ಸಿಎಂ ಏಕನಾಥ ಶಿಂಧೆಯನ್ನು ಶಿವಸೇನೆಯ ಎಲ್ಲ ಹುದ್ದೆಗಳಿಂದ ವಜಾಗೊಳಿಸಿದ ಉದ್ಧವ್‌ ಠಾಕ್ರೆ - Vistara News

ದೇಶ

ಸಿಎಂ ಏಕನಾಥ ಶಿಂಧೆಯನ್ನು ಶಿವಸೇನೆಯ ಎಲ್ಲ ಹುದ್ದೆಗಳಿಂದ ವಜಾಗೊಳಿಸಿದ ಉದ್ಧವ್‌ ಠಾಕ್ರೆ

ಏಕನಾಥ ಶಿಂಧೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಕ್ಕೆ ಅವರನ್ನು ವಜಾಗೊಳಿಸಲಾಗಿದೆ. ಶಿವಸೇನೆ ಪ್ರಮುಖ್‌ ಆಗಿ ನನ್ನ ಅಧಿಕಾರ ನಾನು ಚಲಾಯಿಸಿದ್ದೇನೆ ಎಂದು ಉದ್ಧವ್‌ ಠಾಕ್ರೆ ಹೇಳಿದ್ದಾರೆ.

VISTARANEWS.COM


on

Uddhav Thackeray sacks Eknath Shinde
ಉದ್ಧವ್‌ ಠಾಕ್ರೆ ಮತ್ತು ಏಕನಾಥ ಶಿಂಧೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಬಂಡಾಯ ಶಾಸಕ ಏಕನಾಥ್‌ ಶಿಂಧೆಯನ್ನು ಶಿವಸೇನೆ ಪಕ್ಷದ ಎಲ್ಲ ಹುದ್ದೆಗಳಿಂದಲೂ ವಜಾಗೊಳಿಸಿ ಉದ್ಧವ್‌ ಠಾಕ್ರೆ ಆದೇಶ ಹೊರಡಿಸಿದ್ದಾರೆ. ಏಕನಾಥ ಶಿಂಧೆ ಶಿವಸೇನೆಯಿಂದ ಬಂಡಾಯ ಹೋಗಿ ಈಗ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದಾರೆ. ಶಿವಸೇನೆಯ ಮುಖ್ಯಸ್ಥ ಉದ್ಧವ್‌ ಠಾಕ್ರೆಯಾಗಿದ್ದು ಅವರೀಗ ಶಿಂಧೆಯನ್ನು, ಪಕ್ಷದ ನಾಯಕತ್ವ ಸ್ಥಾನದಿಂದ ಹಿಡಿದು, ಎಲ್ಲ‌ ಹುದ್ದೆಗಳಿಂದಲೂ ತೆಗೆದುಹಾಕಿದ್ದಾರೆ. ʼನೀವು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದೀರಿ. ಈ ಮೂಲಕ ಶಿವಸೇನೆಯ ಸದಸ್ಯತ್ವನ್ನೂ ನೀವೇ ಸ್ವತಃ ಬಿಟ್ಟಿದ್ದೀರಿ. ಹೀಗಾಗಿ ಶಿವಸೇನೆಯ ಪ್ರಮುಖ್‌ ಆಗಿರುವ ನಾನು ನನ್ನ ಅಧಿಕಾರ ಬಳಸಿಕೊಂಡು, ನಿಮ್ಮನ್ನು ಪಕ್ಷದ ಎಲ್ಲ ಹುದ್ದೆಗಳಿಂದಲೂ ತೆಗೆದುಹಾಕುತ್ತಿದ್ದೇನೆʼ ಎಂದು ಉದ್ಧವ್‌ ಠಾಕ್ರೆ ಆದೇಶ ಪತ್ರದಲ್ಲಿ ಬರೆದಿದ್ದಾರೆ.

ಶಿವಸೇನೆಯಿಂದ ಬಂಡಾಯವೆದ್ದರೂ ಇವತ್ತಿನವರೆಗೆ ಶಿಂಧೆ ತಾನು ಶಿವಸೇನೆಯ ಪ್ರಾಥಮಿಕ ಸದಸ್ಯತ್ವ ಬಿಟ್ಟಿದ್ದೇನೆ ಎಂದು ಎಲ್ಲಿಯೂ ಹೇಳಿಕೊಳ್ಳಲಿಲ್ಲ. ಅಷ್ಟೇ ಅಲ್ಲ, ನಮ್ಮ ಬಣ್ಣದಲ್ಲಿಯೇ ಶಿವಸೇನೆಯ ಹೆಚ್ಚಿನ ಶಾಸಕ-ಸಂಸದರು ಇರುವುದರಿಂದ ನಾವೇ ನಿಜವಾದ ಶಿವಸೇನೆ ಎಂದೂ ಹೇಳಿಕೊಳ್ಳುತ್ತಿದ್ದಾರೆ. ಆದರೆ ಉದ್ಧವ್‌ ಠಾಕ್ರೆ ಬಣ ಅದನ್ನು ಒಪ್ಪಿಲ್ಲ. ಅಷ್ಟಲ್ಲದೆ ಈಗ ಅವರನ್ನು ವಜಾಗೊಳಿಸಿ ಹೊರಡಿಸಲಾದ ಆದೇಶದಲ್ಲಿ ‘ನೀವೇ ನಿಮ್ಮ ಸ್ವಯಂ ಇಚ್ಛೆಯಿಂದ ಶಿವಸೇನೆಯ ಸದಸ್ಯತ್ವ ತ್ಯಜಿಸಿದ್ದೀರಿ’ ಎಂಬ ವಾಕ್ಯವಿದೆ. ಇದಕ್ಕಿನ್ನು ಏಕನಾಥ ಶಿಂಧೆಯೇ ಸ್ಪಷ್ಟನೆ ಕೊಡಬೇಕು.

ಶಿವಸೇನೆಯಿಂದ ಬಂಡಾಯ ಎದ್ದು, ಜೂ.21ರಿಂದಲೂ ಏಕನಾಥ್‌ ಶಿಂಧೆ ಮಹಾರಾಷ್ಟ್ರವನ್ನು ತ್ಯಜಿಸಿದ್ದರು. ಜೂ.29ರಂದು ರಾತ್ರಿ ಉದ್ಧವ್‌ ಠಾಕ್ರೆ ರಾಜೀನಾಮೆ ಕೊಟ್ಟ ಬೆನ್ನಲ್ಲೇ ಏಕನಾಥ್‌ ಶಿಂಧೆ ಬಣ ಮತ್ತು ಬಿಜೆಪಿ ಒಗ್ಗಟ್ಟಾಗಿ ಸರ್ಕಾರ ರಚಿಸಿವೆ. ಈಗಾಗಲೇ ಏಕನಾಥ್‌ ಶಿಂಧೆ ಸಿಎಂ ಆಗಿ ಮತ್ತು ದೇವೇಂದ್ರ ಫಡ್ನವೀಸ್‌ ಉಪಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ಇಂದಿನಿಂದ ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶ ಶುರುವಾಗಿದ್ದು, ಜುಲೈ ೪ರಂದು ಏಕನಾಥ್‌ ಶಿಂಧೆ ಬಹುಮತ ಸಾಬೀತುಪಡಿಸಬೇಕಾಗಿದೆ.

ಇದನ್ನೂ ಓದಿ: Maha politics | ಮಹಾರಾಷ್ಟ್ರದ ನೂತನ ಸಿಎಂ, ಡೆಪ್ಯೂಟಿ ಸಿಎಂ ಅಭಿನಂದಿಸಿದ ಪ್ರಧಾನಿ ಮೋದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Gold Smuggling: ಗುದನಾಳದಲ್ಲಿ 1ಕೆಜಿ ಚಿನ್ನ; ಕೇರಳದಲ್ಲಿ ಗಗನಸಖಿ ಅರೆಸ್ಟ್‌

Gold Smuggling:ಬಂಧಿತ ಗಗನಸಖಿಯನ್ನು ಕೋಲ್ಕತ್ತಾ ಮೂಲದ ಸುರಭಿ ಖತುನ್‌ ಎಂದು ಗುರುತಿಸಲಾಗಿದ್ದು, ಆಕೆ ತನ್ನ ಗುದನಾಳದಲ್ಲಿ ಬರೋಬ್ಬರಿ 960 ಚಿನ್ನವನ್ನು ಅಕ್ರಮವಾಗಿ ಭಾರತಕ್ಕೆ ತಂದಿದ್ದಾಳೆ. ಆಕೆ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಕ್ಯಾಬಿನ್‌ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾಳೆ. ಮಸ್ಕತ್‌ನಿಂದ ಕಣ್ಣೂರಿಗೆ ಮೇ 28ರಂದು ಬಂದಿದ್ದ ವಿಮಾನದಲ್ಲಿ ಆಕೆ ಬಂದಿದ್ದಳು.

VISTARANEWS.COM


on

Gold Smuggling
Koo

ಕೇರಳ: ಅಕ್ರಮ ಚಿನ್ನ ಸಾಗಾಟ(Gold Smuggling) ಮಾಡುತ್ತಿದ್ದ ಗಗನಸಖಿಯನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಅಚ್ಚರಿಯ ವಿಚಾರವೆಂದರೆ 960 ಗ್ರಾಂ ಚಿನ್ನವನ್ನು ಆಕೆ ತನ್ನ ಗುದನಾಳದಲ್ಲಿಟ್ಟುಕೊಂಡು ಬಂದಿದ್ದಳು ಎನ್ನಲಾಗಿದೆ. ಇದೀಗ ಆಕೆಯನ್ನು ಅರೆಸ್ಟ್‌ ಮಾಡಿರುವ ಕಂದಾಯ ಗುಪ್ತಚರ ನಿರ್ದೇಶನಾಲಯ(DRI) ಆಕೆಯನ್ನು 14 ದಿನಗಳ ಕಾಲ ತನ್ನ ವಶಕ್ಕೆ ಪಡೆದಿದೆ.

ಬಂಧಿತ ಗಗನಸಖಿಯನ್ನು ಕೋಲ್ಕತ್ತಾ ಮೂಲದ ಸುರಭಿ ಖತುನ್‌ ಎಂದು ಗುರುತಿಸಲಾಗಿದ್ದು, ಆಕೆ ತನ್ನ ಗುದನಾಳದಲ್ಲಿ ಬರೋಬ್ಬರಿ 960 ಚಿನ್ನವನ್ನು ಅಕ್ರಮವಾಗಿ ಭಾರತಕ್ಕೆ ತಂದಿದ್ದಾಳೆ. ಆಕೆ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಕ್ಯಾಬಿನ್‌ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದಾಳೆ. ಮಸ್ಕತ್‌ನಿಂದ ಕಣ್ಣೂರಿಗೆ ಮೇ 28ರಂದು ಬಂದಿದ್ದ ವಿಮಾನದಲ್ಲಿ ಆಕೆ ಬಂದಿದ್ದಳು. DRI ಅಧಿಕಾರಿಗಳು ಚೆಕ್ಕಿಂಗ್‌ ಮಾಡುವಾಗ ಆಕೆಯ ಬಳಿಕ ಚಿನ್ನ ಇರುವ ವಿಚಾರ ಬಯಲಾಗಿದೆ. ತಕ್ಷಣ ಆಕೆಯನ್ನು ಅರಸ್ಟ್‌ ಮಾಡಲಾಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದಾದ ಬಳಿಕ ಆಕೆಯನ್ನು ಮ್ಯಾಜಿಸ್ಟ್ರೇಟ್‌ ಎದುರು ಹಾಜರುಪಡಿಸಲಾಗಿದ್ದು, ಆಕೆಯನ್ನು 14 ದಿನಗಳ ಕಾಲ DRI ಕಸ್ಟಡಿಗೆ ಒಪ್ಪಿಸಲಾಗಿದೆ.

ಇನ್ನು ಗಗನಸಖಿಯೊಬ್ಬಳು ತನ್ನ ಗುದನಾಳದಲ್ಲಿ ಚಿನ್ನ ಅಡಗಿಸಿಟ್ಟುಕೊಂಡು ಅಕ್ರಮ ಸಾಗಾಟ ಮಾಡಿರುವುದು ಇದೇ ಮೊದಲ ಪ್ರಕರಣ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನು ನಿನ್ನೆಯಷ್ಟೇ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಕಾಂಗ್ರೆಸ್‌ ಮುಖಂಡ ಶಶಿ ತರೂರ್‌ ಅವರ ಆಪ್ತ ಸಹಾಯಕನನ್ನು ಅರೆಸ್ಟ್‌ ಮಾಡಲಾಗಿತ್ತು. ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣ(IGI Airport)ದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಶಶಿ ತರೂರ್‌ ಅವರ ಪಿಎ ಶಿವ ಪ್ರಸಾದ್‌ ಅವರನ್ನು ವಶಕ್ಕೆ ಪಡೆಸಿದ್ದಾರೆ. ಶಿವ ಕುಮಾರ್‌ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಕಸ್ಟಮ್ಸ್‌ ಅಧಿಕಾರಿಗಳು ಟರ್ಮಿನಲ್‌ 3ರಲ್ಲಿ ಅವರನ್ನು ಪರಿಶೀಲನೆ ನಡೆಸಿ ಬಂಧಿಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಕಸ್ಟಮ್ಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದು, ದುಬೈನಿಂದ ತಮ್ಮ ಸಹಾಯಕನ ಮೂಲಕ ಅಕ್ರಮವಾಗಿ ಚಿನ್ನವನ್ನು ಶಿವಕುಮಾರ್‌ ತರಿಸಿದ್ದರು. ಇದನ್ನು ಪಡೆಯುವ ವೇಳೆ ಕಸ್ಟಮ್ಸ್‌ ಅಧಿಕಾರಿಗಳು ಅವರನ್ನು ಅರೆಸ್ಟ್‌ ಮಾಡಿದ್ದಾರೆ. ಇನ್ನು 30ಲಕ್ಷ ರೂ.ಗೂ ಅಧಿಕ ಮೊತ್ತದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಈ ಬಗ್ಗೆ ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Huligemma Temple : ಹುಲಿಗೆಮ್ಮ ದೇವಿ ಜಾತ್ರೆಗೆ ಹೊರಟಿದ್ದ ಪಾದಯಾತ್ರಿ ಮೇಲೆ ಹರಿದ ಲಾರಿ; ಓರ್ವ ಸಾವು, ಮತ್ತೋರ್ವ ಗಂಭೀರ

ಕುಮಾರ್‌ ದುಬೈನಿಂದ ದೆಹಲಿ ಏರ್‌ಪೋರ್ಟ್‌ಗೆ ಬಂದಿಳಿಯುತ್ತಿದ್ದಂತೆ ಕಸ್ಟಮ್ಸ್‌ ಆದಿಕಾರಿಗಳು ಅವರನ್ನು ವಿಚಾರಣೆಗೊಳಪಡಿಸಿದ್ದು, ಚಿನ್ನ ಎಲ್ಲಿಂದ ಬಂತು ಹೇಗೆ ಬಂದು ಎಂಬ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಆಗ ಕುಮಾರ್‌ ಅಧಿಕಾರಿಗಳ ಪ್ರಶ್ನೆಗೆ ಸಮಾಧಾನಕರ ಉತ್ತರ ನೀಡಿಲ್ಲ. ಹೀಗಾಗಿ ಅವರನ್ನು ಅರೆಸ್ಟ್‌ ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Continue Reading

ದೇಶ

Air India Flight: ಏರ್ ಇಂಡಿಯಾ ವಿಮಾನ 20 ಗಂಟೆ ವಿಳಂಬ; ಎಸಿ ಇಲ್ಲದೆ ಪ್ರಜ್ಞೆ ತಪ್ಪಿ ಬಿದ್ದ ಪ್ರಯಾಣಿಕರು

Air India Flight: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಗುರುವಾರ ಮಧ್ಯಾಹ್ನ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ 20 ಗಂಟೆಗಳ ಕಾಲ ವಿಳಂಬವಾಗಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ. ಹವಾ ನಿಯಂತ್ರಣ ವ್ಯವಸ್ಥೆ ಇಲ್ಲದೆ ವಿಮಾನದೊಳಗೆ ಕೆಲವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯ ಪ್ರಯಾಣಿಕರು ಕಾಯುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

VISTARANEWS.COM


on

Air India Flight
Koo

ನವದೆಹಲಿ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಗುರುವಾರ ಮಧ್ಯಾಹ್ನ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ (Air India Flight) 20 ಗಂಟೆಗಳ ಕಾಲ ವಿಳಂಬವಾಗಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ. ಹವಾ ನಿಯಂತ್ರಣ ವ್ಯವಸ್ಥೆ ಇಲ್ಲದೆ ವಿಮಾನದೊಳಗೆ ಕೆಲವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಮಾನ ಇಂದು (ಶುಕ್ರವಾರ) ಬೆಳಿಗ್ಗೆ 11 ಗಂಟೆಗೆ ಹೊರಡಲಿದೆ.

ಗುರುವಾರ ಪತ್ರಕರ್ತೆ ಶ್ವೇತಾ ಪುಂಜ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಎಸಿ ಇಲ್ಲದೆ ಪ್ರಯಾಣಿಕರು ಪರದಾಡುತ್ತಿರುವ ಫೋಟೊವನ್ನು ಪೋಸ್ಟ್‌ ಮಾಡಿದ್ದಾರೆ. ʼʼಫ್ಲೈಟ್ ನಂ. ಎಐ 183 ವಿಮಾನಕ್ಕೆ ಪ್ರಯಾಣಿಕರನ್ನು ಹತ್ತಿಸಲಾಯಿತು. ಹವಾ ನಿಯಂತ್ರಣವಿಲ್ಲದೆ ಹಲವರು ಪರದಾಡಿದರು. ಈ ವೇಳೆ ಕೆಲವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ನಂತರ ಪ್ರಯಾಣಿಕರಿಗೆ ವಿಮಾನದಿಂದ ನಿರ್ಗಮಿಸಲು ತಿಳಿಸಲಾಯಿತುʼʼ ಎಂದು ಅವರು ಬರೆದುಕೊಂಡಿದ್ದಾರೆ.

ದೆಹಲಿಯಲ್ಲಿ ಉಷ್ಣಾಂಶ ದಾಖಲೆಯ ಮಟ್ಟಕ್ಕೆ ಏರಿದೆ. ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ 52.9 ಡಿಗ್ರಿ ಸೆಲ್ಶಿಯಸ್‌ ತಾಪಮಾನ ಕಂಡು ಬಂದಿತ್ತು. ʼʼಇದು ಖಾಸಗೀಕರಣ ವಿಫಲವಾಗಿದೆ ಎನ್ನುವುದಕ್ಕೆ ಸ್ಪಷ್ಟ ಉದಾಹರಣೆ. ಎಐ 183 ವಿಮಾನವು ಎಂಟು ಗಂಟೆಗಳಿಗಿಂತ ಹೆಚ್ಚು ವಿಳಂಬವಾಗಿದೆ. ಪ್ರಯಾಣಿಕರನ್ನು ಹವಾನಿಯಂತ್ರಣ ವ್ಯವಸ್ಥೆ ಇಲ್ಲದ ವಿಮಾನವನ್ನು ಹತ್ತಿಸಿದ್ದು ಅಮಾನವೀಯ” ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಟ್ಯಾಗ್ ಮಾಡಿ ಶ್ವೇತಾ ಪುಂಜ್ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಏರ್‌ ಇಂಡಿಯಾ ಹೇಳಿದ್ದೇನು?

ಶ್ವೇತಾ ಪುಂಜ್ ಅವರ ಪೋಸ್ಟ್‌ ವೈರಲ್‌ ಆದ ಬೆನ್ನಲ್ಲೇ ಏರ್‌ ಇಂಡಿಯಾ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ. ʼʼಈ ಘಟನೆಗಾಗಿ ವಿಷಾಧ ವ್ಯಕ್ತಪಡಿಸುತ್ತಿದ್ದೇವೆ. ನಮ್ಮ ತಂಡದವರು ಸೂಕ್ತವಾಗಿ ಸ್ಪಂದಿಸಲಿದ್ದಾರೆ. ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಮ್ಮ ಸಿಬ್ಬಂದಿ ಕ್ರಮ ಕೈಗೊಳ್ಳಲಿದ್ದಾರೆʼʼ ಎಂದು ತಿಳಿಸಿದ್ದಾರೆ.

ಮತ್ತೊಬ್ಬ ಪ್ರಯಾಣಿಕ ಅಭಿಷೇಕ್ ಶರ್ಮಾ ತ್ವರಿತ ಕ್ರಮಕ್ಕಾಗಿ ವಿಮಾನಯಾನ ಸಂಸ್ಥೆಗೆ ಮನವಿ ಮಾಡಿದ್ದಾರೆ. ಬೋರ್ಡಿಂಗ್ ಪ್ರದೇಶದಲ್ಲಿ ಸಿಲುಕಿರುವ ಹಿರಿಯ ನಾಗರಿಕರಿಗೆ ಮನೆಗೆ ಹೋಗಲು ಅವಕಾಶ ನೀಡುವಂತೆ ಆಗ್ರಹಿಸಿದ್ದಾರೆ. ಅನೇಕ ಪ್ರಯಾಣಿಕರು ಪೋಸ್ಟ್ ಮಾಡಿದ ದೃಶ್ಯಗಳಲ್ಲಿ ಮಕ್ಕಳು ಸೇರಿದಂತೆ ಹಿರಿಯ ನಾಗರಿಕರು ನೆಲದ ಮೇಲೆ ಕುಳಿತಿರುವುದನ್ನು ಕಂಡು ಬಂದಿದೆ.

ಇದನ್ನೂ ಓದಿ: Air India: ನಿಯಮ ಉಲ್ಲಂಘಿಸಿದ ಏರ್‌ ಇಂಡಿಯಾಕ್ಕೆ ಬಿತ್ತು ಭಾರೀ ದಂಡ

ಕೆಲವು ತಿಂಗಳ ಹಿಂದೆ ಇಂತಹದ್ದೇ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿತ್ತು. ಬೆಂಗಳೂರಿಗೆ ಡಿ. 23ರ ರಾತ್ರಿ 8.15ಕ್ಕೆ ಮಂಗಳೂರಿನಿಂದ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನ ಕೊನೇ ಕ್ಷಣದಲ್ಲಿ ರದ್ದಾಗಿತ್ತು. ಇದರಿಂದ ಪ್ರಯಾಣಿಕರು ಆಕ್ರೋಶಗೊಂಡಿದ್ದು, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಕೆಂಜಾರಿನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾತ್ರಿ 8.15ಕ್ಕೆ ಏರ್ ಇಂಡಿಯಾ ವಿಮಾನ ಬೆಂಗಳೂರಿಗೆ ಹೊರಡಬೇಕಿತ್ತು. ಆದರೆ ವಿಮಾನ ಬಾರದ ಕಾರಣದಿಂದ ಆಕ್ರೋಶಗೊಂಡಿದ್ದರು. ಅಮೆರಿಕಕ್ಕೆ ಪ್ರಯಾಣ ಬೆಳೆಸಬೇಕಿದ್ದವರು, ಪರೀಕ್ಷೆ ಬರೆಯಲು ಹೊರಟವರು ಹಾಗೂ ಕ್ರಿಸ್ಮಸ್ ಹಬ್ಬಕ್ಕೆ ತೆರಳುತ್ತಿದ್ದ ಪ್ರಯಾಣಿಕರು ವಿಮಾನ ಬಾರದ ಕಾರಣ ಮಂಗಳೂರು ವಿಮಾನ ನಿಲ್ದಾಣದಲ್ಲೇ ಬಾಕಿ ಆಗಿದ್ದರು. ರಾತ್ರಿ 8.15ಕ್ಕೆ ಹೊರಡಬೇಕಿದ್ದ ವಿಮಾನಕ್ಕಾಗಿ ಬಂದಿದ್ದ ಪ್ರಯಾಣಿಕರು ಬದಲಿ ವ್ಯವಸ್ಥೆಗಾಗಿ ವಿಮಾನ ನಿಲ್ದಾಣದಲ್ಲಿಯೇ ನಡುರಾತ್ರಿಯವರೆಗೆ ಕಾದು ಕುಳಿತು ಬಳಿಕ ಪ್ರಯಾಣಿಸಿದ್ದರು.

Continue Reading

ದೇಶ

PM Narendra Modi: ಕನ್ಯಾಕುಮಾರಿಯಲ್ಲಿ ʼನಮೋʼ- ಪ್ರಧಾನಿ ಮೋದಿಯ 33 ವರ್ಷ ಹಳೆಯ ಫೊಟೋ ವೈರಲ್‌

PM Narendra Modi:ಪ್ರಧಾನಿ ಮೋದಿ ಕನ್ಯಾಕುಮಾರಿಗೆ ಬಂದಿಳಿಯುತ್ತಿದ್ದಂತೆ ಅವರ ಹಳೆಯ ಫೊಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. 1991ರಲ್ಲಿ ನರೇಂದ್ರ ಮೋದಿ, ಅಂದಿನ ಬಿಜೆಪಿ ನಾಯಕ ಮುರಳಿ ಮನೋಹರ್‌ ಜೋಷಿ(MM Joshi) ಕನ್ಯಾಕುಮಾರಿಗೆ ಭೇಟಿ ನೀಡಿದ್ದ ಫೋಟೋ ವೈರಲ್‌ ಆಗಿದೆ. ಈ 33 ವರ್ಷ ಹಳೆಯದಾದ ಈ ಅದ್ಭುತ ಚಿತ್ರಕ್ಕೆ ನೆಟ್ಟಿಗರಿಂದ ನಾನಾ ರೀತಿಯ ಕಮೆಂಟ್‌ಗಳು ಬಂದಿವೆ.

VISTARANEWS.COM


on

PM Narendra Modi
Koo

ತಮಿಳುನಾಡು: ಲೋಕಸಭೆ ಚುನಾವಣೆ(Lok Sabha Election 2024)ಯ ಕೊನೆಯ ಹಂತ ಮತದಾನದ ಬಹಿರಂಗ ಪ್ರಚಾರ ಕೊನೆಗೊಳ್ಳುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ವಾಡಿಕೆಯಂತೆ ಪ್ರಯಾಣವನ್ನು ಕೈಗೊಂಡಿದ್ದು, ನಿನ್ನೆ ಸಂಜೆಯಿಂದಲೇ ಕನ್ಯಾಕುಮಾರಿ(Kanyakumari)ಯ ವಿವೇಕಾನಂದ ಕಲ್ಲಿನ ಸ್ಮಾರಕ(Vivekananda Rock Memorial)ದಲ್ಲಿ ಧ್ಯಾನ ಆರಂಭಿಸಿದ್ದಾರೆ. ಪ್ರಧಾನಿ ಮೋದಿ ಕನ್ಯಾಕುಮಾರಿಗೆ ಬಂದಿಳಿಯುತ್ತಿದ್ದಂತೆ ಅವರ ಹಳೆಯ ಫೊಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. 1991ರಲ್ಲಿ ನರೇಂದ್ರ ಮೋದಿ, ಅಂದಿನ ಬಿಜೆಪಿ ನಾಯಕ ಮುರಳಿ ಮನೋಹರ್‌ ಜೋಷಿ(MM Joshi) ಕನ್ಯಾಕುಮಾರಿಗೆ ಭೇಟಿ ನೀಡಿದ್ದ ಫೋಟೋ ವೈರಲ್‌ ಆಗಿದೆ.

ಈ 33 ವರ್ಷ ಹಳೆಯದಾದ ಈ ಅದ್ಭುತ ಚಿತ್ರಕ್ಕೆ ನೆಟ್ಟಿಗರಿಂದ ನಾನಾ ರೀತಿಯ ಕಮೆಂಟ್‌ಗಳು ಬಂದಿವೆ. ಡಿ. 11, 1991 ರಂದು ಬಿಜೆಪಿ ಕೈಗೊಂಡಿದ್ದ ಏಕತಾ ಯಾತ್ರೆ ಕನ್ಯಾಕುಮಾರಿಯಿಂದ ಶುರುವಾಗಿ ಕಾಶ್ಮೀರದಲ್ಲಿ ಮುಕ್ತಾಗೊಂಡಿತ್ತು. ಈ ಯಾತ್ರೆಯಲ್ಲಿ ನರೇಂದ್ರ ಮೋದಿ, ಮುರಳಿ ಮನೋಹರ್‌ ಜೋಷಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ವಿವೇಕಾನಂದ ಪ್ರತಿಮೆ ಎದುರು ನಿಂತಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ.

ಏನಿದು ಏಕತಾ ಯಾತ್ರೆ?

ಭಯೋತ್ಪಾದನೆ ವಿರುದ್ಧ ಭಾರತ ಬಲಿಷ್ಟವಾಗಿ ನಿಂತಿದೆ ಎಂಬ ಸಂದೇಶವನ್ನು ಪ್ರಪಂಚಕ್ಕೆ ಸಾರುವ ಉದ್ದೇಶದಿಂದ ಬಿಜೆಪಿ ಡಿ. 11, 1991 ರಂದು ಏಕತಾ ಯಾತ್ರೆಯನ್ನು ಆರಂಭಿಸಿತ್ತು. ಈ ಯಾತ್ರೆ ಜ. 26, 1992ರಂದು ಶ್ರೀನಗರದಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಸಮಾಪ್ತಿಯಾಗಿತ್ತು. ಈ ಯಾತ್ರೆಯೂ ಸುಮಾರು 14 ರಾಜ್ಯಗಳಲ್ಲಿ ಸಾಗಿ, ಜನರಲ್ಲಿ ಜಾಗೃತಿ ಮೂಡಿಸಿತ್ತು.

ನಿಗದಿತ ವೇಳಾಪಟ್ಟಿಯ ಪ್ರಕಾರ, ಪ್ರಧಾನಿ ಮೋದಿ ಮೇ 30 ರ ಸಂಜೆಯಿಂದ ಜೂನ್ 1 ರ ಸಂಜೆಯವರೆಗೆ ಧ್ಯಾನ ಮಾಡಲಿದ್ದಾರೆ. ಈ ಎರಡು ದಿನ ಪ್ರವಾಸಿಗರಿಗೆ ಬೀಚ್‌ಗೆ ಹೋಗಲು ಅವಕಾಶವಿಲ್ಲ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಗುರುವಾರದಿಂದ ಶನಿವಾರದವರೆಗೆ ಪ್ರವಾಸಿಗರಿಗೆ ಬೀಚ್ ಮುಚ್ಚಲಾಗುತ್ತದೆ. ಖಾಸಗಿ ದೋಣಿಗಳಿಗೆ ಅಲ್ಲಿಗೆ ಹೋಗಲು ಅನುಮತಿ ಇಲ್ಲ.

ಇದನ್ನೂ ಓದಿ:Prajwal Revanna Case: ಮೇ 31ರಂದೇ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರಲು ಕಾರಣವೇನು? ಇಲ್ಲಿದೆ ಇಂಟರೆಸ್ಟಿಂಗ್‌ ಸ್ಟೋರಿ

Continue Reading

ದೇಶ

Heat Wave: ಬಿಸಿ ಗಾಳಿ ಶಾಖಕ್ಕೆ ತತ್ತರಿಸಿದ ಬಿಹಾರ; ಎರಡೇ ಗಂಟೆಗಳಲ್ಲಿ 16 ಮಂದಿ ಸಾವು

Heat Wave: ತೀವ್ರ ಬಿಸಿ ಗಾಳಿಗೆ ತುತ್ತಾಗಿ ಅಸ್ವಸ್ಥಗೊಂಡಿರುವ 35 ಕ್ಕೂ ಅಧಿಕ ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ದುರಾದೃಷ್ಟವಶಾತ್‌ 16ಕ್ಕೂ ಅಧಿಕ ಜನ ಬಿಸಿಗಾಳಿ ಶಾಖಕ್ಕೆ ಬಲಿಯಾಗಿದ್ದಾರೆ. ಉಳಿದವರಿಗೆ ಚಿಕಿತ್ಸೆ ಮುಂದುವರೆದಿದೆ. ನಮ್ಮ ಸಾಕಷ್ಟು ತಜ್ಞ ವೈದ್ಯರಿದ್ದಾರೆ. ಔಷಧ, ಐಸ್‌ ಪ್ಯಾಕ್‌ ಮತ್ತು ಅನೇಕ ಕೂಲರ್‌ಗಳ ಸೌಲಭ್ಯ ಒದಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

Heat Wave
Koo

ಪಾಟ್ನಾ: ಬಿಹಾರ(Bihar)ದಲ್ಲಿ ಬಿಸಿ ಗಾಳಿ(Heat Wave) ಶಾಖಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಇದೀಗ ಇದರ ಪರಿಣಾಮವಾಗಿ ಕೇವಲ ಎರಡೇ ಗಂಟೆಗಳಲ್ಲಿ ಬಿಸಿಗಾಳಿ ಶಾಖಕ್ಕೆ ಬರೋಬ್ಬರಿ 16 ಜನ ಬಲಿಯಾಗಿದ್ದಾರೆ. ಔರಂಗಾಬಾದ್‌ ಜಿಲ್ಲಾಸ್ಪತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ನಗರದ ಉಷ್ಣಾಂಶ 48.2 ಡಿಗ್ರಿಗೆ ಏರಿಕೆ ಆಗಿದೆ. ಇದು ಬಿಹಾರದಲ್ಲೇ ಅತಿ ಹೆಚ್ಚ ಉಷ್ಣಾಂಶ ಹೊಂದಿರುವ ನಗರವಾಗಿದೆ.

ಈ ಕುರಿತು ಔರಂಗಾಬಾದ್‌ ಜಿಲ್ಲಾಸ್ಪತ್ರೆ ವೈದ್ಯರು ಪ್ರತಿಕ್ರಿಯಿಸಿದ್ದು, ತೀವ್ರ ಬಿಸಿ ಗಾಳಿಗೆ ತುತ್ತಾಗಿ ಅಸ್ವಸ್ಥಗೊಂಡಿರುವ 35 ಕ್ಕೂ ಅಧಿಕ ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ದುರಾದೃಷ್ಟವಶಾತ್‌ 16ಕ್ಕೂ ಅಧಿಕ ಜನ ಬಿಸಿಗಾಳಿ ಶಾಖಕ್ಕೆ ಬಲಿಯಾಗಿದ್ದಾರೆ. ಉಳಿದವರಿಗೆ ಚಿಕಿತ್ಸೆ ಮುಂದುವರೆದಿದೆ. ನಮ್ಮ ಸಾಕಷ್ಟು ತಜ್ಞ ವೈದ್ಯರಿದ್ದಾರೆ. ಔಷಧ, ಐಸ್‌ ಪ್ಯಾಕ್‌ ಮತ್ತು ಅನೇಕ ಕೂಲರ್‌ಗಳ ಸೌಲಭ್ಯ ಒದಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಸಿಗಾಳಿ ಸಮಸ್ಯೆಯಿಂದಾಗಿ ಮುಂಜಾಗೃತಾ ಕ್ರಮವಾಗಿ ಬಿಹಾರ ಸರ್ಕಾರ ಎಲ್ಲಾ ಶಾಲಾ ಕಾಲೇಜುಗಳನ್ನು ಜೂ.8ರವರೆಗೆ ತಾತ್ಕಾಲಿಕವಾಗಿ ಮುಚ್ಚಿದೆ. ಕೆಲವು ದಿನಗಳಿಂದ ಶಾಲೆಗಳಲ್ಲಿ ಬಿಸಿ ಗಾಳಿ ಶಾಖಕ್ಕೆ ವಿದ್ಯಾರ್ಥಿಗಳು ಪ್ರಜ್ಞೆ ತಪ್ಪಿ ಬೀಳುತ್ತಿರುವ ಘಟನೆ ವರದಿ ಆಗಿತ್ತು. ಇದರ ಬೆನ್ನಲ್ಲೇ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಬಿಹಾರದ ಶೇಖ್‌ಪುರದ ಹಲವಾರು ಶಾಲಾ ವಿದ್ಯಾರ್ಥಿಗಳು ಪ್ರಜ್ಞೆ ತಪ್ಪಿದ್ದು, ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳೀಯವಾಗಿ ಮಂಗಳವಾರ ಗರಿಷ್ಠ ತಾಪಮಾನ 42.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮಕ್ಕಳು ಪ್ರಜ್ಞೆ ತಪ್ಪಿರುವ ವೀಡಿಯೊಗಳು ವೈರಲ್ ಆಗಿದ್ದು, ಶಾಲೆಯ ವಿದ್ಯಾರ್ಥಿಗಳು ತುಂಬಾ ದಣಿದಿದ್ದಾರೆ ಎಂದು ಕಂಡುಬಂದಿದೆ. ಶಿಕ್ಷಕರು ಅವರಿಗೆ ನೀರು ಒದಗಿಸುವ ಮೂಲಕ ಮತ್ತು ಅವರಿಗೆ ಗಾಳಿ ಬೀಸುವ ಮೂಲಕ ಸಹಾಯ ಮಾಡಲು ಪ್ರಯತ್ನಿಸಿದರು. ನಂತರ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರಿಗೆ ಸಲೈನ್ ಚುಚ್ಚುಮದ್ದು ನೀಡಲಾಗಿದೆ. ಇನ್ನು ವಿದ್ಯಾರ್ಥಿಗಳು ಮಾತ್ರವಲ್ಲದೇ ಶಿಕ್ಷಕರೂ ಬಿಸಿಗಾಳಿಯ ತಾಪಮಾನಕ್ಕೆ ಪ್ರಜ್ಞೆ ತಪ್ಪಿ ಬೀಳುತ್ತಿರುವ ಘಟನೆಯೂ ವರದಿ ಆಗಿದೆ.

ಇದನ್ನೂ ಓದಿ:Delhi Temperature: ದೆಹಲಿಯಲ್ಲಿ 52 ಡಿಗ್ರಿ ಸೆಲ್ಸಿಯಸ್‌ ತಾಪಮಾನ; ದೇಶದಲ್ಲೇ ಇದುವರೆಗಿನ ಗರಿಷ್ಠ ಟೆಂಪರೇಚರ್!

Continue Reading
Advertisement
theft Case
ಕ್ರೈಂ1 min ago

Theft Case : ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು; ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರ ಕೈಚಳಕ

bhavani revanna sit notice
ಕ್ರೈಂ4 mins ago

Bhavani Revanna: ʼತನಿಖೆ ಬೇಕಿದ್ರೆ ಮನೆಗೇ ಬನ್ನಿʼ ಎಂದ ಭವಾನಿ ರೇವಣ್ಣ; ʼಆಯ್ತು ಅಲ್ಲಿಗೇ ಬರ್ತೀವಿʼ ಎಂದ ಎಸ್‌ಐಟಿ!

Gold Smuggling
ದೇಶ10 mins ago

Gold Smuggling: ಗುದನಾಳದಲ್ಲಿ 1ಕೆಜಿ ಚಿನ್ನ; ಕೇರಳದಲ್ಲಿ ಗಗನಸಖಿ ಅರೆಸ್ಟ್‌

prajwal Revanna Case
ಪ್ರಮುಖ ಸುದ್ದಿ10 mins ago

Prajwal Revanna Case : ಪ್ರಜ್ವಲ್​ನನ್ನು ಮಹಿಳಾ ಪೊಲೀಸ್ ಸಿಬ್ಬಂದಿಯೇ ಬಂಧಿಸಿದ್ದು ಯಾಕೆ?

India women’s squad
ಕ್ರೀಡೆ18 mins ago

India women’s squad: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ಮಹಿಳಾ ತಂಡ ಪ್ರಕಟ; ತಂಡಕ್ಕೆ ಮರಳಿದ ಪ್ರಿಯಾ ಪೂನಿಯಾ

Maharaja trailer released Vijay Sethupathi has a secret
ಟಾಲಿವುಡ್21 mins ago

Maharaja Trailer: ವಿಜಯ್‌ ಸೇತುಪತಿ 50ನೇ ಚಿತ್ರದ ʻಮಹಾರಾಜʼ ಟ್ರೈಲರ್‌ ಔಟ್‌: ಫ್ಯಾನ್ಸ್‌ ಫಿದಾ!

Huligemma Temple Road Accident
ಕೊಪ್ಪಳ38 mins ago

Huligemma Temple : ಹುಲಿಗೆಮ್ಮ ದೇವಿ ಜಾತ್ರೆಗೆ ಹೊರಟಿದ್ದ ಪಾದಯಾತ್ರಿ ಮೇಲೆ ಹರಿದ ಲಾರಿ; ಓರ್ವ ಸಾವು, ಮತ್ತೋರ್ವ ಗಂಭೀರ

Viral Video
ವೈರಲ್ ನ್ಯೂಸ್50 mins ago

Viral Video: ಬೆಂಕಿ ದುರಂತ ಸ್ಥಳದಲ್ಲಿ ಜಮಾಯಿಸಿದ್ದ ಜನ; ಆಮೇಲೆ ನಡೆದಿದ್ದೇ ಬೇರೆ- ವಿಡಿಯೋ ನೋಡಿ

back benchers Movie Kannada song
ಸ್ಯಾಂಡಲ್ ವುಡ್54 mins ago

Kannada New Movie: ಹಾಡಿನ ಮೂಲಕ ಸದ್ದು ಮಾಡ್ತಿದೆ ʻಬ್ಯಾಕ್ ಬೆಂಚರ್ಸ್ʼ ಸಿನಿಮಾ!

valmiki corporation scam self harming chandrashekar ವಾಲ್ಮೀಕಿ
ಪ್ರಮುಖ ಸುದ್ದಿ58 mins ago

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ತನಿಖೆಗೆ ಎಸ್‌ಐಟಿ? ಸಿಬಿಐ ತನಿಖೆ ತಪ್ಪಿಸಲು ಪ್ಲಾನ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ22 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌