ವಿದ್ಯುತ್‌ ಚಾಲಿತ ವಾಹನಗಳ ದರ ಕಡಿಮೆ ಇರಲಿ: ಉತ್ಪಾದಕರಿಗೆ ಸಿಎಂ ಬೊಮ್ಮಾಯಿ ಕಿವಿಮಾತು - Vistara News

ಬೆಂಗಳೂರು

ವಿದ್ಯುತ್‌ ಚಾಲಿತ ವಾಹನಗಳ ದರ ಕಡಿಮೆ ಇರಲಿ: ಉತ್ಪಾದಕರಿಗೆ ಸಿಎಂ ಬೊಮ್ಮಾಯಿ ಕಿವಿಮಾತು

ನವೀಕರಿಸಬಹುದಾದ ಇಂಧನದ ಕುರಿತು ಸುಮಾರು 30 ವರ್ಷಗಳ ಹಿಂದೆ ಸಂಶೋಧನೆಗಳು ಪ್ರಾರಂಭವಾಗಿ ಇಂದು ಹಲವಾರು ಆಯಾಮಗಳಲ್ಲಿ ಯಶಸ್ಸು ಕಂಡಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಶ್ಲಾಘಿಸಿದರು.

VISTARANEWS.COM


on

cm bommai in ev function
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿದ್ಯುತ್‌ ಚಾಲಿತ ವಾಹನದ (ಇವಿ) ದರ ಜನಸಾಮಾನ್ಯರಿಗೆ ನಿಲುಕುವಂತಿರಬೇಕು. ಆಗ ಮಾತ್ರ ಅವುಗಳ ಬಳಕೆ ಹೆಚ್ಚಾಗುತ್ತದೆ ಎಂದು ಇವಿ ಉತ್ಪಾದಕರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿವಿಮಾತು ಹೇಳಿದರು.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವತಿಯಿಂದ ಆಯೋಜಿಸಲಾಗಿದ್ದ ಇವಿ ಅಭಿಯಾನ-೨೦೨೨ ಕಾರ್ಯಕ್ರಮ ಹಾಗೂ ೧೫೨ ಇವಿ ಚಾರ್ಜಿಂಗ್ ಸ್ಟೇಷನ್ ಉದ್ಘಾಟಿಸಿ ಮಾತನಾಡಿದರು.

ಇವಿಗಳಿಗೆ ಉತ್ತಮ ಬ್ಯಾಟರಿ ಮತ್ತು ಮೋಟಾರ್ ಅಗತ್ಯವಿದೆ. ಇವುಗಳನ್ನು ಭಾರತದಲ್ಲಿಯೇ ಆತ್ಮನಿರ್ಭರ ಭಾರತ ಯೋಜನೆಯಲ್ಲಿ ನಮ್ಮ ಯುವಕರೇ ಉತ್ಪಾದಿಸುತ್ತಿರುವುದು ಹೆಮ್ಮೆಯ ವಿಚಾರ. ನಮ್ಮ ಸರ್ಕಾರ ಇವಿ ಪಾಲಿಸಿ ರೂಪಿಸಿದೆ. ಬೆಸ್ಕಾಂ ಸಂಸ್ಥೆಯನ್ನು ಇದಕ್ಕೆ ನೋಡಲ್ ಏಜೆನ್ಸಿ ಮಾಡಿ ಬೆಂಗಳೂರಿನಲ್ಲಿ ಚಾರ್ಜಿಂಗ್ ಸ್ಟೇಷನ್‍ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸಲಾಗಿದೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಚಾರ್ಜಿಂಗ್ ಸ್ಟೇಷನ್‍ಗಳ ಅವಶ್ಯಕತೆ ಇದೆ. ಅವುಗಳನ್ನು ಬೆಸ್ಕಾಂ ವತಿಯಿಂದ ಸ್ಥಾಪಿಸಲಾಗುವುದು ಎಂಬ ವಿಶ್ವಾಸವಿದೆ ಎಂದರು.

ಬ್ಯಾಟರಿ ಸ್ವಾಪಿಂಗ್ ಅನ್ನು ಯಶಸ್ವಿಗೊಳಿಸಬೇಕಿದೆ ಎಂದ ಬೊಮ್ಮಾಯಿ, ಮುಂಬರುವ ದಿನಗಳಲ್ಲಿ ಬ್ಯಾಟರಿ ಸ್ವಾಪಿಂಗ್‌ಗೆ ಅತಿ ಹೆಚ್ಚಿನ ಮಹತ್ವವನ್ನು ನಾವೆಲ್ಲರೂ ನೀಡಬೇಕಿದೆ. ಕಡಿಮೆ ವೆಚ್ಚದಲ್ಲಿ ಇವಿಗಳು ಜನಸಾಮಾನ್ಯರಿಗೆ ಲಭಿಸುವಂತಿರಬೇಕು ಎಂದರು.

ನವೀಕರಿಸಬಹುದಾದ ಇಂಧನಕ್ಕೆ ಆದ್ಯತೆ

ನವೀಕರಿಸಬಹುದಾದ ಇಂಧನಕ್ಕೆ ಬಹಳ ದೊಡ್ಡ ಮಹತ್ವವನ್ನು ನೀಡಲಾಗಿದೆ. ಇಡೀ ಭಾರತದಲ್ಲಿ ಸೌರಶಕ್ತಿಯನ್ನು ಅತಿ ಹೆಚ್ಚು ಉತ್ಪಾದಿಸುತ್ತಿರುವ ರಾಜ್ಯ ಕರ್ನಾಟಕ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಸೌರಶಕ್ತಿಯ ಸಂಗ್ರಹ ಹೇಗೆ ಮಾಡಬೇಕೆನ್ನುವ ಸವಾಲು ನಮ್ಮ ಮುಂದಿದೆ. ಅದಕ್ಕೆ ಪಿಎಸ್‍ಪಿ ಯೋಜನೆಗಳನ್ನು ಕೇಂದ್ರ ಸರ್ಕಾರದ ನೆರವಿನಿಂದ ಕೈಗೊಳ್ಳಲಾಗಿದೆ. 2-3 ಪಿಎಸ್‍ಪಿ ಘಟಕಗಳಳು ಕರ್ನಾಟಕದಲ್ಲಿ ತಲೆ ಎತ್ತಲಿವೆ. ಸೌರಶಕ್ತಿಯ ಸಂಗ್ರಹ ಹಾಗೂ ಮರುಬಳಕೆಗೆ ಇದು ಉತ್ತಮವಾದ ಸಾಧನವಾಗಲಿದೆ.

ಹೈಡ್ರೋಜನ್ ಇಂಧನವನ್ನು ತಯಾರು ಮಾಡಲು ಈಗಾಗಲೇ ಎರಡು ಕಂಪನಿಗಳೊಂದಿಗೆ ಒಪ್ಪಂದ ಮಡಿಕೊಳ್ಳಲಾಗಿದೆ. ಹೈಡ್ರೋಜನ್ ಇಂಧನ ನವೀಕರಿಸಬಹುದಾದ ಇಂಧನಗಳ ಪೈಕಿ ಅತ್ಯುತ್ತಮವಾದ್ದದ್ದು. ಅದಾದರೆ ನಮ್ಮ ದೇಶದ ಇಂಧನ ವೆಚ್ಚವನ್ನು ಉಳಿಸಬಹುದು ಎಂದರು.

ಇದನ್ನೂ ಓದಿ: ಸರ್ಕಾರಿ ಸೇವಾ ನಿವೃತ್ತಿ ನಂತರ ಅನಗತ್ಯ ಅಲೆದಾಟಕ್ಕೆ ಬ್ರೇಕ್;‌ ತ್ವರಿತ ಸೌಲಭ್ಯಕ್ಕೆ ಅತ್ಯಾಧುನಿಕ ತಂತ್ರಜ್ಞಾನ ಬಳಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಾರಿ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತ; ಇನ್ನೈದು ದಿನ ಭಾರಿ ವರ್ಷಧಾರೆ

Karnataka Weather Forecast: ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ ಎಂದು (Rain News) ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆ ಭರ್ಜರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗಲಿದೆ.

ಬೆಳಗಾವಿ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಕೋಲಾರ, ಹಾಸನದ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಇನ್ನು ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಒಳನಾಡಿನ ಬೀದರ್‌, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳುರು, ಚಿತ್ರದುರ್ಗ, ದಾವಣಗೆರೆ, ಕೊಡಗು ಹಾಗೂ ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ವಿಜಯನಗರದ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾಗಲಿದೆ.

ಇದನ್ನೂ ಓದಿ: Physical Abuse : ಮಹಿಳೆಯರು ಚಳಿ ಬಿಡಿಸಲು ಬಂದಾಗ ಕಾಂಪೌಂಡ್‌ ಹಾರಿದ ಪುರಸಭೆ ಮಾಜಿ ಅಧ್ಯಕ್ಷೆಯ ಪತಿಗೆ ಧರ್ಮದೇಟು

ಮುಂದುವರಿದ ಮಳೆ ಅವಾಂತರ

ಕೋಲಾರದಲ್ಲಿ ಗುರುವಾರ ಸುರಿದ ದಿಢೀರ್‌ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತಗೊಂಡಿತ್ತು. ಸುಮಾರು 2-3 ಅಡಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಬೇಕಾಯಿತು. ದೊಡ್ಡ ದೊಡ್ಡ ವಾಹನಗಳು ಜಲಾವೃತಗೊಂಡ ರಸ್ತೆಯಲ್ಲೇ ಬಂದರೆ, ಬೈಕ್‌ ಸವಾರರು ತಳ್ಳಿಕೊಂಡು ಹೋಗುತ್ತಿದ್ದ ದೃಶ್ಯ ಕಂಡು ಬಂತು.

karnataka weather Forecast

ಇತ್ತ ಶಾಲಾ ‌ಮಕ್ಕಳು ಮನೆಗೆ ತೆರಳಲು ಹರಸಾಹಸ ಪಡೆಬೇಕಾಯಿತು. ಅಪಾಯವನ್ನು ಲೆಕ್ಕಿಸದೆ ಸೈಕಲ್‌ನಲ್ಲಿ ಹೋದ ಶಾಲಾ ವಿದ್ಯಾರ್ಥಿಯೊಬ್ಬ ನೀರಿನ ರಭಸಕ್ಕೆ ವಾಪಸ್‌ ಹಿಂದಕ್ಕೆ ಬಂದಿದ್ದ. ಅಂಡರ್‌ಪಾಸ್‌ನಲ್ಲಿ ನೀರು ಸರಿಯಾಗಿ ಹರಿದು ಹೋಗಲು ಆಗದ ಕಾರಣಕ್ಕೆ ಈ ಸಮಸ್ಯೆ ಆಗಿದೆ ಎಂದು ಸಾರ್ವಜನಿಕರು ಕಿಡಿಕಾರಿದರು.

karnataka weather Forecast

ಮಾವಿನ ಮಾರುಕಟ್ಟೆಗೆ ತೆರಳಲು ಇರುವ ಏಕೈಕ ಮಾರ್ಗವಿದು. ಪ್ರತಿ ಬಾರಿ ಮಳೆಯಾದರೂ ಇದೇ ಪರಿಸ್ಥಿತಿ ಎದುರಾಗುತ್ತದೆ. ಆದರೆ ಸಂಬಂಧ ಪಟ್ಟ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

Karnataka weather Forecast

ಇನ್ನೂ ರಾಜಧಾನಿ ಬೆಂಗಳೂರು ನಗರದಲ್ಲಿ ಮಳೆ ಅಬ್ಬರಕ್ಕೆ ಮರಗಳು ನೆಲಕ್ಕುರುಳಿವೆ. ಆದರೆ ಕೆಲವೆಡೆ ಮರಗಳ ತೆರವು ಕಾರ್ಯಾಚರಣೆ ನಡೆದಿಲ್ಲ. ರಸ್ತೆ ಹಾಗೂ ಫುಟ್‌ಪಾತ್‌ ಮಧ್ಯೆ ಮರದ ರೆಂಬೆ, ಕೊಂಬೆಗಳು ಬಿದ್ದಿವೆ. ಹೀಗಾಗಿ ಜನರ ಓಡಾಟ ಸೇರಿ ವ್ಯಾಪಾರಸ್ಥರು ಪರದಾಡಬೇಕಾಗಿದೆ. ಇನ್ನೂ ಜಯನಗರದಲ್ಲಿ ಮರಗಳು ಬಿದ್ದ ಕಾರಣ ವ್ಯಾಪಾರಸ್ಥರಿಗೆ ಅನಾನುಕೂಲವಾಗಿದೆ. ಬಿಬಿಎಂಪಿ‌ಯವರು ಮರ ಕತ್ತರಿಸಿ ಪಕ್ಕಕ್ಕೆ ಹಾಕಿ ಹೋಗಿದ್ದಾರೆ. ಆದರೆ ಅದನ್ನು ತೆರವು ಮಾಡದೆ ಇರುವುದರಿಂದ ವ್ಯಾಪಾರ ಮಾಡಲು ಕಷ್ಟವಾಗುತ್ತಿದೆ ಎಂದು ವೃದ್ಧೆಯೊಬ್ಬರು ಅಳಲು ತೋಡಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Valmiki Corporation Scam: ರಾಜೀನಾಮೆ ಸ್ವಯಂಪ್ರೇರಿತ, ಯಾರ ಒತ್ತಡಕ್ಕೂ ಮಣಿದಿಲ್ಲ: ಬಿ.ನಾಗೇಂದ್ರ

Valmiki Corporation Scam: ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ನಿಗಮದ ಅಧಿಕಾರಿ ಕೂಡ ನನ್ನ ಹೆಸರನ್ನು ಎಲ್ಲೂ ಪ್ರಸ್ತಾಪ ಮಾಡಿಲ್ಲ. ಆದರೂ ನಿಸ್ಪಕ್ಷಪಾತವಾಗಿ ತನಿಖೆ ನಡೆಯಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದೇನೆ ಎಂದು ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ.

VISTARANEWS.COM


on

Koo

ಬೆಂಗಳೂರು: ಕಳೆದ ಹತ್ತು ದಿನಗಳಿಂದ ವಾಲ್ಮೀಕಿ ನಿಗಮ ಅಕ್ರಮದ (Valmiki Corporation Scam) ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆ ಆಗುತ್ತಿದೆ. ವಿಪಕ್ಷದವರು ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧಿಕಾರಿ ಕೂಡ ನನ್ನ ಹೆಸರನ್ನು ಎಲ್ಲೂ ಪ್ರಸ್ತಾಪ ಮಾಡಿಲ್ಲ. ನನಗೆ ಯಾರ ಒತ್ತಡಜಕ್ಕೂ ಮಣಿದಿಲ್ಲ, ನಿಸ್ಪಕ್ಷಪಾತವಾಗಿ ತನಿಖೆ ನಡೆಯಲು ಸಚಿವ ಸ್ಥಾನಕ್ಕೆ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುತ್ತಿದ್ದೇನೆ. ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ತರುವುದು ಬೇಡ ಎಂದು ಈ ನಿರ್ಧಾರ ಕೈಗೊಂಡಿರುವುದಾಗಿ ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜೀನಾಮೆ ನೀಡುವುದು ನನ್ನ ಸ್ವ ನಿರ್ಧಾರವಾಗಿದೆ. ರಾಜೀನಾಮೆ ನೀಡಲು ಯಾರೂ ಒತ್ತಡ ಹಾಕಿಲ್ಲ. ಆತ್ಮ ಸಾಕ್ಷಿಯಾಗಿ ರಾಜೀನಾಮೆ ನೀಡುತ್ತಿದ್ದೇನೆ. ಇದಕ್ಕಾಗಿ ಸಿಎಂ ಬಳಿ ಸಮಯ ಕೇಳಿದ್ದೇನೆ. 7.30ಕ್ಕೆ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ. ಈ ಬಗ್ಗೆ ನಾನು ಸಿಎಂ, ಡಿಸಿಎಂ ಹಾಗೂ ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ನಾನು ಯಾವ ತಪ್ಪೂ ಮಾಡಿಲ್ಲ, ನಾನು ನಿರ್ದೋಷಿ. ಪ್ರಕರಣದಲ್ಲಿ ತನಿಖೆ ನಡೆದು ಸತ್ಯಾಂಶ ಜನರಿಗೆ ತಿಳಿಯಲಿದೆ ಎಂದು ತಿಳಿಸಿದ್ದಾರೆ.

ರಾಜೀನಾಮೆಗೆ ಬಿಜೆಪಿ ನಾಯಕರ ಒತ್ತಾಯ

ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿ, ರಾಜ್ಯಪಾಲರಿಗೆ ಗುರುವಾರ ಬೆಳಗ್ಗೆ ಮನವಿ ಪತ್ರಸಲ್ಲಿಸಿದ್ದರು. ನಂತರ ಸಚಿವ ಸ್ವಯಂ ಪ್ರೇರಿತವಾಗಿಯೇ ರಾಜೀನಾಮೆ ನೀಡಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದರು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ.

ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಈಗಾಗಲೇ ಎಸ್‌ಐಟಿ ರಚಿಸಿದೆ. ಒಂದು ವೇಳೆ ಸಿಬಿಐ ಎಂಟ್ರಿಯಾದರೆ ಎಸ್‌ಐಟಿಗೆ ತನಿಖೆ ನಡೆಸುವ ಅವಕಾಶ ಇರಲ್ಲ. ಹೀಗಾಗಿ ಸಿಬಿಐ ತನಿಖೆ ಬಿಸಿ ತಟ್ಟುವ ಮುನ್ನ ನಾಗೇಂದ್ರ ರಾಜಿನಾಮೆ ಪಡೆಯುವುದು ಸೂಕ್ತ ಎನ್ನುವ ಅಭಿಪ್ರಾಯ ವ್ಯಕ್ತವಾಗಿತ್ತು. ಹೀಗಾಗಿ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು. ನಂತರ ಅಧಿಕಾರಿಗಳ ಬಂಧನವಾಗಿತ್ತು.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿದೆ.

ಇದನ್ನೂ ಓದಿ | Prajwal Revanna Case: ಭವಾನಿ ರೇವಣ್ಣ ವಿರುದ್ಧ ಬಂಧನ ವಾರಂಟ್‌ ಹೊರಡಿಸಿದ ಕೋರ್ಟ್

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆಯುತ್ತಿದ್ದಾರೆ. ಶಿವಮೊಗ್ಗ ಮತ್ತು ಬೆಂಗಳೂರಿನ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

MLC Election: ವಿಧಾನ ಪರಿಷತ್ ಚುನಾವಣೆ; ಯತೀಂದ್ರ, ಸಿ.ಟಿ.ರವಿ ಸೇರಿ 11 ಅಭ್ಯರ್ಥಿಗಳ ಅವಿರೋಧ ಆಯ್ಕೆ, ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

MLC Election: ವಿಧಾನ ಪರಿಷತ್‌ ಚುನಾವಣೆಗೆ 11 ಅಭ್ಯರ್ಥಿಗಳು ಹೊರತುಪಡಿಸಿ ಯಾರೊಬ್ಬರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆ ಘೋಷಿಸಲಾಗಿದೆ.

VISTARANEWS.COM


on

ಸಿ.ಟಿ.ರವಿ, ಯತೀಂದ್ರ ಸಿದ್ದರಾಮಯ್ಯ ಮತ್ತು ಬಲ್ಕೀಸ್‌ ಬಾನು
Koo

ಬೆಂಗಳೂರು: ವಿಧಾನಪರಿಷತ್‌ ಚುನಾವಣೆಗೆ (MLC Election) ನಾಮಪತ್ರ ಸಲ್ಲಿಸಿದ್ದ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯಿಂದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಜೂನ್‌ 13ರಂದು ಮತದಾನ ನಿಗದಿಯಾಗಿತ್ತು. ಆದರೆ, 11 ಅಭ್ಯರ್ಥಿಗಳು ಹೊರತುಪಡಿಸಿ ಯಾರೊಬ್ಬರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆ ಘೋಷಿಸಲಾಗಿದೆ. ಕಾಂಗ್ರೆಸ್‌ನ 7, ಬಿಜೆಪಿಯ 3 ಹಾಗೂ ಜೆಡಿಎಸ್‌ನ ಒಬ್ಬರು ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದಾರೆ.

ವಿಧಾನ ಪರಿಷತ್‌ ನೂತನ ಸದಸ್ಯರ ಪಟ್ಟಿ (ಒಟ್ಟು 11)

ಕಾಂಗ್ರೆಸ್‌ ಸದಸ್ಯರು7
1.ಐವಾನ್‌ ಡಿಸೋಜ
2.ಕೆ.ಗೋವಿಂದರಾಜ್
3.ಜಗದೇವ ಗುತ್ತೇದಾರ್‌
4.ಬಲ್ಕೀಸ್‌ ಬಾನು
5.ಎನ್‌.ಎಸ್‌.ಭೋಸರಾಜು
6.ಡಾ.ಯತೀಂದ್ರ ಸಿದ್ದರಾಮಯ್ಯ‌,
7. ಎ. ವಸಂತ್‌ ಕುಮಾರ್

ಬಿಜೆಪಿ ಸದಸ್ಯರು-3
1.ಸಿ.ಟಿ.ರವಿ
2.ಎನ್‌.ರವಿಕುಮಾರ್
3.ಮಾರುತಿರಾವ್‌ ಮುಳೆ

ಜೆಡಿಎಸ್‌ ಸದಸ್ಯರು-1
1.ಟಿ.ಎನ್. ಜವರಾಯಿ ಗೌಡ

ಈ ಬಗ್ಗೆ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಸುತ್ತೋಲೆ ಹೊರಡಿಸಿದ್ದಾರೆ. ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ 11 ಸದಸ್ಯರನ್ನು ಆಯ್ಕೆ ಮಾಡಲು ಜೂನ್‌ 13ರಂದು ದ್ವೈವಾರ್ಷಿಕ ಚುನಾವಣೆ ನಿಗದಿಯಾಗಿತ್ತು. ಅದರಂತೆ ಜೂನ್ 3ರಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ಒಟ್ಟು 12 ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದರು. ನಾಮಪತ್ರಗಳ ಪರಿಶೀಲನೆಯ ಸಂದರ್ಭದಲ್ಲಿ ಆಸಿಫ್ ಪಾಷಾ ಆರ್.ಎಮ್. ಎಂಬುವವರ ನಾಮಪತ್ರವು ಸೂಚಕರಿಲ್ಲದ ಕಾರಣ ತಿರಸ್ಕೃತಗೊಂಡಿದ್ದು, ಉಳಿದ 11 ಜನ ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರಗೊಂಡಿದ್ದವು.

ಇದನ್ನೂ ಓದಿ | HD Kumaraswamy: ಎಚ್‌ಡಿ ಕುಮಾರಸ್ವಾಮಿ ಕೇಳಿದ ಕೃಷಿ ಖಾತೆ ಮೇಲೇ ನಿತೀಶ್‌ ಕಣ್ಣು; ಯಾರಿಗೆ ಒಲಿಯತ್ತೆ ಇಲಾಖೆ?

ಜೂನ್ 6 ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿತ್ತು, ಯಾರು ನಾಮಪತ್ರ ಹಿಂಪಡೆದಿದಿಲ್ಲ. ಹೀಗಾಗಿ ಭರ್ತಿ ಮಾಡಬೇಕಾದ 11 ಸ್ಥಾನಗಳಿಗೆ 11 ಜನ ಅಭ್ಯರ್ಥಿಗಳು ಮಾತ್ರ ಅಂತಿಮವಾಗಿ ಕಣದಲ್ಲಿದ್ದರು. ಹೀಗಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಐವಾನ್ ಡಿಸೋಜಾ, ಕೆ. ಗೋವಿಂದರಾಜ್, ಜಗದೇವ ಗುತ್ತೇದಾರ್, ಬಲ್ಕೀಸ್ ಬಾನು, ಯತೀಂದ್ರ ಎಸ್. ಎ. ವಸಂತ ಕುಮಾರ, ಭಾರತೀಯ ಜನತಾ ಪಾರ್ಟಿಯ ಮಾರುತಿರಾವ್ ಮುಳೆ , ಸಿ.ಟಿ. ರವಿ,ರವಿಕುಮಾರ. ಎನ್ ಹಾಗೂ ಜನತಾದಳ(ಜಾ) ಪಕ್ಷದ ಟಿ.ಎನ್. ಜವರಾಯಿ ಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆಂದು ಘೋಷಿಸಿದ್ದಾರೆ.

Continue Reading

ಕ್ರೈಂ

ಯುವಕನ ಕಾಲರ್ ಪಟ್ಟಿ ಹಿಡಿದು ಜಾಡಿಸಿ ಒದ್ದ ಯುವತಿ; ಎರಡು ಕೈ ಮೇಲೆತ್ತಿ ಬೈಕ್‌ ಸವಾರಿ, ಸವಾರನ ಹುಚ್ಚಾಟಕ್ಕೆ ಕಿಡಿ

Assault Case : ವಿಜಯಪುರದಲ್ಲಿ ಬೈಕ್‌ ಸವಾರನ ಹುಚ್ಚಾಟಕ್ಕೆ ಸ್ಥಳೀಯರು ದಂಗಾಗಿದ್ದರು. ಬೆಂಗಳೂರಲ್ಲಿ ಆಟೋ ಚಾಲಕನೊಬ್ಬ ಕಿರಿಕ್‌ ತೆಗೆದು ಬೈಕ್‌ ಟ್ಯಾಕ್ಸಿ ಚಾಲಕನಿಗೆ ಥಳಿಸಿರುವ ಘಟನೆ ನಡೆದಿದೆ. ರಾಯಚೂರಿನಲ್ಲಿ ಯುವತಿಯೊಬ್ಬಳು ಯುವಕನ ಕಾಲರ್‌ ಪಟ್ಟಿ ಹಿಡಿದು ಜಾಡಿಸಿ ಒದ್ದಿದ್ದಾಳೆ.

VISTARANEWS.COM


on

By

A rider standing on a bike and Young man and woman fight in road
Koo

ವಿಜಯಪುರ/ರಾಯಚೂರು/ಬೆಂಗಳೂರು: ವಿಜಯಪುರದಲ್ಲಿ ಸವಾರನೊಬ್ಬನ ಹುಚ್ಚಾಟಕ್ಕೆ ಸಹ ಸವಾರರು ಆತಂಕ ಪಡುವಂತಾಗಿತ್ತು. ಬೈಕ್‌ ಮೇಲೆಯೇ ನಿಂತು, ಎರಡು ಕೈ ಮೇಲೆತ್ತಿ ನಡುರಸ್ತೆಯಲ್ಲಿ ವಾಹನ ಚಲಾಯಿಸಿ ಹುಚ್ಚಾಟ (Bike Rider) ಮೆರೆದಿದ್ದಾನೆ. ವಿಜಯಪುರ ನಗರದ ಬಸ್ ನಿಲ್ದಾಣದಿಂದ ಕೋರ್ಟ್ ಮಾರ್ಗದಲ್ಲಿ ನಿನ್ನೆ ಬುಧವಾರ ರಾತ್ರಿ ಘಟನೆ ನಡೆದಿದೆ. ಬೈಕ್ ಸವಾರನ ಹುಚ್ಚಾಟ ಕಂಡು ಸ್ಥಳೀಯರು ದಂಗಾದರು. ಕುಡಿದ ಮತ್ತಿನಲ್ಲಿ ಈ ರೀತಿ ಮಾಡಿರಬಹುದೆಂದು ಶಂಕಿಸಲಾಗಿದೆ. ವಿಜಯಪುರ (Vijayapura News) ನಗರದ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಟೋ ಚಾಲಕನಿಂದ ಬೈಕ್‌ ಟ್ಯಾಕ್ಸಿ ಚಾಲಕನಿಗೆ ಹಲ್ಲೆ

ಬೆಂಗಳೂರಲ್ಲಿ ಆಟೋ ಚಾಲಕನಿಂದ ಬೈಕ್ ಟ್ಯಾಕ್ಸಿ ಚಾಲಕ ನಂದಕಿಶೋರ್ ಎಂಬಾತನ ಮೇಲೆ ಹಲ್ಲೆ (Assault Case) ನಡೆದಿದೆ. ಬೆಂಗಳೂರಿನ 80 ಫೀಟ್ ರೋಡ್ ಕೋರಮಂಗಲ ಬಳಿ ಘಟನೆ ನಡೆದಿದೆ. ಬೈಕ್ ಚಾಲಕನಿಗೆ ತಿಳಿಯದ ರೀತಿಯಲ್ಲಿ ಆಟೋ ಚಾಲಕ ಗಾಡಿಯ ಕೀ ಕದ್ದಿದ್ದ. ಈ ಸಂಬಂಧ ಮಾತಿಗೆ ಮಾತು ಬೆಳೆದಿದೆ.

ಬೈಕ್ ಟ್ಯಾಕ್ಸಿ ಎಂಬ ನೆಪದಲ್ಲಿ ಆಟೋಚಾಲಕ ಮೊಬೈಲ್ ಕಿತ್ತು ಹಲ್ಲೆ ನಡೆಸಿದ್ದಾನೆ. ಈಗಾಗಲೆ ಹೈಕೋರ್ಟ್ ಕೂಡ ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ಹಲ್ಲೆ ನಡೆಸದಂತೆ ನಿರ್ದೇಶನ ನೀಡಿದೆ. ಆದರೂ ಆಟೋ ಹಾಗು ಬೈಕ್ ಟ್ಯಾಕ್ಸಿ ಚಾಲಕರ ನಡುವೆ ಜಟಾಪಟಿ ಮುಂದುವರಿದೆ. ಘಟನೆ ಬಗ್ಗೆ ಮೊಬೈಲ್ ರೆಕಾರ್ಡ್ ಮಾಡಿ ಬೈಕ್ ಟ್ಯಾಕ್ಸಿ ಚಾಲಕ ದೂರು ನೀಡಿದ್ದಾರೆ.

ಕಾಲರ್ ಪಟ್ಟಿ ಹಿಡಿದು ಜಾಡಿಸಿ ಒದ್ದ ಯುವತಿ

ರಾಯಚೂರು ನಗರದ ಲೋಕಾಯುಕ್ತ ಪೊಲೀಸ್ ಠಾಣೆ ಎದುರಿಗೆ ಯುವಕ ಯುವತಿ ಹೊಡೆದಾಡಿಕೊಂಡಿದ್ದಾರೆ. ಯುವಕನ ಕಾಲರ್ ಪಟ್ಟಿ ಹಿಡಿದ ಯುವತಿ ಜಾಡಿಸಿ ಒದ್ದಿದ್ದಾಳೆ. ಬಳಿಕ ಜಗಳವಾಡುತ್ತಾ ಲೋಕಾಯುಕ್ತ ಪೊಲೀಸ್ ಠಾಣೆಗೆ ತೆರಳಿ‌ದ್ದಾರೆ. ಈ ವೇಳೆ ಪೊಲೀಸರು ಇಬ್ಬರನ್ನು ಬೈದು ಠಾಣೆಯಿಂದ ಕಳುಹಿಸಿದ್ದಾರೆ. ಇತ್ತ ಇವರಿಬ್ಬರ ಪರಸ್ಪರ ಹೊಡೆದಾಟ ದೃಶ್ಯವನ್ನು ಸಾರ್ವಜನಿಕರು ನೋಡುತ್ತಾ ನಿಂತಿದ್ದರು. ಸದ್ಯ ಇವರಿಬ್ಬರ ಗಲಾಟೆಗೆ ಏನು ಕಾರಣ ಎಂಬುದು ತಿಳಿದು ಬಂದಿಲ್ಲ. ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Food Poisoning : ಇಲಿ ಬಿದ್ದ ಪಲ್ಯ ಸೇವಿಸಿದ ಎಸ್‌ ವ್ಯಾಸ ಕಾಲೇಜು ವಿದ್ಯಾರ್ಥಿಗಳಿಗೆ ವಾಂತಿ

ಚಲಿಸುತ್ತಿದ್ದ ಕ್ರೇನ್‌ ಮೇಲೆ ಬಿದ್ದ ಮರ

ಉಡುಪಿಯ ಬ್ರಹ್ಮಾವರ ತಾಲೂಕು ಬೆಣ್ಣೆಕುದ್ರು ಬಾರ್ಕೂರು ಪಾಂಡೇಶ್ವರ ರಸ್ತೆಯಲ್ಲಿ ಚಲಿಸುತ್ತಿದ್ದ ಕ್ರೇನ್ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿದೆ. ಮರ ಬಿದ್ದ ರಭಸಕ್ಕೆ ಕ್ರೇನ್ ಹಾಗೂ ವಿದ್ಯುತ್ ಕಂಬ ಜಖಂಗೊಂಡಿತ್ತು. ಬೆಣ್ಣೆ ಕುದ್ರುವಿನಲ್ಲಿ ನಡೆಯುತ್ತಿರುವ ಕಾಮಗಾರಿ ಮುಗಿಸಿ ಬರುತ್ತಿದ್ದಾಗ ಘಟನೆ ನಡೆದಿದೆ. ಈ ಘಟನೆಯಿಂದಾಗಿ ಸುಮಾರು 2 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಮೆಸ್ಕಾಂ ಸಿಬ್ಬಂದಿ ಮತ್ತು ಸಾರ್ವಜನಿಕರ ನೆರವಿನಿಂದ ಮರ ತೆರವು ಕಾರ್ಯ ನಡೆಯಿತು.

ಬಿಯರ್ ತುಂಬಿದ ಲಾರಿ ಪಲ್ಟಿ; ಎಣ್ಣೆಗಾಗಿ ಮುಗಿಬಿದ್ದ ಜನ

ರಾಯಚೂರು ತಾಲೂಕಿನ ಹೆಗ್ಗಸನಹಳ್ಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಿಯರ್‌ ತುಂಬಿದ್ದ ಲಾರಿಯು ಪಲ್ಟಿಯಾಗಿದೆ. ವಾಹನ ಪಲ್ಟಿಯಾಗುತ್ತಿದ್ದಂತೆ ಬಿಯರ್ ಬಾಟಲ್ ರಸ್ತೆ ಮಧ್ಯೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಇದನ್ನು ಕಂಡ ಬಿಯರ್ ಪ್ರಿಯರು ಬಾಟಟ್‌ಗಾಗಿ ಮುಗಿ ಬಿದ್ದರು. ಬಿಯರ್ ಡಬ್ಬಿಗೆ ಒಮ್ಮೆಲೆ ಜನ ಮುಗಿ ಬಿದ್ದ ಕಾರಣ ಕೆಲಹೊತ್ತು ರಸ್ತೆ ಸಂಚಾರ ಸ್ಥಗಿತವಾಗಿತ್ತು. ಟ್ರಾಫಿಕ್ ಜಾಂನಿಂದ ವಾಹನ ಸವಾರರು ಹೈರಾಣಾದರು. ರಾಯಚೂರು ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Karnataka weather Forecast
ಮಳೆ6 mins ago

Karnataka Weather : ಭಾರಿ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತ; ಇನ್ನೈದು ದಿನ ಭಾರಿ ವರ್ಷಧಾರೆ

Kangana Ranaut
ಪ್ರಮುಖ ಸುದ್ದಿ14 mins ago

Kangana Ranaut : ರೈತ ವಿರೋಧಿ ಹೇಳಿಕೆ ನೀಡಿದ್ದಕ್ಕೆ ಕೋಪ;​ ನಟಿ, ಸಂಸದೆ ಕಂಗನಾ ರಣಾವತ್​ಗೆ ಏರ್​ಪೋರ್ಟ್​ ಭದ್ರತಾ ಸಿಬ್ಬಂದಿಯಿಂದಲೇ ಕಪಾಳಮೋಕ್ಷ

ಕರ್ನಾಟಕ30 mins ago

Valmiki Corporation Scam: ರಾಜೀನಾಮೆ ಸ್ವಯಂಪ್ರೇರಿತ, ಯಾರ ಒತ್ತಡಕ್ಕೂ ಮಣಿದಿಲ್ಲ: ಬಿ.ನಾಗೇಂದ್ರ

Parachute Pants Fashion
ಫ್ಯಾಷನ್35 mins ago

Parachute Pants Fashion: ಪ್ಯಾರಾಶೂಟ್‌ ಪ್ಯಾಂಟ್ಸ್; ಟೀನೇಜ್‌ ಹುಡುಗಿಯರ ಹೊಸ ಟ್ರೆಂಡ್‌!

Actress Hema:
ಪ್ರಮುಖ ಸುದ್ದಿ36 mins ago

Actress Hema: ರೇವ್ ಪಾರ್ಟಿಯಲ್ಲಿ ಡ್ರಗ್ಸ್​ ಸೇವಿಸಿದ ಪ್ರಕರಣ; ನಟಿ ಹೇಮಾಗೆ ಮತ್ತೆ ನ್ಯಾಯಾಂಗ ಬಂಧನ

Money Guide
ಮನಿ-ಗೈಡ್54 mins ago

Money Guide: ಈ ಯೋಜನೆಯಲ್ಲಿ ಪ್ರತಿ ತಿಂಗಳು 3,475 ರೂ. ಹೂಡಿಕೆ ಮಾಡಿ 1 ಲಕ್ಷ ರೂ. ಮಾಸಿಕ ಪಿಂಚಣಿ ಪಡೆಯಿರಿ

Kangana Ranaut leaves for Delhi in pretty purple saree
ಬಾಲಿವುಡ್1 hour ago

Kangana Ranaut: ನೇರಳೆ ಬಣ್ಣದ ಸೀರೆಯುಟ್ಟು ದೆಹಲಿಗೆ ಹೊರಟ ಕಂಗನಾ ರಣಾವತ್!

Uric Acid
ಆರೋಗ್ಯ1 hour ago

Uric Acid: ಆರೋಗ್ಯ ಹದಗೆಡಿಸುವ ಯೂರಿಕ್ ಆಮ್ಲವನ್ನು ನಿಯಂತ್ರಿಸುವ ನೈಸರ್ಗಿಕ ವಿಧಾನಗಳಿವು

IND vs PAK T20 Match
ಕ್ರಿಕೆಟ್1 hour ago

IND vs PAK T20 Match: 10 ಸೆಕೆಂಡ್‌ ಜಾಹೀರಾತಿಗೆ ಕನಿಷ್ಠ 50 ಲಕ್ಷ ನಿಗದಿ!

ಪ್ರಮುಖ ಸುದ್ದಿ1 hour ago

MLC Election: ವಿಧಾನ ಪರಿಷತ್ ಚುನಾವಣೆ; ಯತೀಂದ್ರ, ಸಿ.ಟಿ.ರವಿ ಸೇರಿ 11 ಅಭ್ಯರ್ಥಿಗಳ ಅವಿರೋಧ ಆಯ್ಕೆ, ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌