D. K. Shivakumar : ರಮ್ಯಾ ಅವರು ನಮ್ಮ ನಾಯಕಿ - Vistara News

ರಾಜಕೀಯ

D. K. Shivakumar : ರಮ್ಯಾ ಅವರು ನಮ್ಮ ನಾಯಕಿ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Asaduddin Owais: ಪ್ರಮಾಣ ವಚನ ಸ್ವೀಕರಿಸಿ ‘ಜೈ ಪ್ಯಾಲೆಸ್ತೀನ್​’ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದು? ಕಾನೂನು ಏನು ಹೇಳುತ್ತದೆ?

Asaduddin Owais: ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಮಂಗಳವಾರ 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ʼಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿದ್ದು, ವಿವಾದ ಎಬ್ಬಿಸಿದೆ. ಓವೈಸಿ ನಡೆಗೆ ಕಿಡಿಕಾರಿರುವ ಬಿಜೆಪಿ ಅವರ ಸದಸ್ಯತ್ವವನ್ನು ರದ್ದುಪಡಿಸಬೇಕೆಂದು ಆಗ್ರಹಿಸಿದೆ. ಹಾಗಾದರೆ ಓವೈಸಿ ಸದಸ್ಯತ್ವ ರದ್ದಾಗುತ್ತ? ಕಾನೂನು ಏನು ಹೇಳುತ್ತದೆ? ಇಲ್ಲಿದೆ ವಿವರ.

VISTARANEWS.COM


on

Asaduddin Owais
Koo

ನವದೆಹಲಿ: ಎಐಎಂಐಎಂ (AIMIM) ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಮಂಗಳವಾರ 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ʼಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿದ್ದು, ವಿವಾದ ಎಬ್ಬಿಸಿದೆ. ಓವೈಸಿ ನಡೆಗೆ ಕಿಡಿಕಾರಿರುವ ಬಿಜೆಪಿ ಅವರ ಸದಸ್ಯತ್ವವನ್ನು ರದ್ದುಪಡಿಸಬೇಕೆಂದು ಆಗ್ರಹಿಸಿದೆ. ಹಾಗಾದರೆ ಓವೈಸಿ ಸದಸ್ಯತ್ವ ರದ್ದಾಗುತ್ತ? ಕಾನೂನು ಏನು ಹೇಳುತ್ತದೆ? ಮುಂತಾದ ಪ್ರಶ್ನೆಗೆ ಇಲ್ಲಿದೆ ಉತ್ತರ.

ಉರ್ದುವಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಓವೈಸಿ ಕೊನೆಗೆ, ‘ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಹೈದರಾಬಾದ್‌ನಿಂದ ಕಣಕ್ಕಿಳಿದಿದ್ದ ಓವೈಸಿ ತಮ್ಮ ಪ್ರಬಲ ಸ್ಪರ್ಧಿ ಬಿಜೆಪಿಯ ಮಾಧವಿ ಲತಾ ಕೊಂಪೆಲ್ಲಾ ಅವರನ್ನು ಸೋಲಿಸಿ ಸತತ ಐದನೇ ಬಾರಿಗೆ ಲೋಕಸಭೆಗೆ ಪ್ರವೇಶಿಸಿದ್ದಾರೆ.

ಸಮರ್ಥಿಸಿಕೊಂಡ ಓವೈಸಿ

ʼಜೈ ಪ್ಯಾಲೆಸ್ತೀನ್​’ ಘೋಷಣೆಗೆ ಬಿಜೆಪಿ ತೀವ್ರ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿದ ಓವೈಸಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಸದನದ ಹೊರಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, “ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್ ಎಂದು ಹೇಳುವುದರಲ್ಲಿ ಯಾವುದೇ ತಪ್ಪಿಲ್ಲʼʼ ಎಂದಿದ್ದಾರೆ. “ಇತರ ಸದಸ್ಯರು ಸಹ ವಿವಿಧ ರೀತಿಯ ಘೋಷಣೆ ಕೂಗುತ್ತಾರೆ. ಅದು ಹೇಗೆ ತಪ್ಪಾಗುತ್ತದೆ? ನಾನು ಏನು ಹೇಳಬೇಕೋ ಅದನ್ನು ಹೇಳಿದೆ. ಪ್ಯಾಲೆಸ್ತೀನ್ ಬಗ್ಗೆ ಮಹಾತ್ಮ ಗಾಂಧಿ ಹೇಳಿದ್ದನ್ನು ಓದಿ” ಎಂದು ಓವೈಸಿ ಹೇಳಿದ್ದಾರೆ.

ಓವೈಸಿ ಅವರ ಪ್ರಮಾಣ ವಚನದ ವಿಡಿಯೊ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಪ್ರಮಾಣ ವಚನ ಸ್ವೀಕರಿಸಲು ವೇದಿಕೆಯತ್ತ ಸಾಗುತ್ತಿದ್ದ ಓವೈಸಿ ಅವರನ್ನು ಬಿಜೆಪಿ ಸಂಸದರು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗುವ ಮೂಲಕ ಪ್ರಚೋದಿಸಿದ್ದಾರೆ ಎಂದು ಕೆಲವರು ಅವರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಯಾವೆಲ್ಲ ಕಾರಣಕ್ಕೆ ಸದಸ್ಯತ್ವ ರದ್ದಾಗುತ್ತದೆ?

ಇದೀಗ ಓವೈಸಿ ಅವರ ಸದಸ್ಯತ್ವ ರದ್ದಾಗುತ್ತ ಎನ್ನುವ ಪ್ರಶ್ನೆ ಎದ್ದಿದೆ. ಕಾನೂನು ಪ್ರಕಾರ ಯಾವೆಲ್ಲ ಕಾರಣಗಳಿಗೆ ಸದಸ್ಯತ್ವ ರದ್ದುಪಡಿಸಲಾಗುತ್ತದೆ ಎನ್ನುವ ವಿವರ ಇಲ್ಲಿದೆ.

  • ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರದ ಅಡಿಯಲ್ಲಿ ಯಾವುದೇ ಲಾಭದಾಯಕ ಹುದ್ದೆಯನ್ನು ಹೊಂದಿದ್ದರೆ
  • ನ್ಯಾಯಾಲಯವು ಅಭ್ಯರ್ಥಿಯನ್ನು ಮಾನಸಿಕ ಅಸ್ವಸ್ಥ ಎಂದು ಘೋಷಿಸಿದ್ದರೆ
  • ಸ್ವಯಂಪ್ರೇರಿತವಾಗಿ ವಿದೇಶಿ ಪೌರತ್ವವನ್ನು ಪಡೆದಿದ್ದರೆ
  • ಸಂಸತ್ತಿನ ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹಗೊಂಡಿದ್ದರೆ ಅಂತಹವರ ಸದಸ್ಯತ್ವ ರದ್ದುಗೊಳಿಸಲಾಗುತ್ತದೆ.

ಈ ಪ್ರಕರಣವನ್ನು ಲೋಕಸಭೆಯ ನೈತಿಕ ಸಮಿತಿಗೆ ಕಳುಹಿಸಲಾಗುವುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸಮಿತಿ ಸದಸ್ಯರು ತನಿಖೆ ನಡೆಸಿ ಓವೈಸಿ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಲಿದ್ದಾರೆ. ಅದಾಗ್ಯೂ ಓವೈಸಿ ಅವರ ಸದಸ್ಯತ್ವ ರದ್ದಾಗುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

ಇದನ್ನೂ ಓದಿ: Chhatrapal Singh Gangwar: ಪ್ರಮಾಣ ವಚನದ ವೇಳೆ ʼಜೈ ಹಿಂದೂ ರಾಷ್ಟ್ರʼ ಘೋಷಣೆ ಮೊಳಗಿಸಿದ ಬಿಜೆಪಿ ಸಂಸದ!

2018ರಲ್ಲಿ, ನ್ಯಾಷನಲ್ ಕಾನ್ಫರೆನ್ಸ್ ಶಾಸಕ ಮೊಹಮ್ಮದ್ ಅಕ್ಬರ್ ಲೋನ್ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ʼಪಾಕಿಸ್ತಾನ್ ಜಿಂದಾಬಾದ್ʼ ಎಂಬ ಘೋಷಣೆಯನ್ನು ಕೂಗಿದ್ದರು. ಇದರ ಹೊರತಾಗಿಯೂ ಅವರು ತಮ್ಮ ಸದಸ್ಯತ್ವವನ್ನು ಕಳೆದುಕೊಂಡಿರಲಿಲ್ಲ.

Continue Reading

ದೇಶ

Lok Sabha Speaker: ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

Lok Sabha Speaker: 18ನೇ ಲೋಕಸಭೆಯ ಸ್ಪೀಕರ್‌ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಬಿಜೆಪಿ ಸಂಸದ ಓಂ ಬಿರ್ಲಾ ಅವರು ಸ್ಪೀಕರ್‌ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ ಭಾರೀ ಕುತೂಹಲ ಮೂಡಿಸಿದ್ದ ಚುನಾವಣೆಯಲ್ಲಿ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.

VISTARANEWS.COM


on

Lok Sabha Speaker
Koo

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್‌ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಎನ್‌ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಅವರು ಸ್ಪೀಕರ್‌ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ (Lok Sabha Speaker). ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಕಣಕ್ಕಿಳಿದಿದ್ದರು. ಭಾರೀ ಕುತೂಹಲ ಮೂಡಿಸಿದ್ದ ಈ ಐತಿಹಾಸಿಕ ಚುನಾವಣೆಯಲ್ಲಿ ಇದೀಗ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ಆರಂಭವಾದ ಚುನಾವಣಾ ಪ್ರಕ್ರಿಯೆಯಲ್ಲಿ ಓಂ ಬಿರ್ಲಾ ಅವರು ಬಹುಮತಗಳನ್ನು ಪಡೆದುಕೊಂಡರು. ಓಂ ಬಿರ್ಲಾ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ಬಳಿಕ ಹಲವು ನಾಯಕರು ಅನುಮೋದಿಸಿದರು. ಧ್ವನಿ ಮತದ ಮೂಲಕ ಸದಸ್ಯರು ಮತ ಚಲಾಯಿಸಿದರು. ಈ ಮೂಲಕ ಓಂ ಬಿರ್ಲಾ ಅವರು ಬಲರಾಮ್ ಜಖರ್ (1980-89) ನಂತರ ಎರಡು ಪೂರ್ಣ ಅವಧಿಗೆ ಆಯ್ಕೆಯಾದ ಎರಡನೇ ಸ್ಪೀಕರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಲೋಕಸಭೆಯ ಎರಡನೇ ಸ್ಪೀಕರ್ ಎಂ.ಎ.ಅಯ್ಯಂಗಾರ್ ಮತ್ತು ಗುರ್ದಿಯಾಲ್ ಸಿಂಗ್ ಧಿಲ್ಲಾನ್ ಈ ಹಿಂದೆ ಎರಡು ಬಾರಿ ಈ ಹುದ್ದೆಯನ್ನು ಆಯ್ಕೆಯಾಗಿದ್ದರೂ ಅವರ ಎರಡನೇ ಅವಧಿ ಒಂದೂವರೆ ವರ್ಷಕ್ಕಿಂತ ಹೆಚ್ಚು ಕಾಲ ಉಳಿದಿರಲಿಲ್ಲ. ಹಂಗಾಮಿ ಸ್ಪೀಕರ್‌ ಭಾರ್ತೃಹರಿ ಮಹತಾಬ್‌ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

ವಿಪ್‌ ಜಾರಿ

ಆರಂಭದಲ್ಲಿ ಎನ್‌ಡಿಎ ಪ್ರತಿಪಕ್ಷಗಳ ಮನವೊಲಿಸಲು ಯತ್ನಿಸಿತ್ತು. ಓಂ ಬಿರ್ಲಾ ಅವರನ್ನು ಬೆಂಬಲಿಸಲು ಒಪ್ಪಿಗೆ ಸೂಚಿಸಿದ್ದ ಇಂಡಿ ಬಣ ಡೆಪ್ಯುಟಿ ಸ್ಪೀಕರ್ ತಮಗೆ ಸಿಗಬೇಕೆಂಬ ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಎನ್‌ಡಿಎ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಮಾತುಕತೆ ಮುರಿದು ಬಿದ್ದು ಕೊನೆಯ ಕ್ಷಣದಲ್ಲಿ ಕೊಂಡಿಕುನಾಲ್ ಸುರೇಶ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್‌ ಎಲ್ಲ ಸದಸ್ಯರಿಗೆ ಹಾಜರಾಗುವಂತೆ ಮಂಗಳವಾರ ವಿಪ್‌ ಜಾರಿ ಮಾಡಿದ್ದವು.

ಕೊನೆ ಕ್ಷಣದಲ್ಲಿ ಸುರೇಶ್‌ಗೆ ಬೆಂಬಲ ಸೂಚಿಸಿದ ಟಿಎಂಸಿ

ಇಂಡಿ ಬಣ ಅಭ್ಯರ್ಥಿಯಾಗಿ ಕೆ.ಸುರೇಶ್ ಅವರನ್ನು ಆಯ್ಕೆ ಮಾಡುವ ಮುನ್ನ ತಮ್ಮ ಬಳಿ ಸಮಾಲೋಚನೆಯನ್ನೇ ನಡೆಸಿಲ್ಲ ಎಂದು ಟಿಎಂಸಿ ಮಂಗಳವಾರ ಆರೋಪಿಸಿತ್ತು. ಕೆ. ಸುರೇಶ್ ಅವರನ್ನು ಇಂಡಿ ಬಣ ಜಂಟಿ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪ್ರತಿಪಕ್ಷಗಳ ನಿರ್ಧಾರದ ಬಗ್ಗೆ ನಮ್ಮ ಪಕ್ಷದ ನಾಯಕರ ಬಳಿ ಸಮಾಲೋಚನೆ ನಡೆಸಿಲ್ಲ. ದುರದೃಷ್ಟವಶಾತ್ ಇದು ಏಕಪಕ್ಷೀಯ ನಿರ್ಧಾರ ಎಂದು ಟಿಎಂಸಿ ಹೇಳಿ ಇಂಡಿ ಬಣವನ್ನು ಆತಂಕಕ್ಕೆ ದೂಡಿತ್ತು. ಆದರೆ ಕೊನೆಕ್ಷಣದಲ್ಲಿ ಟಿಎಂಸಿ ಸದಸ್ಯರು ಸುರೇಶ್‌ ಅವರಿಗೆ ಬೆಂಬಲ ಸೂಚಿಸಿದರು.

ಇದನ್ನೂ ಓದಿ: Lok Sabha Speaker Election: ಲೋಕಸಭೆ ಇತಿಹಾಸದಲ್ಲೇ ಮೊದಲ ಬಾರಿ ಸ್ಪೀಕರ್‌ ಹುದ್ದೆಗೆ ನಡೆಯಲಿದೆ ಚುನಾವಣೆ

ಏಳು ಸಂಸದರು ಇನ್ನೂ ಪ್ರಮಾಣ ವಚನ ಸ್ವೀಕರಿಸಿಲ್ಲ ಮತ್ತು ಕೇರಳದ ವಯನಾಡು ಸ್ಥಾನಕ್ಕೆ ರಾಹುಲ್‌ ಗಾಂಧಿ ರಾಜೀನಾಮೆ ನೀಡಿದ ಕಾರಣ 535 ಸಂಸದರು ಇಂದು ಮತ ಚಲಾಯಿಸಿದ್ದರು. ಹೀಗಾಗಿ ಬಹುಮತಕ್ಕೆ 268 ಸದಸ್ಯರ ಬೆಂಬಲ ಅಗತ್ಯವಿತ್ತು. ಓಂ ಬಿರ್ಲಾ ಅವರಿಗೆ ಎನ್‌ಡಿಎ ಜತೆಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷ, ಇತರರು ಬೆಂಬಲ ಸೂಚಿಸಿದ್ದರಿಂದ ಸುಲಭವಾಗಿ 300ಕ್ಕೆಂತ ಹೆಚ್ಚು ಮತ ಪಡೆದುಕೊಂಡರು.

Continue Reading

ದೇಶ

Lok Sabha Speaker Election: ಲೋಕಸಭೆ ಸ್ಪೀಕರ್ ಚುನಾವಣೆ ಇಂದು; ಆಡಳಿತ ಪಕ್ಷ-ಪ್ರತಿಪಕ್ಷ ಬಲಾಬಲ ಹೀಗಿದೆ

Lok Sabha Speaker Election: ಇಂದು ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದೆ. ಎನ್‌ಡಿಎಯ ಬಿಜೆಪಿ ಸಂಸದ ಓಂ ಬಿರ್ಲಾ ಮತ್ತು ಪ್ರತಿಪಕ್ಷಗಳ ಇಂಡಿ ಒಕ್ಕೂಟದಿಂದ ಕಾಂಗ್ರೆಸ್ ಸಂಸದ ಕೊಂಡಿಕುನಾಲ್ ಸುರೇಶ್ ಮಧ್ಯೆ ತೀವ್ರ ಪೈಪೋಟಿ ಕಂಡು ಬಂದಿದೆ. ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್‌ ತನ್ನ ಸಂಸದರಿಗೆ ವಿಪ್‌ ಜಾರಿ ಮಾಡಿ ಹಾಜರಿರುವಂತೆ ಸೂಚಿಸಿದೆ.

VISTARANEWS.COM


on

Lok Sabha Speaker Election
Koo

ನವದೆಹಲಿ: ನರೇಂದ್ರ ಮೋದಿ (Narendra Modi) ನೇತೃತ್ವದ ಎನ್‌ಡಿಎ 3.0 ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕದ ಮೊದಲ ಅಧಿವೇಶನ (Parliament Session 2024) ಆರಂಭವಾಗಲಿದೆ. ಈಗಾಗಲೇ ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದು, ಇಂದು ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದೆ (Lok Sabha Speaker Election). ಎನ್‌ಡಿಎಯಿಂದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಮತ್ತು ಪ್ರತಿಪಕ್ಷಗಳ ಇಂಡಿ ಒಕ್ಕೂಟದಿಂದ ಕಾಂಗ್ರೆಸ್ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಮಂಗಳವಾರ ಲೋಕಸಭಾ ಸ್ಪೀಕರ್ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ.

ಬಲಾಬಲ ಹೀಗಿದೆ

ಲೋಕಸಭೆಯಲ್ಲಿ ಬಿಜೆಪಿ ಈಗಾಗಲೇ ತನ್ನದೇ ಸಂಸದರಿಂದ 240 ಮತಗಳನ್ನು ಮತ್ತು ಎನ್‌ಡಿಎ ಪಾಲುದಾರ ಪಕ್ಷಗಳಿಂದ 63 ಮತಗಳನ್ನು ಹೊಂದಿದೆ. ಇದರಲ್ಲಿ ಚಂದ್ರಬಾಬು ನಾಯ್ಡು ಅವರ ಟಿಡಿಪಿಯ 16 ಸಂಸದರು ಮತ್ತು ಪವನ್ ಕಲ್ಯಾಣ್‌ ಅವರ ಜನಸೇನಾ ಪಕ್ಷದ 2 ಸಂಸದರು ಸೇರಿಕೊಂಡಿದ್ದಾರೆ. ಒಟ್ಟು 293 ಸಂಖ್ಯಾಬಲವಿದೆ. ಹೆಚ್ಚುವರಿಯಾಗಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್ ಕಾಂಗ್ರೆಸ್ ಪಕ್ಷವು ಬಿಜೆಪಿ ಅಭ್ಯರ್ಥಿ ಓಂ ಬಿರ್ಲಾ ಅವರನ್ನು ಬೆಂಬಲಿಸಲಿದೆ ಎನ್ನಲಾಗಿದ್ದು, ಅವರ 4 ಸಂಸದರ ಬಲ ಸೇರಿಸಿದರೆ ಎನ್‌ಡಿಎಗೆ ಒಟ್ಟು 297 ಮತ ದೊರೆಯಲಿದೆ. ಸ್ಥಳೀಯವಾಗಿ ವಿರೋಧ ಇರುವ ಹೊರತಾಗಿಯೂ ಬಿರ್ಲಾ ಅವರನ್ನು ಬೆಂಬಲಿಸಲು ವೈಎಸ್​ಆರ್​ ನಿರ್ಧರಿಸಿದೆ.

ಇನ್ನು ಪ್ರತಿಪಕ್ಷಗಳ ಇಂಡಿ ಬಣ ಲೋಕಸಭೆಯಲ್ಲಿ 232 ಸಂಸದರನ್ನು ಹೊಂದಿದೆ. ಈ ಪೈಕಿ 7 ಸಂಸದರು ಇನ್ನೂ ಪ್ರಮಾಣ ವಚನ ಸ್ವೀಕರಿಸಿಲ್ಲ. ಹೀಗಾಗಿ ಅವರಿಗೆ ವೋಟಿಂಗ್‌ ಮಾಡುವ ಅಧಿಕಾರವಿಲ್ಲ. ಇದರಲ್ಲಿ ಕಾಂಗ್ರೆಸ್‌ ಐವರು ಮತ್ತು ತೃಣಮೂಲ ಕಾಂಗ್ರೆಸ್‌ ಇಬ್ಬರು ಸೇರಿದ್ದಾರೆ. ಜತೆಗೆ ಕೆಲವು ಸ್ವತಂತ್ರ ಅಭ್ಯರ್ಥಿಗಳೂ ಪ್ರಮಾಣ ವಚನ ಸ್ವೀಕರಿಸಿಲ್ಲ. ಈ ಕೆಲವು ನಾಯಕರ ಪ್ರಮಾಣ ವಚನ ಸ್ವೀಕಾರ ಏಕೆ ಬಾಕಿ ಉಳಿದಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಅರ್ಹತೆ ಹೊಂದಿರುವ ಸಂಸದರ ಸಂಖ್ಯೆಯನ್ನು ಆಧರಿಸಿ ವೋಟಿಂಗ್‌ ನಡೆಯಲಿದೆ. ಹೀಗಾಗಿ ಬಹುಮತಕ್ಕೆ 269 ಮತಗಳ ಅಗತ್ಯವಿದೆ.

ಶಾಕ್‌ ಕೊಟ್ಟ ಟಿಎಂಸಿ

ಈ ನಡುವೆ ಇಂಡಿ ಬಣ ಅಭ್ಯರ್ಥಿಯಾಗಿ ಕೆ.ಸುರೇಶ್ ಅವರನ್ನು ಆಯ್ಕೆ ಮಾಡುವ ಮುನ್ನ ತಮ್ಮ ಬಳಿ ಸಮಾಲೋಚನೆಯನ್ನೇ ನಡೆಸಿಲ್ಲ ಎಂದು ಟಿಎಂಸಿ ಆರೋಪಿಸಿದೆ. ಕೆ. ಸುರೇಶ್ ಅವರನ್ನು ಇಂಡಿ ಬಣ ಜಂಟಿ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪ್ರತಿಪಕ್ಷಗಳ ನಿರ್ಧಾರದ ಬಗ್ಗೆ ನಮ್ಮ ಪಕ್ಷದ ನಾಯಕರ ಬಳಿ ಸಮಾಲೋಚನೆ ನಡೆಸಿಲ್ಲ. ದುರದೃಷ್ಟವಶಾತ್ ಇದು ಏಕಪಕ್ಷೀಯ ನಿರ್ಧಾರ ಎಂದು ಟಿಎಂಸಿ ಹೇಳಿದೆ. ಹೀಗಾಗಿ ಟಿಎಂಸಿ ನಡೆ ಕುತೂಹಲ ಮೂಡಿಸಿದೆ.

ಇಂದು ಬೆಳಿಗ್ಗೆ 11 ಗಂಟೆಗೆ ಚುನಾವಣೆ ಪ್ರಕ್ರಿಯೆ ನಡೆಯಲಿದ್ದು, ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್‌ ತನ್ನ ಸಂಸದರಿಗೆ ವಿಪ್‌ ಜಾರಿ ಮಾಡಿ ಹಾಜರಿರುವಂತೆ ಸೂಚಿಸಿದೆ.

ಇದನ್ನೂ ಓದಿ: Parliament Session 2024: ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

Continue Reading

ದೇಶ

Parliament Session 2024: ಇಂದು ಐತಿಹಾಸಿಕ ಲೋಕಸಭಾ ಸ್ಪೀಕರ್‌ ಚುನಾವಣೆ; ಕ್ಷಣ ಕ್ಷಣದ ಮಾಹಿತಿಗಾಗಿ Live ನೋಡಿ

Parliament Session 2024: ಲೋಕಸಭಾ ಸ್ಪೀಕರ್‌ ಹುದ್ದೆಗೆ ಎನ್‌ಡಿಎಯಿಂದ ಬಿಜೆಪಿ ಸಂಸದ ಓಂ ಬಿರ್ಲಾ ಮತ್ತು ಪ್ರತಿಪಕ್ಷಗಳ ಇಂಡಿ ಒಕ್ಕೂಟದಿಂದ ಕಾಂಗ್ರೆಸ್ ಸಂಸದ ಕೊಂಡಿಕುನಾಲ್ ಸುರೇಶ್ ಸ್ಪರ್ಧಿಸುತ್ತಿದ್ದಾರೆ. ಸಾಮಾನ್ಯವಾಗಿ ಸ್ಪೀಕರ್ ಹಾಗೂ ಡೆಪ್ಯುಟಿ ಸ್ಪೀಕರ್ ಆಯ್ಕೆಯು ಸಹಮತದೊಂದಿಗೆ ನಡೆಯುತ್ತದೆ. ಆದರೆ ಈ ಬಾರಿ ಚುನಾವಣೆ ನಡೆಯಲಿದೆ. ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ Live ವೀಕ್ಷಿಸಿ.

VISTARANEWS.COM


on

Parliament Session 2024
Koo

ನವದೆಹಲಿ: ಜಿದ್ದಾಜಿದ್ದಿನ ಲೋಕಸಭಾ ಚುನಾವಣೆಯ ಬಳಿಕ ಇದೀಗ ದೇಶ ಲೋಕಸಭಾ ಸ್ಪೀಕರ್‌ ಆಯ್ಕೆಯ ಚುನಾವಣೆಗೆ ಸಾಕ್ಷಿಯಾಗಲಿದೆ (Lok Sabha Speaker Election). ಲೋಕಸಭಾ ಸ್ಪೀಕರ್‌ ಹುದ್ದೆಗೆ ಎನ್‌ಡಿಎಯಿಂದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಮತ್ತು ಪ್ರತಿಪಕ್ಷಗಳ ಇಂಡಿ ಒಕ್ಕೂಟದಿಂದ ಕಾಂಗ್ರೆಸ್ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಸ್ಪರ್ಧಿಸುತ್ತಿದ್ದಾರೆ. ಅವಿರೋಧ ಆಯ್ಕೆಗೆ ಒಮ್ಮತ ಮೂಡದ ಹಿನ್ನಲೆಯಲ್ಲಿ ಈ ಇಬ್ಬರು ನಾಯಕರು ಮಂಗಳವಾರ ನಾಮಪತ್ರ ಸಲ್ಲಿಸಿದರು (Parliament Session 2024).

ಸಾಮಾನ್ಯವಾಗಿ ಸ್ಪೀಕರ್ ಹಾಗೂ ಡೆಪ್ಯುಟಿ ಸ್ಪೀಕರ್ ಆಯ್ಕೆಯು ಸಹಮತದೊಂದಿಗೆ ನಡೆಯುತ್ತದೆ. ಹಲವು ವರ್ಷಗಳಿಂದಲೂ ಈ ಸಂಪ್ರದಾಯ ನಡೆದುಕೊಂಡು ಬಂದಿದೆ. ಆದರೆ ಈ ಬಾರಿ ಈ ಸಂಪ್ರದಾಯ ಕೊನೆಯಾಗಿದ್ದು, ಹಲವು ದಶಕಗಳ ಬಳಿಕ ಇದೇ ಮೊದಲ ಸಲ ಸ್ಪೀಕರ್ ಸ್ಥಾನಕ್ಕೆ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಜಿದ್ದಾಜಿದ್ದಿನ ಹೋರಾಟಕ್ಕೆ ಅಣಿಯಾಗಿವೆ.

ಆರಂಭದಲ್ಲಿ ಎನ್‌ಡಿಎ ಪ್ರತಿಪಕ್ಷಗಳ ಮನವೊಲಿಸಲು ಯತ್ನಿಸಿತ್ತು. ಓಂ ಬಿರ್ಲಾ ಅವರನ್ನು ಬೆಂಬಲಿಸಲು ಒಪ್ಪಿಗೆ ಸೂಚಿಸಿದ್ದ ಇಂಡಿ ಬಣ ಡೆಪ್ಯುಟಿ ಸ್ಪೀಕರ್ ತಮಗೆ ಸಿಗಬೇಕೆಂಬ ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಎನ್‌ಡಿಎ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಮಾತುಕತೆ ಮುರಿದು ಬಿದ್ದು ಕೊನೆಯ ಕ್ಷಣದಲ್ಲಿ ಕೊಂಡಿಕುನಾಲ್ ಸುರೇಶ್ ನಾಮಪತ್ರ ಸಲ್ಲಿಸಿದರು.

ಓಂ ಬಿರ್ಲಾ, ಕೆ.ಸುರೇಶ್‌ ಹಿನ್ನೆಲೆ

ರಾಜಸ್ಥಾನದ ಕೋಟಾ ಕ್ಷೇತ್ರವನ್ನು ಪ್ರತಿನಿಧಿಸುವ ಓಂ ಬಿರ್ಲಾ ಅವರು 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಕಳೆದ ಬಾರಿಯೂ ಅವರೇ ಸ್ಪೀಕರ್‌ ಆಗಿದ್ದರು. ಹೀಗಾಗಿ ಅವರನ್ನೇ ಸ್ಪೀಕರ್ ಆಗಿ ಮುಂದುವರಿಸಲು ಬಿಜೆಪಿ ಮುಂದಾಗಿದೆ. ಇನ್ನು ಕೆ.ಸುರೇಶ್‌ ಕೇರಳದ ಮಾವೆಲಿಕರಾ ಕ್ಷೇತ್ರದ ಕಾಂಗ್ರೆಸ್ ಸಂಸದ. ಎಂಟು ಬಾರಿ ಗೆದ್ದಿರುವ ಸುರೇಶ್ ಅವರು, 18ನೇ ಲೋಕಸಭೆಯಲ್ಲಿ ಅತ್ಯಂತ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಸಂಸದರೆನಿಸಿದ್ದಾರೆ. ಕಳೆದ 2 ಲೋಕಸಭಾ ಅಧಿವೇಶನಗಳಲ್ಲಿ ಬಿಜೆಪಿಯ ಸುಮಿತ್ರಾ ಮಹಾಜನ್ (2014) ಮತ್ತು ಓಂ ಬಿರ್ಲಾ (2019) ಸ್ಪೀಕರ್‌ಗಳಾಗಿದ್ದರು.

ಚುನಾವಣೆ ಎಷ್ಟು ಗಂಟೆಗೆ?

ಇಂದು ಬೆಳಿಗ್ಗೆ 11 ಗಂಟೆಗೆ ಸ್ಪೀಕರ್ ಆಯ್ಕೆಗೆ ಚುನಾವಣೆ ನಡೆಯಲಿದೆ. 293 ಸಂಸದರ ಬಲ ಹೊಂದಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಸರಳ ಬಹುಮತದೊಂದಿಗೆ ಓಂ ಬಿರ್ಲಾ ಅವರು ಪುನರಾಯ್ಕೆ ಆಗುವ ನಿರೀಕ್ಷೆಯಲ್ಲಿದೆ. ಇಂಡಿ ಮೈತ್ರಿಕೂಟಕ್ಕೆ 232 ಸದಸ್ಯರ ಬಲವಿದೆ. ಈ ಪೈಕಿ 7 ಸಂಸದರು ಇನ್ನೂ ಪ್ರಮಾಣ ವಚನ ಸ್ವೀಕರಿಸಿಲ್ಲ. ಹೀಗಾಗಿ ಅವರಿಗೆ ವೋಟು ಮಾಡುವ ಅಧಿಕಾರವಿಲ್ಲ. ಜತೆಗೆ ವೈ.ಎಸ್‌.ಜಗಮೋಹನ್‌ ರೆಡ್ಡಿ ಅವರ ವೈಎಸ್‌ಆರ್‌ ಕಾಂಗ್ರೆಸ್‌ನ ನಾಲ್ವರು ಸಂಸದರು ಎನ್‌ಡಿಎಗೆ ಬೆಂಬಲ ಸೂಚಿಸುವ ಸಾಧ್ಯತೆ ಇದೆ.

ವಿಪ್‌ ಜಾರಿ

ಲೋಕಸಭಾ ಸ್ಪೀಕರ್ ಹುದ್ದೆಯ ಚುನಾವಣೆಯ ಹಿನ್ನೆಲೆಯಲ್ಲಿ ಬುಧವಾರ ಸದನಕ್ಕೆ ಹಾಜರಾಗುವಂತೆ ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್‌ ತಮ್ಮ ಸಂಸದರಿಗೆ ವಿಪ್‌ (Whip) ಜಾರಿ ಮಾಡಿವೆ. ಎರಡೂ ಪಕ್ಷಗಳು ಬುಧವಾರ ಬೆಳಿಗ್ಗೆ 11 ಗಂಟೆಗೆ ಲೋಕಸಭೆಗೆ ಹಾಜರಾಗುವಂತೆ ಮೂರು ಸಾಲಿನ ವಿಪ್ ಜಾರಿ ಮಾಡಿವೆ.

ಇದನ್ನೂ ಓದಿ: Lok Sabha Speaker Election: ಲೋಕಸಭೆ ಇತಿಹಾಸದಲ್ಲೇ ಮೊದಲ ಬಾರಿ ಸ್ಪೀಕರ್‌ ಹುದ್ದೆಗೆ ನಡೆಯಲಿದೆ ಚುನಾವಣೆ

Continue Reading
Advertisement
Gold Rate Today
ಚಿನ್ನದ ದರ1 min ago

Gold Rate Today: ಆಭರಣಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

ಕ್ರೀಡೆ6 mins ago

IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

Rashmika Mandanna Ayushmann Khurrana Team Up For Horror Comedy
ಟಾಲಿವುಡ್11 mins ago

Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

Self Harming
ಕರ್ನಾಟಕ17 mins ago

Self Harming: ಕೆಲಸದಿಂದ ತೆಗೆದು ಕಿರುಕುಳ; ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

jewellery robbery case
ಕ್ರೈಂ18 mins ago

Robbery Case: 30 ಸೆಕೆಂಡ್‌ನಲ್ಲಿ ಇಡೀ ಜ್ಯುವೆಲ್ಲರಿ ದರೋಡೆ, ಸಿಸಿಟಿವಿಯಲ್ಲಿ ಕೃತ್ಯ ಸೆರೆ

Parineethi Chopra
Latest29 mins ago

Parineethi Chopra: ಏಳುಮಲ್ಲಿಗೆ ತೂಕದ ಚೆಲುವೆ ಪರಿಣಿತಿ ಚೋಪ್ರಾ ಸಿಕ್ಕಾಪಟ್ಟೆ ದಪ್ಪಗಾಗಿದ್ದು ಯಾಕೆ?

Asaduddin Owais
ದೇಶ32 mins ago

Asaduddin Owais: ಪ್ರಮಾಣ ವಚನ ಸ್ವೀಕರಿಸಿ ‘ಜೈ ಪ್ಯಾಲೆಸ್ತೀನ್​’ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದು? ಕಾನೂನು ಏನು ಹೇಳುತ್ತದೆ?

Actor Darshan support by anchor hemalatha
ಸ್ಯಾಂಡಲ್ ವುಡ್37 mins ago

‌Actor Darshan: ರೇಣುಕಾಸ್ವಾಮಿಯನ್ನ ಹೀರೊ ಮಾಡೋದು ನಿಲ್ಲಿಸಿ, ದರ್ಶನ್‌ನ ಬಿಟ್ಟುಕೊಡಲ್ಲ ಎಂದ ಖ್ಯಾತ ನಿರೂಪಕಿ!

Life threat
ಕರ್ನಾಟಕ51 mins ago

Life threat: ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ; ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

Para Badminton Ranking
ಕ್ರೀಡೆ1 hour ago

Para Badminton Ranking: ಮೊದಲ ಬಾರಿಗೆ ವಿಶ್ವ ನಂ.1 ಸ್ಥಾನಕ್ಕೇರಿದ ಕನ್ನಡಿಗ ಸುಹಾಸ್‌ ಯತಿರಾಜ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌