Dam Water Level | ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ - Vistara News

ಕರ್ನಾಟಕ

Dam Water Level | ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

Dam Water Level | ರಾಜ್ಯದ ವಿವಿಧ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಎಷ್ಟಿದೆ? ಒಳಹರಿವಿನ ಪ್ರಮಾಣ ಎಷ್ಟು? ಹೊರಹರಿವು ಯಾವ ಪ್ರಮಾಣದಲ್ಲಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

ಜಲಾಶಯ
ಕೆಆರ್‌ಎಸ್‌ ಜಲಾಶಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಿನಾಂಕ: ೧೭-0೯-2022

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್124.80124.3014,1109277
ಆಲಮಟ್ಟಿ519.60(ಮೀಟರ್) 519.35(ಮೀಟರ್‌)1,30,8911,50,000
ಮಲಪ್ರಭಾ2079.502079.5037943794
ಘಟಪ್ರಭಾ2175.00 2174.50081044555
ತುಂಗಾಭದ್ರಾ16331632.703986741360
ಭದ್ರಾ1861849.7559744770
ಲಿಂಗನಮಕ್ಕಿ18191816.658469.007042.31
ಹಾರಂಗಿ2,8592857.9415971800
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Mysore News: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೊಳಿಸಿ ಮಾದರಿಯಾದ ಪಿಎಸ್‌ಐ

Mysore News: ಮಂಡ್ಯದ ಹೊಳಲು ವೃತ್ತದ ಬಳಿ, ಹೊಂಡ-ಗುಂಡಿಗಳಿಂದ ಹದಗೆಟ್ಟು ಅಧ್ವಾನವಾದ ರಸ್ತೆಯಿಂದ ವಾಹನ ಸವಾರರು ದಿನನಿತ್ಯ ಪರದಾಡುವುದನ್ನು ಅರಿತು ಸಾರ್ವಜನಿಕರ ಹಿತದೃಷ್ಟಿಯಿಂದ ತಾವೇ ಖುದ್ದಾಗಿ ಹಣ ವ್ಯಯಿಸಿ, ಹಾಳಾದ ರಸ್ತೆಯ ದುರಸ್ತಿಗೆ ಕ್ರಮ ಕೈಗೊಳ್ಳುವ ಮೂಲಕ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ವರ್ಷಾ ಬಿ.ವಿ. ಮಾದರಿಯಾಗಿದ್ದಾರೆ.

VISTARANEWS.COM


on

Model PSI Varsha repaired the road at own expense
Koo

ಮೈಸೂರು: ಹೊಂಡ ಮತ್ತು ಗುಂಡಿಗಳಿಂದ ಹದಗೆಟ್ಟು ಅಧ್ವಾನವಾದ ರಸ್ತೆಯಿಂದ ವಾಹನ ಸವಾರರು ದಿನನಿತ್ಯ ಪರದಾಡುವುದನ್ನು ಅರಿತು, ಸಾರ್ವಜನಿಕರ ಹಿತದೃಷ್ಟಿಯಿಂದ ತಾವೇ ಖುದ್ದಾಗಿ ಹಣ ವ್ಯಯಿಸಿ, ಹಾಳಾದ ರಸ್ತೆಯ ದುರಸ್ತಿಗೆ (Mysore News) ಕ್ರಮ ಕೈಗೊಳ್ಳುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ವರ್ಷಾ ಬಿ.ವಿ.

ಹೌದು, ಮಂಡ್ಯದ ಹೊಳಲು ವೃತ್ತದ ಬಳಿ ಪ್ರತಿನಿತ್ಯ ವಾಹನ ಸವಾರರು ತೊಂದರೆ ಅನುಭವಿಸುವುದನ್ನು ಕಂಡ ಪಿಎಸ್‌ಐ ವರ್ಷಾ ಅವರು ಈ ಸಮಸ್ಯೆಗೆ ತಾವೇ ಏನಾದರೂ ಸಹಾಯ ಮಾಡಲು ನಿರ್ಧರಿಸಿ, ಸ್ವಂತ ಹಣದಿಂದ ಹಾಗೂ ಸ್ವತಃ ಮೇಲ್ವಿಚಾರಣೆ ಮಾಡುವ ಮೂಲಕ ರಸ್ತೆ ದುರಸ್ತಿ ಕೈಗೊಂಡಿರುವುದು ಜನರ ಬಗ್ಗೆ ಇರುವ ಕಾಳಜಿಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ: Lok Sabha Election: 5ನೇ ಹಂತದಲ್ಲಿ ಕೇವಲ ಶೇ.56ರಷ್ಟು ಮತದಾನ; ಯಾವ ರಾಜ್ಯದಲ್ಲಿ ಹೆಚ್ಚು?

ರಸ್ತೆ ದುರಸ್ತಿಗಾಗಿ ಟಿಪ್ಪರ್ ಅನ್ನು ಬಾಡಿಗೆಗೆ ಪಡೆದು ಅದರಲ್ಲಿ ಮಣ್ಣು ಸಾಗಿಸಿ ಒಂದು ದಿನ ಕಾರ್ಮಿಕರನ್ನು ಕರೆಸಿ ಗುಂಡಿಗಳನ್ನು ಮಣ್ಣಿನಿಂದ ತುಂಬಿಸಲು ವ್ಯವಸ್ಥೆ ಮಾಡಿದ್ದಾರೆ, ಇದರಿಂದ ಈ ರಸ್ತೆಯಲ್ಲಿ ಪ್ರತಿನಿತ್ಯ ಸಂಚರಿಸುವ ಪ್ರಯಾಣಿಕರು ಇಂದು ಭಯವಿಲ್ಲದೆ ಸಂಚರಿಸುವಂತಾಗಿದೆ. ರಸ್ತೆಯ ಹೊಂಡ-ಗುಂಡಿಗಳನ್ನು ಮುಚ್ಚಲು ಸಾಕಷ್ಟು ವೆಚ್ಚ ತಗುಲಿತ್ತು. ಆದರೆ ಇದನ್ನು ಅವರ ಸ್ವಂತ ಹಣದಲ್ಲಿ ಭರಿಸಿದ್ದಾರೆ. ಈ ಕಾರ್ಯಕ್ಕೆ ಸುತ್ತಮುತ್ತಲಿನ ನಿವಾಸಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಪಿಎಸ್‌ಐ ವರ್ಷಾ ಅವರು, ರಸ್ತೆಯಲ್ಲಿ ಹೊಂಡ-ಗುಂಡಿಗಳಿಂದ ಪ್ರತಿದಿನ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದರು. ಸಾರ್ವಜನಿಕರ ಹಿತದೃಷ್ಟಿಯಿಂದ ಇದು ನನ್ನ ಕರ್ತವ್ಯ ಎಂದು ಭಾವಿಸಿ ಈ ಕಾರ್ಯ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ನನ್ನ ಕೆಲಸವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ. ಆಸುಪಾಸಿನಲ್ಲಿ ಇಂತಹ ತಗ್ಗು-ಗುಂಡಿಗಳು ಹೆಚ್ಚಾಗಿದ್ದು, ನನ್ನಿಂದ ಸಾಧ್ಯವಾಗುವ ಮಟ್ಟಿಗೆ ಈ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂದು ಪಿಎಸ್‌ಐ ವರ್ಷಾ ಬಿ.ವಿ. ಹೇಳಿದ್ದಾರೆ.

ಈ ರಸ್ತೆಯಲ್ಲಿ ಹೊಂಡ ಬಿದ್ದು ಹಳ್ಳದಂತಾಗಿತ್ತು. ಕಳೆದ ವಾರ ಸುರಿದ ಭಾರೀ ಮಳೆಗೆ ಅದು ಸಣ್ಣ ಕೊಳದಂತೆ ಕಾಣುತ್ತಿತ್ತು. ರಾತ್ರಿ ವೇಳೆ ಸೂಕ್ತ ಬೆಳಕಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಈ ಮಾರ್ಗದಲ್ಲಿ ಸಂಚರಿಸಲು ಪರದಾಡುವಂತಾಗಿತ್ತು. ಪೊಲೀಸ್ ಅಧಿಕಾರಿ ವರ್ಷಾ ಅವರ ಈ ಕಾರ್ಯದಿಂದ ಇಂದು ಬಹಳ ಸಹಾಯವಾಗಿದೆ ಎಂದು ಸ್ಥಳೀಯರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

ಪಿಎಸ್‌ಐ ವರ್ಷಾ ಬಿ.ವಿ. ಅವರ ಈ ಸಮಾಜ ಸೇವೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದ್ದು, ಇತರರಿಗೆ ಮಾದರಿಯಾಗಿದ್ದಾರೆ.

ಇದನ್ನೂ ಓದಿ: Public Exam: 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ರಾಜ್ಯ ಸರ್ಕಾರದ ಮಹತ್ವ ನಿರ್ಧಾರ

Continue Reading

ಶಿಕ್ಷಣ

2nd PUC Exam 2 Result: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ನಾಳೆ; ಸಿಇಟಿ ಫಲಿತಾಂಶ ಯಾವಾಗ?

2nd PUC Exam 2 Result: ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ ಮೇಲೆ ಕ್ಲಿಕ್‌ ಮಾಡಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಅಲ್ಲದೆ, ಮಂಗಳವಾರವೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ದ್ವಿತೀಯ PUC ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು.

VISTARANEWS.COM


on

2nd PUC Exam 2 Result tomorrow
Koo

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು (KSEAB) ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 (PUC Exam 2024) ಅನ್ನು ನಡೆಸಿತ್ತು. ಈಗ ನಾಳೆ (ಮಂಗಳವಾರ – ಮೇ 21) ರಂದು ಫಲಿತಾಂಶವನ್ನು ಪ್ರಕಟ (2nd PUC Exam 2 Result) ಮಾಡುವುದಾಗಿ ಹೇಳಿದೆ.

ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ ಮೇಲೆ ಕ್ಲಿಕ್‌ ಮಾಡಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಅಲ್ಲದೆ, ಮಂಗಳವಾರವೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ನಿಮ್ಮ ಫಲಿತಾಂಶವನ್ನು ನೋಡುವುದು ಹೇಗೆ?

ದ್ವಿತೀಯ PUC ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು:

  • karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
    ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಒದಗಿಸಿ; ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)
    ನಿಮ್ಮ 2ನೇ ಪಿಯುಸಿ ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪರಿಶೀಲಿಸಿ.

ಸಿಇಟಿಗೆ ಹೆಚ್ಚು ಅಂಕಗಳ ಪಟ್ಟಿ ಪರಿಗಣನೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್‌ನ್ಯೂಸ್‌ ನೀಡಿದೆ. ದ್ವಿತೀಯ ಪಿಯುಸಿಯ ಮೂರು ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ಯಾವುದರಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೋ ಅದನ್ನೇ ಸಿಇಟಿ (CET 2024)ಗೆ ಪರಿಗಣಿಸಲು ಕೆಇಎ ಸಮ್ಮತಿ ಸೂಚಿಸಿದೆ. ಇದರಿಂದ ನೂರಾರು ವಿದ್ಯಾರ್ಥಿಗಳು ನಿರಾಳವಾಗಿದ್ದಾರೆ. ಎಂಜಿನಿಯರ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕೆಇಎ ಪ್ರತಿವರ್ಷ ಸಿಇಟಿ ನಡೆಸುತ್ತದೆ.

ಸಿಇಟಿ ಜತೆಗೆ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕವನ್ನೂ ರ‍್ಯಾಂಕಿಂಗ್​ಗೆ ಪರಿಗಣಿಸಲಾಗುತ್ತದೆ. ಇದುವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾದರೆ ಪೂರಕ ಪರೀಕ್ಷೆ ಬರೆದು ತೇರ್ಗಡೆಯಾಗಬೇಕಿತ್ತು. ಮುಖ್ಯ ಪರೀಕ್ಷೆ ಮತ್ತು ಪೂರಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಕ್ರೂಡೀಕರಿಸಿ ಅಂಕಪಟ್ಟಿ ನೀಡಲಾಗುತ್ತಿತ್ತು.

ನಿಯಮದಲ್ಲಿ ಬದಲಾವಣೆ

ಈ ಬಾರಿ ಈ ನಿಯಮದಲ್ಲಿ ಕೊಂಚ ಬದಲಾವಣೆ ತರಲಾಗಿದೆ. ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಮೂರು ಪರೀಕ್ಷೆಗಳನ್ನು ಪರಿಚಯಿಸಲಾಗಿದೆ. ಒಂದು ವೇಳೆ ಕಡಿಮೆ ಅಂಕ ಬಂದಿದ್ದರೆ ಅದನ್ನು ಉತ್ತಮಪಡಿಸಿಕೊಳ್ಳಲು ವಿದ್ಯಾರ್ಥಿಗಳು ಇನ್ನು ಉಳಿದ ಎರಡು ಪರೀಕ್ಷೆಗಳನ್ನೂ ಬರೆಯಬಹುದು. ಹೆಚ್ಚು ಅಂಕ ಬಂದಿರುವುದನ್ನೇ ಪರಿಗಣಿಸಿ ಅಂತಿಮ ಅಂಕಪಟ್ಟಿ ನೀಡಲಾಗುತ್ತದೆ. ಇದೀಗ ಆ ಹೆಚ್ಚುವರಿ ಅಂಕವನ್ನೇ ಸಿಇಟಿ ರ‍್ಯಾಂಕಿಂಗ್‌ಗೂ ಪರಿಣಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಕೆಇಎ ಸಹ ಸ್ಪಷ್ಟನೆ ನೀಡಿದ್ದು, ʼʼಹೆಚ್ಚು ಅಂಕ ಬಂದಿರುವ ಅಂತಿಮ ಅಂಕ ಪಟ್ಟಿಯನ್ನು ಸಿಇಟಿ ಅಂಕಗಳ ಜತೆ ರ‍್ಯಾಂಕಿಂಗ್‌ ಪಟ್ಟಿ ಸಿದ್ಧಪಡಿಸಲು ಪರೀಕ್ಷಾ ಪ್ರಾಧಿಕಾರ ಪರಿಗಣಿಸಲಿದೆʼʼ ಎಂದು ತಿಳಿಸಿದೆ.

ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

2024-25ನೇ ಸಾಲಿನ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್‌, ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ರಿಸಲ್ಟ್‌ಗಾಗಿ (CET Result) ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಸ್ಪಷ್ಟನೆ ನೀಡಿದೆ. ಈಗ ಮಂಗಳವಾರ ಪಿಯು ಫಲಿತಾಂಶ ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಸಿಇಟಿ ಫಲಿತಾಂಶದ ದಿನಾಂಕವನ್ನು ಕೆಇಎ ಪ್ರಕಟಿಸಬೇಕಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಸ್ಪಷ್ಟನೆ ನೀಡಿದ್ದು, ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಹೇಳಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣನೆ ಮಾಡಲಾಗುವುದು ಎಂದು ಹೇಳಲಾಗಿದೆ. ಹೀಗಾಗಿ ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕೆಇಎ ಕಾಯುವುದು ಅನಿವಾರ್ಯವಾಗಿದೆ.

ಅಧಿಕಾರಿಗಳ ಎಡವಟ್ಟು

ರಾಜ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರತಿ ವರ್ಷ ವೃತ್ತಿಪರ ಕೋಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆದರೆ, ಈ ಬಾರಿಯ ಸಿಇಟಿ ಪರೀಕ್ಷೆ ಗೊಂದಲದ ಗೂಡಾಗಿತ್ತು. ಪರೀಕ್ಷೆಯಲ್ಲಿ 4 ವಿಷಯಗಳಲ್ಲಿ ಸುಮಾರು 50ಕ್ಕೂ ಹೆಚ್ಚು ಔಟ್‌ ಆಫ್‌ ಸಿಲಬಸ್‌ (Out of Syllabus) ಪ್ರಶ್ನೆಗಳನ್ನು ಕೇಳಲಾಗಿತ್ತು. ರಸಾಯನ ಶಾಸ್ತ್ರ ವಿಷಯದಲ್ಲಿ 6, ಭೌತಶಾಸ್ತ್ರ ವಿಷಯದಲ್ಲಿ 5, ಪ್ರಶ್ನೆಗಳು, ಜೀವಶಾಸ್ತ್ರ ಪರೀಕ್ಷೆಯಲ್ಲಿ 11 ಪ್ರಶ್ನೆಗಳು, ಗಣಿತದಲ್ಲಿ 9 ಪ್ರಶ್ನೆಗಳು ಪಠ್ಯಕ್ರಮದಿಂದ ಹೊರತಾಗಿದ್ದವು. ಇದಕ್ಕೆ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದ್ದವು. ಬಳಿಕ ಆ 50 ಪ್ರಶ್ನೆಗಳನ್ನು ಕೈಬಿಟ್ಟು ಉಳಿದ ಪ್ರಶ್ನೆಗಳ ಮೌಲ್ಯ ಮಾಪನ ಮಾಡಲಾಗಿದೆ.

ಇದನ್ನೂ ಓದಿ: Public Exam: 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ರಾಜ್ಯ ಸರ್ಕಾರದ ಮಹತ್ವ ನಿರ್ಧಾರ

ಸದ್ಯ ಸಿಇಟಿ ಪರೀಕ್ಷೆಯ ಉತ್ತರ ಪತ್ರಿಕೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೌಲ್ಯಮಾಪನ ಮಾಡಿ ಸಿದ್ಧಪಡಿಸಿದೆ. ಇದರ ಜತೆಗೆ ಶೇ. 50ರಷ್ಟು ದ್ವಿತೀಯ ಪಿಯುಸಿ ಅಂಕ ಮತ್ತು ಬಿಎಸ್‌ಸಿ ಸೀಟು ಹಂಚಿಕೆಗಾಗಿ ಜಿಕೆವಿಕೆ ನಡೆಸುವ ಪ್ರಾಯೋಗಿಕ ಪರೀಕ್ಷೆ ಫಲಿತಾಂಶದ ಅಂಕ ಸೇರಿಸಬೇಕಾಗಿರುವುದರಿಂದ ಕೆಇಎ ಅದಕ್ಕಾಗಿ ಕಾಯುತ್ತಿದೆ. ಈ ಬಾರಿ 3.49 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದರು. ಪ್ರತಿ ವರ್ಷ ಮೇ, ಜೂನ್‌ನಲ್ಲಿ ಪರೀಕ್ಷೆ ನಡೆದರೆ ಈ ಬಾರಿ ಏಪ್ರಿಲ್‌ನಲ್ಲೇ ಪರೀಕ್ಷೆ ನಡೆಸಲಾಗಿತ್ತು.

Continue Reading

ಕರ್ನಾಟಕ

Compound Wall Collapse: ಹಾಜಬ್ಬರ ಶಾಲೆ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು

Compound Wall Collapse: ದಕ್ಷಿಣ ಕನ್ನಡ ಜಿಲ್ಲೆಯ ‌ಉಳ್ಳಾಲ ತಾಲೂಕಿನ ನ್ಯೂಪಡ್ಪುನಲ್ಲಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರು ಕಟ್ಟಿದ ಶಾಲೆಯ ಕಾಂಪೌಂಡ್ ಗೋಡೆ ಕುಸಿದು ದುರ್ಘಟನೆ ನಡೆದಿದೆ.

VISTARANEWS.COM


on

Compound Wall Collapse
Koo

ಮಂಗಳೂರು: ಶಾಲೆಯ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟಿರುವ ಘಟನೆ (Compound Wall Collapse) ದಕ್ಷಿಣ ಕನ್ನಡ ಜಿಲ್ಲೆಯ ‌ಉಳ್ಳಾಲ ತಾಲೂಕಿನ ನ್ಯೂಪಡ್ಪುನಲ್ಲಿ ನಡೆದಿದೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ (Harekala Hajabba) ಅವರು ಕಟ್ಟಿದ ನ್ಯೂಪಡ್ಪು ಶಾಲೆಯ ಕಾಂಪೌಂಡ್ ಗೋಡೆ ಕುಸಿದು ದುರ್ಘಟನೆ ಸಂಭವಿಸಿದೆ.

ನ್ಯೂಪಡ್ಪು ನಿವಾಸಿ ಸಿದ್ದೀಖ್ ಜಮೀಲಾ ಪುತ್ರಿ ಶಾಜಿಯಾ (7) ಮೃತ ಬಾಲಕಿ. ಹಾಜಬ್ಬರ ಶಾಲೆಯಲ್ಲಿ ವಿದ್ಯಾರ್ಥಿನಿ ಶಾಜಿಯಾ 3ನೇ ತರಗತಿ ಓದುತ್ತಿದ್ದಳು. ಶಾಲೆಯಲ್ಲಿ ನಡೆಯುತ್ತಿದ್ದ ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿನಿ ಗೇಟಿನ ಬಳಿ ಆಟವಾಡುತ್ತಿದ್ದಾಗ ಕಾಂಪೌಡ್ ಗೋಡೆ ಕುಸಿದಿದ್ದರಿಂದ ದುರ್ಘಟನೆ ಸಂಭವಿಸಿದೆ. ಉಳ್ಳಾಲ ತಾಲೂಕಿನಲ್ಲಿ ಮೊದಲ ಮಳೆಗೆ ಅನಾಹುತ ಸಂಭವಿಸಿದೆ.

ಇದನ್ನೂ ಓದಿ | Physical Abuse & Murder: ಬಾಲಕಿ ಮೇಲೆ ಅತ್ಯಾಚಾರ, ಸಜೀವ ದಹನ ಕೇಸ್‌; ಹಂತಕರಿಗೆ ಮರಣದಂಡನೆ

ಕೂಡ್ಲಿಗಿಯಲ್ಲಿ ಹಿಟ್ ಆ್ಯಂಡ್ ರನ್; ಬೈಕ್‌ಗೆ ಲಾರಿ ಡಿಕ್ಕಿಯಾಗಿ ಯುವತಿ ಸಾವು

Hit And Run Case

ವಿಜಯನಗರ: ಬೈಕ್‌ಗೆ ಲಾರಿ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಮೃತಪಟ್ಟು, ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಅಪಘಾತದ (Hit And Run Case) ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಮೇಘನಾ (18) ಮೃತ ಯುವತಿ. ಹೊಸಪೇಟೆಯಿಂದ ಕೂಡ್ಲಿಗಿ ಕಡೆ ಹೊರಟಿದ್ದ ಬೈಕ್ ಮೇಲೆ ಯುವಕ, ಯುವತಿ ಹೋಗುತ್ತಿದ್ದಾಗ ಲಾರಿ ಡಿಕ್ಕಿಯಾಗಿದೆ. ಈ ವೇಳೆ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದು, ಯುವಕ ಕೈಲಾಶ್‌ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಆತನನ್ನು ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ವಿಮ್ಸ್‌ಗೆ ರವಾನೆ ಮಾಡಲಾಗಿದೆ. ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶಪ್ಪ, ಸಿಪಿಐ ವಿನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಹಿಟ್ ಆ್ಯಂಡ್ ರನ್ ಮಾಡಿದ ಲಾರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ | Baby Death : ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಯ್ತಾ 3 ವರ್ಷದ ಕಂದಮ್ಮ?

Continue Reading

ಕರ್ನಾಟಕ

Hit And Run Case: ಕೂಡ್ಲಿಗಿಯಲ್ಲಿ ಹಿಟ್ ಆ್ಯಂಡ್ ರನ್; ಬೈಕ್‌ಗೆ ಲಾರಿ ಡಿಕ್ಕಿಯಾಗಿ ಯುವತಿ ಸಾವು

Hit And Run Case: ಹೊಸಪೇಟೆಯಿಂದ ಕೂಡ್ಲಿಗಿ ಕಡೆ ಬೈಕ್‌ ಮೇಲೆ ಯುವಕ, ಯುವತಿ ಹೋಗುತ್ತಿದ್ದಾಗ ಲಾರಿ ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಯುವತಿ ಸ್ಥಳದಲ್ಲೇ ಮೃತಪಟ್ಟು, ಯುವಕನಿಗೆ ಗಂಭೀರ ಗಾಯಗಳಾಗಿವೆ.

VISTARANEWS.COM


on

Hit And Run Case
Koo

ವಿಜಯನಗರ: ಬೈಕ್‌ಗೆ ಲಾರಿ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಮೃತಪಟ್ಟು, ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಅಪಘಾತದ (Hit And Run Case) ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಮೇಘನಾ (18) ಮೃತ ಯುವತಿ. ಹೊಸಪೇಟೆಯಿಂದ ಕೂಡ್ಲಿಗಿ ಕಡೆ ಹೊರಟಿದ್ದ ಬೈಕ್ ಮೇಲೆ ಯುವಕ, ಯುವತಿ ಹೋಗುತ್ತಿದ್ದಾಗ ಲಾರಿ ಡಿಕ್ಕಿಯಾಗಿದೆ. ಈ ವೇಳೆ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದು, ಯುವಕ ಕೈಲಾಶ್‌ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಆತನನ್ನು ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ವಿಮ್ಸ್‌ಗೆ ರವಾನೆ ಮಾಡಲಾಗಿದೆ. ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶಪ್ಪ, ಸಿಪಿಐ ವಿನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಹಿಟ್ ಆ್ಯಂಡ್ ರನ್ ಮಾಡಿದ ಲಾರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ | Baby Death : ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಯ್ತಾ 3 ವರ್ಷದ ಕಂದಮ್ಮ?

ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

Drowned in water.. road Accident

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ (Road Accident ) ಸಂಭವಿಸಿದ್ದು, ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ರಸ್ತೆಯ ಬೋರಾಪುರದಲ್ಲಿ ಅಪಘಾತ ನಡೆದಿದೆ.

ಮದ್ದೂರಿನಿಂದ ಮಳವಳ್ಳಿ ಕಡೆಗೆ ಸ್ವಿಫ್ಟ್ ಕಾರು ತೆರಳುತ್ತಿತ್ತು. ಕೆಎಸ್‌ಆರ್‌ಟಿಸಿ ಬಸ್‌ ಮಳವಳ್ಳಿಯಿಂದ ಮದ್ದೂರು ಕಡೆಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಛಿದ್ರಗೊಂಡಿದೆ. ಬಸ್‌ನ ಮುಂಭಾಗ ಜಖಂಗೊಂಡಿದೆ.

ಕಾರಿನಲ್ಲಿ ಐವರು ಪ್ರಯಾಣ ಮಾಡುತ್ತಿದ್ದರು. ಅಪಘಾತದಲ್ಲಿ ಸ್ಥಳದಲ್ಲೇ ಕಾರು ಚಾಲಕ ಮೃತಪಟ್ಟರೆ, ನಾಲ್ವರು ಗಾಯಗೊಂಡಿದ್ದಾರೆ. ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಸ್ಥಳೀಯರು ರಕ್ಷಿಸಿದ್ದು, ಮದ್ದೂರು ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇನ್ನೂ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಹಾಗೂ ಚಾಲಕ, ನಿರ್ವಾಹಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಅಪಘಾತದಿಂದಾಗಿ ಬೋರಾಪುರ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಇದನ್ನೂ ಓದಿ: Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಮದ್ದೂರು ಪಟ್ಟಣ ಠಾಣೆ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದರು. ಛಿದ್ರಗೊಂಡಿದ್ದ ಕಾರನ್ನು ತೆರವು ಮಾಡಿದ್ದರು. ಮದ್ದೂರು ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Continue Reading
Advertisement
Nutrition Alert
ಆರೋಗ್ಯ4 mins ago

Nutrition Alert: ಎಳನೀರು ಕುಡಿಯುವುದರಿಂದಲೂ ನಮ್ಮ ದೇಹಕ್ಕೆ ಸೈಡ್‌ ಎಫೆಕ್ಟ್‌ ಇದೆಯೆ?

Postal Ballot
ದೇಶ17 mins ago

Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Model PSI Varsha repaired the road at own expense
ಕರ್ನಾಟಕ19 mins ago

Mysore News: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೊಳಿಸಿ ಮಾದರಿಯಾದ ಪಿಎಸ್‌ಐ

Driving Licence New Rules
ದೇಶ25 mins ago

Driving Licence New Rules: ಡ್ರೈವಿಂಗ್‌ ಲೈಸೆನ್ಸ್‌; ಜೂನ್‌ 1ರಿಂದ ಹೊಸ ರೂಲ್ಸ್‌!

2nd PUC Exam 2 Result tomorrow
ಶಿಕ್ಷಣ27 mins ago

2nd PUC Exam 2 Result: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ನಾಳೆ; ಸಿಇಟಿ ಫಲಿತಾಂಶ ಯಾವಾಗ?

Compound Wall Collapse
ಕರ್ನಾಟಕ40 mins ago

Compound Wall Collapse: ಹಾಜಬ್ಬರ ಶಾಲೆ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು

T20 World Cup 2024
ಕ್ರೀಡೆ44 mins ago

T20 World Cup 2024: ಇಂಡೋ-ಪಾಕ್​ ಮಿನಿ ವಿಶ್ವಕಪ್​ ಸಮರ ನಡೆಯುವ ಸ್ಟೇಡಿಯಂನ ವಿಡಿಯೊ ವೈರಲ್​

Ebrahim Raisi
ದೇಶ1 hour ago

Ebrahim Raisi: ಇಬ್ರಾಹಿಂ ರೈಸಿ ನಿಧನದಿಂದ ಭಾರತದಲ್ಲಿ ಚಿನ್ನ, ಪೆಟ್ರೋಲ್‌ ಬೆಲೆ ಏರಿಕೆ? ಹೀಗಿದೆ ವಿಶ್ವ ಮಾರುಕಟ್ಟೆ ಸ್ಥಿತಿ-ಗತಿ

Hit And Run Case
ಕರ್ನಾಟಕ1 hour ago

Hit And Run Case: ಕೂಡ್ಲಿಗಿಯಲ್ಲಿ ಹಿಟ್ ಆ್ಯಂಡ್ ರನ್; ಬೈಕ್‌ಗೆ ಲಾರಿ ಡಿಕ್ಕಿಯಾಗಿ ಯುವತಿ ಸಾವು

IPL 2024
ಕ್ರೀಡೆ2 hours ago

IPL 2024: ಮೋದಿ ಸ್ಟೇಡಿಯಂನಲ್ಲಿ ಫುಟ್ಬಾಲ್​ ಆಡಿದ ಆರ್​ಸಿಬಿ ಆಟಗಾರರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌