Viral Video | ವರ್ಗಾವಣೆಗೊಂಡ ಶಿಕ್ಷಕನ ಕಾಲಿಗೆ ಬಿದ್ದು ಗೋಳಾಡಿದ ವಿದ್ಯಾರ್ಥಿಗಳು - Vistara News

ಮಂಡ್ಯ

Viral Video | ವರ್ಗಾವಣೆಗೊಂಡ ಶಿಕ್ಷಕನ ಕಾಲಿಗೆ ಬಿದ್ದು ಗೋಳಾಡಿದ ವಿದ್ಯಾರ್ಥಿಗಳು

ಶಿಕ್ಷಕನ ವರ್ಗಾವಣೆಯಿಂದ ನೊಂದ ಮಕ್ಕಳು ಮತ್ತು ಪೋಷಕರು ಕಾಲಿಗೆ ಬಿದ್ದು ಗೋಳಾಡಿದ ವಿಡಿಯೊ ವೈರಲ್‌ (Viral Video ) ಆಗಿದೆ.

VISTARANEWS.COM


on

Viral Video (
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ : ತಮ್ಮ ಮೆಚ್ಚಿನ ಶಿಕ್ಷಕ ವರ್ಗಾವಣೆಗೊಂಡಿದ್ದರಿಂದ ಮಕ್ಕಳು ಭಾವೋದ್ವೇಗಕ್ಕೆ ಒಳಗಾಗಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ (Viral Video ) ವೈರಲ್‌ ಆಗಿದೆ. ಶಾಲೆ ಬಿಟ್ಟು ಹೋಗದಂತೆ ಶಿಕ್ಷಕನ ಕಾಲಿಗೆ ಬಿದ್ದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಗೋಳಾಡಿದ್ದಾರೆ.

ದೇಶಕ್ಕೆ ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಗುರುವಿನ ಪಾತ್ರ ದೊಡ್ಡದು. ಆದರೆ ಕೇವಲ ಸಂಬಳಕ್ಕಾಗಿ ಅಥವಾ ಯಾಂತ್ರಿಕವಾಗಿ ಪಾಠ ಮಾಡುವ ಶಿಕ್ಷಕರೂ ಸಾಕಷ್ಟಿದ್ದಾರೆ. ಇವೆಲ್ಲದರ ನಡುವೆ ವಿದ್ಯೆಯನ್ನು ಧಾರೆಯೆರೆದು ವಿದ್ಯಾರ್ಥಿಗಳ ಮನಸ್ಸಿನಲ್ಲಿ ಅಚ್ಚಳಿಯುವಂತಹ ಶಿಕ್ಷಕರೂ ನಮ್ಮ ಕಣ್ಣ ಮುಂದೆ ಇದ್ದಾರೆ. ಇಂಥವರಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಭೀಮನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲಾಲೆಯ ಶಿಕ್ಷಕ ಪುಟ್ಟರಾಜಯ್ಯ ಒಬ್ಬರು.

ಇದನ್ನೂ ಓದಿ | ಗುರುಪೂರ್ಣಿಮೆ ವಿಶೇಷ | ಆಟದ ಸಾಮಗ್ರಿಗಳನ್ನು ಬಳಸಿ ದೇವರಿಗೆ ವಿಶೇಷ ಅಲಂಕಾರ

Viral Video
Viral Video

ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಪುಟ್ಟರಾಜಯ್ಯ ವರ್ಗಾವಣೆಗೊಂಡಿದ್ದಾರೆ. ಅವರು ಅಲ್ಲಿಯ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಗುರುವಾಗಿದ್ದರು. ಹಾಗಾಗಿ ಶಾಲೆ ಬಿಟ್ಟು ಹೋಗದಂತೆ ಅವರ ಕಾಲಿಗೆ ಬಿದ್ದು ವಿದ್ಯಾರ್ಥಿಗಳು ಕಣ್ಣೀರು ಸುರಿಸಿದರು. ಗ್ರಾಮಸ್ಥರು ಹಾಗೂ ಪೋಷಕರೂ ಪುಟ್ಟರಾಜಯ್ಯ ಅವರಿಗೆ ಈ ಶಾಲೆ ಬಿಟ್ಟು ತೆರಳದಂತೆ ವಿನಂತಿಸಿ ಕಾಲಿಗೆ ಬಿದ್ದು ನಮಸ್ಕರಿಸಿದರು. ಗ್ರಾಮದಲ್ಲಿ ಉತ್ತಮ ಶಿಕ್ಷಕ ಎನಿಸಿಕೊಂಡಿದ್ದ ಪುಟ್ಟರಾಜಯ್ಯ ಅವರು ಕೊರೊನಾ ಸಂದರ್ಭದಲ್ಲೂ ಮನೆ ಮನೆಗೆ ತೆರಳಿ ಮಕ್ಕಳಿಗೆ ಪಾಠ ಮಾಡಿ ಸೈ ಎನಿಸಿಕೊಂಡಿದ್ದರು.

ಇದನ್ನೂ ಓದಿ | ಸಮಾಜಸೇವೆ ಮಾಡಲು ಹೋದ ಶಿಕ್ಷಕನಿಗೆ ಥಳಿಸಿದ ಪೆಟ್ರೋಲ್‌ ಬಂಕ್‌ ಮಾಲೀಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral News: ಮದುವೆಯೇ ಆಗಿಲ್ಲ ಎಂದ ಚಾಮರಾಜನಗರ ಸಂಸದ ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟರು!

Viral News: ಮೈಸೂರಿನ ಚಾಮುಂಡೇಶ್ವರಿ ತಾಯಿ (Mysore Chamundeshwari Temple) ಗರ್ಭಗುಡಿಯಲ್ಲೇ ಈ ಘಟನೆ ನಡೆದಿದೆ. ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಸವಿತಾ ಅವರ ಹಣೆಗೆ ಚಾಮರಾಜನಗರ ಸಂಸದ ಸುನೀಲ್‌ ಬೋಸ್ (Sunil Bose) ಕುಂಕುಮ ಇಟ್ಟಿದ್ದಾರೆ. ಆಷಾಢ ಮಾಸದ ಮೂರನೇ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಇವರಿಬ್ಬರೂ ಜತೆಯಾಗಿ ಬಂದಿದ್ದರು.

VISTARANEWS.COM


on

sunil bose savitha viral news
Koo

ಮೈಸೂರು: ಚಾಮರಾಜನಗರ ಸಂಸದರು (Chamarajanagar MP) ದೇವಾಲಯದ ಗರ್ಭಗುಡಿಯಲ್ಲಿ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟ ಘಟನೆ ನಡೆದಿದೆ. ಇದು ವಿಶೇಷ ಸುದ್ದಿಯಾಗುವ ಸಂಗತಿಯೇನೂ ಅಲ್ಲ. ಆದರೆ, ತನಗೆ ಮದುವೆಯೇ ಆಗಿಲ್ಲ ಎಂದು ಸಂಸದರು ಹೇಳಿಕೊಂಡಿದ್ದರು. ಹೀಗಾಗಿ ಇದೀಗ ಸುದ್ದಿಯಾಗಿದೆ. ಇವರಿಬ್ಬರ ಫೋಟೋ ಕೂಡ ವೈರಲ್‌ (Viral News) ಆಗಿದೆ.

ಮೈಸೂರಿನ ಚಾಮುಂಡೇಶ್ವರಿ ತಾಯಿ (Mysore Chamundeshwari Temple) ಗರ್ಭಗುಡಿಯಲ್ಲೇ ಈ ಘಟನೆ ನಡೆದಿದೆ. ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಸವಿತಾ ಅವರ ಹಣೆಗೆ ಚಾಮರಾಜನಗರ ಸಂಸದ ಸುನೀಲ್‌ ಬೋಸ್ (Sunil Bose) ಕುಂಕುಮ ಇಟ್ಟಿದ್ದಾರೆ. ಆಷಾಢ ಮಾಸದ ಮೂರನೇ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಇವರಿಬ್ಬರೂ ಜತೆಯಾಗಿ ಬಂದಿದ್ದರು.

ಈ ವೇಳೆ ಗರ್ಭಗುಡಿಯಲ್ಲಿ ಇವರು ವಿಶೇಷ ಪೂಜೆ ಮಾಡಿಸಿದ್ದಾರೆ. ಪೂಜೆ ನೆರವೇರಿಸುವ ವೇಳೆ ಬೆಂಬಲಿಗರ ಸಮ್ಮುಖದಲ್ಲೇ ಸವಿತಾ ಹಣೆಗೆ ಸುನೀಲ್‌ ಬೋಸ್ ಕುಂಕುಮ ಇಟ್ಟರು. ಸಾರ್ವಜನಿಕ ವಲಯದಲ್ಲಿ ಸುನೀಲ್‌ ಬೋಸ್ ನಡೆ ಇದೀಗ ಚರ್ಚೆಗೆ ಕಾರಣವಾಗಿದೆ.

ಯಾಕೆಂದರೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ, ತಮಗೆ ಮದುವೆ ಆಗಿಲ್ಲ ಎಂದು ಸುನೀಲ್‌ ಬೋಸ್ ಅಫಿಡೆವಿಟ್ ಸಲ್ಲಿಸಿದ್ದರು. ಈ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರನ್ನೂ ಚಾಮರಾಜನಗರ ಬಿಜೆಪಿ ಸದಸ್ಯರು ನೀಡಿದ್ದರು. ಸುನೀಲ್‌ ಬೋಸ್ ಹಾಗೂ ಸವಿತಾ ಜತೆಯಲ್ಲಿ ಇರುವ ಫೋಟೋಗಳನ್ನು ನೀಡಿ ದೂರು ಕೊಟ್ಟಿದ್ದರು. ಸುನೀಲ್‌ ಬೋಸ್‌ಗೆ ಮದುವೆಯಾಗಿದೆ, ಆದರೆ ಅಫಿಡವಿಟ್‌ನಲ್ಲಿ ಸುಳ್ಳು ಹೇಳಿದ್ದಾರೆ ಎಂದು ದೂರಿದ್ದರು.

ʼಇದೀಗ, ಚಾಮುಂಡೇಶ್ವರಿ ಗರ್ಭಗುಡಿಯಲ್ಲಿ ನಡೆದದ್ದು ಸುಳ್ಳು ಅಲ್ಲ ತಾನೆ?ʼ ಎಂದು ಬಿಜೆಪಿ ಸದಸ್ಯರು ಪ್ರಶ್ನಿಸಿದ್ದಾರೆ. ʼಮದುವೆ ಆಗಿದ್ದರೆ, ಆಗಿದೆ ಎಂದು ಹೇಳಲಿ. ಇದರಲ್ಲಿ ಅಡಗಿಸಿ ಇಡುವ ಮುಜುಗರದ ಸಂಗತಿ ಏನಿದೆ?ʼ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಕೇಂದ್ರ ಸಚಿವರಿಗೆ ಅವಮಾನ, ಎಚ್‌ಡಿಕೆ ಬಂದರೂ ತೆಗೆಯದ ಪ್ರವಾಸಿ ಮಂದಿರ ಬೀಗ

ಮೈಸೂರು: ಕೇಂದ್ರ ಸಚಿವರೇ ವಿಶ್ರಾಂತಿಗಾಗಿ ಬಂದರೂ ಬಾಗಿಲು ಬೀಗ ತೆಗೆಯದೆ ಅಧಿಕಾರಿಗಳು ಅವಮಾನ ಮಾಡಿ ಕಳಿಸಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ಕೇಂದ್ರ ಸಚಿವ, ಜೆಡಿಎಸ್‌ ಮುಖಂಡ ಎಚ್‌ಡಿ ಕುಮಾರಸ್ವಾಮಿ ಅವರು ಇಂದು ನಂಜನಗೂಡು ಪ್ರವಾಸದಲ್ಲಿದ್ದು, ಕೆಲ ನಿಮಿಗಳ ವಿಶ್ರಾಂತಿಗಾಗಿ ನಂಜನಗೂಡು ಪ್ರವಾಸಿ ಮಂದಿರಕ್ಕೆ ತೆರಳಿದ್ದರು.

ಕೇಂದ್ರ ಸಚಿವರ ಭೇಟಿ ವಿಚಾರವನ್ನು ಪ್ರವಾಸಿ ಮಂದಿರದ ಅಧಿಕಾರಿಗಳಿಗೆ ಸಾಕಷ್ಟು ಮೊದಲೇ ತಿಳಿಸಲಾಗಿತ್ತು. ಈ ಬಗ್ಗೆ ಪ್ರವಾಸ ಪಟ್ಟಿಯನ್ನೂ ಸಚಿವಾಲಯದ ಅಧಿಕಾರಿಗಳು ಬಿಡುಗಡೆ ಮಾಡಿದ್ದರು. ಆದರೆ ಎಚ್‌ಡಿಕೆ ತೆರಳುವ ಹೊತ್ತಿಗೆ ಪ್ರವಾಸಿ ಮಂದಿರದ ಬಾಗಿಲಿಗೆ ಬೀಗ ಹಾಕಲಾಗಿತ್ತು. ಯಾರೂ ಅಧಿಕಾರಿಗಳು ಸ್ಥಳದಲ್ಲಿರಲಿಲ್ಲ.

10 ನಿಮಿಷಕ್ಕೂ ಅಧಿಕ ಸಮಯ ಕಾದರೂ ಯಾವುದೇ ಸಿಬ್ಬಂದಿ ಬಾಗಿಲು ತೆಗೆಯಲು ಬರಲಿಲ್ಲ. ಈ ಸಂದರ್ಭದಲ್ಲಿ ಎಚ್‌ಡಿಕೆ ಕಾರಿನಲ್ಲೇ ಕುಳಿತಿದ್ದರು. ಜೊತೆಗೆ ಮಾಜಿ ಸಚಿವ ಸಾ.ರಾ.ಮಹೇಶ್ ಅವರೂ ಇದ್ದರು. ಕಾದು ಸುಸ್ತಾದ ಎಚ್‌ಡಿ ಕುಮಾರಸ್ವಾಮಿ ಬಳಿಕ ಅಲ್ಲಿಂದ ತೆರಳಿದರು.

ಈ ಬಗ್ಗೆ ಸಾ.ರಾ ಮಹೇಶ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವರು ಬಂದರೂ ಬಾಗಿಲು ತೆರೆಯದೆ ಇರುವುದರ ಹಿಂದೆ ರಾಜ್ಯ ಸರಕಾರದ ಚಿತಾವಣೆ ಇದೆ. ಅವಮಾನ ಮಾಡುವ ಉದ್ದೇಶಕ್ಕಾಗಿಯೇ ಹೀಗೆ ಮಾಡಲಾಗಿದೆ ಎಂದು ಜೆಡಿಎಸ್‌ ಮುಖಂಡರು ಆರೋಪಿಸಿದ್ದಾರೆ.

ಇದನ್ನೂ ಓದಿ: Political Rivalry : ರಾಜಕೀಯ ವೈಷಮ್ಯ; ಗುತ್ತಿಗೆ ನೌಕರಿಯಿಂದ JDS ಬೆಂಬಲಿಗನ ಹೊರಗಟ್ಟಿದ ಸುನಿಲ್‌ ಬೋಸ್‌?

Continue Reading

ಪ್ರಮುಖ ಸುದ್ದಿ

HD Kumaraswamy: ಎಚ್‌ಡಿ ಕುಮಾರಸ್ವಾಮಿ ಬಂದರೂ ತೆಗೆಯದ ಪ್ರವಾಸಿ ಮಂದಿರ ಬೀಗ, ಕೇಂದ್ರ ಸಚಿವರಿಗೆ ಅವಮಾನ

HD Kumaraswamy: ಕೇಂದ್ರ ಸಚಿವರ ಭೇಟಿ ವಿಚಾರವನ್ನು ಪ್ರವಾಸಿ ಮಂದಿರದ ಅಧಿಕಾರಿಗಳಿಗೆ ಸಾಕಷ್ಟು ಮೊದಲೇ ತಿಳಿಸಲಾಗಿತ್ತು. ಈ ಬಗ್ಗೆ ಪ್ರವಾಸ ಪಟ್ಟಿಯನ್ನೂ ಸಚಿವಾಲಯದ ಅಧಿಕಾರಿಗಳು ಬಿಡುಗಡೆ ಮಾಡಿದ್ದರು. ಆದರೆ ಎಚ್‌ಡಿಕೆ ತೆರಳುವ ಹೊತ್ತಿಗೆ ಪ್ರವಾಸಿ ಮಂದಿರದ ಬಾಗಿಲಿಗೆ ಬೀಗ ಹಾಕಲಾಗಿತ್ತು. ಯಾರೂ ಅಧಿಕಾರಿಗಳು ಸ್ಥಳದಲ್ಲಿರಲಿಲ್ಲ.

VISTARANEWS.COM


on

hd kumaraswamy nanjanagudu
Koo

ಮೈಸೂರು: ಕೇಂದ್ರ ಸಚಿವರೇ (Union minister) ವಿಶ್ರಾಂತಿಗಾಗಿ ಬಂದರೂ ಬಾಗಿಲು ಬೀಗ ತೆಗೆಯದೆ ಅಧಿಕಾರಿಗಳು ಅವಮಾನ (insult) ಮಾಡಿ ಕಳಿಸಿದ ಘಟನೆ ನಂಜನಗೂಡಿನಲ್ಲಿ (Nanjanagudu) ನಡೆದಿದೆ. ಕೇಂದ್ರ ಸಚಿವ, ಜೆಡಿಎಸ್‌ ಮುಖಂಡ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಇಂದು ನಂಜನಗೂಡು ಪ್ರವಾಸದಲ್ಲಿದ್ದು, ಕೆಲ ನಿಮಿಷಗಳ ವಿಶ್ರಾಂತಿಗಾಗಿ ನಂಜನಗೂಡು ಪ್ರವಾಸಿ ಮಂದಿರಕ್ಕೆ (Tourist Guesthouse) ತೆರಳಿದ್ದರು.

ಕೇಂದ್ರ ಸಚಿವರ ಭೇಟಿ ವಿಚಾರವನ್ನು ಪ್ರವಾಸಿ ಮಂದಿರದ ಅಧಿಕಾರಿಗಳಿಗೆ ಸಾಕಷ್ಟು ಮೊದಲೇ ತಿಳಿಸಲಾಗಿತ್ತು. ಈ ಬಗ್ಗೆ ಪ್ರವಾಸ ಪಟ್ಟಿಯನ್ನೂ ಸಚಿವಾಲಯದ ಅಧಿಕಾರಿಗಳು ಬಿಡುಗಡೆ ಮಾಡಿದ್ದರು. ಆದರೆ ಎಚ್‌ಡಿಕೆ ತೆರಳುವ ಹೊತ್ತಿಗೆ ಪ್ರವಾಸಿ ಮಂದಿರದ ಬಾಗಿಲಿಗೆ ಬೀಗ ಹಾಕಲಾಗಿತ್ತು. ಯಾರೂ ಅಧಿಕಾರಿಗಳು ಸ್ಥಳದಲ್ಲಿರಲಿಲ್ಲ.

10 ನಿಮಿಷಕ್ಕೂ ಅಧಿಕ ಸಮಯ ಕಾದರೂ ಯಾವುದೇ ಸಿಬ್ಬಂದಿ ಬಾಗಿಲು ತೆಗೆಯಲು ಬರಲಿಲ್ಲ. ಈ ಸಂದರ್ಭದಲ್ಲಿ ಎಚ್‌ಡಿಕೆ ಕಾರಿನಲ್ಲೇ ಕುಳಿತಿದ್ದರು. ಜೊತೆಗೆ ಮಾಜಿ ಸಚಿವ ಸಾ.ರಾ.ಮಹೇಶ್ ಅವರೂ ಇದ್ದರು. ಕಾದು ಸುಸ್ತಾದ ಎಚ್‌ಡಿ ಕುಮಾರಸ್ವಾಮಿ ಬಳಿಕ ಅಲ್ಲಿಂದ ತೆರಳಿದರು.

ಈ ಬಗ್ಗೆ ಸಾ.ರಾ ಮಹೇಶ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವರು ಬಂದರೂ ಬಾಗಿಲು ತೆರೆಯದೆ ಇರುವುದರ ಹಿಂದೆ ರಾಜ್ಯ ಸರಕಾರದ ಚಿತಾವಣೆ ಇದೆ. ಅವಮಾನ ಮಾಡುವ ಉದ್ದೇಶಕ್ಕಾಗಿಯೇ ಹೀಗೆ ಮಾಡಲಾಗಿದೆ ಎಂದು ಜೆಡಿಎಸ್‌ ಮುಖಂಡರು ಆರೋಪಿಸಿದ್ದಾರೆ.

ʼಸಮಯ ಬಂದಾಗ ಮಿಲಿಟರಿಯನ್ನೂ ತರುತ್ತೇವೆʼ ಎಂದ ಎಚ್‌ಡಿಕೆ

ಹಾಸನ: ʼʼನಾನು ಅಂಕೋಲಾಕ್ಕೆ ಭೇಟಿ ನೀಡಿದ ವಿಚಾರ ಮುಂದಿಟ್ಟುಕೊಂಡು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರು, ಕುಮಾರಸ್ವಾಮಿ ಇಲ್ಲಿ ಏಕೆ ಬರ್ತಾರೆ, ಮಿಲಿಟರಿ ಕರೆದುಕೊಂಡು ಬಂದಿದ್ದಾರಾ? ಎಂದು ಪ್ರಶ್ನಿಸಿದ್ದಾರೆ. ಅವರು ಏಕೆ ಆ ರೀತಿ ಹೇಳಿಕೆ ಕೊಟ್ಟರು ಅಂತ ಯೋಚನೆ ಮಾಡಿದೆ. ಈ ರಾಜ್ಯದಲ್ಲಿ ನಡೆಯುತ್ತಿರುವ ದರೋಡೆಯನ್ನು ನಿಲ್ಲಿಸಲು ಮಿಲಿಟರಿ ಕರೆದುಕೊಂಡು ಬನ್ನಿ ಎಂದಿದ್ದಾರೆ. ಅದಕ್ಕೊಂದು ಕಾಲ ಬರುತ್ತೆ, ಆಗ ಕರೆದುಕೊಂಡು ಬರೋಣʼʼ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ತಿರುಗೇಟು ನೀಡಿದರು.

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆಗೆ ಹಾಸಕ್ಕೆ ಆಗಮಿಸಿದ ಅವರು ಕಾಂಗ್ರೆಸ್‌ ಮತ್ತು ಡಿ.ಕೆ.ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದರು. ಶನಿವಾರ ಅಂಕೋಲಾಕ್ಕೆ ಎಚ್.ಡಿ ಕುಮಾರಸ್ವಾಮಿ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಡಿಕೆಶಿ, ʼʼಮಿಲಿಟರಿ ಕರೆದುಕೊಂಡು ಇಳಿದಿದ್ದರೆ ಎಚ್‌ಡಿಕೆ ಫೀಲ್ಡಿಗೆ ಬಂದಿದ್ದಾರೆ ಅಂತ ಹೇಳಬಹುದು. ಸುಮ್ಮನೇ ವಿಸಿಟ್ ಮಾಡಿ ಬಂದರೆ ಏನಾದ್ರೂ ಆಗುತ್ತಾ? ಒಂದೇ ಗಂಟೆಯಲ್ಲಿ ನಮ್ಮ ಕ್ಯಾಬಿನೆಟ್ ಸಚಿವರನ್ನು ಅಲ್ಲಿಗೆ‌ ಓಡಿಸಿದ್ದೇವೆ. ಮಂಕಾಳ್ ವೈದ್ಯ, ಕೃಷ್ಣಬೈರೇಗೌಡ ಅಲ್ಲಿಗೆ ಹೋಗಿದ್ದರು. ಏನೇನು ಮಾಡಬೇಕೊ ಅದನ್ನು ಮಾಡಿದ್ದಾರೆ, ಅಧಿಕಾರಿಗಳಿಗೆ ಸೂಚನೆ‌ ಕೊಟ್ಟಿದ್ದಾರೆ. ನಮ್ಮ ಸರ್ಕಾರ ಏನು ಮಾಡಬೇಕೋ ಅದನ್ನು ಮಾಡುತ್ತದೆ. ಈಗ ರಾಜಕಾರಣ ಬೇಡ, ಜನರನ್ನು ಉಳಿಸಿಕೊಳ್ಳುವ ಕೆಲಸ ಮಾಡೋಣʼʼ ಎಂದು ತಿಳಿಸಿದ್ದರು.

ʼʼಡಿಕೆಶಿ ಪಾಪ ಕನಕಪುರದವರು. ಬ್ರ್ಯಾಂಡ್‌ ಬೆಂಗಳೂರು ಮಾಡುತ್ತೇನೆ ಎಂದು ಹೇಳುತ್ತಾರೆ. ಇನ್ನು ಕುಮಾರಸ್ವಾಮಿ 39 ಸೀಟ್ ಗೆದ್ದರೂ ಮುಖ್ಯಮಂತ್ರಿ ಮಾಡಿದ್ವಿ, ದೇವೇಗೌಡರು 16 ಸೀಟ್ ಗೆದ್ದರು ಪ್ರಧಾನಮಂತ್ರಿ ಮಾಡಿದ್ವು ಎಂದು ಕಾಂಗ್ರೆಸ್‌ನವರು ಹೇಳುತ್ತಾರೆ. ಅದರ ಜತೆಗೆ ಸರ್ಕಾರವನ್ನು ತೆಗೆದವರು ಯಾರು ಎನ್ನುವುದನ್ನೂ ಹೇಳಬೇಕಲ್ವಾ?ಕಾಂಗ್ರೆಸ್‌ ಮನೆ ಬಾಗಿಲಿಗೆ ನಾನು, ದೇವೇಗೌಡರು ಬಂದಿದ್ವಾ? ಅದೂ ಅಲ್ಲದೆ ದೇವೇಗೌಡರನ್ನು ಪ್ರಧಾನಮಂತ್ರಿ ಮಾಡಿದ್ದು ಕಮ್ಯೂನಿಸ್ಟ್‌ ಹಾಗೂ ಇತರರು. ಒಬ್ಬ ಕನ್ನಡಿಗನನ್ನು ತೆಗೆದವರು ಯಾರು? ನಾನು ಏನು ತಪ್ಪು ಮಾಡಿದೆ ಅಂತ ಸರ್ಕಾರ ತೆಗೆದರು?ʼʼ ಎಂದು ಎಚ್‌ಡಿಕೆ ಕಾಂಗ್ರೆಸ್‌ ಅನ್ನು ತರಾಟೆಗೆ ತೆಗೆದುಕೊಂಡರು.

ʼʼದಲಿತರು ಅಂತ ಕರೆಯಬೇಡಿ ಎಂದು ಚರ್ಚೆ ನಡೆದಿದೆ. ಅಹಿಂದ ಅಂತಾ ಎಷ್ಟು ವರ್ಷದಿಂದ ಹೆಸರು ಇಟ್ಟುಕೊಂಡಿದ್ದೀರಾ? ಅಹಿಂದ ಹೆಸರು ಇಟ್ಟುಕೊಂಡು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಅವಮಾನ ಮಾಡುತ್ತಿದ್ದೀರ. ಅವರಿಗೆ ಮೀಸಲಿಟ್ಟಿದ್ದ ಹಣ ಉಪಯೋಗಿಸಿಕೊಂಡಿದ್ದೀರಿʼʼ ಎಂದು ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು.

ಇದನ್ನೂ ಓದಿ: DK Shivakumar: ನಮ್ಮ ಅಧಿಕಾರಿಗಳು ಬಹಳ ಖದೀಮರಿದ್ದಾರೆ, ಡಿ ಗ್ರೇಡ್ ಕ್ಲರ್ಕ್‌ಗಳೆಲ್ಲಾ ಅಧೀಕ್ಷಕ, ಎಂಡಿಗಳಾಗಿದ್ದಾರೆ ಎಂದ ಡಿಕೆಶಿ

Continue Reading

ಮಳೆ

Karnataka Weather : ಬೆಂಗಳೂರಿನಲ್ಲಿ ಹೆಚ್ಚಲಿದೆ ಗಾಳಿ ವೇಗ; ಕರಾವಳಿ, ಮಲೆನಾಡಿನಲ್ಲಿ ಭಯಂಕರ ಮಳೆ

Karnataka Weather Forecast: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಭಾನುವಾರವೂ (Rain News) ಮುಂದುವರಿಯಲಿದೆ. ಹಲವು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯು (Karnataka Weather Forecast) ಜನರ ನಿದ್ದೆಗೆಡಿಸಿದೆ. ಅದರಲ್ಲೂ ನದಿ ಪಾತ್ರದ ಜನರು ಗಂಟುಮೂಟೆ ಕಟ್ಟಿಕೊಂಡು ಮನೆ ಖಾಲಿ ಮಾಡಿದ್ದಾರೆ. ಸದ್ಯ ಭಾನುವಾರವೂ ಗಾಳಿ ಜತೆಗೆ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾದರೆ, ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಬಲವಾದ ಮೇಲ್ಮೈ ಗಾಳಿಯೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಪ್ರತ್ಯೇಕವಾಗಿ ಹಗುರದಿಂದ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Drowned in water : ಮೀನು ಹಿಡಿಯುವಾಗ ಫಿಟ್ಸ್‌ ಬಂದು ನದಿಗೆ ಬಿದ್ದ ಮೀನುಗಾರ

ಬೆಂಗಳೂರಿನಲ್ಲಿ ರಭಸವಾಗಿ ಬೀಸಲಿದೆ ಗಾಳಿ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ

ಆರೆಂಜ್‌ ಅಲರ್ಟ್‌

ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯೊಂದಿಗೆ ಗಾಳಿಯು 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಉಡುಪಿ, ಬೀದರ್,ಕಲಬುರಗಿ ಮತ್ತು ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Karnataka Weather Forecast : ಶನಿವಾರ ಹಲವಡೆ ಸುರಿದ ಮಳೆಯು (Rain News) ಸಾವು-ನೋವಿಗೆ ಕಾರಣವಾಗಿದೆ. ಭಾನುವಾರವೂ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗಾಳಿ ಜತೆಗೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದೆಡೆ ಗಾಳಿ ಜತೆಗೆ ಮಳೆಯಾಗಲಿದೆ.

ಇದನ್ನೂ ಓದಿ: Drowned in water : ಮೀನು ಹಿಡಿಯುವಾಗ ಫಿಟ್ಸ್‌ ಬಂದು ನದಿಗೆ ಬಿದ್ದ ಮೀನುಗಾರ

ಮುತ್ತತ್ತಿಗೆ ಪ್ರವಾಸಿಗರ ನಿಷೇಧ

ಮಂಡ್ಯ: ಭಾರಿ ಮಳೆಯಿಂದಾಗಿ (Karnataka Rain) ಕಾವೇರಿ ನದಿಯಲ್ಲಿ ನಿರೀಕ್ಷೆಗೂ ಮೀರಿ ನೀರಿನ ಪ್ರಮಾಣ ಹರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಮುತ್ತತ್ತಿಗೆ (muthathi temple) ಪ್ರವಾಸಿಗರು, ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಕೆಆರ್‌ಎಸ್‌ನಿಂದ 1.22 ಲಕ್ಷ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಪ್ರವಾಹ ಮುನ್ನೆಚ್ಚರಿಕೆ ಕ್ರಮವಾಗಿ ಮುತ್ತತ್ತಿಗೆ ಪ್ರವಾಸಿಗರಿಗೆ ನಿಷೇಧಾಜ್ಞೆ ಜಾರಿ ಮಾಡಿ ಮಳವಳ್ಳಿ ತಹಸೀಲ್ದಾರ್ ಕೆ.ಎನ್ ಲೋಕೇಶ್ ಆದೇಶ ಹೊರಡಿಸಿದ್ದಾರೆ. ಪ್ರವಾಹ ಕಡಿಮೆಯಾಗುವವರೆಗೂ ನಿಷೇಧ ಜಾರಿಯಲ್ಲಿ ಇರಲಿದೆ. ಹೀಗಾಗಿ ಪೊಲೀಸರು ಕಾವೇರಿ ನದಿ ದಡದಲ್ಲಿ ಅಪಾಯದ ಸೂಚನಾ ಫಲಕ ಹಾಕಿದ್ದಾರೆ.

ಇದನ್ನೂ ಓದಿ: land slide : ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಕಾವೇರಿ ‌ನದಿ ಉಕ್ಕಿ ಹರಿಯುತ್ತಿದ್ದು, ಪ್ರವಾಹ ಸೃಷ್ಟಿಯಾಗಿದೆ. ಹೀಗಾಗಿ ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್ ಹಾಕಲಾಗಿದೆ. ನದಿಗೆ ಇಳಿಯದಂತೆ ಜಿಲ್ಲಾಡಳಿತ ಕಬ್ಬಿಣದ ರಾಡ್‌ಗಳನ್ನು ಬಳಸಿ ತಡೆಗೋಡೆ‌ ನಿರ್ಮಿಸಿದೆ. ನಿತ್ಯ ನೂರಾರು ಸಂಖ್ಯೆಯಲ್ಲಿ ಬಂದು ತಮ್ಮ‌ಪೂರ್ವಿಕರು, ಸಂಬಂಧಿಕರ ಅಸ್ತಿ ವಿಸರ್ಜನೆ ಜತೆಗೆ ಪಿಂಡ ಪ್ರಧಾನ ಮಾಡುತ್ತಿದ್ದರು. ಈಗ ಕಾವೇರಿ‌ ನದಿಯಲ್ಲಿ ಪ್ರವಾಹ ಹಿನ್ನೆಲೆ ನದಿ ದಂಡೆಯಲ್ಲಿ ಕುಳಿತು ಪೂಜೆ ಮಾಡುವ ಅವಕಾಶ ಇಲ್ಲ. ಜನರು ಪಿಂಡ ಪ್ರದಾನಕ್ಕೆ ಬಂದು ವಾಪಸ್‌ ಹೋಗುತ್ತಿದ್ದಾರೆ.

ನಿಮಿಷಾಂಭ ದೇಗುಲದ ಸ್ನಾನ ಘಟ್ಟಕ್ಕೆ ಭಕ್ತರಿಗೆ ನಿರ್ಬಂಧ

ನಿಮಿಷಾಂಭ ದೇಗುಲದ ಭಕ್ತರಿಗೂ ಕಾವೇರಿ ಪ್ರವಾಹ ಬಿಸಿ ತಟ್ಟಿದೆ. ಕೆಆರ್‌ಎಸ್‌ನಿಂದ ನದಿಗೆ ಅಧಿಕ ನೀರು ಬಿಡುಗಡೆ ಮಾಡುತ್ತಿರುವುದರಿಂದ ಪ್ರಸಿದ್ಧ ನಿಮಿಷಾಂಭ ದೇವಾಲಯದ ಬಳಿ ಪ್ರವಾಹದ ಆತಂಕ ಎದುರಾಗಿದೆ. ಪ್ರವಾಹ ಹಿನ್ನೆಲೆಯಲ್ಲಿ ಕಾವೇರಿ ನದಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ. ದೇವಸ್ಥಾನದ ಬಳಿಯ ಸ್ನಾನ ಘಟ್ಟಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.

ರಂಗನತಿಟ್ಟು ಪಕ್ಷಿಧಾಮ ವಾಕಿಂಗ್‌ ಪಾಥ್‌ ಮುಳುಗಡೆ

ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರು ಕಾವೇರಿ ನದಿಯಿಂದಾಗಿ ರಂಗನತಿಟ್ಟು ಪಕ್ಷಿಧಾಮಕ್ಕೆ ಜಲ ದಿಗ್ಭಂದನ ಹಾಕಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮಕ್ಕೆ ಕಾವೇರಿ ನೀರು ನುಗ್ಗಿದೆ. ಇದರಿಂದಾಗಿ ವಾಕಿಂಗ್ ಪಾಥ್, ಅರಣ್ಯ ಇಲಾಖೆ ಕಚೇರಿ ಜಲಾವೃತಗೊಂಡಿದೆ. ಈಗಾಗಲೇ ‌ಪಕ್ಷಿಧಾಮಕ್ಕೆ ಪ್ರವಾಸಿಗರ ನಿರ್ಬಂಧ ಹೇರಲಾಗಿದೆ. ಜತೆಗೆ ಬೋಟಿಂಗ್ ವ್ಯವಸ್ಥೆ ಕೂಡ ಸ್ಥಗಿತ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
sunil bose savitha viral news
ವೈರಲ್ ನ್ಯೂಸ್6 mins ago

Viral News: ಮದುವೆಯೇ ಆಗಿಲ್ಲ ಎಂದ ಚಾಮರಾಜನಗರ ಸಂಸದ ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟರು!

Geyser Blast
ತಂತ್ರಜ್ಞಾನ9 mins ago

Geyser Blast: ಬಾಂಬ್‌‌ನಂತೆ ಬ್ಲಾಸ್ಟ್ ಆಗಬಹುದು ಗೀಸರ್! ಮಳೆಗಾಲದಲ್ಲಿ ಈ ಮುನ್ನೆಚ್ಚರಿಕೆ ಇರಲಿ

Mysuru News
ಕ್ರೈಂ30 mins ago

Mysuru News : ಡೆತ್‌ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್ ಶವವಾಗಿ ಪತ್ತೆ

Actor Darshan case Police Serve Notice To Siddarudha Who Claimed To Met Darshan
ಸ್ಯಾಂಡಲ್ ವುಡ್34 mins ago

Actor Darshan: ದರ್ಶನ್​ ಭೇಟಿ ಮಾಡಿ, ಯೋಗ, ಧ್ಯಾನ ಹೇಳಿಕೊಟ್ಟೆ ಎಂದ ಸಿದ್ಧಾರೂಢನಿಗೆ ಸಂಕಷ್ಟ! ನೋಟಿಸ್‌ ಕೊಟ್ಟ ಪೊಲೀಸರು!

hd kumaraswamy nanjanagudu
ಪ್ರಮುಖ ಸುದ್ದಿ37 mins ago

HD Kumaraswamy: ಎಚ್‌ಡಿ ಕುಮಾರಸ್ವಾಮಿ ಬಂದರೂ ತೆಗೆಯದ ಪ್ರವಾಸಿ ಮಂದಿರ ಬೀಗ, ಕೇಂದ್ರ ಸಚಿವರಿಗೆ ಅವಮಾನ

RRB Recruitment 2024
ಉದ್ಯೋಗ39 mins ago

RRB Recruitment 2024: ರೈಲ್ವೇ ಇಲಾಖೆಯಲ್ಲಿದೆ ಬರೋಬ್ಬರಿ 7,951 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Paris 2024 Olympics
ಕ್ರೀಡೆ40 mins ago

Paris 2024 Olympics: ಭಾರತೀಯ ಕ್ರೀಡಾಪಟುಗಳಿಗೆ ವಸ್ತ್ರ ವಿನ್ಯಾಸ ಮಾಡಿದ್ದ ತರುಣ್‌ ವಿರುದ್ಧ ಟೀಕೆಗಳ ಸುರಿಮಳೆ

road Accident
ರಾಯಚೂರು55 mins ago

Road Accident : ಕುಡಿದು ಕಾರು ಓಡಿಸಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು ; ಕಾರ್ಕಳದಲ್ಲಿ ಸಿಲಿಂಡರ್ ಸ್ಫೋಟ

Delhi Floods
ದೇಶ1 hour ago

Delhi Floods: ದೆಹಲಿಯಲ್ಲಿ ಕೋಚಿಂಗ್‌ ಸೆಂಟರ್‌ಗೆ ನುಗ್ಗಿದ ನೀರು; ಮೃತರ ಸಂಖ್ಯೆ 3ಕ್ಕೆ ಏರಿಕೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ

dog meat abdul razak
ಕ್ರೈಂ1 hour ago

Dog Meat: ಅಬ್ದುಲ್‌ ರಜಾಕ್‌ ತರಿಸುವ ಮಾಂಸದ ಮೇಲೆ ಹೆಚ್ಚುತ್ತಿದೆ ಅನುಮಾನ! ಹಲವು ಹೋಟೆಲ್‌ ಮಾಲಿಕರಿಗೆ ನೋಟೀಸ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ17 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ22 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ23 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ3 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್3 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ3 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌