Road Problem | ಮಳೆ ನೀರು ಸಮಸ್ಯೆ ಎಂದು ರಸ್ತೆ ಮಧ್ಯೆ ರಾಜಕಾಲುವೆ ಕಿತ್ತರು; 15 ದಿನವಾದರೂ ಸುಳಿಯದಾದರು! - Vistara News

ಕರ್ನಾಟಕ

Road Problem | ಮಳೆ ನೀರು ಸಮಸ್ಯೆ ಎಂದು ರಸ್ತೆ ಮಧ್ಯೆ ರಾಜಕಾಲುವೆ ಕಿತ್ತರು; 15 ದಿನವಾದರೂ ಸುಳಿಯದಾದರು!

Road Problem | ಮಳವಳ್ಳಿ ಪಟ್ಟಣದ ಹೃದಯ ಭಾಗದ ಅನಂತರಾಮ್ ವೃತ್ತದಲ್ಲಿನ ರಾಜ ಕಾಲುವೆಯನ್ನು ದುರಸ್ತಿಗಾಗಿ ತೆರೆದು ಎರಡು ವಾರ ಕಳೆದಿದ್ದರೂ ಕಾಮಗಾರಿ ಮಾಡದೆ ಸಂಚಾರಕ್ಕೆ ಸಮಸ್ಯೆಯಾಗಿದೆ.

VISTARANEWS.COM


on

tumkur readers corner
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಳವಳ್ಳಿ: ಅವೈಜ್ಞಾನಿಕ ಕಾಮಗಾರಿಗಳು ತೊಂದರೆ ಕೊಡುವುದರ ಜತೆಗೆ ದುರಸ್ತಿ ಕಾಮಗಾರಿಗಳು ಸಹ ಭಾರಿ ಸಮಸ್ಯೆಯನ್ನುಂಟು ಮಾಡುತ್ತಿದೆ. ಇಂಥದ್ದೊಂದು ಸಮಸ್ಯೆಗೆ ನಗರದ ಜನತೆ ತುತ್ತಾಗಿದ್ದು, ರಾಜ ಕಾಲುವೆಯನ್ನು ದುರಸ್ತಿಗಾಗಿ ಓಪನ್‌ ಮಾಡಿ 15 ದಿನ ಕಳೆದರೂ ಮುಚ್ಚುವ ಕೆಲಸ ಆಗಿಲ್ಲ. ಸಾರ್ವಜನಿಕ ಸಂಚಾರಕ್ಕೆ (Road Problem) ರಸ್ತೆ ಸಿಗುತ್ತಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ.

ಪಟ್ಟಣದ ಹೃದಯ ಭಾಗದ ಅನಂತರಾಮ್ ವೃತ್ತದಲ್ಲಿ ರಾಜ ಕಾಲುವೆ ಹಾದುಹೋಗಿದ್ದು, ಮಳೆಗಾಲದಲ್ಲಿ ತ್ಯಾಜ್ಯ ನೀರೆಲ್ಲವೂ ತುಂಬಿ ಅಕ್ಕಪಕ್ಕದ ಅಂಗಡಿಗಳಿಗೆ, ಮನಗಳಿಗೆ ನುಗ್ಗುತ್ತಿದೆ. ಈ ಸಂಬಂಧ ದೂರಿದ್ದಕ್ಕೆ ಬಂದ ಅಧಿಕಾರಿಗಳು ಚರಂಡಿಯ ಸ್ಲ್ಯಾಬ್‌ ಅನ್ನು ಕಿತ್ತು ಹೋಗಿದ್ದರು. ಬಳಿಕ ಕಣ್ಣೊರೆಸುವ ತಂತ್ರದಂತೆ ಅಲ್ಪ ಕೆಲಸ ಮಾಡಿ ಹಾಗೆಯೇ ಬಿಟ್ಟು ಹೋಗಲಾಗಿದ್ದು, ೧೫ ದಿನವಾದರೂ ಇತ್ತ ಸುಳಿವಿಲ್ಲದಂತಾಗಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಶಾಸಕರು, ಮಾಜಿ ಶಾಸಕರು ಹಾಗೂ ಪುರಸಭೆ ಅಧ್ಯಕ್ಷರು ಸೇರಿದಂತೆ ನಾಗರಿಕರು ದಿನನಿತ್ಯ ಈ ರಸ್ತೆ ಮಾರ್ಗದಲ್ಲಿಯೇ ಸಂಚಾರ ಮಾಡುತ್ತಾರೆ. ಅವರಿಗೆ ಇದು ದಿನವೂ ಕಂಡು ರಸ್ತೆ ಬದಲಿಸಿ ಹೋಗುತ್ತಿದ್ದಾರೆಯೇ ವಿನಃ ಇತ್ತ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನಕ್ಕೆ ಮುಂದಾಗಿಲ್ಲ.

ಇದನ್ನೂ ಓದಿ | Chess Prodigy | ಎದುರಾಳಿಯೇ ಇಲ್ಲ ಎಂದು ಎದೆ ತಟ್ಟಿಕೊಂಡವನ ಹಣೆಯ ಮೇಲೆ ಸೋಲಿನ ಷರಾ ಬರೆದ ಬಾಲಕ!

ವ್ಯಾಪಾರಕ್ಕೆ ಅನನುಕೂಲ
ಇತ್ತೀಚೆಗೆ ಸುರಿದ ಬಾರಿ ಮಳೆಯಲ್ಲಿ ರಸ್ತೆ ತುಂಬಾ ಮಳೆ ನೀರು ತುಂಬಿಕೊಂಡು, ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿ ವರ್ತಕರಿಗೆ ವ್ಯಾಪಾರಕ್ಕೆ ಕಷ್ಟವಾಗಿತ್ತು. ಈ ಬಗ್ಗೆ ದೂರು ನೀಡಿದ್ದರಿಂದ ಬಂದ ಪುರಸಭೆ ಸಿಬ್ಬಂದಿ ರಸ್ತೆ ಮಧ್ಯೆದಲ್ಲಿ ಮಧ್ಯದಲ್ಲಿ ಇದ್ದಂತ ಕಾಂಕ್ರಿಟ್ ಸ್ಲ್ಯಾಬ್‌ ಅನ್ನು ಅರ್ಧ ಭಾಗ ತೆರವುಗೊಳಿಸಿದ್ದರು.

ಸುಮಾರು 15 ದಿನವಾದರೂ ಇದರ ಬಗ್ಗೆ ಪುರಸಭೆ ಆಡಳಿತವಾಗಲಿ ಹಾಗೂ ಕೆಎಸ್‌ಎಚ್‌ಡಿಎ ಆಗಲೀ ಇದರ ಬಗ್ಗೆ ಯಾವುದೇ ಅಧಿಕಾರಿಗಳು ಗಮನ ಕೊಡುತ್ತಿಲ್ಲ. ಇದರಿಂದಾಗಿ ದಿನನಿತ್ಯ ವಾಹನಗಳ ಸಂಚಾರ, ಶಾಲೆ-ಕಾಲೇಜು ಮಕ್ಕಳಿಗೆ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಶನಿವಾರ, ಭಾನುವಾರ ಹಾಗೂ ರಜಾ ದಿನಗಳಲ್ಲಿ ವಾಹನ ದಟ್ಟಣೆಯುಂಟಾಗುತ್ತಿದೆ. ಆದರೂ, ಕ್ರಮವಹಿಸುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶಗೊಂಡಿದ್ದಾರೆ.

ಸಂಬಂಧಪಟ್ಟ ಜನಪ್ರತಿನಿಧಿಗಳು, ಪುರಸಭೆ ಮತ್ತು ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಅಥಾರಿಟಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

(ಚಿತ್ರ-ವರದಿ: ಸಂಜಯ್ ಬಾಬು)

________

ಪ್ರಿಯ ಓದುಗರೇ,
ನಿಮ್ಮ ಅನಿಸಿಕೆ, ಅಭಿಪ್ರಾಯ, ಸಲಹೆ-ಸೂಚನೆ, ನಾಗರಿಕ ಸಮಸ್ಯೆ ಇತ್ಯಾದಿ ಸಂಗತಿಗಳನ್ನು ಹೇಳಿಕೊಳ್ಳಲು ‘ವಿಸ್ತಾರʼದಲ್ಲಿ ನಿಮಗೆ ಮುಕ್ತ ಅವಕಾಶ ಇದೆ. ಸಾಂದರ್ಭಿಕ ಲೇಖನಗಳನ್ನೂ ನೀವು ಬರೆದು ಕಳುಹಿಸಬಹುದು. ಬರಹದ ಜತೆ ನಿಮ್ಮದೊಂದು ಫೋಟೊ ಕೂಡ ಇರಲಿ.
ನಮ್ಮ ಇಮೇಲ್‌ ವಿಳಾಸ: janasamparka@vistaranews.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Gadag News: ಮುಂಡರಗಿ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

Gadag News: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದ ಕೃಷಿ ಹೊಂಡದಲ್ಲಿ ಮುಳುಗಿ ಮಹಿಳೆ ಹಾಗೂ ಬಾಲಕ ಮೃತಪಟ್ಟಿದ್ದಾರೆ.

VISTARANEWS.COM


on

Gadag News
Koo

ಗದಗ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. ತಂಗಿಯ ಮಗನೊಂದಿಗೆ ಮಹಿಳೆಯೊಬ್ಬರು ನೀರು ತರಲು‌ ಕೃಷಿ ಹೊಂಡಕ್ಕೆ ಹೋದಾಗ ಘಟನೆ ನಡೆದಿದೆ.

ಗೀತಾ ಹೆಸರೂರು (34), ಮನೋಜ ಕವಲೂರು (5) ಮೃತರು. ಮೊದಲಿಗೆ ಮನೋಜ್ ಹೊಂಡದಲ್ಲಿ ಕಾಲು‌ ಜಾರಿ ಬಿದ್ದಿದ್ದಾನೆ. ಬಾಲಕನ ರಕ್ಷಣೆಗೆ ಹೋಗಿದ್ದ ಗೀತಾ ಕೂಡ ನೀರಿನಲ್ಲಿ ಮುಳುಗಿದ್ದಾರೆ. ಶಾಲೆ ರಜೆ ಹಿನ್ನೆಲೆ ದೊಡ್ಡಮ್ಮನ ಮನೆಗೆ ಮನೋಜ್ ಬಂದಿದ್ದ. ಬಾಲಕನ ಜತೆಗೆ ಕೃಷಿ ಹೊಂಡಕ್ಕೆ ಗೀತಾ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Police Officer: ಮರಳು ಮಾಫಿಯಾ ತಡೆಯಲು ಹೋದ ಎಎಸ್‌ಐ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ!

ಕಾಂಗ್ರೆಸ್‌ಗೆ ಅಲ್ಲ.. ಬಿಜೆಪಿಗೆ ಮತ ಹಾಕುವೆ ಎಂದಿದ್ದಕ್ಕೆ ರಸ್ತೆಗೆ ಎಳೆದು ತಂದು ಕೈ-ಕಾಲು ಮುರಿದರು ದುರುಳರು

assault case

ಕೊಪ್ಪಳ: ಕಾಂಗ್ರೆಸ್ ಮುಖಂಡರಿಂದ ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ (Assault Case) ನಡೆಸಿರುವ ಆರೋಪವೊಂದು ಕೇಳಿ ಬಂದಿದೆ. ದ್ಯಾಮಣ್ಣ ಬಾಲನಗೌಡರ್ ಹಲ್ಲೆಗೊಳಗಾದ ಬಿಜೆಪಿ ಮುಖಂಡರಾಗಿದ್ದಾರೆ. ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ನಿನ್ನೆ ಶನಿವಾರ ರಾತ್ರಿ ಘಟನೆ ನಡೆದಿದೆ.

ಕಾಂಗ್ರೆಸ್‌ ಕಾರ್ಯಕರ್ತರಾದ ಗವಿಸಿದ್ದ, ಬಾಳಪ್ಪ, ನೀಲಪ್ಪ, ಗಂಗಣ್ಣ ಎಂಬುವವರು ದ್ಯಾಮಣ್ಣನಿಗೆ ಹಲ್ಲೆ ನಡೆಸಿದ್ದಾರೆ. ನಿನ್ನೆ ಶನಿವಾರ ರಾತ್ರಿ ದ್ಯಾಮಣ್ಣ ಮನೆಗೆ ಕಾಂಗ್ರೆಸ್ ಮುಖಂಡರು ಬಂದಿದ್ದಾರೆ. ಈ ವೇಳೆ ದ್ಯಾಮಣ್ಣ ಕಾಂಗ್ರೆಸ್‌ಗೆ ಮತ ಹಾಕುವುದಿಲ್ಲ, ಬಿಜೆಪಿ ಪಕ್ಷಕ್ಕೆ ಮತ ಹಾಕುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: 108 Ambulance : 3 ತಿಂಗಳ ವೇತನ ಬಾಕಿ; ನಾಳೆ ರಾತ್ರಿಯಿಂದಲೇ 108 ಆಂಬ್ಯುಲೆನ್ಸ್‌ ಸೇವೆ ಬಂದ್‌!

ಇದರಿಂದ ಸಿಟ್ಟಾದ ಕೈ ಕಾರ್ಯಕರ್ತರು, ಕಾಂಗ್ರೆಸ್‌ಗೆ ಯಾಕೆ ಮತ ಹಾಕುವುದಿಲ್ಲ ಎಂದು ದ್ಯಾಮಣ್ಣನ ಮೇಲೆ ಎರಗಿದ್ದಾರೆ. ಬಳಿಕ ದ್ಯಾಮಣ್ಣನನ್ನು ರಸ್ತೆಗೆಳೆದು ತಂದು ಕಟ್ಟಿಗೆಯಿಂದ ಹಲ್ಲೆ ಮಾಡಿದ್ದಾರೆ. ದ್ಯಾಮಣ್ಣನ ಕೈ-ಕಾಲು ಮುರಿದಿದ್ದಾರೆ. ಗಾಯಾಳನ್ನು ದ್ಯಾಮಣ್ಣನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಿಲ್ಲಾಸ್ಪತ್ರೆಗೆ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣವರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಪತಿ ಮೇಲಿನ ಸಿಟ್ಟಿಗೆ ಮೂಕ ಮಗುವನ್ನೇ ಕಾಲುವೆಗೆ ಎಸೆದಳು; ಮೊಸಳೆ ಬಾಯಲ್ಲಿತ್ತು ಮೃತದೇಹ!

murder case In karwar

ಕಾರವಾರ : ತಾಯಿಯೊಬ್ಬಳು ಕೋಪದಲ್ಲಿ ತನ್ನ ಮಗುವನ್ನೇ ಕಾಲುವೆಗೆ (Murder case ) ಎಸೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಸಾವಿತ್ರಿ ಎಂಬಾಕೆ ತನ್ನ ಆರು ವರ್ಷದ ಮಗನನ್ನು ನಾಲೆಗೆ ಎಸೆದಿದ್ದಾಳೆ. ವಿನೋದ್ (6) ಮೃತ ದುರ್ದೈವಿ.

ಮಗುವು ಮೂಕನಾಗಿದ್ದರಿಂದ ಸಾವಿತ್ರಿ ಹಾಗೂ ರವಿಕುಮಾರ್ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ರವಿಕುಮಾರ್‌ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಎಂದು ಸಾವಿತ್ರಿಗೆ ಬೈಯ್ಯುತ್ತಿದ್ದ.

ನಿನ್ನೆ ಶನಿವಾರ ರಾತ್ರಿಯೂ ಸಹ ಸಾವಿತ್ರಿ ಹಾಗೂ ಪತಿ ರವಿಕುಮಾರ್‌ ಜತೆಗೆ ಜಗಳ ನಡೆದಿದೆ. ಪತಿ ಜತೆಗೆ ಗಲಾಟೆ ಆದಾಗ ಸಾವಿತ್ರಿ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋಗಿ ನಾಲೆಗೆ ಎಸೆದಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮಗುವನ್ನು ಹುಡುಕಾಡಲು ಮುಂದಾಗಿದ್ದಾರೆ.

ಆದರೆ ಮಗು ಸಿಗದಿದ್ದಾಗ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಹಾಲಮಡ್ಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಮೃತದೇಹವು ಪತ್ತೆಯಾಗಿದೆ. ನಾಲೆಗೆ ಎಸೆಯಲ್ಪಟ್ಟಾಗ ಮೊಸಳೆಯೊಂದು ಮಗುವಿನ ಬಲಗೈ ಕಚ್ಚಿ ಎಳೆದು ಹೋಗಿತ್ತು. ಆರು ವರ್ಷದ ಗಂಡು ಮಗುವಿಗಾಗಿ ನಿನ್ನೆ ಶನಿವಾರ ರಾತ್ರಿಯಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.

ಇದನ್ನೂ ಓದಿ: Nijjar Killing: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದ ಮೂವರ ಬಂಧನ; ಭಾರತದ ಪ್ರತಿಕ್ರಿಯೆ ಏನು?

ಭಾನುವಾರ ಬೆಳಗ್ಗೆ ಕಾರ್ಯಾಚರಣೆ ವೇಳೆ ಮಗುವಿನ ಜತೆ ಆಗಾಗ ಮೊಸಳೆಯು ಕಾಣಿಸಿಕೊಂಡಿತ್ತು. ದಾಂಡೇಲಿಯ ಗ್ರಾಮೀಣ ಠಾಣಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಲ್ಲಿ ಮಗುವಿನ ಮೃತದೇಹ ಪತ್ತೆ ಮಾಡಲಾಗಿದೆ. ಮುಳುಗು ತಜ್ಞರು ಮೊಸಳೆಯ ಬಾಯಿಯಿಂದ ಮಗುವಿನ ಮೃತದೇಹ ಬಿಡಿಸಿಕೊಂಡು ಬಂದಿದ್ದಾರೆ.

ಇನ್ನೂ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಅಪ್ಪ-ಅಮ್ಮನ ಜಗಳದಲ್ಲಿ ಏನು ತಿಳಿಯದ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Drought Relief: ಚುನಾವಣೆ ಖರ್ಚಿಗಾಗಿ ಬರ ಪರಿಹಾರ ತಡೆಹಿಡಿದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್‌

Drought Relief: ಬರಗಾಲದ ಪರಿಹಾರ ವಿತರಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ರಾಜಕೀಯ ಮಾಡುತ್ತಾ ಕಟುಕನಂತೆ ವರ್ತಿಸುತ್ತಿದೆಯೇ ಹೊರತು ಕಾಳಜಿ ತೋರುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

VISTARANEWS.COM


on

Drought Relief
Koo

ಬೆಂಗಳೂರು: ಚುನಾವಣೆಗೆ ಖರ್ಚು ಮಾಡಲು ಹಾಗೂ ಗ್ಯಾರಂಟಿಗಾಗಿ ಕಾಂಗ್ರೆಸ್‌ ಸರ್ಕಾರ ಬರ ಪರಿಹಾರವನ್ನು (Drought Relief) ತಡೆ ಹಿಡಿದುಕೊಂಡಿದೆ. ಇದನ್ನು ಕೂಡಲೇ ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಗಾಲದ ಪರಿಹಾರ ವಿತರಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ರಾಜಕೀಯ ಮಾಡುತ್ತಾ ಕಟುಕನಂತೆ ವರ್ತಿಸುತ್ತಿದೆಯೇ ಹೊರತು ಕಾಳಜಿ ತೋರುತ್ತಿಲ್ಲ. ಜಾಹೀರಾತು ನೋಡಿ ರಾಜಕೀಯ ಮಾಡುವುದನ್ನು ಬಿಟ್ಟರೆ ರೈತರ ಸಂಕಷ್ಟಕ್ಕೆ ಮಿಡಿಯುವ ಕೆಲಸ ಮಾಡಿಲ್ಲ. ಕಾಂಗ್ರೆಸ್‌ ನಾಯಕರ ಯೋಗ್ಯತೆಗೆ ಒಂದು ರೂಪಾಯಿ ಬರ ಪರಿಹಾರ ನೀಡಿಲ್ಲ. ಕೇಂದ್ರ ಸರ್ಕಾರ ಈಗಾಗಲೇ ಪರಿಹಾರ ನೀಡಿದ್ದರೂ ಅದನ್ನು ರೈತರಿಗೆ ಕೊಡದೆ ಗ್ಯಾರಂಟಿಗೆ ಬಳಸಿಕೊಳ್ಳಲಾಗುತ್ತಿದೆ. ಇದಕ್ಕಾಗಿಯೇ ಪರಿಹಾರ ವಿತರಣೆಗೆ ವಿಳಂಬ ಮಾಡಲಾಗಿದೆ ಎಂದರು.

ರೈತರು ಪರಿಹಾರ ಕೇಳಿದರೆ ನಿಮ್ಮ ಮನೆಯ ಹೆಂಗಸರಿಗೆ 2 ಸಾವಿರ ರೂಪಾಯಿ ಕೊಡಲಿಲ್ಲವೇ ಎಂದು ಶಾಸಕರು ಅಹಂಕಾರದಿಂದ ಮಾತನಾಡುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರ ನೇತೃತ್ವದಲ್ಲಿ ಕೂಡಲೇ ಟಾಸ್ಕ್‌ಫೋರ್ಸ್‌ ರಚನೆ ಮಾಡಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು. ರಾಜ್ಯಾದ್ಯಂತ ಜಾನುವಾರುಗಳಿಗೆ ಮೇವಿನ ಕೊರತೆ ಕಂಡುಬಂದಿದ್ದು, ಇದಕ್ಕಾಗಿ ಗೋಶಾಲೆಗಳನ್ನು ಆರಂಭಿಸಬೇಕು. ಇಲ್ಲವಾದರೆ ಎಷ್ಟು ಗೋಶಾಲೆ ಆರಂಭಿಸಿದ್ದಾರೆ ಎಂದು ಲೆಕ್ಕ ನೀಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ | Prajwal Revanna Case: ಪ್ರಜ್ವಲ್‌ಗೆ ವೋಟ್‌ ಹಾಕಿ ಎಂಬ ಸಿದ್ದರಾಮಯ್ಯ ಟ್ವೀಟ್‌; ಬಿಜೆಪಿಯಿಂದ ಫುಲ್‌ ಕ್ಲಾಸ್‌!

ಬರದ ವಿಚಾರದಲ್ಲಿ ಗಂಭೀರತೆ ತೋರಿಸದ ಸಿದ್ದರಾಮಯ್ಯ ಮಜವಾದಿ ಸಿಎಂ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ಬಂದ ಬಳಿಕ ರಾಜ್ಯದಲ್ಲಿ ಬರಗಾಲ ಬಂದಿದೆ. ಈ ಜೂನ್‌ನಲ್ಲಾದರೂ ಮಳೆ ಬರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಈ ಬರಗಾಲದಲ್ಲಿ ಗೊಬ್ಬರ ಸಂಗ್ರಹ ಎಷ್ಟಿದೆ ಎಂದು ಸರ್ಕಾರ ತಿಳಿಸಬೇಕು. ಆದರೆ ಮುಂಗಾರು ಮಳೆ ಬರುತ್ತೆಯೋ ಇಲ್ಲವೋ ಎಂಬ ಜ್ಞಾನವೂ ಮುಖ್ಯಮಂತ್ರಿಗಿಲ್ಲ. ಕೃಷಿ ಸಚಿವರು ಈ ಕುರಿತು ಸಭೆಗಳನ್ನೇ ನಡೆಸಿಲ್ಲ. 5,000 ಕೋಟಿ ರೂ. ಬರ ನಿರ್ವಹಣೆಗೆ ಇಡುತ್ತೇವೆ ಎಂದು ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಹೇಳಲಾಗಿದೆ. ಆದರೆ ನಯಾಪೈಸೆಯೂ ಕಾಣುತ್ತಿಲ್ಲ ಎಂದು ದೂರಿದರು.

ಬಡ್ಡಿ ವ್ಯಾಪಾರಿ ಅಧಿಕಾರಿಗಳು

ಕಾಂಗ್ರೆಸ್‌ ಸರ್ಕಾರ ರೈತರಿಗೆ ನೀಡಿದ 2,000 ರೂಪಾಯಿಯನ್ನು ಕೇಂದ್ರ ಸರ್ಕಾರ ನೀಡಿದ ಪರಿಹಾರದ ಮೊತ್ತದಲ್ಲಿ ಕಡಿತಗೊಳಿಸಲಾಗುವುದು ಎಂದು ತಿಳಿಸಲಾಗಿದೆ. ಸರ್ಕಾರಿ ಅಧಿಕಾರಿಗಳು ಮಾನವೀಯತೆ ಇಲ್ಲದೆ ಮೀಟರ್‌ ಬಡ್ಡಿ ವ್ಯಾಪಾರಿಗಳಂತೆ ವರ್ತಿಸುತ್ತಿದ್ದಾರೆ. ಆ ಹಣವನ್ನು ವಾಪಸ್‌ ಕೇಳಲು ಸರ್ಕಾರಕ್ಕೆ ನಾಚಿಕೆಯಾಗಬೇಕು. ಬಿಜೆಪಿ ಸರ್ಕಾರ ದುಪ್ಪಟ್ಟು ಪರಿಹಾರ ನೀಡಿತ್ತು. ಆ ಹಣವನ್ನು ಯಾವುದೇ ಕಾರಣಕ್ಕೂ ಕಡಿತ ಮಾಡಬಾರದು ಎಂದು ಒತ್ತಾಯಿಸಿದರು.

ಡಿಬಿಟಿ ಮೂಲಕ ನೇರವಾಗಿ ರೈತರ ಖಾತೆಗೆ ಕೂಡಲೇ ಹಣ ವರ್ಗಾವಣೆ ಮಾಡಬಹುದು. ಆದರೆ ಇನ್ನೂ ಸರ್ಕಾರ ವಿಳಂಬ ಮಾಡುತ್ತಿದೆ. ಹಣವನ್ನು ತನ್ನಲ್ಲೇ ಇಟ್ಟುಕೊಳ್ಳಲು ಸರ್ಕಾರ ಈ ರೀತಿ ತಡ ಮಾಡುತ್ತಿದೆ. ಈ ಕುರಿತು ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸುತ್ತೇನೆ ಎಂದರು.

ಹಿಂದುಳಿದ ವರ್ಗಕ್ಕೆ ಅನ್ಯಾಯ

ಹಿಂದುಳಿದ ವರ್ಗಗಳ ಪರ ಮೊಸಳೆ ಕಣ್ಣೀರು ಹಾಕುವ ಕಾಂಗ್ರೆಸ್‌, ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಿದೆ. ದೇವರಾಜ ಅರಸು ನಿಗಮಕ್ಕೆ ಬಿಜೆಪಿ 190 ಕೋಟಿ ರೂ. ನೀಡಿದ್ದರೆ, ಕಾಂಗ್ರೆಸ್‌ ಸರ್ಕಾರ 100 ಕೋಟಿ ರೂ. ಗೆ ಇಳಿಸಿದೆ. ಮರಾಠ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದರೆ ಕಾಂಗ್ರೆಸ್‌ 50 ಕೋಟಿ ರೂ. ನೀಡಿದೆ. ಅಂಬಿಗರ ಚೌಡಯ್ಯ ನಿಗಮಕ್ಕೆ ಬಿಜೆಪಿ 25 ಕೋಟಿ ರೂ. ನೀಡಿದ್ದು, ಕಾಂಗ್ರೆಸ್‌ ಸರ್ಕಾರ ಅದನ್ನೂ ಅರ್ಧಕ್ಕಿಳಿಸಿದೆ. ವೀರಶೈವ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದ್ದರೆ, ಅದನ್ನು ಕಾಂಗ್ರೆಸ್‌ 60 ಕೋಟಿ ರೂ. ಗೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ | Prajwal Revanna Case: ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಕೇಸ್‌; ರೇವಣ್ಣ ಬಂಧನ ಕ್ರಮ ಸರಿ ಇದೆ ಎಂದ ಆರ್.‌ ಅಶೋಕ್‌!

ರಾಹುಲ್‌ ಗಾಂಧಿಯನ್ನು ಕೇರಳದ ಸಿಎಂ ಅಮುಲ್‌ ಬೇಬಿ ಎಂದಿದ್ದಾರೆ. ಆದ್ದರಿಂದ ಅಲ್ಲಿಂದ ಮಿಂಚಿನ ಓಟದ ಮೂಲಕ ರಾಹುಲ್‌, ರಾಯ್‌ಬರೇಲಿಗೆ ಹೋಗಿದ್ದಾರೆ. ಕಾಂಗ್ರೆಸ್‌ ನಾಯಕರಿಗೆ ಮೋದಿ ಎಂದರೆ ಭಯವಿದೆ ಎಂದರು.

Continue Reading

ಕರ್ನಾಟಕ

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Prajwal Revanna Case: ಏಪ್ರಿಲ್‌ 28ರಂದು ನಮ್ಮ ವಿರುದ್ಧ ಕೇಸ್‌ ದಾಖಲಿಸಿದರು. ಆಗ ನಮ್ಮ ಮೇಲೆ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲವೆಂದು ಪುನಃ ಮೇ 2ರಂದು ನನ್ನ ಮೇಲೆ ಸಾಕ್ಷಿಗಳನ್ನು ಸೃಷ್ಟಿ ಮಾಡಿ ಸಿಕ್ಕಿ ಹಾಕಿಸಿದ್ದಾರೆ. ಇದರಲ್ಲಿ ಯಾವುದೇ ರೀತಿಯ ಪುರಾವೆಗಳು ಇಲ್ಲ. ಆದರೂ ನನ್ನನ್ನು ಸಿಕ್ಕಿ ಹಾಕಿಸಲಾಗಿದೆ ಎಂದು ಎಚ್‌.ಡಿ. ರೇವಣ್ಣ ಗುಡುಗಿದ್ದಾರೆ. ಈಗ ಅವರನ್ನು ಹೆಚ್ಚಿನ ತಪಾಸಣೆಗಾಗಿ ಬೋರಿಂಗ್‌ ಆಸ್ಪತ್ರೆಗೆ ಎಸ್‌ಐಟಿ ಅಧಿಕಾರಿಗಳು ಕರೆದುಕೊಂಡು ಬಂದಿದ್ದು, 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲಿದ್ದಾರೆ.

VISTARANEWS.COM


on

Prajwal Revanna Case No evidence against me its a conspiracy says HD Revanna
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್.‌ಡಿ. ರೇವಣ್ಣ (HD Revanna) ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ನನ್ನ ವಿರುದ್ಧವಾಗಿ ನಡೆಯುತ್ತಿರುವ ರಾಜಕೀಯ ಷಡ್ಯಂತ್ರ ಇದು ಎಂದು ಹೇಳಿದ್ದಾರೆ.

ಎಚ್‌.ಡಿ. ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಮೆಡಿಕಲ್‌ ಟೆಸ್ಟ್‌ಗೆಂದು ಬೋರಿಂಗ್‌ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಿದ್ದಾರೆ. 40 ವರ್ಷ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಯಾವುದೇ ರೀತಿಯ ಪುರಾವೆಗಳು ಇಲ್ಲದಿದ್ದರೂ ಅನಾವಶ್ಯಕವಾಗಿ ನನ್ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ನನ್ನ ವಿರುದ್ಧದ ಆರೋಪಗಳೆಲ್ಲವೂ ಸುಳ್ಳು. ಇದೊಂದು ದುರದ್ದೇಶಪೂರ್ವಕ ಬಂಧನವಾಗಿದೆ. ಯಾವುದೇ ಸಾಕ್ಷಿಗಳು ಸಹ ಇವರ ಬಳಿ ಇಲ್ಲ ಎಂದು ಹೇಳಿದ್ದಾರೆ.

ಏಪ್ರಿಲ್‌ 28ರಂದು ನಮ್ಮ ವಿರುದ್ಧ ಕೇಸ್‌ ದಾಖಲಿಸಿದರು. ಆಗ ನಮ್ಮ ಮೇಲೆ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲವೆಂದು ಪುನಃ ಮೇ 2ರಂದು ನನ್ನ ಮೇಲೆ ಸಾಕ್ಷಿಗಳನ್ನು ಸೃಷ್ಟಿ ಮಾಡಿ ಸಿಕ್ಕಿ ಹಾಕಿಸಿದ್ದಾರೆ. ಇದರಲ್ಲಿ ಯಾವುದೇ ರೀತಿಯ ಪುರಾವೆಗಳು ಇಲ್ಲ. ಆದರೂ ನನ್ನನ್ನು ಸಿಕ್ಕಿ ಹಾಕಿಸಲಾಗಿದೆ ಎಂದು ಎಚ್‌.ಡಿ. ರೇವಣ್ಣ ಗುಡುಗಿದರು.

ಪರಪ್ಪನ ಅಗ್ರಹಾರಕ್ಕೆ ಎಚ್‌.ಡಿ. ರೇವಣ್ಣ ಶಿಫ್ಟ್‌? SIT ಕಸ್ಟಡಿಗೆ ಕೊಡುವುದು ಡೌಟ್!

ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್.‌ಡಿ. ರೇವಣ್ಣ (HD Revanna) ಅವರಿಗೆ ಇಂದು (ಭಾನುವಾರ – ಮೇ 05) ಬಹುತೇಕ ಜೈಲು ಫಿಕ್ಸ್‌ ಆಗುವ ಸಾಧ್ಯತೆ ಇದೆ. ನ್ಯಾಯಾಧೀಶರ ಮುಂದೆ ರೇವಣ್ಣ ಅವರನ್ನು ಹಾಜರುಪಡಿಸಲಿದ್ದು, ಕಸ್ಟಡಿಗೆ ಕೇಳಲಿದ್ದಾರೆ. ಆದರೆ, ಇಂದು ಭಾನುವಾರ ಆಗಿರುವ ಹಿನ್ನೆಲೆಯಲ್ಲಿ ಕಸ್ಟಡಿಗೆ ಕೊಡುವುದು ಬಹುತೇಕ ಅನುಮಾನ ಎನ್ನಲಾಗಿದೆ.

ಇಂದು ಭಾನುವಾರ ಆಗಿರುವ ಹಿನ್ನೆಲೆಯಲ್ಲಿ ಕೋರ್ಟ್‌ಗೆ ರಜೆ ಇದೆ. ಈ ಕಾರಣಕ್ಕಾಗಿ ಮಾಜಿ ಸಚಿವ, ಅಪಹರಣ ಪ್ರಕರಣದ ಪ್ರಮುಖ ಆರೋಪಿ ಎಚ್.ಡಿ. ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ನಿವಾಸಕ್ಕೆ ಕರೆತರಲಾಗುತ್ತಿದೆ. ಅಲ್ಲಿ ನ್ಯಾಯಾಧೀಶರ ಮುಂದೆ ಪ್ರಕರಣದ ತೀವ್ರತೆಯನ್ನು ವಿವರಿಸುವ ಎಸ್‌ಐಟಿ ಪರ ವಕೀಲರು ಕಸ್ಟಡಿಗೆ ಕೇಳಲಿದ್ದಾರೆ. ಕಸ್ಟಡಿಗೆ ಕೇಳುವುದಾದರೆ ಸೋಮವಾರ (ಮೇ 6) ರೆಗ್ಯುಲರ್ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿ ಎಂದು ನ್ಯಾಯಾಧೀಶರು ಹೇಳುವ ಸಾಧ್ಯತೆ ಇರಲಿದೆ. ಹೀಗಾಗಿ ರೇವಣ್ಣ ಅವರಿಗೆ ಬಹುತೇಕ ಜೇಲು ಫಿಕ್ಸ್‌ ಆಗಲಿದೆ. ಹೀಗಾಗಿ ಅವರನ್ನು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರ ಮಾಡುವ ಸಾಧ್ಯತೆ ಹೆಚ್ಚಿದೆ.

ಎಚ್.ಡಿ. ರೇವಣ್ಣ‌ ಪ್ರಭಾವಿ ನಾಯಕ ಹಾಗೂ ಶಾಸಕರಾಗಿರುವ ಕಾರಣ ಈಗಾಗಲೇ ಕೋರಮಂಗಲದ ನ್ಯಾಯಾಧೀಶರ ಮನೆ ಬಳಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಮನೆಯ ಮುಂಭಾಗದಲ್ಲಿ ‌ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ.

ರೇವಣ್ಣಗೆ ಮತ್ತೊಮ್ಮೆ ಮೆಡಿಕಲ್ ಟೆಸ್ಟ್?

ನ್ಯಾಯಾಧೀಶರ ಮುಂದೆ ಎಚ್.ಡಿ. ರೇವಣ್ಣ ಅವರನ್ನು ಹಾಜರುಪಡಿಸುವ ಮುನ್ನ ಮತ್ತೊಮ್ಮೆ ವೈದ್ಯಕೀಯ ತಪಾಸಣೆ ಮಾಡಿಸಲು ಎಸ್‌ಐಟಿ ಟೀಮ್ ಮುಂದಾಗಿದೆ. ರೇವಣ್ಣ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೃದಯ ತಜ್ಞರು ಮತ್ತು ಗ್ಯಾಸ್ಟ್ರೋಎಂಟರಾಲಜಿಸ್ಟ್ ತಜ್ಞರನ್ನು ಸಂಪರ್ಕ ಮಾಡುವಂತೆ ಬೌರಿಂಗ್ ಆಸ್ಪತ್ರೆಯ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಇಸಿಜಿ ಬಳಿಕ ಅಲ್ಲಿನ ತಜ್ಞ ವೈದ್ಯರ ಸಲಹೆಯನ್ನು ಪಡೆಯಲು ಸೂಚನೆ ನೀಡಲಾಗಿದೆ.

ವಿಡಿಯೊದಲ್ಲಿರುವ ಮಹಿಳಾ ಅಧಿಕಾರಿಗಳಿಗೆ SIT ನೋಟಿಸ್‌: ‘ನಾನವಳಲ್ಲ’ ಎಂದು ಹೇಳಿಕೆ!

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive Case) ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಈ ಕೇಸ್‌ಗೆ ಸಂಬಂಧಿಸಿ ಆ ವಿಡಿಯೊದಲ್ಲಿ ಇದ್ದಾರೆ ಎನ್ನಲಾದ ಮೂವರು ಮಹಿಳಾ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗಲು ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ಕೊಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಒಬ್ಬೊಬ್ಬರೂ, “ನಾನವಳಲ್ಲ” ಎಂಬ ಉತ್ತರವನ್ನು ನೀಡಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ನಡುವೆ ವಿಡಿಯೊದಲ್ಲಿ ಸಾಕಷ್ಟು ಮಹಿಳಾ ಅಧಿಕಾರಿಗಳೂ ಇದ್ದಾರೆ ಎಂಬ ಬಗ್ಗೆ ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಡಿಯೊಗಳಲ್ಲಿ ಕಂಡ ಮುಖವನ್ನಾಧರಿಸಿ ಅವರ ಗುರುತನ್ನು ಪತ್ತೆ ಹಚ್ಚಿರುವ ಎಸ್‌ಐಟಿ ಅಧಿಕಾರಿಗಳು ಆ ಸಂತ್ರಸ್ತ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಕೊಟ್ಟಿದ್ದಾರೆ ಎನ್ನಲಾಗಿದೆ.

ಆದರೆ, ಈಗಾಗಲೇ ಈ ಪ್ರಕರಣದಲ್ಲಿ ಸಂಪೂರ್ಣ ಮುಜುಗರವನ್ನು ಅನುಭವಿಸಿರುವ ಮಹಿಳಾ ಅಧಿಕಾರಿಗಳು ವಿಚಾರಣೆಗೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಪೊಲೀಸ್ ಅಧಿಕಾರಿಗಳ ವಿಡಿಯೊ ಹಾಗೂ ಫೋಟೊಗಳು ಸಹ ವೈರಲ್ ಆಗಿದ್ದವು. ಇದರಿಂದ ಅವರು ತೀವ್ರ ಆಘಾತವನ್ನು ಎದುರಿಸಿದ್ದಾರೆ.

ಈಗ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ನೀಡಿದ್ದರಿಂದ ಮತ್ತಷ್ಟು ಕಂಗೆಟ್ಟಿರುವ ಮಹಿಳಾ ಅಧಿಕಾರಿಗಳು, ಆ ವಿಡಿಯೊ ಹಾಗೂ ಫೋಟೊಗಳು ನಮ್ಮದಲ್ಲ. ಅದನ್ನು ಮಾರ್ಫ್‌ ಮಾಡಲಾಗಿದೆ ಎಂದು ನೋಟಿಸ್‌ಗೆ ಉತ್ತರ ಕೊಟ್ಟಿದ್ದಾರೆ ಎನ್ನಲಾಗಿದೆ.

ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ

ಒಂದು ವೇಳೆ ಈ ಮಹಿಳಾ ಅಧಿಕಾರಿಗಳು ಎಸ್‌ಐಟಿ ಮುಂದೆ ಬಂದು ತಮ್ಮ ಮೇಲೆ ಪ್ರಜ್ವಲ್‌ ದೌರ್ಜನ್ಯ ಮಾಡಿದ್ದಾರೆ. ಆಮಿಷವೊಡ್ಡುವ ಮೂಲಕ ಇಲ್ಲವೇ ಕಿರುಕುಳ ನೀಡುವ ಮೂಲಕ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದರೆ, ಈ ಕೇಸ್‌ ಮತ್ತಷ್ಟು ಬಲಿಷ್ಠವಾಗುತ್ತಿತ್ತು. ಆದರೆ, ಈಗ ಈ ಮಹಿಳಾ ಅಧಿಕಾರಿಗಳು ಆ ವಿಡಿಯೊ ಹಾಗೂ ಫೋಟೊದಲ್ಲಿರುವುದು ನಾವೇ ಅಲ್ಲ ಎಂದು ಹೇಳಿಬಿಟ್ಟಿದ್ದಾರೆ. ಹಾಗಾಗಿ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ ಇದೆ. ಒಂದು ವೇಳೆ ಎಸ್‌ಐಟಿ ಅಧಿಕಾರಿಗಳು ಅವರ ಮನವೊಲಿಕೆ ಮಾಡಿದಲ್ಲಿ ಗೌಪ್ಯ ಸ್ಥಳದಲ್ಲಿ ಹೇಳಿಕೆ ಪಡೆಯಲಿದ್ದಾರೆ ಎನ್ನಲಾಗಿದೆ.

ಹಾಸನ ಸಂಸದರ ನಿವಾಸವನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

ಸಂಸದ ಪ್ರಜ್ವಲ್‌ ರೇವಣ್ಣ ಅವರು ಹಾಸನದ ತಮ್ಮ ನಿವಾಸದಲ್ಲೇ ಅತ್ಯಾಚಾರ (Physical abuse) ನಡೆಸಿರುವ ಬಗ್ಗೆ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಸಂಸದರ ನಿವಾಸವನ್ನು ಲಾಕ್‌ ಮಾಡಲಾಗಿದೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರಿಗೆ ಸರ್ಕಾರ ನೀಡಿದ್ದ ಈ ನಿವಾಸವನ್ನು ಪ್ರಜ್ವಲ್‌ ಬಳಸಿಕೊಳ್ಳುತ್ತಿದ್ದರು.

ಎಸ್‌ಐಟಿ ಅಧಿಕಾರಿಗಳು ಇದೀಗ ಈ ನಿವಾಸವನ್ನು ವಶಕ್ಕೆ ಪಡೆದಿದ್ದಾರೆ. ಸಂಸದರ ನಿವಾಸದ ರೂಮ್‌ನಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ಪ್ರಜ್ವಲ್ ರೇವಣ್ಣ‌ ವಿರುದ್ಧ ಆರೋಪ ಹೊರಿಸಿದ್ದ ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಮಾಜಿ ಪ್ರಧಾನಿ ಎಂಬ ಕಾರಣಕ್ಕೆ ದೇವೇಗೌಡ ಅವರಿಗೆ ಸರ್ಕಾರ ಈ ಬಂಗಲೆಯನ್ನು ನೀಡಿತ್ತು. ಇಂದಿಗೂ ದೇವೇಗೌಡರಿಗೆ ಮೀಸಲಾಗಿರುವ ಸಂಸದರ ನಿವಾಸವನ್ನು ಸದ್ಯ ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದಾರೆ.

2019ರಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರಿಗಾಗಿಯೇ ಈ ನಿವಾಸ‌ವನ್ನು ನಿರ್ಮಾಣ ಮಾಡಲಾಗಿತ್ತು. ಹಾಸನಕ್ಕೆ ಬಂದಾಗ ತಂಗಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ನಿವಾಸವನ್ನು ನಿರ್ಮಿಸಲಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ದೇವೇಗೌಡರಿಗೆ ನೀಡಿದ್ದ ನಿವಾಸವನ್ನು ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದರು.

ದೇವೇಗೌಡರು ಹಾಸನ ನಗರಕ್ಕೆ ಬಂದಾಗ ತಂಗುತ್ತಿದ್ದ ಇದೇ ನಿವಾಸದಲ್ಲಿ ವಾರದಲ್ಲಿ ನಾಲ್ಕು ದಿನ ಪ್ರಜ್ವಲ್‌ ವಾಸ್ತವ್ಯ ಹೂಡುತ್ತಿದ್ದರು. ಸದ್ಯ ಈ ನಿವಾಸದಲ್ಲೇ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆ ದೂರು ನೀಡಿದ್ದಾರೆ. ಅಶ್ಲೀಲ ವಿಡಿಯೊ ರೆಕಾರ್ಡ್ ಕೂಡ ಇದೇ ನಿವಾಸದ ರೂಮ್‌ನಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ನಿವಾಸ ಹಾಸನದ ಆರ್‌.ಸಿ. ರಸ್ತೆಯಲ್ಲಿದೆ.

ಹೊಳೆನರಸೀಪುರದಲ್ಲಿ ನೀರವ ಮೌನ

ಮಾಜಿ ಸಚಿವ ರೇವಣ್ಣ ಬಂಧನದ ಬಳಿಕ ಹೊಳೆನರಸೀಪುರದಲ್ಲಿ ನೀರವ ಮೌನ ಆವರಿಸಿದೆ. ಸದಾ ಜನರಿಂದ ತುಂಬಿರುತ್ತಿದ್ದ ರೇವಣ್ಣರ ಹೊಳೆನರಸೀಪುರದ ಮನೆ ಖಾಲಿ ಖಾಲಿ ಎನಿಸಿದೆ. ಸದ್ಯ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಮನೆಯಲ್ಲಿಯೇ ಇದ್ದಾರೆ. ಶನಿವಾರ ರೇವಣ್ಣ ಅವರ ಮನೆಯಲ್ಲಿ ಮಹಜರು ನಡೆಸಿದ್ದ ಎಸ್‌ಐಟಿ ತಂಡ ವಶಕ್ಕೆ ಪಡೆದಿತ್ತು. ಹಾಸನ ರಸ್ತೆಯಲ್ಲಿ ರೇವಣ್ಣ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಒಂದು ಕೆಎಸ್ಆರ್‌ಪಿ ತುಕಡಿಯನ್ನ ಮನೆ ಬಳಿ ನಿಯೋಜನೆ ಮಾಡಿ ಭದ್ರತೆ ಖಚಿತಪಡಿಸಲಾಗಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಪೆನ್‌ಡ್ರೈವ್ ಕಿಂಗ್‌ಪಿನ್ ಯಾರು? ಬೆನ್ನತ್ತಿ ಹೊರಟಿದೆ ಎಚ್‌ಡಿಕೆ ಟೀಂ!

ಈ ಮಧ್ಯೆ ರೇವಣ್ಣ ಅವರನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ತಂಡ ಮತ್ತೆ ಇಂದು ವಿಚಾರಣೆಗೆ ಒಳಪಡಿಸಲಿದೆ. ಶನಿವಾರ ರಾತ್ರಿ ತಡರಾತ್ರಿವರೆಗೆ ವಿಚಾರಣೆ ನಡೆಸಿದ್ದ ಅಧಿಕಾರಿಗಳು ಮತ್ತೆ ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ. ಮಹಿಳೆಯ ಅಪಹರಣ ಪ್ರಕರಣದ ಬಗ್ಗೆ ಕೂಲಂಕಷ ವಿಚಾರಣೆ ನಡೆಸಲಿದ್ದಾರೆ. ಇಂದು ಸಂಜೆ ಕೋರಮಂಗಲದ ಎನ್‌ಜಿವಿಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ರೇವಣ್ಣ ಅವರನ್ನು ಹಾಜರುಪಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ನಿವಾಸದ ಎದುರು ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Continue Reading

ಯಾದಗಿರಿ

Beef Smuggling: ಗೋಮಾಂಸ ಸಾಗಾಟ ಶಂಕೆ; ಹಿಂದುಪರ ಕಾರ್ಯಕರ್ತರಿಂದ ವಾಹನಕ್ಕೆ ಕಲ್ಲು ತೂರಾಟ

Beef Smuggling : ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ಹಿಂದುಪರ ಕಾರ್ಯಕರ್ತರು ವಾಹನಕ್ಕೆ ಕಲ್ಲು ತೂರಾಟ ಮಾಡಿದ್ದಾರೆ. ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದು, ಮತ್ತಿಬ್ಬರು ಕಾಲ್ಕಿತ್ತಿದ್ದಾರೆ. ಮತ್ತೊಂದು ಕಡೆ ದೇವನಹಳ್ಳಿ ಏರ್‌ಪೋರ್ಟ್‌ನಲ್ಲಿ 2 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.

VISTARANEWS.COM


on

By

Beef smuggling suspected Hindu activists pelt stones at vehicle
Koo

ಯಾದಗಿರಿ: ಅಕ್ರಮವಾಗಿ ಗೋಮಾಂಸ ಸಾಗಾಟ (Beef Smuggling) ಮಾಡುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ವಾಹನವನ್ನು ತಡೆದು ಹಿಂದುಪರ ಕಾರ್ಯಕರ್ತರು ಕಲ್ಲು ತೂರಾಟ ಮಾಡಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಬಳಿ ಘಟನೆ ನಡೆದಿದೆ.

ಮಾಂಸ ಸಾಗಾಣಿಕೆ ಮಾಡುವ ವಾಹನ ಮಹಾರಾಷ್ಟ್ರ ಮೂಲದ್ದು ಎನ್ನಲಾಗಿದೆ. ಮಹಾರಾಷ್ಟ್ರದಿಂದ ತಾಳಿಕೋಟಿ ಮಾರ್ಗವಾಗಿ ಹೈದ್ರಾಬಾದ್‌ಗೆ ಹೋಗುತ್ತಿದ್ದಾಗ, ಹುಣಸಗಿ ಬಳಿ ನಿಲ್ಲಿಸಲಾಗಿತ್ತು. ಈ ವೇಳೆ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡಲಾಗುತ್ತಿದೆ ಎಂಬ ಅನುಮಾನ ಬಂದಿತ್ತು. ಕೂಡಲೇ ಸ್ಥಳೀ ಪೊಲೀಸರಿಗೆ ಮಾಹಿತಿ ನೀಡಿದ್ದರು.

ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮಾಂಸ ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನು ಪೊಲೀಸರನ್ನು ವಶಕ್ಕೆ ಪಡೆದಿದ್ದಾರೆ. ವಾಹನದಲ್ಲಿ ಇರುವುದು ಯಾವ ಪ್ರಾಣಿಯ ಮಾಂಸ ಎಂಬುದು ಪರಿಶೀಲನೆಗಾಗಿ ಪಶು ಇಲಾಖೆ ವೈದ್ಯರು ಕಲಬುರಗಿಗೆ ಕಳುಹಿಸಿದ್ದಾರೆ.

ಶಿವಾನಂದ ದೊಂಡಿರಾಮ, ಅಕ್ಷಯ್ ಜಾವೀರ್, ಲಖನ್ ಎಂಬುವವರ ಮೇಲೆ ಕೇಸ್ ದಾಖಲಾಗಿದ್ದು, ವಾಹನದ ಚಾಲಕ ಶಿವಾನಂದ ದೊಂಡಿರಾಮ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಲಖನ್ ಜಾವೀರ್, ಅಕ್ಷಯ್ ಜಾವೀರ್ ಇಬ್ಬರು ಪರಾರಿಯಾಗಿದ್ದಾರೆ. ರಾಮಸೇನಾ ಜಿಲ್ಲಾಧ್ಯಕ್ಷ ಶರಣಕುಮಾರ ನಾಯಕ ಅವರಿಂದ ದೂರಿನ ಮೇರೆಗೆ ಹುಣಸಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

ಏರ್‌ಪೋರ್ಟ್‌ನಲ್ಲಿ 2 ಕೆ.ಜಿ ಗಾಂಜಾ ವಶ

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್‌ಪೋರ್ಟ್‌ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸಾಗಿಸುತ್ತಿದ್ದ ಮಾದಕ ದ್ರವ್ಯಗಳನ್ನು ವಶ ಪಡೆಯಲಾಗಿದೆ. 93 ಲಕ್ಷದ 68 ಸಾವಿರ ರೂ. ಮೌಲ್ಯದ 2 ಕೆ.ಜಿ ಗಾಂಜಾ ವಶ ಪಡೆಯಲಾಗಿದೆ.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನೊಬ್ಬ ಆಹಾರ ಪದಾರ್ಥದ ಬಾಕ್ಸ್‌‌ನಲ್ಲಿ ಹಾಕಿಕೊಂಡು ಬಂದಿದ್ದ. ಸ್ಕ್ಯಾನಿಂಗ್ ವೇಳೆ ಅನುಮಾನಗೊಂಡು ಪರಿಶೀಲಿಸಿದಾಗ ಗಾಂಜಾ ಪತ್ತೆಯಾಗಿದೆ. ಗಾಂಜಾ ಸಮೇತ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Gadag News
ಕರ್ನಾಟಕ6 mins ago

Gadag News: ಮುಂಡರಗಿ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

Drought Relief
ಕರ್ನಾಟಕ48 mins ago

Drought Relief: ಚುನಾವಣೆ ಖರ್ಚಿಗಾಗಿ ಬರ ಪರಿಹಾರ ತಡೆಹಿಡಿದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್‌

Prajwal Revanna Case No evidence against me its a conspiracy says HD Revanna
ಕರ್ನಾಟಕ55 mins ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Beef smuggling suspected Hindu activists pelt stones at vehicle
ಯಾದಗಿರಿ1 hour ago

Beef Smuggling: ಗೋಮಾಂಸ ಸಾಗಾಟ ಶಂಕೆ; ಹಿಂದುಪರ ಕಾರ್ಯಕರ್ತರಿಂದ ವಾಹನಕ್ಕೆ ಕಲ್ಲು ತೂರಾಟ

Narendra Modi
ದೇಶ1 hour ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Vijay Namdevrao Wadettiwar
ದೇಶ2 hours ago

ಮುಂಬೈ ದಾಳಿ ಉಗ್ರ ಅಜ್ಮಲ್‌ ಕಸಬ್‌ ನಿರಪರಾಧಿ ಎಂದ ಕಾಂಗ್ರೆಸ್‌ ನಾಯಕ; ಭುಗಿಲೆದ್ದ ವಿವಾದ!

Beer Shortage
ಕರ್ನಾಟಕ2 hours ago

Beer Shortage: ಬೇಸಿಗೆಯಲ್ಲಿ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

Torn Jeans Styling Tips
ಫ್ಯಾಷನ್2 hours ago

Torn Jeans Styling Tips: ಟೊರ್ನ್‌ ಜೀನ್ಸ್‌ ಪ್ಯಾಂಟ್‌ ಪ್ರಿಯರು ನೆನಪಿನಲ್ಲಿಟ್ಟುಕೊಳ್ಳಬೇಕಾದ 5 ಪ್ರಮುಖ ಸಂಗತಿಗಳು

lok sabha Election 2024 Bus Fare Hike
Lok Sabha Election 20242 hours ago

Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

IPL 2024
Latest2 hours ago

IPL 2024 : ಚೆನ್ನೈ ತಂಡದ ಮಾರಕ ಬೌಲರ್ ಮಹೀಶ್​ ಪತಿರಾನಾ​ ಐಪಿಎಲ್​ನಿಂದ ಹೊರಕ್ಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case No evidence against me its a conspiracy says HD Revanna
ಕರ್ನಾಟಕ55 mins ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 hour ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌