Gold price | ಬಂಗಾರದ ದರದಲ್ಲಿ 6 ದಿನಗಳಲ್ಲಿ 610 ರೂ. ಇಳಿಕೆ, ಬೆಳ್ಳಿ 530 ರೂ. ಏರಿಕೆ - Vistara News

ಚಿನ್ನದ ದರ

Gold price | ಬಂಗಾರದ ದರದಲ್ಲಿ 6 ದಿನಗಳಲ್ಲಿ 610 ರೂ. ಇಳಿಕೆ, ಬೆಳ್ಳಿ 530 ರೂ. ಏರಿಕೆ

ಬಂಗಾರ ಮತ್ತು ಬೆಳ್ಳಿಯ ದರಗಳಲ್ಲಿ ಇತ್ತೀಚಿನ ದಿನಗಳಲ್ಲಿ ಪಟ್ಟಾರೆಯಾಗಿ ಇಳಿಕೆಯ ಪ್ರವೃತ್ತಿ ಕಂಡು ಬಂದಿದೆ. ಖರೀದಿದಾರರಿಗೆ ಇದು ಸೂಕ್ತ ಕಾಲ ಎನ್ನುತ್ತಾರೆ ತಜ್ಞರು.

VISTARANEWS.COM


on

gold
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಂಗಾರದ ದರದಲ್ಲಿ ಕಳೆದ 6 ದಿನಗಳಲ್ಲಿ 610 ರೂ. ಏರಿಕೆಯಾಗಿದೆ. ಪ್ರತಿ 10 ಗ್ರಾಮ್‌ಗೆ ( 24 ಕ್ಯಾರಟ್) ಸೆಪ್ಟೆಂಬರ್‌ 14ರಂದು ೫೦,೬೮೦ ರೂ.ನಷ್ಟಿದ್ದ ದರ (Gold price) ಮಂಗಳವಾರ 50,070 ರೂ.ಗೆ ಇಳಿಕೆಯಾಗಿದೆ. ‌

ಇತ್ತೀಚಿನ ದಿನಗಳಲ್ಲಿ ಇಳಿಕೆಯ ಹಾದಿಯಲ್ಲಿದ್ದ, ವಿಶೇಷವಾಗಿ ಸೋಮವಾರ ಒಂದೇ ದಿನ 5,300 ರೂ. ಕುಸಿತಕ್ಕೀಡಾಗಿದ್ದ ಬೆಳ್ಳಿಯ ದರದಲ್ಲಿ ಮಂಗಳವಾರ ಪ್ರತಿ ಕೆ.ಜಿಗೆ 530 ರೂ. ಹೆಚ್ಚಳವಾಗಿದೆ. ಅಂದರೆ ಪ್ರತಿ ಕೆ.ಜಿ ದರ 62,000 ರೂ.ಗೆ ಏರಿಕೆಯಾಗಿದೆ.

ಪ್ಲಾಟಿನಮ್‌ ದರದಲ್ಲಿ 10 ಗ್ರಾಮ್‌ಗೆ 170 ರೂ. ಇಳಿಕೆಯಾಗಿದ್ದು, 23,040 ರೂ.ಗೆ ಇಳಿದಿದೆ. ಅಂತಾರಾಷ್ಟ್ರೀಯ ದರಗಳನ್ನು ಆಧರಿಸಿ ದೇಶಿ ಮಾರುಕಟ್ಟೆಯಲ್ಲಿ ಬಂಗಾರದ ದರದಲ್ಲಿ ಏರಿಳಿತ ಸಂಭವಿಸುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಚಿನ್ನದ ದರ ಮತ್ತೆ ಗಗನಮುಖಿ; ಇಂದಿನ ಬೆಲೆ ಇಷ್ಟಿದೆ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ (ಜೂನ್‌ 12) ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಬುಧವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹ 46 ಮತ್ತು ₹ 50 ಏರಿಕೆಯಾಗಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ (ಜೂನ್‌ 12) ಚಿನ್ನದ ಬೆಲೆಯಲ್ಲಿ (Gold Rate Today) ಏರಿಕೆಯಾಗಿದೆ. ಬುಧವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹ 46 ಮತ್ತು ₹ 50 ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,615 ರೂ. ಆದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,216 ರೂ.ಗೆ ತಲುಪಿದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 52,920 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,150 ಮತ್ತು ₹ 6,61,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಎಂಟು ಗ್ರಾಂ ಬೆಲೆ ₹ 57,728 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,160 ಮತ್ತು ₹ 7,21,600 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,630₹ 7,231
ಮುಂಬೈ₹ 6,615₹ 7,216
ಬೆಂಗಳೂರು₹ 6,615₹ 7,216
ಚೆನ್ನೈ₹ 6,680₹ 7,287

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ಗ್ರಾಂಗೆ ಅಲ್ಪ ಇಳಿಕೆಯಾಗಿದೆ. ಒಂದು ಗ್ರಾಂಗೆ ₹ 90.15 ಹಾಗೂ 8 ಗ್ರಾಂಗೆ ₹ 721.2 ಇದೆ. 10 ಗ್ರಾಂಗೆ ₹ 901.5 ಹಾಗೂ 1 ಕಿಲೋಗ್ರಾಂಗೆ ₹ 90,150 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: Tata Motors: ಟಾಟಾ ಮೋಟಾರ್ಸ್‌ನಿಂದ ʼಆಲ್ಟ್ರೋಜ್ ರೇಸರ್ʼ ಬಿಡುಗಡೆ; ದರ ಎಷ್ಟು?

Continue Reading

ಪ್ರಮುಖ ಸುದ್ದಿ

Gold Rate Today: ಚಿನ್ನದ ದರದಲ್ಲಿ ತುಸು ಇಳಿಕೆ; ಇಷ್ಟಿದೆ ಇಂದಿನ ಬೆಲೆ

Gold Rate Today: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಬೆಂಗಳೂರಿನಲ್ಲಿ ಭಾರಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯು ಇಂದು ತುಸು ಇಳಿಕೆಯಾಗಿದೆ. ಇದರಿಂದಾಗಿ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಚಿನ್ನ ಖರೀದಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿರಲಿಲ್ಲ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ (ಜೂನ್‌ 11) ಚಿನ್ನದ ಬೆಲೆಯಲ್ಲಿ (Gold Rate Today) ತುಸು ಇಳಿಕೆಯಾಗಿದೆ. ಲೋಕಸಭೆ ಚುನಾವಣೆ ಫಲಿತಾಂಶದ (Lok Sabha Election Result 2024) ಬಳಿಕ ಏರಿಕೆ ಕಂಡಿದ್ದ ಚಿನ್ನದ ಬೆಲೆಯು ಈಗ ಇಳಿಕೆಯಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ತಲಾ 1 ರೂ. ಇಳಿಕೆಯಾಗಿದೆ. ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಯಾವುದೇ ಏರಿಳಿತ ಆಗಿರಲಿಲ್ಲ.

ಒಂದು ರೂಪಾಯಿ ಇಳಿಕೆಯೊಂದಿಗೆ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು 6,569 ರೂ. ಆದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 7,166 ರೂ. ಆಗಿದೆ. ಲೋಕಸಭೆ ಚುನಾವಣೆ ಫಲಿತಾಂಶದ ದಿನವಾದ ಜೂನ್‌ 4ರಂದು ಚಿನ್ನದ ಬೆಲೆಯಲ್ಲಿ ಏಕಾಏಕಿ 76 ರೂ. ಏರಿಕೆಯಾಗಿತ್ತು. ಜೂನ್‌ 6 ಹಾಗೂ ಜೂನ್‌ 7ರಂದು ಕೂಡ ಏರಿಕೆಯಾಗಿತ್ತು. ಇದಾದ ಮರುದಿನ ಅಂದರೆ, ಜೂನ್‌ 8ರಂದು 208 ರೂ. ಇಳಿಕೆಯಾಗಿದ್ದು ಗ್ರಾಹಕರು ನಿಟ್ಟುಸಿರು ಬಿಡುವಂತೆ ಮಾಡಿತ್ತು. ಈಗ ಮತ್ತೆ ತುಸು ಇಳಿಕೆಯಾಗಿದೆ.

Gold Rate Today

ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್‌ಮಾರ್ಕ್‌ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್‌ಮಾರ್ಕ್‌ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Stock Market: ಫಲಿತಾಂಶದ ಬಳಿಕ ಷೇರು ಪೇಟೆ ನೆಗೆತ; ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ಲಾಭ

Continue Reading

ಚಿನ್ನದ ದರ

Gold Rate Today: ರಾಜಧಾನಿಯಲ್ಲಿ ಏರಿಳಿಯದ ಬಂಗಾರದ ಬೆಲೆ; ಇಂದಿನ ದರಗಳು ಹೀಗಿವೆ

Gold Rate Today: ಚಿನ್ನದ ದರ ಎರಡು ದಿನಗಳಿಂದ ಯಾವುದೇ ಏರಿಳಿಕೆ ಆಗಿಲ್ಲ. ಲೋಕಸಭೆ ಚುನಾವಣೆ ಫಲಿತಾಂಶದ ದಿನ ಏರಿಕೆಯಾಗಿದ್ದ ದರ, ನಂತರ ಇಳಿದಿತ್ತು. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

VISTARANEWS.COM


on

gold rate today bipasha
Koo

ಬೆಂಗಳೂರು: ರಾಜಧಾನಿಯಲ್ಲಿ ಇಂದು ಬಂಗಾರದ ದರ (Gold rate today) ನಿನ್ನೆಯಂತೆಯೇ ಯಥಾಸ್ಥಿತಿ ಕಾಪಾಡಿಕೊಂಡಿದೆ. ಎರಡು ದಿನಗಳಿಂದ ಯಾವುದೇ ಏರಿಳಿಕೆ ಆಗಿಲ್ಲ. ಲೋಕಸಭೆ ಚುನಾವಣೆ ಫಲಿತಾಂಶದ ದಿನ ಏರಿಕೆಯಾಗಿದ್ದ ದರ, ನಂತರ ಇಳಿದಿತ್ತು. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹ 6,570 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7,167 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 52,560 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 65,700 ಮತ್ತು ₹ 6,57,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹ 7,167 ಆಗಿದ್ದು, ಎಂಟು ಗ್ರಾಂ ಬೆಲೆ ₹ 57,336 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 71,670 ಮತ್ತು ₹ 7,16,700 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (10 ಗ್ರಾಂ)24 ಕ್ಯಾರಟ್ (10 ಗ್ರಾಂ)
ದಿಲ್ಲಿ₹ 65,850₹ 71,820
ಮುಂಬೈ₹ 65,700₹ 71,670
ಬೆಂಗಳೂರು₹ 65,700₹ 71,670
ಚೆನ್ನೈ₹ 66,500₹ 72,550

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ಗ್ರಾಂಗೆ ಅಲ್ಪ ಇಳಿಕೆಯಾಗಿದೆ. ಒಂದು ಗ್ರಾಂಗೆ ₹ 90.50 ಹಾಗೂ 8 ಗ್ರಾಂಗೆ ₹ 724 ಇದೆ. 10 ಗ್ರಾಂಗೆ ₹ 905 ಹಾಗೂ 1 ಕಿಲೋಗ್ರಾಂಗೆ ₹ 90,500 ಬೆಲೆ ಬಾಳುತ್ತದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

  1. ಹಣದುಬ್ಬರ

ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.

  1. ಜಾಗತಿಕ ಉದ್ವಿಗ್ನತೆಗಳು

ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

  1. ಚೀನಾದ ಪ್ರಭಾವ

ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

  1. ಕಡಿಮೆ ಬಡ್ಡಿ ದರಗಳು

ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.

  1. ಹೂಡಿಕೆ ಮಾಡಬಹುದೆ?

ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

ಇದನ್ನೂ ಓದಿ: Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಬೆಲೆ ಗಮನಿಸಿ

Continue Reading

ಚಿನ್ನದ ದರ

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಬೆಲೆ ಗಮನಿಸಿ

Gold Rate Today: ಆಭರಣ ಕೊಳ್ಳುವವರಿಗೆ ಗುಡ್‌ನ್ಯೂಸ್‌. ರಾಜ್ಯ ರಾಜಧಾನಿಯಲ್ಲಿ ಚಿನ್ನದ ದರ ಇಳಿಕೆಯಾಗಿದೆ (Gold Rate Today). ಇಂದಿನ (ಭಾನುವಾರ) ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ. ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹ 6,570 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7,167 ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ಆಭರಣ ಕೊಳ್ಳುವವರಿಗೆ ಗುಡ್‌ನ್ಯೂಸ್‌. ರಾಜ್ಯ ರಾಜಧಾನಿಯಲ್ಲಿ ಚಿನ್ನದ ದರ ಇಳಿಕೆಯಾಗಿದೆ (Gold Rate Today). ಇಂದಿನ (ಭಾನುವಾರ) ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹ 6,570 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7,167 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 52,560 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 65,700 ಮತ್ತು ₹ 6,57,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹ 7,167 ಆಗಿದ್ದು, ಎಂಟು ಗ್ರಾಂ ಬೆಲೆ ₹ 57,336 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 71,670 ಮತ್ತು ₹ 7,16,700 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (10 ಗ್ರಾಂ)24 ಕ್ಯಾರಟ್ (10 ಗ್ರಾಂ)
ದಿಲ್ಲಿ₹ 65,850₹ 71,820
ಮುಂಬೈ₹ 65,700₹ 71,670
ಬೆಂಗಳೂರು₹ 65,700₹ 71,670
ಚೆನ್ನೈ₹ 66,500₹ 72,550

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ಗ್ರಾಂಗೆ ಅಲ್ಪ ಇಳಿಕೆಯಾಗಿದೆ. ಒಂದು ಗ್ರಾಂಗೆ ₹ 90.50 ಹಾಗೂ 8 ಗ್ರಾಂಗೆ ₹ 724 ಇದೆ. 10 ಗ್ರಾಂಗೆ ₹ 905 ಹಾಗೂ 1 ಕಿಲೋಗ್ರಾಂಗೆ ₹ 90,500 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”.

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: Toyota Kirloskar Motor: ದೆಹಲಿಯಲ್ಲಿ ಟಿಕೆಎಂನ ʼಟೊಯೊಟಾ ಯೂಸ್ಡ್ ಕಾರ್ʼ ಮಳಿಗೆಗೆ ಚಾಲನೆ

Continue Reading
Advertisement
Chellagurki Shri Yerrithathanavara Maharathotsava in Ballari
ಧಾರ್ಮಿಕ4 mins ago

Ballari News: ಭಕ್ತಿ ಭಾವದಿಂದ ನಡೆದ ಚೇಳ್ಳಗುರ್ಕಿ ಶ್ರೀ ಎರ‍್ರಿತಾತ ಮಹಾರಥೋತ್ಸವ

Narendra Modi
ದೇಶ10 mins ago

Narendra Modi: ಆಂಧ್ರದಲ್ಲಿ ಮೆಗಾ ಸ್ಟಾರ್‌, ಪವರ್‌ ಸ್ಟಾರ್‌ ಜತೆ ‘ಪೊಲಿಟಿಕಲ್‌ ಸ್ಟಾರ್’‌ ಮೋದಿ; Video ನೋಡಿ

Terror attack
ದೇಶ15 mins ago

Terror attack : ಉಗ್ರರ ದಾಳಿ; ತನ್ನ ಪ್ರಾಣ ತ್ಯಾಗ ಮಾಡಿ ಪ್ರಯಾಣಿಕರ ಜೀವ ಉಳಿಸಿದ ಬಸ್‌ ಚಾಲಕ

Uttara Kannada MP Vishweshwara hegde kageri spoke in Thanksgiving ceremony for bjp party workers in banavasi
ಉತ್ತರ ಕನ್ನಡ23 mins ago

Uttara Kannada News: ಉ.ಕ ಜಿಲ್ಲೆ ಬಿಜೆಪಿ ಕಾರ್ಯಕರ್ತರ ಕ್ಷೇತ್ರ ಎಂಬುದು ಮತ್ತೊಮ್ಮೆ ಸಾಬೀತು: ಕಾಗೇರಿ

chandrababu naidu takes oath as andhra chief minister mlc TA Sharavana Congratulated
ಬೆಂಗಳೂರು25 mins ago

TA Sharavana: ಆಂಧ್ರಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪದಗ್ರಹಣ; ಶರವಣ ಅಭಿನಂದನೆ

Hindu Jana Jagruti Samiti demands immediate ban on Maharaj movie
ದೇಶ27 mins ago

Maharaj Movie: `ಮಹಾರಾಜ್’ ಚಲನಚಿತ್ರ ನಿಷೇಧಕ್ಕೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Minister Dr.Sharanaprakash patil spoke in World Homeopathy Day Celebration and Seminar Programme in Bengaluru
ಕರ್ನಾಟಕ31 mins ago

Bengaluru News: ನಕಲಿ ವೈದ್ಯರ ಹಾವಳಿ ತಡೆಗೆ ಕಟ್ಟುನಿಟ್ಟಿನ ಕ್ರಮ: ಶರಣಪ್ರಕಾಶ್‌ ಪಾಟೀಲ್‌

Opposition party leader r ashok visit mangalore hospital
ಕರ್ನಾಟಕ33 mins ago

R Ashok: ಗೂಂಡಾಗಳ ಕೈಗೆ ರಾಜ್ಯ ನೀಡಿದ ಕಾಂಗ್ರೆಸ್‌ ಸರ್ಕಾರ: ಆರ್‌. ಅಶೋಕ್‌ ಆರೋಪ

Viral Video
ವೈರಲ್ ನ್ಯೂಸ್38 mins ago

Viral Video: ಮೆಟ್ರೋ, ವಿಮಾನ ಆಯಿತು ಈಗ ರೈಲಿನಲ್ಲಿ ಮಕ್ಕಳ ಎದುರೇ ಜೋಡಿಯ ಸರಸ!

Prajwal Revanna Case
ಪ್ರಮುಖ ಸುದ್ದಿ48 mins ago

Prajwal Revanna Case: ಪ್ರಜ್ವಲ್‌ ರೇವಣ್ಣಗೆ ಮತ್ತೆ 6 ದಿನ ಎಸ್‌ಐಟಿ ಕಸ್ಟಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ1 day ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ1 day ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ1 day ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌