IND vs AUS | ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಬೌಲಿಂಗ್ ವಿಭಾಗಕ್ಕೆ ಬಲ ಬರುವುದೇ? - Vistara News

ಕ್ರಿಕೆಟ್

IND vs AUS | ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಬೌಲಿಂಗ್ ವಿಭಾಗಕ್ಕೆ ಬಲ ಬರುವುದೇ?

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಏಕ ದಿನ ಪಂದ್ಯಗಳ ಸರಣಿಯ ಮೂರನೇ ಹಾಗೂ ನಿರ್ಣಾಯಕ ಪಂದ್ಯ ಭಾನುವಾರ ಹೈದರಾಬಾದ್‌ನಲ್ಲಿ ನಡೆಯಲಿದೆ.

VISTARANEWS.COM


on

ind vs aus
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್ : ಭಾರತ ಹಾಗೂ ಪ್ರವಾಸಿ ಆಸ್ಟ್ರೇಲಿಯಾ ತಂಡದ ನಡುವೆ ಭಾನುವಾರ ಮೂರು ಪಂದ್ಯಗಳ ಏಕ ದಿನ ಸರಣಿಯ ಕೊನೇ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿ ಕೈ ವಶ ಮಾಡಿಕೊಳ್ಳುವುದು ಇತ್ತಂಡಗಳ ನಾಯಕರ ಯೋಜನೆ. ಅದರೆ, ಉಭಯ ತಂಡಗಳಿಗೆ ಬೌಲಿಂಗ್ ವಿಭಾಗದ ಅಸ್ಥಿತರತೆಯ ಚಿಂತೆ ಕಾಡುತ್ತಿದೆ. ಅದಲ್ಲೂ ಟೀಮ್ ಇಂಡಿಯಾಗೆ ಡೆತ್‌ ಓವರ್‌ ಬೌಲಿಂಗ್‌ನದ್ದೇ ಹೆಚ್ಚು ಚಿಂತೆ ಶುರುವಾಗಿದೆ. ಜಸ್‌ಪ್ರಿತ್‌ ಹಿಂದಿನ ಪಂದ್ಯದಲ್ಲಿ ಆಡುವ ೧೧ರ ಬಳಗಕ್ಕೆ ಪ್ರವೇಶ ಪಡೆದುಕೊಂಡಿದ್ದರೂ ಅಲ್ಲಿ ಅವರಿಗೆ ತಮ್ಮ ಸಂಪೂರ್ಣ ಸಾಮರ್ಥ್ಯ ಪ್ರದರ್ಶನ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಮತ್ತೊಮ್ಮೆ ಅವರು ಪರೀಕ್ಷೆಗೆ ಒಳಪಡಲಿದ್ದಾರೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಇಂಟರ್‌ನ್ಯಾಷನಲ್‌ ಸ್ಟೇಡಿಯಮ್‌ನಲ್ಲಿ ಈ ಪಂದ್ಯ ಆಯೋಜನೆಗೊಂಡಿದ್ದು, ಈ ಹಣಾಹಣಿ ಗೆದ್ದವರು ಸರಣಿಗೆ ಒಡೆಯರಾಗಲಿದ್ದಾರೆ. ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಗೆಲುವು ಸಾಧಿಸಿದ್ದರೆ , ನಾಗ್ಪುರದಲ್ಲಿ ನಡೆದ ಎರಡನೇ ಪಂದ್ಯವನ್ನು ಭಾರತ ಗೆದ್ದಿತ್ತು. ಹೀಗಾಗಿ ಈ ಪಂದ್ಯ ಹೆಚ್ಚು ರೋಚಕತೆಯಿಂದ ಕೂಡಿರಲಿದೆ.

ಬ್ಯಾಟಿಂಗ್‌ ವಿಭಾಗ ಸೇಫ್‌

ಭಾರತದ ಬ್ಯಾಟಿಂಗ್ ವಿಭಾಗ ಕಳೆದರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಮೊದಲ ಪಂದ್ಯದಲ್ಲಿ ಕೆ. ಎಲ್‌ ರಾಹುಲ್‌ ಹಾಗೂ ಹಾರ್ದಿಕ್ ಪಾಂಡ್ಯ ಅರ್ಧ ಶತಕ ಬಾರಿಸಿದ್ದರೆ, ಎರಡನೇ ಪಂದ್ಯದಲ್ಲಿ ರೋಹಿತ್‌ ಶರ್ಮ ಗೆಲುವಿನ ರೂವಾರಿ ಎನಿಸಿಕೊಂಡಿದ್ದರು. ವಿರಾಟ್‌ ಕೊಹ್ಲಿ ಹಾಗೂ ಸೂರ್ಯಕುಮಾರ್‌ ಯಾದವ್‌ ಉತ್ತಮ ರೀತಿಯಲ್ಲಿ ಬ್ಯಾಟ್‌ ಮಾಡಿದರೆ ಭಾರತ ತಂಡಕ್ಕೆ ಯಾವುದೇ ಚಿಂತೆಯಿಲ್ಲ. ದಿನೇಶ್‌ ಕಾರ್ತಿಕ್‌ ಹಿಂದಿನ ಪಂದ್ಯದಲ್ಲಿ ತಾವು ಫಿನಿಶರ್‌ ಜವಾಭ್ದಾರಿ ಹೊರುವುದಾಗಿ ಬ್ಯಾಟಿಂಗ್‌ ಮೂಲಕ ಸೂಚನೆ ಕೊಟ್ಟಿದ್ದಾರೆ.

ಆಸ್ಟ್ರೇಲಿಯಾ ತಂಡವನೂ ಉತ್ತಮ ರೀತಿಯಲ್ಲಿ ಬ್ಯಾಟ್‌ ಮಾಡುತ್ತಿದೆ. ಆರೋನ್ ಫಿಂಚ್, ಕ್ಯಾಮೆರಾನ್ ಗ್ರೀನ್‌, ಸ್ಟೀವ್ ಸ್ಮಿತ್‌ ಹಾಗೂ ಮ್ಯಾಥ್ಯೂ ವೇಡ್‌ ಉತ್ತಮ ರೀತಿಯಲ್ಲಿ ಬ್ಯಾಟ್‌ ಬೀಸುತ್ತಿದ್ದಾರೆ.

ಬೌಲಿಂಗ್‌ ಸುಧಾರಣೆ ಅಗತ್ಯ

ಭಾರತ ತಂಡದ ಬೌಲಿಂಗ್‌ ವಿಭಾಗದ ಬಗ್ಗೆಯೇ ಎಲ್ಲಿಗೂ ಚಿಂತೆ. ವಿಶ್ವ ಕಪ್‌ಗೆ ಆಯ್ಕೆಯಾಗಿರುವ ಬೌಲರ್‌ಗಳು ಈ ಪಂದ್ಯದಲ್ಲಿ ತಮ್ಮ ಕರಾಮತ್ತು ತೋರಿಸುತ್ತಿಲ್ಲ. ಪ್ರಮುಖವಾಗಿ ಹರ್ಷಲ್‌ ಪಟೇಲ್‌ ಹಾಗೂ ಯಜ್ವೇಂದ್ರ ಚಹಲ್‌ ವಿಕೆಟ್‌ ಪಡೆಯುತ್ತಿಲ್ಲ. ಭುವನೇಶ್ವರ್‌ ಕುಮಾರ್‌ ಅವರ ವೈಫಲ್ಯ ಮುಂದುವರಿದಿದೆ. ಆದರೆ, ಅಕ್ಷರ್‌ ಪಟೇಲ್‌ ಜಡೇಜಾ ಅವರ ಸ್ಥಾನ ತುಂಬುತ್ತಿದ್ದಾರೆ.

ಪಿಚ್‌ ಹೇಗಿದೆ?

ಹೈದರಾಬಾದ್ ಪಿಚ್‌ ಆರಂಭದಲ್ಲಿ ಬ್ಯಾಟಿಂಗ್‌ಗೆ ನೆರವಾಗಿ ಬಳಿಕ ನಿಧಾನವಾಗುತ್ತದೆ. ಹೀಗಾಗಿ ಮೊದಲು ಬ್ಯಾಟ್‌ಮಾಡಿದ ತಂಡಕ್ಕೆ ಗೆಲುವಿನ ಸಾಧ್ಯತೆ ಹೆಚ್ಚು. ಟಾಸ್‌ ಗೆದ್ದವರು ಬ್ಯಾಟ್‌ ಮಾಡಲು ಮುಂದಾಗುತ್ತದೆ. ಮಳೆಯ ಸಾಧ್ಯತೆ ಬಹುತೇಕ ಕಡಿಮೆ.

ಪಂದ್ಯದ ವಿವರ:

ತಾಣ: ರಾಜೀವ್‌ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಮ್‌ ಹೈದರಾಬಾದ್

ಸಮಯ: ರಾತ್ರಿ ೭ ಗಂಟೆಯಿಂದ

ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌ ನೆಟ್ವರ್ಕ್‌ ಹಾಗೂ ಡಿಸ್ನಿ ಹಾಟ್‌ ಸ್ಟಾರ್‌

ಸಂಭಾವ್ಯ ತಂಡ

ಭಾರತ:  ರೋಹಿತ್ ಶರ್ಮ, ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಯಜ್ವೇಂದ್ರ ಚಹಲ್‌, ಜಸ್‌ಪ್ರಿತ್‌ ಬುಮ್ರಾ.

ಆಸ್ಟ್ರೇಲಿಯಾ : ಆರೋನ್ ಫಿಂಚ್, ಕೆಮೆರಾನ್‌ ಗ್ರೀನ್‌, ಸ್ಟ್ರೀವ್ ಸ್ಮಿತ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌, ಜೋಶ್‌ ಇಂಗ್ಲಿಸ್‌, ಟಿಮ್‌ ಡೇವಿಡ್‌, ಮ್ಯಾಥ್ಯೂ ವೇಡ್‌, ಪ್ಯಾಟ್‌ ಕಮಿನ್ಸ್, ನಥಾನ್‌ ಎಲ್ಲಿಸ್‌, ಆಡಂ ಜಂಪಾ, ಜೋಶ್‌ ಹೇಜಲ್‌ವುಡ್‌.

ಇದನ್ನೂ ಓದಿ | Rohit Sharma | ಟಿ20 ಸಿಕ್ಸರ್‌ಗಳ ವಿಶ್ವ ದಾಖಲೆ ಸೃಷ್ಟಿಸಿದ ರೋಹಿತ್‌ ಶರ್ಮ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ನಲ್ಲಿ ಎಷ್ಟು ಬೌಲರ್​ಗಳು ಹ್ಯಾಟ್ರಿಕ್​ ವಿಕೆಟ್​ ಕಿತ್ತ ಸಾಧನೆ ಮಾಡಿದ್ದಾರೆ?

T20 World Cup 2024: ಕಳೆದ 8 ಆವೃತ್ತಿಯ ಟಿ20 ವಿಶ್ವಕಪ್​ ಟೂರ್ನಿ(T20 World Cup 2024)ಯಲ್ಲಿ ಒಟ್ಟು 6 ಬೌಲರ್​ಗಳು ಹ್ಯಾಟ್ರಿಕ್​ ವಿಕೆಟ್​ ಕಿತ್ತ ಸಾಧನೆ ಮಾಡಿದ್ದಾರೆ. ಈ ಪೈಕಿ 2021ರಲ್ಲಿ ಗರಿಷ್ಠ ಮೂರು ಮಂದಿ ಬೌಲರ್​ಗಳಿ ಈ ಸಾಧನೆ ಮಾಡಿದ್ದಾರೆ.

VISTARANEWS.COM


on

T20 World Cup 2024
Koo

ಬೆಂಗಳೂರು: ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಶನಿವಾರ(ಜೂನ್​ 1)ದಿಂದ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ. ಆತಿಥೇಯ ಅಮೆರಿಕ ಮತ್ತು ಕೆನಡಾ ತಂಡಗಳು ಉದ್ಘಾಟನ ಪಂದ್ಯದಲ್ಲಿ ಕಣಕ್ಕಿಳಿಯಲಿವೆ. ಕಳೆದ 8 ಆವೃತ್ತಿಯ ಟೂರ್ನಿಯಲ್ಲಿ(t20 world cup history) ಎಷ್ಟು ಬೌಲರ್​ಗಳು ಹ್ಯಾಟ್ರಿಕ್​ ವಿಕೆಟ್(Hat-tricks in Men’s T20 World Cup)​ ಪಡೆದಿದ್ದಾರೆ ಎಂಬ ಕುತೂಹಲಕಾರಿ ವರದಿ ಇಂತಿದೆ.

ಬ್ರೆಟ್​ ಲೀ


ಆಸ್ಟ್ರೇಲಿಯಾದ ಘಾತಕ ಮಾಜಿ ವೇಗಿ ಬ್ರೆಟ್​ ಲೀ ಅವರು ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಹ್ಯಾಟ್ರಿಕ್​ ವಿಕೆಟ್​ ಪಡೆದ ಮೊದಲ ಬೌಲರ್​. ಈ ಸಾಧನೆಯನ್ನು ಅವರು 2007 ಉದ್ಘಾಟನ ಆವೃತ್ತಿಯಲ್ಲೇ ನಿರ್ಮಿಸಿದ್ದು ವಿಶೇಷ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಶಕೀಬ್ ಅಲ್ ಹಸನ್, ಮಶ್ರಫೆ ಮೊರ್ತಜಾ, ಅಲೋಕ್ ಕಪಾಲಿ ವಿಕೆಟ್​ ಕೀಳುವ ಮೂಲಕ ಈ ದಾಖಲೆ ಬರೆದಿದ್ದರು.


ಕರ್ಟಿಸ್ ಕ್ಯಾಂಪರ್


ಬ್ರೆಟ್​ ಲೀ ಬಳಿಕ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್​ ದಾಖಲಾದದ್ದು 2021ರಲ್ಲಿ. ಐರ್ಲೆಂಡ್​ನ ಕರ್ಟಿಸ್ ಕ್ಯಾಂಪರ್​ ಈ ದಾಖಲೆ ಮಾಡಿದ ಬೌಲರ್​. ನೆದರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಕರ್ಟಿಸ್ ಕ್ಯಾಂಪರ್ ಸತತವಾಗಿ ನಾಲ್ಕು ವಿಕೆಟ್​ ಕಿತ್ತು ಮಿಂಚಿದ್ದರು. ಇವರ ಬೌಲಿಂಗ್​ ದಾಳಿಗೆ ವಿಕೆಟ್​ ಕಳೆದುಕೊಂಡ ಬ್ಯಾಟರ್​ಗಳೆಂದರೆ, ಕಾಲಿನ್ ಅಕರ್ಮನ್, ರಿಯಾನ್ ಟೆನ್ ಡೋಸ್ಚೇಟ್, ಸ್ಕಾಟ್ ಎಡ್ವರ್ಡ್ಸ್ ಮತ್ತು ರೋಲೋಫ್ ವ್ಯಾನ್ ಡೆರ್ ಮೆರ್ವೆ.


ವನಿಂದು ಹಸರಂಗ


ಶ್ರೀಲಂಕಾದ ಸ್ಪಿನ್ನರ್​ ವನಿಂದು ಹಸರಂಗ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್​ ಕಿತ್ತ ಬೌಲರ್​ಗಳ ಯಾದಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಹಸರಂಗ 2021ರಲ್ಲಿ ನಡೆದಿದ್ದ ಆವೃತ್ತಿಯಲ್ಲಿ ಈ ಸಾಧನೆ ಮಾಡಿದ್ದರು. ದಕ್ಷಿಣ ಆಫ್ರಿಕಾದ ಐಡೆನ್ ಮಾರ್ಕ್ರಾಮ್, ಟೆಂಬಾ ಬವುಮಾ, ಡ್ವೈನ್ ಪ್ರಿಟೋರಿಯಸ್ ವಿಕೆಟ್​ ಕೀಳುವ ಮೂಲಕ ಈ ದಾಖಲೆ ಬರೆದರು.


ಕಗಿಸೊ ರಬಾಡ


ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ ಕೂಡ 2021ರಲ್ಲಿ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್​ ಕಿತ್ತ ಸಾಧನೆ ಮಾಡಿದ್ದರು. ಇಂಗ್ಲೆಂಡ್​ ತಂಡದ ಕ್ರಿಸ್ ವೋಕ್ಸ್, ಇಯಾನ್ ಮೋರ್ಗನ್, ಕ್ರಿಸ್ ಜೋರ್ಡಾನ್ ವಿಕೆಟ್​ ಕೀಳುವ ಮೂಲಕ ಈ ಸಾಧನೆ ತೋರಿದ್ದರು.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಭಾರತದ ಬ್ಯಾಟರ್​ಗಳಿವರು


ಕಾರ್ತಿಕ್ ಮೇಯಪ್ಪನ್

ಯುಎಇ ಸ್ಪಿನ್ನರ್ ಕಾರ್ತಿಕ್ ಮೇಯಪ್ಪನ್ ಟಿ20 ವಿಶ್ವ ಕಪ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಿತ್ತ 5ನೇ ಬೌಲರ್​ ಎನಿಸಿಕೊಂಡಿದ್ದಾರೆ. 2022ರಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ಧದ ಅರ್ಹತಾ ಪಂದ್ಯದಲ್ಲಿ ಕಾರ್ತಿಕ್ ಈ ಸಾಧನೆ ಮಾಡಿದ್ದರು. ಭಾನುಕ ರಾಜಪಕ್ಸೆ, ಚರಿತ್ ಅಸಲಂಕಾ, ದಸುನ್ ಶನಕ ವಿಕೆಟ್​ ಕಿತ್ತಿದ್ದರು. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಯುಎಇ ಆಟಗಾರ ಎನಿಸಿಕೊಂಡರು.


ಜೋಶ್ ಲಿಟಲ್


ಐರ್ಲೆಂಡ್​ ತಂಡದ ಜೋಶ್ ಲಿಟಲ್ ಟಿ20 ವಿಶ್ವ ಕಪ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಿತ್ತ ವಿಶ್ವದ 6ನೇ ಬೌಲರ್​ ಎನಿಸಿಕೊಂಡಿದ್ದಾರೆ. ನ್ಯೂಜಿಲ್ಯಾಂಡ್​ ವಿರುದ್ಧದ ಪಂದ್ಯದಲ್ಲಿ ಅವರು ಈ ಸಾಧನೆ ಮಾಡಿದ್ದರು. 2022ರ ಆವೃತ್ತಿ ಇದಾಗಿತ್ತು. ಕೇನ್ ವಿಲಿಯಮ್ಸನ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್ ವಿಕೆಟ್​ ಒಪ್ಪಿಸಿದ ಬ್ಯಾಟರ್​ಗಳು.

ಇದನ್ನೂ ಓದಿ T20 World Cup 2024: ಮಿನಿ ವಿಶ್ವಕಪ್​ ಸಮರದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್‌ ಗಳಿಸಿದ ದಾಂಡಿಗರಿವರು!

Continue Reading

ಕ್ರೀಡೆ

Chahal-Dhanashree: ಶೀಘ್ರದಲ್ಲೇ ಸಿಹಿ ಸುದ್ದಿ ನೀಡಲಿದ್ದಾರಾ ಚಹಲ್?; ಕುತೂಹಲ ಮೂಡಿಸಿದ ಪತ್ನಿಯ ಪೋಸ್ಟ್!

Chahal-Dhanashree: ಯಜುವೇಂದ್ರ ಚಹಲ್(Yuzvendra Chahal)​ ಮತ್ತು ಪತ್ನಿ ಧನಶ್ರೀ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ. ಇಂತಹದೊಂದು ಕುತೂಹಲಕ್ಕೆ ಕಾರಣವಾಗಿದ್ದು ಧನಶ್ರೀ ವರ್ಮಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಒಂದು ಫೋಟೊ.

VISTARANEWS.COM


on

Chahal-Dhanashree
Koo

ಮುಂಬಯಿ: ಟೀಮ್​ ಇಂಡಿಯಾದ ಕ್ರಿಕೆಟಿಗ ಯಜುವೇಂದ್ರ ಚಹಲ್(Yuzvendra Chahal)​ ಮತ್ತು ಅವರ ಪತ್ನಿ ಧನಶ್ರೀ ವರ್ಮಾ(Dhanashree Verma) ಮಧ್ಯೆ ಎಲ್ಲವೂ ಸರಿಯಿಲ್ಲ. ಈ ಜೋಡಿ ದೂರವಾಗಲಿದ್ದಾರೆ ಎಂಬ ಮಾತುಗಳು ಆಗಾಗ ಕೇಳಿ ಬರುತ್ತಲೇ ಇದೆ. ಆದರೆ ಈ ಜೋಡಿ(Chahal-Dhanashree) ಶೀಘ್ರದಲ್ಲೇ ಸಿಹಿ ಸುದ್ದಿಯೊಂದನ್ನು ನೀಡುವ ನಿರೀಕ್ಷೆಯಲ್ಲಿದ್ದಾರೆ. ಹೌದು, ಚಹಲ್​ ಮತ್ತು ಧನಶ್ರೀ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ. ಇಂತಹದೊಂದು ಕುತೂಹಲಕ್ಕೆ ಕಾರಣವಾಗಿದ್ದು ಧನಶ್ರೀ ವರ್ಮಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಒಂದು ಫೋಟೊ.

ಧನಶ್ರೀ ಗರ್ಭಿಣಿಯರು ಧರಿಸುವ ಉಡುಗೆ ತೊಟ್ಟು(Dhanashree Verma Maternity Dress) ತನ್ನ ಗಂಡ ಚಹಲ್ ಜತೆಗಿರುವ ಫೋಟೊವನ್ನು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹೀಗಾಗಿ ಚಹಲ್ ತಂದೆಯಾಗುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಆದರೆ ಈ ಜೋಡಿ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಇದು ಕೇವಲ ನೆಟ್ಟಿಗರ ಕಲ್ಪನೆಯಾಗಿದೆ. ಧನಶ್ರೀ ಡ್ಯಾನ್ಸರ್​ ಮತ್ತು ಮಾಡೆಲ್​ ಆಗಿರುವ ಕಾರಣ ಟ್ರೆಂಡ್​ಗಾಗಿ ಈ ಉಡುಗೆಯನ್ನು ತೊಟ್ಟಿರುವ ಸಾಧ್ಯತೆಯೂ ಅಧಿಕವಾಗಿದೆ. 2020ರಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು.

ಏಷ್ಯಾ ಕಪ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವಕಾಶ ಸಿಗದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರಿಗೆ ಐಪಿಎಲ್​ ಪ್ರದರ್ಶನ ನೋಡಿ ಟಿ20ಯಲ್ಲಿ ಅವಕಾಶ ನೀಡಲಾಗಿದೆ. ಚಹಲ್​ ಸದ್ಯ ಅಮೆರಿಕಕ್ಕೆ ತೆರಳಿದ್ದಾರೆ. ಇದುವರೆಗೆ ಭಾರತ ಪರ 72 ಏಕದಿನ ಪಂದ್ಯಗಳಿಂದ 121 ವಿಕೆಟ್​, 80 ಟಿ20 ಆಡಿ 96 ವಿಕೆಟ್​ ಕಡೆವಿದ್ದಾರೆ. ಟಿ20 ವಿಶ್ವಕಪ್​ ಟೂರ್ನಿಯಲ್ಲಿಯೂ ಅವರಿಗೆ ಆಡುವ ಅವಕಾಶ ಸಿಗಬಹುದು.

ಇದನ್ನೂ Yuzvendra Chahal: ಸಿಕ್ಸರ್​ ಹೊಡೆಸಿಕೊಂಡು ಐಪಿಎಲ್​ನಲ್ಲಿ ಕೆಟ್ಟ ದಾಖಲೆ ಬರೆದ ಚಹಲ್​


ಇತ್ತೀಚೆಗೆ 150ನೇ ಐಪಿಎಲ್​ ಪಂದ್ಯವನ್ನಾಡಿದ ಚಹಲ್​ಗೆ ಪತ್ನಿ ಭಾವುಕ ವಿಡಿಯೊ ಸಂದೇಶದ ಮೂಲಕ ಹಾರೈಸಿದ್ದರು. “ಹೇ ಯುಜಿ, ನಿಮ್ಮ 150ನೇ ಐಪಿಎಲ್ ಪಂದ್ಯಕ್ಕೆ ಅಭಿನಂದನೆಗಳು. ನಿವು ಈ ಹಿಂದೆ ಆಡಿದ ತಂಡಕ್ಕೆ ಮತ್ತು ಈಗ ಆಡುತ್ತಿರುವ ರಾಜಸ್ಥಾನ್ ರಾಯಲ್ಸ್‌ಗೆ ನೀವು ಅಪಾರ ಕೊಡುಗೆ ನೀಡಿದ್ದೀರಿ. ನಿಮ್ಮ ಬಗ್ಗೆ ನನಗೆ ಯಾವತ್ತೂ ಹೆಮ್ಮೆ ಇದೆ. ನೀವು ನಿಮ್ಮ ಆಟವನ್ನು ಹೇಗೆ ಆಡುತ್ತೀರಿ ಮತ್ತು ಪ್ರತಿ ಬಾರಿ ನೀವು ಕಮ್​ಬ್ಯಾಕ್​ ಮಾಡುವ ರೀತಿ ನಿಜಕ್ಕೂ ಮೆಚ್ಚಲೇ ಬೇಕು. ಯಾವುದೇ ಪಂದ್ಯ ಒತ್ತಡದಲ್ಲಿದ್ದಾಗಲೆಲ್ಲಾ ವಿಕೆಟ್​ ತೆಗೆಯಬಲ್ಲ ಬೌಲರ್​ ನೀವಾಗಿದ್ದೀರಿ. ನಾನು ನಿಮ್ಮ ದೊಡ್ಡ ಚೀರ್‌ಲೀಡರ್ ಮತ್ತು ನಾನು ಯಾವಾಗಲೂ 100 ಪ್ರತಿಶತದಷ್ಟು ನಿಮ್ಮನ್ನು ಬೆಂಬಲಿಸುತ್ತೇನೆ” ಎಂದು ಶುಭ ಹಾರೈಸಿದ್ದರು. ವಿಡಿಯೊವನ್ನು ರಾಜಸ್ಥಾನ್​ ರಾಯಲ್ಸ್(Rajasthan Royals)​ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಪೋಸ್ಟ್​ ಮಾಡಿತ್ತು.

Continue Reading

ಕ್ರೀಡೆ

Team India Coach: ಅಭಿಮಾನಿಗಳು ಬಯಸಿದರೂ ಕೋಚ್​ ಹುದ್ದೆಗೆ ಧೋನಿ ಅನರ್ಹ; ಕಾರಣವೇನು?

Team India Coach: ಬಿಸಿಸಿಐ(BCCI) ನಿಯಮಗಳ ಪ್ರಕಾರ ಭಾರತ ತಂಡದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿರಬೇಕು. ಧೋನಿ ಇನ್ನೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ ಅವರು ಅರ್ಜಿ ಸಲ್ಲಿಸಿದರೂ ಕೂಡ ಅದು ಅನರ್ಹಗೊಳ್ಳಲಿದೆ.

VISTARANEWS.COM


on

Team India Coach
Koo

ಮುಂಬಯಿ: ಗೌತಮ್ ಗಂಭೀರ್(Gautam Gambhir)​ ಅವರು ಟೀಮ್​ ಇಂಡಿಯಾದ ಮುಂದಿನ ಕೋಚ್(Team India Coach)​ ಆಗುವುದು ಬಹುತೇಖ ಖಚಿತ ಎನ್ನಲಾಗಿದೆ. ಅಧಿಕೃತ ಘೋಷಣೆಯೊಂದು ಮಾತ್ರ ಬಾಕಿ ಉಳಿದಿದೆ. ಈ ಮಧ್ಯೆ ಭಾರತಕ್ಕೆ 2 ವಿಶ್ವಕಪ್​ ಗೆದ್ದ ಮಹೇಂದ್ರ ಸಿಂಗ್​ ಧೋನಿ(MS Dhoni) ಕೋಚ್​ ಆದರೆ ಉತ್ತಮ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಧೋನಿ ಕೋಚ್ ಹುದ್ದೆಗೆ ಅನರ್ಹರು ಎಂದು ತಿಳಿದುಬಂದಿದೆ.

ಹೌದು, ಬಿಸಿಸಿಐ(BCCI) ನಿಯಮಗಳ ಪ್ರಕಾರ ಭಾರತ ತಂಡದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿರಬೇಕು. ಧೋನಿ ಇನ್ನೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ ಅವರು ಅರ್ಜಿ ಸಲ್ಲಿಸಿದರೂ ಕೂಡ ಅದು ಅನರ್ಹಗೊಳ್ಳಲಿದೆ. ಧೋನಿ ಎಲ್ಲ ಕ್ರಿಕೆಟ್​ ವಿದಾಯ ಹೇಳಿದರೆ ಅವರು ಕೂಡ ಕೋಚ್​ ಹುದ್ದೆಗೆ ಅರ್ಹರಾಗಿತ್ತಾರೆ. 2021 ರಲ್ಲಿ ಭಾರತದ ಆತಿಥ್ಯದಲ್ಲಿ ಯುಎಇಯಲ್ಲಿ ನಡೆದಿದ್ದ ಟಿ 20 ವಿಶ್ವಕಪ್‌ನಲ್ಲಿ ಎಂಎಸ್ ಧೋನಿ ಭಾರತ ತಂಡಕ್ಕೆ ಮೆಂಟರ್ ಆಗಿ ಕಾರ್ಯನಿರ್ವಹಿಸಿದ್ದರು.

ಇದನ್ನೂ ಓದಿ Team India Coach: ಟೀಮ್​ ಇಂಡಿಯಾದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ ಪ್ರಧಾನಿ ಮೋದಿ, ಅಮಿತ್ ಶಾ!

ಈ ಬಾರಿಯ ಐಪಿಎಲ್​ ಬಳಿಕ ಧೋನಿ ನಿವೃತ್ತಿ ಹೊಂದುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಮೂಲಗಳ ಪ್ರಕಾರ ಧೋನಿ ಮುಂದಿನ ಆವೃತ್ತಿಯ ಐಪಿಎಲ್​ನಲ್ಲಿಯೂ ಆಡುತ್ತಾರೆ ಎನ್ನಲಾಗಿದ್ದು ಇದೇ ಕಾರಣಕ್ಕೆ ಅವರು ನಿವೃತ್ತಿ ಘೋಷಿಸಿಲ್ಲ ಎನ್ನಲಾಗಿದೆ.

2011ರಲ್ಲಿ ಗ್ಯಾರಿ ಕಸ್ಟನ್ ಮಾರ್ಗದರ್ಶನದಲ್ಲಿ ಭಾರತ 2ನೇ ಬಾರಿಗೆ ವಿಶ್ವಕಪ್​ ಗೆದ್ದಿತ್ತು. ಬಳಿಕ 2013ರಲ್ಲಿ ಡಂಕನ್​ ಪ್ಲೆಚರ್​ ಮಾರ್ಗದರ್ಶನದಲ್ಲಿ ಭಾರತ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಜಯಿಸಿತ್ತು. ಇದಾದ ಬಳಿಕ ಭಾರತ ಇದುವರೆಗೂ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ರವಿಶಾಸ್ತ್ರಿ ಮತ್ತು ರಾಹುಲ್​ ದ್ರಾವಿಡ್​ ಮಾರ್ಗದರ್ಶನಲ್ಲಿ 2 ಏಕದಿನ ವಿಶ್ವಕಪ್​ ಆಡಿದರೂ ಭಾರತ ಕಪ್​ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ವಿದೇಶಿ ಕೋಚ್​ ಆಯ್ಕೆಯೇ ಉತ್ತಮ ಎಂದು ಬಿಸಿಸಿಐ ಆರಂಭಿಕ ಹಂತದಲ್ಲಿ ಯೋಚಿಸಿತ್ತು. ಆದರೆ ಅನೇಕ ವಿದೇಶಿ ಆಟಗಾರರು ಕೋಚ್​ ಆಗಲಿ ಆಸಕ್ತಿ ಹೊಂದಿಲ್ಲ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಹೀಗಾಗಿ ಬಿಸಿಸಿಐ ದೇಶೀಯ ಆಟಗಾರರ ಮೊರೆ ಹೋದಂತಿದೆ.

ಮೂಲಗಳ ಪ್ರಕಾರ ಗೌತಮ್​ ಗಂಭೀರ್​ ಅವರು ಭಾರತ ತಂಡದ ಕೋಚ್ ಆಗುವ ಸಾಧ್ಯತೆ ಕಂಡುಬಂದಿದೆ. ಭಾನುವಾರ ಮುಕ್ತಾಯ ಕಂಡ 17ನೇ ಆವೃತ್ತಿಯ ಐಪಿಎಲ್​ ಟೂರ್ನಿಯಲ್ಲಿ ಕೆಕೆಆರ್​ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಗೌತಮ್​ ಗಂಭೀರ್​ ತಂಡದ ಮೆಂಟರ್​ ಆಗಿದ್ದರು. ಪಂದ್ಯದ ಮುಕ್ತಾಯದ ಬಳಿಕ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ಗಂಭೀರ್​ ಜತೆ ಅತ್ಯಂತ ಆತ್ಮೀಯವಾಗಿ ಸುರ್ದೀಘ ಚರ್ಚೆ ಕೂಡ ನಡೆಸಿದ್ದರು. ಇದನ್ನೆಲ್ಲ ನೋಡುವಾಗ ಗಂಭೀರ್​ ಕೋಚ್​ ಆಗುವುದು ಬಹುತೇಖ ಖಚಿತವಾದಂತಿದೆ. ಐಪಿಎಲ್‌ ಫ್ರಾಂಚೈಸಿಯೊಂದರ ಅತಿ ಪ್ರಭಾವಿ ಮಾಲಕರೊಬ್ಬರು ಗೌತಮ್‌ ಗಂಭೀರ್‌ ಕೋಚ್‌ ಆಗುವ ಒಪ್ಪಂದ ನಡೆದಾಗಿದೆ ಎಂದು ಹೇಳಿದ್ದಾರೆ. ಜತೆಗೆ ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ ಎಂದಿದ್ದಾರೆ.

Continue Reading

ಕ್ರೀಡೆ

AUS vs NAM: ನಮೀಬಿಯಾ ವಿರುದ್ಧ ಅಭ್ಯಾಸ ಪಂದ್ಯವಾಡಿದ ಆಸೀಸ್​ ತಂಡದ ಕೋಚಿಂಗ್​ ಸಿಬ್ಬಂದಿ

AUS vs NAM: ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ನಮೀಬಿಯಾ ನಿಗದಿತ 20 ಓವರ್​ಳಲ್ಲಿ 9 ವಿಕೆಟ್​ಗೆ 119 ರನ್​ ಬಾರಿಸಿತು. ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 10 ಓವರ್​ಗೆ 3 ವಿಕೆಟ್​ ಕಳೆದುಕೊಂಡು 123 ರನ್​ ಬಾರಿಸಿ ಗೆಲುವು ತನ್ನದಾಗಿಸಿಕೊಂಡಿತು.

VISTARANEWS.COM


on

AUS vs NAM
Koo

ಟ್ರಿನಿಡಾಡ್: ಟಿ20 ವಿಶ್ವಕಪ್​ ಟೂರ್ನಿಯ(t20 world cup 2024) ಅಭ್ಯಾಸ ಪಂದ್ಯಗಳು(T20 WC Warm-Up Game) ಆರಂಭಗೊಂಡಿದೆ. ನಮೀಬಿಯಾ(AUS vs NAM) ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಪರ ಕೋಚ್ ಮತ್ತು ಆಯ್ಕೆಗಾರರ ಮಂಡಳಿ ಮುಖ್ಯಸ್ಥರು(Australian Coaching Staff) ಫೀಲ್ಡಿಂಗ್ ನಡೆಸಿದ ಪ್ರಸಂಗ ನಡೆದಿದೆ. ಈ ವಿಡಿಯೊ ವೈರಲ್​ ಆಗಿದೆ. ಪಂದ್ಯದಲ್ಲಿ ಆಸೀಸ್​ ತಂಡ 7 ವಿಕೆಟ್​ಗಳ ಗೆಲುವು ಸಾಧಿಸಿತು.

ಐಪಿಎಲ್​ ಆಡಿ ಬಂದಿದ್ದ ತಂಡದ ಪ್ರಧಾನ ಆಟಗಾರರಾದ ಗ್ಲೆನ್ ಮ್ಯಾಕ್ಸ್‌ವೆಲ್, ಟ್ರಾವಿಸ್ ಹೆಡ್, ಮಿಚೆಲ್ ಸ್ಟಾರ್ಕ್ ಮತ್ತು ಪ್ಯಾಟ್ ಕಮಿನ್ಸ್ ವಿಶ್ರಾಂತಿ ಸಮಯ ಬಯಸಿದ ಕಾರಣ ಆಸ್ಟ್ರೇಲಿಯಾ ತಂಡದಲ್ಲಿ ಆಟಗಾರರ ಕೊರತೆ ಎದುರಾಯಿತು. ಹೀಗಾಗಿ ಕೋಚ್ ಮತ್ತು ಆಯ್ಕೆಗಾರರ ಮಂಡಳಿ ಮುಖ್ಯಸ್ಥರು ಫೀಲ್ಡಿಂಗ್ ನಡೆಸಿದರು.

ಆಸೀಸ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ- ಮಾಜಿ ನಾಯಕ ಜಾರ್ಜ್ ಬೈಲಿ, ಮುಖ್ಯ ಕೋಚ್ ಆ್ಯಂಡ್ರ್ಯೂ ಮೆಕ್ ಡೊನಾಲ್ಡ್, ಫೀಲ್ಡಿಂಗ್ ಕೋಚ್ ಆಂಡ್ರೆ ಬೊರೊವೆಕ್ ಮತ್ತು ಬ್ಯಾಟಿಂಗ್ ಕೋಚ್ ಬ್ರಾಡ್ ಹಾಡ್ಜ್ ಸಂಪೂರ್ಣ 20 ಓವರ್​ಗಳ ಕಾಲ ಫೀಲ್ಡಿಂಗ್ ಮಾಡಿದ್ದಾರೆ. ಅಭ್ಯಾಸ ಪಂದ್ಯಕ್ಕೆ ಯಾವುದೇ ನಿಯಮ ಇಲ್ಲದ ಕಾರಣ ಇವರೆಲ್ಲ ಫೀಲ್ಡಿಂಗ್​ ಮಾಡಿದ್ದಾರೆ.

ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ನಮೀಬಿಯಾ ನಿಗದಿತ 20 ಓವರ್​ಳಲ್ಲಿ 9 ವಿಕೆಟ್​ಗೆ 119 ರನ್​ ಬಾರಿಸಿತು. ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 10 ಓವರ್​ಗೆ 3 ವಿಕೆಟ್​ ಕಳೆದುಕೊಂಡು 123 ರನ್​ ಬಾರಿಸಿ ಗೆಲುವು ತನ್ನದಾಗಿಸಿಕೊಂಡಿತು. ಡೇವಿಡ್​ ವಾರ್ನರ್​ ಅಜೇಯ 54ರನ್​ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ನಾಯಕ ಮಿಚೆಲ್​ ಮಾರ್ಷ್​ 18 ರನ್​ ಗಳಿಸಿ ವಿಫಲರಾದರು. ಆಸೀಸ್​ ಬೌಲಿಂಗ್​ನಲ್ಲಿ ಸ್ಪಿನ್ನರ್​ ಆ್ಯಡಂ ಜಂಪಾ ಮೂರು ವಿಕೆಟ್​ ಕಿತ್ತರೆ, ಹ್ಯಾಝಲ್​ವುಡ್ 2 ವಿಕೆಟ್​ ಪಡೆದರು.​

ವಿಶ್ವಕಪ್​ ಲೀಗ್​ ಪಂದ್ಯಗಳು ಜೂನ್​ 1ರಿಂದ ಆರಂಭಗೊಳ್ಳಲಿದೆ. ಉದ್ಘಾಟನ ಪಂದ್ಯದಲ್ಲಿ ಆತಿಥೇಯ ಅಮೆರಿಕ ಮತ್ತು ಕೆನಾಡ ಮುಖಾಮುಖಿಯಾಗಲಿವೆ.  ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. 

ಇದನ್ನೂ ಓದಿ T20 World Cup : ಭಾರತ- ಪಾಕ್ ಪಂದ್ಯ ಐಸಿಸ್​ ಉಗ್ರರಿಂದ ಬಾಂಬ್ ಬೆದರಿಕೆ

ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ವೇಡ್, ಟೆಸ್ಟ್​ ಮತ್ತು ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿರುವ ಡೇವಿಡ್ ವಾರ್ನರ್, ಟಿಮ್‌ ಡೇವಿಡ್ ಅವರನ್ನು ಬ್ಯಾಟಿಂಗ್​ ವಿಭಾಗದಲ್ಲಿ ಆಯ್ಕೆ ಮಾಡಲಾಗಿದೆ. ಗ್ಲೆನ್​ ಮ್ಯಾಕ್ಸ್‌ವೆಲ್‌, ಮಾರ್ಕಸ್ ಸ್ಟೊಯಿನಿಸ್, ಕ್ಯಾಮರೂನ್ ಗ್ರೀನ್ ತಂಡದ ಸ್ಟಾರ್​ ಆಲ್​ರೌಂಡರ್​ಗಳಾಗಿದ್ದಾರೆ. ಸ್ಪಿನ್ಸ್‌ ಬೌಲರ್​ಗಳಾಗಿ ಆ್ಯಡಂ ಝಂಪಾ ಮತ್ತು ಆ್ಯಶ್ಟನ್​ ಅಗರ್ ಸ್ಥಾನ ಪಡೆದಿದ್ದಾರೆ. ವೇಗಿಗಳಾಗಿ ಜೋಶ್ ಹ್ಯಾಜಲ್‌ವುಡ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಎಲ್ಲಿಸ್ ಅವರನ್ನು ಆಯ್ಕೆ ಮಾಡಲಾಗಿದೆ.

ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಆ್ಯಶ್ಟನ್​ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ. ಪ್ರಯಾಣದ ಮೀಸಲು ಆಟಗಾರರು: ಮ್ಯಾಟ್ ಶಾರ್ಟ್, ಜೇಕ್ ಫ್ರೇಸರ್-ಮೆಕ್‌ಗುರ್ಕ್

Continue Reading
Advertisement
Gold Smuggling
ದೇಶ9 mins ago

Gold Smuggling: ಶಶಿ ತರೂರ್‌ ಪಿಎ ಅರೆಸ್ಟ್‌- ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‌ ನಾಯಕನಿಗೆ ತೀವ್ರ ಮುಜುಗರ

Firecracker Explosion
ದೇಶ11 mins ago

Firecracker Explosion: ಪುರಿ ಜಗನ್ನಾಥ ದೇಗುಲದಲ್ಲಿ ಅಗ್ನಿ ದುರಂತ; 15 ಮಂದಿಗೆ ಗಾಯ

Raitha Siri Yojana
ಪ್ರಮುಖ ಸುದ್ದಿ37 mins ago

Raitha Siri Yojana: ಸಿರಿ ಧಾನ್ಯ ಬೆಳೆಯುವವರಿಗೆ ಸಿಹಿ ಸುದ್ದಿ; ನಿಮ್ಮ ಖಾತೆಗೇ ಬರುತ್ತೆ 10 ಸಾವಿರ ರೂ.

Nosebleeds In Summer
ಆರೋಗ್ಯ1 hour ago

Nosebleeds In Summer: ಬೇಸಿಗೆಯ ತಾಪಕ್ಕೆ ಮೂಗಿನಲ್ಲಿ ರಕ್ತಸ್ರಾವವೇ? ತಡೆಯಲು ಇಲ್ಲಿವೆ ಸರಳ ಉಪಾಯ

Karnataka Weather
ಕರ್ನಾಟಕ2 hours ago

Karnataka Weather: ಇಂದು ದಕ್ಷಿಣ ಕನ್ನಡ, ಹಾಸನ, ಕೊಡಗು ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ!

Hair Growth Tips
ಆರೋಗ್ಯ2 hours ago

Hair Growth Tips: ಕೂದಲು ಉದುರುವುದಕ್ಕೆ ಬೀಟಾ ಕ್ಯಾರೊಟಿನ್‌ ಮದ್ದು!

Dina Bhavishya
ಭವಿಷ್ಯ3 hours ago

Dina Bhavishya: ಈ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ!

Girlfriend
ದೇಶ8 hours ago

Girlfriend: ‘ಬಾಡಿಗೆ ಗರ್ಲ್‌ಫ್ರೆಂಡ್‌’ ಆಗಲು ಸಿದ್ಧಳೆಂದ ಯುವತಿ; ಈಕೆಯ ‘ದರಪಟ್ಟಿ’ ನೋಡಿ,‌ ನೀವೂ ಟ್ರೈ ಮಾಡಿ

CAA Certificate
ದೇಶ9 hours ago

CAA Certificate: ದೀದಿ ವಿರೋಧದ ಮಧ್ಯೆಯೂ ಬಂಗಾಳದಲ್ಲಿ ಸಿಎಎ ಜಾರಿಗೆ ತಂದ ಕೇಂದ್ರ; ಪೌರತ್ವ ಪ್ರದಾನ!

Modi Meditation
ದೇಶ10 hours ago

Modi Meditation: ಮೋದಿಗೆ ಧ್ಯಾನ ಮಾಡಲು ಬಿಡಬೇಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಮೊರೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌