Google | ಚೀನಾದಿಂದ ಭಾರತಕ್ಕೆ ಪಿಕ್ಸೆಲ್‌ ಸ್ಮಾರ್ಟ್‌ಫೋನ್ ಉತ್ಪಾದನಾ ಘಟಕ ಸ್ಥಳಾಂತರಕ್ಕೆ ಗೂಗಲ್‌ ಚಿಂತನೆ - Vistara News

ಪ್ರಮುಖ ಸುದ್ದಿ

Google | ಚೀನಾದಿಂದ ಭಾರತಕ್ಕೆ ಪಿಕ್ಸೆಲ್‌ ಸ್ಮಾರ್ಟ್‌ಫೋನ್ ಉತ್ಪಾದನಾ ಘಟಕ ಸ್ಥಳಾಂತರಕ್ಕೆ ಗೂಗಲ್‌ ಚಿಂತನೆ

ಗೂಗಲ್‌ ಈಗಾಗಲೇ 5-10 ಲಕ್ಷ ಪಿಕ್ಸೆಲ್ ಸ್ಮಾರ್ಟ್‌ಫೋನ್‌ಗಳನ್ನು ಉತ್ಪಾದಿಸಲು ಭಾರತದ ಕಂಪನಿಗಳಿಂದ (Google) ಬಿಡ್‌ಗಳನ್ನು ಆಹ್ವಾನಿಸಿದೆ ಎಂದು ವರದಿಯಾಗಿದೆ.

VISTARANEWS.COM


on

Google has to Rs 1337 crore within 30 days, Say Tribunal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಅಮೆರಿಕ ಮತ್ತು ಚೀನಾ ನಡುವೆ ವ್ಯಾಪಾರ ಸಂಘರ್ಷ, ಕೋವಿಡ್‌ ಬಿಕ್ಕಟ್ಟು ಸೃಷ್ಟಿಸಿರುವ ಸಂಕೀರ್ಣ ಸವಾಲುಗಳ ಹಿನ್ನೆಲೆಯಲ್ಲಿ ತಂತ್ರಜ್ಞಾನ ದಿಗ್ಗಜ ಗೂಗಲ್‌ (Google) ತನ್ನ ಪಿಕ್ಸೆಲ್‌ ಸ್ಮಾರ್ಟ್‌ಫೋನ್‌ಗಳ ಉತ್ಪಾದನಾ ಘಟಕದ ಕೆಲ ಭಾಗಗಳನ್ನು ಚೀನಾದಿಂದ ಭಾರತಕ್ಕೆ ಸ್ಥಳಾಂತರಿಸಲು ಪರಿಶೀಲಿಸುತ್ತಿದೆ ಎಂದು ವರದಿಯಾಗಿದೆ.

ಗೂಗಲ್‌ 5-10 ಲಕ್ಷ ಪಿಕ್ಸೆಲ್‌ ಸ್ಮಾರ್ಟ್‌ಫೋನ್‌ಗಳನ್ನು ಉತ್ಪಾದಿಸಲು ಭಾರತೀಯ ಮೂಲದ ಕಂಪನಿಗಳಿಂದ ಬಿಡ್‌ಗಳನ್ನು ಆಹ್ವಾನಿಸಿದೆ. ಅಂದರೆ ಗೂಗಲ್‌ನ ಪಿಕ್ಸೆಲ್‌ ಫೋನ್‌ಗಳ ಒಟ್ಟು ವಾರ್ಷಿಕ ಉತ್ಪಾದನೆಯಲ್ಲಿ 10-20% ಪಾಲು ಇದಾಗಿದೆ. ಸ್ಥಳೀಯವಾಗಿ ಕಚ್ಚಾ ವಸ್ತುಗಳನ್ನು ಖರೀದಿಸುವ ಬಗ್ಗೆ ಭಾರತೀಯ ಉತ್ಪಾದಕರಿಂದ ವಿವರಗಳನ್ನೂ ಗೂಗಲ್‌ ಪಡೆದಿದೆ.

ಅಮೆರಿಕ ಮತ್ತು ಚೀನಾದ ನಡುವೆ ವಾಣಿಜ್ಯ ಸಂಘರ್ಷ ಏರ್ಪಟ್ಟಿರುವುದರಿಂದ ಹಾಗೂ ಅಲ್ಲಿ ಕೋವಿಡ್‌ ನಿರ್ಬಂಧಗಳು ಮುಂದುವರಿದಿರುವುದರಿಂದ ಗೂಗಲ್‌ಗೆ ಚೀನಾದಲ್ಲಿ ಪಿಕ್ಸೆಲ್‌ ಸ್ಮಾರ್ಟ್‌ ಫೋನ್‌ಗಳ ಉತ್ಪಾದನೆಗೆ ಅಡಚಣೆ ಉಂಟಾಗಿದೆ. ಹೀಗಾಗಿ ತನ್ನ ಘಟಕದ ಕೆಲ ಭಾಗಗಳನ್ನು ಭಾರತಕ್ಕೆ ಸ್ಥಳಾಂತರಿಸಲು ಉದ್ದೇಶಿಸಿದೆ ಎಂದು ವರದಿಯಾಗಿದೆ. ಸ್ಮಾರ್ಟ್‌ಫೋನ್‌ ಸ್ಕ್ರೀನ್‌ ಗಳನ್ನೂ ಭಾರತದಿಂದ ಖರೀದಿಸಲು ನಿರ್ಧರಿಸಿದೆ. ಹೀಗಿದ್ದರೂ, ಚೀನಾ ಕೂಡ ಗೂಗಲ್‌ ಯೋಜನೆಗೆ ನಿರ್ಣಾಯಕವಾಗಿದೆ.

ಸೆಮಿಕಂಡಕ್ಟರ್‌ಗಳಿಗೆ ಸಂಬಂಧಿಸಿ ಜಾಗತಿಕ ಬಿಕ್ಕಟ್ಟು ಉಂಟಾಗಿರುವುದು ಕೂಡ ಗೂಗಲ್‌ ತನ್ನ ಘಟಕದ ಸ್ಥಳಾಂತರಕ್ಕೆ ಯೋಚಿಸಲು ಕಾರಣಗಳಲ್ಲೊಂದಾಗಿದೆ. ಹೀಗಾಗಿ ಭಾರತಕ್ಕೆ ಉತ್ಪಾದನಾ ಘಟಕದ ಭಾಗಶಃ ಸ್ಥಳಾಂತರದಿಂದ ಗೂಗಲ್‌ಗೆ ಅಮೆರಿಕ-ಚೀನಾ ಸಂಘರ್ಷ ಮುಂದೊಮ್ಮೆ ತೀವ್ರವಾದರೂ, ಉಂಟಾಗುವ ನಷ್ಟ ಭರಿಸಲು ಭಾರತದ ಘಟಕ ಸಹಕಾರಿಯಾಗಲಿದೆ. ವಿಯೆಟ್ನಾಂಗೂ ಘಟಕದ ಭಾಗವನ್ನು ಸ್ಥಳಾಂತರಿಸಲು ಗೂಗಲ್‌ ಪರಿಶೀಲಿಸುತ್ತಿದೆ ಎಂದು ವರದಿಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಗುರಿ ದೊಡ್ಡದಿದೆ, 3ನೇ ಅವಧಿಯ ಆಡಳಿತಕ್ಕೆ ಪ್ಲಾನ್‌ ರೆಡಿ ಇದೆ; ಮೋದಿ ವಿಶ್ವಾಸ

Narendra Modi: ದೇಶದ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅದರನ್ನು ನಾನು ಬಿಡಿಸಿ ಹೇಳಬೇಕಿಲ್ಲ. ನಮ್ಮ ಕೈ ಖಂಡಿತವಾಗಿಯೂ ಮೇಲಾಗಲಿದೆ ಎಂಬುದು ಪ್ರತಿಯೊಬ್ಬರಿಗೂ ತಿಳಿದ ಸಂಗತಿಯಾಗಿದೆ. ಹಾಗಾಗಿ, ನಾವು ಮೂರನೇ ಅವಧಿಯ ಆಡಳಿತಕ್ಕೆ ಸಿದ್ಧವಾಗುತ್ತಿದ್ದೇವೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಗಿದಿದೆ. ಇನ್ನೂ ಮೂರು ಹಂತದ ಮತದಾನ ಬಾಕಿ ಇರುವ ಕಾರಣ ಪ್ರಧಾನಿ ನರೇಂದ್ರ ಮೋದಿ (Narendra Modi), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಸೇರಿ ಎಲ್ಲ ನಾಯಕರು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅವರು ವಿಶ್ವಾಸದ ಮಾತುಗಳನ್ನಾಡಿದ್ದಾರೆ.

“ನಮ್ಮ ಗುರಿ ತುಂಬ ದೊಡ್ಡದಿದೆ. ಇಷ್ಟೊಂದು ದೊಡ್ಡ ದೇಶದಲ್ಲಿ ಜನರ ಯಾರಿಗೆ ಮತ ಹಾಕಬೇಕು ಎಂಬುದನ್ನು ಸುಲಭವಾಗಿ ತೀರ್ಮಾನಿಸುತ್ತಾರೆ. ಜನರಿಗೆ ಇರುವ ಅನುಭವವು ಅವರು ಸುಲಭವಾಗಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ದೇಶದ ಜನರಿಗೆ ಎಲ್ಲವೂ ಗೊತ್ತಿದೆ. ಯಾವುದೇ ಪಕ್ಷ, ವ್ಯಕ್ತಿ ಇರಲಿ, ಜನರು ಯಾರನ್ನು ಗೆಲ್ಲಿಸಬೇಕು ಎಂಬುದನ್ನು ನಿರ್ಧರಿಸುತ್ತಾರೆ. ಹಾಗಾಗಿಯೇ, ನಾವು ಮುಂದಿನ ದಿನಗಳಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಂಡಿದ್ದೇವೆ. ದೇಶದ ಆಡಳಿತ, ಅಭಿವೃದ್ಧಿಯ ನೀಲನಕ್ಷೆ ನಮ್ಮ ಬಳಿ ಇದೆ” ಎಂದು ಮೋದಿ ಹ್ಯಾಟ್ರಿಕ್‌ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

“ದೇಶದ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅದರನ್ನು ನಾನು ಬಿಡಿಸಿ ಹೇಳಬೇಕಿಲ್ಲ. ನಮ್ಮ ಕೈ ಖಂಡಿತವಾಗಿಯೂ ಮೇಲಾಗಲಿದೆ ಎಂಬುದು ಪ್ರತಿಯೊಬ್ಬರಿಗೂ ತಿಳಿದ ಸಂಗತಿಯಾಗಿದೆ. ಹಾಗಾಗಿ, ನಾವು ಮೂರನೇ ಅವಧಿಯ ಆಡಳಿತಕ್ಕೆ ಸಿದ್ಧವಾಗುತ್ತಿದ್ದೇವೆ. ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಏನೆಲ್ಲ ತೀರ್ಮಾನ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಕಾರ್ಯಸೂಚಿಯನ್ನು ಹಾಕಿಕೊಂಡು ಬನ್ನಿ ಎಂಬುದಾಗಿ ನಮ್ಮ ಸಚಿವರಿಗೆ ಸೂಚಿಸಿದ್ದೇನೆ” ಎಂದು ಮೋದಿ ತಿಳಿಸಿದರು.

“ನಮ್ಮ ಮುಂದಿನ ಆಡಳಿತವು ಒಂದು ಪ್ರದೇಶ, ಕೆಲವು ಭಾಗಗಳಿಗೆ ಸೀಮಿತವಾಗಿರುವುದಿಲ್ಲ. ದೊಡ್ಡ ಗುರಿಯನ್ನು ಕ್ಷಿಪ್ರವಾಗಿ ಸಾಧಿಸುವ ಛಲವನ್ನು ನಾವು ಹೊಂದಿದ್ದೇವೆ. ಗುರಿ ದೊಡ್ಡದಾಗಿ ಇಟ್ಟುಕೊಂಡು, ಅದರ ವೇಗಕ್ಕೆ ತಕ್ಕಂತೆ ಮುನ್ನಡೆಯುವುದು ನಮ್ಮ ಉದ್ದೇಶವಾಗಿದೆ. ಗುರಿ, ಉದ್ದೇಶ ಹಾಗೂ ವೇಗದ ಜತೆ ಸಾಗುವುದು ಕೂಡ ಒಂದು ಕೌಶಲವಾಗಿದೆ. ಆ ದಿಸೆಯಲ್ಲಿ ನಾವು ಮಹತ್ವದ ಸಂಗತಿಗಳನ್ನು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ” ಎಂದು ನರೇಂದ್ರ ಮೋದಿ ಹೇಳಿದರು.

ಇದನ್ನೂ ಓದಿ: ಹಿಂದು ಧರ್ಮದ ಆಶಯದಂತೆ ಕಾಂಗ್ರೆಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಎಂದ ಪ್ರಿಯಾಂಕಾ ವಾದ್ರಾ!

Continue Reading

ಕರ್ನಾಟಕ

RCB vs CSK: ಆರ್‌ಸಿಬಿ-ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಮೈದಾನಕ್ಕೆ ನುಗ್ಗುತ್ತೇನೆ ಎಂದಿದ್ದ ಯುವಕ ವಶಕ್ಕೆ

RCB vs CSK: ಆರ್‌ಸಿಬಿ-ಸಿಎಸ್‌ಕೆ ಪಂದ್ಯದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ನುಗ್ಗುತ್ತೇನೆ ಎಂದು ವಿಡಿಯೊ ಮಾಡಿ ಹರಿಬಿಟ್ಟಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

RCB vs CSK
Koo

ಬೆಂಗಳೂರು: ಆರ್‌ಸಿಬಿ ಮತ್ತು ಸಿಎಸ್‌ಕೆ (RCB vs CSK) ನಡುವಿನ ಐಪಿಎಲ್‌ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ನುಗ್ಗುತ್ತೇನೆ ಎಂದು ಹೇಳಿದ್ದ ಯುವಕನನ್ನು ಕಬ್ಬನ್ ಪಾರ್ಕ್ ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ. ಮ್ಯಾಚ್ ವೇಳೆ ಸ್ಟೇಡಿಯಂಗೆ ನುಗ್ಗುವುದಾಗಿ ವಿಡಿಯೊ ಮಾಡಿದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಯುವಕನನ್ನು ವಶಕ್ಕೆ ಪಡೆಯಲಾಗಿದೆ.

ನಿತಿನ್ (24) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಮ್ಯಾಚ್ ವೇಳೆ ಸ್ಟೇಡಿಯಂಗೆ ನುಗ್ಗುವುದಾಗಿ ಯುವಕ ಹೇಳಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಮೇ 18ರಂದು ನಡೆಯುವ ಮ್ಯಾಚ್ ವೇಳೆ ಸ್ಟೇಡಿಯಂಗೆ ನುಗ್ಗುತ್ತೇನೆ ಎಂದು ಯುವಕ ವಿಡಿಯೊದಲ್ಲಿ ಹೇಳಿದ್ದ. ಈ ವಿಡಿಯೊವನ್ನು ಕಬ್ಬನ್‌ ಪಾರ್ಕ್‌ ಪೊಲೀಸರು ಗಮನಿಸಿ ನಿತಿನ್‌ನನ್ನು ವಶಕ್ಕೆ ಪಡೆದಿದ್ದಾರೆ.

ಈ ಹಿಂದೆ ಮಾರ್ಚ್‌ 25ರಂದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಪಂಜಾಬ್‌ ಕಿಂಗ್ಸ್‌ ನಡುವಿನ ಪಂದ್ಯದ ವೇಳೆ ಅಭಿಮಾನಿಯೊಬ್ಬ ಚಿನ್ನಸ್ವಾಮಿ ಮೈದಾನಕ್ಕೆ ನುಗ್ಗಿ ವಿರಾಟ್‌ ಕೊಹ್ಲಿಯ(Virat Kohli) ಕಾಲಿಗೆ ಬಿದ್ದ ಪ್ರಸಂಗ ನಡೆದಿತ್ತು. ಈ ಘಟನೆಯಿಂದ ಪ್ರೇರಣೆಗೊಂಡ ಬೆಂಗಳೂರಿನ ಯುವಕ ನಿತಿನ್‌, ತಾನು ಕೂಡ ಮೈದಾನಕ್ಕೆ ನುಗ್ಗುವುದಾಗಿ ವಿಡಿಯೊದಲ್ಲಿ ಹೇಳಿದ್ದ. ಇದರಿಂದ ಪಂದ್ಯದ ವೇಳೆ ಸಮಸ್ಯೆಯಾಗಬಹುದು ಎಂದು ಕ್ರೀಡಾಂಗಣದ ಸಿಬ್ಬಂದಿ, ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ | RCB vs CSK: ಆರ್​ಸಿಬಿಗೆ ಸಿದ್ದರಾಮಯ್ಯ, ಶಿವಣ್ಣ, ರಿಷಬ್​ ಶೆಟ್ಟಿ, ಗೇಲ್​ ಸೇರಿ ಗಣ್ಯರ ಸಪೋರ್ಟ್​

ಯುವಕನ ವಿಡಿಯೊ ವೈರಲ್‌ ಆದ ಬಳಿಕ ನಿಗಾ ವಹಿಸಿದ್ದ ಪೊಲೀಸರು, ಯುವಕ ಟಿಕೆಟ್‌ ಪಡೆದು ಪಂದ್ಯ ವೀಕ್ಷಿಸಲು ಶನಿವಾರ ಆಗಮಿಸಿದ್ದಾಗ ವಶಕ್ಕೆ ಪಡೆದಿದ್ದಾರೆ.

ವಿರಾಟ್‌ ಕೊಹ್ಲಿಯ ಕಾಲಿಗೆ ಬಿದ್ದಿದ್ದ ಅಭಿಯಾನಿ

ಮಾರ್ಚ್‌ನಲ್ಲಿ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂಗೆ ನುಗ್ಗಿ ವಿರಾಟ್‌ ಕೊಹ್ಲಿಯ(Virat Kohli) ಕಾಲಿಗೆ ಬಿದ್ದ ಅಭಿಯಾನಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪಂದ್ಯದಲ್ಲಿ ಆರ್‌ಸಿಬಿ ಬ್ಯಾಟಿಂಗ್‌ ಆರಂಭಿಸಲು ಸಿದ್ಧತೆ ನಡೆಸುತ್ತಿತ್ತು. ಆಗ ಕೊಹ್ಲಿ ಕ್ರೀಸ್‌ನಲ್ಲಿದ್ದರು. ಅ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ಅಭಿಮಾನಿ ಪಿಚ್‌ ಕಡೆ ಬಂದು ಕೊಹ್ಲಿ ಕಾಲಿಗೆ ಬಿದ್ದು, ಆಲಿಂಗನ ಮಾಡಿದ್ದ. ಕೂಡಲೇ ಎಚ್ಚೆತ್ತುಕೊಂಡ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದು ಮೈದಾನದಿಂದ ಹೊರಹಾಕಿದ್ದರು. ಇದರ ಫೋಟೋ, ವಿಡಿಯೋಗಳು ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ | RCB vs CSK: ಸಿಕ್ಸರ್​ ಮೂಲಕವೂ ದಾಖಲೆ ಬರೆದ ವಿರಾಟ್​ ಕೊಹ್ಲಿ

ರಾಯಚೂರು ಮೂಲದ ವಿರಾಟ್​ ಕೊಹ್ಲಿಯ ಅಪ್ಪಟ ಅಭಿಮಾನಿ ಕುರುಮಪ್ಪ‌ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ, ಅತ ಪೊಲೀಸ್​ ವಿಚಾರಣೆ ವೇಳೆ ತನ್ನ ಮೂಲ ಹೆಸರನ್ನು ಮರೆ ಮಾಚಿ ರಂಜಿತ್ ಎಂದು ಹೇಳಿದ್ದ. ದಾಖಲೆಗಳನ್ನು ಪರಿಶೀಲಿಸುವ ವೇಳೆ ಆತ ರಂಜಿತ್​ ಅಲ್ಲ ಕುರುಮಪ್ಪ‌ ಎಂಬ ವಿಚಾರ ಬೆಳಕಿಗೆ ಬಂದಿತ್ತು. ನಂತರ ಆತನ ವಿರುದ್ಧ ಎಫ್ಐಆರ್ ದಾಖಲಿಸಿ ಕರ್ತವ್ಯಕ್ಕೆ ಅಡ್ಡಿ, ಮೈದಾನಕ್ಕೆ ಅತಿಕ್ರಮಣ ಪ್ರವೇಶದಡಿ ಕೇಸ್ ದಾಖಲಿಸಲಾಗಿತ್ತು.

Continue Reading

ಪ್ರಮುಖ ಸುದ್ದಿ

ಹಿಂದು ಧರ್ಮದ ಆಶಯದಂತೆ ಕಾಂಗ್ರೆಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಎಂದ ಪ್ರಿಯಾಂಕಾ ವಾದ್ರಾ!

ಸ್ವಾತಂತ್ರ್ಯ ಹೋರಾಟದ ವೇಳೆ ದೇಶಕ್ಕಾಗಿ ಎಲ್ಲರೂ ತ್ಯಾಗ ಮಾಡಿದರು. ಜವಾಹರ ಲಾಲ್‌ ನೆಹರು ಸೇರಿ ಹಲವು ನಾಯಕರು 13-14 ವರ್ಷ ಜೈಲು ಶಿಕ್ಷೆ ಅನುಭವಿಸಿದರು. ಮಹಾತ್ಮ ಗಾಂಧೀಜಿ ಅವರಿಗೆ ಗುಂಡು ತಗುಲಿ, ಅವರು ಇನ್ನೇನು ಪ್ರಾಣ ಬಿಡಬೇಕು ಎನ್ನುವ ಮೊದಲು, ಅವರು ಹೇ ರಾಮ್‌ ಎಂದು ಹೇಳಿದ್ದರು ಎಂಬುದಾಗಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಆ ಮೂಲಕ ಕಾಂಗ್ರೆಸ್‌ ಪಕ್ಷವು ಹಿಂದು ವಿರೋಧಿ ಎನ್ನುವ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

VISTARANEWS.COM


on

Priyanka Vadra
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಧರ್ಮ, ಜಾತಿ, ರಾಮಮಂದಿರ, ಮೀಸಲಾತಿ ಸೇರಿ ಹತ್ತಾರು ವಿಷಯಗಳು ಮುನ್ನೆಲೆಗೆ ಬಂದಿವೆ. ಅದರಲ್ಲೂ, ಕಾಂಗ್ರೆಸ್‌ ಹಿಂದು ವಿರೋಧಿ ಎಂಬುದಾಗಿ ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ (Priyanka Vadra) ತಿರುಗೇಟು ನೀಡಿದ್ದಾರೆ. “ಮಹಾತ್ಮ ಗಾಂಧೀಜಿ (Mahatma Gandhi) ಅವರು ಕೊನೆಯುಸಿರೆಳೆಯುವ ಮೊದಲೂ ಹೇ ರಾಮ್‌ ಎಂದಿದ್ದರು. ಕಾಂಗ್ರೆಸ್‌ ಹೇಗೆ ಹಿಂದು ವಿರೋಧಿಯಾಗುತ್ತದೆ? ಹಾಗೆಯೇ, ಹಿಂದು ಧರ್ಮದ ಆಶಯಗಳಂತೆ ಸ್ವಾತಂತ್ರ್ಯ ಹೋರಾಟ ಮಾಡಲಾಗಿದೆ” ಎಂದಿದ್ದಾರೆ.

ಇಂಡಿಯಾ ಟುಡೇಗೆ ಸಂದರ್ಶನ ನೀಡಿದ ವೇಳೆ ಅವರು ಈ ರೀತಿಯ ಪ್ರಸ್ತಾಪ ಮಾಡಿದ್ದಾರೆ. “ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಕಾಂಗ್ರೆಸ್‌ ಹಿಂದು ವಿರೋಧಿ ಎಂಬಂತೆ ಬ್ರ್ಯಾಂಡ್‌ ಮಾಡಲಾಗುತ್ತಿದೆ. ಅಷ್ಟಕ್ಕೂ ನಮ್ಮ ಪಕ್ಷದ ದೊಡ್ಡ ನಾಯಕ ಯಾರು? ಮಹಾತ್ಮ ಗಾಂಧೀಜಿ ಅವರು ನಮ್ಮ ಪಕ್ಷದ ಧುರೀಣರು. ಸತ್ಯ ಹಾಗೂ ಅಹಿಂಸೆಯ ಆಧಾರದ ಮೇಲೆ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಯಿತು. ಸತ್ಯಮೇವ ಜಯತೆ ಎಂಬ ತತ್ವದಂತೆ ಹೋರಾಟ ಮಾಡಲಾಯಿತು. ಹಿಂದು ಧರ್ಮದ ಬೋಧನೆ, ಆಶಯಗಳಂತೆ ಹೋರಾಟ ಮಾಡಲಾಯಿತು” ಎಂದು ಹೇಳಿದರು.

“ಸ್ವಾತಂತ್ರ್ಯ ಹೋರಾಟದ ವೇಳೆ ದೇಶಕ್ಕಾಗಿ ಎಲ್ಲರೂ ತ್ಯಾಗ ಮಾಡಿದರು. ಜವಾಹರ ಲಾಲ್‌ ನೆಹರು ಸೇರಿ ಹಲವು ನಾಯಕರು 13-14 ವರ್ಷ ಜೈಲು ಶಿಕ್ಷೆ ಅನುಭವಿಸಿದರು. ಮಹಾತ್ಮ ಗಾಂಧೀಜಿ ಅವರಿಗೆ ಗುಂಡು ತಗುಲಿ, ಅವರು ಇನ್ನೇನು ಪ್ರಾಣ ಬಿಡಬೇಕು ಎನ್ನುವ ಮೊದಲು, ಅವರು ಹೇ ರಾಮ್‌ ಎಂದು ಹೇಳಿದ್ದರು. ಇಷ್ಟೆಲ್ಲ ಇರುವಾಗ ಕಾಂಗ್ರೆಸ್‌ ಹೇಗೆ ಹಿಂದು ವಿರೋಧಿಯಾಗುತ್ತದೆ? ಖಂಡಿತವಾಗಿಯೂ ನಾವು ಹಿಂದು ವಿರೋಧಿಗಳು ಅಲ್ಲ. ರಾಹುಲ್‌ ಗಾಂಧಿ ಅವರು ಬೇರೆಯವರಿಗಿಂತ ಹಿಂದುತ್ವವನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ” ಎಂದು ಸಂದರ್ಶನದ ವೇಳೆ ಪ್ರಿಯಾಂಕಾ ವಾದ್ರಾ ಸ್ಪಷ್ಟಪಡಿಸಿದ್ದಾರೆ.

ಅಯೋಧ್ಯೆಯ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ತೆರಳದಿರುವ ಕುರಿತು ಬಿಜೆಪಿ ಆರೋಪಗಳ ಬಗೆಗಿನ ಪ್ರಶ್ನೆಗೂ ಪ್ರಿಯಾಂಕಾ ವಾದ್ರಾ ಉತ್ತರಿಸಿದರು. “ಬಿಜೆಪಿಯು ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಹ್ವಾನ ಪಡೆಯಿತು. ಇದಾದ ಬಳಿಕ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮವನ್ನು ರಾಜಕೀಯ ಕಾರಣಗಳಿಗಾಗಿ ಬಳಸಿಕೊಳ್ಳಲಾಯಿತು. ಹಾಗಾಗಿ, ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಹೋಗದಿರುವುದು ತಪ್ಪು ನಿರ್ಧಾರ ಎಂಬುದಾಗಿ ಹೇಳಲು ಆಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು. “ದೇಶದಲ್ಲಿ ಧರ್ಮ ಸೇರಿ ಹಲವು ಸೂಕ್ಷ್ಮ ವಿಚಾರಗಳನ್ನು ಬಿಜೆಪಿ, ನರೇಂದ್ರ ಮೋದಿ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಆದರೆ, ಧರ್ಮರಹಿತವಾಗಿ ಎಲ್ಲರಿಗೂ ಯೋಜನೆಗಳನ್ನು ಕಲ್ಪಿಸುವುದು ಕಾಂಗ್ರೆಸ್‌ ಗ್ಯಾರಂಟಿಯಾಗಿದೆ” ಎಂದರು.

ಇದನ್ನೂ ಓದಿ: Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

Continue Reading

ದೇಶ

Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

Kangana Ranaut: ಕಂಗನಾ ರಣಾವತ್‌ ಅವರ ಬಹುನಿರೀಕ್ಷಿತ ಸಿನಿಮಾ ಎಮರ್ಜನ್ಸಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ತಾವೇ ನಿರ್ದೇಶಿಸಿದ ಸಿನಿಮಾದಲ್ಲಿ ಕಂಗನಾ ರಣಾವತ್‌ ಅವರು ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಘೋಷಿಸಿದರೂ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಇದರ ಬೆನ್ನಲ್ಲೇ ಅವರು, ಚುನಾವಣೆಯಲ್ಲಿ ಗೆದ್ದರೆ ನಟನೆ ಬಿಡುವುದಾಗಿ ಘೋಷಿಸಿದ್ದಾರೆ.

VISTARANEWS.COM


on

Kangana Ranaut
Koo

ನವದೆಹಲಿ: ಬಾಲಿವುಡ್‌ ನಟಿ ಕಂಗನಾ ರಣಾವತ್‌ (Kangana Ranaut) ಅವರು ರಾಜಕೀಯಕ್ಕೆ ಧುಮುಕಿದ್ದು, ಹಿಮಾಚಲ ಪ್ರದೇಶದ (Himachal Pradesh) ಮಂಡಿ (Mandi) ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಜೂನ್‌ 1ರಂದು ಮಂಡಿ ಕ್ಷೇತ್ರದಲ್ಲಿ ಮತದಾನ (Lok Sabha Election 2024) ನಡೆಯುವ ಕಾರಣ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಬೆನ್ನಲ್ಲೇ, ಕಂಗನಾ ರಣಾವತ್‌ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ನಾನು ಗೆದ್ದರೆ ನಟನೆಯನ್ನು ಬಿಟ್ಟುಬಿಡುತ್ತೇನೆ” ಎಂಬುದಾಗಿ ಹೇಳಿದ್ದಾರೆ.

ಆಜ್‌ ತಕ್‌ ಸುದ್ದಿವಾಹಿನಿಗೆ ಸಂದರ್ಶನ ನೀಡುವ ವೇಳೆ ಕಂಗನಾ ರಣಾವತ್‌ ಅವರು ಈ ಘೋಷಣೆ ಮಾಡಿದ್ದಾರೆ. “ನೀವು ಮಂಡಿ ಲೋಕಸಭೆಯಲ್ಲಿ ಗೆಲುವು ಸಾಧಿಸಿದರೆ ಏನೆಲ್ಲ ಮಾಡುತ್ತೀರಿ” ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಹೌದು, ಮಂಡಿಯಲ್ಲಿ ಗೆಲುವು ಸಾಧಿಸಿದ ಬಳಿಕ ನಾನು ಸಿನಿಮಾಗಳಲ್ಲಿ ನಟಿಸುವುದಿಲ್ಲ. ಆದರೆ, ನಮ್ಮ ಬಳಿ ತುಂಬ ಒಳ್ಳೆಯ ನಟಿ ಇದ್ದಾರೆ. ದಯಮಾಡಿ ನೀವು ಬಿಟ್ಟು ಹೋಗಬೇಡಿ ಎಂಬುದಾಗಿ ಹೆಚ್ಚಿನ ನಿರ್ದೇಶಕರು ಹೇಳುತ್ತಾರೆ. ಹೌದು, ನಾನೊಬ್ಬ ಒಳ್ಳೆ ನಟಿ ನಿಜ. ಇದೇ ಮೆಚ್ಚುಗೆಯನ್ನು ಸ್ವೀಕರಿಸಿ ನಾನು ಮುಂದೆ ಹೋಗುತ್ತೇನೆ” ಎಂದು ತಿಳಿಸಿದ್ದಾರೆ. ಆ ಮೂಲಕ ಬಾಲಿವುಡ್‌, ನಟನೆ ತ್ಯಜಿಸುವುದನ್ನು ಅವರು ದೃಢಪಡಿಸಿದ್ದಾರೆ.

ಕಂಗನಾ ರಣಾವತ್‌ ಅವರ ಬಹುನಿರೀಕ್ಷಿತ ಸಿನಿಮಾ ಎಮರ್ಜನ್ಸಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ತಾವೇ ನಿರ್ದೇಶಿಸಿದ ಸಿನಿಮಾದಲ್ಲಿ ಕಂಗನಾ ರಣಾವತ್‌ ಅವರು ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಘೋಷಿಸಿದರೂ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಪಂಗಾ, ಮಣಿಕರ್ಣಿಕಾ: ದಿ ಕ್ವೀನ್‌ ಆಫ್‌ ಜಾನ್ಸಿ, ಜಡ್ಜ್‌ಮೆಂಟಲ್‌ ಹೈ ಕ್ಯಾ, ತನು ವೆಡ್ಸ್‌ ಮನು ರಿಟರ್ನ್ಸ್‌ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇವರು ಅಭಿನಯದ ತಲೈವಿ ಸಿನಿಮಾಗೆ ಭಾರಿ ಮೆಚ್ಚುಗೆಯೂ ವ್ಯಕ್ತವಾಗಿತ್ತು.

91 ಕೋಟಿ ರೂ. ಆಸ್ತಿಗೆ ಒಡತಿ

ಮಂಡಿ ಲೋಕಸಭೆ ಕ್ಷೇತ್ರದಲ್ಲಿ ಕಂಗನಾ ರಣಾವತ್‌ ಅವರು ನಾಮಪತ್ರ ಸಲ್ಲಿಸಿದ್ದಾರೆ. ಇವರು ಚುನಾವಣಾ ಅಫಿಡವಿಟ್ ನಲ್ಲಿ 91 ಕೋಟಿ ರೂ.ಗಳ ಆಸ್ತಿಯನ್ನು ಘೋಷಿಸಿದ್ದಾರೆ. ಅವರ ಆಸ್ತಿಯಲ್ಲಿ 28.7 ಕೋಟಿ ರೂ.ಗಳ ಚರಾಸ್ತಿ ಮತ್ತು 62.9 ಕೋಟಿ ರೂ.ಗಳ ಸ್ಥಿರಾಸ್ತಿ ಸೇರಿವೆ. ಅವರ ಬಳಿ 5 ಕೋಟಿ ಮೌಲ್ಯದ 6.7 ಕೆಜಿ ಚಿನ್ನ, 50 ಲಕ್ಷ ಮೌಲ್ಯದ 60 ಕೆಜಿ ಬೆಳ್ಳಿ, 3 ಕೋಟಿ ಮೌಲ್ಯದ 14 ಕ್ಯಾರೆಟ್ ವಜ್ರದ ಆಭರಣಗಳಿವೆ. 2 ಲಕ್ಷ ನಗದು ಮತ್ತು ಸುಮಾರು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವುದಾಗಿ ನಟಿ ಹಾಗೂ ರಾಜಕಾರಣಿ ಘೋಷಿಸಿದ್ದಾರೆ.

ಇದನ್ನೂ ಓದಿ: Kangana Ranaut: ಬಾಲಿವುಡ್‌ ʼಕ್ವೀನ್‌ʼ ಕಂಗನಾ ಹೆಸರಿನಲ್ಲಿದೆ 50 ಎಲ್ಐಸಿ ಪಾಲಿಸಿ; ಏಜೆಂಟ್‌ ಅತ್ಯಂತ ಲಕ್ಕಿ ಎಂದ ನೆಟ್ಟಿಗರು

Continue Reading
Advertisement
Narendra Modi
ದೇಶ17 mins ago

Narendra Modi: ಗುರಿ ದೊಡ್ಡದಿದೆ, 3ನೇ ಅವಧಿಯ ಆಡಳಿತಕ್ಕೆ ಪ್ಲಾನ್‌ ರೆಡಿ ಇದೆ; ಮೋದಿ ವಿಶ್ವಾಸ

RCB vs CSK
ಕರ್ನಾಟಕ49 mins ago

RCB vs CSK: ಆರ್‌ಸಿಬಿ-ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಮೈದಾನಕ್ಕೆ ನುಗ್ಗುತ್ತೇನೆ ಎಂದಿದ್ದ ಯುವಕ ವಶಕ್ಕೆ

Bank of Bhagyalakshmi movie poster released
ಸಿನಿಮಾ53 mins ago

Kannada New Movie: ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಔಟ್‌; ಶೀಘ್ರದಲ್ಲೇ ತೆರೆಗೆ

Priyanka Vadra
ಪ್ರಮುಖ ಸುದ್ದಿ1 hour ago

ಹಿಂದು ಧರ್ಮದ ಆಶಯದಂತೆ ಕಾಂಗ್ರೆಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಎಂದ ಪ್ರಿಯಾಂಕಾ ವಾದ್ರಾ!

Kangana Ranaut
ದೇಶ2 hours ago

Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

RCB vs CSK
ಕ್ರೀಡೆ2 hours ago

RCB vs CSK: ಸಿಕ್ಸರ್​ ಮೂಲಕವೂ ದಾಖಲೆ ಬರೆದ ವಿರಾಟ್​ ಕೊಹ್ಲಿ

Lorry Accident
ಕರ್ನಾಟಕ2 hours ago

Lorry Accident: ಕಾರ್ಕಳದಲ್ಲಿ ಲಾರಿ ಪಲ್ಟಿಯಾಗಿ ಇಬ್ಬರು ಕಾರ್ಮಿಕರ ಸಾವು

RCB vs CSK
ಕ್ರೀಡೆ3 hours ago

RCB vs CSK: ಆರ್​ಸಿಬಿಗೆ ಸಿದ್ದರಾಮಯ್ಯ, ಶಿವಣ್ಣ, ರಿಷಬ್​ ಶೆಟ್ಟಿ, ಗೇಲ್​ ಸೇರಿ ಗಣ್ಯರ ಸಪೋರ್ಟ್​

Road Accident
ಕರ್ನಾಟಕ3 hours ago

Road Accident: ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ

Russia Tourism
ಪ್ರವಾಸ3 hours ago

Russia Tourism: ವೀಸಾ ಇಲ್ಲದೆ ಭಾರತೀಯರಿನ್ನು ರಷ್ಯಾಕ್ಕೆ ಭೇಟಿ ನೀಡಬಹುದು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌