿ ಹಲವಾರು ವಿಚಾರಗಳನ್ನು ಶ್ರೀಗಳ ಜತೆ ಲೆಹರ್​ಸಿಂಗ್ (Lehar Singh Siroya) ಅವರು​ ಚರ್ಚಿಸಿದರು.

ಈ ವೇಳೆ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್​ ಅಗರವಾಲ್ ಅವರು ಜಗದ್ಗುರುಗಳವರ ಜತೆ ದೂರವಾಣಿಯಲ್ಲಿ ಮಾತನಾಡಿದರು. ಅಲ್ಲದೇ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಕೂಡ ಜಗದ್ಗುರುಗಳವರ ಜತೆ ಚರ್ಚೆ ನಡೆಸಿದರು.

ರಾಧಾಮೋಹನ್​ ಅಗರವಾಲ್ ಹಾಗೂ ದೇವೇಂದ್ರ ಫಡ್ನವೀಸ್​ ಅವರ ಜೊತೆಗಿನ ದೂರವಾಣಿ ಚರ್ಚೆಯ ವೇಳೆ ಶ್ರೀಗಳು, ಬಿಜೆಪಿ ಪಕ್ಷದಿಂದ ಪಂಚಮಸಾಲಿ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡುವಲ್ಲಿ ಆಗಿರುವ ಅನ್ಯಾಯವನ್ನು ಪ್ರಬಲವಾಗಿ ಪ್ರಸ್ತಾಪ ಮಾಡಿದ್ದಾರೆ. ಇದನ್ನು ಮನಗಂಡಿರುವ ಬಿಜೆಪಿ ವರಿಷ್ಠರು, ಮುಂಬರುವ ದಿನಗಳಲ್ಲಿ ಜನಪ್ರತಿನಿಧಿಗಳ ಆಯ್ಕೆ ಹಾಗೂ ಪಕ್ಷದ ಹುದ್ದೆಗಳನ್ನು ನೀಡುವಲ್ಲಿ ನಮ್ಮ ಪಂಚಮಸಾಲಿ ಸಮುದಾಯವನ್ನು ಪರಿಗಣಿಸುವುದಾಗಿ ಅವರು ಭರವಸೆ ನೀಡಿದರು.

ಇದನ್ನೂ ಓದಿ | Karnataka Drought: ಬರ ಪರಿಹಾರ ಬಗ್ಗೆ ಸುಳ್ಳು ಹೇಳಿದ ಕಾಂಗ್ರೆಸ್‌; ಯುಪಿಎ ಕೊಟ್ಟಿದ್ದು ಅತಿ ಕಡಿಮೆ ಎಂದ ಎಚ್‌ಡಿಕೆ

ಈ ಸಂಧರ್ಭದಲ್ಲಿ ಮಾಜಿ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ, ಪ್ರಧಾನ ಧರ್ಮದರ್ಶಿ ಬಿ.ಸಿ.ಉಮಾಪತಿ ಹಾಗೂ ಚಂದ್ರಶೇಖರ್ ಪೂಜಾರ್ ಉಪಸ್ಥಿತರಿದ್ದರು.

Continue Reading

ಬೆಂಗಳೂರು

Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

Car Accident: ಬೆಂಗಳೂರು-ತುಮಕೂರು ಹೆದ್ದಾರಿಯ ಮಾದಾವರ ಟೋಲ್‌ಗೇಟ್ ಬಳಿ ಏ.21ರಂದು ಮಾರುತಿ ಓಮ್ನಿಗೆ ಬಲೆನೊ ಕಾರು ಡಿಕ್ಕಿಯಾಗಿ ಅಪಘಾತ ನಡೆದಿತ್ತು. ಅಂದು ಓಮ್ನಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದ್ದರಿಂದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಳು. ಅಪಘಾತದಲ್ಲಿ ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಭಾನುವಾರ ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

Car Accident
Koo

ಬೆಂಗಳೂರು: ಮಾದಾವರ ಟೋಲ್‌ಗೇಟ್ ಬಳಿ ಏ.21ರಂದು ನಡೆದಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಭಾನುವಾರ ಮೃತಪಟ್ಟಿದ್ದಾರೆ. ಇದರಿಂದ ಪ್ರಕರಣದಲ್ಲಿ ಸಾವಿನ ಸಂಖ್ಯೆ 4ಕ್ಕೇರಿದೆ. ಅಪಘಾತದಲ್ಲಿ ಮಾರುತಿ ಬಲೆನೊ ಕಾರು ಡಿಕ್ಕಿಯಾಗಿದ್ದರಿಂದ ಪಲ್ಟಿಯಾದ ಓಮ್ನಿಗೆ ಬೆಂಕಿ ಹೊತ್ತಿಕೊಂಡಿತ್ತು. ಇದರಿಂದ ಬಾಲಕಿಯೊಬ್ಬಳು ಸಜೀವ ದಹನವಾಗಿದ್ದಳು. ಘಟನೆಯಲ್ಲಿ (Car Accident) ಗಾಯಗೊಂಡಿದ್ದ 14 ಜನರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿತ್ತು, ಈ ಪೈಕಿ ಮೂವರು ಇದೀಗ ಕೊನೆಯುಸಿರೆಳೆದಿದ್ದಾರೆ.

ಘಟನೆಯ ವಿವರ

ಬೆಂಗಳೂರು-ತುಮಕೂರು ಹೆದ್ದಾರಿಯ ಮಾದಾವರ ಟೋಲ್‌ಗೇಟ್ ಬಳಿ ಏ.21ರಂದು ರಾತ್ರಿ ಮಾರುತಿ ಓಮ್ನಿ (Maruti Omni) ವಾಹನಕ್ಕೆ ಬಲೆನೊ ಕಾರು (Baleno) ಹಿಂದಿನಿಂದ ಡಿಕ್ಕಿಯಾದ (Road Accident) ಪರಿಣಾಮ ಬಾಲಕಿಯೊಬ್ಬಳು (girl death) ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿತ್ತು.

ಓಮ್ನಿಯಲ್ಲಿದ್ದವರು ಅಬ್ಬಿಗೆರೆ, ದಾಸಾನುಪುರದ ಸಂಬಂಧಿಕರ ಮನೆಯಿಂದ ಬರುತ್ತಿದ್ದಾಗ ದುರಂತ ಘಟಿಸಿತ್ತು ಒಟ್ಟು ಎಂಟು ಜನ ಮಾರುತಿ ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಬಲೆನೊ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಬಲೆನೊ ಕಾರು ಹಿಂದಿನಿಂದ ಬಂದು ಡಿಕ್ಕಿ ಹೊಡೆದ ರಭಸಕ್ಕೆ ಓಮ್ನಿ ಮೂರು ಪಲ್ಟಿಯಾಗಿತ್ತು. ಈ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿತ್ತು. ಇದರಿಂದ 14 ವರ್ಷದ ಬಾಲಕಿ ದಿವ್ಯ ಸ್ಥಳದಲ್ಲೇ ಸಾವಿಗೀಡಾಗಿದ್ದಳು.

ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಎಂಟು ಜನರಲ್ಲಿ ಮಾಯಾಂಕ್, ಮಂಜುಳ, ಸುನಿತಾ, ತರುಣ್, ಮಹೇಶ್, ನಮನ್, ಶಾಂತಿಲಾಲ್ ಗಾಯಗೊಂಡಿದ್ದರು. ಎಲ್ಲರೂ ದಾಸನಪುರ ನಿವಾಸಿಗಳು. ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ನಮನ್, ಸುನಿತಾ, ಮಾಯಾಂಕ್ ಚಿಕಿತ್ಸೆ ಫಲಿಸದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ | Amrita Pandey: ಭೋಜ್‌ಪುರಿ ಜನಪ್ರಿಯ ನಟಿ ಅಮೃತಾ ಪಾಂಡೆ ಆತ್ಮಹತ್ಯೆ; ಸಾವಿಗೆ ಮುನ್ನ ಬರೆದ ವಾಟ್ಸಾಪ್ ಸ್ಟೇಟಸ್‌ನಲ್ಲಿ ಏನಿದೆ?

ಮತ್ತೊಂದು ಕಾರಿನಲ್ಲಿದ್ದ ಚಾಲಕ ರಕ್ಷಿತ್, ಚೇತನ್, ಮುಬಾರಕ್, ಸಲ್ಮಾ ಸೇರಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದವು. ಅವರು ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಅಪಘಾತಕ್ಕೆ ಕಾರಣವಾದ ಬಾಲೆನೋ ಕಾರು ಚಾಲಕ ಇನ್ಶೂರೆನ್ಸ್ ಹಣ ಕಟ್ಟದೆ ಫೇಕ್ ನಂಬರ್ ಹಾಕಿದ್ದ ಎನ್ನಲಾಗಿದೆ. ಜತೆಗೆ ಇದರ ಅಸಲಿ ಕಾರಿನ ಕಾರು ನಂಬರ್ ಬೆಳಗಾವಿಯ ಪಲ್ಲವಿ ಎಂಬುವವರಿಗೆ ಸೇರಿದ್ದು, ಹೀಗಾಗಿ ಡಿವೈಎಸ್ಪಿ ಜಗದೀಶ್ ನೇತೃತ್ವದಲ್ಲಿ ತನಿಖೆ ಚುರಕುಗೊಂಡಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕರ್ನಾಟಕ

CET 2024: ಸಿಇಟಿ ಮರು ಪರೀಕ್ಷೆಯೋ? ಗ್ರೇಸ್‌ ಮಾರ್ಕ್ಸ್‌ ಭಾಗ್ಯವೋ? ನಾಳೆ ನಿರ್ಧಾರ ಪ್ರಕಟ?

CET 2024: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳನ್ನು ಕೇಳಿರುವುದು ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸಿದೆ. ಇದರ ಬೆನ್ನಲ್ಲೇ, ತಜ್ಞರ ಸಮಿತಿಯ ವರದಿ ಆಧಾರದ ಮೇಲೆ ಸೋಮವಾರ ರಾಜ್ಯ ಸರ್ಕಾರವು ಅಂತಿಮ ನಿರ್ಧಾರ ಪ್ರಕಟಿಸಲಿದೆ ಎಂದು ಮೂಲಗಳು ತಿಳಿಸಿವೆ. ಹಾಗಾಗಿ, ಎಲ್ಲರ ಗಮನವೀಗ ರಾಜ್ಯ ಸರ್ಕಾರದ ತೀರ್ಮಾನದ ಮೇಲಿದೆ.

VISTARANEWS.COM


on

CET
Koo

ಬೆಂಗಳೂರು: ಎಂಜಿನಿಯರಿಂಗ್‌ ಸೇರಿ ಹಲವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (CET 2024) ಔಟ್‌ ಆಫ್‌ ಸಿಲಬಸ್‌ (Out Of Syllabus) ಪ್ರಶ್ನೆಗಳನ್ನು ಕೇಳಿರುವ ಬಗ್ಗೆ ಪರಿಶೀಲನೆ ನಡೆಸಲು ರಚಿಸಿರುವ ತಜ್ಞರ ಸಮಿತಿಯು ರಾಜ್ಯ ಸರ್ಕಾರಕ್ಕೆ (Karnataka Government) ವರದಿ ಸಲ್ಲಿಸಿದೆ. ತಜ್ಞರ ಸಮಿತಿಯ ವರದಿ ಅನ್ವಯ ರಾಜ್ಯ ಸರ್ಕಾರವು ಸೋಮವಾರ (ಏಪ್ರಿಲ್‌ 29) ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದ್ದು, ಮರು ಪರೀಕ್ಷೆ ನಡೆಸಲಾಗುತ್ತದೆಯೋ ಅಥವಾ ಗ್ರೇಸ್‌ ಅಂಕಗಳನ್ನು ನೀಡಲಾಗುತ್ತದೆಯೋ ಎಂಬ ಕುತೂಹಲ ವಿದ್ಯಾರ್ಥಿಗಳಲ್ಲಿ ಮೂಡಿದೆ.

ಪಿಯು ಬೋರ್ಡ್‌ ಹಾಗೂ ಕೆಇಎ ನಡುವೆ ಪಠ್ಯಕ್ರಮದ ಕುರಿತು ಪತ್ರಗಳ ಸಮರ ನಡೆದಿದೆ. ಇದರ ಮಧ್ಯೆಯೇ, ಸಿಇಟಿ ಗೊಂದಲವೂ ವಿದ್ಯಾರ್ಥಿಗಳನ್ನು ಆತಂಕಕ್ಕೀಡು ಮಾಡಿದೆ. ಹಾಗಾಗಿ, ಸಿಇಟಿ ವೇಳೆ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳನ್ನು ಕೇಳಲು ಏನು ಕಾರಣ? ಎಲ್ಲಿ ಲೋಪವಾಯಿತು ಎಂಬುದರ ಕುರಿತು ವರದಿ ಆಧರಿಸಿ ರಾಜ್ಯ ಸರ್ಕಾರವು ಸೋಮವಾರವೇ ತೀರ್ಮಾನ ಪ್ರಕಟಿಸಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ವಿದ್ಯಾರ್ಥಿಗಳು ಹಾಗೂ ಪೋಷಕರ ಗಮನವೀಗ ರಾಜ್ಯ ಸರ್ಕಾರದ ಮೇಲಿದೆ.

cet exam karnataka exam authority

ಎಂಜಿನಿಯರಿಂಗ್‌ ಸೇರಿ ಇನ್ನಿತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಏಪ್ರಿಲ್‌ 18 ಮತ್ತು 19ರಂದು ಸಿಇಟಿ ಪರೀಕ್ಷೆಯಲ್ಲಿ ಔಟ್‌ ಆಫ್‌‌‌ ಸಿಲಬಸ್‌‌ ಪ್ರಶ್ನೆಗಳ ಕುರಿತಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರ ಆಕ್ರೋಶ ಈಗಾಗಲೇ ಭುಗಿಲೆದ್ದಿದೆ. 4 ವಿಷಯಗಳಲ್ಲಿ ಕನಿಷ್ಠ 45 ಪ್ರಶ್ನೆಗಳು ಕೈಬಿಟ್ಟ ಪಠ್ಯದಿಂದ ಬಂದಿರುವುದಾಗಿ ಆರೋಪ ಮಾಡಲಾಗಿದೆ. ಭೌತಶಾಸ್ತ್ರ, ರಾಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರದಲ್ಲಿ ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೇಳಲಾಗಿತ್ತು. ಹೀಗಾಗಿ ಪಿಯು ಬೋರ್ಡ್‌ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಡುವೆ ಪತ್ರ ಸಮರವೂ ನಡೆದಿತ್ತು. ಕೊನೆಗೆ ಎಚ್ಚೆತ್ತ ಸರ್ಕಾರ ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಿತ್ತು.

ಪ್ರತಿ ಪತ್ರಿಕೆಯೂ 60 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಎಷ್ಟು ಪ್ರಶ್ನೆಗಳು ಪಠ್ಯಕ್ಕೆ ಹೊರತಾಗಿವೆಯೋ ಅಷ್ಟು ಕೃಪಾಂಕ ನೀಡಬಹುದು. ಹಾಗೆ ನೀಡಿದರೆ ಪ್ರತಿಭಾವಂತರಿಗೆ ಅನ್ಯಾಯವಾಗುತ್ತದೆ. ಪಿಯು ಅಂಕಗಳನ್ನಷ್ಟೇ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸಿದರೆ ಸಿಇಟಿ ಉದ್ದೇಶ, ಮಾಡಿದ ಖರ್ಚು ವ್ಯರ್ಥವಾಗುತ್ತದೆ. ಹಾಗಾಗಿ, ಮರು ಪರೀಕ್ಷೆ ನಡೆಸುವ ಅಥವಾ ಪಠ್ಯಕ್ಕೆ ಹೊರತಾದ ಪ್ರಶ್ನೆಗಳನ್ನು ಕೈಬಿಟ್ಟು ಉಳಿದ ಪ್ರಶ್ನೆಗಳನ್ನಷ್ಟೇ ಮೌಲ್ಯಮಾಪನ ಮಾಡಿ ಶೇ.100ಕ್ಕೆ ಪರಿಗಣಿಸಿ ಫಲಿತಾಂಶ ಪ್ರಕಟಿಸಲು ಕೆಇಎ ಹಾಗೂ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಪದವಿ ಪೂರ್ಣ ಶಿಕ್ಷಣ ಇಲಾಖೆಯು 2023-24ನೇ ಶೈಕ್ಷಣಿಕ ಸಾಲಿನಲ್ಲಿ ಕೈಬಿಟ್ಟಿರುವ ಪಾಠದ ಪ್ರಶ್ನೆಗಳನ್ನು ಕೇಳಿರುವ ಕುರಿತು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಆರೋಪಿಸಿದ್ದರು. ಹಾಗಾಗಿ, ರಾಜ್ಯ ಸರ್ಕಾರವು ಪರಿಶೀಲನೆ ನಡೆಸಲು ತಜ್ಞರ ಸಮಿತಿ ರಚಿಸಿತ್ತು. ತಜ್ಞರ ಸಮಿತಿಯು ಏಪ್ರಿಲ್‌ 25ರಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

ಇದನ್ನೂ ಓದಿ: UPSC EXAM-2023: ಲಕ್ಷಾಂತರ ರೂಪಾಯಿ ಸಂಬಳವಿದ್ದ ಉದ್ಯೋಗವನ್ನೇ ತೊರೆದಿದ್ದ ಯುಪಿಎಸ್‌ಸಿ ಟಾಪರ್ ಆದಿತ್ಯ ಶ್ರೀವಾಸ್ತವ

Continue Reading
Advertisement
IPL 2024
ಕ್ರೀಡೆ24 mins ago

IPL 2024: ಗೆಲುವಿನಲ್ಲೂ ನೂತನ ದಾಖಲೆ ಬರೆದ ಆರ್​ಸಿಬಿ

PUC Exam 2024
ಕರ್ನಾಟಕ25 mins ago

PUC Exam 2024: ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ!

Money Guide
ಮನಿ-ಗೈಡ್35 mins ago

Money Guide: ಫೊರೆಕ್ಸ್‌ ಕಾರ್ಡ್‌ V/S ಕ್ರೆಡಿಟ್‌ ಕಾರ್ಡ್‌: ವಿದೇಶ ಪ್ರವಾಸಕ್ಕೆ ಯಾವುದು ಸೂಕ್ತ?

lehar singh siroya
ದಾವಣಗೆರೆ51 mins ago

Lehar Singh Siroya: ಹರಿಹರದ ಪಂಚಮಸಾಲಿ ಜಗದ್ಗುರು ಪೀಠಕ್ಕೆ ರಾಜ್ಯಸಭಾ ಸದಸ್ಯ ಲೆಹರ್​ಸಿಂಗ್ ಭೇಟಿ

Car Accident
ಬೆಂಗಳೂರು1 hour ago

Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

CET
ಕರ್ನಾಟಕ1 hour ago

CET 2024: ಸಿಇಟಿ ಮರು ಪರೀಕ್ಷೆಯೋ? ಗ್ರೇಸ್‌ ಮಾರ್ಕ್ಸ್‌ ಭಾಗ್ಯವೋ? ನಾಳೆ ನಿರ್ಧಾರ ಪ್ರಕಟ?

YAJAMANA PREMIER LEAGUE SEASON-3 (2)
ಕ್ರೀಡೆ2 hours ago

YAJAMANA PREMIER LEAGUE SEASON-3: ಈ ಬಾರಿ ಟಿ10 ಮಾದರಿಯಲ್ಲಿ ನಡೆಯಲಿದೆ ಯಜಮಾನ ಪ್ರೀಮಿಯರ್ ಲೀಗ್​

Lok Sabha Election 2024
Lok Sabha Election 20242 hours ago

Lok Sabha Election 2024: ಒವೈಸಿ ಪ್ರಕಾರ ಮುಸ್ಲಿಮರೇ ಹೆಚ್ಚು ಕಾಂಡೋಮ್ ಬಳಸುತ್ತಾರಂತೆ!

Virat Kohli
ಕ್ರಿಕೆಟ್2 hours ago

Virat Kohli: ಟೀಕೆಗಳಿಗೆ ಬಹಿರಂಗವಾಗಿಯೇ ತಿರುಗೇಟು ನೀಡಿದ ಕಿಂಗ್​ ಕೊಹ್ಲಿ​

Jatra Rathotsava Two killed and one serious after being hit by wheel of a chariot at Indi Kamarimath
ಕರ್ನಾಟಕ2 hours ago

Jatra Rathotsava: ಇಂಡಿಯ ಕಮರಿಮಠದ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ದುರ್ಮರಣ; ಮತ್ತೊಬ್ಬ ಗಂಭೀರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20245 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20248 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202410 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202410 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ13 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ17 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌